ಲೇಖಕ: admin

ಮಡಿಕೇರಿ ನ.14 NEWS DESK : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಇಲಾಖೆ ಹಾಗೂ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ 72 ನೇ ಅಖಿಲ ಭಾರತ ಸಹಕಾರ ಸಪ್ತಾಹಕ್ಕೆ ಚಾಲನೆ ಹಾಗೂ ಕಾರ್ಯದಕ್ಷತೆ, ಉತ್ತರದಾಯಿತ್ವ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸಲು ಡಿಜಿಟಲೀಕರಣವನ್ನು ಪ್ರೋತ್ಸಾಹಿಸುವ ದಿನಾಚರಣೆಯು ನ.14 ರಂದು ಬೆಳಗ್ಗೆ 10.30 ಗಂಟೆಗೆ ಪೆರಾಜೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ಅಧ್ಯಕ್ಷರಾದ ಕೆ.ಪಿ.ಗಣಪತಿ, ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ಅಧ್ಯಕ್ಷರಾದ ಪಿ.ಯು.ರಾಬಿನ್ ದೇವಯ್ಯ, ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ, ಪೆರಾಜೆ ಗ್ರಾ.ಪಂ. ಅಧ್ಯಕ್ಷರಾದ ಚಂದ್ರಕಲಾ ಬಾಲಚಂದ್ರ, ಕಾಫಿ ಮಂಡಳಿ ಸದಸ್ಯರಾದ ತಳೂರು ಕಿಶೋರ್ ಕುಮಾರ್ ಇತರರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ನ.14 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಹಾಗೂ ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕು, ವಿವಿಧ ಆದಿವಾಸಿ ಬುಡಕಟ್ಟು ಸಂಘಗಳು ಇವರ ಸಹಯೋಗದೊಂದಿಗೆ ಶ್ರೀ ಭಗವಾನ್ ಬಿರ್ಸಾಮುಂಡಾರವರ 151 ನೇ ಜಯಂತಿಯ ಪ್ರಯುಕ್ತ ಜನಜಾತೀಯ ಗೌರವ ದಿವಸ್ ಆಚರಣಾ ಸಮಾರಂಭವು ನವೆಂಬರ್, 15 ರಂದು ಬೆಳಗ್ಗೆ 10.30 ಗಂಟೆಗೆ ತಿತಿಮತಿ, ಸಮುದಾಯ ಭವನ ಸಭಾಂಗಣದಲ್ಲಿ ನಡೆಯಲಿದೆ. ನವೆಂಬರ್, 15 ರಂದು ಬೆಳಗ್ಗೆ 10 ಗಂಟೆಗೆ ಮರೂರು, ತಿತಿಮತಿ ಶಾಲೆಯ ಮುಂಭಾಗದಿಂದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ವರೆಗೆ ಮೆರವಣೆಗೆ ನಡೆಯಲಿದೆ. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ…

Read More

ಮಡಿಕೇರಿ ನ.14 NEWS DESK : ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡೂರು- ಕಲ್ಲುಕಂಡಿ ರಸ್ತೆಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ  ಪರಿಶೀಲಿಸಿದರು. ಸೋಮವಾರಪೇಟೆ ತಾಲ್ಲೂಕು ಹಾನಗಲ್ ಪಂಚಾಯಿತಿ ವ್ಯಾಪ್ತಿಯ ಯಡೂರು ಗ್ರಾಮದ ಕಲ್ಲುಕಂಡಿ – ದೊಡ್ಡದಿಣ್ಣೆ ಪ್ರದೇಶದ ನಡುವೆ ಸಂಪರ್ಕ ರಸ್ತೆ ಇಲ್ಲದೆ ಅನಾನುಕೂಲವಾಗುತ್ತಿರುವುದನ್ನು ಗಮನಿಸಿದ ಶಾಸಕ ಡಾ.ಮಂತರ್ ಗೌಡ ಈ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿದರು. ರೈತರು ಹಾಗೂ ಗ್ರಾಮಸ್ಥರ ಬಹುಕಾಲದ ಬೇಡಿಕೆಗೆ ಸ್ಪಂದಿಸಿದ ಶಾಸಕರು ಕಲ್ಲುಕಂಡಿ – ಯಡೂರು ಗ್ರಾಮದ ದೊಡ್ಡದಿಣೆ ನಡುವೆ ಸಂಪರ್ಕ ರಸ್ತೆಯನ್ನು ನಿರ್ಮಿಸಿ ರೈತರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಕಾಂಗ್ರೆಸ್ ಮುಖಂಡರಾದ ಕೆ.ಎಂ.ಲೋಕೇಶ್, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಬಿ.ಸತೀಶ್, ಹಾನಗಲ್ ವಲಯ ಕಾಂಗ್ರೆಸ್ ಅಧ್ಯಕ್ಷ ಸಿ.ಎಂ.ಪ್ರದೀಪ್, ಬೂತ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಪ್ಪ, ಗ್ರಾಮ ಸಮಿತಿ ಅಧ್ಯಕ್ಷ ಮೋಹನ್ ಕುಮಾರ್ ಮತ್ತು ಸಮಿತಿ…

Read More

ನಾಪೋಕ್ಲು ನ.14 NEWS DESK : ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ರ ಚಟುವಟಿಕೆಗಳಲ್ಲೂ ತಮ್ಮನ್ನು ತೊಡಗಿಸಿಕೊಳ್ಳಬೇಕು ಎನ್ನುವ ಉದ್ದೇಶದಿಂದ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಪ್ರತಿಭಾ ಕಾರಂಜಿ ಕಲೋತ್ಸವ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಮಡಿಕೇರಿ ತಾಲ್ಲೂಕು ಸಮೂಹ ಸಂಪನ್ಮೂಲ ವ್ಯಕ್ತಿ ಚಿತ್ರಾಪುರ ಹೇಳಿದರು. ಶಾಲಾ ಶಿಕ್ಷಣ ಇಲಾಖೆ, ಎಮ್ಮೆಮಾಡು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳ ಸಂಯುಕ್ತ ಆಶಯದಲ್ಲಿ ಎಮ್ಮೆಮಾಡು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನಾಪೋಕ್ಲು ಕ್ಲಸ್ಟರಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳು ತಮ್ಮಲ್ಲಿ ಅಡಗಿರುವ ಸೂಕ್ತ ಪ್ರತಿಭೆಗಳ ಪ್ರದರ್ಶನ ಮಾಡಲಿದ್ದು, ಶಿಕ್ಷಕರು ನಿಷ್ಪಕ್ಷಪಾತದಿಂದ ತೀರ್ಪು ನೀಡಬೇಕು. ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನಗಳಿಸಿದ ವಿದ್ಯಾರ್ಥಿಗಳು ತಾಲ್ಲೂಕು, ಜಿಲ್ಲಾ ಹಂತಗಳಲ್ಲಿ ಪಾಲ್ಗೊಳ್ಳಲು ಅವಕಾಶವಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಎಸ್ಡಿಎಂಸಿ ಅಧ್ಯಕ್ಷ ಅಬ್ದುಲ್ ರೆಹಮಾನ್ ಮಾತನಾಡಿ ಪ್ರತಿಭಾ ಕಾರಂಜಿ ಸ್ಪರ್ಧೆಗಳು ವಿದ್ಯಾರ್ಥಿಗಳ ಸುಪ್ತ ಪ್ರತಿಭೆಗಳನ್ನು ಹೊರತರಲು…

Read More

ಮಡಿಕೇರಿ ನ.13 NEWS DESK : ಕೊಡಗು ಜಿಲ್ಲಾ ವಾಣಿಜ್ಯ ಹಾಗೂ ಕೈಗಾರಿಕಾ ಸಂಸ್ಥೆ ಗೋಣಿಕೊಪ್ಪ ಮತ್ತು ದ ಮರ್ಚೆಂಟ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್  ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಚೆಪ್ಪುಡೀರ ಅರುಣ್ ಮಾಚಯ್ಯ ಅವರನ್ನು ಸನ್ಮಾನಿಸಲಾಯಿತು. ಗೋಣಿಕೊಪ್ಪ ಹರಿಶ್ಚಂದ್ರಪುರದಲ್ಲಿರುವ ಗೋಣಿಕೊಪ್ಪ ಟ್ರೇಡರ್ಸ್ ಚಾರಿಟೇಬಲ್ ಟ್ರಸ್ಟ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅರುಣ್ ಮಾಚಯ್ಯ ಅವರನ್ನು ಸನ್ಮಾನಿಸಿ ಗೌರವಿಸಿದರು. ನಂತರ ಮಾತನಾಡಿದ ಶಾಸಕರು,  ಈಗಾಗಲೇ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರ ಹಾಗೂ ತನ್ನ ಪ್ರಯತ್ನದಿಂದಾಗಿ ವಿರಾಜಪೇಟೆ ಕ್ಷೇತ್ರಾದ್ಯಂತ ಕ್ರೀಡಾ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ತರಲಾಗಿದೆ. ನೂತನ ಕ್ರೀಡಾ ವಸತಿ ನಿಲಯಗಳು ತರಬೇತಿ ಕೇಂದ್ರಗಳು ನೂತನ ಮೈದಾನಗಳು ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಪ್ರಾರಂಭಿಸಿದ್ದು, ಅರುಣ್ ಮಾಚಯ್ಯನವರು ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವುದು ಕ್ಷೇತ್ರದ ಹಾಗೂ ಜಿಲ್ಲೆಯ ಕ್ರೀಡಾ ಅಭಿವೃದ್ಧಿಗೆ…

Read More

ಬೆಂಗಳೂರು ನ.14 NEWS DESK : ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಿ ಎನ್ನುವ ಸೂಚನೆಗಳನ್ನು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಗತ್ಯ ಸಿಬ್ಬಂದಿ, ಅನುದಾನ ಸೇರಿ ಸರ್ಕಾರದಿಂದ ಎಲ್ಲಾ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು. ವಯಸ್ಸಾದ ಕಾರಣಕ್ಕೆ ಮತ್ತು ಹೊಸ ಯುವ ಹುಲಿಗಳ ದಾಳಿಯಿಂದ ಗಾಯಗೊಂಡ ಹಾಗೂ ಇನ್ನಿತರೆ ಕಾರಣಗಳಿಂದ ಅರಣ್ಯ ಪ್ರದೇಶದಿಂದ ಹೊರಗೆ ಸಂಚರಿಸುತ್ತಿರುವ 15-20 ಹುಲಿಗಳನ್ನು ದ್ರೋಣ್ ಕ್ಯಾಮರಾ ನೆರವಿನಿಂದ ತಕ್ಷಣ ಹಿಡಿಯಲು ಕ್ರಮ ಜರುಗಿಸಿ ಎನ್ನುವ ಸೂಚನೆ ನೀಡಿದರು. ಈಗಾಗಲೇ ಎಂಟು ಕುಮ್ಕಿ ಆನೆಗಳನ್ನು ಕಾರ್ಯಾಚರಣೆಗೆ ಬಳಸಲಾಗುತ್ತಿದ್ದು ಅಗತ್ಯಕ್ಕೆ ತಕ್ಕಂತೆ ಸಿಬ್ಬಂದಿ ಮತ್ತು ಸ್ಕ್ವಾಡ್ ಗಳ ಸಂಖ್ಯೆಯನ್ನು ಸಂಘರ್ಷ ಪೀಡಿತ ಅರಣ್ಯ ಪ್ರದೇಶದಲ್ಲಿ ಬಳಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಈ ಬಗ್ಗೆ ಸಮಗ್ರ ಚರ್ಚೆ ನಡೆಸಿದ ಬಳಿಕ ಮುಖ್ಯಮಂತ್ರಿಗಳು, ಮಾನವ ವನ್ಯ ಜೀವಿ ಸಂಘರ್ಷ ನಿಯಂತ್ರಣಕ್ಕೆ ಈ ಕೆಳಗಿನ…

Read More

ವಿರಾಜಪೇಟೆ ನ.14 NEWS DESK : ವಿರಾಜಪೇಟೆಯಲ್ಲಿ ವಿದ್ಯುತ್ ಸಂಪರ್ಕ ಸೂಕ್ತವಾಗಿ ಪೂರೈಕೆಯಾಗದೆ ಇರುವುದರಿಂದ ಸಮಸ್ಯೆಗಳು ಉಂಟಾಗುತ್ತಿದ್ದು, ಸಮರ್ಪಕ ವಿದ್ಯುತ್ ನೀಡುವಂತೆ ಒತ್ತಾಯಿಸಿ, ವಿರಾಜಪೇಟೆ ವರ್ತಕರ ಸಂಘ ಚೆಸ್ಕಾಂಗೆ ಮನವಿ ಪತ್ರ ಸಲ್ಲಿಸಿತು. ವಿರಾಜಪೇಟೆಯ ವರ್ತಕರ ಸಂಘದ ಅಧ್ಯಕ್ಷ ಪಿ.ಎ. ಮಂಜುನಾಥ್ ಮಾತನಾಡಿ, ಇತ್ತೀಚೆಗೆ ವಿರಾಜಪೇಟೆಯಲ್ಲಿ ವಿದ್ಯುತ್ ಸಂಪರ್ಕ ಸೂಕ್ತವಾಗಿ ಪೂರೈಕೆಯಾಗುತ್ತಿಲ್ಲ. ಇದರಿಂದಾಗಿ ಪ್ರತಿಯೊಬ್ಬರೂ ಕೂಡ ನಾನಾ ರೀತಿಯಲ್ಲಿ ಕಷ್ಟವನ್ನು ಅನುಭವಿಸುತ್ತಿದ್ದಾರೆ. ಮನೆಯಲ್ಲಿ ಇರತಕ್ಕಂತಹ ಯಾವುದೇ ವಿದ್ಯುತ್ ಚಾಲಿತ ಯಂತ್ರಗಳನ್ನು ಕೂಡ ಉಪಯೋಗಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಕುಡಿಯುವ ನೀರಿನಿಂದ ಪ್ರಾರಂಭಿಸಿ ಪ್ರತಿಯೊಂದು ತುಂಬಾ ತೊಂದರೆ ಉಂಟಾಗುತ್ತಿರುವುದೇ ಅಲ್ಲದೆ ಶಾಲಾ-ಕಾಲೇಜು ಮಕ್ಕಳು, ವರ್ತಕರು ವಯೋವೃದ್ಧರು, ಹೆಚ್ಚಿನ ಮಟ್ಟಿನ ವರ್ತಕರು, ವೆಲ್ಡಿಂಗ್, ಲೇತ್, ಸರ್ವಿಸ್ ಸೆಂಟರ್ ಎಂಟಪ್ರ್ರೈಸಸ್‍ಗಳು, ಮಾಂಸದ ಅಂಗಡಿಗಳು ಹಾಗೂ ಇತರೆ ಮಳಿಗೆಯಲ್ಲಿ ಕೆಲಸವನ್ನು ನಿರ್ವಹಿಸಲು ಸಾಧ್ಯವಾಗದೆ ಆರ್ಥಿಕವಾಗಿ ಹಿನ್ನಡೆಯಲ್ಲಿದ್ದಾರೆ. ಇದರಿಂದಾಗಿ ಎಲ್ಲರೂ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಆದುದರಿಂದ ತಾವುಗಳು ಆದಷ್ಟು ಬೇಗ ವಿರಾಜಪೇಟೆಯಲ್ಲಿ ಸೂಕ್ತ ರೀತಿಯಲ್ಲಿ ವಿದ್ಯುತ್ ಪೂರೈಕೆ ಮಾಡಿಕೊಡಬೇಕು. ಇದಕ್ಕೆ ಸ್ಪಂದಿಸದೆ…

Read More

ಮಡಿಕೇರಿ ನ.14 NEWS DESK : ದೇಶದ ಏಕತಾ ಪುರುಷ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ 150ನೇ ಜನ್ಮದಿನದ ಪ್ರಯುಕ್ತ ‘ಏಕತಾ ನಡಿಗೆ’ ಪೆÇನ್ನಂಪೇಟೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಬಳಿಕ ಬಸ್ ನಿಲ್ದಾಣದಿಂದ ಗೋಣಿಕೊಪ್ಪದ ಪರಿಮಳ ಮಂಗಳ ವಿಹಾರದವರೆಗೆ ಯದುವೀರ್ ಒಡೆಯರ್ ಅವರ ಮುಂದಾಳತ್ವದಲ್ಲಿ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಪೊನ್ನಂಪೇಟೆ ಬಸ್ ನಿಲ್ದಾಣದಿಂದ ಗೋಣಿಕೊಪ್ಪ ಮುಖ್ಯ ರಸ್ತೆಯಲ್ಲಿ ಕಾಲ್ನಡಿಗೆ ಮೂಲಕ ಸಾಗಿ ಗೋಣಿಕೊಪ್ಪ ಪರಿಮಳ ಮಂಗಳ ವಿಹಾರದಲ್ಲಿ ಸಮಾವೇಶಗೊಂಡರು. ಸಭಾ ಕಾರ್ಯಕ್ರಮಕ್ಕೆ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಸಂಸದ ಯದುವೀರ್ ಒಡೆಯರ್ ಅವರು ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ಅನೇಕ ಒಪ್ಪಂದಗಳ ಮೂಲಕ ಭಾರತದ ಏಕತೆಗಾಗಿ ಕೊನೆ ಉಸಿರಿನವರೆಗೂ ಶ್ರಮಿಸಿದ್ದರು. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೂ ಭಾರತ ಸದೃಢ…

Read More

ಮಡಿಕೇರಿ NEWS DESK ನ.13 : ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಎಂ.ಚೆಂಬು ಗ್ರಾಮದ ಮನೆಯೊಂದರಿಂದ ನಗದು ಮತ್ತು ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಶಿವಮೊಗ್ಗ ಭದ್ರಾವತಿಯ ಸಿದ್ದಾಪುರ ಗ್ರಾಮದ ಎನ್.ಸಿದ್ದಲಿಂಗ(28) ಹಾಗೂ ಎನ್.ರಘು(26) ಎಂಬುವವರೇ ಬಂಧಿತರಾಗಿದ್ದು, ಆರೋಪಿಗಳಿಂದ 8.50 ಲಕ್ಷ ರೂ. ನಗದು ಮತ್ತು 120 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ. ನ.5ರಂದು ಸಂಪಾಜೆ ಸಮೀಪದ ಎಂ.ಚೆಂಬು ಗ್ರಾಮದ ವೀರಪ್ಪ.ಪಿ.ಪಿ. ಎಂಬವರು ಮನೆಯಲ್ಲಿ ಇಲ್ಲದ ಸಂದರ್ಭ ಮನೆಗೆ ನುಗ್ಗಿ ಕ್ಯಾಶ್ ಲಾಕರ್‌ನಲ್ಲಿದ್ದ 15 ಸಾವಿರ ನಗದು ಮತ್ತು 120 ಗ್ರಾಂ ಚಿನ್ನಾಭರಣವನ್ನು ಕಳವು ಮಾಡಲಾಗಿತ್ತು. ಈ ಕುರಿತು ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮಡಿಕೇರಿ ಡಿವೈಎಸ್‌ಪಿ ಸೂರಜ್, ವೃತ್ತ ನಿರೀಕ್ಷಕ ಚಂದ್ರಶೇಖರ್, ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಮತ್ತು ಅಪರಾಧ ಪತ್ತೆ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು.

Read More

ಕುಶಾಲನಗರ ನ.13 NEWS DESK : ಬೆಂಗಳೂರಿನ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ ( ಎಂಪ್ರಿ- ಎನ್ವಿರಾನ್ ಮೆಂಟಲ್ ಮೇನೇಜ್ ಮೆಂಟ್ ಅಂಡ್ ಪಾಲಿಸಿ ರಿಸರ್ಚ್ ಇನ್ಸ್ಟಿಟ್ಯೂಟ್ ) ವತಿಯಿಂದ ಕುಶಾಲನಗರ ಪುರಸಭೆಯ ಸಭಾಂಗಣದಲ್ಲಿ ಮೈಸೂರು ಹಾಗೂ ಕೊಡಗು ಜಿಲ್ಲಾ ಸ್ಥಳೀಯ ನಗರ ಸಂಸ್ಥೆಗಳ ಪರಿಸರ ಅಧಿಕಾರಿಗಳು, ಆರೋಗ್ಯ ನಿರೀಕ್ಷಕರಿಗೆ ಪೌರಾಡಳಿತ ನಿರ್ದೇಶನಾಲಯದ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ “ಚಕ್ರೀಯ ಆರ್ಥಿಕತೆ” (ಸರ್ಕ್ಯುಲರ್ ಎಕಾನಮಿ”) – ಘನತ್ಯಾಜ್ಯ ನಿರ್ವಹಣೆ ಕುರಿತು ಒಂದು ದಿನದ ಕಾರ್ಯಾಗಾರ ಏರ್ಪಡಿಸಲಾಗಿತ್ತು. ಕಾರ್ಯಾಗಾರಕ್ಕೆ ಚಾಲನೆ ನೀಡಿ ನಮ್ಮ ಕಸ – ನಮ್ಮ ಹೊಣೆ : ಹಾಗೂ ಸ್ವಚ್ಛ ಪರಿಸರ ನಿರ್ಮಾಣ ಕುರಿತು ಮಾತನಾಡಿದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರೂ ಆದ ಪರಿಸರ ಪ್ರಶಸ್ತಿ ಪುರಸ್ಕೃತರಾದ ಟಿ.ಜಿ.ಪ್ರೇಮಕುಮಾರ್, ಉತ್ತಮ ಪರಿಸರ ನಿರ್ಮಾಣಕ್ಕೆ ನಾವು ನಮ್ಮಿಂದ ದಿನನಿತ್ಯ ಉತ್ಪತ್ತಿಯಾಗುವ ಕಸವನ್ನು ವಿಂಗಡಿಸಿ ಸೂಕ್ತವಾಗಿ ವಿಲೇವಾರಿ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. “ನಮ್ಮ ಕಸ- ನಮ್ಮ ಹೊಣೆ” ಎಂಬ…

Read More