ಬೆಂಗಳೂರು ನ.14 NEWS DESK : ದೇಶದ ಭವಿಷ್ಯ ರೂಪಿತ ಆಗುವುದು ವೈಚಾರಿಕ – ವೈಜ್ಞಾನಿಕ ಮನೋಭಾವದ ಮಕ್ಕಳಿಂದ. ಆದ್ದರಿಂದ ಮಕ್ಕಳು ಪ್ರಾಥಮಿಕ ಶಿಕ್ಷಣದಿಂದಲೇ ಮೌಢ್ಯ, ಕಂದಾಚಾರದಿಂದ ದೂರ ಉಳಿಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಪಂಡಿತ್ ಜವಾಹರಲಾಲ್ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ “ರಾಜ್ಯ ಮಟ್ಟದ ಮಕ್ಕಳ ದಿನಾಚರಣೆ ಮತ್ತು ಪೋಷಕರ-ಶಿಕ್ಷಕರ ಮಹಾಸಭೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮುಖ್ಯಮಂತ್ರಿಗಳು ಮಾತನಾಡಿದರು. ಮಕ್ಕಳೇ ಭಾರತದ ಭವಿಷ್ಯ ಎನ್ನುವ ದೂರದೃಷ್ಟಿ ನೆಹರೂ ಅವರಿಗೆ ಇತ್ತು. ಹೀಗಾಗಿ ಮಕ್ಕಳಲ್ಲಿ ವೈಜ್ಞಾನಿಕ ಮನೋಧರ್ಮ ರೂಪಿಸುವ ಶಿಕ್ಷಣಕ್ಕೆ ಒತ್ತು ನೀಡಿದ್ದರು. ನಮ್ಮ ಸರ್ಕಾರ ಕೂಡ ಶಿಕ್ಷಣಕ್ಕೆ ಪ್ರಥಮ ಆಧ್ಯತೆ ನೀಡಿದ್ದು, 65,000 ಕೋಟಿ ರೂಪಾಯಿಗಳನ್ನು ಶಿಕ್ಷಣಕ್ಕೆ ನೀಡುತ್ತಿದ್ದೇವೆಂದು ಹೇಳಿದರು. ನೆಹರೂ ತಮ್ಮ ಯೌವ್ವನದ 3,200ಕ್ಕೂ ಹೆಚ್ಚು ದಿನಗಳನ್ನು ಜೈಲಿನಲ್ಲಿ ಕಳೆದ ಹೋರಾಟಗಾರ. ಅತೀ ಶ್ರೀಮಂತ ಕುಟುಂಬದಿಂದ ಬಂದಿದ್ದರೂ ದೇಶದ ಸ್ವಾತಂತ್ರ್ಯಕ್ಕಾಗಿ ಸೆರೆಮನೆ ಸೇರಿದರು. ದೇಶದ ಪ್ರಧಾನಿಯಾಗಿ ಕೃಷಿ,…
ಲೇಖಕ: admin
ಮಡಿಕೇರಿ ನ.14 NEWS DESK : ಬಿಹಾರದ ಪ್ರಜ್ಞಾವಂತ ಮತದಾರರು ಎನ್‍ಡಿಎ ಮೈತ್ರಿ ಕೂಟಕ್ಕೆ ಭರ್ಜರಿ ಗೆಲುವು ತಂದುಕೊಡುವ ಮೂಲಕ ವೋಟ್ ಚೋರಿ ಕಟ್ಟುಕಥೆ ಕಟ್ಟಿದ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಕೊಡಗು ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ ಹರ್ಷ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವೋಟ್ ಚೋರಿ ಆರೋಪ ಮಾಡುವ ಮೂಲಕ ದೇಶದ ಮತದಾರÀರನ್ನು ಅಪಮಾನಿಸಿದ ಕಾಂಗ್ರೆಸ್ ಗೆ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಆ ಪಕ್ಷದ ಮುಖಂಡರು ಇನ್ನಾದರೂ ಮತದಾನದ ಕುರಿತು ಅಪಪ್ರಚಾರ ಮಾಡುವುದನ್ನು ನಿಲ್ಲಿಸಲಿ ಎಂದು ಒತ್ತಾಯಿಸಿದ್ದಾರೆ. ಭವ್ಯ ಭಾರತದ ಗುರಿಯೊಂದಿಗೆ ಚುನಾವಣೆಯನ್ನು ಎದುರಿಸಿದ ಎನ್‍ಡಿಎ ಮೈತ್ರಿ ಕೂಟದ ಅಭ್ಯರ್ಥಿಗಳನ್ನು ಅತ್ಯಧಿಕ ಮತಗಳಿಂದ ಮತದಾರರು ಗೆಲ್ಲಿಸಿದ್ದಾರೆ. ಈ ಅಭೂತಪೂರ್ವ ಗೆಲುವಿಗಾಗಿ ಹಗಲಿರುಳೆನ್ನದೆ ಶ್ರಮಿಸಿದ ಕಾರ್ಯಕರ್ತರಿಗೆ ಹಾಗೂ ಪ್ರಧಾನಮಂತ್ರಿ ನರೇಂದ್ರಮೋದಿ ಅವರ ನಾಯಕತ್ವದ ಮೇಲೆ ವಿಶ್ವಾಸವಿಟ್ಟು ಮತದಾನ ಮಾಡಿದ ಮತದಾರರಿಗೆ ಕೃತಜ್ಞತೆ ಸಲ್ಲಿಸುವುದಾಗಿ…
ಮಡಿಕೇರಿ ನ.14 NEWS DESK : ಭಾಷೆಯಂತೆಯೇ ಗ್ರಂಥಾಲಯಗಳನ್ನು ಹೆಚ್ಚು ಬಳಸುವ ಮೂಲಕ ಗ್ರಂಥಾಲಯಗಳನ್ನೂ ಉಳಿಸುವ ನಿಟ್ಟಿನಲ್ಲಿ ಸಾಹಿತ್ಯ ಪ್ರೇಮಿಗಳು ಕಾಯೋ೯ನ್ಮುಖವಾಗಬೇಕೆಂದು ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ದೀಪಾಭಾಸ್ತಿ ಕರೆ ನೀಡಿದರು. ನಗರದ ಕೈಗಾರಿಕಾ ಬಡಾವಣೆಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಆಯೋಜಿತ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಂದಭ೯ ಗೌರವ ಸನ್ಮಾನ ಸ್ವೀಕರಿಸಿ ಮಾತನಾಡಿದ ದೀಪಾಭಾಸ್ತಿ, ಮಡಿಕೇರಿಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯ ತನಗೆ ಎರಡನೇ ಮನೆಯಿದ್ದಂತೆ ಎಂದು ಹೇಳಿದ ದೀಪಾಭಾಸ್ತಿ, ಗ್ರಂಥಾಲಯದ ಸಂಬಂಧದಿಂದಾಗಿ ತನ್ನ ಸಾಹಿತ್ಯ ಜ್ಞಾನ ಹೆಮ್ಮರವಾಯಿತೆಂದು ಹೇಳಿದರು. ಓದುವ ಪ್ರವೃತ್ತಿಯನ್ನು ಬೆಳೆಸುವಲ್ಲಿ ಅದರಲ್ಲಿಯೂ ಇಂಗ್ಲೀಷ್ ಪುಸ್ತಕ ಓದಲು ಮಡಿಕೇರಿಯ ಜಿಲ್ಲಾ ಕೇಂದ್ರ ಗ್ರಂಥಾಲಯ ಪ್ರೇರಣೆಯಾಯಿತು ಎಂದೂ ದೀಪಾಭಾಸ್ತಿ ಹೆಮ್ಮೆಯಿಂದ ನುಡಿದರು 2184 ಎಂಬ ತನ್ನ ಗ್ರಂಥಾಲಯ ನೋಂದಣಿ ಸಂಖ್ಯೆಯನ್ನೂ ಉಲ್ಲೇಖಿಸಿದ ದೀಪಾಭಾಸ್ತಿ, ಅನೇಕ ಪುಸ್ತಕಗಳಲ್ಲಿ ತಾನು ಆ ಪುಸ್ತಕ ಓದಿರುವ ಕುಹುರಾಗಿ ಈ ಸಂಖ್ಯೆಯನ್ನು ಗಮನಿಸಬಹುದು ಎಂದೂ ದೀಪಾ ಹೇಳಿದರು. ಸಪ್ತಾಹದ ಮೂಲಕ ಗ್ರಂಥಾಲಯಗಳಿಗೆ ಹೆಚ್ಚಿನ ಓದುಗರು ದೊರಕಲಿ. ಹೊಸ…
ಮಡಿಕೇರಿ ನ.14 NEWS DESK : 2025-26ನೇ ಸಾಲಿನ ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನ ಯೋಜನೆಯಡಿ ಗ್ರಾಮ ಪಂಚಾಯಿತಿಗಳ ಪರಸ್ಪರ ಕಲಿಕಾ ಕ್ಷೇತ್ರ ಭೇಟಿ ಕಾರ್ಯಕ್ರಮದಡಿ ಕೊಡಗು ಜಿಲ್ಲೆಯಲ್ಲಿ 2023-24ನೇ ಸಾಲಿನಲ್ಲಿ ಗಾಂಧಿ ಗ್ರಾಮ ಪುರಸ್ಕಾರ ಪಡೆದುಕೊಂಡ ಗ್ರಾಮ ಪಂಚಾಯಿತಿಗಳಾದ ಮಡಿಕೇರಿ ತಾಲ್ಲೂಕಿನ ಹೊದ್ದೂರು, ಕುಶಾಲನಗರದ ನಂಜರಾಯಪಟ್ಟಣ, ವಿರಾಜಪೇಟೆಯ ಹಾಲುಗುಂದ, ಪೊನ್ನಂಪೇಟೆಯ ಮಾಯಮುಡಿ, ಸೋಮವಾರಪೇಟೆ ದುಂಡಳ್ಳಿ ಗ್ರಾ.ಪಂಗಳನ್ನು ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲ್ಲೂಕಿನ ಮಾಡಬಾಳ, ಶಹಾಬಾದ ತಾಲ್ಲೂಕಿನ ಭಂಕೂರ ಹಾಗೂ ಕಲ್ಬುರ್ಗಿ ತಾಲ್ಲೂಕಿನ ಫಿರೋಜಬಾದ್ ಗ್ರಾಮ ಪಂಚಾಯಿತಿಗಳಿಗೆ ನವೆಂಬರ್ ತಿಂಗಳ 5, 6, 7ನೇ ದಿನಾಂಕಗಳಂದು ಕ್ಷೇತ್ರ ಭೇಟಿ ನಿಗದಿಯಾಗಿತ್ತು. ನಮ್ಮ ಕಾರ್ಯಕ್ಷೇತ್ರದಲ್ಲಿ ಮಾಡಿದ ಉತ್ತಮ ಕೆಲಸಗಳಿಂದಾಗಿ ಕೆಲವೊಂದು ಸದಾವಕಾಶಗಳು ಹುಡುಕಿಕೊಂಡು ಬರುತ್ತವೆ ಎನ್ನುವುದಕ್ಕೆ ನಮ್ಮೆಲ್ಲರ ಕಲ್ಬುರ್ಗಿ ಕಲಿಕಾ ಕ್ಷೇತ್ರ ಭೇಟಿ ಸಾಕ್ಷಿಯಾಯಿತು. ನಮ್ಮ ತಂಡದಲ್ಲಿ ಪ್ರತಿ ಗ್ರಾಮ ಪಂಚಾಯಿತಿಯಿಂದ 5 ಜನದಂತೆ ಅಧ್ಯಕ್ಷರು, ಉಪಾಧ್ಯಕ್ಷರು, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರು, ಸದಸ್ಯರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ/ಕಾರ್ಯದರ್ಶಿಗಳ ಒಟ್ಟು 25…
ಮಡಿಕೇರಿ ನ.14 NEWS DESK : ಕ್ರೀಡೆಯನ್ನು ಅದರ ನೈಜ ರೀತಿಯಲ್ಲಿ ಆಸ್ವಾದಿಸುತ್ತಾ ಸಮಾಜದಲ್ಲಿ ಸಾಮರಸ್ಯ ಸಾಧಿಸಲು ಎಲ್ಲರೂ ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ ಕರೆ ನೀಡಿದರು. ಕೊಡವ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ನಾಲ್ಕನೇ ವರ್ಷದ ಐಪಿಎಲ್ ಮಾದರಿಯ ಕೊಡವ ಪ್ರೀಮಿಯರ್ ಲೀಗ್ ಸೀಸನ್-4 ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ, ಕ್ರೀಡಾ ಪಟುಗಳಿಗೆ ಶುಭಹಾರೈಸಿ ಮಾತನಾಡಿದರು. ಜಗತ್ತಿನಾದ್ಯಂತ ಖ್ಯಾತಿ ಪಡೆದಿರುವ ಕ್ರಿಕೆಟ್ ಪಂದ್ಯಾಟವು, ಇಂದು ದೇಶದ ಎಲ್ಲಾ ಕ್ರೀಡಾ ಪ್ರೇಮಿಗಳು ಇಷ್ಟಪಡುವ ಕ್ರೀಡೆಯಾಗಿದೆ. ನಮ್ಮ ಕೊಡಗಿನಲ್ಲಿ ಸಹ, ಇಂತಹ ಪಂದ್ಯಾವಳಿಗಳು ನಡೆಯುವುದರಿಂದ ಅನೇಕ ಕ್ರಿಕೆಟ್ ಪಟುಗಳ ಪ್ರತಿಭೆ ಅನಾವರಣಕ್ಕೆ ಸಾಕ್ಷಿಯಾಗಿದೆ ಎಂದರು. ಕೊಡಗು ಜಿಲ್ಲೆಯಿಂದ ಹತ್ತಾರು ಶ್ರೇಷ್ಠ ಕ್ರಿಕೆಟ್ ಆಟಗಾರರು ಇಂದು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಖ್ಯಾತಿಯನ್ನು ಪಡೆದಿದ್ದಾರೆ. ಕೊಡಗಿನಲ್ಲಿ ಕ್ರೀಡೆಗೆ ಪ್ರೋತ್ಸಾಹ ನೀಡಲು ರಾಜ್ಯ ಸರ್ಕಾರವು…
ಮಡಿಕೇರಿ ನ.14 NEWS DESK : ಕಳೆದ 25 ವರ್ಷಗಳಿಂದ ಅಭಿವೃದ್ಧಿ ಕಾಣದೆ ನೆನೆಗುದಿಗೆ ಬಿದ್ದಿದ್ದ ಮಡಿಕೇರಿ-ಗಾಳಿಬೀಡು-ಕಡಮಕಲ್ಲು ರಸ್ತೆ ದುರಸ್ತಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಚಾಲನೆ ನೀಡಿದರು. ಗಾಳಿಬೀಡು ಗ್ರಾಮದ ಕೋಳಿಗೂಡು ಎಂಬಲ್ಲಿ ಶಾಸಕರು ಭೂಮಿಪೂಜೆ ನೆರವೇರಿಸಿ, ಗುಣಮಟ್ಟದ ಕಾಮಗಾರಿ ನಡೆಸುವಂತೆ ಸೂಚನೆ ನೀಡಿದರು. ಈ ಸಂದರ್ಭ ಗಾಳಿಬೀಡು ವಲಯ ಕಾಂಗ್ರೆಸ್ ಅಧ್ಯಕ್ಷ ಎಂ.ಡಿ.ಸುಭಾಷ್ ಆಳ್ವ, ಮಾಜಿ ಅಧ್ಯಕ್ಷ ಕೋಳುಮುಡಿಯನ ಅನಂತಕುಮಾರ್, ಜಿಲ್ಲಾ ಕಾಂಗ್ರೆಸ್ ಸದಸ್ಯ ಐಲಪಂಡ ಪುಷ್ಪ ಪೂಣಚ್ಚ, ಅಕ್ರಮ ಸಕ್ರಮ ಸಮಿತಿ ಸದಸ್ಯ ಹರಿಪ್ರಸಾದ್ ಕೋಚನ, ವಲಯ ಕಾಂಗ್ರೆಸ್ ಸದಸ್ಯರುಗಳಾದ ಮದನ್ ಕೊಂಬಾರನ ಹಾಗೂ ಗಣಪತಿ, ಪ್ರಮುಖರಾದ ತೆನ್ನಿರಾ ಮೈನ, ಹೆಚ್.ಎ.ಹಂಸ ಅಪ್ರು ರವೀಂದ್ರ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು. ಅಭಿವೃದ್ಧಿ ಕಾಣದೆ ನೆನೆಗುದಿಗೆ ಬಿದ್ದಿದ್ದ ಮಡಿಕೇರಿ-ಗಾಳಿಬೀಡು-ಕಡಮಕಲ್ಲು ರಸ್ತೆ ದುರಸ್ತಿಗೆ ಶಾಸಕ ಡಾ.ಮಂತರ್ ಗೌಡ ಅವರ ಪ್ರಯತ್ನದ ಫಲವಾಗಿ ರೂ.3.50 ಕೋಟಿ ಬಿಡುಗಡೆಯಾಗಿತ್ತು.
ಮಡಿಕೇರಿ ನ.14 NEWS DESK : ವಿರಾಜಪೇಟೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಇಂದೇ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆಯ ಶುಭಹಾರೈಸಿದರು. ಪಂಡಿತ್ ಜವಾಹರ್ ಲಾಲ್ ನೆಹರುರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿ, ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಸಂಭ್ರಮಿಸಿದರು. ಶಾಲೆಯ ಪ್ರಾಧ್ಯಾಪಕರೊಂದಿಗೆ ಮಾತನಾಡುತ್ತಾ ಮಕ್ಕಳಿಗೆ ದೊರಕುತ್ತಿರುವ ಎಲ್ಲಾ ಸೌಲತ್ತುಗಳ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಹನೀಫ್, ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ರಫೀಕ್, ಪಕ್ಷದ ಮುಖಂಡರು ಜೋಕಿಮ್, ಸೂರಜ್ ಹೊಸೂರು,ಮಂಜುನಾಥ್, ನರೇಂದ್ರ ಕಾಮತ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರು ಜಮ್ಮಡ ಸೋಮಣ್ಣ, ಶಬೀರ್, ಸಫನ್, ಹಾಗೂ ಶಿಕ್ಷಕ ವೃಂದದವರು ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.
ಬೆಂಗಳೂರು ನ.14 NEWS DESK : ವೃಕ್ಷಮಾತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರು ಇಂದು(ನ.14) ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 12 ಗಂಟೆಗೆ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ 114 ವರ್ಷ ವಯಸ್ಸಾಗಿತ್ತು. ಭಾರತದ ಪರಿಸರ ಇತಿಹಾಸದಲ್ಲಿ ‘ಸಾಲುಮರದ ತಿಮ್ಮಕ್ಕ’ ಎಂಬ ಹೆಸರು ಎಂದಿಗೂ ಅಜರಾಮರ. 1911ರ ಜೂನ್ 30ರಂದು ಜನಿಸಿದ್ದ ಸಾಲುಮರದ ತಿಮ್ಮಕ್ಕ, ಹುಲಿಕಲ್ ಗ್ರಾಮದ ಚಿಕ್ಕಯ್ಯ ಚಿಕ್ಕಯ್ಯರನ್ನು ವಿವಾಹವಾಗಿದ್ದರು. ಒಬ್ಬ ಕೂಲಿ ಕಾರ್ಮಿಕೆಯಾಗಿ ತಮ್ಮ ಜೀವನವನ್ನು ಆರಂಭಿಸಿದ ಈ ಮಹಾತಾಯಿಗೆ ಮಕ್ಕಳಿರಲಿಲ್ಲ. ಹಾಗಾಗಿ, ಆ ನೋವಿನಿಂದ ಹೊರಬರಲು ಮತ್ತು ಭೂಮಿಗೆ ಪ್ರಕೃತಿಯ ಕೊಡುಗೆ ನೀಡಲು, ಸುಮಾರು ನಾಲ್ಕು ಕಿ.ಮೀ. ಉದ್ದದ ರಸ್ತೆಯುದ್ದಕ್ಕೂ 400ಕ್ಕೂ ಹೆಚ್ಚು ಆಲದ ಮರಗಳನ್ನು (Banyan Trees) ನೆಟ್ಟು, ಅವಕ್ಕೆ ನೀರು ಹಾಕಿ ಪೋಷಿಸಿದರು. ಗಿಡಮರಗಳನ್ನೇ ಮಕ್ಕಳಂತೆ ಸಾಕಿದರು. ಅದೇ ಕಾರಣಕ್ಕೆ, ಅವರಿಗೆ ‘ಸಾಲುಮರದ’…
ಶಿವಮೊಗ್ಗ ನ.14 NEWS DESK : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಆವರಣದಲ್ಲಿ ಸಹಕಾರಿ ಧುರೀಣ ಬಿ.ಎಸ್.ವಿಶ್ವನಾಥ್ ಅವರ ಪುತ್ಥಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದರು. ನಂತರ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಬಿ.ಎಸ್.ವಿಶ್ವನಾಥ್ ಅವರು ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಸಹಕಾರಿ ಮುಖಂಡರಾಗಿ ಬೆಳೆದದ್ದು ನಮಗೆಲ್ಲ ಹೆಮ್ಮೆಯ ವಿಷಯ. ವಿವಿಧ ಸಹಕಾರ ಸಂಘಗಳಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದವರು. ಸಹಕಾರ ಕ್ಷೇತ್ರದಲ್ಲಿ ಅಪ್ರತಿಮ ಕೊಡುಗೆ ನೀಡಿರುವ ಬಿ.ಎಸ್.ವಿಶ್ವನಾಥ್ ಅವರ ಪುತ್ಥಳಿಯನ್ನು ಇಂದು ಅತ್ಯಂತ ಸಂತೋಷದಿಂದ ಅನಾವರಣಗೊಳಿಸಿದ್ದೇನೆ. ಇಂದಿನ ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು. ಬಿ.ಎಸ್.ವಿಶ್ವನಾಥ್ ಅವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು. ಸಹಕಾರಿ ಧುರೀಣರಾದ ಜಿ.ಟಿ.ದೇವೇಗೌಡರು, ಸೋಮಶೇಖರ್, ಷಡಕ್ಷರಿ, ಹೆಚ್.ಎಂ.ರೇವಣ್ಣನವರು ಸೇರಿದಂತೆ ಎಲ್ಲ ಸಹಕಾರಿಗಳು ಬಹಳಷ್ಟು ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ. ಈ ಎಲ್ಲಾ ಗಣ್ಯರಿಗೆ ಅಭಿನಂದನೆ ಸಲ್ಲಿಸಿದರು.
ಬೆಂಗಳೂರು ನ.14 NEWS DESK : ಮಾಜಿ ಪ್ರಧಾನಿ ಪಂಡಿತ್ ಜವಾಹಾರಲಾಲ್ ನೆಹರು ಅವರ ಜಯಂತಿಯ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಆವರಣದಲ್ಲಿರುವ ನೆಹರೂ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಮಕ್ಕಳ ದಿನಾಚರಣೆಯ ಶುಭ ಕೋರಿದರು.






