ಮಡಿಕೇರಿ ಡಿ.9 NEWS DESK : ಬಲಮುರಿ ಗ್ರಾಮದ ಪೊನ್ನಚ್ಚನ ಸುಬ್ಬಯ್ಯ (85) ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆ ಡಿ.10 ರಂದು ಮಧ್ಯಾಹ್ನ 2 ಗಂಟೆಗೆ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಸೊಸೆ, ಅಳಿಯ, ಮೊಮ್ಮಕ್ಕಳನ್ನು ಅಗಲಿದ್ದಾರೆ.
ಲೇಖಕ: admin
ಮಡಿಕೇರಿ ಡಿ.9 NEWS DESK : ಆದಿಮ ಸಂಜಾತ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವರು 2026-27ರಲ್ಲಿ ನಡೆಯಲಿರುವ 16ನೇ ರಾಷ್ಟ್ರೀಯ ಜನಗಣತಿ ಸಂದರ್ಭ ಪ್ರತ್ಯೇಕವಾಗಿ ‘ಕೊಡವ’ ಎಂದು ದಾಖಲೀಕರಣಗೊಳ್ಳುವಂತೆ ಜನಜಾಗೃತಿ ಮೂಡಿಸುವ ಸಲುವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ 22ನೇ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ಡಿ.15 ರಂದು ತಿತಿಮತಿಯಲ್ಲಿ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬೆಳಿಗ್ಗೆ 10.30 ಗಂಟೆಗೆ ತಿತಿಮತಿಯಲ್ಲಿ ಶಾಂತಿಯುತವಾಗಿ ಮಾನವ ಸರಪಳಿ ನಿರ್ಮಿಸಲಾಗುವುದು ಮತ್ತು ಕೊಡವರ ಪರವಾದ ಸಿಎನ್ಸಿಯ ವಿವಿಧ ಬೇಡಿಕೆಗಳ ಕುರಿತು ಸರಕಾರದ ಗಮನ ಸೆಳೆಯಲಾಗುವುದು ಎಂದು ಹೇಳಿದ್ದಾರೆ. ಕೊಡವಲ್ಯಾಂಡ್ ಭೂ ರಾಜಕೀಯ ಸ್ವಯಂ ಆಡಳಿತ, ಕೊಡವರಿಗೆ ವಿಶ್ವರಾಷ್ಟ್ರ ಸಂಸ್ಥೆಯ ಇಂಡಿಜಿನಸ್ ಪಿಪಲ್ಸ್ ರೈಟ್ಸ್, ಎಸ್.ಟಿ.ಪಟ್ಟಿಯಲ್ಲಿ ವರ್ಗೀಕರಣ, ಸಿಕ್ಕಿಂನ “ಸಂಘ” ಮತಕ್ಷೇತ್ರದಂತೆ ಸಂಸತ್ ಮತ್ತು ವಿಧಾನಸಭೆಯಲ್ಲಿ ವಿಶೇಷ ಪ್ರಾತಿನಿಧ್ಯ ನೀಡಬೇಕು. ಕೊಡವರ ಪೂರ್ವಾರ್ಜಿತ ಭೂ ಹಕ್ಕು ಮತ್ತು ಧಾರ್ಮಿಕ ಸಂಸ್ಕಾರ ತೋಕ್ ಹಕ್ಕು ಚಿರಸ್ಥಾಯಿಯಾಗಿ ಮುಂದುವರೆಯಬೇಕು ಸೇರಿದಂತೆ…
ಮಡಿಕೇರಿ ಡಿ.9 NEWS DESK : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಕೊಡಗು ಇವರ ವತಿಯಿಂದ 2025-26 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು (ರಿನಿವಲ್) ಯೋಜನೆಯಡಿ ಸಾಲ ಸೌಲಭ್ಯ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು ವಿಧ್ಯಾಭ್ಯಾಸ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೆಇಎ/ಸಿಇಟಿ/ನೀಟ್ ಮುಖಾಂತರ ಎಂಬಿಬಿಎಸ್, ಬಿ.ಡಿ.ಎಸ್,ಬಿ.ಇ/ಬಿ.ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬಿ ಆಯುಷ್, ಫಾರ್ಮಸಿ, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ವ್ಯಾಸಂಗಗಳಿಗೆ ಆಯ್ಕೆಯಾಗಿ 2/3 ಅಥವಾ ನಂತರದ ವರ್ಷಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸಾಲ ನೀಡಲಾಗುತ್ತದೆ. ಅರಿವು (ರಿನಿವಲ್) ಯೋಜನೆಯಡಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ವೆಬ್ಸೈಟ್ https://kmdconline.karnataka.gov.in/ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಕಂಪ್ಯೂಟರ್ ನಲ್ಲಿ ಭರ್ತಿ ಮಾಡಿದ ಕೂಡಲೇ ಅರ್ಜಿಗಳನ್ನು ಪ್ರಿಂಟೌಟ್ ಪಡೆದು…
ಮಡಿಕೇರಿ ಡಿ.9 NEWS DESK : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆಯ ತರಬೇತಿ ಭವನ ನಿರ್ಮಾಣಕ್ಕೆ 2 ಕೋಟಿ ರೂ. ಅನುದಾನ ಬಿಡುಗಡೆಯಾಗಲಿದೆ ಎಂದು ಸಂಸ್ಥೆಯ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ತಿಳಿಸಿದ್ದಾರೆ. ನಗರದ ಪೊನ್ನಮ್ಮ ಕುಶಾಲಪ್ಪ ಸ್ಕೌಟ್ಸ್ ಮತ್ತು ಗೈಡ್ಸ್ ಭವನ ಸಭಾಂಗಣದಲ್ಲಿ ನಡೆದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ವಾರ್ಷಿಕ ಮಹಾಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ತರಬೇತಿ ಭವನ ನಿರ್ಮಿಸಲು ರಾಜ್ಯ ಸಂಸ್ಥೆ 2 ಕೋಟಿ ಅನುದಾನ ಬಿಡುಗಡೆ ಮಾಡಲಿದೆ. ಭವನ ನಿರ್ಮಾಣಕ್ಕೆ ಜಾಗದ ಈ ಖಾತೆ ಆಗಬೇಕಾಗಿದ್ದು, ಇದನ್ನು ಮಾಡಿಸಿ ಕೊಡುವಂತೆ ಉಪವಿಭಾಗಧಿಕಾರಿಗಳಲ್ಲಿ ಮನವಿ ಮಾಡಿದರು. ಕುಶಾಲನಗರ ಸ್ಥಳೀಯ ಸಂಸ್ಥೆಯವರು ಪ್ರಸ್ತುತ ಸಾಲಿನಲ್ಲಿ ಅತ್ಯುತ್ತಮ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, 2024-2025ನೇ ಸಾಲಿನ ಉತ್ತಮ ಸ್ಥಳೀಯ ಸಂಸ್ಥೆ ಎಂದು ಗುರುತಿಸಲ್ಪಟಿದೆ. ಮುಂದಿನ ದಿನಗಳಲ್ಲಿ ಅವರನ್ನು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ಡಿಸೆಂಬರ್ 27 ರಿಂದ ಬೆಳಗಾವಿಯಲ್ಲಿ ನಡೆಯುವ ರಾಜ್ಯ ಜಾಂಬೂರಿಯ ಬಗ್ಗೆ ತಿಳಿಸಿದರು.…
ವಿರಾಜಪೇಟೆ ಡಿ.9 NEWS DESK : ವಿರಾಜಪೇಟೆಯಲ್ಲಿ ಹಬ್ಬ ಹರಿದಿನಗಳ ಸಂದರ್ಭದಲ್ಲಿ ರಾತ್ರಿ ವೇಳೆ ಅಂಗಡಿ ಮುಂಗಟ್ಟುಗಳು, ವ್ಯಾಪಾರ ಮಳಿಗೆಗಳನ್ನು ಶೀಘ್ರವಾಗಿ ಮುಚ್ಚುವುದರಿಂದ ಸಾರ್ವಜನಿಕರಿಗೆ ಹಾಗೂ ವ್ಯಾಪಾರಸ್ಥರಿಗೆ ಸಮಸ್ಯೆ ಉಂಟಾಗುತ್ತಿರುವುದರಿಂದ, ವರ್ತಕರುಗಳ ಹಿತದೃಷ್ಟಿಯಿಂದ ಕಾಲಾವಧಿಯನ್ನು ವಿಸ್ತರಿಸಿಕೊಡಬೇಕೆಂದು ವಿರಾಜಪೇಟೆ ನಗರ ವರ್ತಕರ ಸಂಘದ ವತಿಯಿಂದ ಸಂಘದ ಅಧ್ಯಕ್ಷ ಪಿ.ಎ.ಮಂಜುನಾಥ್ ಅವರ ನೇತೃತ್ವದಲ್ಲಿ ವಿರಾಜಪೇಟೆಯ ಡಿವೈಎಸ್ಪಿ ಮಹೇಶ್ ಕುಮಾರ್ ಹಾಗೂ ನಗರ ಠಾಣಾಧಿಕಾರಿ ಹೆಚ್.ಎಸ್. ಪ್ರಮೋದ್ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಮಾತನಾಡಿದ ಅಧ್ಯಕ್ಷ ಪಿ.ಎ..ಮಂಜುನಾಥ್ ಅವರು, ರಾತ್ರಿ ವೇಳೆ ಸಾಮಾನು ಸಗಟುಗಳನ್ನು ಲಾರಿ ಅಥವಾ ಇನ್ನಿತರ ವಾಹನಗಳಲ್ಲಿ ತಂದು ಇಳಿಸಿ ಅದರ ನಿರ್ವಹಣೆ ಮಾಡುವ ಸಂದರ್ಭ ಕಾಲಾವಕಾಶ ಹೆಚ್ಚು ಬೇಕಾಗುತ್ತದೆ. ಅಲ್ಲದೆ ದೋರದಿಂದ ಬಂದವರಿಗೆ ಎನಾದರೂ ವಸ್ತುಗಳನ್ನು ತೆಗೆದುಕೊಳ್ಳಬೇಕೆಂದರೂ ಅಂಗಡಿಗಳು ಇರುವುದಿಲ್ಲ. ಅಲ್ಲದೆ ಕನಿಷ್ಟ ಕಾಫಿಯಾದರೂ ಕುಡಿಬೇಕೆಂದರೆ ಅದಕ್ಕೂ ಇಲ್ಲಿ ಅವಕಾಶ ಇಲ್ಲ. ಎಲ್ಲವೂ ಮುಚ್ಚಿರುತ್ತದೆ. ಇದರಿಂದ ಸಾರ್ವಜನಿಕರಿಗೂ ಸಮಸ್ಯೆ, ವ್ಯಾಪಾರಸ್ಥರಿಗೂ ನಷ್ಟವಾಗುತ್ತದೆ ಎಂದರು. ಈ ಸಮಸ್ಯೆ ಕುರಿತು ವರ್ತಕರ ನಿರಂತರ…
ವಿರಾಜಪೇಟೆ ಡಿ.9 NEWS DESK : ಕಾನೂರು ವಲಯದ ಕೋತೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಕಾರ್ಯಕ್ರಮದಡಿಯಲ್ಲಿ ಹೈನುಗಾರಿಕೆ ಮಾಹಿತಿ ಕಾರ್ಯಕ್ರಮವು ಸಮಗ್ರ ಕೃಷಿಕರಾದ ಕೃಷ್ಣ ಅವರ ಮನೆಯಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಪಶು ವೈದ್ಯಧಿಕಾರಿಗಳಾದ ಡಾ.ಚಂದ್ರಶೇಖರ್ ಉದ್ಘಾಟಿಸಿ, ಮಾತನಾಡಿ ಹೈನುಗಾರಿಕೆಯು ಲಾಭದಾಯಕವಾಗಿದ್ದು, ಹಟ್ಟಿ ರಚನೆ ವಿಧಾನಗಳು, ಹಸುಗಳ ಆಯ್ಕೆ, ಕರುಗಳ ಪಾಲನೆ ಹಸುಗಳಿಗೆ ಸಂಪೂರ್ಣ ಆಹಾರ ನೀಡುವ ಬಗ್ಗೆ, ಹಸುಗಳಿಗೆ ಬರುವ ಸಾಂಕ್ರಾಮಿಕ ಕಾಯಿಲೆಗಳು ಮತ್ತು ಸಿಗುವ ಲಸಿಕೆ ಗಳ ಬಗ್ಗೆ ಮತ್ತು ಪಶು ಇಲಾಖೆಯಿಂದ ಸಿಗುವ ಸೌಲಭ್ಯಗಳ ಬಗ್ಗೆ ಸಂಕ್ಷಿಪ್ತವಾಗಿ ಮಾಹಿತಿಯನ್ನು ನೀಡಿದರು. ಹೈನುಗಾರಿಕೆಯು ಸ್ವಯಂ ಉದ್ಯೋಗಕ್ಕೆ ಒಂದು ಉತ್ತಮ ಅವಕಾಶವಾಗಿದ್ದು, ಇದರಿಂದ ಜನರು ತಮ್ಮದೇ ಆದ ಉದ್ಯೋಗವನ್ನು ಸೃಷ್ಟಿಸಿಕೊಳ್ಳಬಹುದು ಎಂದು ಹೇಳಿದರು. ಕೃಷಿ ಮೇಲ್ವಿಚಾರಕರಾದ ವಸಂತ ಗ್ರಾಮಾಭಿವೃದ್ಧಿ ಯೋಜನೆಯ ಮುಖಾಂತರ ಹೈನುಗಾರಿಕೆಗೆ ಸಿಗುವ ತರಬೇತಿ, ಪ್ರಗತಿ ನಿಧಿ ಇನ್ನಿತರ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕಾನೂರು ಪಶು ಸಖಿಯಾದ ಮೋನಿಕಾ, ಸೇವಾಪ್ರತಿನಿಧಿಗಳು, ಕಾವೇರಿ…
ಕುಶಾಲನಗರ, ಡಿ.9 NEWS DESK : ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ವತಿಯಿಂದ ಕುಶಾಲನಗರ ಪಟ್ಟಣದ ಫಾತಿಮ ಪ್ರೌಢಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರಿಗೆ ತಾಲ್ಲೂಕುಮಟ್ಟದ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸ್ಪರ್ಧಾ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ , ಶಿಕ್ಷಕರು ನಿರಂತರ ವಿದ್ಯಾರ್ಥಿ ಇದ್ದಂತೆ, ತಮ್ಮ ಬೋಧನಾ ಸಾಮರ್ಥ್ಯವನ್ನು ಉತ್ತಮಪಡಿಸಿಕೊಳ್ಳಲು ನಿರಂತರ ಅಧ್ಯಯನದಲ್ಲಿ ತೊಡಗಬೇಕು. ಕಲಿಕೆಯೇ ಬಂಡವಾಳ. ಇದರಲ್ಲಿ ನಿರಂತರತೆಯನ್ನು ಕಾಯ್ದುಕೊಳ್ಳುವುದರಿಂದ ಹೆಚ್ಚು ಕ್ರಿಯಾಶೀಲತೆ ಬೆಳೆಯುತ್ತದೆ. ಇದಕ್ಕೆ ಸಹ-ಪಠ್ಯ ಚಟುವಟಿಕೆ ಸ್ಪರ್ಧೆಗಳೂ ಸಹಾಯಕವಾಗಿದ್ದು, ಇವುಗಳಲ್ಲಿ ಶಿಕ್ಷಕರು ಭಾಗವಹಿಸುವುದರಿಂದ ದೈಹಿಕ, ಮಾನಸಿಕ ಜ್ಞಾನವೂ ವೃದ್ಧಿಸಲಿದ್ದು, ಪಾಠ ಭೋದನೆಗೂ ಸಹಕಾರಿಯಾಗುತ್ತದೆ ಎಂದರು. ಸಹಪಠ್ಯ ಚಟುವಟಿಕೆಗಳು ಶಾಲಾ ಶಿಕ್ಷಣದ ಪ್ರಮುಖ ಭಾಗವಾಗಿದ್ದು, ಅವು ಶೈಕ್ಷಣಿಕ ಪಠ್ಯಕ್ರಮಕ್ಕೆ ಪೂರಕವಾಗಿವೆ. ವಿದ್ಯಾರ್ಥಿಗಳ ಪ್ರತಿಭೆ ಮತ್ತು ಕೌಶಲ್ಯಗಳನ್ನು ಉದ್ದೀಪನಗೊಳಿಸುವ ದಿಸೆಯಲ್ಲಿ ಶಿಕ್ಷಕರಿಗೂ ಇಂತಹ ವೇದಿಕೆಯನ್ನು ಒದಗಿಸುವ ಮೂಲಕ ಅವರ ಪ್ರತಿಭೆಯನ್ನು ಅನಾವರಣಗೊಳಿಸಲು/ಪ್ರದರ್ಶಿಸಲು…
ವಿರಾಜಪೇಟೆ ಡಿ.9 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟದಿಂದ ಕೇರಳ ರಾಜ್ಯಕ್ಕೆ ಸಂಪರ್ಕಿಸುವ ಮುಖ್ಯ ರಸ್ತೆ ಕಾಮಗಾರಿ ಪ್ರಗತಿಯಲ್ಲಿದೆ.
ವಿರಾಜಪೇಟೆ ಡಿ.9 NEWS DESK : ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ವಿರಾಜಪೇಟೆ ಘಟಕ ಹಾಗೂ ವಿರಾಜಪೇಟೆ ಸಂತ ಅನ್ನಮ್ಮ ದೇವಾಲಯದ ಸಹಯೋಗದೊಂದಿಗೆ ನಡೆದ ಕ್ರಿಸ್ಮಸ್ ಗಾನ ತರಂಗ- 2025 ಗಾಯನ ಸ್ಪರ್ಧೆಯು ನಡೆಯಿತು. ವಿರಾಜಪೇಟೆಯ ಸಂತ ಅನ್ನಮ್ಮ ದೇವಾಲಯ ಸಭಾಂಗಣದಲ್ಲಿ ನಡೆದ ಕ್ರಿಸ್ಮಸ್ ಋತುವಿನ ಸಂತೋಷ ಮತ್ತು ಸದ್ಭಾವನೆಯನ್ನು ಆಚರಿಸಲು, ಕ್ಯಾರೋಲ್ಗಳ ಮೂಲಕ ಪ್ರೀತಿ, ಶಾಂತಿ ಮತ್ತು ಏಕತೆಯ ಸಂದೇಶಗಳನ್ನು ಹರಡಲು ಈ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು, ವಿರಾಜಪೇಟೆ ವಲಯದ ಶ್ರೇಷ್ಠ ಗುರುಗಳಾದ ಫಾ. ಜೇಮ್ಸ್ ಡೊಮೇನಿಕ್ ಧ್ವಜಾರೋಹಣ ನೆರವೇರಿಸಿ, ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮೈಸೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ರೆ.ಫಾ. ಎಸ್.ಜೆ.ಪ್ರಾನ್ಸಿಸ್ ಸೆರಾವೋ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಮಾತನಾಡಿ, ಡಿಸೆಂಬರ್ ಬಂತೆಂದರೆ ಸಾಕು ಕ್ರಿಸ್ಮಸ್ ಹಾಗೂ ಹೊಸ ವರ್ಷದ ಹುರುಪು ಎಲ್ಲರಲ್ಲೂ ಮನೆಮಾಡಿರುತ್ತದೆ. ಕ್ರಿಶ್ಚಿಯನ್ ಬಾಂಧವರು ಒಗ್ಗೂಡಿ ಆಚರಿಸುವ ಕ್ರಿಸ್ಮಸ್ ವಿಶ್ವಕ್ಕೆ ಸಮಾನತೆ ಹಾಗೂ ಸಾರ್ಥಕತೆಯ ಪಾಠವನ್ನು ಮಾಡುತ್ತದೆ. ಕ್ರಿಸ್ಮಸ್ ಶಾಂತಿ ಸಮಾಧಾನವನ್ನು ಸಾರುವ ಹಬ್ಬವಾಗಿದ್ದು ಜಗತ್ತಿಗೆ…
ಸೋಮವಾರಪೇಟೆ ಡಿ.9 NEWS DESK : ಆಲೂರುಸಿದ್ದಾಪುರ ಸಮೀಪದ ತಪೋಕ್ಷೇತ್ರ ಮನೆಹಳ್ಳಿ ಮಠದಲ್ಲಿ ಸಂಭ್ರಮದ ದೀಪೋತ್ಸವ ಹಾಗೂ ಶ್ರದ್ಧಾ ಭಕ್ತಿಯಿಂದ ಶ್ರೀ ಗುರುಸಿದ್ಧವೀರೇಶ್ವರರ ಉತ್ಸವ ನಡೆಯಿತು. ಅಕ್ಕಪಕ್ಕದ ಗ್ರಾಮಗಳು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಸಹಸ್ರಾರು ಭಕ್ತಾದಿಗಳು ದೀಪೋತ್ಸವವನ್ನು ಕಣ್ತುಂಬಿಕೊಂಡರು. ಮುಂಜಾನೆಯಿಂದಲೇ ಕ್ಷೇತ್ರದ ದೇವರಿಗೆ ವಿಶೇಷ ಪೂಜೆ, ಅರ್ಚನೆ ನಡೆಯಿತು. ಮಹಿಳೆಯರಾದಿಯಾಗಿ ಹಲವು ಭಕ್ತರು ಮಠದ ಆವರಣವನ್ನು ತಳಿರು ತೋರಣಗಳಿಂದ ಹಾಗೂ ವೈವಿಧ್ಯಮಯ ರಂಗೋಲಿ ಬಿಡಿಸಿ ಅಲಂಕರಿಸಿದ್ದರು. ಕ್ಷೇತ್ರದ ತುಂಬೆಲ್ಲಾ ಹಣತೆಗಳು ಪ್ರಜ್ವಲಿಸುತ್ತಿದ್ದವು. ಸಂಜೆ ನಡೆದ ಧಾರ್ಮಿಕ ಸಮಾರಂಭಲ್ಲಿ ಶಿಕ್ಣಣ ತಜ್ಞ ದಾವಣಗೆರೆಯ ಸಾಗರ್ ಮಾತನಾಡಿ, ಇಂದಿನ ದಿನಮಾನಗಳಲ್ಲಿ ಮಕ್ಕಳು ಅನ್ಯ ಮಾರ್ಗ ಹಿಡಿದಿರುವುದು ಆತಂಕಕಾರಿ ವಿಚಾರವಾಗಿದೆ ಎಂದರು. ಆನ್ ಲೈನ್ ಗೇಮ್ ಗಳಿಗೆಬಲಿಯಾಗುತ್ತಿದ್ದಾರೆ ಎಂತಹ ಪರಿಸ್ಥಿತಿ ಬಂದಿದೆ ಎಂದರು. ನಮ್ಮ ಶಿಕ್ಷಣ ವ್ಯವಸ್ಥೆ ಬದಲಾಗಬೇಕಿದೆ ಇಂದು ಇರುವುದು ಕೇವಲ ಪದವಿಗಾಗಿ ಮಾತ್ರ ಆದರೆ ನೈತಿಕ ಶಿಕ್ಷಣ ಅವಶ್ಯಕತೆ ಇದೆ ಎಂದ ಅವರು ಬಸವಣ್ಣ ನವರ ಅನುಭವ ಮಂಟಪದ ರೀತಿಯ…






