ಲೇಖಕ: admin

ಪುತ್ತೂರು ನ.19 NEWS DESK : ಕನ್ನಡ ಎಂದಾಗ ನಮ್ಮ ನಾಡು ನುಡಿ ಮತ್ತು ಸಮುದಾಯ ಎನ್ನುವ ಭಾವನೆ ಬರುತ್ತದೆ. ಈ ಸುಂದರ ಭಾಷೆಯನ್ನು ಉಳಿಸಿ ಬೆಳೆಸುವ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ ಎಂದು ವಿವೇಕಾನಂದ ಪದವಿ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕಿ ಡಾ.ಗೀತಾಕುಮಾರಿ.ಟಿ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಲಹರಿ ಕನ್ನಡ ಸಂಘ, ರಾಷ್ಟ್ರೀಯ ಸೇವಾ ಯೊಜನಾ ಘಟಕ ಹಾಗೂ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆ ಮತ್ತು ಎಸ್.ಎಲ್.ಭೈರಪ್ಪನವರಿಗೆ ನುಡಿ ನಮನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತಾಡಿದರು. ವಿವಿಧ ಸಾಹಿತ್ಯಿಕ ಚಟುವಟಿಕೆಗಳು ನಮ್ಮ ಯಾಂತ್ರೀಕೃತ ಬದುಕಿಗೆ ಚೈತನ್ಯವನ್ನು ನೀಡುತ್ತದೆ. ಯಾವುದೇ ಭಾಷೆಯನ್ನಾಗಲಿ ನಿರಂತರವಾಗಿ ಬಳಸಿದರೆ ಮಾತ್ರ ಅದರ ಉಳಿವು ಸಾಧ್ಯವಾಗುತ್ತದೆ. ಹಾಗಾಗಿ ಕನ್ನಡ ಭಾಷೆಯನ್ನು ಬಳಸುವಲ್ಲಿ ಮತ್ತು ಉಳಿಸುವಲ್ಲಿ ನಾವು ಶಕ್ತಿವಂತರಾಗಬೇಕು ಎಂದರು. ಎಸ್.ಎಲ್.ಭೈರಪ್ಪನವರ ಕೃತಿಗಳ ಹೆಸರನ್ನು ಬಳಸಿ ಬರೆದ ಸ್ವರಚಿತ…

Read More

ಕುಶಾಲನಗರ ನ.19 NEWS DESK : ಕೊಡಗು ಜಿಲ್ಲಾ ಪಂಚಾಯ್ತಿ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಹಾಗೂ ರಾಷ್ಟ್ರೀಯ ಸ್ವಚ್ಛ್ ಭಾರತ್ ಮಿಷನ್ ವತಿಯಿಂದ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮ ಪಂಚಾಯತಿ ಸಹಯೋಗದೊಂದಿಗೆ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ಇಕೋ ಕ್ಲಬ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆ  (ಎನ್.ಎಸ್.ಎಸ್.) ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಘಟಕ,  ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ, ಎಸ್ ಡಿ ಎಂ ಸಿ ಹಾಗೂ ವಿದ್ಯಾರ್ಥಿ ಸಂಘದ  ಆಶ್ರಯದಲ್ಲಿ ಪ್ರೌಢಶಾಲೆಯಲ್ಲಿ  ಸ್ವಚ್ಛ ಭಾರತ್ ಅಭಿಯಾನ ಹಾಗೂ  ‘ ಗೋ ಗ್ರೀನ್ ಅಭಿಯಾನ’ದಡಿ  ಎಲ್ಲರಿಗೂ ಆರೋಗ್ಯ ಮತ್ತು ನೈರ್ಮಲ್ಯ ಎಂಬ ಧ್ಯೇಯದೊಂದಿಗೆ  ” ವಿಶ್ವ ಶೌಚಾಲಯ ದಿನ”-2025 ದ ಅಂಗವಾಗಿ ಶೌಚಗೃಹ ಬಳಕೆ ಕುರಿತು ಜನಜಾಗೃತಿ ನಡೆಸಲಾಯಿತು. “ವಿಶ್ವ ಶೌಚಾಲಯ ದಿನ*ದ ಮಹತ್ವ ಹಾಗೂ ಶೌಚಾಲಯ ಸ್ವಚ್ಛತೆ ಕುರಿತು ಕುರಿತು ಮಾಹಿತಿ ನೀಡಿದ ಶಾಲಾ ಮುಖ್ಯೋಪಾಧ್ಯಾಯರೂ ಆದ ಜಿಲ್ಲಾ ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಚಾಲಕ ಟಿ.ಜಿ.ಪ್ರೇಮಕುಮಾರ್, ಶೌಚಾಲಯಗಳು ಸಾರ್ವಜನಿಕ…

Read More

ವಿರಾಜಪೇಟೆ ನ.19 NEWS DESK : ವಿರಾಜಪೇಟೆಯ ಕೆದಮುಳ್ಳೂರು ಗ್ರಾಮದ ಯುವಕವಿ ಲವಿನ್ ಲೋಪೇಸ್ ಬರೆದಿರುವ ಮೌನದ ಮನಸ್ಸಿನಲ್ಲಿ ಚೊಚ್ಚಲ ಕೃತಿಯು ನ.23 ರಂದು ವಿರಾಜಪೇಟೆಯ ಮೊಗರಗಲ್ಲಿಯಲ್ಲಿನ ಕಲಾ ಉತ್ಸವ ವೇದಿಕೆಯಲ್ಲಿ ಲೋಕಾರ್ಪಣೆಗೊಳ್ಳಲಿದೆ. ಲವಿನ್ ಅವರು ತಮ್ಮ ಸ್ವಂತ ಪ್ರಕಾಶನದ ಮೂಲಕ ಹೊರತಂದಿರುವ ತಮ್ಮ ಕನಸಿನ ಕೂಸು ಮೌನದ ಮನಸ್ಸಿನಲ್ಲಿ ಕೃತಿಯನ್ನು ಸಾದಿಕ್ ಆರ್ಟ್ಸ್ ವತಿಯಿಂದ ಮೊಗರಗಲ್ಲಿಯಲ್ಲಿ ನಡೆಯುತ್ತಿರುವ ಕಲಾ ಉತ್ಸವ ಕಾರ್ಯಕ್ರಮದ ವೇದಿಕೆಯಲ್ಲಿ ಬೆಳಿಗ್ಗೆ 10.30 ಗಂಟೆಗೆ ಸಾಹಿತಿ ವಿ.ಎನ್. ರಜಿತ ಕೃತಿ ಲೋಕಾರ್ಪಣೆಗೊಳಿಸಲಿದ್ದಾರೆ. ಕೃತಿಯ ಕುರಿತು ಸಾಹಿತಿ ಪುಷ್ಪಲತಾ ಶಿವಪ್ಪ ಮಾತನಾಡಲಿದ್ದಾರೆ. ಪ್ರಾದ್ಯಾಪಕರಾದ ಡಾ.ಕಾವೇರಿ ಪ್ರಕಾಶ್ ಮುನ್ನುಡಿ ಬರೆದು ಹರಸಿದರೆ, ಸಾಹಿತಿ ವಿ.ಎನ್.ರಜಿತ ಅವರು ಬೆನ್ನುಡಿ ಬರೆದಿದ್ದಾರೆ. ಮುಖ್ಯ ಅತಿಥಿಗಳಾಗಿ ಶಿಕ್ಷಕರಾದ ಮಹಮ್ಮದ್ ಶಾಫಿ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿರಲಿದ್ದಾರೆ. ಲವಿನ್ ಲೋಪೆಸ್ ವೃತ್ತಿಯಲ್ಲಿ ಉಪನ್ಯಾಸಕರಾಗಿದ್ದು, ಚಿಕ್ಕ ವಯಸ್ಸಿನಲ್ಲೇ ಬರವಣಿಗೆಯನ್ನು ಕರಗತ ಮಾಡಿಕೊಂಡು, ತಮ್ಮ ಮನಸ್ಸಿನ ಭಾವನೆಗಳನ್ನು ಕವಿತೆ ಮೂಲಕ ಹೊರಹಾಕಿ ಸಂಕಲನ ರೂಪದಲ್ಲಿ ಹೊರತಂದಿದ್ದಾರೆ.

Read More

ವಿರಾಜಪೇಟೆ ನ.19 NEWS DESK : ವಿರಾಜಪೇಟೆಯ ತೆಲುಗು ಶೆಟ್ಟರ ಬೀದಿಯ ಇತಿಹಾಸ ಪ್ರಸಿದ್ಧ ಶ್ರೀ ದಕ್ಷಿಣ ಮಾರಿಯಮ್ಮ ದೇವಾಲಯದಲ್ಲಿ ನ.26 ರಂದು ಸುಬ್ರಹ್ಮಣ್ಯ ಷಷ್ಠಿ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳು ನಡೆಯಲಿದೆ. ಅಂದು ಬೆಳಿಗ್ಗೆ 5 ಗಂಟೆಗೆ ಗಣಪತಿ ಪೂಜೆ, ಮಾರಿಯಮ್ಮ ದೇವಿಗೆ ಅಭಿಷೇಕ ಹಾಗೂ ಅಲಂಕಾರ ಪೂಜೆ, ಸುಬ್ರಹ್ಮಣ್ಯ ದೇವರಿಗೆ ಅಭಿಷೇಕ ಮತ್ತು ಅಲಂಕಾರ ಪೂಜೆ ಮತ್ತು ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ ನಡೆಯಲಿದೆ. ಮಹಾಪೂಜೆಯ ಬಳಿಕ ನೆರೆದ ಭಕ್ತಾಧಿಗಳಿಗೆ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನೆರವೇರಲಿದೆ. ಭಕ್ತಾಧಿಗಳು ಹೆಚ್ಚಿ ಸಂಖ್ಯೆಯಲ್ಲಿ ಆಗಮಿಸಿ ಪೂಜಾ ಕಾರ್ಯದಲ್ಲಿ ಪಾಲ್ಗೋಳ್ಳುವಂತೆ ಎಂದು ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರು ವಕೀಲರು ಆಗಿರುವ ಟಿ.ಪಿ ಕೃಷ್ಣ ತಿಳಿಸಿದ್ದಾರೆ.

Read More

ಮಡಿಕೇರಿ ನ.19 NEWS DESK : ರಾಜ್ಯ ಸರ್ಕಾರ ಕೊಡಮಾಡುವ ರಾಜ್ಯ ಮಟ್ಟದ ‘ಸಹಕಾರ ರತ್ನ’ ಪ್ರಶಸ್ತಿಗೆ ಕೊಡಗು ಜಿಲ್ಲೆಯ ವಿರಾಜಪೇಟೆಯ ನಿವಾಸಿ ಹಾಗೂ ಹಿರಿಯ ಸಹಕಾರಿಗಳಾದ ಬಲ್ಲಡಿಚಂಡ ಬಿ. ನಾಣಯ್ಯ ಅವರು ಭಾಜನರಾಗಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ವಾಸವಿರುವ ಇವರು 86 ವಸಂತಗಳನ್ನು ಕಂಡಿದ್ದು, ವೃತ್ತಿಯಲ್ಲಿ ವಕೀಲರಾಗಿರುತ್ತಾರೆ. ಶ್ರೀಯುತರು ವಿರಾಜಪೇಟೆ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿ., ಈ ಸಂಸ್ಥೆಗೆ 1967 ರಲ್ಲಿ ನಿರ್ದೇಶಕರಾಗಿ ಆಯ್ಕೆಯಾಗುವ ಮೂಲಕ ಸಹಕಾರಿ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದ ಇವರು ಇದೇ ಸಂಸ್ಥೆಯಲ್ಲಿ ಅಧ್ಯಕ್ಷರಾಗಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರದಲ್ಲಿ ವಿರಾಜಪೇಟೆ ತಾಲೂಕು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‍ನಲ್ಲಿ 1970 ರಿಂದ ನಿರ್ದೇಶಕರಾಗಿ, ಅಧ್ಯಕ್ಷರಾಗಿ ಸುಮಾರು 10 ವರ್ಷಗಳ ಕಾಲ, ಕೊಡಗು ಜಿಲ್ಲಾ ಸಹಕಾರ ಮಾರಾಟ ಮಹಾಮಂಡಳದಲ್ಲಿ 3 ವರ್ಷ ನಿರ್ದೇಶಕರಾಗಿ, ಕೊಡಗು ಜಿಲ್ಲಾ ಗೃಹ ನಿರ್ಮಾಣ ಸಹಕಾರ ಸಂಘ, ಮಡಿಕೇರಿಯಲ್ಲಿ 15 ವರ್ಷ ನಿರ್ದೇಶಕರಾಗಿ ಹಾಗೂ 4 ವರ್ಷ…

Read More

ಮಡಿಕೇರಿ ನ.19 NEWS DESK : ಪ್ರಖ್ಯಾತ ಸ್ವರ್ಣೋದ್ಯಮಿ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥಾಪಕ ಜಿ.ಎಲ್ ಆಚಾರ್ಯ ಅವರ 101ನೇ ಜನ್ಮದಿನಾಚರಣೆಯನ್ನು ಪುತ್ತೂರುನ ಸಂಸ್ಥೆಯಲ್ಲಿ ಆಚರಿಸಲಾಯಿತು. ಈ ಸಂದರ್ಭ ಪುತ್ತೂರಿನ ರಾಮಕೃಷ್ಣ ಆಶ್ರಮಕ್ಕೆ 10 ಡಬಲ್ ಡೆಕ್ಕರ್ ಕಾಟ್‍ಗಳನ್ನು ಕೊಡುಗೆಯಾಗಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಜ್ಯುವೆಲ್ಲರ್ಸ್ ನ ಆಡಳಿತ ನಿರ್ದೇಶಕ ಜಿ.ಎಲ್.ಬಲರಾಮ ಆಚಾರ್ಯ, ಆಶ್ರಮದ ಕಾರ್ಯದರ್ಶಿ ಗುಣಪಾಲ್ ಜೈನ್, ಸದಸ್ಯ ಹರೇಕೃಷ್ಣ ಕಡಂಬಳಿತ್ತಾಯ ಮತ್ತು ಜಂಟಿ ಕಾರ್ಯದರ್ಶಿ ವತ್ಸಲ ರಾಜ್ನಿ ಹಾಜರಿದ್ದರು.

Read More

ಕುಶಾಲನಗರ ನ.19 NEWS DESK : ಬಸವನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಡಿಕೇರಿಯ ವೈದ್ಯಕೀಯ ಕಾಲೇಜಿನ ಮಕ್ಕಳ ತಜ್ಞರು ಮತ್ತು ಸಹಾಯಕ ಪ್ರಾಧ್ಯಾಪಕರಾದ ಡಾ.ಕುಶ್ವಂತ್ ಕೋಳಿ ಬೈಲು ಮಾತನಾಡಿ, ಕನ್ನಡ ಭಾಷೆಗೆ 2000 ವರ್ಷಗಳ ಇತಿಹಾಸವಿದೆ, ಜಗತ್ತಿನ ಪ್ರಾಚೀನ ಭಾಷೆಗಳಲ್ಲಿ ಕನ್ನಡ ಭಾಷೆಯು ತನ್ನದೇ ಇತಿಹಾಸ, ಸ್ಥಾನ ಹಾಗೂ ಮನ್ನಣೆ ಹೊಂದಿದೆ. ಮಾತೃಭಾಷೆ ಕನ್ನಡ ಭಾಷೆಯನ್ನು ಪ್ರೀತಿಸಿ ಗೌರವಿಸಿ ಬಳಸಬೇಕೆಂದು ವಿದ್ಯಾರ್ಥಿಗಳಲ್ಲಿ ಅವರು ಬಿನ್ನವಿಸಿದರು. ಜೊತೆಗೆ ವಿದ್ಯಾರ್ಥಿಗಳು ಎದುರಿಸುತ್ತಿರುವರ ಆರೋಗ್ಯ ಸಮಸ್ಯೆಗಳ ಕುರಿತಾಗಿ ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಪ್ರಾಂಶುಪಾಲರಾದ ಎಸ್.ಎಸ್.ಶ್ರೀದೇವಿ ಮಾತನಾಡಿ, ಪ್ರತಿ ಮಗು ಕೂಡ ಶ್ರೇಷ್ಠ ಸಾಧಕನಾಗಬೇಕು ಎಂಬುದು ಸರ್ಕಾರ, ಶಿಕ್ಷಕರು ಹಾಗೂ ಪೋಷಕರ ಮಹದಾಶಯವಾಗಿರುತ್ತದೆ ಅದನ್ನು ಈಡೇರಿಸುವ ನಿಟ್ಟಿನಲ್ಲಿ ವಸತಿ ಶಾಲೆಗಳು ಬಹಳ ಅಮೂಲ್ಯವಾದ ಪಾತ್ರ ನಿರ್ವಹಿಸುತ್ತಿವೆ ಎಂದರು. ವಸತಿ ಶಾಲೆಯ ಕನ್ನಡ ಶಿಕ್ಷಕರಾದ ರಮೇಶ್…

Read More

ಮಡಿಕೇರಿ ನ.19 NEWS DESK : ಕೊಡಗಿನ ವಿಶಿಷ್ಟ ಮತ್ತು ಸಂಭ್ರಮದ ಹಬ್ಬಗಳಲ್ಲಿ ಒಂದಾಗಿರುವ ಪುತ್ತರಿ (ಹುತ್ತರಿ) ಯನ್ನು ಡಿಸೆಂಬರ್ 4 ರಂದು ಆಚರಿಸಲು ಸಂಪ್ರದಾಯದಂತೆ ಪಾಡಿ ಶ್ರೀ ಇಗ್ಗುತ್ತಪ್ಪ ದೇಗುಲದಲ್ಲಿ ಬುಧವಾರದಂದು ದಿನ ಮತ್ತು ಗಳಿಗೆಯನ್ನು ಗೊತ್ತುಪಡಿಸಲಾಯಿತು. ಪಾಡಿ ಶ್ರೀ ಇಗ್ಗುತ್ತಪ್ಪ ದೇಗುಲದಲ್ಲಿ ದೇವಾಲಯ ಸಮಿತಿ ಪ್ರಮುಖರು, ಮುಜರಾಯಿ ಇಲಾಖಾ ಪ್ರಮುಖರು, ದೇಶ ತಕ್ಕರು, ನಾಡ ತಕ್ಕರ ಸಮ್ಮುಖದಲ್ಲಿ ಪಾರಂಪರಿಕವಾಗಿ ನಡೆದುಕೊಂಡು ಬಂದಂತೆ ಕಣಿಯ ಸಮೂಹದ ಪ್ರಮುಖರು ಪುತ್ತರಿ (ಹುತ್ತರಿ) ಮತ್ತು ಪಾಡಿ ಶ್ರೀ ಇಗ್ಗುತ್ತಪ್ಪ ದೇವಸ್ಥಾನದ ಕಲಾಡ್ಚ ಹಬ್ಬಕ್ಕೆ ದಿನ ನಿಗದಿ ಮಾಡಿದರು. ದೇವಾಲಯದಲ್ಲಿ ದಿನ ನಿಗದಿ ಪಡಿಸಿದಂತೆ ಡಿ.4 ರಂದು ರೋಹಿಣಿ ನಕ್ಷತ್ರದಲ್ಲಿ ಹುತ್ತರಿ ಹಬ್ಬ ನಡೆಯಲಿದೆ. ಅಂದು ಪಾಡಿ ಶ್ರೀ ಇಗ್ಗುತ್ತಪ್ಪ ದೇಗುಲದಲ್ಲಿ ರಾತ್ರಿ 8.10 ಗಂಟೆಗೆ ನೆರೆ ಕಟ್ಟುವುದು, ರಾತ್ರಿ 9.10 ಗಂಟೆಗೆ ಕದಿರು ತೆಗೆಯುವುದು ಮತ್ತು ಭೋಜನಕ್ಕೆ 10.10 ಗಂಟೆ ಸಮಯವನ್ನು ನಿಗದಿಪಡಿಸಲಾಗಿದೆ. :: ಸಾರ್ವಜನಿಕ ಹಬ್ಬಾಚರಣೆ :: ಸಾರ್ವಜನಿಕವಾಗಿ ರಾತ್ರಿ 8.40…

Read More

ಸೋಮವಾರಪೇಟೆ ನ.19 NEWS DESK : ಸಾರ್ವಜನಿಕರಿಗೆ ಅತಿ ಅವಶ್ಯವಿರುವ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಂತೆ ದಿನವಾದ ಸೋಮವಾರದಂದು ಕಡ್ಡಾಯವಾಗಿ ಕಛೇರಿಯಲ್ಲಿ ಹಾಜರಿರಬೇಕು. ಸಾರ್ವಜನಿಕರಿಂದ ಅನೇಕ ದೂರುಗಳು ಬರುತ್ತಿದ್ದು. ಸಮಯ ಪಾಲನೆ ಮಾಡದ ಅಧಿಕಾರಿಗಳ ವಿರುದ್ದ ಕ್ರಮಕೈಗೊಳ್ಳಲಾಗುವುದೆಂದು ಶಾಸಕರು ಹೇಳಿದರು. ತಾಲ್ಲೂಕು ಪಂಚಾಯಿತಿಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಶಾಸಕ ಡಾ.ಮಂತರ್‌ಗೌಡ ಅಧ್ಯಕ್ಷತೆಯಲ್ಲಿ ಮಂಗಳವಾರದಂದು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.  ತಾಲ್ಲೂಕು ಕಛೇರಿಯಲ್ಲಿ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕುತ್ತಿಲ್ಲ.ಸಾರ್ವಜನಿಕರ ಕೆಲಸಗಳು ಆಗುತ್ತಿಲ್ಲ ಎಂದು ಕೆಡಿಪಿ ನಾಮನಿರ್ದೆಶಿತ ಸದಸ್ಯರಾದ ಸಬಿತಾ ಚನ್ನಕೇಶವ ಸಭೆಯ ಗಮನಕ್ಕೆ ತಂದರು.ಇದಕ್ಕೆ ಪ್ರತಿಕ್ರಿಯಿಸಿದ ತಹಶೀಲ್ದಾರ್ ಕೃಷ್ಣಮೂರ್ತಿ ಮಧ್ಯವರ್ತಿಗಳಿಂದ ಕೆಲಸ ಮಾಡಿಸಬೇಡಿ.ಏನಾದರೂ ಸಮಸ್ಯೆ ಇದ್ದರೆ ನೇರವಾಗಿ ನನ್ನ ಗಮನಕ್ಕೆ ತನ್ನಿ ಎಂದರು. ಕಂದಾಯ, ತೋಟಗಾರಿಕೆ ಮತ್ತು ಕಾಫಿಮಂಡಳಿ ಅಧಿಕಾರಿಗಳು ಅವಧಿಗೆ ಮುನ್ನವೇ ಬೆಳೆ ನಷ್ಟ ಸಮೀಕ್ಷೆ ನಡೆಸಿ ಸರಕಾರಕ್ಕೆ ವರದಿ ನೀಡಿದ್ದಾರೆ.ಅಕ್ಟೋಬರ್ ತಿಂಗಳ ಅಂತ್ಯದವರೆಗೂ ಅಕಾಲಿಕ ಮಳೆ ಸುರಿದಿದೆ.ಇದರಿಂದ ರೈತರಿಗೆ ಅನ್ಯಾಯವಾಗಿದೆ. ಅಧಿಕಾರಿಗಳು ತಾಲೂಕಿನಲ್ಲಿ ಎಷ್ಟು ಹೋಬಳಿ ಇದೆ.ಎಷ್ಟು…

Read More

ನಾಪೋಕ್ಲು ನ.19 NEWS DESK  : ಕುಂಜಿಲ ಗ್ರಾಮದ ಆಕ್ಸ್‌ಫರ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಕ್ಕಬೆ ಕ್ಲಸ್ಟರ್ ನ 2025-26ನೇ ಸಾಲಿನ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ವ್ಯವಸ್ಥಾಪಕ ಶಾಹಿದ್ ಅಲಿ, ಪ್ರತಿಭಾ ಕಾರಂಜಿ ಕೇವಲ ಸ್ಪರ್ಧೆಯಲ್ಲ, ಅದು ಮಕ್ಕಳ ಆತ್ಮ ವಿಶ್ವಾಸವನ್ನು ಹೆಚ್ಚಿಸುವ, ಮಕ್ಕಳ ಕಾರ್ಯಕ್ರಮದ ಅಡಗಿರುವ ಕಲೆಯನ್ನು ಹೊರತರುವ, ಸಾಂಸ್ಕೃತಿಕ ಬೇರುಗಳನ್ನು ಗಟ್ಟಿಗೊಳಿಸುವ ಮಹಾಯಜ್ಞ ಎಂದರು. ಜಿಲ್ಲಾ ಯೋಜನ ಸಮನ್ವಯಾಧಿಕಾರಿ ಸೌಮ್ಯ ಪೊನ್ನಪ್ಪ, ಮಕ್ಕಳಿಗೆ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಲು ಸಲಹೆ ನೀಡಿದರು. ವಿಷಯ ಪರಿವೀಕ್ಷರಾದ ಬಿಂದು ಮಾತನಾಡಿ, ಎಲ್ಲರೂ ವೇದಿಕೆಗೆ ಬಂದು ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವ ಧೈರ್ಯವೇ ದೊಡ್ಡ ಗೆಲುವು ಎಂಬುದನ್ನು ಅರಿತು, ವಿದ್ಯಾರ್ಥಿಗಳು ಕಲೋತ್ಸವದಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದ್ದು, ಉಳಿದ ವಿದ್ಯಾರ್ಥಿಗಳಿಗೆ ಇದು ಮಾರ್ಗದರ್ಶಕವಾಗಿದೆ ಎಂದರು. ಉತ್ಸಾಹದಿಂದ ಭಾಗವಹಿಸಿದ ವಿದ್ಯಾರ್ಥಿಗಳು ವಿಶಿಷ್ಟ ಶೈಲಿಯಲ್ಲಿ ತಮ್ಮ ತಮ್ಮ ಪ್ರತಿಭೆಯನ್ನು ಹೊರಹಾಕಿದರು. ಕಾರ್ಯಕ್ರಮದಲ್ಲಿ ಪರಿವೀಕ್ಷಕರೂ, ಸಹ ಸಂಯೋಜಕರಾದ ಎಸ್.ಬಿ.ಶರ್ಮಿಳಾ,…

Read More