ಲೇಖಕ: admin

ನಾಪೋಕ್ಲು NEWS DESK ಸೆ.3 : ನಾಪೋಕ್ಲು ಕೊಡವ ಸಮಾಜದ ಕಾರ್ಯದರ್ಶಿ ಕುಲ್ಲೇಟಿರ ಅಜಿತ್ ನಾಣಯ್ಯ ಅವರ ತಂದೆ ನಾಪೋಕ್ಲುವಿನ ನಿವೃತ್ತ ಮುಖ್ಯ ಶಿಕ್ಷಕ ಕುಲ್ಲೇಟಿರ ಗುರುವಪ್ಪ (87) ಅವರು ಇಂದು ಸಂಜೆ ನಿಧನರಾದರು. ಮೃತರ ಅಂತ್ಯಕ್ರಿಯೆ ಸೆ.4ರಂದು ನಾಪೋಕ್ಲುವಿನ ಕುಲ್ಲೇಟಿರ ಐನ್ ಮನೆಯಲ್ಲಿ ನಡೆಯಲಿದೆ. ಕುಲ್ಲೇಟಿರ ಗುರುವಪ್ಪ ಅವರು ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Read More

ಮಡಿಕೇರಿ NEWS DESK ಸೆ.3 : ಕಾರು ಮತ್ತು ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರ ಕಲ್ಲುಗುಂಡಿ ಬಳಿ ನಡೆದಿದೆ. ಕಲ್ಲುಗುಂಡಿ ಸಮೀಪ ಕಡೆಪಾಲ ಎಂಬಲ್ಲಿ ಕಾರು ಮತ್ತು ಟ್ಯಾಂಕರ್ ಮಧ್ಯೆ ಅಪಘಾತವಾಗಿದೆ. ಕುಶಾಲನಗರ ತಾಲ್ಲೂಕಿನ ನೆಲ್ಲಿಹುದಿಕೇರಿ ಗ್ರಾಮದ ಶೋಭಾ(45) ಮೃತ ದುರ್ದೈವಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಶೋಭಾ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಕಾರು ಚಲಾಯಿಸುತ್ತಿದ್ದ ದೇವಯ್ಯ(54) ಹಾಗೂ ಪ್ರಯಾಣಿಕರಾದ ವನಜಾಕ್ಷಿ(44) ಅವರು ತೀವ್ರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಮಡಿಕೇರಿಯಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಮತ್ತು ಸುಳ್ಯ ಭಾಗದಿಂದ ಮಡಿಕೇರಿ ಕಡೆಗೆ ಬರುತ್ತಿದ್ದ ಕಾರು ನಡುವೆ ತಿರುವು ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಶಾಲನಗರ ಸೆ.3 NEWS DESK :  ಸ್ಥಳೀಯ ಸಹಕಾರ ಸಂಘಗಳ ಮೂಲಕ ಪ್ರತಿಯೊಬ್ಬ ಸದಸ್ಯರ ಏಳಿಗೆಯ ಜೊತೆಗೆ ಸಮಾಜದ ನಿರಂತರ ಅಭಿವೃದ್ಧಿ ಸಾಧ್ಯ ಎಂದು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.  ಕುಶಾಲನಗರದಲ್ಲಿ ನಾಡಪ್ರಭು ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ ಮತ್ತು ಸಭಾ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಮಾತನಾಡಿದರು. ವ್ಯಕ್ತಿ ಅಭಿವೃದ್ಧಿ ಮೂಲಕ ಕುಟುಂಬಗಳ ಆರ್ಥಿಕ ಸಮೃದ್ಧಿ ಸಾಧ್ಯ ಎಂದ ಶ್ರೀಗಳು, ಪ್ರತಿಯೊಬ್ಬರೂ ಸೋಮಾರಿತನ ಬಿಟ್ಟು ಕೌಶಲ್ಯಾಧಾರಿತರಾಗಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು ಮುಂದಿನ ದಿನಗಳಲ್ಲಿ ಎಲ್ಲೆಡೆ ನಡೆಯಲಿರುವ ಜನಗಣತಿ ಕಾರ್ಯ ಸಂದರ್ಭ ಪ್ರತಿಯೊಬ್ಬರೂ ಪ್ರಜ್ಞಾವಂತರಾಗಿ ಗಣತಿ ಕಾರ್ಯದಲ್ಲಿ ಪಾಲ್ಗೊಂಡು ಮಾಹಿತಿ ನೀಡಬೇಕು.  ಆ ಮೂಲಕ ಸಮಾಜದ ಶೈಕ್ಷಣಿಕ ಆರ್ಥಿಕ ಸಾಮಾಜಿಕ ಬೆಳವಣಿಗೆಗೆ ಅವಕಾಶ ಕಲ್ಪಿಸಿದಂತಾಗುತ್ತದೆ. ಈ ಹಿನ್ನೆಲೆಯಲ್ಲಿ ವಾಸ್ತವ ವಿಚಾರವನ್ನು ನೀಡಬೇಕಾಗಿದೆ ಎಂದು ಕರೆ ನೀಡಿದರು.  ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ…

Read More

ಮಡಿಕೇರಿ ಸೆ.3 NEWS DESK : ಮಾಯಮುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ತಾಲ್ಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ರನ್ನರ್ಸ್ ಟ್ರೋಪಿಯನ್ನು ತಮ್ಮದಾಗಿಸಿಕೊಂಡರು. ತಂಡದಲ್ಲಿ ಶಾಲೆಯ ವಿದ್ಯಾರ್ಥಿಗಳಾದ ಸಣ್ಣುವಂಡ ರಶ್ಮಿ ಪೊನ್ನಮ್ಮ, ಬೊಳ್ಳೆಪಂಡ ದೀಪ್ತಿ ತಂಗಮ್ಮ, ಪಳೆಯಂಡ ಸಿ.ಕಾಜಲ್, ಬಿ.ಎಸ್.ಸೃಷ್ಟಿ, ನಿಲ್ಮಾಡ್ ತನ್ಯಾ ರೈ, ಕುಟ್ಟನ ಎಂ.ಯಶ್ಮಿತ, ಪುಚ್ಚಿ ಮಂಡ ಯು ತನಿಶಾ ಭಾಗವಹಿಸಿದ್ದರು. ಇವರಿಗೆ ಶಾಲೆಯ ದೈಹಿಕ ಶಿಕ್ಷಕರುಗಳಾದ ಬಿ.ಎಸ್.ಮೋನಿಕಾ ಹಾಗೂ ಲಾವಣ್ಯ ಮಾರ್ಗದರ್ಶನವನ್ನು ನೀಡಿದರು. ಈ ಸಂದರ್ಭ ಕಾವೇರಿ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಎಸ್.ಸುದೇಶ್, ಕಾರ್ಯದರ್ಶಿ ಪಿ.ಎನ್.ವಿನೋದ್, ದೈಹಿಕ ಶಿಕ್ಷಕಿಯಾದ ಮೋನಿಕಾ ಉಪಸ್ಥಿತರಾಗಿದ್ದು, ತಂಡಕ್ಕೆ ಉತ್ತಮ ರೀತಿಯಲ್ಲಿ ಉತ್ತೇಜನವನ್ನು ನೀಡಿರುತ್ತಾರೆ. ತಂಡದ ಸಾಧನೆಗೆ ಶಾಲೆಯ ಆಡಳಿತ ಮಂಡಳಿಯವರು, ಮುಖ್ಯ ಶಿಕ್ಷಕಿ, ಸಂಯೋಜಿಕಿ ಹಾಗೂ ಬೋಧಕ ಬೋಧಕೇತರ ವೃಂದದವರು, ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Read More

ಮಡಿಕೇರಿ ಸೆ.3 NEWS DESK : ಅಮ್ಮತಿಯಲ್ಲಿ ನಡೆದ ವಲಯ ಮಟ್ಟದ ಪ್ರಾಥಮಿಕ ವಿಭಾಗದ ಬಾಲಕರ ಖೋ ಖೋ ಪಂದ್ಯಾವಳಿಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ತಂಡ ರನ್ನರ್ಸ್ ಟ್ರೋಫಿ ತಮ್ಮದಾಗಿಸಿಕೊಂಡಿದೆ. ತಂಡದಲ್ಲಿ ಶಾಲೆಯ ವಿದ್ಯಾರ್ಥಿಗಳಾದ ಪಿ.ಜಿ.ಹಿತಾರ್ಥ್, ಟಿ.ಎಫ್.ಮಹಮ್ಮದ್ ಡಿಯಾನ್, ಕೆ.ಎನ್.ನಜ್ವಾನ್ ಇಸ್ಮಾಯಿಲ್, ಬಿ.ಎಲ್.ಯಶ್ವಿನ್ ಸುಬ್ಬಯ್ಯ, ಅಮ್ಮಂಡ ತನಿಷ್ ನಾಣಯ್ಯ, ಬಿ.ಜಿ.ರೋಷನ್, ಯು. ಐಚಂಡ ತಲೀ ಶ್ ತಿಮ್ಮಣ್ಣ, ದಿಲನ್ ಗೌಡ, ಎ.ಹೆಚ್.ಅಚ್ಚಪಂಡ ಜಗತ್, ಪಿ.ಪುಗ್ಗೇರ ಗದಿನ್ ಬೋಪ್ಪಣ್ಣ, ಕೆ.ಎನ್.ಮೊಹಮ್ಮದ್ ಜಿಧಾನ್, ಪಿ.ಜೆ.ಹೃದಯ್ ಭಾಗವಹಿಸಿದ್ದರು. ತಂಡಕ್ಕೆ ದೈಹಿಕ ಶಿಕ್ಷಕರುಗಳಾದ ಮೋನಿಕ ಹಾಗೂ ಲಾವಣ್ಯ ಮಾರ್ಗದರ್ಶನ ನೀಡಿದ್ದಾರೆ. ಇವರ ಸಾಧನೆಗೆ ಶಾಲಾ ಆಡಳಿತ ಮಂಡಳಿಯವರು, ಮುಖ್ಯ ಶಿಕ್ಷಕಿ, ಸಂಯೋಜಕಿ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Read More

ವಿರಾಜಪೇಟೆ ಸೆ.3 NEWS DESK  : ಬೇಟೋಳಿ ಗ್ರಾಮದ ರಾಮನಗರದಲ್ಲಿರುವ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಒಳ ಆವರಣದಲ್ಲಿರುವ ಶ್ರೀ ಗಣಪತಿ ಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಶ್ರೀ ಗೌರಿ ಗಣೇಶ ಮೂರ್ತಿಯನ್ನು ಶ್ರದ್ದಾ ಭಕ್ತಿಯಿಂದ ವಿಸರ್ಜಿಸಲಾಯಿತು. ಶ್ರೀ ಗಣೇಶ ಚತುರ್ಥಿಯಂದು ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಗೆ ಏಳು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ಸಲ್ಲಿಸಿಲಾಯಿತು. ವಿಸರ್ಜನೋತ್ಸವದಂದು ಮಧ್ಯಾಹ್ನ ಮಹಾಪೂಜೆಯನ್ನು ಸಲ್ಲಿಸಿದ ಬಳಿಕ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಿತು. ನಂತರ ವಿಶೇಷ ಪ್ರಾರ್ಥನೆ, ಪೂಜೆಯನ್ನು ಸಲ್ಲಿಸುವುದರ ಮೂಲಕ ಹೂವಿನ ಅಲಂಕೃತ ಮಂಟಪದಲ್ಲಿ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಯಿತು. ಈ ಸಂದರ್ಭ ಭಕ್ತಾದಿಗಳು ಹಾಗೂ ಗ್ರಾಮಸ್ಥರು ವಿಶೇಷ ಪೂಜೆಯನ್ನು ಮಹಾಗಣಪತಿಗೆ ಸಲ್ಲಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಕುಣಿತ ಭಜನೆಯ ತಂಡ ಹಾಗೂ ಸ್ಥಳೀಯ ಮಕ್ಕಳಿಂದ ಕುಣಿತ ಭಜನೆಯು ಮೆರವಣಿಗೆಯ ಉದ್ದಕ್ಕೂ ಸಾಗಿ ಆಕರ್ಷಣೆಯನ್ನು ಹೆಚ್ಚಿಸಿತು. ಕಲಾ ತಂಡದವರು ಗೊಂಬೆ ವೇಷವನ್ನು ಧರಿಸಿ ನೃತ್ಯವನ್ನು ಮಾಡಿದರು. ರುದ್ರಮ್ ಚಂಡೆ ಬಳಗದವರಿಂದ ಚಂಡೆ ಸೇವೆಯು…

Read More

ಮಡಿಕೇರಿ ಸೆ.3 NEWSDESK : ಕೊಡಗು ಜಿಲ್ಲೆಯಾದ್ಯಂತ ಕೈಲ್ ಪೊಳ್ದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಚೆಟ್ಟಳ್ಳಿಯ ಪುತ್ತರಿರ ಐನ್ ಮನೆಯಲ್ಲಿ ಕುಟುಂಬಸ್ಥರು ಹಬ್ಬದ ಸಂಭ್ರಮವನ್ನು ಹಂಚಿಕೊಂಡರು. ಕೊಡವರ ದೇವನೆಲೆಯಾದ ನೆಲ್ಲಕ್ಕಿ ನಡುಬಾಡೆಯಲ್ಲಿ ಕೋವಿ, ಒಡಿಕತ್ತಿ, ಗೆಜ್ಜೆತಂಡ, ತೋಕ್ ಪೂ, ಮೀದಿ, ನೀರಿಟ್ಟು, ವಿಶೇಷ ಪೂಜೆ ಸಲ್ಲಿಸಲಾಯಿತು. ಕುಟುಂಬದ ಹಿರಿಯರಾದ ವಾಯುಸೇನೆಯ ನಿವೃತ್ತ ಯೋಧ ಪುತ್ತರಿರ ಗಣೇಶ್ ಭೀಮಯ್ಯ ಅವರು ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಹಿರಿಯರಾದ ಪುತ್ತರಿರ ಸುಜು ಬಿದ್ದಪ್ಪ  ಅಡುಗೆ ಮನೆಯಲ್ಲಿ ಮೀದಿ ನೀರಿಟ್ಟು ನಾಡಿಗೆ ಹಾಗೂ ಕುಟುಂಬಕ್ಕೆ ಒಳಿತಾಗಲಿ ಎಂದು ಶುಭ ಹಾರೈಸಿದರು. ಕೈಲ್ ಪೊಳ್ದ್ ಹಬ್ಬದ ವಿಶೇಷ ಭೋಜನದ ನಂತರ ಹಿರಿಯರು, ಕಿರಿಯರು, ಮಹಿಳೆಯರು, ಅಕ್ಕಪಕ್ಕದ ಗ್ರಾಮಸ್ಥರು ಊರುಮಂದ್ ನಲ್ಲಿ ತೆಂಗಿನಕಾಯಿಗೆ ಗುಂಡು ಹೊಡೆದು ಸಂಭ್ರಮಿಸಿದರು.

Read More

ಮಡಿಕೇರಿ ಸೆ.3 NEWS DESK : ಕುಶಾಲನಗರದ ಮುಳ್ಳುಸೋಗೆಯಲ್ಲಿ ಜನಸಂಪರ್ಕ ಸಭೆ ನಡೆಯಿತು. ಶಾಸಕರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಜನರ ಸಮಸ್ಯೆಗಳಿಗೆ ಸ್ಪಂದಿಸಿದರು.

Read More

ಸೋಮವಾರಪೇಟೆ ಸೆ.3 NEWS DESK :  ಸೋಮವಾರಪೇಟೆ ತಾಲ್ಲೂಕು ಪುಷ್ಪಗಿರಿ ಛಾಯಾಗ್ರಾಹಕರ ಸಂಘದ ವತಿಯಿಂದ 186ನೇ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಬೆಟ್ಟದಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಸ್ವೆಟರ್‌ಗಳು, ಲೇಖನ ಸಾಮಗ್ರಿಗಳು, ಟೈ-ಬೆಲ್ಟ್‌ಗಳು ಹಾಗೂ ವಾಟರ್‌ಬಾಟಲ್‌ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಕ್ಕಳಿಗೆ ಸಾಮಗ್ರಿಗಳನ್ನು ವಿತರಿಸಿದ ಸಂಘದ ಅಧ್ಯಕ್ಷರಾದ ಸಾಲೊಮನ್ ಡೇವಿಡ್  ಮಾತನಾಡಿ, ನಾವು ಪ್ರತಿ ವರ್ಷವೂ ಸರ್ಕಾರಿ ಶಾಲಾ ಮಕ್ಕಳೊಂದಿಗೆ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ಮಕ್ಕಳಿಗೆ ಅಗತ್ಯವಾಗುವ ವಸ್ತುಗಳನ್ನು ನೀಡುವುದರ ಜೊತೆಗೆ, ಈ ದಿನದ ಮಹತ್ವ ಮತ್ತು ಉದ್ದೇಶವನ್ನು ತಿಳಿಸುವ ಮೂಲಕ ಅವರಿಗೆ ಹೆಚ್ಚು ಜ್ಞಾನವನ್ನು ನೀಡುವ ಪ್ರಯತ್ನ ಮಾಡುತ್ತೇವೆ” ಎಂದು ಹೇಳಿದರು. ಗೌರವಾಧ್ಯಕ್ಷರಾದ ಜನಾರ್ಧನ್ ಅವರು “ಛಾಯಾಗ್ರಹಣ ಕೇವಲ ಕಲೆಯಲ್ಲ, ಸಮಾಜಮುಖಿ ಕಾರ್ಯಗಳ ಮೂಲಕ ಜನಜಾಗೃತಿ ಮೂಡಿಸುವ ಶಕ್ತಿಯಾಗಿದೆ. ಸಂಘದ ಈ ಸೇವಾಮನೋಭಾವ ಇತರ ಸಂಘಟನೆಗಳಿಗೆ ಮಾದರಿಯಾಗಿದೆ ” ಎಂದು ಅಭಿಪ್ರಾಯಪಟ್ಟರು. ಸಂಘದ ಮಾಜಿ ಅಧ್ಯಕ್ಷ ಸುಬ್ರಮಣಿ ಮಾತನಾಡಿ, “ಸಂಘವು…

Read More

ಮಡಿಕೇರಿ, ಸೆ.3 NEWS DESK : ಮಡಿಕೇರಿ ನಗರದ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ (ಆಡಳಿತ ) ರ ಕಛೇರಿಯಲ್ಲಿ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಎಂ.ಮಹಾದೇವಸ್ವಾಮಿ ಅವರನ್ನು ಶಿಕ್ಷಣ ಇಲಾಖೆಯ ವತಿಯಿಂದ ಸನ್ಮಾನಿಸಿ ಆತ್ಮೀಯವಾಗಿ ಬೀಳ್ಕೊಡಲಾಯಿತು. ಡಿಡಿಪಿಐ ಕಛೇರಿಯಲ್ಲಿ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ನಿರ್ಗಮಿತ ಡಿಡಿಪಿಐ ಸಿ.ರಂಗಧಾಮಪ್ಪ ಅವರು ಕಛೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದ ವತಿಯಿಂದ ಶಾಲು ಹೊದಿಸಿ ಸನ್ಮಾನಿಸಿ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.  ಡಿಡಿಪಿಐ ಸಿ.ರಂಗಧಾಮಪ್ಪ ಮಾತನಾಡಿ, ಶಿಕ್ಷಣ ಇಲಾಖೆಯ ಸೇವೆಯು ಅನನ್ಯವಾದ ಸೇವೆ. ಇದನ್ನು ಶ್ರದ್ಧೆ, ಪ್ರಾಮಾಣಿಕತೆಯಿಂದ‌ ನಿರ್ವಹಿಸುವ ಮೂಲಕ ಎಲ್ಲರೂ ಇಲಾಖೆಯ ಘನತೆಯನ್ನು ಹೆಚ್ಚಿಸಬೇಕು ಎಂದರು. ಜಿಲ್ಲೆಯಲ್ಲಿ ಈ ಹಿಂದಿನ ಎರಡು ವರ್ಷಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಕೊಡಗು ಜಿಲ್ಲೆಯು 4 ನೇ ಸ್ಥಾನ ಗಳಿಸಿದೆ. ಇದಕ್ಕೆ ಎಸ್ಸೆಸ್ಸೆಲ್ಸಿ ‌ಪರೀಕ್ಷೆಯ ಜಿಲ್ಲಾ ನೋಡಲ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಮಹಾದೇವಸ್ವಾಮಿ ಅವರ ವಿಶೇಷ ಕಾಳಜಿ ಮತ್ತು ಅಧಿಕಾರಿಗಳ ಕಾರ್ಯಕ್ಷಮತೆ ಹಾಗೂ…

Read More