ಮಡಿಕೇರಿ ಡಿ.13 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ವಿದ್ಯಾರ್ಥಿಗಳು ಹಾಗೂ ಎನ್ಸಿಸಿ ವಿದ್ಯಾರ್ಥಿಗಳಿಗಾಗಿ ಕಾಲೇಜು ಮತ್ತು ಹಳೇ ವಿದ್ಯಾರ್ಥಿ ಸಂಘದ ವತಿಯಿಂದ ಕಾಲೇಜ್ ನ ಮೈದಾನದಲ್ಲಿ ಸುಸಜ್ಜಿತ ಫೈರಿಂಗ್ ರೇಂಜನ್ನು ನಿರ್ಮಾಣ ಮಾಡಲು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಳೇ ವಿದ್ಯಾರ್ಥಿಗಳ ಸಂಘ ನಿರ್ಧರಿಸಿದೆ. ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ಕಾಲೇಜ್ ನ ಸೆಮಿನಾರ್ ಹಾಲ್ ನಲ್ಲಿ ನಡೆದ ಸಂಘದ ಸಭೆಯಲ್ಲಿ ಮುಂಬರುವ ದಿನಗಳಲ್ಲಿ ನಡೆಸಲಾಗುವ ವಿವಿಧ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು. ಸಾರ್ವಜನಿಕರು, ಹಳೇ ವಿದ್ಯಾರ್ಥಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳಿಗಾಗಿ ಗುಂಡು ಹೊಡೆಯುವ ಸ್ಪರ್ಧೆಯನ್ನು ಶೀಘ್ರ ಆಯೋಜಿಸಲು ಮತ್ತು ಹಳೇ ವಿದ್ಯಾರ್ಥಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಕ್ರೀಡೆ ಮತ್ತು ಮನೋರಂಜನಾ ಕಾರ್ಯಕ್ರಮಗಳನ್ನು ನಡೆಸಲು ನಿರ್ಧರಿಸಲಾಯಿತು. ಹಳೇ ವಿದ್ಯಾರ್ಥಿ ಸಂಘಕ್ಕೆ ನೂತನ ಕಟ್ಟಡವನ್ನು ನಿರ್ಮಿಸುವ ಕುರಿತು ಚರ್ಚಿಸಿ, ಖಾತೆಯಲ್ಲಿ ಹೆಚ್ಚು ಹಣ ಇಲ್ಲದಿರುವ ಕಾರಣ ಮುಂದಿನ ದಿನಗಳಲ್ಲಿ ದಾನಿಗಳನ್ನು ಸಂಪರ್ಕಿಸಿ, ಸೂಕ್ತ…
ಲೇಖಕ: admin
ಮಡಿಕೇರಿ ಡಿ.13 NEWS DESK : ಸುಂದರ ಪರಿಸರದ ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳೊಂದಿಗೆ ದಿನದಿನವೂ ಹೆಚ್ಚುತ್ತಿರುವ ವಾಹನ ದಟ್ಟಣೆ, ರಸ್ತೆಗಳ ಅವ್ಯವಸ್ಥೆ, ಸ್ವಚ್ಛತೆಯ ಪರಿಜ್ಞಾನವಿಲ್ಲದೆ ಉಂಟಾಗುತಿರುವ ಅಶುಚಿತ್ವ, ಅನಧಿಕೃತ ಹೋಂ ಸ್ಟೇಗಳಿಂದ ಉದ್ಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಕೊಡಗು ಪತ್ರಕರ್ತರ ಸಂಘದಿಂದ ಆಯೋಜಿತ ವಿಷನ್ ಮಡಿಕೇರಿ- ‘ ನಮ್ಮ ಮಡಿಕೇರಿ ನಮ್ಮ ಹೆಮ್ಮೆ- ಸಂವಾದ’ ಕಾರ್ಯಕ್ರಮದಲ್ಲಿ ವಿಸ್ತೃತವಾಗಿ ಚರ್ಚಿಸಲಾಯಿತು. ನಗರದ ರೆಡ್ ಬ್ರ್ರಿಕ್ಸ್ ಸಭಾಂಗಣದ ಸತ್ಕಾರ ಭವನದಲ್ಲಿ ಆಯೋಜಿತ ಕಾರ್ಯಕ್ರಮದಲ್ಲಿ ಕೊಡಗು ಪತ್ರಕರ್ತರ ಸಂಘಂದ ಅಧ್ಯಕ್ಷ ಅನಿಲ್ ಹೆಚ್.ಟಿ. ಅವರು ಪ್ರಾಸ್ತಾವಿಕವಾಗಿ ಮಾತನಾಡಿ, 1691 ರಲ್ಲಿ ಮುದ್ದುರಾಜನಿಂದ ನಿರ್ಮಾಣವಾದ ಮಡಿಕೇರಿ 344 ವರ್ಷಗಳ ಭವ್ಯ ಇತಿಹಾಸವನ್ನು ಹೊಂದಿದೆ. ಈ ಪುಟ್ಟ ನಗರಿ ಬದಲಾವಣೆಗಳಿಗೆ ಮೈಯೊಡ್ಡುತ್ತಲೆ ಬಂದಿದ್ದು, ಭವಿಷ್ಯದಲ್ಲಿ ಮಡಿಕೇರಿಯನ್ನು ಸುಂದರ ನಗರವನ್ನಾಗಿ ರೂಪಿಸುವ ಮತ್ತು ಸಂರಕ್ಷಿಸುವ ಬಗ್ಗೆ ಯಾವುದೇ ಅಭಿಪ್ರಾಯ ಭೇದಗಳಿದ್ದರೂ ಬದಿಗೊತ್ತಿ, ಜಾತಿ ಮತಗಳ ಭೇದವಿಲ್ಲದೆ ನಗರದ ನಾಗರಿಕರೆಲ್ಲರು ಕೈಜೋಡಿಸಬೇಕೆನ್ನುವ ಆಶಯವನ್ನು ವ್ಯಕ್ತಪಡಿಸಿದರು. :: ಶೋಚನೀಯ ಸ್ಥಿತಿಯಲ್ಲಿ ಜಿಲ್ಲಾ…
ಮಡಿಕೇರಿ ಡಿ.13 NEWS DESK : ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಕೊಡಗು ಜಿಲ್ಲಾಮಟ್ಟದ ಪತ್ರಕರ್ತರ ವಾಲಿಬಾಲ್ ಪಂದ್ಯಾವಳಿಯನ್ನು ಡಿ.14 ರಂದು ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಕೊಡಗು ಕ್ಲಬ್ ಪ್ರಧಾನ ಕಾರ್ಯದರ್ಶಿ ಆದರ್ಶ್ ಅದ್ಕಲೇಗಾರ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಡಿ.14 ರ ಭಾನುವಾರ ಬೆಳಿಗ್ಗೆ 10.30 ಗಂಟೆಗೆ ಪಂದ್ಯಾವಳಿಯನ್ನು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಪ್ರಾಂಶುಪಾಲ ಪ್ರೊ.ಮೇ.ಬಿ.ರಾಘವ ಅವರು ಉದ್ಘಾಟಿಸಲಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕುಶಾಲನಗರ ತಾಲ್ಲೂಕಿನ ಹೆರೂರು ಗ್ರಾಮದ ಉದ್ಯಮಿ ಮೋಹಿನಿ ಪ್ರಕಾಶ್, ಜಿಲ್ಲಾ ಹಿಂದು ಮಲಯಾಳಿ ಸಮಾಜದ ಸಲಹೆಗಾರ ಹಾಗೂ ಎಸ್ಎನ್ಡಿಪಿ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಟಿ.ಆರ್.ವಾಸುದೇವ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಅಜ್ಜಮಾಡ ರಮೇಶ್ಕುಟ್ಟಪ್ಪ, ರಾಜ್ಯ ಸಮಿತಿ ಸದಸ್ಯೆ ಬಿ.ಆರ್.ಸವಿತಾ ರೈ, ಜಿಲ್ಲಾಧ್ಯಕ್ಷ ಬಾಚರಣಿಯಂಡ ಅನುಕಾರ್ಯಪ್ಪ, ಪಂದ್ಯಾವಳಿಯ ಸಂಚಾಲಕರಾದ ಲೋಕೇಶ್ ಕಾಟಕೇರಿ, ಶಿವ ಕಾಂತರಾಜು,…
ಗದಗ ಡಿ.13 NEWS DESK : ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಚಂದನ ಎಜುಕೇಶನ್ ಸೊಸೈಟಿ ಆಯೋಜಿಸಿದ್ದ ಭಾರತ ರತ್ನ ಪ್ರೊ.ಸಿ.ಎನ್.ಆರ್ ರಾವ್ 10ನೇ ವರ್ಷದ ವಿಜ್ಞಾನ ವಿಸ್ತೃತ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ನಿವೃತ್ತ ಐಎಎಸ್ ಅಧಿಕಾರಿ ಬಿ.ಎಸ್.ಪಾಟೀಲ್ ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ “ಚಂದನ ಶ್ರೀ” ಪ್ರಶಸ್ತಿ ಪ್ರದಾನ ಮಾಡಿ, ಸನ್ಮಾನಿಸಿದರು.
ಕುಶಾಲನಗರ ಡಿ.13 NEWS DESK : ವಿದ್ಯಾರ್ಥಿಗಳು ಶಿಸ್ತು, ಸಂಯಮ, ಸಮಯ ಪ್ರಜ್ಞೆ ಹಾಗೂ ಉತ್ತಮ ಸಂಸ್ಕಾರಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ತಾಲ್ಲೂಕು ತಹಶೀಲ್ದಾರ್ ಕಿರಣ್ ಜಿ.ಗೌರಯ್ಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಪಟ್ಟಣದ ಕನ್ನಡ ಭಾರತಿ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳ ಕಾಲೇಜು ಜೀವನವನ್ನು ಮೋಜು ಮಾಸ್ತಿಗಾಗಿ ಹಾಳುಮಾಡಿಕೊಳ್ಳಬಾರದು. ಇದೊಂದು ಗೋಲ್ಡನ್ ಲೈಫ್ ಕಠಿಣ ಪರಿಶ್ರಮ, ನಿರ್ದಿಷ್ಟ ಗುರಿಯೊಂದಿಗೆ ಏಕಾಗ್ರತೆ ಹಾಗೂ ಶ್ರದ್ಧೆ ಅಧ್ಯಯನಶೀಲತೆ ಕೈಗೊಂಡು ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು. ಪೋಷಕರು ಹಾಗೂ ಗುರುಹಿರಿಯರು ಗೌರವ ನೀಡುವುದರ ಜೊತೆಗೆ ಅವರ ಆಸೆ ಆಕಾಂಕ್ಷೆ ಹಾಗೂ ನಿರೀಕ್ಷೆಯಂತೆ ಉನ್ನತ ಸ್ಥಾನಮಾನಕ್ಕೆ ಹೋದಾಗ ಮಾತ್ರ ಪೋಷಕರು ಕಂಡ ಕನಸು ನನಸಾಗಿಸಲು ಸಾಧ್ಯ ಎಂದರು. ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ. ಪುಟ್ಟರಾಜು ಮಾತನಾಡಿ, ವಿದ್ಯಾರ್ಥಿಗಳ ಉತ್ತಮ ಶಿಕ್ಷಣಕ್ಕೆ…
ಮಡಿಕೇರಿ ಡಿ.13 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯು ಪ್ರಸಕ್ತ ಸಾಲಿನಲ್ಲಿ ಪ್ರಕಟಿಸಲು ಉದ್ದೇಶಿಸಿರುವ ವಿಷಯಾಧಾರಿತ ಪುಸ್ತಕಗಳ ಪ್ರಕಟಣೆಗೆ ಅರ್ಹ ಆಸಕ್ತ ಯುವ ಬರಹಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಕಾಡೆಮಿ ವತಿಯಿಂದ ಕೊಡ ಮಾಡುವ ಅಂದಾಜು 20 ವಿಭಿನ್ನ ರೀತಿಯ ವಿಷಯಗಳ ಮೇಲೆ ಅಧ್ಯಯನ, ಸಂಶೋಧನೆ ನಡೆಸಿ, ನಿಖರವಾದ ಮಾಹಿತಿ ಸಂಗ್ರಹಿಸಿ ಕನಿಷ್ಟ ನೂರು ಪುಟಗಳ ಸಚಿತ್ರ ವಿವರವುಳ್ಳ ಪುಸ್ತಕಗಳನ್ನು ಹೊರತರಲಾಗುವುದು. ಆಯ್ಕೆಯಾಗುವ ಬರಹಗಾರರಿಗೆ ಪುಸ್ತಕದ ವಿಷಯ ಹಾಗೂ ತಲಾ ರೂ.25 ಸಾವಿರ ಪ್ರೋತ್ಸಾಹ ಧನವನ್ನು ಷರತ್ತುಗಳೊಂದಿಗೆ ನೀಡಲಾಗುವುದು. ಆಸಕ್ತ ಬರಹಗಾರರು ಅಧ್ಯಯನ ಕ್ಷೇತ್ರದಲ್ಲಿ ತಮ್ಮ ಅನುಭವ, ಅರ್ಹತೆ ಹಾಗೂ ಆಸಕ್ತಿಯೊಂದಿಗಿನ ಸ್ವ ವಿವರವುಳ್ಳ ಅರ್ಜಿಯನ್ನು ಅಕಾಡೆಮಿ ಕಚೇರಿಗೆ ತಲುಪಿಸಲು ಡಿ.25 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮೊಬೈಲ್ ಸಂಖ್ಯೆ 8762942976 ಯನ್ನು ಸಂಪರ್ಕಿಸಬಹುದು. ಅರ್ಜಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಮಡಿಕೇರಿ-571201 ಈ ವಿಳಾಸಕ್ಕೆ ಕಳುಹಿಸಬಹುದು ಎಂದು ಅಧ್ಯಕ್ಷರಾದ ಅಜ್ಜಿನಿಕಂಡ ಸಿ.…
ಮಡಿಕೇರಿ ಡಿ.13 NEWS DESK : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಕ್ಕಳು ಮತ್ತು ಯುವಜನರ ಕಲಾಪ್ರತಿಭೆಯನ್ನು ಗುರುತಿಸಿ ಅವರಿಗೆ ಉತ್ತೇಜನ ನೀಡುವ ಮತ್ತು ಅವರು ತಮ್ಮ ಕಲಾನೈಪುಣ್ಯವನ್ನು ವೃದ್ಧಿಗೊಳಿಸುವಂತೆ ಪ್ರೋತ್ಸಾಹಿಸಲು ಕಲಾಪ್ರತಿಭೋತ್ಸವ ಸ್ಪರ್ಧೆಗಳು ಬಾಲಪ್ರತಿಭೆ, ಕಿಶೋರ ಪ್ರತಿಭೆ ಹಾಗೂ ಯುವ ಪ್ರತಿಭೆ, ಸಮೂಹ ಸ್ಪರ್ಧೆಗಳು ಇತ್ತೀಚೆಗೆ ನಗರದ ಗಾಂಧಿ ಭವನದಲ್ಲಿ ನಡೆಸಲಾಗಿತ್ತು. ಜಿಲ್ಲಾ ಮಟ್ಟದ ಕಲಾಪ್ರತಿಭೋತ್ಸವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಡಿ.22 ರಂದು ಮೈಸೂರಿನ ಕಲಾಮಂದಿರದಲ್ಲಿರುವ ರಂಗಾಯಣದ ಆವರಣದಲ್ಲಿ ನಡೆಯುವ ವಿಭಾಗ ಮಟ್ಟಕ್ಕೆ ಆಯ್ಕೆಯಾದ ವಿಜೇತರ ವಿವರ ಇಂತಿದೆ. ಕರ್ನಾಟಕ/ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ಪ್ರಥಮ ಸ್ಥಾನ ಅಪೇಕ್ಷ ಆರ್.ರೈ, ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ, ಮಡಿಕೇರಿ ತಂದೆ ರಾಧಕೃಷ್ಣ ರೈ, ಶ್ರೀ ಗಜಾನನ ಸ್ಟೋರ್ಸ್, ಮಲ್ಲಿಕಾರ್ಜುನ ನಗರ, ಮಡಿಕೇರಿ ಕೊಡಗು ಜಿಲ್ಲೆ. ದೂ.ಸಂ. 9480646175. ಶಾಸ್ತ್ರೀಯ ನೃತ್ಯ (ಭರತನಾಟ್ಯ)ದಲ್ಲಿ ಪ್ರಥಮ ಸ್ಥಾನ ಆವಂತಿಕ ಟಿ.ಯು., ಸಂತ ಅನ್ನಮ್ಮ ಪ್ರೌಢ ಶಾಲೆ, ವಿರಾಜಪೇಟೆ ತಂದೆ ಉಮೇಶ್ ಟಿ.ವಿ.,…
ಮಡಿಕೇರಿ ಡಿ.13 NEWS DESK : 2025-26 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ನಿರೋದ್ಯೋಗಿ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರು ಸ್ವಯಂ ಉದ್ಯೋಗಗಳಲ್ಲಿ ತೊಡಗಿಸಿಕೊಳ್ಳಲು ಅನುಕೂಲವಾಗುವಂತೆ ಉದ್ಯೋಗಿನಿ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆಯಡಿ ಆರ್ಥಿಕ ನೆರವು ನೀಡಲು ಆರ್ಹ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಿದ್ದು, ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜ.15 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಉದ್ಯೋಗಿನಿ ಯೋಜನೆಯಡಿ ವಯೋಮಿತಿ 18 ರಿಂದ 55 ವರ್ಷದ ಮಿತಿಯೊಳಗಿರುವ ಆರ್ಥಿಕವಾಗಿ ಹಿಂದುಳಿದ ಮತ್ತು ಸಾಮಾನ್ಯ ಮಹಿಳೆಯರು ಯಾವುದಾದರೂ ಲಾಭದಾಯಕ ಚಟುವಟಿಕೆಯಲ್ಲಿ ಸ್ವಂತ ಉದ್ಯೋಗವನ್ನು ಕೈಗೊಳ್ಳಲು ಬ್ಯಾಂಕಿನಿಂದ ಗರಿಷ್ಟ ರೂ.3 ಲಕ್ಷದವರೆಗೂ ಸಾಲ ನೀಡಲಾಗುವುದು. ಸಾಮಾನ್ಯ ವರ್ಗದ ಮಹಿಳೆಯರು, ವಿಧವೆ, ವಿಕಲಚೇತನ ಮಹಿಳೆ, ಸಂಕಷ್ಟದಲ್ಲಿರುವ ಮಹಿಳೆಯರಿಗೆ…
ಮಡಿಕೇರಿ ಡಿ.13 NEWS DESK : ಮತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ಡಿ.15ರಿಂದ ಜ.15ರವರೆಗೆ “ಗ್ಲೋಫೆಸ್ಟ್” ವಜ್ರಾಭರಣಗಳ ವಾರ್ಷಿಕ ಮಹೋತ್ಸವವನ್ನು ಆಯೋಜಿಸಲಾಗಿದೆ. ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್ ರೂ.7000 ವರೆಗೆ ವಿಶೇಷ ರಿಯಾಯಿತಿ ನೀಡಲಾಗಿದೆ. ವೈವಿಧ್ಯಮಯ ವಜ್ರಾಭರಣಗಳ ವಿನೂತನ ಸಂಗ್ರಹವಿದ್ದು, ವಜ್ರಾಭರಣಗಳು ದುಬಾರಿ ಎಂದೇ ಭಾವನೆಯಲ್ಲಿರುವ ಜನರಿಗೆ ಕೈಗೆಟಕುವ ದರದಲ್ಲೂ ವಜ್ರಾಭರಣಗಳು ಲಭ್ಯವಿದೆ. ರೂ.3500 ರಿಂದ ವಜ್ರಾಭರಣದ ಬೆಲೆಗಳು ಪ್ರಾರಂಭವಾಗುತ್ತದೆ. ಗ್ಲೋ ವಜ್ರಾಭರಣಗಳು ಅಂತರಾಷ್ಟ್ರೀಯ ಪ್ರಯೋಗಾಲಯದಿಂದ ಪ್ರಮಾಣಿಕರಿಸಲ್ಪಟ್ಟ, ಉತ್ಕೃಷ್ಟ ಶ್ರೇಣಿಯ ಮೂಗುತಿ, ಪೆಂಡೆಂಟ್, ಉಂಗುರ, ಕಿವಿಯೋಲೆ ನೆಕ್ಲೇಸ್, ಬಳೆಗಳ ವಿವಿಧ ವಿನ್ಯಾಸಗಳ ಅಮೋಘ ಸಂಗ್ರಹವಿದೆ. ನುರಿತ ತಜ್ಞರಿಂದ ವಜ್ರಾಭರಣಗಳ ಬಗ್ಗೆ ಸಂಪೂರ್ಣ ಮಾಹಿತಿ, ಪ್ರತಿಷ್ಠಿತ ಪ್ರಮಾಣೀಕೃತ ಏಜೆನ್ಸಿಗಳಿಂದ ಧೃಡೀಕರಣಗೊಂಡ ವಜ್ರಾಭರಣಗಳ ಶ್ರೇಣಿ, ಪ್ರಮಾಣೀಕೃತ EF ಬಣ್ಣದ ಹಳೆಯ ವಜ್ರಾಭರಣಗಳ ವಿನಿಮಯ, ಮರುಖರೀದಿಯ ಗ್ಯಾರಂಟಿ, ಅಚ್ಚರಿಯ ಕೊಡುಗೆ ಹಾಗೂ ಉಡುಗೊರೆಗಳನ್ನು ತಮ್ಮದಾಗಿಸುವ ಸುವರ್ಣಾವಕಾಶವಿದೆ. ವಜ್ರದ ಆಭರಣಗಳು ತಮ್ಮ ಅಸಾಧಾರಣ ಸೌಂದರ್ಯ ಹಾಗೂ ದೀರ್ಘಕಾಲ ಬಾಳಿಕೆಯಿಂದ ಬಹಳ ಅಮೂಲ್ಯ…
ವಿರಾಜಪೇಟೆ ಡಿ.13 NEWS DESK : ವಿರಾಜಪೇಟೆಯ ಕೊಡವ ಸಮಾಜದಲ್ಲಿ ಕೊಡವ ಪೊಮ್ಮಕ್ಕಡ ಒಕ್ಕೂಟದ ವತಿಯಿಂದ ಪುತ್ತರಿ ನಮ್ಮೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ವಿರಾಜಪೇಟೆ ಕೊಡವ ಸಮಾಜ ಪೊಮ್ಮಕ್ಕಡ ಒಕ್ಕೂಟದ ಅಧ್ಯಕ್ಷೆ ತಾತಂಡ ಜ್ಯೋತಿ ಪ್ರಕಾಶ್ ಮಾತನಾಡಿ ಕೊಡಗಿನ ಪ್ರಮುಖ ಹಬ್ಬಗಳಲ್ಲಿ ಪುತ್ತರಿ ಹಬ್ಬ ಒಂದಾಗಿದ್ದು, ಕೊಡವ ಪೊಮ್ಮಕ್ಕಡ ಒಕ್ಕೂಟದ ವತಿಯಿಂದ ಸಡಗರದಿಂದ ಪುತ್ತರಿ ನಮ್ಮೆಯನ್ನು ಆಚರಿಸಲಾಗಿದೆ. ಸದಸ್ಯರೆಲ್ಲರೂ ಅತಿ ಉತ್ಸಾಹದಿಂದ ಸಮಾರಂಭದಲ್ಲಿ ಪಾಲ್ಗೊಂಡಿದ್ದು, ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದೆ. ದೇಶಿ ಸಂಸ್ಕೃತಿಯನ್ನು ಮರೆಯದೆ ಅದನ್ನು ಗೌರವಿಸುವುದರ ಮೂಲಕ ಮುಂದುವರಿಸಿಕೊಂಡು ಹೋಗುವುದು ಎಲ್ಲರ ಜವಾಬ್ದಾರಿ ಎಂದರು. ಮುಂದಿನ ದಿನಗಳಲ್ಲಿ ಪೊಮ್ಮಕ್ಕಡ ಒಕ್ಕೂಟದ ವತಿಯಿಂದ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಹೇಳಿದರು. ನೀಲಕ್ಕ ತಂಡದ ನಾಯಕಿ ಐಚೆಟ್ಟಿರ ಮೀನ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿರಾಜಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಒಕ್ಕೂಟದ ಸರ್ವ ಸದಸ್ಯರು ಉಪಸ್ಥಿತರಿದ್ದರು. ಕುಂಜಿರ ಚಿತ್ರ ಹಾಗೂ ತಾತಂಡ ಏಸು ಕಬೀರ್ ವರದಿ ವಾಚಿಸಿದರು. ಕುಪ್ಪಚ್ಚಿರ ಕವಿತಾ ಭೀಮಯ್ಯ ಸ್ವಾಗತಿಸಿದರು, ಅಪ್ಪುಮಣಿಯಂಡ ಡೈಜಿ ಸೋಮಣ್ಣ…






