ಮಡಿಕೇರಿ NEWS DESK ಆ.18 : ನಗರಸಭೆ ವ್ಯಾಪ್ತಿಯ ವಿವಿಧ ಶಾಲೆಗಳಾದ ಮೈಸೂರು ರಸ್ತೆಯ ಚರ್ಚ್ ಸಮೀಪದ ಶಾಲೆ, ಹಿಂದೂಸ್ತಾನಿ ಶಾಲೆ, ನಗರಸಭಾ ಹಿರಿಯ ಪ್ರಾಥಮಿಕ ಶಾಲೆ ಮತ್ತು ಎ.ವಿ. ಶಾಲೆಗಳ ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ ಮಾಡುವ ಮೂಲಕ ಮಡಿಕೇರಿ ನಗರ ಯುವ ಕಾಂಗ್ರೆಸ್ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣಗೊಳಿಸಿತು. ಸ್ವಾತಂತ್ರ‍್ಯ ದಿನಾಚರಣೆ ಸಮಾಜದ ಪ್ರತಿಯೊಬ್ಬರಿಗೂ ಸ್ಪಂದಿಸುವ ಹಾಗೂ ಅಗತ್ಯವಿರುವವರಿಗೆ ನೆರವಾಗುವ ದಿನವಾಗಬೇಕು. ಮಳೆ ಹಾಗೂ ಬಿಸಿಲಿನಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳ ದೈನಂದಿನ ಅಗತ್ಯಗಳಿಗೆ ಸ್ಪಂದಿಸುವ ಮೂಲಕ ಸಾಮಾಜಿಕ ಜವಾಬ್ದಾರಿಯನ್ನು ನಿಭಾಯಿಸುವ ಪ್ರಯತ್ನ ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದರು. ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸೋಮಣ್ಣ, ನಗರಸಭಾ ಮಾಜಿ ಉಪಾಧ್ಯಕ್ಷ ಟಿ.ಎಂ.ಅಯ್ಯಪ್ಪ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುದಯ್ ನಾಣಯ್ಯ, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ರಾಹುಲ್ ಮಾರ್ಷಲ್…
ಲೇಖಕ: admin

ಮಡಿಕೇರಿ ಆ.17 NEWS DESK : ಶ್ರೀ ಕೋಟಿ ಮಹಾಗಣಪತಿ ದಸರಾ ದಶಮಂಟಪ ಸಮಿತಿ ವತಿಯಿಂದ 2026-27ನೇ ಸಾಲಿನ ದಸರಾ ದಶಮಂಟಪ ಸಮಿತಿಯ ಅಧಿಕಾರ ಹಸ್ತಾಂತರ ಕಾರ್ಯಕ್ರಮವು ಶ್ರೀ ಕೋಟೆ ಮಹಾಗಣಪತಿ ದೇವಾಲಯದ ಆವರಣದಲ್ಲಿ ನಡೆಯಿತು. ಕೋಟೆ ಮಹಾಗಣಪತಿ ದೇವರಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಶ್ರೀ ಕರವಲೆ ಭಗವತಿ ದೇವಾಲಯದಿಂದ ಆಯ್ಕೆಯಾದ ನೂತನ ದಶಮಂಟಪ ಸಮಿತಿಯ ಪದಾಧಿಕಾರಿಗಳಿಗೆ ಅಧಿಕಾರವನ್ನು ಅಧಿಕೃತವಾಗಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬಿ.ಎಂ. ಹರೀಶ್, ಕಳೆದ ಬಾರಿಯಂತೆ ಈ ಬಾರಿಯೂ ತಮ್ಮ ದೇವಾಲಯಕ್ಕೆ ಸಂಪೂರ್ಣ ಸಹಕಾರ ಮತ್ತು ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ಇದೇ ವೇಳೆ 2026-27ನೇ ಸಾಲಿನ ದಶಮಂಟಪ ಸಮಿತಿ ಅಧ್ಯಕ್ಷ ಸಜನ್ ಪೂಣಚ್ಚ ಅವರಿಗೆ ಹಿಂದಿನ ಸಮಿತಿಯ ಎಲ್ಲಾ ದಾಖಲೆಗಳನ್ನು ಒಳಗೊಂಡ ಕಡತವನ್ನು ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ನಗರಸಭೆ ಉಪಾಧ್ಯಕ್ಷ ಮಹೇಶ್ ಶೈನಿ, ಸದಸ್ಯೆ ಸವಿತಾ ರಾಕೇಶ್, ನಗರ ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ, ಉಮೇಶ್ ಸುಬ್ರಮಣಿ, ಕೋಟೆ ಗಣಪತಿ ಸಮಿತಿ…
ಮಡಿಕೇರಿ, ಆ.17 NEWS DESK : ಕೊಡವ ಜನಪದೀಯ ಸಾಹಿತ್ಯವನ್ನು ಜೀವಂತವಾಗಿಡುವ ಉದ್ದೇಶದಿಂದ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ‘ಕೊಡವ ಪುಸ್ತಕ ಪತ್ತಾಯ’ ಯೋಜನೆಯನ್ನು ವಿದ್ಯಾಸಂಸ್ಥೆಗಳು, ಐನ್‌ಮನೆಗಳು, ಸಂಘ-ಸಂಸ್ಥೆಗಳು ಹಾಗೂ ಸಮಾಜಗಳಲ್ಲಿ ಸ್ಥಾಪಿಸಲಾಗುತ್ತಿದೆ ಎಂದು ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ಹೇಳಿದರು. ಅರಮೇರಿ ಕಳಂಚೇರಿಯ ಶ್ರೀ ಶಾಂತಮಲ್ಲ ಸ್ವಾಮೀಜಿ ವಿದ್ಯಾಸಂಸ್ಥೆಯಲ್ಲಿ ಅಕಾಡೆಮಿಯ 17ನೇ ‘ಕೊಡವ ಪುಸ್ತಕ ಪತ್ತಾಯ’ ಅನಾವರಣ ಕಾರ್ಯಕ್ರಮವನ್ನು ಸಂಸ್ಥೆಯ ಸಂಸ್ಥಾಪಕರಾದ ಶಾಂತಮಲ್ಲ ಸ್ವಾಮೀಜಿಯವರ 29ನೇ ಗುರುಸ್ಮರಣೆಯ ಅಂಗವಾಗಿ ಉದ್ಘಾಟಿಸಿ ಅವರು ಮಾತನಾಡಿದರು. ಕೊಡಗಿನ ನೆಲದಲ್ಲಿ ಅನಾದಿ ಕಾಲದಿಂದಲೂ ವಿಭಿನ್ನ ಸಂಸ್ಕೃತಿ ಹಾಗೂ ಸಂಸ್ಕಾರಯುತ ಸಾಮಾಜಿಕ ಬದುಕು ಬೆಳೆದು ಬಂದಿದೆ. ಸರ್ವರೂ ಸಹೋದರತೆ, ಸೌಹಾರ್ದತೆ ಹಾಗೂ ಸಮಾನತೆಯಿಂದ ಬದುಕು ರೂಪಿಸಿಕೊಂಡಿರುವುದು ದೇಶಕ್ಕೆ ಮಾದರಿಯಾಗಿದೆ. ಶಾಲಾ ಜೀವನದಲ್ಲೇ ಮಕ್ಕಳು ಇಂತಹ ಮೌಲ್ಯಗಳನ್ನು ಅರಿತುಕೊಂಡು ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು. ಶಾಲಾ ಪಠ್ಯದ ಜತೆಗೆ ಜೀವನ ಮೌಲ್ಯಗಳನ್ನು ತಿಳಿದುಕೊಳ್ಳಲು ಮಕ್ಕಳಿಗೆ ಪ್ರತಿದಿನ ಕನಿಷ್ಠ ಅರ್ಧ ಗಂಟೆಯಾದರೂ ಗ್ರಂಥಾಲಯದಲ್ಲಿ ಕತೆ, ಕಾದಂಬರಿ…
ಮಡಿಕೇರಿ, ಆ.17 NEWS DESK : ದೇಶದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಲಯನ್ಸ್ ಸಂಸ್ಥೆ ಮಡಿಕೇರಿ ವತಿಯಿಂದ ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯ ಕಾಪಾಡುವಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಐವರು ಪೌರಕಾರ್ಮಿಕರನ್ನು ಗುರುತಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕ ಡಾ. ಲೋಕೇಶ್ ಹಾಗೂ ಕರ್ನಾಟಕ ಸರ್ಕಾರದ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಎಸ್.ಆರ್. ಮೆಹರೋಜ್ ಖಾನ್ ಅವರು ಪೌರಕಾರ್ಮಿಕರನ್ನು ಗೌರವಿಸಿದರು. ಐವರು ಪೌರಕಾರ್ಮಿಕರಿಗೆ ಪ್ರಶಂಸನಾ ಪತ್ರ ನೀಡಿ, ಶಾಲು ಹೊದಿಸಿ ಸನ್ಮಾನಿಸಲಾಯಿತು. ಜೊತೆಗೆ ಪ್ರತಿಯೊಬ್ಬರಿಗೂ ತಲಾ ₹2,000 ನಗದು ಪ್ರೋತ್ಸಾಹಧನ ನೀಡಿ ಅವರ ನಿಸ್ವಾರ್ಥ ಸೇವೆಯನ್ನು ಗೌರವಿಸಲಾಯಿತು. ಮಳೆ, ಬಿಸಿಲು ಸೇರಿದಂತೆ ಪ್ರತಿಕೂಲ ಹವಾಮಾನದಲ್ಲಿಯೂ ಕರ್ತವ್ಯ ನಿರ್ವಹಿಸಿ ನಗರದ ಸ್ವಚ್ಛತೆ ಹಾಗೂ ಸೌಂದರ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಶ್ಲಾಘನೀಯವಾಗಿದೆ. ಸಾರ್ವಜನಿಕ ಆರೋಗ್ಯ ಮತ್ತು ಸ್ವಚ್ಛತೆಯ ಹಿಂದೆ ಅವರ ಪರಿಶ್ರಮ ಮಹತ್ವದ ಪಾತ್ರ ವಹಿಸುತ್ತಿದ್ದು, ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಅವರ ಸೇವೆಯನ್ನು ಗುರುತಿಸಿ ಗೌರವಿಸಿರುವುದು…
ಸುಂಟಿಕೊಪ್ಪ ಆ.17 NEWS DESK : ಕಿಡಗರಹಳ್ಳಿ ಬೈತುರಪ್ಪ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು ಶ್ರದ್ಧಾಭಕ್ತಿ ಹಾಗೂ ಸಡಗರದಿಂದ ಆಚರಿಸಲಾಯಿತು. ನಾಗರ ಪಂಚಮಿ ಅಂಗವಾಗಿ ದೇವಾಲಯದಲ್ಲಿ ವಿವಿಧ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ದೇವಾಲಯದ ಪ್ರಧಾನ ಅರ್ಚಕ ರಾಘವೇಂದ್ರ ಭಟ್ ಅವರು ಅಭಿಷೇಕ ಸೇರಿದಂತೆ ವಿಶೇಷ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಾಲಯದ ಪಾರುಪತ್ಯದಾರ ಅಕ್ಕಪಂಡ ಎ. ರಾಜೇಂದ್ರ, ದೇವಾಲಯದ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ನೂರಾರು ಭಕ್ತರು ಪಾಲ್ಗೊಂಡು ವಿಶೇಷ ಪೂಜೆಯಲ್ಲಿ ಭಾಗವಹಿಸಿದರು. ಭಕ್ತರು ನಾಗದೇವರಿಗೆ ಪೂಜೆ ಸಲ್ಲಿಸಿ, ಕುಟುಂಬದ ಸುಖ, ಶಾಂತಿ ಹಾಗೂ ಸಮೃದ್ಧಿಗಾಗಿ ಪ್ರಾರ್ಥಿಸಿದರು.
ಮಡಿಕೇರಿ ಆ.17 NEWS DESK : ಕೊಡಗು ಪತ್ರಕರ್ತರ ಸಂಘದ ವತಿಯಿಂದ ವಿಶ್ವ ಛಾಯಾಗ್ರಾಹಕರ ದಿನಾಚರಣೆ ಅಂಗವಾಗಿ ನೀಡಲಾಗುವ ವಾರ್ಷಿಕ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಶಕ್ತಿ ಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ. ಅನಂತಶಯನ ಅವರು ಪುತ್ರಿ ಡಾ. ಅನುಶ್ರೀ ಅವರ ‘ಹ್ಯಾಪಿಟೀತ್ ಡೆಂಟಲ್ ಕ್ಲಿನಿಕ್’ ಹೆಸರಿನಲ್ಲಿ ಸ್ಥಾಪಿಸಿರುವ ಮಾನವೀಯ ಮೌಲ್ಯಗಳನ್ನು ಒಳಗೊಂಡ ಅತ್ಯುತ್ತಮ ಛಾಯಾಚಿತ್ರ ಪ್ರಶಸ್ತಿಗೆ, ಶಕ್ತಿ ದಿನಪತ್ರಿಕೆಯಲ್ಲಿ ಪ್ರಕಟಗೊಂಡ ಉಪಸಂಪಾದಕ ಉಜ್ವಲ್ ರಂಜಿತ್ ಅವರ ‘ನೋವಿಂದ ನರಳುತ್ತಿರುವ ಗಜರಾಜ’ ಚಿತ್ರ ಆಯ್ಕೆಯಾಗಿದೆ. ಮಳೆಗಾಲದ ಪ್ರಕೃತಿ ಸೌಂದರ್ಯವನ್ನು ಬಿಂಬಿಸುವ ಅತ್ಯುತ್ತಮ ವೀಡಿಯೋಗ್ರಫಿಗಾಗಿ ನೀಡಲಾಗುವ ಪ್ರಶಸ್ತಿಗೆ ಕೊಡಗು ಚಾನೆಲ್‌ನ ಕ್ಯಾಮೆರಾಮನ್ ಹನೀಫ್ ಅವರ ವೀಡಿಯೋ ಆಯ್ಕೆಯಾಗಿದೆ. ಗುಂಡುಕುಟ್ಟಿ ಎಸ್ಟೇಟ್ ಮಾಲೀಕ ಜಿ.ಎಂ..ಮಹೇಂದ್ರ ಅವರು ತಮ್ಮ ತಂದೆ ಜಿ.ಎಂ. ಮೋಹನ್ ಹೆಸರಿನಲ್ಲಿ ನೀಡುವ ದತ್ತಿನಿಧಿ ಪ್ರಶಸ್ತಿ ಕಾಫಿ ಉದ್ಯಮದ ಕುರಿತ ವರದಿಗೆ ವಿನೋದ್ ಮೂಡಗಡ್ಡೆ ಅವರ ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟಗೊಂಡ ಕಾಫಿ ಬೆಳೆಯಿಂದ ಹಸನಾದ ಕೃಷಿಕ ವರದಿ ಪ್ರಶಸ್ತಿ ಪಡೆದುಕೊಂಡಿದೆ. ದೇವನಹಳ್ಳಿಯ ಸಮಾಜಸೇವಕ ಮಂಡಿಬೆಲೆ…
ಸುಂಟಿಕೊಪ್ಪ, ಆ.17 NEWS DESK : ನಾಕೂರು–ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆರೂರು ಗ್ರಾಮದಲ್ಲಿ ಕಾಡಾನೆಗಳ ಹಿಂಡು ಕಾಫಿ ತೋಟಕ್ಕೆ ಲಗ್ಗೆಯಿಟ್ಟು ಕಾಫಿ, ಅಡಿಕೆ ಹಾಗೂ ತೆಂಗಿನ ಮರಗಳನ್ನು ನಾಶಪಡಿಸಿದೆ ಎಂದು ಪ್ರಗತಿಪರ ಕೃಷಿಕ ಹೆರೂರು ಚಂದ್ರಶೇಖರ್ ಬೇಸರ ವ್ಯಕ್ತಪಡಿಸಿದ್ದಾರೆ. ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ಭಾನುವಾರ ಚಂದ್ರಶೇಖರ್ ಅವರ ತೋಟಕ್ಕೆ ಕಾಡಾನೆಗಳು ನುಗ್ಗಿ ಕಟಾವಿಗೆ ಬಂದಿದ್ದ ಸುಮಾರು 20 ಫಸಲು ಭರಿತ ಅಡಿಕೆ ಮರಗಳು, ರೋಬಸ್ಟಾ ಕಾಫಿ ಗಿಡಗಳು ಹಾಗೂ ತೆಂಗಿನ ಮರಗಳನ್ನು ಬುಡಸಮೇತ ಕಿತ್ತು ನಾಶಪಡಿಸಿವೆ. ಇದರಿಂದ ರೂ.80 ಸಾವಿರಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ. ಈ ಹಿಂದೆಯೂ ಇದೇ ತೋಟಕ್ಕೆ ಕಾಡಾನೆಗಳು ದಾಳಿ ನಡೆಸಿ ಸುಮಾರು 100 ಅಡಿಕೆ ಮರಗಳನ್ನು ಬುಡಸಮೇತ ಮುರಿದು ನಾಶಪಡಿಸಿದ್ದವು. ಇದರಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿತ್ತು. ಆ ಘಟನೆಯ ನೋವು ಮಾಸುವ ಮುನ್ನವೇ ಇದೀಗ ಮತ್ತೆ ಕಟಾವಿಗೆ ಬಂದಿದ್ದ ಕಾಫಿ ಹಾಗೂ ಅಡಿಕೆ ಬೆಳೆ ನಾಶವಾಗಿರುವುದು ಕೃಷಿಕರಿಗೆ ಮತ್ತಷ್ಟು…
ಮಡಿಕೇರಿ ಆ.17 NEWS DESK : ಕೊಡಗು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕಾಡಾನೆಗಳ ಹಾವಳಿ ಮಿತಿ ಮೀರುತ್ತಿದ್ದರೂ ಅರಣ್ಯ ಅಧಿಕಾರಿಗಳು ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲವೆಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯ ಅರಣ್ಯ ಭವನಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತು. ಸಿದ್ದಾಪುರ ಸಮೀಪದ ಮಾಲ್ದಾರೆಯ ಘಟ್ಟದಳ್ಳ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ಕಾಡಾನೆ ದಾಳಿಗೆ ಕಾರ್ಮಿಕರೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪೊಲೀಸರು ಅಳವಡಿಸಿದ್ದ ಬ್ಯಾರಿಕೇಡ್‍ಗಳನ್ನು ಕಿತ್ತು ಕಛೇರಿಯ ಒಳನುಗ್ಗುವ ಪ್ರಯತ್ನಕ್ಕೆ ಮುಂದಾದ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹಸ ಪಟ್ಟರು. ಈ ಸಂದರ್ಭ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನೂಕಾಟ ನಡೆಯಿತು. ಪರಿಸ್ಥಿತಿ ಕೈಮೀರಬಹುದೆನ್ನುವ ಕಾರಣದಿಂದ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಗಳನ್ನು ಕರೆಸಲಾಯಿತು. ಈ ಸಂದರ್ಭ ಪ್ರತಿಭಟನಾಕಾರರ ಬಳಿಗೆ ಬಂದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ…