ಲೇಖಕ: admin

ಮಡಿಕೇರಿ ನ.21 NEWS DESK : ಚಿಕ್ಕಬಳ್ಳಾಪುರದಲ್ಲಿ ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾಕೂಟದ ಕರಾಟೆ ಪಂದ್ಯಾವಳಿಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಸಣ್ಣುವಂಡ ಎಸ್.ರಶ್ಮಿ ಪೆÇನ್ನಮ್ಮ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಿದ್ದಾಳೆ. ಇವಳಿಗೆ ಕರಾಟೆ ಬೋಧಕರಾದ ಸೋಮಣ್ಣ ತರಬೇತಿ ನೀಡಿದ್ದಾರೆ. ವಿದ್ಯಾರ್ಥಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ, ಸಂಯೋಜಕಿ, ಬೋಧಕ ಬೋಧಕೇತರ ವೃಂದದವರು ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Read More

ಮಡಿಕೇರಿ ನ.21 NEWS DESK :  ಬೆಂಗಳೂರಿನಲ್ಲಿ ನಡೆದ ಮೂರು ದಿನದ ಅದ್ದೂರಿಯ ಪುಸ್ತಕ ಸಂತೆಯ ಒಂದು ಭಾಗವಾಗಿ, ಆಜೂರ ಪ್ರಶಸ್ತಿ ವಿಜೇತೆ, ಕೊಡಗಿನ ಬರಹಗಾರ್ತಿ ಕೃಪಾ ದೇವರಾಜ್ ಅವರು ಬರೆದ ಐದನೇ ಪುಸ್ತಕ “ಮಂತ್ರಪುಷ್ಪ” ಬಿಡುಗಡೆ ಕಂಡಿತು. ಜಯನಗರದ ಚಂದ್ರಗುಪ್ತ ಮೌರ್ಯ ಮೈದಾನದಲ್ಲಿ, ವೀರಲೋಕ ಪ್ರಕಾಶನದ ವೀರಕಪುತ್ರ ಶ್ರೀನಿವಾಸ್ ಅವರ ನೇತೃತ್ವದಲ್ಲಿ ಏರ್ಪಟ್ಟ ಬೃಹತ್ ಪುಸ್ತಕ ಸಂತೆಯ ಎರಡನೇ ದಿನದ ಸಮಾರಂಭದಲ್ಲಿ ಖ್ಯಾತ ಚಲನಚಿತ್ರ ನಿರ್ದೇಶಕ ಪಿ.ಶೇಷಾದ್ರಿ ಅವರು ಕೃಪಾ ದೇವರಾಜ್ ಅವರು ಬರೆದ ಕಥಾ ಸಂಕಲನ “ಮಂತ್ರ ಪುಷ್ಪ” ವನ್ನು ಲೋಕಾರ್ಪಣೆಗೊಳಿಸಿದರು. ವೀರಕಪುತ್ರ ಶ್ರೀನಿವಾಸ್ ಮತ್ತು ಹೆಸರಾಂತ ಕವಿಗಳು, ಬರಹಗಾರರು ವೇದಿಕೆಯಲ್ಲಿ ಪಾಲ್ಗೊಂಡಿದ್ದರು. ಇದೇ ಸಂದರ್ಭ ಕನ್ನಡದ ಹಿರಿಯ ಕಥೆಗಾರ ಎಸ್.ದಿವಾಕರ್ ಅವರು ಬರೆದ “ಎರಡು ರಟ್ಟುಗಳ ನಡುವೆ”, ಕಲಾವಿದ ಮತ್ತು ಲೇಖಕ ಪುಂಡಲೀಕ ಕಲ್ಲಿಗನೂರು  ಅವರ “ಶಿಲ್ಪಕಲೆಯಲ್ಲಿ ರಾಮಾಯಣ”,  ಲೇಖಕಿ ದೀಪಾ ಹಿರೇಗುತ್ತಿ ಅವರ “ಸೋಲು ಗೆಲುವಿನ ಗೆಳೆಯ” ಎಂಬ ಕೃತಿಗಳು ಬಿಡುಗಡೆಗೊಂಡವು. ಮೂರು ದಿನದ ಪುಸ್ತಕ ಸಂತೆಗೆ…

Read More

ವಿರಾಜಪೇಟೆ ಸೆ.21 NEWS DESK : ಹೆಗ್ಗಳ ಗ್ರಾಮದ ಪಾಲೆಟ್ ಮಕ್ಕಿಯಲ್ಲಿರುವ ನಾಗ ದೇವಾಲಯದಲ್ಲಿ ನ.25 ರಂದು  ಸ್ಕಂದ ಪಂಚಮಿಯ ದಿವಸ ವಾರ್ಷಿಕ ಮಹಾಪೂಜೆ ಜರುಗಲಿದೆ. ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 12.30ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದೆ. ನಂತರ ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಹಾಗೂ ಅನ್ನ ಸಂತರ್ಪಣಾ ಸೇವೆ ನೆರವೇರಲಿದೆ. ಹರಕೆ ವಸ್ತುಗಳು ದೇವಸ್ಥಾನದಲ್ಲಿಯೇ ದೊರೆಯಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ಸೋಮವಾರಪೇಟೆ ನ.21 NEWS DESK : ಸೋಮವಾರಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ಸಂತ ಜೋಸೆಫರ ವಿದ್ಯಾಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.22 ರಿಂದ 29ರ ವರೆಗೆ ಸಾಹಿತ್ಯ ಸಂಭ್ರಮ-2025 ನಡೆಯಲಿದ್ದು, ನ.22ರಂದು ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿದೆ ಎಂದು ಪರಿಷತ್ ನ ಗೌರವ ಕಾರ್ಯದರ್ಶಿ ಜ್ಯೋತಿ ಅರುಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಂದು ಬೆಳಿಗ್ಗೆ 10ಗಂಟೆಗೆ ವಿದ್ಯಾಸಂಸ್ಥೆಯ ವ್ಯವಸ್ಥಾಪಕರಾದ ಧರ್ಮಗುರು ಅವಿನಾಶ್ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಎಲ್ಲಾ ಸ್ಪರ್ಧೆಗಳು ಕನ್ನಡ ನಾಡು ನುಡಿಗೆ ಸಂಬಂಧ ಪಟ್ಟಿರುತ್ತವೆ. ಪ್ರಾಥಮಿಕ, ಪ್ರೌಢಶಾಲೆ, ಕಾಲೇಜು ವಿಭಾಗದಲ್ಲಿ ಸ್ಪರ್ಧೆಗಳು ನಡೆಯುತ್ತವೆ. ಚಿತ್ರಕಲಾ ಸ್ಪರ್ಧೆ, ಪ್ರಬಂಧಸ್ಪರ್ಧೆ, ಛದ್ಮವೇಷ ಸ್ಪರ್ಧೆ, ಜಾನಪದ ಗೀತೆ, ಸಮೂಹಗಾಯನ, ಜಾನಪದ ಅಥವಾ ಕನ್ನಡ ಹಾಡುಗಳಿಗೆ ನೃತ್ಯ ಸರ್ಧೆಗಳು ನಡೆಯುತ್ತವೆ. ಹೆಚ್ಚಿನ ಮಾಹಿತಿಗಾಗಿ, 8861550444, 8050252033 ಸಂಪರ್ಕಿಸಬಹುದು. :: ಸಮ್ಮೇಳನ ಪೂರ್ವಭಾವಿ ಸಭೆ :: ಕೊಡಗು ಜಿಲ್ಲೆ, ಸೋಮವಾರಪೇಟೆ ತಾಲ್ಲೂಕು, ಕ.ಸ.ಬಾ ಹೋಬಳಿ ಘಟಕದ ಆಶ್ರಯದಲ್ಲಿ ಐಗೂರಿನಲ್ಲಿ ನಡೆಯಬೇಕಾಗಿರುವ ತಾಲ್ಲೂಕು 9ನೇ…

Read More

ಸೋಮವಾರಪೇಟೆ ನ.21 NEWS DESK : ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ವತಿಯಿಂದ ಅಂಗನವಾಡಿಗಳಿಗೆ ಕುರ್ಚಿಗಳನ್ನು ಕೊಡುಗೆಯಾಗಿ ನೀಡಲಾಯಿತು. ಪಂಚಾಯಿತಿ ವ್ಯಾಪ್ತಿಯ ದೊಡ್ಡಮಳ್ತೆ, ಕಾಗಡೀಕಟ್ಟೆ, ಗೆಜ್ಜೆಹಣಕೋಡು, ವಳಗುಂದ, ಕೂೀಗೆಕೋಡಿ ಗ್ರಾಮಗಳ ಅಂಗನವಾಡಿಗಳ ಕಾರ್ಯಕರ್ತರಿಗೆ ಪಂಚಾಯಿತಿ ಅಧ್ಯಕ್ಷ ಡಿ.ಎಂ.ಗೋಪಾಲಕೃಷ್ಣ ಕುರ್ಚಿಗಳನ್ನು ವಿತರಿಸಿದರು. ನಂತರ ಮಾತನಾಡಿದ ಅವರು, ಕಳೆದ ಸಾಲಿನಲ್ಲಿ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸಮವಸ್ತ್ರ ವಿತರಿಸಲಾಗಿತ್ತು. ಪ್ರಸಕ್ತ ಸಾಲಿನಲ್ಲೂ ಸಮವಸ್ತ್ರ ವಿತರಿಸುವ ಬಗ್ಗೆ ಚರ್ಚೆ ಮಾಡಲಾಗಿದೆ. ಪಂಚಾಯಿತಿ ಕಟ್ಟಡದ ಮೇಲಂತಸ್ತಿನಲ್ಲಿ ಮೂರೂವರೆ ಲಕ್ಷ ರೂ, ವೆಚ್ಚದಲ್ಲಿ ಸೀಟ್‍ಗಳನ್ನು ಅಳವಡಿಸಲಾಗಿದೆ. ಸಿಕ್ಕ ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ ಎಂದು ಹೇಳಿದರು. ಪಂಚಾಯಿತಿ ಉಪಾಧ್ಯಕ್ಷೆ ಬಿ.ಕೆ.ರಶೀದ, ಪಂಚಾಯಿತಿ ಸದಸ್ಯರು, ಪಿಡಿಒ ಎಚ್.ಆರ್.ಮೋಹನ್, ಅಂಗನವಾಡಿ ಕಾರ್ಯಕರ್ತರಾದ ನಾಗಮಣಿ, ಸವಿತ, ಪೂರ್ಣಿಮ, ಬಿಲ್ ಕಲೆಕ್ಟರ್ ವಿಶ್ವರೂಪಚಾರ್ಯ ಇದ್ದರು.

Read More

ಸೋಮವಾರಪೇಟೆ ನ.21 NEWS DESK : ಹೊಸೂರು ಬೆಟ್ಟದ ಮೇಲಿರುವ ಶ್ರೀ ಬಸವೇಶ್ವರ ಮೂರ್ತಿಗೆ 2.8 ಕೆಜಿ ತೂಕದ ಬೆಳ್ಳಿಯ ಮುಖವಾಡವನ್ನು ನೀಡಿದ ಸೋಮವಾರಪೇಟೆ ಉದ್ಯಮಿ ಹೆಚ್.ಬಿ.ಹೃಷಿಕೇಶ್ ಅವರನ್ನು ದೇವಾಲಯದ ಕೌಟೆಕಾಯಿ ಜಾತ್ರೋತ್ಸವ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು. ದೇವಾಲಯ ಆಡಳಿತ ಮಂಡಳಿಯ ರಮೇಶ್, ಎಚ್.ಟಿ.ಪುಟ್ಟೇಗೌಡ, ಜಗದೀಶ್ ಗಣ್ಯರಾದ ಪ್ರತಿಭಾ ಮಂಜು, ಮುರುಳಿ ಮೋಹನ್ ಇದ್ದರು.

Read More

ಸೋಮವಾರಪೇಟೆ ನ.21 NEWS DESK : ಇಂದಿರಾಗಾಂಧಿ ಅಭಿಮಾನಿಗಳ ಸಂಘದ ವತಿಯಿಂದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 108ನೇ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಸಂಘದ ಅಧ್ಯಕ್ಷ ಹೆಚ್.ಎ.ನಾಗರಾಜ್ ಅವರು ಇಂದಿರಾಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಇಂದಿರಾ ಕ್ಯಾಂಟಿನ್‍ನಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರ ಪವನ್ ಅವರನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು. ಸಂಘದ ಪದಾಧಿಕಾರಿಗಳಾದ ರವೀಂದ್ರ, ಅಜಯ್, ರವಿ, ಪಳನಿಸ್ವಾಮಿ, ವೇಲುಸ್ವಾಮಿ, ಧರ್ಮ, ನಾಗರಾಜು, ಶೇಷಪ್ಪ, ಕುಮಾರ, ನವೀನ್ ಇದ್ದರು.

Read More

ಗೋಣಿಕೊಪ್ಪ ನ.21 NEWS DESK : ಮಕ್ಕಳಲ್ಲಿ ನಾಯಕತ್ವ ಗುಣಗಳು ಬೆಳೆಯಬೇಕಾದರೆ ಸಂಘ ಸಂಸ್ಥೆಗಳಲ್ಲಿ ಸೇವೆಯನ್ನು ತೊಡಗಿಸಿಕೊಳ್ಳಬೇಕು ಎಂದು ಲಯನ್ಸ್ ಕ್ಲಬ್ ಪ್ರಾದೇಶಿಕ ಗವರ್ನರ್ ಕುಡುಪಿ ಅರವಿಂದ ಶೆಣೈ ತಿಳಿಸಿದರು. ಅಪ್ಪಚ್ಚು ಕವಿ ವಿದ್ಯಾಲಯದ ಸಭಾಂಗಣದಲ್ಲಿ ಲಯನ್ಸ್ ಕ್ಲಬ್, ಗೋಣಿಕೊಪ್ಪದ ಆಂಗ್ಲ ಸಂಸ್ಥೆಯಾಗಿ ಪೊನ್ನಂಪೇಟೆ ಅಪ್ಪಚ್ಚುಕವಿ ವಿದ್ಯಾಲಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದ ಲಿಯೋ ಕ್ಲಬ್ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ, ನಾಯಕತ್ವದ ಗುಣಗಳ ಜತೆಗೆ ಸಾಮಾಜಿಕ ಕಳಕಳಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮತ್ತು ಸಾಮಾಜಿಕ ಜವಾಬ್ದಾರಿಯ ಅನುಭವಗಳನ್ನು ನೀಡಲು. ಜತೆಗೆ ತಮ್ಮ ಪ್ರತಿಭೆಗಳಿಗೆ ಅವಕಾಶಗಳನ್ನ ಒದಗಿಸಿಕೊಳ್ಳುವ ವ್ಯವಸ್ಥೆಯನ್ನು ನೀಡುವ ಉದ್ದೇಶದೊಂದಿಗೆ ಲಿಯೋ ಕ್ಲಬ್ ಸ್ಥಾಪನೆ ಮಾಡಲಾಗಿದೆ.ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಂಗಳೂರು, ಹಾಸನ ಜಿಲ್ಲೆಗಳಲ್ಲಿ ಸುಮಾರು 120 ಲಯನ್ಸ್ ಕ್ಲಬ್ ಗಳು ಕಾರ್ಯ ನಿರ್ವಹಿಸುತ್ತಿದೆ. ಅದರ ಜತೆಗೆ 40 ಲಿಯೋ ಕ್ಲಬ್ ಗಳು ಅಸ್ತಿತ್ವಕ್ಕೆ ಬಂದಿದೆ. 41ನೇಯ ಲಿಯೋ ಕ್ಲಬ್ ಸ್ಥಾಪನೆಯನ್ನು ಅಪ್ಪಚ್ಚು ಕವಿ ವಿದ್ಯಾಲಯದ ವಿದ್ಯಾರ್ಥಿಗಳ ಮುಖಾಂತರ ನೆರವೇರಿದೆ ಎಂದು ತಿಳಿಸಿದರು. ಅಪ್ಪಚ್ಚು ಕವಿ…

Read More

ಮಡಿಕೇರಿ ನ.20 NEWS DESK : ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಸೇರಿದಂತೆ ವಿವಿಧ ಸಾಧನೆ ಮಾಡಬೇಕಾದರೆ ಒಳ್ಳೆಯ ಪುಸ್ತಕ ಓದುವ ಅಭ್ಯಾಸ ಬೆಳೆಸಿಕೊಳ್ಳುವಂತಾಗಬೇಕು ಎಂದು ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ ಅವರು ಹೇಳಿದ್ದಾರೆ. ಸಾರ್ವಜನಿಕ ಗ್ರಂಥಾಲಯ ಇಲಾಖೆ, ಜಿಲ್ಲಾ ಕೇಂದ್ರ ಗ್ರಂಥಾಲಯ ವತಿಯಿಂದ ನಗರದ ಮಹಾತ್ಮ ಗಾಂಧಿ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ನಡೆದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ-2025 ದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸಾಹಿತಿ ಕೆ.ಪಿ.ಬಾಲಸುಬ್ರಹ್ಮಣ್ಯ ಕಂಜರ್ಪಣೆ ಅವರು ಮಾತನಾಡಿ ಪ್ರತೀ ವರ್ಷವೂ ನವೆಂಬರ್ 14 ರಿಂದ ಒಂದು ವಾರ ಕಾಲ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹವನ್ನು ನಡೆಸಲಾಗುತ್ತದೆ. ನೆಹರೂ ಅವರ ಜನ್ಮದಿನಾಂಕದಿಂದ ಇದು ಒಂದು ವಾರ ನಡೆಯುತ್ತದೆ ಎಂದರು. ಭಾರತದಲ್ಲಿ ಗ್ರಂಥಾಲಯ ವಿಜ್ಞಾನದ ಪಿತಾಮಹರೆಂದೇ ಹೆಸರಾದ ದಿವಂಗತ ಡಾ.ಎಸ್.ಆರ್.ರಂಗನಾಥನ್ (1892-1972) ಅವರ ನೆನಪಿನಲ್ಲಿ ಈ ಸಪ್ತಾಹ ನಡೆಸಲಾಗುತ್ತದೆ. ಗ್ರಂಥಾಲಯ ವಿದ್ವಾಂಸರಾದದ್ದು ಆನಂತರ, ಮೂಲತಃ ಅವರು ಖ್ಯಾತ ಗಣಿತಶಾಸ್ತ್ರಜ್ಞರೂ ಶಿಕ್ಷಣ ತಜ್ಞರೂ ಆಗಿದ್ದರು. ಕರ್ನಾಟಕದ ಮಂಗಳೂರಿನ ಸರಕಾರಿ ಕಾಲೇಜಿನಲ್ಲೂ ಅವರು…

Read More

ಮಡಿಕೇರಿ ನ.20 NEWS DESK : ಮಡಿಕೇರಿ 8ನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ ಅಂಗವಾಗಿ ಕೊಡಗು ಜಿಲ್ಲೆಯಲ್ಲಿ ನಡೆದ ಪ್ರಕೃತಿ ಚಿಕಿತ್ಸಾ ಜಾಗೃತಿ ಶಿಬಿರದ ಸಮಾರೋಪ ಸಮಾರಂಭವು ನಗರದ ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ಸಂಪನ್ನಗೊಂಡಿತು. ಸಮಾರೋಪ ಸಮಾರಂಭದ ಉದ್ಘಾಟಿಸಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್‍ನ ಜಿಲ್ಲಾ ನಿರ್ದೇಶಕರಾದ ಲೀಲಾವತಿ ಮಾತನಾಡಿ, ಪೋಷಕರು ಮಕ್ಕಳಿಗೆ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವಂತೆ ಪ್ರೇರೇಪಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಶೈಲಜಾ, ದೋಷರಹಿತ ಮಾನವನ ಸರ್ವತೋಮುಖ ಸ್ವಾಸ್ಥ ಕಾಪಾಡುವ ಆಯುಷ್ ಪ್ರಕೃತಿ ಚಿಕಿತ್ಸಾ ವಿಧಾನವನ್ನು ಬಳಸುವಂತೆ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆಯುಷ್ ಇಲಾಖೆ ಆಡಳಿತ ಅಧಿಕಾರಿ ಕಾವೇರಪ್ಪ, ಮಡಿಕೇರಿ ಯೋಗ ಒಕ್ಕೂಟದ ಮಹೇಶ್ ಕೆ.ಕೆ. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಜಿಲ್ಲಾ ಬೋಧಕ ಆಸ್ಪತ್ರೆ (KOIMS) ಮಡಿಕೇರಿಯ ಆಯುಷ್ ವಿಭಾಗದ ವೈದ್ಯಾಧಿಕಾರಿ ಡಾ.ಅರುಣ್ ಅವರು ಶಿಬಿರದ ವರದಿ ಮಂಡಿಸಿ ಗಣ್ಯರನ್ನು ಸ್ವಾಗತಿಸಿದರು. ಡಾ.…

Read More