ನಾಪೋಕ್ಲು ಅ.27 NEWS DESK : ಕಾಡಾನೆ ದಾಳಿಯಿಂದ ಕಾಫಿ ಬೆಳೆಗಾರ ಪ್ರಾಣಾಪಾಯದಿಂದ ಪಾರಾಗಿ, ಹಸು ಸಾವನ್ನಪ್ಪಿದ ಘಟನೆ ಪೇರೂರು ಗ್ರಾಮದಲ್ಲಿ ನಡೆದಿದೆ. ಬಲ್ಲಮಾವಟ್ಟಿ ಗ್ರಾಮ ಪಂಚಾಯತಿಯ ಪೇರೂರು ಗ್ರಾಮದ ನಿವಾಸಿ ಕಾಫಿ ಬೆಳೆಗಾರ ಅಪ್ಪಚ್ಚಿರ ಹ್ಯಾರಿ ಪೊನ್ನಪ್ಪ ಕಾಡಾನೆ ದಾಳಿಗೆ ಒಳಗಾಗಿ ತೀವ್ರ ಗಾಯಗೊಂಡ ವ್ಯಕ್ತಿ. ಹ್ಯಾರಿ ಪೊನ್ನಪ್ಪ ತಮ್ಮ ತೋಟದಿಂದ ಕೆಲಸ ಮುಗಿಸಿ ಸಂಜೆ ಮನೆಗೆ ಹಿಂತಿರುಗುವ ಸಂದರ್ಭ ಮಚ್ಚೂರ ಮಂದ್ ಸಮೀಪ ಕಾಡಾನೆ ದಾಳಿ ನಡೆಸಿ ಕೋರೆಯಿಂದ ಹ್ಯಾರಿ ಪೊನ್ನಪ್ಪ ಅವರ ಎದೆಯ ಭಾಗಕ್ಕೆ ತಿವಿದೆ. ಸಮೀಪದಲ್ಲಿದ್ದವರು ಭಯದಿಂದ ಚೀರಾಡಿದ ಕಾರಣ ಆನೆ ಓಡಿದೆ. ಇದೇ ಸಂದರ್ಭ ಮಚ್ಚೂರ ಹರೀಶ್ ಬಿದ್ದಪ್ಪ ಎಂಬವರು ಗದ್ದೆಯಲ್ಲಿ ಮೇಯಲು ಬಿಟ್ಟಿದ್ದ ಹಸುವನ್ನು ಕಾಡಾನೆ ತಿವಿದು ತೀವ್ರ ಗಾಯಗೊಳಿಸಿದ್ದು, ಹಸು ಮರಣ ಹೊಂದಿ ನಷ್ಟ ಸಂಭವಿಸಿದೆ. ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹ್ಯಾರಿ ಪೊನ್ನಪ್ಪ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ, ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಬಳಿಕ ತುರ್ತು ಚಿಕಿತ್ಸೆಗಾಗಿ…
ಲೇಖಕ: admin
ಮಡಿಕೇರಿ ಅ.27 NEWS DESK : ಕೊಡಗಿನ ಪ್ರತಿಷ್ಠಿತ ಕುಟುಂಬಗಳಲ್ಲಿ ಒಂದಾಗಿರುವ ಅಜ್ಜಿಕುಟ್ಟಿರ ಐನ್ ಮನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೇಟಿ ನೀಡಿದರು. ಕಳೆದ ವರ್ಷ ಅಜ್ಜಿಕುಟ್ಟಿರ ಐನ್ ಮನೆ ಕಾಮಗಾರಿಯನ್ನು ಕೈಗೆತ್ತುಕೊಂಡಿದ್ದ ಕುಟುಂಬಸ್ಥರು, ಇದೀಗ ಕಾಮಗಾರಿ ಪೂರ್ಣಗೊಂಡು, ಇಂದು ಶಾಸ್ತ್ರೋತ್ರವಾಗಿ ಐನ್ ಮನೆ ಕುಟುಂಬದ ತಕ್ಕರು, ಹಿರಿಯರು, ಪ್ರಮುಖರು ಹಾಗೂ ಊರವರ ಉಪಸ್ಥಿತಿಯಲ್ಲಿ ಐನ್ ಮನೆ ಪ್ರವೇಶ ಕಾರ್ಯಕ್ರಮ ಜರುಗಿತು. ಸ್ವತಹ ಅಜ್ಜಿಕುಟ್ಟಿರ ಕುಟುಂಬದ ಕುಡಿ ಆಗಿರುವ ಶಾಸಕರು ತನ್ನ ಹಿರಿಕರು ನೆಲೆಸಿದ ಐನ್ ಮನೆಗೆ ಭೇಟಿ ನೀಡಿ ಗೌರವ ಸಲ್ಲಿಸುವುದರೊಂದಿಗೆ, ಅಲ್ಲಿಯ ಹಿರಿಯರೊಂದಿಗೆ ಹಲವು ಸಮಯ ಚರ್ಚಿಸಿದರು. ಈ ಸಂದರ್ಭ ಅಜ್ಜಿಕುಟ್ಟಿರ ಕುಟುಂಬದ ಇತಿಹಾಸದ ಬಗ್ಗೆ ಮೆಲುಕು ಹಾಕಿದ ಶಾಸಕರು, ಕುಟುಂಬದ ಆಚರಣೆ, ಆಚಾರ ವಿಚಾರಗಳ ಬಗ್ಗೆ ಮಾಹಿತಿ ವಿನಿಮಯ ಮಾಡಿಕೊಂಡರು. ಕುಟುಂಬದ ಅಧ್ಯಕ್ಷರಾದ ಸಜಾನ್, ಶಾಸಕರ ಪತ್ನಿ ಕಾಂಚನ್ ಪೊನ್ನಣ್ಣ, ಶಾಸಕರ ಹಿರಿಯ ಸಹೋದರ ಅಜ್ಜಿಕುಟ್ಟಿರ ನರೇನ್ ಎಸ್.ಕಾರ್ಯಪ್ಪ,…
ಕುಶಾಲನಗರ ಅ.27 NEWS DESK : ದೇಶದ ನದಿಗಳ ಬಗ್ಗೆ ಕೇಂದ್ರ ಸರ್ಕಾರ ಕಾಳಜಿ ವಹಿಸಬೇಕಾಗಿದೆ, ರಾಜ್ಯ ಸರ್ಕಾರಗಳು ನದಿ ಸಂರಕ್ಷಣೆ ಬಗ್ಗೆ ಯೋಜನೆ ರೂಪಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ದಕ್ಷಿಣ ಉತ್ತರ ಎಂಬ ಭೇದವಿಲ್ಲದೆ ದೇಶದ ಎಲ್ಲಾ ನದಿಗಳ ಸಂರಕ್ಷಣೆ ಆಗಬೇಕಾಗಿದೆ ಬೆಂಗಳೂರು ಕೈಲಾಸ ಆಶ್ರಮದ ಜಗದ್ಗುರು ಶ್ರೀ ಜಯಂದ್ರ ಪುರಿ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು. ಕಾವೇರಿ ನದಿ ಸ್ವಚ್ಛತಾ ಆಂದೋಲನ ಮತ್ತು ಅಖಿಲ ಭಾರತೀಯ ಸನ್ಯಾಸಿ ಸಂಘ ಆಶ್ರಯದಲ್ಲಿ ಕಾವೇರಿ ರಿವರ್ ವಾಟರ್ ಪ್ರೊಟೆಕ್ಷನ್ ಟ್ರಸ್ಟ್ ಕಾವೇರಿ ರಿವರ್ ಸೇವಾ ಟ್ರಸ್ಟ್ ಹಾಗೂ ನಮಾಮಿ ಕಾವೇರಿ ಸಹಯೋಗದೊಂದಿಗೆ ತಲಕಾವೇರಿಯಿಂದ ಪೂಂಪ್ ಹಾರ್ ತನಕ 3 ವಾರಗಳ ಕಾಲ ನಡೆಯಲಿರುವ ಯಾತ್ರೆಗೆ ತಲಕಾವೇರಿ ಕ್ಷೇತ್ರದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು. ಕಾವೇರಿ ನದಿಗೆ ಇಳಿಯುವ ಸಂದರ್ಭ ಮಡಿವಂತಿಗೆ ಅಗತ್ಯ ಎಂದ ಅವರು ಪ್ರತಿಯೊಬ್ಬರು ಸ್ವಚ್ಛತೆಗೆ ಆದ್ಯತೆ ನೀಡಬೇಕಾಗಿದೆ ಎಂದು ಹೇಳಿದರು. ಯಾತ್ರೆಯ ಬಿತ್ತಿ ಪತ್ರ ಬಿಡುಗಡೆಗೊಳಿಸಿದ ಕರ್ನಾಟಕ ಕೊಡವ ಸಾಹಿತ್ಯ…
ಸೋಮವಾರಪೇಟೆ ಅ.27 NEWS DESK : ನವಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಆಟೋ ಚಾಲಕರು ಹಾಗೂ ಮಾಲೀಕರ ಸಂಘದ ಅಧ್ಯಕ್ಷ ಉಮೇಶ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರತಿವರ್ಷದಂತೆ ಈ ವರ್ಷವೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ ಎಂದರು. ನಿರಂತರವಾಗಿ ಕನ್ನಡ ಧ್ವಜ ಹಾರಿಸುವ ಸಂಕಲ್ಪದಿಂದ ನೂತನ ಧ್ವಜ ಸ್ತಂಭ ನಿರ್ಮಿಸಲಾಗುತ್ತಿದ್ದು ರಾಜ್ಯೋತ್ಸವದ ದಿನದಂದು ಉದ್ಘಾಟನೆ ಮಾಡಲಾಗುವುದು ಎಂದು ಹೇಳಿದರು. ಸಂಘದ ಪ್ರಧಾನ ಕಾರ್ಯದರ್ಶಿ ಮಹಮದ್ ಶಫಿ ಮಾತನಾಡಿ ನ.1ರ ಬೆಳಿಗ್ಗೆ 8 ಗಂಟೆಗೆ ಪಟ್ಟಣದ ಕಕ್ಕೆಹೊಳೆ ಸಮೀಪವಿರುವ ಬಸವೇಶ್ವರ ವೃತ್ತದ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮೂಲಕ ಅಂದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಂತರ ಪಟ್ಟಣದ ಎಲ್ಲಾ ಪ್ರತಿಮೆಗಳಿಗೂ ಮಾಲಾರ್ಪಣೆ ಮಾಡಿ ನಂತರ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಗುವುದೆಂದರು. 10 ಗಂಟೆಗೆ ಖಾಸಗಿ ಬಸ್ ನಿಲ್ದಾಣದಲ್ಲಿ ನಿರ್ಮಿಸುವ ಭವ್ಯ ವೇದಿಕೆಯಲ್ಲಿ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟನೆ ನಡೆಯಲಿದೆ ನಂತರ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ…
ಕುಶಾಲನಗರ ಅ.27 NEWS DESK : ನಾಗಾಲೋಟದ ಅಭಿವೃದ್ಧಿಯ ನಡುವೆ ಪರಿಸರದಲ್ಲಿ ಏರುಪೇರು ಆಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶರು ಹಾಗೂ ಕಾವೇರಿ ರಿವರ್ ಸೇವಾ ಟ್ರಸ್ಟ್ ಮಾರ್ಗದರ್ಶಕರಾದ ಶ್ರೀ ಸದಾಶಿವ ಸ್ವಾಮೀಜಿ ಹೇಳಿದರು. ಕಾವೇರಿ ನದಿ ಸ್ವಚ್ಛತಾ ಆಂದೋಲನ ಮತ್ತು ಅಖಿಲ ಭಾರತೀಯ ಸನ್ಯಾಸಿ ಸಂಘ ಆಶ್ರಯದಲ್ಲಿ ಕುಶಾಲನಗರದಲ್ಲಿ ಸ್ವಚ್ಛ ಕಾವೇರಿಗಾಗಿ 15ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ ಮತ್ತು 178ನೆಯ ವಿಶೇಷ ಮಹಾ ಆರತಿ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಅವರು, ವ್ಯಾಪಾರ ವಹಿವಾಟು ಮಾಡುವ ಕಾಯಕದ ಸಂದರ್ಭ ಪರಿಸರಕ್ಕೆ ಯಾವುದೇ ರೀತಿಯ ಹಾನಿ ಉಂಟಾಗದಂತೆ ಪ್ರತಿಯೊಬ್ಬರೂ ಎಚ್ಚರಿಕೆ ವಹಿಸಬೇಕಾಗಿದೆ ಎಂದರು. ನೆಮ್ಮದಿ ಮತ್ತು ಆರೋಗ್ಯಕರ ಬದುಕಿಗೆ ನೀರಿನ ಅವಲಂಬನೆಯ ಅಗತ್ಯತೆ ಇದ್ದು ಯಾವುದೇ ಸಂದರ್ಭ ಜಲಮೂಲಗಳು ನಾಶವಾಗದಂತೆ ಎಚ್ಚರ ವಹಿಸಬೇಕು. ಯೋಜನೆಗಳು ಅಭಿವೃದ್ಧಿ ವೈಜ್ಞಾನಿಕವಾಗಿ ನಡೆಯುವ ಮೂಲಕ ಪರಿಸರ ಜಾಗೃತಿ ಅಗತ್ಯ ಎಂದು ಸ್ವಾಮೀಜಿ ಹೇಳಿದರು. ಮುಂದಿನ ಜನಾಂಗಕ್ಕೆ ಉತ್ತಮ ಪರಿಸರವನ್ನು ಹಸ್ತಾಂತರ…
ಮಡಿಕೇರಿ ಅ.27 NEWS DESK : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್‌ನ ಕೊಡಗು ಜಿಲ್ಲಾ ಸಂಸ್ಥೆ ವತಿಯಿಂದ ಮಡಿಕೇರಿ ನಗರದಲ್ಲಿರುವ ಸಂಸ್ಥೆಯ ಸ್ಕೌಟ್ಸ್, ಗೈಡ್ಸ್ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಭಾನುವಾರ ( ಅ.26 ರಂದು ) ಸ್ಕೌಟ್ಸ್, ಗೈಡ್ಸ್ , ಬುಲ್ ಬುಲ್, ರೇಂಜರ್ಸ್ ಮತ್ತು ರೋವರ್ಸ್ ವಿದ್ಯಾರ್ಥಿಗಳಿಗಾಗಿ ವೇಷ ಭೂಷಣಗಳೊಂದಿಗೆ ದೇಶಭಕ್ತಿ ಗೀತಾ ಗಾಯನ ಸ್ಪರ್ಧೆ ನಡೆಯಿತು. ಸಮವಸ್ತ್ರ ಧರಿಸಿದ್ದ ವಿದ್ಯಾರ್ಥಿಗಳು ಸುಶ್ರಾವ್ಯವಾಗಿ ಹಾಡಿದ ಗೀತಾ ಗಾಯನವು ಪ್ರೇಕ್ಷಕರ ಗಮನ ಸೆಳೆಯಿತು. ಮಕ್ಕಳು ದೇಶಭಕ್ತಿ ಗೀತೆ ಹಾಡಿ ಸಂತಸಪಟ್ಟರು. ಗೀತಾ ಗಾಯನ ಸ್ಪರ್ಧೆಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್‌ನ ಕೊಡಗು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ, ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ , ಭಾತೃತ್ವ, ರಾಷ್ಟ್ರೀಯ ಪ್ರಜ್ಞೆ ಹಾಗೂ ರಾಷ್ಟ್ರೀಯ ಭಾವೈಕ್ಯತೆ, ಬೆಳೆಸುವ ಉದ್ದೇಶದಿಂದ ದೇಶಭಕ್ತಿ ಗೀತೆಯಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಇಂದಿನ ದಿನಗಳಲ್ಲಿ ರಾಷ್ಟ್ರೀಯ ಭಾವೈಕ್ಯ, ಕೋಮುಸೌಹಾರ್ದ,…
ಮಡಿಕೇರಿ NEWS DESK ಅ.26 : ಕೊಡಗು ಜಿಲ್ಲೆಯಲ್ಲಿ ಮಿನಿ ವಿಮಾನ ನಿಲ್ದಾಣ ಸ್ಥಾಪನೆಗೆ ರಾಜ್ಯ ಸರಕಾರ ತಯಾರಿದ್ದು, ಮಡಿಕೇರಿ ಸಮೀಪ ಖಾಸಗಿ ವ್ಯಕ್ತಿಗಳಿಂದ ಕನಿಷ್ಠ 120 ಎಕರೆ ಸಮತಟ್ಟು ಜಾಗ ಲಭ್ಯವಿದ್ದಲ್ಲಿ ಅದನ್ನು ಮಾರುಕಟ್ಟೆ ದರದಲ್ಲಿ ಖರೀದಿಸಲು ಸರಕಾರ ಒಪ್ಪಿಗೆ ನೀಡಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾಕ್ಟರ್ ಮಂತರ್ ಗೌಡ ಪ್ರಕಟಿಸಿದ್ದಾರೆ. ಮಡಿಕೇರಿ ಸಮೀಪದ ಮಹಿಂದ್ರ ರೆಸಾರ್ಟ್ ನಲ್ಲಿ ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ವಾಣಿಜ್ಯ ಮಹಾ ಸಂಸ್ಥೆ ವತಿಯಿಂದ ಸಂವಾದ ಕಾರ್ಯಕ್ರಮ ಹಾಗೂ ಕೊಡಗು ಜಿಲ್ಲೆಯ ಪ್ರವಾಸೋದ್ಯಮ ಹಾಗೂ ಇತರ ಅಭಿವೃದ್ಧಿ ಕುರಿತ ವಿಚಾರ ಸಂಕಿರಣದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಕುಶಾಲನಗರ ಸಮೀಪದ ಚಿಕ್ಕ ಅಳುವಾರದಲ್ಲಿ ಜಾಗ ಗುರುತಿಸಿದ್ದರೂ ಅದು ಸೂಕ್ತವಲ್ಲ ಎಂದು ವರದಿ ಬಂದಿದ್ದು ಹಾಗಾಗಿ ಮಡಿಕೇರಿ ಸಮೀಪ ಸಮತಟ್ಟು ಪ್ರದೇಶ ಲಭ್ಯವಾದಲ್ಲಿ ಅದನ್ನು ಸರಕಾರ ಖರೀದಿಸಲಿದೆ ಎಂದು ತಿಳಿಸಿದ ಶಾಸಕರು ಜಿಲ್ಲೆಯಲ್ಲಿ ನಾಲ್ಕು ಕಡೆ ಹೆಲಿಪೋರ್ಟ್ ಸ್ಥಾಪನೆಗೂ ಸರಕಾರ ಮುಂದಾಗಿದೆ ಎಂದು…
ಸುಂಟಿಕೊಪ್ಪ NEWS DESK ಅ.26 : ಬೀದಿನಾಯಿಗಳ ದಾಳಿಯಿಂದ ಜೀವ ಉಳಿಸಿಕೊಳ್ಳಲು ಜಿಂಕೆಯೊಂದು ಮನೆಯೊಳಗೆ ನುಗ್ಗಿ ಆತಂಕ ಸೃಷ್ಟಿಸಿದ ಘಟನೆ 7ನೇ ಹೊಸಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಂಡೂರು ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ತೊಂಡೂರಿನಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದೆ, ನಾಯಿಗಳು ಜನರ ಮೇಲೆ ಮಾತ್ರವಲ್ಲದೆ ಜಿಂಕೆಗಳ ಮೇಲೂ ದಾಳಿ ಮಾಡುತ್ತಿವೆ. ಇಂದು ಕೂಡ ಹೆಣ್ಣು ಜಿಂಕೆಯೊಂದನ್ನು ಬೇಟೆಯಾಡಲು ನಾಯಿಗಳು ಹೊಂಚು ಹಾಕಿವೆ. ದಾಳಿ ಮಾಡಿದ ನಾಯಿಗಳಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಜಿಂಕೆ ಮುಖ್ಯ ರಸ್ತೆಯಲ್ಲಿರುವ ರಾಧಕೃಷ್ಣಪ್ಪ ಎಂಬುವವರ ಮನೆಗೆ ನುಗ್ಗಿದೆ. ತನ್ನ ಜೀವ ಉಳಿಸಿಕೊಳ್ಳಲು ಮನೆ ತುಂಬಾ ಓಡಾಡಿದ ಜಿಂಕೆಯಿಂದ ಮನೆಯೊಳಗಿದ್ದ ಪುಟ್ಟ ಮಗುವಿನ ಆಟಿಕೆಗಳು ಹಾನಿಗೊಂಡಿವೆ. ಮನೆಯಲ್ಲೇ ಆಟವಾಡುತ್ತಿದ್ದ ಮಗು ಅಪಾಯದಿಂದ ಪಾರಾಗಿದೆ. ಆದರೆ ಜಿಂಕೆ ಮನೆಯಿಂದ ಹೊರ ಬಂದು ರಸ್ತೆ ದಾಟಿ ಅರಣ್ಯ ಪ್ರವೇಶಿಸುವಷ್ಟರಲ್ಲಿ ಮತ್ತೆ ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಪ್ರಾಣ ಬಿಟ್ಟಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು 12 ವರ್ಷದ…
ಮೈಸೂರು NEWS DESK ಅ.26 : ಮೈಸೂರು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಇಂದು ಎನ್‌ಇಬಿ ಸ್ಪೋರ್ಟ್ಸ್ ಆ್ಯಂಡ್ ಎಂಟರ್‌ಟೈನ್‌ಮೆಂಟ್ ಲಿಮಿಟೆಡ್, ಭಾರತೀಯ ಅಂಚೆ, ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ‘ಮೈಸೂರು ಮ್ಯಾರಥಾನ್ – 2025’ರ ಕಾರ್ಯಕ್ರಮದಲ್ಲಿ ಮೈಸೂರು-ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಯುವ ಸಮೂಹಕ್ಕೆ ಸ್ಫೂರ್ತಿಯಾದರು. ಆರೋಗ್ಯದ ಕುರಿತು ಜಾಗೃತಿ ಮೂಡಿಸಲು ಆಯೋಜಿಸಿದ್ದ ಮ್ಯಾರಥಾನ್ ನಲ್ಲಿ ಓಟಗಾರರೊಂದಿಗೆ ಹೆಜ್ಜೆ ಹಾಕಿ 10 ಕಿ.ಮೀ ದೂರವನ್ನು ಕ್ರಮಿಸಿದರು.
ಮಡಿಕೇರಿ NEWS DESK ಅ.26 : ಡಿಸಿಸಿ ಬ್ಯಾಂಕ್ ಚುನಾವಣೆಯ ಸಂದರ್ಭ ಬೆಲ್ಲದ ಬಾಗೇವಾಡಿ ತಾಲ್ಲೂಕಿನ ರಮೇಶ್ ಕತ್ತಿ ಎಂಬುವವರು ವಾಲ್ಮೀಕಿ ಸಮುದಾಯವನ್ನು ಆಕ್ಷೇಪಾರ್ಹ ಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಮಾನವ ಬಂಧುತ್ವ ವೇದಿಕೆಯ ಕೊಡಗು ಜಿಲ್ಲಾ ಸಂಚಾಲಕ ಜೆ.ಎಲ್.ಜನಾರ್ಧನ್, ಸೋಮವಾರಪೇಟೆ ತಾಲ್ಲೂಕು ಸಂಚಾಲಕ ಎಂ.ಎಸ್.ವೀರೇಂದ್ರ ಹಾಗೂ ವೇದಿಕೆಯ ಮಹಿಳಾ ಘಟಕದ ಜಿಲ್ಲಾ ಸಂಚಾಲಕರಾದ ಡಾ.ಕಾವೇರಿ ಹೆಚ್.ಎಂ ಅವರು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ಶಾಲಾ ಮೈದಾನದಲ್ಲಿ ಚುನಾವಣೆ ಪ್ರಕ್ರಿಯೆ ನಡೆಯುತ್ತಿದ್ದ ಸಂದರ್ಭ ರಮೇಶ್ ಅವರು ಶತಶತಮಾನಗಳಿಂದ ತುಳಿತಕ್ಕೆ ಒಳಗಾಗಿರುವ ವಾಲ್ಮೀಕಿ ಸಮುದಾಯವನ್ನು ಅವಮಾನಿಸಿದ್ದಾರೆ. ರಾಜ್ಯಾದ್ಯಂತ 75 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿರುವ ವಾಲ್ಮೀಕಿ ಸಮುದಾಯದ ಜನರ ಭಾವನೆಗಳಿಗೆ ದಕ್ಕೆಯಾಗಿದೆ. ಈ ವ್ಯಕ್ತಿ ಹುಕ್ಕೇರಿ ವಿದ್ಯುತ್ ಮಂಡಳಿ ಚುನಾವಣೆಯ ಸಂದರ್ಭವೂ ಇದೇ ರೀತಿ ನಡೆದುಕೊಂಡಿದ್ದು, ಸತತವಾಗಿ ವಾಲ್ಮೀಕಿ ಸಮುದಾಯಕ್ಕೆ ಅವಹೇಳನ ಮಾಡುತ್ತಿದ್ದಾರೆ. ಸಮಾಜದಲ್ಲಿ ಮೇಲು, ಕೀಳು ಎಂಬ ಭಾವನೆ ಮೂಡಿಸುವ ಮೂಲಕ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರ…






