ಮಡಿಕೇರಿ NEWS DESK ಅ.3 : ಕ್ಲೀನ್ ಕೊಡಗು ಸ್ವಚ್ಛತಾ ಅಭಿಯಾನದ ಅಂಗವಾಗಿ ಮಾಜಿ ಸೈನಿಕರು, ನಿವೃತ್ತ ಸರಕಾರಿ ನೌಕರರು ಹಾಗೂ ಸಾರ್ವಜನಿಕರು ಮಡಿಕೇರಿಯಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು. ಫೀ.ಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಿಂಭಾಗದ ರಸ್ತೆಯಿಂದ ಐಟಿಐ ಜಂಕ್ಷನ್ ವರೆಗೆ ರಸ್ತೆಯ ಬದಿಯಲ್ಲಿದ್ದ ತ್ಯಾಜ್ಯ ಹಾಗೂ ಕಸವನ್ನು ತೆರವುಗೊಳಿಸಿದರು. ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಸ್ವಚ್ಛತಾ ಅಭಿಯಾನಕ್ಕೆ ಕೈಜೋಡಿಸಬೇಕು ಎಂದು ಪ್ರಮುಖರು ಮನವಿ ಮಾಡಿದರು. ಸ್ವಚ್ಛತಾ ಕಾರ್ಯದಲ್ಲಿ ಪ್ರಮುಖರಾದ ಪೊನ್ನಚೆಟ್ಟಿರ ಸುರೇಶ್, ಚೆರಿಯಮನೆ ಸುಂದರಮ್ಮ, ಪೂಜಾರಿರ ಪದ್ಮನಾಭ, ಬಿಟ್ಟಿರ ರಾಘವಯ್ಯ, ಯಾಲದಾಳು ಸನ್ನಿ, ಅಚ್ಚಲಪಾಡಿ ತಿಮ್ಮಯ್ಯ, ಕೋಳುಮಾಡಂಡ ರಾಮಚಂದ್ರ, ಇಂದಿರ, ನಯನ್ ಹಾಗೂ ತಾಜ್ ರೆಸಾರ್ಟ್ ನ ಪ್ರೀತಿ ಸೇರಿದಂತೆ ಮಾಜಿ ಸೈನಿಕರು, ನಿವೃತ್ತ ನೌಕರರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
ಲೇಖಕ: admin
ವಿರಾಜಪೇಟೆ, NEWS DESK ಅ.03: ಕೊಡಗು ಜಿಲ್ಲೆ ಅನುದಾನ ರಹಿತ ಶಾಲೆಗಳ ಒಕ್ಕೂಟದ ಪದಾಧಿಕಾರಿಗಳು ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರನ್ನು ಭೇಟಿಯಾಗಿ, ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಸೇರಿದಂತೆ ವಿವಿಧ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಿದರು. ಸಭೆಯಲ್ಲಿ ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದ ಸಮಸ್ಯೆಗಳು, ಶಾಲೆಗಳಿಗೆ ಅನ್ವಯವಾಗುವ ನಿಯಮಗಳು ಹಾಗೂ ಇನ್ನಿತರ ಪ್ರಮುಖ ವಿಷಯಗಳ ಕುರಿತು ಶಾಸಕರೊಂದಿಗೆ ಸಮಾಲೋಚನೆ ನಡೆಸಲಾಯಿತು. ಖಾಸಗಿ ಶಾಲೆಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆಯೂ ಒಕ್ಕೂಟದ ಪದಾಧಿಕಾರಿಗಳು ಗಮನ ಸೆಳೆದರು. ಈ ಸಂದರ್ಭದಲ್ಲಿ ಕೊಡಗು ಅನುದಾನ ರಹಿತ ಶಾಲೆಗಳ ಒಕ್ಕೂಟದ ಅಧ್ಯಕ್ಷ ಕೊಟ್ರಂಗಡ ತಿಮ್ಮಯ್ಯ, ಉಪಾಧ್ಯಕ್ಷ ಮಣಿ ಮಹಮ್ಮದ್, ಕಾನೂನು ಸಲಹೆಗಾರ ಎಂ. ಎಸ್. ಪೂವಯ್ಯ, ಸದಸ್ಯರಾದ ಮದಂಡ ತಿಮ್ಮಯ್ಯ, ಶ್ವೇತಾ ಚಂಗಪ್ಪ, ಇಲಾಯಸ್ ಹಾಗೂ ನೀರನ್ ಉತ್ತಪ್ಪ ಉಪಸ್ಥಿತರಿದ್ದರು.
ಬೆಂಗಳೂರು, ಅ.2 NEWS DESK :: ಮಹಾತ್ಮ ಗಾಂಧೀಜಿಯವರು ಕರ್ನಾಟಕದಲ್ಲಿ ಭೇಟಿ ನೀಡಿದ್ದ ವಿವಿಧ 87 ಐತಿಹಾಸಿಕ ಸ್ಥಳಗಳಲ್ಲಿ ‘ಗಾಂಧಿ ಸ್ಮಾರಕ ಸ್ತಂಭ’ ಸ್ಥಾಪಿಸುವ ಕರ್ನಾಟಕ ಸರ್ಕಾರದ ಆಯವ್ಯಯ ಘೋಷಣೆಯ ಭಾಗವಾಗಿ, ರಾಜ್ಯದ ಮೊದಲ ಗಾಂಧಿ ಸ್ಮಾರಕ ಸ್ತಂಭವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಬೆಂಗಳೂರಿನ ಇಂದಿನ ಸರ್ಕಾರಿ ಕಲಾ ಕಾಲೇಜು (GAS ಕಾಲೇಜು) ಆವರಣದಲ್ಲಿ ಅನಾವರಣಗೊಳಿಸಿದರು. ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷಗಳು ಪೂರೈಸಿದ ನೆನಪಿಗಾಗಿ “ಗಾಂಧಿ ಭಾರತ” ಅಭಿಯಾನದಡಿಯಲ್ಲಿ ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಈ ಸ್ಮಾರಕ ಸ್ತಂಭಗಳನ್ನು ನಿರ್ಮಿಸಲಾಗುತ್ತಿದೆ. ಶಾಸಕರು ಹಾಗೂ ಗಾಂಧಿ ಭಾರತ ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ಎಚ್. ಕೆ. ಪಾಟೀಲ, ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಹಾಗೂ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾದ ಬಿ.ಎಲ್.ಶಂಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿಗಳಾದ ಜೆ. ಮಂಜುನಾಥ್ ಐ.ಎ.ಎಸ್. ಸೇರಿದಂತೆ…
ಬೆಂಗಳೂರು, ಅ.2 NEWS DESK :: ಮಹಾತ್ಮ ಗಾಂಧೀಜಿಯವರು ಕರ್ನಾಟಕದಲ್ಲಿ ಭೇಟಿ ನೀಡಿದ್ದ ವಿವಿಧ 87 ಐತಿಹಾಸಿಕ ಸ್ಥಳಗಳಲ್ಲಿ ‘ಗಾಂಧಿ ಸ್ಮಾರಕ ಸ್ತಂಭ’ ಸ್ಥಾಪಿಸುವ ಕರ್ನಾಟಕ ಸರ್ಕಾರದ ಆಯವ್ಯಯ ಘೋಷಣೆಯ ಭಾಗವಾಗಿ, ರಾಜ್ಯದ ಮೊದಲ ಗಾಂಧಿ ಸ್ಮಾರಕ ಸ್ತಂಭವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಬೆಂಗಳೂರಿನ ಇಂದಿನ ಸರ್ಕಾರಿ ಕಲಾ ಕಾಲೇಜು (GAS ಕಾಲೇಜು) ಆವರಣದಲ್ಲಿ ಅನಾವರಣಗೊಳಿಸಿದರು. ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷಗಳು ಪೂರೈಸಿದ ನೆನಪಿಗಾಗಿ “ಗಾಂಧಿ ಭಾರತ” ಅಭಿಯಾನದಡಿಯಲ್ಲಿ ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಈ ಸ್ಮಾರಕ ಸ್ತಂಭಗಳನ್ನು ನಿರ್ಮಿಸಲಾಗುತ್ತಿದೆ. ಶಾಸಕರು ಹಾಗೂ ಗಾಂಧಿ ಭಾರತ ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ಎಚ್. ಕೆ. ಪಾಟೀಲ, ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಹಾಗೂ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾದ ಬಿ.ಎಲ್.ಶಂಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿಗಳಾದ ಜೆ. ಮಂಜುನಾಥ್ ಐ.ಎ.ಎಸ್. ಸೇರಿದಂತೆ…
ವಿರಾಜಪೇಟೆ, NEWS DESK ಅ.02: ಸಮೀಪದ ಬೇಟೋಳಿ ರಾಮನಗರದಲ್ಲಿ ಗಾಂಧಿ ಜಯಂತಿಯ ಪ್ರಯುಕ್ತ ಹೆಗ್ಗಳ ಗ್ರಾಮದ ಸರ್ಕಾರಿ ಪ್ರೌಢಶಾಲೆ ಹಾಗೂ ಸೇವಾ ಭಾರತಿ ಸಂಸ್ಥೆಯ ಸಹಯೋಗದಲ್ಲಿ ಸ್ವಚ್ಛತಾ ಅಭಿಯಾನವನ್ನು ಆಯೋಜಿಸಲಾಯಿತು. ಮಾಯಿಲಮಕ್ಕಿಯಿಂದ ರಾಮನಗರದವರೆಗೆ ನಡೆದ ಅಭಿಯಾನದಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಹಾಗೂ ಸೇವಾ ಭಾರತಿ ತಂಡದ ಸದಸ್ಯರು ರಸ್ತೆಯ ಇಕ್ಕೆಲಗಳಲ್ಲಿ ಎಸೆಯಲಾಗಿದ್ದ ಪ್ಲಾಸ್ಟಿಕ್, ಪೇಪರ್, ಬಾಟಲಿ ಸೇರಿದಂತೆ ತ್ಯಾಜ್ಯವನ್ನು ಸಂಗ್ರಹಿಸಿ ಪಂಚಾಯತ್ ವಾಹನಕ್ಕೆ ಹಾಕಿದರು. ರಾಮನಗರದಲ್ಲಿ ವಿದ್ಯಾರ್ಥಿಗಳು ಸ್ವಚ್ಛತಾ ಅಭಿಯಾನದ ಮಹತ್ವ ಹಾಗೂ ಪರಿಸರ ಸಂರಕ್ಷಣೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡು ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಸೇವಾ ಭಾರತಿ ಸಂಸ್ಥೆಯ ರಕ್ಷಿತ್, ಗೌರಿಶಂಕರ್, ವಿದ್ಯಾ ಪ್ರಸಾದ್, ಸಂಗೀತ, ಹೆಗ್ಗಳ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಸುನಿತಾ ಹಾಗೂ ಸಹಶಿಕ್ಷಕರು, ಅಭಿಯಾನಕ್ಕೆ ಸಹಕಾರ ನೀಡಿದ ವೇಣುಗೋಪಾಲ್, ರಘು, ಲತೀಶ್, ಸುದೀಶ್, ಮಹೇಶ್, ರಜಾಕ್, ಗ್ರಾಮಸ್ಥರು ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿರಾಜಪೇಟೆ, NEWS DESK ಅ.02: ಪಟ್ಟಣದ ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಎನ್‌ಸಿಸಿ ಘಟಕದ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು. ಬಳಿಕ ವಿದ್ಯಾರ್ಥಿಗಳಿಂದ ಭಗವದ್ಗೀತೆ, ಕುರಾನ್ ಹಾಗೂ ಬೈಬಲ್ ಧಾರ್ಮಿಕ ಗ್ರಂಥಗಳ ಪ್ರಾರ್ಥನೆ ನಡೆಯಿತು. ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂತ ಅನ್ನಮ್ಮ ಚರ್ಚ್‌ನ ಸಹಾಯಕ ಗುರುಗಳಾದ ಫಾ. ವಿಲ್ಫ್ರೆಡ್, “ಇಬ್ಬರು ಆದರ್ಶ ಪುರುಷರ ಜಯಂತಿಯನ್ನು ನಾವಿಂದು ಆಚರಿಸುತ್ತಿದ್ದು, ಅವರ ತತ್ವ, ಸಿದ್ಧಾಂತ ಹಾಗೂ ಪರಿಕಲ್ಪನೆಗಳು ಇಂದಿಗೂ ಪ್ರಸ್ತುತವಾಗಿವೆ. ಅವರ ಆದರ್ಶಗಳನ್ನು ಪಾಲಿಸುವ ಮೂಲಕ ಭವ್ಯ ರಾಷ್ಟ್ರ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಪಣ ತೊಡಬೇಕು” ಎಂದು ಕರೆ ನೀಡಿದರು. ಸಂತ ಅನ್ನಮ್ಮ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಸವರಿನ್ ಡಿಸೋಜ ಮಾತನಾಡಿ, “ಭಾರತದ ಇತಿಹಾಸದಲ್ಲಿ ಸದಾ ಸ್ಮರಣೀಯರಾಗಿರುವ ಮಹಾತ್ಮ ಗಾಂಧೀಜಿ ಹಾಗೂ…
ವಿರಾಜಪೇಟೆ, NEWS DESK ಅ.02: ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವತಿಯಿಂದ ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಗಾಂಧಿ ಜಯಂತಿಯ ಅಂಗವಾಗಿ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವಿದ್ಯಾರ್ಥಿಗಳು ಕಾಲೇಜಿನ ಒಳ ಆವರಣದಲ್ಲಿ ಸ್ವಚ್ಛತಾ ಶ್ರಮದಾನ ನಡೆಸಿದರು. ಈ ಸಂದರ್ಭದಲ್ಲಿ ಕಾಲೇಜಿನ ವ್ಯವಸ್ಥಾಪಕರಾದ ರೆ. ಫಾ. ಮದಲೈ ಮುತ್ತು ಮಾತನಾಡಿ, ಮಹಾತ್ಮ ಗಾಂಧೀಜಿಯವರ ಪರಿಕಲ್ಪನೆಗಳು ಹಾಗೂ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು. ಎನ್‌ಎಸ್‌ಎಸ್ ಮಹಾತ್ಮ ಗಾಂಧೀಜಿಯವರ ಪರಿಕಲ್ಪನೆಯಾಗಿದ್ದು, ವಿದ್ಯಾರ್ಥಿಗಳು ಸದಾ ಸಮಾಜಕ್ಕೆ ಮಾದರಿಯಾಗಿ ಬದುಕಬೇಕು ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಅವರು ಗಾಂಧೀಜಿಯವರ ಚಿಂತನೆಗಳು ಹಾಗೂ ಆದರ್ಶಗಳ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎನ್‌ಎಸ್‌ಎಸ್ ಅಧಿಕಾರಿ ಬಿ.ಎನ್. ಶಾಂತಿಭೂಷಣ್, ಎನ್‌ಎಸ್‌ಎಸ್ ಘಟಕದ ವಿದ್ಯಾರ್ಥಿ ನಾಯಕರಾದ ಮುತ್ತಪ್ಪ, ಲಿಪಿಕಾ, ಸಾಧ್ವಿಕ, ಅನನ್ಯ, ಲಿತಿನ್, ಆಪ್ತ ತಮ್ಮಯ್ಯ, ಬೋಪಣ್ಣ, ನೇಹಾ ಸೇರಿದಂತೆ ಸ್ವಯಂಸೇವಕ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನಾಪೋಕ್ಲು, NEWS DESK ಅ.2: ಬೆಟ್ಟಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಕ್ಕದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ನಡೆಸಲಾಯಿತು. ಬಕ್ಕದ ನಾಲ್ಕು ಸ್ವಸಹಾಯ ಸಂಘಗಳು, ಗಜಾನನ ಭಕ್ತ ಮಂಡಳಿ ಹಾಗೂ ಸಾರ್ವಜನಿಕರು ಸಲ್ಲಿಸಿದ ಮನವಿಯ ಮೇರೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕರಾದ ಎ.ಎಸ್. ಪೊನ್ನಣ್ಣ ಅವರು ಸಮುದಾಯ ಭವನ ನಿರ್ಮಾಣಕ್ಕೆ ಮಂಜೂರಾತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಗುತ್ತಿಗೆದಾರ ಗೌರೀಶ್ ಹಾಗೂ ಭಾಗಮಂಡಲ ಕಾಂಗ್ರೆಸ್ ವಲಯಾಧ್ಯಕ್ಷ ವೆಂಕಟೇಶ್ ಅವರ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಸಿ, ಸಮುದಾಯ ಭವನ ನಿರ್ಮಾಣಕ್ಕೆ ಸೂಕ್ತ ಸ್ಥಳವನ್ನು ಗುರುತಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೆಟ್ಟಗೇರಿ ಗ್ರಾಮ ಪಂಚಾಯಿತಿ ವಲಯ ಕಾಂಗ್ರೆಸ್ ಅಧ್ಯಕ್ಷ ಕೊಡಗನ ತೀರ್ಥಕುಮಾರ್ ಅವರು ಮಾತನಾಡಿ, ಸಮುದಾಯ ಭವನ ನಿರ್ಮಾಣದಿಂದ ಸ್ಥಳೀಯರಿಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು. ಭಾಗಮಂಡಲ ಕಾಂಗ್ರೆಸ್ ವಲಯಾಧ್ಯಕ್ಷ ವೆಂಕಟೇಶ್ ಅವರು ಅಗತ್ಯ ಸಲಹೆಗಳನ್ನು ನೀಡಿದರು. ಶ್ರೀಕೃಷ್ಣ ಸಂಘದ ಕಾರ್ಯದರ್ಶಿ ಹೊಸೋಕ್ಲು ಮೊನ್ನಪ್ಪ ಅವರು ಮಾತನಾಡಿ, ಸಮುದಾಯ ಭವನ…
ಮಡಿಕೇರಿ ಅ.2 NEWS DESK : ನಾವು ವನ್ಯಜೀವಿಗಳ ಬಗ್ಗೆ ಪ್ರೀತಿ ಮತ್ತು ಗೌರವವನ್ನು ಬೆಳೆಸಿಕೊಂಡು ಮಾನವ- ವನ್ಯಜೀವಿಗಳ ಸಂಘರ್ಷವನ್ನು ತಡೆಯುವ ಮೂಲಕ ನಮ್ಮ ಉತ್ತಮ ಭವಿಷ್ಯಕ್ಕಾಗಿ ಪ್ರಕೃತಿ, ಪರಿಸರ ಸಂರಕ್ಷಣೆ ಮತ್ತು ಮುಂದಿನ ಪೀಳಿಗೆಯ ರಕ್ಷಣೆಗೆ ಹೆಚ್ಚಿನ ಕಾಳಜಿ ವಹಿಸಬೇಕಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಾರುತಿ ಎಸ್.ಬಾಗಡೆ ಹೇಳಿದರು. ಕರ್ನಾಟಕ ಅರಣ್ಯ ಇಲಾಖೆಯ ಕೊಡಗು ಅರಣ್ಯ ವೃತ್ತ ಹಾಗೂ ಮಡಿಕೇರಿ ವನ್ಯಜೀವಿ ವಿಭಾಗದ ವತಿಯಿಂದ ಜಿಲ್ಲಾ ಪ್ರವಾಸೋದ್ಯಮ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಗ್ರೀನ್ ಸಿಟಿ ಫೋರಂ, ಕ್ಲೀನ್ ಕೂರ್ಗ್ ಇನಿಷಿಯೇಟಿವ್, ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ, ಇಕೋ ಕ್ಲಬ್ ಘಟಕ ಹಾಗೂ ವಿವಿಧ ಸಂಘ- ಸಂಸ್ಥೆ ಶಾಲಾ-ಕಾಲೇಜು ಸಹಯೋಗದೊಂದಿಗೆ “ಆವಾಸಸ್ಥಾನಗಳ ಸಂಪರ್ಕ, ವನ್ಯಜೀವಿಗಳ ಅಭಿವೃದ್ಧಿ” ಎಂಬ ಘೋಷವಾಕ್ಯದೊಂದಿಗೆ 72 ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಏರ್ಪಡಿಸಿದ್ದ ವನ್ಯಜೀವಿ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲು ಮಡಿಕೇರಿ ನಗರದ ಅರಣ್ಯ ಭವನದಲ್ಲಿ ಏರ್ಪಡಿಸಿದ್ದ ಬೈಸಿಕಲ್ ಮತ್ತು…
ನಾಪೋಕ್ಲು, NEWS DESK ಅ.02: ಬೆಳಕು ಸಾಹಿತ್ಯ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಟ್ರಸ್ಟ್ ವತಿಯಿಂದ ನೀಡಲಾಗುವ ರಾಷ್ಟ್ರಮಟ್ಟದ ‘ಕಾಯಕ ಕಣ್ಣಮಣಿ’ ಪ್ರಶಸ್ತಿಗೆ ಮಡಿಕೇರಿ ತಾಲೂಕಿನ ಹಳೇ ತಾಲೂಕು ಅಂಗನವಾಡಿ ಕೇಂದ್ರದ ಅಂಗನವಾಡಿ ಕಾರ್ಯಕರ್ತೆ ಭಾಗ್ಯವತಿ ಸಿ.ಜೆ. ಅವರನ್ನು ಆಯ್ಕೆ ಮಾಡಿ ಸನ್ಮಾನಿಸಲಾಯಿತು. ಶಿಕ್ಷಣ ಕ್ಷೇತ್ರದಲ್ಲಿ ಅವರು ಸಲ್ಲಿಸುತ್ತಿರುವ ಅನನ್ಯ ಸೇವೆ ಹಾಗೂ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಟ್ರಸ್ಟ್‌ನ ಸಂಸ್ಥಾಪಕ ಅಧ್ಯಕ್ಷ ಅಣ್ಣಪ್ಪ ಮೇಟಿಗೌಡ ತಿಳಿಸಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆದ 126ನೇ ಚಿಗುರು ಸಮ್ಮೇಳನದ ವೇದಿಕೆಯಲ್ಲಿ ಭಾಗ್ಯವತಿ ಸಿ.ಜೆ. ಅವರಿಗೆ ಪ್ರಶಸ್ತಿಯನ್ನು ಗೌರವಪೂರ್ವಕವಾಗಿ ಪ್ರದಾನ ಮಾಡಲಾಯಿತು.






