ಮಡಿಕೇರಿ NEWS DESK ಆ.19 : ಮಾನವ ಬಂಧುತ್ವ ವೇದಿಕೆ ಕೊಡಗು ಜಿಲ್ಲಾ ಶಾಖೆ ಹಾಗೂ ಸೋಮವಾರಪೇಟೆ ತಾಲೂಕು ಸಮಿತಿ ವತಿಯಿಂದ ಶನಿವಾರ ಸಂತೆ ಪಟ್ಟಣದ ಸನ್ನಿಧಿ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಯಲ್ಲಿ ನಾಗರಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಹಿರಿಯ ದಲಿತ ಮುಖಂಡರು ಹಾಗೂ ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ಜೆ.ಆರ್.ಪಾಲಾಕ್ಷ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ದೇಶದಲ್ಲಿ ಅಪೌಷ್ಟಿಕತೆಯಿಂದ ಮಕ್ಕಳು ಬಳಲುತ್ತಿರುವ ಸಂದರ್ಭದಲ್ಲಿ ಹುತ್ತಕ್ಕೆ ಹಾಗೂ ಕಲ್ಲುಗಳಿಗೆ ಹಾಲೆರೆಯುವ ಬದಲು ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಹಾಲು ನೀಡುವ ಮೂಲಕ ಪೌಷ್ಟಿಕತೆ ಹೆಚ್ಚಿಸುವ ಕಾರ್ಯ ಅರ್ಥಪೂರ್ಣವಾಗಿದೆ ಎಂದು ಹೇಳಿದರು. ಇಂತಹ ಕಾರ್ಯಕ್ರಮಗಳ ಮೂಲಕ ಮಕ್ಕಳಲ್ಲಿ ಆತ್ಮಸ್ಥೆöÊರ್ಯ ತುಂಬುವ ಮಾನವ ಬಂಧುತ್ವ ವೇದಿಕೆಯ ಕಾರ್ಯವನ್ನು ಅವರು ಶ್ಲಾಘಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಮಾಜ ಸೇವಕಿ ಲಲಿತ ವೇದಮೂರ್ತಿ ಅವರು ಮಾತನಾಡಿ, ಬುದ್ಧಿಮಾಂದ ಮಕ್ಕಳ ವಸತಿ ಶಾಲೆಯಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ. ಮಕ್ಕಳನ್ನು ಪೋಷಿಸುವ ಜವಾಬ್ದಾರಿ ಹೊತ್ತಿರುವ ಶಿಕ್ಷಕರು, ಸಿಬ್ಬಂದಿ ಹಾಗೂ…
ಲೇಖಕ: admin
ಮಡಿಕೇರಿ NEWS DESK ಆ.19 : ಕಳೆದ ಮೂರು ವರ್ಷಗಳಲ್ಲಿ ಕೊಡಗು ಜಿಲ್ಲೆಗೆ ಕಾಡಾನೆ ಉಪಟಳ ತಡೆಗೆ ಸರಕಾರ ಬಿಡುಗಡೆ ಮಾಡಿರುವ ಅನುದಾನ ಮತ್ತು ಅರಣ್ಯ ಇಲಾಖೆ ತೆಗೆದುಕೊಂಡಿರುವ ಕ್ರಮಗಳ ಕುರಿತು ಶಾಸಕದ್ವಯರು ಶ್ವೇತಪತ್ರ ಹೊರಡಿಸಬೇಕು ಮತ್ತು ವನ್ಯಜೀವಿ ದಾಳಿ ತಡೆಗೆ ಶಾಶ್ವತ ಯೋಜನೆ ರೂಪಿಸಲು ಸರಕಾರ ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಕೊಡಗು ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಜಿಲ್ಲಾ ಪ್ರಧಾನ ಸಂಚಾಲಕ ತೇಲಪಂಡ ಶಿವಕುಮಾರ್ ನಾಣಯ್ಯ ಅವರು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ಮಿತಿ ಮೀರಿದ್ದು, ಅಮಾಯಕ ಮಾನವ ಜೀವಗಳು ನಿರಂತರವಾಗಿ ಬಲಿಯಾಗುತ್ತಿವೆ. ಪರಿಸ್ಥಿತಿ ಕೈಮೀರುವ ಹಂತದಲ್ಲಿದ್ದರೂ ರಾಜ್ಯ ಸರಕಾರಕ್ಕೆ ಕೊಡಗಿನ ಮೇಲೆ ಕರುಣೆಯೇ ಇಲ್ಲದಾಗಿದೆ. ಜಿಲ್ಲೆಯ ಶಾಸಕರು ಸರಕಾರದ ಕಿವಿ ಹಿಂಡುವ ಕೆಲಸ ಮಾಡುತ್ತಿಲ್ಲವೆಂದು ಟೀಕಿಸಿದ್ದಾರೆ. ಈ ಹಿಂದೆ ಬಿಜೆಪಿ ಸರಕಾರವಿದ್ದಾಗ ಬ್ಯಾರಿಕೇಡ್ ಅಳವಡಿಕೆ ಮತ್ತು ಆನೆ ಕಂದಕಗಳ ನಿರ್ಮಾಣದಿಂದ ಕಾಡಾನೆಗಳ ಉಪಟಳ ನಿಯಂತ್ರಣದಲ್ಲಿತ್ತು. ಆದರೆ ರಾಜ್ಯದಲ್ಲಿ ಕಾಂಗ್ರೆಸ್…
ಮಡಿಕೇರಿ NEWS DESK ಆ.19 : ಮಡಿಕೇರಿಯ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ವಿಧಾನಸಭೆಯ ಕಲಾಪ ವೀಕ್ಷಿಸಿದರು. ವಿಧಾನಸೌಧಕ್ಕೆ ಆಗಮಿಸಿದ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಶುಭ ಹಾರೈಸಿದರು. ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ವಿಧಾನಸೌಧಕ್ಕೆ ಭೇಟಿ ನೀಡಿ ಹೊಸ ಅನುಭವ ಪಡೆದರು. ವಿಧಾನಸೌಧ ನೋಡುವ ಬಯಕೆ ಹೊಂದಿದ್ದ ವಿದ್ಯಾರ್ಥಿಗಳು ಈ ಬಗ್ಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರನ್ನು ಕೋರಿದ್ದರು. ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕರು ಶಾಲೆಯ 48 ವಿದ್ಯಾರ್ಥಿಗಳಿಗೆ ವಿಧಾನಸೌಧ ಭೇಟಿಗೆ ಅವಕಾಶ ಕಲ್ಪಿಸಿಕೊಟ್ಟರು. ವಿದ್ಯಾರ್ಥಿಗಳ ಭೇಟಿಯ ಸಂದರ್ಭದಲ್ಲಿ ಖುದ್ದು ಹಾಜರಿದ್ದ ಶಾಸಕ ಡಾ. ಮಂತರ್ ಗೌಡ ಅವರು ಮಕ್ಕಳಿಗೆ ವಿಧಾನಸೌಧದ ಕಾರ್ಯವೈಖರಿ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಮಾರ್ಗದರ್ಶನ ನೀಡಿದರು. ಜೊತೆಗೆ ವಿದ್ಯಾರ್ಥಿಗಳ ಊಟದ ವೆಚ್ಚವನ್ನು ಶಾಸಕರೇ ಭರಿಸಿ ಮೆಚ್ಚುಗೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲೆ ಬಾಳೆಯಡ ಸವಿತಾ…
ಮಡಿಕೇರಿ NEWS DESK ಆ.19 : ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅವ್ಯವಹಾರ ಪ್ರಕರಣಕ್ಕೆ ಸಂಬoಧಿಸಿದoತೆ ಆರೋಪ ಎದುರಿಸುತ್ತಿರುವ ಬಿ.ನಾಗೇಂದ್ರ ಅವರನ್ನು ಸಚಿವ ಸಂಪುಟದಿoದ ಕೈಬಿಡಬೇಕೆಂದು ಒತ್ತಾಯಿಸಿ ಸೋಮವಾರಪೇಟೆ ಮಂಡಲ ಬಿಜೆಪಿ ವತಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಸೋಮವಾರಪೇಟೆ ಬಿಜೆಪಿ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ತಿಳಿಸಿದ್ದಾರೆ. ಗುರುವಾರ ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಬಿ.ನಾಗೇಂದ್ರ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಹಗರಣದ ವಿರುದ್ಧದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಅದಕ್ಕೂ ಮೊದಲೇ ಆರೋಪಿ ಸ್ಥಾನದಲ್ಲಿರುವ ಬಿ.ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ರಾಜ್ಯ ಸರಕಾರ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ ಎಂದು ಆರೋಪಿಸಿದ್ದಾರೆ. ನಾಗೇದ್ರ ಅವರನ್ನು ಸಚಿವ ಸಂಪುಟದಿoದ ಕೈಬಿಡುವಲ್ಲಿಯವರೆಗೆ ಬಿಜೆಪಿ ನಿರಂತರ ಪ್ರತಿಭಟನೆ ನಡೆಸಲಿದೆ ಎಂದು ಕಂಠಿ ಕಾರ್ಯಪ್ಪ ತಿಳಿಸಿದ್ದಾರೆ.
ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ ದಿನಾಂಕ 09-08-2026 ರಂದು ಬೆಳಿಗ್ಗೆ 11.30 ಗಂಟೆಗೆ ಒಬ್ಬ ಅಪರಿಚಿತ ವೃದ್ಧ ವ್ಯಕ್ತಿಯು ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ದಿನಾಂಕ 15-08-2026 ರಂದು ಮಡಿಕೇರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 03.49 ಗಂಟೆಗೆ ಮೃತಪಟ್ಟಿರುತ್ತಾರೆ. ಈ ಸಂಬಂಧ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್. ಸಂಖ್ಯೆ 14/2026, ಕಲಂ 194 ಬಿ.ಎನ್.ಎಸ್. ರೀತ್ಯಾ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಮೃತ ವ್ಯಕ್ತಿಯ ಚಹರೆ: 1. ಹೆಸರು: ಮಂಜುನಾಥ 2. ವಯಸ್ಸು: ಅಂದಾಜು 90 ವರ್ಷ 3. ಎತ್ತರ: 5 ಅಡಿ 7 ಇಂಚು 4. ಚಹರೆ: ಕೋಲು ಮುಖ, ತೆಳ್ಳನೆಯ ಮೈಕಟ್ಟು 5. ಮೈಬಣ್ಣ: ಎಣ್ಣೆಗೆಂಪು; ಕಪ್ಪು-ಬಿಳಿ ತಲೆಕೂದಲು ಹಾಗೂ ಬಿಳಿ ದಾಡಿ ಮೇಲ್ಕಂಡ ಮೃತ ವ್ಯಕ್ತಿಯ ಬಗ್ಗೆ ಮಾಹಿತಿ ಇರುವವರು…
ಮಡಿಕೇರಿ NEWS DESK ಆ.18 : ಭಾಗಮಂಡಲದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್ ನ ಕಟ್ಟಡದ ಮುಂದುವರಿದ ಕಾಮಗಾರಿಗೆ 2.75 ಲಕ್ಷ ರೂ. ಹೆಚ್ಚುವರಿ ಅನುದಾನ ನೀಡುವಂತೆ ಕೋರಿ ಟ್ರಸ್ಟ್ ನ ನಿಯೋಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಿತು. ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಹಾಗೂ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಮುದ್ದಂಡ ಬಿ.ದೇವಯ್ಯ ಅವರ ನೇತೃತ್ವದ ನಿಯೋಗ ಇತ್ತೀಚೆಗೆ ಭಾಗಮಂಡಲಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿ ಕಟ್ಟಡ ನಿರ್ಮಾಣದ ಯೋಜನೆಯ ಕುರಿತು ಮಾಹಿತಿ ನೀಡಿದರು. ಭಾಗಮಂಡಲದಲ್ಲಿ ಅರ್ಧ ಏಕರೆ ಜಾಗದಲ್ಲಿ ಸರಕಾರ ನೀಡಿರುವ 1 ಕೋಟಿ ರೂ. ಅನುದಾನದಲ್ಲಿ ಕಟ್ಟಡ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಡಿಸೆಂಬರ್ ತಿಂಗಳಿನಲ್ಲಿ ಪೂರ್ಣಗೊಳ್ಳಲಿದೆ. ಮುಂದುವರಿದ ಕಾಮಗಾರಿಗೆ 2.75 ಲಕ್ಷ ರೂ. ಹೆಚ್ಚುವರಿ ಅನುದಾನದ ಅಗತ್ಯವಿದ್ದು, ಸರಕಾರ ಹಣ ಬಿಡುಗಡೆ ಮಾಡಬೇಕೆಂದು ಮುದ್ದಂಡ ಬಿ.ದೇವಯ್ಯ ಮನವಿ ಮಾಡಿದರು. ಉಪಾಧ್ಯಕ್ಷ…
ವಿರಾಜಪೇಟೆ, ಆ.18 NEWS DESK : ವಿರಾಜಪೇಟೆಯ ಮಗ್ಗುಲದಲ್ಲಿರುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ‘ಎಲ್‌ಎಸ್‌ಎ ಕೇರ್ಸ್’ ವತಿಯಿಂದ ಸಮಾಜಮುಖಿ ಸೇವಾ ಕಾರ್ಯಗಳ ಅಂಗವಾಗಿ ವಿದ್ಯಾರ್ಥಿಗಳಿಗೆ, ಪೊಲೀಸ್ ಸಿಬ್ಬಂದಿ ಹಾಗೂ ಪೌರಕಾರ್ಮಿಕರಿಗೆ ರೈನ್‌ಕೋಟ್ ಮತ್ತು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ‘ಎಲ್‌ಎಸ್‌ಎ ಕೇರ್ಸ್’ ವತಿಯಿಂದ ಪ್ರತಿ ತಿಂಗಳು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಅಗತ್ಯವಿರುವವರಿಗೆ ನೆರವು ಹಾಗೂ ಸೇವಾ ಕಾರ್ಯಗಳನ್ನು ನಡೆಸಲಾಗುತ್ತಿದೆ. ಇದರ ಭಾಗವಾಗಿ ಸಂಸ್ಥೆಯ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ವಿರಾಜಪೇಟೆಯ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗೆ ರೈನ್‌ಕೋಟ್‌ಗಳನ್ನು ವಿತರಿಸಿದರು. ಅದೇ ರೀತಿ ವಿರಾಜಪೇಟೆ ನಗರವನ್ನು ಸ್ವಚ್ಛವಾಗಿಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಪೌರಕಾರ್ಮಿಕರಿಗೂ ರೈನ್‌ಕೋಟ್‌ಗಳನ್ನು ವಿತರಿಸಿ ಅವರ ಸೇವೆಯನ್ನು ಗೌರವಿಸಲಾಯಿತು. ಬಳಿಕ ವಿದ್ಯಾರ್ಥಿಗಳು ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ…
ವಿರಾಜಪೇಟೆ ಆ.18 NEWS DESK : ಕಲೆ ಮತ್ತು ಸಂಸ್ಕೃತಿಯ ಅನಾವರಣಕ್ಕೆ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು ಉತ್ತಮ ವೇದಿಕೆಯಾಗಿದೆ ಎಂದು ಕೊಡಗು ಜಿಲ್ಲಾ ಖಜಾನೆ ಇಲಾಖೆಯ ಉಪ ನಿರ್ದೇಶಕರಾದ ಡಾ. ರಘುನಾಥ್ ಬಿ. ಎನ್ ಅವರು ಅಭಿಪ್ರಾಯಪಟ್ಟರು. ವಿರಾಜಪೇಟೆಯ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು ಇದರ ಕೊಡಗು ಜಿಲ್ಲಾ ಘಟಕದ ಪದಗ್ರಹಣ ಸಮಾರಂಭ ಹಾಗೂ ಆದರ್ಶ ಸೇವ ರತ್ನ ಪ್ರಶಸ್ತಿ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಕೊಡಗು ಜಿಲ್ಲಾ ಘಟಕದ ಪದಗ್ರಹಣ ಸಮಾರಂಭ ಇಂದು ಬಹಳ ವ್ಯವಸ್ಥವಾಗಿ ಇಲ್ಲಿ ಆಯೋಜಿಸಲಾಗಿದ್ದು ಕಲೆ, ಸಂಸ್ಕೃತಿ ಪ್ರದರ್ಶನಕ್ಕೆ ಭಾಷೆ ಹಾಗೂ ಗಡಿಯ ಅಂತರವಿರುವುದಿಲ್ಲ. ಪ್ರತಿಯೊಬ್ಬರು ವಿಶ್ವಮಾನವ ಪ್ರಜ್ಞೆಯನ್ನು ರೂಢಿಸಿಕೊಳ್ಳಬೇಕು. ಉತ್ತಮವಾದ ಕಾರ್ಯವನ್ನು ಮಾಡಲು ಹಿಂದೆ ಮುಂದೆ ನೋಡಬಾರದು. ಪ್ರತಿಯೊಂದು ಕೆಲಸವನ್ನು ಗೌರವಿಸಿ ಬೌದ್ಧಿಕವಾಗಿಯೂ ಚಟುವಟಿಕೆಗಳಿಂದ ಕೂಡಿರಬೇಕು. ಹಿರಿಯರನ್ನು ಗೌರವಿಸಬೇಕು. ಸರ್ಕಾರಿ ನೌಕರರಿಗೆ ತಮ್ಮ ಪ್ರತಿಭೆಗಳನ್ನು ಹೊರತರಲು ಇದೊಂದು ಉತ್ತಮ ವೇದಿಕೆಯಾಗಿದ್ದು ಸರ್ವರೂ…
ಸುಂಟಿಕೊಪ್ಪ, ಆ.18 NEWS DESK : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ನಾವು ಪ್ರತಿಷ್ಠಾನ, ಕೊಡಗು ಇವರ ಸಹಯೋಗದಲ್ಲಿ ಸುಂಟಿಕೊಪ್ಪದ (ಕುಶಾಲನಗರ) ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ಸಮಾಜ ವಿಜ್ಞಾನ ಶಿಕ್ಷಕರಿಗೆ ಎರಡು ದಿನಗಳ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಂವಿಧಾನದ ಪ್ರಸ್ತಾವನೆಯನ್ನು ಓದುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶೇಖರ್ ಮಾತನಾಡಿ, ವಿದ್ಯಾರ್ಥಿಗಳು ಸಮಾಜದಲ್ಲಿ ಜವಾಬ್ದಾರಿಯುತ ನಾಗರಿಕರಾಗಿ ಬೆಳೆಯಲು ಜೀವನ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳುವುದು ಅಗತ್ಯ. ನಾಯಕತ್ವದ ಗುಣಗಳನ್ನು ಬೆಳೆಸುವ ಮೂಲಕ ಅವರನ್ನು ಸಕ್ರಿಯ ಹಾಗೂ ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸುವಲ್ಲಿ ಇಂತಹ ತರಬೇತಿ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು. ನಾವು ಪ್ರತಿಷ್ಠಾನದ ಕಾರ್ಯಕಾರಿ ನಿರ್ದೇಶಕ ಸುಮನ್ ಮ್ಯಾಥ್ಯೂ ಮಾತನಾಡಿ, ತರಬೇತಿಯಲ್ಲಿ ಹೆಣ್ಣುಮಕ್ಕಳ ಋತುಚಕ್ರದ ಕುರಿತು ಅರಿವು, ಆನ್‌ಲೈನ್ ಸುರಕ್ಷತೆ, ಹವಾಮಾನ ಬದಲಾವಣೆ, ಘನತ್ಯಾಜ್ಯ ನಿರ್ವಹಣೆ, ಮಕ್ಕಳ ಹಕ್ಕುಗಳು, ಲಿಂಗ ಸಮಾನತೆ, ವೈಯಕ್ತಿಕ ನೈತಿಕತೆ, ಸ್ಥಳೀಯ ಸರ್ಕಾರ, ಅನುಭೂತಿ ಮತ್ತು…
ಕುಶಾಲನಗರ ಆ.18 NEWS DESK : ಕಾಡಾನೆಗಳ ಹಾವಳಿ ತಡೆಗಟ್ಟಿ ರೈತರ ಆಸ್ತಿ ಹಾಗೂ ಬೆಳೆಗಳನ್ನು ರಕ್ಷಿಸಲು ಶಾಶ್ವತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸುಂಟಿಕೊಪ್ಪ ರೈತ ಸಂಘದ ವತಿಯಿಂದ ಕುಶಾಲನಗರ ವಲಯ ಅರಣ್ಯ ಇಲಾಖೆ ಕಚೇರಿ ಆವರಣದಲ್ಲಿ ಪ್ರತಿಭಟನೆ ಹಾಗೂ ಧರಣಿ ನಡೆಸಲಾಯಿತು. ಸುಂಟಿಕೊಪ್ಪ ಹೋಬಳಿಯ ಹೇರೂರು, ಕಲ್ಲೂರು, ನಾಕೂರು, ಶಿರಂಗಾಲ, ಕಂಬಿಬಾಣೆ, ಸುಂಟಿಕೊಪ್ಪ, ಕೊಡಗರಹಳ್ಳಿ ಹಾಗೂ ಕೆದಕಲ್ ಭಾಗಗಳ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಮಿತಿ ಮೀರುತ್ತಿದ್ದು, ರೈತರು ಆತಂಕದಿಂದ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಕುಶಾಲನಗರ ವಲಯ ಅರಣ್ಯಾಧಿಕಾರಿ ಆರ್. ರಕ್ಷಿತ್ ಅವರು ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರೂ, ರೈತರು ತಮ್ಮ ಬೇಡಿಕೆಯಲ್ಲಿ ಪಟ್ಟು ಹಿಡಿದರು. ಬಳಿಕ ಸ್ಥಳಕ್ಕೆ ಆಗಮಿಸಿದ ಸೋಮವಾರಪೇಟೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಆನೆ ಹಾವಳಿ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಕೈಗೊಂಡಿರುವ ಕ್ರಮಗಳ…






