ಮಡಿಕೇರಿ ನ.13 NEWS DESK : ಮಿಸ್ಟರ್ ಇಂಡಿಯಾ ಯೂನಿವರ್ಸ್ 2025 ಪ್ರಶಸ್ತಿಗೆ ಭಾಜನರಾದ ವಿರಾಜಪೇಟೆ ತಾಲ್ಲೂಕಿನ ಪಾಲಂಗಾಲ ಗ್ರಾಮದ ಕರಿನೆರವಂಡ ಬಿಶನ್ ಮಾದಪ್ಪ ಅವರನ್ನು ಗೋಣಿಕೊಪ್ಪದಲ್ಲಿ ನಡೆದ ಏಕತಾ ಯಾತ್ರೆ ಸಂದರ್ಭ ಸನ್ಮಾನಿಸಿ ಗೌರವಿಸಲಾಯಿತು. ಉಕ್ಕಿನ ಮನುಷ್ಯ ಸರ್ಧಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ಪರಿಮಳ ಸಭಾಂಗಣದಲ್ಲಿ ನಡೆದ ಏಕತಾ ಯಾತ್ರೆಯ ಸಭಾ ಕಾರ್ಯಕ್ರಮದಲ್ಲಿ ಬಿಶನ್ ಮಾದಪ್ಪ ಅವರನ್ನು ಬಿಜೆಪಿ ವತಿಯಿಂದ ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ಸನ್ಮಾನಿಸಿದರು. ಈ ಸಂದರ್ಭ ಮಾಜಿ ಸಚಿವ ಎಂ.ಪಿ.ಅಪ್ಪಚ್ಚುರಂಜನ್, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಾಜಿ ಅಧ್ಯಕ್ಷ ರಾಬಿನ್ ದೇವಯ್ಯ, ಕೆದಮುಳ್ಳೂರು ಗ್ರಾ.ಪಂ ಉಪಾಧ್ಯಕ್ಷ ಎಂ.ಎಂ.ಪರಮೇಶ್ವರ, ಮಾಜಿ ಸದಸ್ಯ ಚೋಟು ಬಿದ್ದಪ್ಪ ಮತ್ತಿತರರು ಉಪಸ್ಥಿತರಿದ್ದರು. ಇದೇ ಅ.6 ರಿಂದ 13 ರವರೆಗೆ ರಾಜಸ್ಥಾನದ ಝೀ ಸ್ಟುಡಿಯೋ ಜೈಪುರದಲ್ಲಿ ನಡೆದ ಸ್ಪರ್ಧೆಯಲ್ಲಿ ಬಿಶನ್ ಮಾದಪ್ಪ ಅವರು ಮಿಸ್ಟರ್ ಇಂಡಿಯಾ ಯೂನಿವರ್ಸ್ ಆಗಿ ಆಯ್ಕೆಯಾಗಿದ್ದರು.
ಲೇಖಕ: admin
ಸುಂಟಿಕೊಪ್ಪ,ನ. 13 NEWS DESK : ಕುಶಾಲನಗರ ಸಮೀಪದ ಹೇರೂರು ಗ್ರಾಮದ ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ನೀರು ಪಾಲಾದ ವಿದ್ಯಾರ್ಥಿಗಳ ಮೃತದೇಹ ಪತ್ತೆಯಾಗಿದೆ. ಬುಧವಾರ ಮಡಿಕೇರಿ ನಗರದ ಜ್ಯೂನಿಯರ್ ಕಾಲೇಜ್ ನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ಹೆಬ್ಬೆಟ್ಟಗೇರಿ ಗ್ರಾಮ ನಿವಾಸಿ ಪಾಂಡೀರ ಪೂವಯ್ಯ ಎಂಬುವವರ ಪುತ್ರ ಚಂಗಪ್ಪ (17) ಹಾಗೂ ಕಾಲೂರು ಗ್ರಾಮದ ನಿವಾಸಿ ಚನ್ನಪಂಡ ತಮ್ಮಯ್ಯ ಎಂಬುವವರ ಪುತ್ರ ತರುಣ್ ತಿಮ್ಮಯ್ಯ(17) ಎಂಬುವವರೇ ಮೃತ ವಿದ್ಯಾರ್ಥಿಗಳಾಗಿದ್ದಾರೆ. ಸುಂಟಿಕೊಪ್ಪ ಪೊಲೀಸರು, ಕುಶಾಲನಗರ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಹಾಗೂ ದುಬಾರೆ ರ್ಯಾಫ್ಟರ್‍ಗಳು ಮೃತ ದೇಹಗಳಿಗಾಗಿ ಶೋಧ ಕಾರ್ಯ ನಡೆಸಿ, ಚಂಗಪ್ಪ ಮೃತ ದೇಹ ಹೊರ ತೆಗೆದಿದ್ದರು. ಇಂದು ಕಾಲೂರು ಗ್ರಾಮದ ನಿವಾಸಿ ಚನ್ನಪಂಡ ತಮ್ಮಯ್ಯ ಎಂಬುವವರ ಪುತ್ರ ತರುಣ್ ತಿಮ್ಮಯ್ಯ(17) ಮೃತ ದೇಹ ಪತ್ತೆಯಾಗಿದೆ. ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಸಿಬ್ಬಂದಿ, ಅಗ್ನಿ ಶಾಮಕ ದಳದವರು ಸತತವಾಗಿ ಕಾರ್ಯಚರಣೆ ನಡೆಸುವ ಮೂಲಕ ಮೃತದೇಹಗಳನ್ನು ಹಾರಂಗಿ ಹಿನ್ನೀರಿನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿ…
ಮಡಿಕೇರಿ ನ.13 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಇವರ ಸಹಯೋಗದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವು ನಡೆಯಿತು. ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ ಡಿ.ಆರ್. ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮಕ್ಕಳು ಶಾಲಾ ಕಾಲೇಜುಗಳಲ್ಲಿ ನಡೆಸುವ ಸಾಂಸ್ಕøತಿಕ ಚಟುವಟಿಕೆಯಲ್ಲಿ ಭಾಗವಹಿಸುವುದರೊಂದಿಗೆ ತಮ್ಮ ಪ್ರತಿಭೆಯನ್ನು ಕಲಿಕೆಯ ಜೊತೆಗೆ ಕಲೆಗಳನ್ನು ಬೆಳಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ 9-16 ವರ್ಷದ ಮಕ್ಕಳು ವಿವಿಧ ಸ್ಫರ್ಧಾ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ಪತ್ರ,ಬಹುಮಾನ ವಿತರಿಸಲಾಯಿತು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಮಕ್ಕಳನ್ನು ರಾಜ್ಯಮಟ್ಟದ ಕಲಾಶ್ರೀ ಪ್ರಶಸ್ತಿ ಆಯ್ಕೆ ಶಿಬಿರ ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕರೆದುಕೊಂಡು ಹೋಗಲಾಗುತ್ತದೆ. ಜಿಲ್ಲಾ ಮಟ್ಟದಲ್ಲಿ ನಡೆದ ಕಾರ್ಯಕ್ರಮದಲ್ಲಿ 100 ಕ್ಕೂ…
ಮಡಿಕೇರಿ ನ.13 NEWS DESK : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ನ.26ರಂದು ಮಡಿಕೇರಿಯ ಹೊರವಲಯದಲ್ಲಿರುವ ಕ್ಯಾಪಿಟಲ್ ವಿಲೇಜ್ ನಲ್ಲಿ ಬೆಳಿಗ್ಗೆ 10.30 ಗಂಟೆಗೆ “ಭಾರತೀಯ ಸಂವಿಧಾನ ದಿನ”ದೊಂದಿಗೆ 35ನೇ “ಕೊಡವ ನ್ಯಾಷನಲ್ ಡೇ” ಆಚರಿಸಲಾಗುತ್ತದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ತಿಳಿಸಿದ್ದಾರೆ. ಆದಿಮಸಂಜಾತ ಏಕ ಜನಾಂಗೀಯ ಅನಿಮಿಸ್ಟಿಕ್ ಕೊಡವರ ಆಕಾಂಕ್ಷೆಗಳನ್ನು ಸಾಧಿಸುವತ್ತ ಶಾಂತಿಯುತ ಹೋರಾಟಗಳನ್ನು ಅವಿರತವಾಗಿ ನಡೆಸಿಕೊಂಡು ಬಂದಿರುವ ಸಿಎನ್‍ಸಿ ಸಂಘಟನೆ, “ಕೊಡವ ನ್ಯಾಷನಲ್ ಡೇ”ಯಲ್ಲಿ ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸಿ ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ, ಸ್ವ-ಆಡಳಿತ ಮತ್ತು ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳು, ಆದಿಮಸಂಜಾತ ಹಕ್ಕುಗಳ ಅಡಿಯಲ್ಲಿ ಕೊಡವರಿಗೆ ವಿಶ್ವಸಂಸ್ಥೆಯ ಮಾನ್ಯತೆ, ಎಸ್‍ಟಿ ವರ್ಗೀಕರಣ, ಕೊಡವ ಧಾರ್ಮಿಕ ಸಂಸ್ಕಾರ-ಗನ್-ತೋಕ್‍ಗೆ ಸಾಂವಿಧಾನಿಕ ಖಾತ್ರಿಗಳು, ಕೊಡವ ಭಾಷೆಯನ್ನು ಸಂವಿಧಾನದ 8ನೇ ಶೆಡ್ಯೂಲ್ ಪಟ್ಟಿಯಲ್ಲಿ ಸೇರಿಸಬೇಕು, ಕೊಡವ ಜಾನಪದ ಪರಂಪರೆಯನ್ನು ಯುನೆಸ್ಕೋ ಅಮೂರ್ತ ಸಾಂಸ್ಕೃತಿಕ ಪರಂಪರೆಯಾಗಿ ಗುರುತಿಸಬೇಕು, ಜೀವಜಲ ಕಾವೇರಿ…
ಸೋಮವಾರಪೇಟೆ ನ.13 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ 8ನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ ಅಂಗವಾಗಿ ಸೋಮವಾರಪೇಟೆ ಕೊಡವ ಸಮಾಜದಲ್ಲಿ ಪ್ರಕೃತಿ ಚಿಕಿತ್ಸೆ ಬಗ್ಗೆ ಮಾಹಿತಿ ನೀಡಲಾಯಿತು. ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಕೇಂದ್ರದ ಡಾ.ಅನನ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರತಿನಿತ್ಯದಲ್ಲಿ ನಮ್ಮ ಜೀವನದಲ್ಲಿ ಸುಲಭವಾಗಿ ಅಳವಡಿಸಿಕೊಳ್ಳಬುಹುದಾದ ಪ್ರಾಣಾಯಾಮ, ಯೋಗಾಸನ, ಸರಳ ಆಹಾರ ಪದ್ಧತಿಗಳ ಮೂಲಕ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಬಗ್ಗೆ ಮಾಹಿತಿ ನೀಡಿದರು. ಇತ್ತೀಚಿನ ದಿನಗಳಲ್ಲಿ ಯಥೇಚ್ಚವಾಗಿ ಜನರಲ್ಲಿ ಕಾಣಿಸಿಕೊಳ್ಳುವ ಹೃದ್ರೋಗ, ಸಕ್ಕರೆ ಕಾಯಿಲೆ, ಅಧಿಕ ರಕ್ತದೊತ್ತಡದಂತಹ ಕಾಯಿಲೆಗಳನ್ನು ಸುಲಭವಾದ ವ್ಯಾಯಾಮಗಳನ್ನು ಮಾಡುವುದರಿಂದ ಹೇಗೆ ನಿಯಂತ್ರಣ ಮಾಡಿಕೊಳ್ಳಬಹದು ಎಂಬ ಬಗ್ಗೆ ಕೆಲವು ಸುಲಭ ಆಸನಗಳನ್ನು ಹೇಳಿಕೊಡುವುದರ ಮೂಲಕ ಮಾಹಿತಿ ನೀಡಿದರು. ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಜನ ಜಾಗೃತಿ ಸ್ಥಾಪಕ ಅದ್ಯಕ್ಷರಾದ ಅಭಿಮನ್ಯಕುಮಾರ್ ಉದ್ಘಾಟಿಸಿ, ಪ್ರಾಸ್ತಾವಿಕ ಮಾತನಾಡಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ, ನಿವೃತ್ತ ಶಿಕ್ಷಕರಾದ ಮಾಚಯ್ಯ, ತಾಲೂಕು ಯೋಜನಾಧಿಕಾರಿ…
ಕುಶಾಲನಗರ ನ.13 NEWS DESK : ಕೂಡುಮಂಗಳೂರು ಮಂತರ್ ಗೌಡ ಅಭಿಮಾನಿ ಬಳಗದ ವತಿಯಿಂದ ಶಾಸಕ ಡಾ.ಮಂತರ್ ಗೌಡ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಡಾ. ಮಂತರ್ ಗೌಡ ವಯೋವೃದ್ಧರ ಯೋಗ ಕ್ಷೇಮ ವಿಚಾರಿಸಿ, ಕೇಕ್ ಕತ್ತರಿಸಿ ಸಿಹಿ ಹಂಚಿದರು. ನಂತರ ಊಟದ ವ್ಯವಸ್ಥೆಯನ್ನು ಕಲ್ಪಿಸಿದರು. ಕೂಡುಮಂಗಳೂರು ಮಂತರ್ ಗೌಡ ಅಭಿಮಾನಿ ಬಳಗದ ಪ್ರಮುಖರಾದ ಎಂ. ನಾಗರಾಜ್, ಮಧು ಚಂದ್ರ, ಕಾಂತಾರಾಜ್, ಪುನೀತ್ ಕುಮಾರ್, ಮಧು, ಕೂಡಿಗೆ ಗ್ರಾಮ ಪಂಚಾಯತಿ ಸದಸ್ಯ ಅನಂತ, ಅರುಣ್ ರಾವ್, ಚಂದ್ರು, ಕೂಡ್ಲೂರು ಈರಪ್ಪ, ಗಿರೀಗೌಡ, ಲೋಕೇಶ್, ಧರ್ಮ, ಅಣ್ಣಚಿ, ಹರೀಶ್, ಶ್ರೀ ಶಕ್ತಿ ವೃಧ್ದಾಶ್ರಮ ಮೇಲ್ವಿಚಾರಕ ಬಿ.ಎಸ್. ಚಂದ್ರು ಸೇರಿದಂತೆ ಬಳಗದ ಸದಸ್ಯರು, ಅಭಿಮಾನಿಗಳು ಹಾಜರಿದ್ದರು.
ಮಡಿಕೇರಿ ನ.13 NEWS DESK : ಕೊಡವ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ನ.14, 15 ಮತ್ತು 16 ರಂದು ಮಡಿಕೇರಿಯಲ್ಲಿ ಕೊಡವ ಪ್ರೀಮಿಯರ್ ಲೀಗ್ ಸೀಸನ್-4 ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ ಎಂದು ಅಸೋಸಿಯೇಷನ್ ನ ಅಧ್ಯಕ್ಷ ಕುಟ್ಟಂಡ ಕುಟ್ಟಪ್ಪ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಾಲ್ಕನೇ ವರ್ಷದ ಐಪಿಎಲ್ ಮಾದರಿಯ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ ಎಂದರು. ನ.14 ರಂದು ಬೆಳಿಗ್ಗೆ 10 ಗಂಟೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಪಂದ್ಯಾವಳಿಯನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉದ್ಯಮಿ ರಾಜ ವಿಜಯ ಕುಮಾರ್, ಸಿಗ್ಮ ನೆಟ್‌ವರ್ಕ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಅವರೆಮಾದಂಡ ಶರಣ್ ಪೂಣಚ್ಚ, ಕೊಡವ ನಟಿ ಕಾಣತಂಡ ಬೀನ ಜಗದೀಶ್, ಕಾಫಿ ಬೆಳೆಗಾರ ಅಪ್ಪನೆರವಂಡ ನಂದಾ ಬೆಳ್ಯಪ್ಪ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ…
ನಾಪೋಕ್ಲು ನ.13 NEWS DESK : ಕಕ್ಕಬ್ಬೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹಳೇ ವಿದ್ಯಾರ್ಥಿಗಳಿಂದ ಟ್ರ್ಯಾಕ್ ಸೂಟ್‍ಗಳನ್ನು ವಿತರಿಸಲಾಯಿತು. ಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಕೊಡಗು ಕೆಡಿಪಿ ಸದಸ್ಯ ಐನಮಂಡ ರೈನ ಕಾರ್ಯಪ್ಪ, ಹಳೆ ವಿದ್ಯಾರ್ಥಿಗಳಾದ ಬಡಕಡ ಸುರೇಶ್ ಬೆಳ್ಳಿಯಪ್ಪ, ಮಾಜಿ ಸೈನಿಕ ಅಂಜಪರವಂಡ ಸಚಿನ್ ಅಯ್ಯಪ್ಪ ಹಾಗೂ ಅಂಜಪರವಂಡ ಕವಿತ ಕಾರ್ಯಪ್ಪ ಎಸಿಪಿ ಬೆಂಗಳೂರು ಇವರು ಟ್ರ್ಯಾಕ್ ಸೂಟ್ ವಿತರಿಸಿ ಮಕ್ಕಳಿಗೆ ಶುಭ ಹಾರೈಸಿದರು. ಬಡಕಡ ಸುರೇಶ್ ಬೆಳ್ಳಿಯಪ್ಪ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸುವುದರ ಜೊತೆಗೆ ಜೊತೆಗೆ ಮಕ್ಕಳ ಕಲಿಕೆಗೆ ಹೆಚ್ಚಿನ ಪ್ರೋತ್ಸಾಹ ಸಿಗಬೇಕು ಎಂದರು. ಸರ್ಕಾರಿ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ ಹಲವು ಉದಾಹರಣೆಗಳಿವೆ. ಈ ಶಾಲೆಯು ಸಹ ಅಭಿವೃದ್ಧಿ ಪಥದೆಡೆಗೆ ಸಾಗಬೇಕುಎಂದು ಹೆಳಿದರು. ದಾನಿಗಳಿಗೆ ಶಾಲಾ ಮುಖ್ಯ ಶಿಕ್ಷಕಿ ಮಾಲತಿ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಅತಿಥಿ ಶಿಕ್ಷಕರಾದ ಪಿ.ಹೆಚ್.ಸಾಜಿದಾ, ಎಂ.ಎ.ಮಮತಾ, ಕೆ.ಎ.ಆಶಿಕಾ ಉಪಸ್ಥಿತರಿದ್ದರು. ಒಟ್ಟು 42 ವಿದ್ಯಾರ್ಥಿಗಳಿಗೆ ಟ್ರ್ಯಾಕ್…
ನಾಪೋಕ್ಲು ನ.13 NEWS DESK : ಕೊಡಗು ಜಿಲ್ಲಾ ಕುಲಾಲ (ಕುಂಬಾರ) ಸಂಘದ 2024-25ರ ಸಾಲಿನ ವಾರ್ಷಿಕ ಮಹಾಸಭೆಯು ನ.16 ರಂದು ನಡೆಯಲಿದೆ. ಮಡಿಕೇರಿಯ ಬಾಲ ಭವನದಲ್ಲಿ ಸಂಘದ ಅಧ್ಯಕ್ಷ ಕೆ.ಕುಶಾಲಪ್ಪ ಮೂಲ್ಯ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ. ಸಂಘದ ಸದಸ್ಯರು ಹಾಗೂ ಸ್ವಜಾತಿ ಬಾಂಧವರು ಅಧಿಕ ಸಂಖ್ಯೆಯಲ್ಲಿ ಆಗಮಿಸಿ, ಮಹಾಸಭೆಯನ್ನು ಯಶಸ್ವಿಗೊಳಿಸುವಂತೆ ಕೊಡಗು ಜಿಲ್ಲಾ ಕುಲಾಲ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ. ವರದಿ : ದುಗ್ಗಳ ಸದಾನಂದ.
ಪುತ್ತೂರು ನ.13 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯು ತನ್ನ ಬೆಳ್ಳಿಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಪಂಚವಿಂಶತಿ-25 ಎನ್ನುವ ಸರಣಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿûದೆ. ಇದರನ್ವಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಅಂತರ್ ಜಿಲ್ಲಾ ಚೆಸ್ ಪಂದ್ಯಾವಳಿಯನ್ನು ಏರ್ಪಡಿಸಲಾಗಿದೆ. ನ.15 ಶನಿವಾರದಂದು ಕಾಲೇಜಿನ ಆವರಣದಲ್ಲಿ ಸ್ಪರ್ಧೆಯು ನಡೆಯಲಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಉತ್ತರಕನ್ನಡ, ಚಿಕ್ಕಮಗಳೂರು ಹಾಗೂ ಕಾಸರಗೋಡು ಜಿಲ್ಲೆಗಳ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸುತ್ತಾರೆ. ಇದುವರೆಗೆ ಸುಮಾರು 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಒಂದು ತಂಡದಲ್ಲಿ 5 ವಿಧ್ಯಾರ್ಥಿಗಳು ಭಾಗವಹಿಸಬಹುದಾಗಿದ್ದು, ವೈಯಕ್ತಿಕ ಹಾಗೂ ತಂಡ ಪ್ರಶಸ್ತಿಯನ್ನು ನೀಡಲಾಗುತ್ತದೆ. ವಿಜೇತರಿಗೆ ಆಕರ್ಷಕ ನಗದು ಬಹುಮಾನ ಹಾಗೂ ಟ್ರೋಫಿಯನ್ನು ನೀಡಿ ಗೌರವಿಸಲಾಗುತ್ತದೆ. ಅಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಮಂಗಳೂರಿನ ಗೋರಿಗುಡ್ಡೆಯ ಕಿಟ್ಟೆಲ್ ಮೆಮೋರಿಯಲ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಠ್ಠಲ.ಎ ಪಂದ್ಯಾಟಕ್ಕೆ ಚಾಲನೆ ನೀಡಲಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಾಂಶುಪಾಲ…






