ಲೇಖಕ: admin

ಮಡಿಕೇರಿ ಡಿ.9 NEWS DESK : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಡಿ.10 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪೊನ್ನಂಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ದೂರವಾಣಿ ಸಂಖ್ಯೆ. 08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

Read More

:: NEWS DESK :: ಚಳಿಗಾಲದಲ್ಲಿ ಸಾಮಾನ್ಯವಾಗಿ ಹೆಚ್ಚಿನವರ ದೇಹದ ತೂಕ ಹೆಚ್ಚಾಗುತ್ತದೆ ಎಂದು ಹೇಳುತ್ತಾರೆ. ಇದಕ್ಕೆ ಪ್ರಮುಖ ಕಾರಣ ಈ ಸಮಯದಲ್ಲಿ ನಾವೆಲ್ಲಾ ಅನುಸರಿಸು ತ್ತಿರುವ ಜೀವನಶೈಲಿ ಆಹಾರಪದ್ಧತಿಯೇ ಪ್ರಮುಖ ಕಾರಣ ಎಂದು ಹೇಳಬಹುದು. ಪ್ರಮುಖವಾಗಿ ಚಳಿಗೆ ವ್ಯಾಯಾಮ ಮಾಡಲು ಅಥವಾ ಹೊರಗಡೆ ವಾಕಿಂಗ್ ಮಾಡಲು ಮನಸ್ಸು ಒಪ್ಪುವುದಿಲ್ಲ.ಯಾವುದೇ ರೀತಿಯ ದೈಹಿಕ ಚಟುವಟಿಕೆ ಇರುವುದಿಲ್ಲ ಅಲ್ಲದೇ ಈ ಸಮಯದಲ್ಲಿ ಹೆಚ್ಚಾಗಿ ಎಣ್ಣೆಯಲ್ಲಿ ಕರಿದ ತಿನಿಸುಗಳು, ಸಿಹಿ ತಿಂಡಿಗಳು, ಜಂಕ್ ಫುಡ್, ಕುರುಕುಲು ತಿಂಡಿಗಳನ್ನು ಸೇವಿಸಲು ಮನಸ್ಸು ಹಾತೊರೆಯುತ್ತವೆ ಕೊನೆಗೆ ಇದೇ ಕಾರಣಕ್ಕೆ ದೇಹದ ತೂಕ ಕೂಡ ಹೆಚ್ಚಾಗುತ್ತಾ ಹೋಗುತ್ತದೆ. ಹಾಗಾದ್ರೆ ಚಳಿಗಾಲದಲ್ಲಿ ದೇಹದ ತೂಕ ಇಳಿಸಿಕೊಳ್ಳುವ ವಿಧಾನ… ಹೊರಗಡೆ ನಿಲ್ಲಿ :: ಚಳಿಗಾಲದಲ್ಲಿ, ಬೆಳಗ್ಗೆ 10 ರಿಂದ 15 ನಿಮಿಷಗಳ ಕಾಲ ಸೂರ್ಯನ ಬೆಳಕಿನಲ್ಲಿ ಕಳೆಯುವುದರಿಂದ ವಿಟಮಿನ್ ಡಿ ದೊರೆಯುತ್ತದೆ. ಇದು ಚಯಾಪಚಯ ಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ಕ್ಯಾಲೋರಿ ಸೇವನೆಯನ್ನು ನಿಯಂತ್ರಿ ಸುತ್ತದೆ ಇದು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ.…

Read More

ಬೆಳಗಾವಿ ಡಿ.9 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಇಂದು ಬೆಳಗಾವಿಯ ಸುವರ್ಣಸೌಧದ ಮುಂಭಾಗ ಜಗತ್ತಿನ ಎರಡನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣಗೊಳಿಸಿ, ಶುಭ ಹಾರೈಸಿದರು.

Read More

ಮಡಿಕೇರಿ ಡಿ.9 NEWS DESK : ಕೂಡಿಗೆ ಡಯಟ್ ವತಿಯಿಂದ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆದ ವಿಜ್ಞಾನ ಮಾದರಿ ಪ್ರದರ್ಶನ ಸ್ಪರ್ಧೆಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿ ತರುಣ್ ಎನ್.ಎಂ ವೈಯಕ್ತಿಕ ವಿಭಾಗದಲ್ಲಿ ವಿಜ್ಞಾನ ಮಾದರಿ ಪ್ರದರ್ಶಿಸಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ವಿಜ್ಞಾನ ವಿಭಾಗದ ಶಿಕ್ಷಕರಾದ ಸುದೇಶ್ ಬಿ.ಎಸ್ ಅವರು ಮಾರ್ಗದರ್ಶನವನ್ನು ನೀಡಿದ್ದಾರೆ. ವಿದ್ಯಾರ್ಥಿಯ ಸಾಧನೆಗೆ ಶಾಲೆ ಆಡಳಿತ ಮಂಡಳಿಯವರು, ಮುಖ್ಯ ಶಿಕ್ಷಕಿ, ಸಂಯೋಜಕಿ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಪೋಷಕರು ಮೆಚ್ಚುಗೆ ವ್ಯಕ್ತ ಪಡಿಸಿ, ಶುಭ ಹಾರೈಸಿದರು.

Read More

ವಿರಾಜಪೇಟೆ ಡಿ.9 NEWS DESK : ಪಟ್ಟಣದ ಸಂತ ಅನ್ನಮ್ಮ ಪ್ರೌಢಶಾಲೆಯ ಎನ್‌ಸಿಸಿ ಘಟಕದ ಏರ್ ವಿಂಗ್ ಹಾಗೂ ಆರ್ಮಿ ವಿಂಗ್ ಗಳ ವತಿಯಿಂದ ಸಶಸ್ತ್ರ ಪಡೆಗಳ ಧ್ವಜ ದಿನಯ ಪ್ರಯುಕ್ತ ಎನ್‌ಸಿಸಿ ವಿದ್ಯಾರ್ಥಿಗಳಿಂದ ಸೈಕಲ್ ಜಾಥಾ ನಡೆಯಿತು. ಸಂತ ಅನ್ನಮ್ಮ ಪ್ರೌಢಶಾಲೆಯ ಬಳಿ ವಿದ್ಯಾಸಂಸ್ಥೆ ವ್ಯವಸ್ಥಾಪಕರು ಹಾಗೂ ಸಂತ ಅನ್ನಮ್ಮ ಚರ್ಚ್ ನ ಪ್ರಧಾನ ಗುರುಗಳಾದ ರೆ. ಫಾ. ಜೇಮ್ಸ್ ಡೊಮಿಮಿಕ್ ಹಾಗೂ ಎನ್‌ಸಿಸಿ ವಿಂಗ್ ಕಮಾಂಡರ್ ಆಫೀಸರ್ ಪ್ರವೀಣ್ ಕಾರ್ಯಪ್ಪ ರವರು ಈ ಜಾಥಾಕ್ಕೆ ಚಾಲನೆಯನ್ನು ನೀಡಿದರು. ನಂತರ ಮಾತನಾಡಿದ ಅವರು, ಮಕ್ಕಳಲ್ಲಿ ಧೈರ್ಯ ಮನೋಭಾವನೆ ಮೂಡಬೇಕು. ವಾಯುಮಾಲಿನ್ಯ ಹೆಚ್ಚಳವಾಗುತ್ತಿರುವ ಸಂದರ್ಭ ಅದನ್ನು ನಿಯಂತ್ರಿಸಿ ಪರಿಸರ ಸಂರಕ್ಷಣೆಗೆ ಗಮನ ನೀಡಬೇಕು. ಜೊತೆಗೆ ವಿದ್ಯಾರ್ಥಿಗಳು ಸಮಾಜದಲ್ಲಿ ಆರೋಗ್ಯ ಜಾಗೃತಿಯನ್ನು ಮೂಡಿಸಿ ಎಂದು ಕರೆ ನೀಡಿದರು. ಎನ್‌ಸಿಸಿ ವಿಂಗ್ ಕಮಾಂಡರ್ ಆಫೀಸರ್ ಪ್ರವೀಣ್ ಕಾರ್ಯಪ್ಪ ಮಾತನಾಡಿ, ಇಂದು ಸೇನಾ ವಿಭಾಗಗಳ ದ್ವಜ ದಿನಾಚರಣೆ ಪ್ರಯುಕ್ತ ಸೈಕಲ್ ಜಾಥಾವನ್ನು ಹಮ್ಮಿಕೊಳ್ಳಲಾಗಿದ್ದು, ಆ ಮೂಲಕ…

Read More

ವಿರಾಜಪೇಟೆ ಡಿ.9 NEWS DESK : ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಇನ್ಫೋಸಿಸ್ ಕಂಪೆನಿಯ ವತಿಯಿಂದ 15 ದಿವಸಗಳ ಕಾಲ ಸರ್ಟಿಫಿಕೇಟ್ ಕೋರ್ಸ್ ಅನ್ನು ಕಾಲೇಜಿನಲ್ಲಿ ಆಯೋಜಿಸಲಾಗಿತ್ತು. ಇನ್ಫೋಸಿಸ್ ಕಂಪನಿಯ ಸಿಎಸ್ಆರ್ ಚಟುವಟಿಕೆಯ ಅನ್ವಯ ಈ ಕೋರ್ಸ್ ಅನ್ನು ಆಯೋಜಿಸಲಾಗಿತ್ತು. ಸರ್ಟಿಫಿಕೇಟ್ ಕೋರ್ಸ್ ಗೆ ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ರೆ.ಫಾ. ಮದಲೈ ಮುತ್ತು ಅವರು ಚಾಲನೆ ನೀಡಿದರು. ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಕಾರ್ಯಕ್ರಮದ ಸ್ವರೂಪದ ಬಗ್ಗೆ ಮಾತನಾಡಿದರು. 15 ದಿವಸಗಳ ಕಾಲ ಜರುಗಿದ ಕೋರ್ಸ್ ನಲ್ಲಿ ಇನ್ಫೋಸಿಸ್ ಕಂಪನಿಯ ತರಬೇತುದಾರರಾದ ನಳಿನಿ ಬಸವರಾಜ್ ಹಾಗೂ ವಿನೋದ್ ಮರಿ ರಾಜನ್ ವಿದ್ಯಾರ್ಥಿಗಳಿಗೆ ಸಂವಹನದ ವಿಧಾನ, ಭಾಷೆ ಹಾಗೂ ಸಾಫ್ಟ್ ಸ್ಕಿಲ್ಸ್, ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್, ರೆಸ್ಯುಮ್ ಅನ್ನು ತಯಾರಿಸುವ ಬಗ್ಗೆ, ಸಂದರ್ಶನವನ್ನು ಎದುರಿಸುವ ಬಗ್ಗೆ ತರಬೇತಿಯನ್ನು ನೀಡಿದರು. ಜೊತೆಗೆ ವಿದ್ಯಾರ್ಥಿಗಳಿಗೆ ಗುಂಪು ಚಟುವಟಿಕೆಗಳನ್ನು ನೀಡುವುದರ ಮೂಲಕ ಸಂವಹನ, ಕೌಶಲ್ಯ ವೃದ್ಧಿಗೆ ತರಬೇತಿಗೊಳಿಸಿದರು. ಮಾದರಿ ಸಂದರ್ಶನವನ್ನು…

Read More

ಸೋಮವಾರಪೇಟೆ ಡಿ.9 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸೋಮವಾರಪೇಟೆ ಕಾರ್ಯಕ್ಷೇತ್ರಕ್ಕೆ ಒಳಪಡುವ ಪ್ರಗತಿಬಂಧು ಸ್ವಸಹಾಯ ಗುಂಪುಗಳ ನೇತೃತ್ವದಲ್ಲಿ ಪಟ್ಟಣದ ಮಹಿಳಾ ಸಮಾಜದಲ್ಲಿ ಗಣ ಹೋಮ ಮತ್ತು ಮಾತೃ ವಂದನಾ ಕಾರ್ಯಕ್ರಮ ನಡೆಯಿತು. ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಮುಳ್ಳೂರು ಮಠದ ಸ್ವತಂತ್ರ ಬಸವಲಿಂಗ ಸ್ವಾಮೀಜಿ ಅವರು, ತಾಯಿ ತನ್ನ ನಡವಳಿಕೆ ಮೂಲಕ ಮಕ್ಕಳಿಗೆ ಸಂಸ್ಕಾರ ನೀಡಬೇಕು. ಸಂಸ್ಕಾರದ ಕೊಂಡಿ ಕಳಚಿದರೆ ಸಮಾಜಕ್ಕೆ ಭವಿಷ್ಯವಿಲ್ಲ. ಕುಟುಂಬ ವ್ಯವಸ್ಥೆ ಬಲಗೊಳ್ಳುವುದೇ ಮನೆಯ ತಾಯಿಯಿಂದ ಎಂದ ಅವರು, ಕೌಟುಂಬಿಕ ಸಂಬಂಧಗಳು ಉತ್ತಮಗೊಳ್ಳಬೇಕು. ಇಂಗ್ಲೀಷ್ ಶಿಕ್ಷಣದ ಜೊತೆಗೆ ಸಂಸ್ಕಾರಯುತ ಶಿಕ್ಷಣವೂ ಅತ್ಯಗತ್ಯ ಎಂದು ಪ್ರತಿಪ್ರಾದಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಜನಜಾಗೃತಿ ಸಮಿತಿ ಸ್ಥಾಪಕಾಧ್ಯಕ್ಷ ಎಂ.ಬಿ.ಅಭಿಮನ್ಯುಕುಮಾರ್ ಮಾತನಾಡಿ, ಕ್ಷೇತ್ರದಿಂದ ಮಹಿಳಾ ಸಬಲೀಕರಣ, ರೈತರು, ವೃದ್ಧರು, ವಿದ್ಯಾರ್ಥಿಗಳು, ಅಶಕ್ತರ ಶ್ರೇಯೋಭಿವೃದ್ಧಿಗೆ ಹಲವಷ್ಟು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ. ಇದನ್ನು ಸಹಿಸದ ಕಿಡಿಗೇಡಿಗಳು ಕ್ಷೇತ್ರದ ವಿರುದ್ಧ ಅಪಪ್ರಚಾರದಲ್ಲಿ ತೊಡಗಿರುವುದು ಖಂಡನೀಯ ಎಂದರು. ಮಹಿಳಾ ಸಮಾಜದ…

Read More

ನಾಪೋಕ್ಲು ಡಿ.9 NEWS DESK : ಕಕ್ಕಬ್ಬೆ ಕುಂಜಿಲ ಗ್ರಾಮ ಪಂಚಾಯಿತಿಯ 2025-26ನೇ ಸಾಲಿನ ಮಹಿಳಾ ಗ್ರಾಮ ಸಭೆಯು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಪಂಚಾಯಿತಿ ಅಧ್ಯಕ್ಷರಾದ ಶಿಲ್ಪಾ ಲೋಕೇಶ್ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಕೃಷಿ ಸಖಿ ಯರಾದ ಗಿರಿಜಾ, ಕೃಷಿ ಇಲಾಖೆಯಿಂದ ಸಿಗುವ ಸೌಲಭ್ಯದ ಬಗ್ಗೆ ಸಭೆಯಲ್ಲಿ ಮಾಹಿತಿಯನ್ನು ನೀಡಿ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಡಿದದರು. ನಂತರ ಪಂಚಾಯಿತಿಯ ಅಧ್ಯಕ್ಷರು ಸಭೆಯನ್ನು ಉದ್ದೇಶಿಸಿ ಮಾತನಾಡಿ, ಮಹಿಳೆಯರಿಗೆ ಪಂಚಾಯಿತಿ ಮೂಲಕ ವಿವಿಧ ಇಲಾಖೆಗಳಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಸದೃಢರಾಗುವಂತೆ ಮನವಿ ಮಾಡಿಕೊಂಡರು. ಈ ಸಂದರ್ಭ ಪಂಚಾಯಿತಿಯ ಉಪಾಧ್ಯಕ್ಷರಾದ ಬೀನ ಸುಚಿತ್ರ, ಸದಸ್ಯರುಗಳಾದ ಕಲಿಯಂಡ ಸಂಪನ್ ಅಯ್ಯಪ್ಪ, ಚೋಯ ಮಾಡಂಡ ಹರೀಶ್ ಮೊಣ್ಣಪ್ಪ, ತುಕಡಿ ಸಫಿಯ ನಂಬುಡಮಂಡ ಶೈಲಾ ಕೋಡಿಮಣಿಯಂಡ ಬೊಪಣ್ಣ, ಸಂಜೀವಿನಿ ಒಕ್ಕೂಟದ ಮಹಿಳಾ ಸದಸ್ಯರುಗಳು ಸೇರಿದಂತೆ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ಕಾರ್ಯದರ್ಶಿಗಳು ಹಾಜರಿದ್ದರು. ವರದಿ : ದುಗ್ಗಳ ಸದಾನಂದ.

Read More

ನಾಪೋಕ್ಲು ಡಿ.9 NEWS DESK : ಮೂರ್ನಾಡು ವಿದ್ಯಾ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ. ಬೀದರ್‍ನಲ್ಲಿ ನಡೆದ ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಕ್ವಾಟರ್ ಫೈನಾಲ್ಸ್ ಬಾಲಕಿಯರು ಹಾಗೂ ಫ್ರೀ ಕ್ವಾಟರ್ ಫೈನಲ್ಸ್ ಬಾಲಕರು ಸ್ಥಾನ ಪಡೆದು ಸಂಸ್ಥೆಗೆ ಕೀರ್ತಿ ತಂದು ಕೊಟ್ಟಿರುತ್ತಾರೆ. ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ತೀವ್ರ ಸ್ಪರ್ಧೆಯ ನಡುವೆ ಮೂರ್ನಾಡು ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಆಟದ ಶೈಲಿಯಿಂದ ಗಮನ ಸೆಳೆದರು. ವರದಿ : ದುಗ್ಗಳ ಸದಾನಂದ.

Read More

ನಾಪೋಕ್ಲು ಡಿ.9 NEWS DESK : ಶ್ರೀ ಪೊನ್ನುಮುತ್ತಪ್ಪ ದೇವಾಲಯದಲ್ಲಿ ಡಿ.15 ರಂದು ಪುತ್ತರಿ ವೆಳ್ಳಾಟಂ ಜರುಗಲಿದೆ. ಪ್ರತಿ ವರ್ಷದಂತೆ ಈ ವರ್ಷವೂ ದೇವಾಲಯದಲ್ಲಿ ಪುತ್ತರಿ ಹಬ್ಬದ ಪ್ರಯುಕ್ತ ನಡೆಸಿಕೊಂಡು ಬರುತ್ತಿರುವ ಪುತ್ತರಿ ವೆಳ್ಳಾಟಂ. ಡಿ.15ರ ಸೋಮವಾರ ಮಧ್ಯಾಹ್ನ 3 ಗಂಟೆಗೆ ದೇವಾಲಯದಲ್ಲಿ ಕೇರಳದ ಪ್ರಖ್ಯಾತ ಪರಶಿನಿಕಡವು ಮಡೆಯನ್ ಅವರ ನೃತ್ಯದೊಂದಿಗೆ ದೇವರನ್ನು ಮಲೆ ಇಳಿಸುವ ಮೂಲಕ ಪುತ್ತರಿವೆಳ್ಳಾಟಂಗೆ ಚಾಲನೆ ನೀಡಲಾಗುತ್ತದೆ. ಸಂಜೆ 6 ಗಂಟೆಗೆ ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ ನಡೆಯಲಿದೆ. ರಾತ್ರಿ 7.30 ಗಂಟೆಗೆ ಗುಳಿಗ ದೇವರ ವೆಳ್ಳಾಟಂ, 8 ಗಂಟೆಗೆ ಕುಟ್ಟಿಚಾತ ದೇವರ ವೆಳ್ಳಾಟಂ ನಡೆದ ಬಳಿಕ 9.30 ಗಂಟೆಗೆ ಭಕ್ತರಿಗೆ ಪ್ರಸಾದ ವಿತರಣೆ ಹಾಗೂ ಅನ್ನದಾನ ಕಾರ್ಯಕ್ರಮ ನಡೆಯಲಿದ್ದು, ಭಕ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತ ಶ್ರೀ ಪೊನ್ನು ಮುತ್ತಪ್ಪ ದೇವಾಲಯ ಸಮಿತಿ ಅಧ್ಯಕ್ಷ ಎ.ಕೆ.ಚಂದ್ರನ್ ಹಾಗೂ ಸಮಿತಿ ಪದಾಧಿಕಾರಿಗಳು, ಸದಸ್ಯರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರದಿ : ದುಗ್ಗಳ ಸದಾನಂದ. 

Read More