ಮಡಿಕೇರಿ, ಆ.18 NEWS DESK : ಗ್ಯಾರಂಟಿ ಅನುಷ್ಠಾನ ಸಮಿತಿಯ ವತಿಯಿಂದ ಪೊನ್ನಂಪೇಟೆ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಆಯೋಜಿಸಿದ್ದ ಮಿನಿ ಉದ್ಯೋಗ ಮೇಳಕ್ಕೆ ಚಾಲನೆ ದೊರೆಯಿತು. ಪೊನ್ನಂಪೇಟೆ ತಹಶೀಲ್ದಾರ್ ಸಿ.ಎಸ್.ಸಂಜನಾ ಅವರು ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿ, ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ ಅಗತ್ಯ. ಮಿನಿ ಉದ್ಯೋಗ ಮೇಳವು ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ವೇದಿಕೆಯಾಗಿದ್ದು, ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಇದೊಂದು ಉತ್ತಮ ಅವಕಾಶವಾಗಿದೆ ಎಂದರು. ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಪ್ರಶಾಂತ್ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳು ತಾಲ್ಲೂಕಿನಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿವೆ. ಅದೇ ರೀತಿ ಯುವನಿಧಿ ಯೋಜನೆಯೂ ಉತ್ತಮವಾಗಿ ಅನುಷ್ಠಾನಗೊಳ್ಳುತ್ತಿದೆ. ಇಂದಿನ ಯುವಶಕ್ತಿಯೇ ದೇಶವನ್ನು ಮುನ್ನಡೆಸಬೇಕಾಗಿದ್ದು, ಯಾರೂ ನಿರುದ್ಯೋಗದಂತಹ ಸಮಸ್ಯೆಗೆ ಒಳಗಾಗಬಾರದು. ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ತಮ್ಮ ಪ್ರಯತ್ನ ಸದಾ ಮುಂದುವರಿಯಲಿದೆ ಎಂದು ಹೇಳಿದರು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಉದ್ಯೋಗಾಕಾಂಕ್ಷಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು. ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜೇಶ್…
ಲೇಖಕ: admin
ಮಡಿಕೇರಿ ಆ.18 NEWS DESK : ಮಾನವ–ಪ್ರಾಣಿ ಸಂಘರ್ಷ ಹಾಗೂ ಜಮ್ಮಾಮಲೆ ಸಮಸ್ಯೆ ಸೇರಿದಂತೆ ಕೊಡಗು ಜಿಲ್ಲೆಯಲ್ಲಿ ಎದುರಾಗುತ್ತಿರುವ ವಿವಿಧ ಸಮಸ್ಯೆಗಳ ಕುರಿತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ವಿಸ್ತೃತವಾಗಿ ಚರ್ಚಿಸಿದರು. ಕ್ಷೇತ್ರದಲ್ಲಿ ಹಾಗೂ ಕೊಡಗು ಜಿಲ್ಲೆಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಕುರಿತು ಸಚಿವರಿಗೆ ಸಂಪೂರ್ಣ ಮಾಹಿತಿ ನೀಡಿದ ಶಾಸಕ ಪೊನ್ನಣ್ಣ, ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಮನವಿಗೆ ಪೂರಕವಾಗಿ ಸ್ಪಂದಿಸಿದ ಸಚಿವ ರಾಮಲಿಂಗಾರೆಡ್ಡಿ ಅವರು, ವಿಧಾನಸಭಾ ಅಧಿವೇಶನದ ಕಲಾಪ ಮುಗಿದ ಕೂಡಲೇ ಕೊಡಗು ಜಿಲ್ಲೆಗೆ ಭೇಟಿ ನೀಡಿ, ಸ್ಥಳೀಯ ಸಮಸ್ಯೆಗಳ ಕುರಿತು ಅಧಿಕಾರಿಗಳು ಹಾಗೂ ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಮಾಹಿತಿ ಪಡೆಯುವುದಾಗಿ ಭರವಸೆ ನೀಡಿದರು. ಅರಣ್ಯ ಸಚಿವರು ಇದೇ ತಿಂಗಳ 28ರಂದು ಜಿಲ್ಲೆಗೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ. ಈ ಸಂದರ್ಭದಲ್ಲಿ ಜಮ್ಮಾಮಲೆ ಅಧ್ಯಕ್ಷ ಪೆಮ್ಮಯ್ಯ,…
ಸುಂಟಿಕೊಪ್ಪ, ಆ.18 NEWS DESK : ಅಪ್ರಾಪ್ತ ಮಕ್ಕಳನ್ನು ಶಾಲೆಗೆ ಕಳುಹಿಸದೆ ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಮಕ್ಕಳನ್ನು ಅನಧಿಕೃತವಾಗಿ ದತ್ತು ಪಡೆಯುವುದು ಅಥವಾ ದತ್ತು ನೀಡುವುದು ಹಾಗೂ ಮಕ್ಕಳನ್ನು ಭಿಕ್ಷಾಟನೆಗೆ ಬಳಸುವುದು ಕಾನೂನುಬಾಹಿರ ಕೃತ್ಯವಾಗಿದೆ ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಧು ಹೇಳಿದರು. ಕಾನ್‌ಬೈಲ್ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಲಕಾವೇರಿ ಜ್ಞಾನವಿಕಾಸ ಕೇಂದ್ರದ ಕಾನ್‌ಬೈಲ್ ಕಾರ್ಯಕ್ಷೇತ್ರದ ವತಿಯಿಂದ ಮಂಜಿಕೇರೆ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಮಾಹಿತಿ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಮಕ್ಕಳ ರಕ್ಷಣೆಗಾಗಿ ಸರ್ಕಾರ ಹಲವು ಕಾನೂನುಗಳನ್ನು ಜಾರಿಗೆ ತಂದಿದ್ದು, ಅವುಗಳ ಕುರಿತು ಸಾರ್ವಜನಿಕರು ಅರಿವು ಹೊಂದಿರಬೇಕು. ತಮ್ಮ ಸುತ್ತಮುತ್ತಲಿನಲ್ಲಿ ಮಕ್ಕಳ ಮೇಲಿನ ದೌರ್ಜನ್ಯ, ಭಿಕ್ಷಾಟನೆ, ಶಾಲೆಯಿಂದ ಹೊರಗುಳಿದಿರುವ ಮಕ್ಕಳು, ಲೈಂಗಿಕ ದೌರ್ಜನ್ಯ ಹಾಗೂ ಮಕ್ಕಳನ್ನು ಶಿಕ್ಷಣದಿಂದ ವಂಚಿಸಿ ದುಡಿಮೆಗೆ ಬಳಸುತ್ತಿರುವ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು. ತೋಟದ ಲೈನ್ ಮನೆಗಳು ಹಾಗೂ ಹಾಡಿಗಳಲ್ಲಿ ವಾಸಿಸುವ ಮಕ್ಕಳಿಗೆ…
ಮಡಿಕೇರಿ ಆ.18 NEWS DESK : ಮಕ್ಕಳಿಗೆ ಪ್ರಾಯೋಗಿಕವಾಗಿ ಕೃಷಿ ಚಟುವಟಿಕೆಗಳ ಬಗ್ಗೆ ಮಾಹಿತಿ ಒದಗಿಸುವ ಮೂಲಕ, ಅವರಲ್ಲಿ ಕೃಷಿ ಸಂಸ್ಕøತಿಯತ್ತ ಒಲವು ಮೂಡಿಸುವುದು ಸೇರಿದಂತೆ, ಸಮಾಜದ ಬದಲಾವಣೆಗೆ ಮಹತ್ವದ ಕೊಡುಗೆಯನ್ನು ನೀಡಿದ ಸಾಧಕ ಮಹಿಳೆಯರನ್ನು ಸನ್ಮಾನಿಸಿ ಗೌರವಿಸುವ “ಗದ್ದೆಹಳ್ಳ ಗದ್ದೆ ಆಟ”(ಜಿಜಿಎ) ಎನ್ನುವ ವಿಶಿಷ್ಟ ಕಾರ್ಯಕ್ರಮ ಆ.22 ರಂದು ಗದ್ದೆಹಳ್ಳ ಗ್ರಾಮದಲ್ಲಿ ನಡೆಯಲಿದೆ. ಓಮ್ಸ್(ಒಒಹೆಚ್‍ಎಂಎಸ್) ಸಂಸ್ಥೆಯ ಪ್ರಮುಖರು ಹಾಗೂ ಕಾರ್ಯಕ್ರಮದ ರೂವಾರಿಗಳಾದ ಸನ್ಮಾನ್ ಮಾಧವ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕೃಷಿ ಚಟುವಟಿಕೆಗಳಿಂದ ನಾವೆಲ್ಲರು ದೂರ ಸರಿಯುತ್ತಿದ್ದೇವೆ.ಈ ಹಿನ್ನೆಲೆಯಲ್ಲಿ ಮತ್ತೆ ಅನ್ನ ನೀಡುವ ಕೃಷಿಯತ್ತ ಯುವ ಸಮೂಹದಲ್ಲಿ ಆಸಕ್ತಿ ಮುಡಿಸುವ ನಿಟ್ಟಿನ ಒಂದು ದಿನದ ಕಾರ್ಯಕ್ರಮವನ್ನು ಸಂಸ್ಥೆ ಆಯೋಜಿಸಿದೆ. ಇದರಲ್ಲಿ ಮುನ್ನೂರು ಮಕ್ಕಳನ್ನು ತೊಡಗಿಸುವುದು ನಮ್ಮ ಉದ್ದೇಶವಾಗಿದೆಯೆಂದು ಮಾಹಿತಿಯನ್ನಿತ್ತರು. ಗದ್ದೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಭತ್ತದ ಕೃಷಿಯ ಮಹತ್ವ, ಭತ್ತದ ನಾಟಿ ಕಾರ್ಯ, ವಿವಿಧ ಮನರಂಜನಾ ಆಟೋಟಗಳ ಮೂಲಕ ಮಣ್ಣಿನೊಂದಿಗಿನ ಮನುಷ್ಯನ ಗಾಢ ಸಂಬಂಧಗಳ ಅರಿವನ್ನು ಮಕ್ಕಳಲ್ಲಿ ಮೂಡಿಸುವುದು, ಇಲ್ಲಿನ ಕೃಷಿ…
ಮಡಿಕೇರಿ ಆ.18 NEWS DESK : ಕಾವೇರಿ ಕ್ಷೇತ್ರ ಭಾಗಮಂಡಲದ ಬಳ್ಳಡ್ಕ ಅಪ್ಪಾಜಿ ಹಾಗೂ ಅನು ಅªರಿಗೆ ಸೇರಿದ ಗದ್ದೆಯಲ್ಲಿ ಆ.22 ರಂದು 34ನೇ ವರ್ಷದ ರಾಜ್ಯ ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ ನಡೆಯಲಿದೆಯೆಂದು ಕೊಡಗು ಜಿಲ್ಲಾ ಯುವ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರಾದ ಕೆ.ಕೆ.ಸುಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಕ್ರೀಡಾಕೂಟದ ಮಾಹಿತಿಯನ್ನಿತ್ತ ಅವರು, ಭಾಗಮಂಡಲದಲ್ಲಿ ದ್ವಿತೀಯ ಬಾರಿಗೆ ಜಿಲ್ಲಾ ಮಟ್ಟದ ಕೆಸರು ಗದ್ದೆ ಕ್ರೀಡಾ ಕೂಟವನ್ನು ಅಯ್ಯಂಗೇರಿಯ ಶ್ರೀಕೃಷ್ಣ ಯುವಕ ಸಂಘದ ಸಹಕಾರದೊಂದಿಗೆ ಕೊಡಗು ಜಿಲ್ಲಾ ಪಂಚಾಯತ್, ಮಡಿಕೇರಿ, ಜಿಲ್ಲಾಡಳಿತ, ಕೊಡಗು ಜಿಲ್ಲಾ ಯುವ ಸಬಲೀಕರಣ ಮತ್ತು ಮತ್ತು ಕ್ರೀಡಾ ಇಲಾಖೆ, ಮಡಿಕೇರಿ, ವಿರಾಜಪೇಟೆ ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸುತ್ತಿರುವುದಾಗಿ ಮಾಹಿತಿಯನ್ನಿತ್ತರು. ರಾಜ್ಯ ಮಟ್ಟದ ಕೆಸರು ಗದ್ದೆ ಕ್ರೀಡಾ ಕೂಟದಲ್ಲಿ ಪುರುಷರು ಮತ್ತು ಮಹಿಳೆಯರ ವಿಭಾಗದ ಹಗ್ಗಜಗ್ಗಾಟ, ಸಾರ್ವಜನಿಕ ಪುರುಷರ ವಿಭಾಗದ ವಾಲಿಬಾಲ್, ಸಾರ್ವಜನಿಕ ಮಹಿಳೆಯರ ವಿಭಾಗದ ಥ್ರೋಬಾಲ್ ಹಾಗೂ ವಿವಿಧ ವಿಭಾಗಗಳಲ್ಲಿ ಓಟದ ಸ್ಪರ್ಧೆಗಳು ನಡೆಯಲಿದೆ. ಬೆ.11 ಗಂಟೆಗೆ…
ಮಡಿಕೇರಿ ಆ.18 NEWS DESK : ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಹಗರಣದ ಆರೋಪಿ ಸ್ಥಾನದಲ್ಲಿರುವ ಬಿ.ನಾಗೇಂದ್ರರವರನ್ನು ಸಂಪುಟದಿಂದ ಕೈಬಿಡಲು ಆಗ್ರಹಿಸಿ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ವಿರೋಧಿಸಿ ಬಿಜೆಪಿ ಮಡಿಕೇರಿ ನಗರ ಮಂಡಲದ ವತಿಯಿಂದ ಜಿಲ್ಲಾಡಳಿತ ಭವನದ ಮುಂಭಾಗ ಪ್ರತಿಭಟನೆ ನಡೆಯಿತು. ಬಿಜೆಪಿ ನಗರ ಮಂಡಲ ಅಧ್ಯಕ್ಷ ಉಮೇಶ್ ಸುಬ್ರಮಣಿ, ಜಿಲ್ಲಾ ಬಿಜೆಪಿ ವಕ್ತಾರ ಬಿ.ಕೆ.ಅರುಣ್ ಕುಮಾರ್ ಅವರ ನೇತೃತ್ವದಲ್ಲಿ ಮಂಗಳವಾರ ಬೆಳಗ್ಗೆ ಜಿಲ್ಲಾಡಳಿತ ಭವನದ ಮುಂಭಾಗ ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು. ಬಿಜೆಪಿ ಜಿಲ್ಲಾ ವಕ್ತಾರ ಬಿ.ಕೆ.ಅರುಣ್ ಕುಮಾರ್ ಅವರು ಮಾತನಾಡಿ, ಸಿದ್ದರಾಮಯ್ಯ ಅವರು ಮುಖ್ಯ ಮಂತ್ರಿಗಳಾಗಿದ್ದ ಅವಧಿಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ದೊಡ್ಡ ಪ್ರಮಾಣದ ಹಗರಣ ನಡೆದು, ತನಿಖೆಯೂ ಪ್ರಗತಿಯಲ್ಲಿದೆ. ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಾಗೇಂದ್ರ ಅವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಿರುವುದು ಸೂಕ್ತ ನಿರ್ಧಾರವಲ್ಲ. ಅವರನ್ನು ತಕ್ಷಣ ಸಚಿವ…
ಮಡಿಕೇರಿ NEWS DESK ಆ.18 : ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಜಾರಿ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘದ ಕೊಡಗು ಜಿಲ್ಲಾ ಘಟಕ ಇಂದು ಜಿಲ್ಲಾ ಪಂಚಾಯ್ತಿ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಸಂಘದ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಗ್ರಾ.ಪಂ ನೌಕರರು ಕಳೆದ 7-8 ವರ್ಷಗಳಿಂದ ವೇತನ ಪರಿಷ್ಕರಣೆಯಾಗದೆ ಇರುವುದರಿಂದ ಇಂದಿನ ಬೆಲೆ ಏರಿಕೆ ದಿನಗಳಲ್ಲಿ ಜೀವನ ನಡೆಸುವುದು ಕಷ್ಟವಾಗಿದೆ. ಈಗ ನೀಡುತ್ತಿರುವ ವೇತನ ಮಕ್ಕಳ ಶಿಕ್ಷಣ ಮತ್ತು ಆರೋಗ್ಯಕ್ಕೆ ಸಾಕಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಪಿ.ಆರ್.ಭರತ್ ಮಾತನಾಡಿ ಸರಕಾರ ದುಡಿಯುವ ವರ್ಗಕ್ಕೆ ಸಹಾಯ ಮಾಡಬೇಕು. ಬೆಲೆ ಏರಿಕೆಗೆ ಅನುಗುಣವಾಗಿ ಮೇ 22, 2026 ರಂದು ಹೊರಡಿಸಿರುವ ಆದೇಶದನ್ವಯ ವೇತನ ಬಿಡುಗಡೆ ಮಾಡಬೇಕು. ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತಾಗಾರರಾಗಿ ಕೆಲಸ ನಿರ್ವಹಿಸುತ್ತಿರುವ ಸ್ವಚ್ಛವಾಹಿನಿ ಮಹಿಳಾ ವಾಹನ ಚಾಲಕಿಯರು ಹಾಗೂ ಕಸಗುಡಿಸುವ ಮಹಿಳೆಯರು ಸುಮಾರು…
ಮಡಿಕೇರಿ NEWS DESK ಆ.18 : ಕಳೆದ ಮೂರು ವರ್ಷಗಳಿಂದ ಜಿಲ್ಲೆಯಲ್ಲಿ ಕಾಡಾನೆಗಳ ದಾಳಿ ಮಿತಿ ಮೀರಿದ್ದು, ಅಮಾಯಕ ಜೀವಗಳು ಬಲಿಯಾಗುತ್ತಿವೆ. ಅರಣ್ಯ ಇಲಾಖೆಯಿಂದ ಕಾಡಾನೆಗಳನ್ನು ಸೆರೆ ಹಿಡಿಯುವ ಕಣ್ಣೊರೆಸುವ ತಂತ್ರಗಾರಿಕೆ ನಡೆಯುತ್ತಿದೆಯೇ ಹೊರತು ಶಾಶ್ವತ ಪರಿಹಾರದ ಯಾವುದೇ ಆಸಕ್ತಿ ಕಂಡು ಬರುತ್ತಿಲ್ಲವೆಂದು ಸೋಮವಾರಪೇಟೆ ಬಿಜೆಪಿ ಮಂಡಲದ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಗ್ರಾಮೀಣ ಭಾಗದಲ್ಲಿ ನಿರಂತರವಾಗಿ ಕಾಡಾನೆಗಳ ದಾಳಿಯಾಗುತ್ತಿದ್ದು, ಇಡೀ ಕೊಡಗು ಜಿಲ್ಲೆಯೇ ಆತಂಕದಲ್ಲಿದೆ. ಪರಿಸ್ಥಿತಿ ಇಷ್ಟು ಗಂಭೀರವಾಗಿದ್ದರೂ ರಾಜ್ಯ ಸರಕಾರ ಮಾತ್ರ ನಿದ್ರಾವಸ್ಥೆಯಲ್ಲಿದೆ ಎಂದು ಟೀಕಿಸಿದ್ದಾರೆ. ಕಾಡಾನೆಗಳು ಎಲ್ಲಿ, ಯಾವಾಗ ಬೇಕಾದರೂ ದಾಳಿ ಮಾಡಬಹುದಾಗಿದೆ. ಜನನಿಬಿಡ ಪ್ರದೇಶದಲ್ಲಿ, ಹೆದ್ದಾರಿಗಳಲ್ಲಿ ರಾತ್ರಿ ಹಗಲೆನ್ನದೆ ಆನೆಗಳು ಸಂಚರಿಸುತ್ತಿದ್ದು, ಯಾವಾಗ ಬೇಕಾದರೂ ದಾಳಿ ಮಾಡಬಹುದಾಗಿದೆ. ಯಾರೂ ಸುರಕ್ಷಿತವಾಗಿಲ್ಲ ಎನ್ನುವ ಭಯ ಆವರಿಸಿದೆ. ಹಿಂಡು ಹಿಂಡಾಗಿ ತೋಟಗಳಲ್ಲಿ ಆಶ್ರಯ ಪಡೆದಿರುವ ಕಾಡಾನೆಗಳ ದಾಳಿಯಿಂದ ಇತ್ತೀಚೆಗೆ ಅನೇಕ ಜೀವಗಳು ಬಲಿಯಾಗಿವೆ. ಅಮಾಯಕರು ಮೃತಪಟ್ಟಾಗ ಪ್ರತಿಭಟನೆಗೆ ಮಣಿಯುವ ಅರಣ್ಯ ಇಲಾಖೆ…
ಮಡಿಕೇರಿ NEWS DESK ಆ.18 : ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಬಗ್ಗೆ ವಿಸ್ತೃತವಾಗಿ ಅಧ್ಯಯನ ನಡೆಸುವ ಮೂಲಕ ಅದಕ್ಕೆ ಒದಗಿ ಬಂದಿರುವ ಅಪಾಯವನ್ನು ತಪ್ಪಿಸಿ ಸಂರಕ್ಷಿಸುವತ್ತ ಮುಂದಾಗಬೇಕೆ0ದು ಸಮಾಜ ಸೇವಕ ಹಾಗೂ ಸಾಹಿತಿ ನಾಪಂಡ ಮುದ್ದಪ್ಪ ಅವರು ಕರೆ ನೀಡಿದ್ದಾರೆ. ಸುಮಾರು 25 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಂಡಿರುವ ಹೆಬ್ಬಾಲೆ ಪ್ರೌಢಶಾಲೆಯ ಮೇಲ್ಚಾವಣಿಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇಂದಿನ ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಮೂಲ ಆಶಯಗಳನ್ನು ಅರಿತು ಅದರಂತೆ ನಡೆಯುವ ಮೂಲಕ ಅದರ ಮೌಲ್ಯವನ್ನು ಗೌರವಿಸಬೇಕು. ಕಳೆದ ಹಲವು ವರ್ಷಗಳಿಂದಲೂ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಯನ್ನು ನಡೆಸದೇ ಚುನಾಯಿತ ಸರಕಾರಗಳು ನಿರ್ಲಕ್ಷ್ಯ ವಹಿಸಿರುವುದು ಪ್ರಜಾಪ್ರಭುತ್ವದ ಆಶಯಗಳಿಗೆ ಮಾಡುತ್ತಿರುವ ಅಪಚಾರವಾಗಿದೆ ಎಂದು ಮುದ್ದಪ್ಪ ವಿಷಾದಿಸಿದರು. ಹೆಬ್ಬಾಲೆಯ ಮಾಜಿ ಯೋಧ ಹೆಚ್.ಎಸ್.ಕೃಷ್ಣಪ್ಪ ಅವರು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳನ್ನು ಅಗತ್ಯವಿದ್ದಷ್ಟೇ ಬಳಸಬೇಕು. ವಿದ್ಯೆಗಿಂತಲೂ ಮುಖ್ಯವಾಗಿ ಉತ್ತಮ ಸಂಸ್ಕಾರಗಳನ್ನು ಹೊಂದಬೇಕು. ದೇಶಸೇವೆಗೆ ಸದಾ ಕಟಿಬದ್ಧರಾಗಿರಬೇಕು ಎಂದು ಕರೆ ನೀಡಿದರು. ಸಮಾಜ ಸೇವಕ ಹಾಗೂ ಉದ್ಯಮಿ ನಾಪಂಡ ಮುತ್ತಪ್ಪ ಅವರು ಮಾತನಾಡಿ ವಿದ್ಯಾರ್ಥಿಗಳು…
ಮಡಿಕೇರಿ NEWS DESK ಆ.18 : ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಭಾಗವಹಿಸಿದ್ದ ವೇದಿಕೆಯನ್ನು ಹೋಮ-ಹವನದ ಮೂಲಕ ಶುದ್ಧೀಕರಣ ಮಾಡಿದ ಪ್ರಕರಣಕ್ಕೆ ಸಂಬ0ಧಿಸಿದ0ತೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕ ಜೆ.ಎಲ್.ಜನಾರ್ಧನ್ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಎಂ.ಎಸ್.ವೀರೇ0ದ್ರ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಇಂತಹ ಕೃತ್ಯಗಳು ಖಂಡನೀಯವಾಗಿದ್ದು, ಭಾರತ ದೇಶದ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಗೌರವ ತೋರುವ ಬೆಳವಣಿಗೆಯಾಗಿದೆ. ಜಾತಿವಾದಿ ಹಾಗೂ ಕೋಮುವಾದಿ ಮನಸ್ಥಿತಿಯ ಕೆಲವರು ನಡೆಸಿರುವ ಈ ಕೃತ್ಯ ಜಗತ್ತಿನ ಮುಂದೆ ಭಾರತ ತಲೆತಗ್ಗಿಸುವಂತಾಗಿದೆ ಎಂದು ಆರೋಪಿಸಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಬಂದು 80 ವರ್ಷಗಳಾದರೂ ಜಾತಿವಾದಿಗಳಿಂದ ಸಂವಿಧಾನದ ಆಶಯಗಳಿಗೆ ಧಕ್ಕೆ ತರುವಂತಹ ಘಟನೆಗಳು ನಡೆಯುತ್ತಿರುವುದು ವಿಷಾದನೀಯ. ಇಂತಹ ಘಟನೆಗಳು ಈ ಹಿಂದೆ ಜನಸಾಮಾನ್ಯರ ಮೇಲೂ ನಡೆದಿದ್ದು, ಇದೀಗ ಪ್ರಜಾಪ್ರಭುತ್ವ ವ್ಯವಸ್ಥೆಯ…






