ನಾಪೋಕ್ಲು ಡಿ.9 NEWS DESK : ಕಕ್ಕಬ್ಬೆ ಕುಂಜಿಲ ಗ್ರಾಮ ಪಂಚಾಯಿತಿಯ 2025-26ನೇ ಸಾಲಿನ ಮಕ್ಕಳ ಗ್ರಾಮ ಸಭೆಯನ್ನು ಸೋಮವಾರ ಗ್ರಾಮ ಪಂಚಾಯಿತಿಯ ಸಭಾಂಗಣದಲ್ಲಿ ನಡೆಸಲಾಯಿತು. ಕುಂಜಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕುಮಾರಿ ಫಾತಿಮಾ ಮುಬಾಶಿರ ಅಧ್ಯಕ್ಷತೆಯಲ್ಲಿ ಆಯೋಜಿಸಿದ ಸಭೆಯಲ್ಲಿ ಕಕ್ಕಬ್ಬೆ ಕುಂಜಿಲ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಶಿಲ್ಪಾ ಲೋಕೇಶ್ ಭಾಗವಹಿಸಿ ಮಾತನಾಡಿ, ಮಕ್ಕಳು ಮಂಡಿಸಿದ ಅಹವಾಲುಗಳನ್ನು ಮುಂದಿನ ಕ್ರಿಯಾಯೋಜನೆಯಲ್ಲಿ ಅಳವಡಿಸಿಕೊಂಡು ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾದ ಬೀನಾ ಸುಚಿತ್ರ, ಸದಸ್ಯರಾದ ಕಲಿಯಂಡ ಸಂಪನ್ ಅಯ್ಯಪ್ಪ, ಚೋಯಮಾಡಂಡ ಹರೀಶ್ ಮೊಣ್ಣಪ್ಪ ,ಕೋಡಿಮಣಿಯಂಡ ಬೋಪಣ್ಣ ,ತುಕಡಿ ಸಾಫಿಯ, ನಂಬುಡಮಂಡ ಶೈಲ ರವರು, ಶಾಲಾ ಅಧ್ಯಾಪಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಭೆಯಲ್ಲಿ ಕೆ.ಪಿ.ಬಾಣೆ ಶಾಲಾ ಮಕ್ಕಳು ಸಂವಿಧಾನ ಪೀಠಿಕೆಯನ್ನು ವಾಚಿಸಿ ಮಕ್ಕಳ ಅಹವಾಲುಗಳನ್ನು ಸಭೆಯಲ್ಲಿ ಮಂಡಿಸಿದರು. ನಂತರ ಮಕ್ಕಳಿಗೆ ಕೆಲವು ಚಟುವಟಿಕೆಗಳನ್ನು ಮಾಡಿಸಿ ಮಾರ್ಗದರ್ಶನ ಮಾಡಲಾಯಿತು. ವರದಿ : ದುಗ್ಗಳ ಸದಾನಂದ.
ಲೇಖಕ: admin
ಮಡಿಕೇರಿ ಡಿ.8 NEWS DESK : ಕಲಾವಿದೆ ಚಿತ್ರ ರವಿ ಆರ್ಯನ್ ಗೆ ರಾಷ್ಟ್ರೀಯ ಮಹಿಳಾ ಸಾಧಕಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬೆಂಗಳೂರು ಪ್ರೆಸ್ ಕ್ಲಬ್ ಆಫ್ ಇಂಡಿಯಾ ಮತ್ತು ಕರ್ನಾಟಕದ ನ್ಯೂಸ್ ಪೇಪರ್ಸ್ ಅಸೋಸಿಯೇಷನ್ನಿಂದ ಚಿತ್ರ ರವಿ ಆರ್ಯನ್ ಅವರ ಆರೋಗ್ಯ ಮತ್ತು ಸಂಗೀತ ಕ್ಷೇತ್ರದ ಸಾಧನೆಗಾಗಿ ಬೆಂಗಳೂರಿನ ಪುಟ್ಟಣ್ಣ ಚೆಟ್ಟಿಯಾರ್ ಸ್ಮಾರಕ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗಣ್ಯರು ರಾಷ್ಟ್ರೀಯ ಮಹಿಳಾ ಸಾಧಕಿಯರ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
ಮಡಿಕೇರಿ ಡಿ.8 NEWS DESK : ಕೊಡಗು ಜಿಲ್ಲೆಯಲ್ಲಿ 1.41 ಲಕ್ಷ ಮಂದಿಯ ಬ್ಯಾಂಕ್ ಖಾತೆಯಲ್ಲಿ ದೀರ್ಘಕಾಲದಿಂದ ಸುಮಾರು 33 ಕೋಟಿಯಷ್ಟು ಹಣವಿದ್ದು, ಈ ಸಂಬಂಧ ವಾರಸುದಾರರು ಹಣ ವಾಪಸ್ಸು ಪಡೆಯಬಹುದಾಗಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬ ಗ್ರಾಹಕರಿಗೂ ಮಾಹಿತಿ ದೊರೆಯುವಂತಾಗಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಲಹೆ ನೀಡಿದ್ದಾರೆ. ದೀರ್ಘ ಕಾಲದಿಂದ ಬ್ಯಾಂಕ್ನಲ್ಲಿರುವ ತಮ್ಮ ಹಣ ಪಡೆಯದೆ ಉಳಿದಿರುವ ಠೇವಣಿ, ವಿಮಾ ಕಂತುಗಳನ್ನು ಅವುಗಳ ಮಾಲೀಕರು ಅಥವಾ ಕಾನೂನುಬದ್ಧ ವಾರಸುದಾರರು ಹಣವನ್ನು ವಾಪಸ್ಸು ಪಡೆಯುವ ಸಂಬಂಧ ‘ನಿಮ್ಮ ಹಣ ನಿಮ್ಮ ಹಕ್ಕು’ ಜಾಗೃತಿ ಶಿಬಿರವನ್ನು ಸೋಮವಾರ ಉದ್ಘಾಟಿಸಿ ಜಿಲ್ಲಾಧಿಕಾರಿ ಮಾತನಾಡಿದರು. ನಗರದ ಜಿ.ಪಂ.ಸಭಾಂಗಣದಲ್ಲಿ ನಡೆದ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ವಿವಿಧ ಕಾರಣಗಳಿಂದ ಬ್ಯಾಂಕ್ನಲ್ಲಿ ದೀರ್ಘಕಾಲದಿಂದ ಇರುವ ಹಣ ಹಾಗೂ ವಿಮಾ ಕಂತನ್ನು ಪಡೆಯದಿರುವ ಗ್ರಾಹಕರಿಗೆ ಮಾಹಿತಿ ನೀಡಿ ಹಣವನ್ನು ವಾಪಸ್ಸು ಪಡೆಯಲು ಹೆಚ್ಚಿನ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್…
ಮಡಿಕೇರಿ ಡಿ.8 NEWS DESK : ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರ ಕುರಿತು ಏಕವಚನ ಪ್ರಯೋಗ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆ ಖಂಡನೀಯವೆಂದು ಕೊಡಗು ಜಿಲ್ಲಾ ಬಿಜೆಪಿಯ ಮಹಿಳಾ ಮೋರ್ಚಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ ಅವರು ಮುಖ್ಯಮಂತ್ರಿಗಳು ಕೇಂದ್ರದ ಮಹಿಳಾ ಸಚಿವರ ಕುರಿತು ಏಕವಚನ ಬಳಕೆ ಮಾಡುವ ಮೂಲಕ ಸಚಿವ ಸ್ಥಾನಕ್ಕೆ ಮತ್ತು ಸಚಿವರ ಹಿರಿತನಕ್ಕೆ ಅಗೌರವ ತೋರಿದ್ದಾರೆ. ಮಹಿಳೆಯರನ್ನು ದೇವತೆಗಳೆಂದು ಪರಿಗಣಿಸಿ ಗೌರವಿಸುವ ಈ ನಾಡಿನಲ್ಲಿ ಮುಖ್ಯಮಂತ್ರಿಯೊಬ್ಬರು ತಮ್ಮ ಘನತೆಗೆ ಮತ್ತು ನಾಡಿನ ಸಂಸ್ಕೃತಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ. ತಾವು ಅಧಿಕಾರದಲ್ಲಿದ್ದ ಅವಧಿಯಲ್ಲೆಲ್ಲ ಹಲವು ಬಾರಿ ಏಕವಚನ ಪ್ರಯೋಗಿಸಿ ಹಿರಿಯರು ಹಾಗೂ ಮಹಿಳೆಯರಿಗೆ ಮುಜುಗರ ಉಂಟು ಮಾಡಿದ್ದಾರೆ. ಇವರ ನಡೆಯ ಕುರಿತು ಆಕ್ಷೇಪಗಳು ವ್ಯಕ್ತವಾದರೂ ತಪ್ಪನ್ನು ತಿದ್ದಿಕೊಳ್ಳುವ ಬದಲು ‘ನಾನು ಗ್ರಾಮೀಣ ಸೊಗಡಿನವನು’ ಎಂದು ಸಮರ್ಥಿಸಿಕೊಳ್ಳುತ್ತಲೇ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿಗಳು ಗ್ರಾಮೀಣ…
ಡಿ.10 ರಂದು ಜನಸಂಪರ್ಕ ಸಭೆ :: ಮಡಿಕೇರಿ ಡಿ.8 NEWS DESK :: ವಿರಾಜಪೇಟೆ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ಡಿ.10 ರಂದು ಬೆಳಗ್ಗೆ 11.30 ಗಂಟೆಯಿಂದ ಮಧ್ಯಾಹ್ನ 12.30 ಗಂಟೆವರೆಗೆ ವಿರಾಜಪೇಟೆ ಉಪವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್(ವಿ), ಸೆಸ್ಕ್, ಮಡಿಕೇರಿ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಹಾಗೆಯೇ ಗೋಣಿಕೊಪ್ಪ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ಡಿಸೆಂಬರ್, 10 ರಂದು ಮಧ್ಯಾಹ್ನ 2.30 ಗಂಟೆಯಿಂದ 03.30 ಗಂಟೆವರೆಗೆ ಗೋಣಿಕೊಪ್ಪ ಉಪವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್(ವಿ), ಸೆಸ್ಕ್, ಮಡಿಕೇರಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ವಿರಾಜಪೇಟೆ ಹಾಗೂ ಗೋಣಿಕೊಪ್ಪ ವ್ಯಾಪ್ತಿಯ ಸಾರ್ವಜನಿಕರು/ ವಿದ್ಯುತ್ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಚಾವಿಸನಿನಿ ಮಡಿಕೇರಿ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ. :: ಡಿ.11…
ಮಡಿಕೇರಿ ಡಿ.8 NEWS DESK : ಮಡಿಕೇರಿ ನಗರ ಸ್ಥಳೀಯ ಸಂಸ್ಥೆಯ ವತಿಯಿಂದ ನಗರದ ಸಾರ್ವಜನಿಕ ಆರೋಗ್ಯ, ಸುರಕ್ಷತೆ ಹಾಗೂ ಪ್ರಾಣಿ ಕಲ್ಯಾಣವನ್ನು ಮನನದಲ್ಲಿಟ್ಟುಕೊಂಡು, ಪ್ರಸ್ತುತ ನಗರ ವ್ಯಾಪ್ತಿಯಲ್ಲಿ ಖಾಸಗಿ ಹಾಗು ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳ ಆವರಣಗಳಲ್ಲಿ ಇರುವ ಬೀದಿ ನಾಯಿಗಳನ್ನು ಆಶ್ರಯ ಕೇಂದ್ರಗಳಿಗೆ ಸ್ಥಳಾಂತರಿಸುವ ಕಾರ್ಯವನ್ನು ಮಡಿಕೇರಿ ನಗರಸಭೆ ಕೈಗೊಂಡಿದೆ. ಈ ಕಾರ್ಯಕ್ರಮದ ಸತತ ಮತ್ತು ಜವಾಬ್ದಾರಿಯುತ ಅನುಷ್ಠಾನಕ್ಕಾಗಿ ಎನ್ಜಿಒ ಸಂಸ್ಥೆಗಳ ಸಹಕಾರ ಅತ್ಯಗತ್ಯವಾಗಿದ್ದು, ಮಡಿಕೇರಿ ನಗರಸಭೆಯೊಂದಿಗೆ ಸಹಭಾಗಿತ್ವಕ್ಕಾಗಿ ವಿನಂತಿಸುತ್ತೇವೆ. ಈ ಆಶ್ರಯ ಕೇಂದ್ರಗಳಿಗೆ ಸ್ಥಳಾಂತರ ಗೊಂಡ ಬೀದಿನಾಯಿಗಳಿಗೆ ಸಹಜ ಸಂರಕ್ಷಣೆ ಪೋಷಣೆ, ಆಹಾರ, ನೀರು, ವೈದ್ಯಕೀಯ ಚಿಕಿತ್ಸೆ, ಜವಾಬ್ದಾರಿ ನಿರ್ವಹಣೆಗಾಗಿ ಎದುರು ನೋಡುತಿದ್ದೇವೆ ಎಂದು ನಗರಸಭಾ ಪೌರಾಯುಕ್ತ ಕೆ.ಆರ್.ರಮೇಶ್ ತಿಳಿಸಿದ್ದಾರೆ. ಈ ಯೋಜನೆಯನ್ನು ಕೈಗೆತ್ತಿಕೊಳ್ಳುವ ಸಂದರ್ಭದಲ್ಲಿ ಅಗತ್ಯ ತಾಂತ್ರಿಕ ಮಾರ್ಗದರ್ಶನ, ಕಾನೂನು ಬೆಂಬಲ ಮತ್ತು ಅನುಮತಿಯ ವ್ಯವಸ್ಥೆಯನ್ನು ಮಡಿಕೇರಿ ನಗರಸಭೆಯು ಒದಗಿಸುತ್ತದೆ. ಪ್ರಾಣಿ ಕಲ್ಯಾಣಕ್ಕೆ ಬದ್ಧವಾಗಿರುವ, ಸರ್ಕಾರಕ್ಕೆ ನೋಂದಾಯಿತ ಮತ್ತು ಮಾನ್ಯತೆ…
ಮಡಿಕೇರಿ ಡಿ.8 NEWS DESK : ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2025-26ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾದ 50 ಯುವ ಬರಹಗಾರರ ಹಸ್ತಪ್ರತಿಗಳ ಪ್ರಕಟಣೆಗೆ ಮಾತ್ರ ರೂ.15 ಸಾವಿರ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿದಾರರು 18 ರಿಂದ 40 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಪ್ರಾಧಿಕಾರದ ಅರ್ಜಿ ನಮೂನೆಯೊಂದಿಗೆ ದೃಢೀಕೃತ ಎಸ್ಎಸ್ಎಲ್ಸಿ ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ನೀಡಬೇಕು. ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ.ಮಾಡಿಸಿದಾಗ 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಟ 60 ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿ/ ಸ್ನಾತಕೋತ್ತರ ಪದವಿ(ಪಿಎಚ್ಡಿ)ಗೆ ಸಿದ್ಧಪಡಿಸಿದ ಸಂಶೋಧನಾ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯ ಪ್ರಕಾರಗಳಿಗೆ ಸಂಬಂಧಿಸಿದಂತೆ…
ಮಡಿಕೇರಿ ಡಿ.8 NEWS DESK : 66/11 ಕೆ.ವಿ ಶನಿವಾರಸಂತೆ ಮತ್ತು 66/11 ಕೆವಿ ಮಲ್ಲಿಪಟ್ಟಣ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಈ ಉಪ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ ಮಾರ್ಗಗಳಲ್ಲ್ಲಿ ಡಿಸೆಂಬರ್, 10 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಶನಿವಾರಸಂತೆ ಶಾಖೆಯ ಶನಿವಾರಸಂತೆ ಪಟ್ಟಣ, ಅಪ್ಪ್ಡಶೆಟ್ಟಳ್ಳಿ, ಮಾದ್ರೆ, ಚಿಕ್ಕಕೊಳತ್ತೂರು, ದುಂಡಳ್ಳಿ, ಬೆಂಬಳೂರು, ಬಿಳಹ, ಹಂಡ್ಲಿ, ಕಿತ್ತೂರು, ಸಂಪಿಗೆದಳ, ಮಾದ್ರದಳ್ಳಿ, ಮಣಗಲಿ, ಗೌಡಳ್ಳಿ, ಬೀಟಿಕಟ್ಟೆ, ಶುಂಠಿ, ಶಾಂತ್ವೇರಿ, ಬಸವನಕೊಪ್ಪ, ಕೊಡ್ಲಿಪೇಟೆ ಶಾಖೆಯ ಮುಳ್ಳೂರು, ಗೋಪಾಲಪುರ, ಜಾಗೇನಹಳ್ಳಿ, ನಿಡ್ತ, ಚೌಡೇನಹಳ್ಳಿ, ದೊಡ್ಡಳ್ಳಿ, ಹರೆಹೊಸೂರು, ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ಬೆಸೂರು ಪಂಚಾಯಿತಿ, ನೀರುಗುಂದ, ನಿಲುವಾಗಿಲು, ದೊಡ್ಡಭಂಡಾರ, ಬ್ಯಾಡಗೊಟ್ಟ, ಕೊಡ್ಲಿಪೇಟೆ ಟೌನ್, ಅವರದಾಳು, ಬೆಂಬಳೂರು, ದೊಡ್ಡಕೊಡ್ಲಿ, ಕ್ಯಾತೆ, ದೊಡ್ಡಕುಂದಾ, ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಬೆಳಗಾವಿ ಡಿ.8 NEWS DESK : ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ – 2025 ಆರಂಭವಾಗಿದ್ದು, ಮೊದಲ ದಿನವೇ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರೊಂದಿಗೆ ಹಾಗೂ ಇತರ ಶಾಸಕರೊಂದಿಗೆ ವಿವಿಧ ಅಭಿವೃದ್ಧಿ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಿದರು.
ಮಡಿಕೇರಿ ಡಿ.8 NEWS DESK : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ವಿಮೆ ಸೌಲಭ್ಯ ಕಲ್ಪಿಸುವ ಕಾರ್ಯಕ್ರಮಕ್ಕೆ ರಿಪಬ್ಲಿಕ್ ಟಿವಿ ನೆಟ್ವರ್ಕ್ ಹಾಗೂ ಹೆಡ್ ಇಂಟರ್ ನ್ಯಾಷನಲ್ ಬಿಸಿನೆಸ್ ಸಂಸ್ಥೆ ಅಧ್ಯಕ್ಷ ಚೇರಂಡ ಕಿಶನ್ ಮಾದಪ್ಪ ಚಾಲನೆ ನೀಡಿದರು. ನಗರದ ಪತ್ರಿಕಾ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿಮೆ ಕಾರ್ಡ್ ಹಸ್ತಾಂತರಿಸಿ ಮಾತನಾಡಿದ ಕಿಶನ್ ಮಾದಪ್ಪ ಅವರು, ಸಮಾಜಕ್ಕಾಗಿ ದುಡಿಯುವ ಪತ್ರಕರ್ತರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಪತ್ರಕರ್ತರ ಸಂಕಷ್ಟಗಳಿಗೆ ವೈಯಕ್ತಿಕವಾಗಿಯು ಸ್ಪಂದಿಸುವುದಾಗಿ ಭರವಸೆ ನೀಡಿದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಕರ್ನಾಟಕ ವನ್ಯಜೀವಿ ಮಂಡಳಿ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಮಾತನಾಡಿ, ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕಾ ರಂಗವನ್ನು ಸರಕಾರ ನಿಲ್ರ್ಯಕ್ಷಿಸುತ್ತ ಬಂದಿದೆ. ಸರಕಾರಗಳು ಪತ್ರಕರ್ತರ ಪರ ಚಿಂತನೆ ಮಾಡಿ ಅವರಿಗೆ ಶಕ್ತಿ ತುಂಬಿ ಭದ್ರತೆ ನೀಡುವ ಜವಾಬ್ದಾರಿ ಹೊಂದಿರಬೇಕು. ಜನರಿಗೆ ಸರಕಾರದ ವೈಫಲ್ಯ ಕಂಡುಬಂದಲ್ಲಿ ಬದಲಿಸುವ ಶಕ್ತಿಯಿದೆ. ಈ ವೈಫಲ್ಯಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಧ್ಯಮ ಕ್ಷೇತ್ರ…






