ಲೇಖಕ: admin

ಮಡಿಕೇರಿ ಸೆ.1 NEWS DESK :  ಮೇಕೇರಿ ಗ್ರಾಮದ ಮಡ್ಯನ ದೀಪಕ್ ಎಂಬವರ ಕಾರು ಶೆಡ್‍ನೊಳಗಿದ್ದ  ನಾಗರ ಹಾವನ್ನು ಉರಗ ಪ್ರೇಮಿ ಪಿಯೂಷ್ ಪೆರೆರಾ ರಕ್ಷಿಸಿ ಅರಣ್ಯಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರೆ.

Read More

ಕುಶಾಲನಗರ ಸೆ.1 NEWS DESK : ಶಿಕ್ಷಕರು ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದರೊಂದಿಗೆ ಅವರಲ್ಲಿ ವೈಜ್ಞಾನಿಕ ಸಂಶೋಧನಾ ಪ್ರವೃತ್ತಿ ಬೆಳೆಸಬೇಕು ಎಂದು‌ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಕರೆ ನೀಡಿದರು. ಶಾಲಾ ಶಿಕ್ಷಣ ಇಲಾಖೆ ಹಾಗೂ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಹಯೋಗದಲ್ಲಿ ಕೂಡಿಗೆ ಅಂಜೆಲಾ ವಿದ್ಯಾನಿಕೇತ ಶಾಲೆಯಲ್ಲಿ ತಾಲೂಕಿನ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ತಾಲೂಕು ಮಟ್ಟದ ವಿಜ್ಞಾನ ವಿಚಾರ ಗೋಷ್ಠಿ ಹಾಗೂ ವಿಜ್ಞಾನ ನಾಟಕ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ವೈಜ್ಞಾನಿಕ ಅನ್ವೇಷಣೆ ಮತ್ತು ವಿಶ್ಲೇಷಣಾತ್ಮಕ ಮನೋಭಾವನೆಯನ್ನು ಹುಟ್ಟುಹಾಕಲು ವಿಜ್ಞಾನ ವಿಚಾರ ಗೋಷ್ಠಿಗಳು ಸಹಕಾರಿಯಾಗಿವೆ. ವಿಜ್ಞಾನಕ್ಕೆ ಸಂಬಂಧಿಸಿದ ಪುಸ್ತಕಗಳು ಹಾಗೂ ವಿಜ್ಞಾನಿಗಳ ಜೀವನ ಚರಿತ್ರೆ, ವಿಚಾರಧಾರೆ ಮತ್ತು ಅವರ ವೈಜ್ಞಾನಿಕ ಸಾಧನೆಗಳನ್ನು ಅಧ್ಯಯನ‌ ಮಾಡುವ ಮೂಲಕ ವಿಜ್ಞಾನದ ಹೊಸ ಹೊಸ ಆವಿಷ್ಕಾರಗಳ ಬಗ್ಗೆ ಹೆಚ್ಚಿನ ಜ್ಞಾನ ಹೊಂದಬೇಕು ಎಂದು ಬಿಇಓ ಕೃಷ್ಣಪ್ಪ ಸಲಹೆ ನೀಡಿದರು. ವಿದ್ಯಾರ್ಥಿಗಳು ವಿಜ್ಞಾನ ಕಲಿಕೆಯೊಂದಿಗೆ…

Read More

ಮಡಿಕೇರಿ ಸೆ.1 NEWS DESK : ಕತ್ತಲೆಕಾಡು ಗ್ರಾಮದ ಶ್ರೀ ವಿನಾಯಕ ಸೇವಾ ಟ್ರಸ್ಟ್‌ ವತಿಯಿಂದ ಜರುಗಿದ 19ನೇ ವರ್ಷದ ಗೌರಿ ಗಣೇಶೋತ್ಸವ ಹಲವು ವಿಶೇಷತೆಗಳ ಮೂಲಕ ಗಮನ ಸೆಳೆಯಿತು. ಸಾಂಪ್ರದಾಯಿಕ ಆಚರಣೆಗೆ ಒತ್ತು ನೀಡಿದ ಟ್ರಸ್ಟ್‌, ಮೂರು ದಿನ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು. ಆ.27 ರಂದು ವಿನಾಯಕನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಬಳಿಕ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆಗಳು ಜರುಗಿದವು. ಜೋರು ಮಳೆಯ ನಡುವೆಯೂ ಗ್ರಾಮಸ್ಥರು ಉತ್ಸಾಹದಿಂದ ಆಟೋಟ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಅದೇ ದಿನ ಸಂಜೆ ಸಂಗೀತ ರಜಮಂಜರಿ ಹಮ್ಮಿಕೊಳ್ಳಲಾಗಿತ್ತು. ಸೋಮವಾರಪೇಟೆಯ ವಿಶ್ವರೂಪ ವಾದ್ಯಗೋಷ್ಠಿ ಕಲಾತಂಡದ ಪುರುಷೋತ್ತಮ್, ಕವಿತಾ, ಸುಭಾಷ್, ಜನಾರ್ದನ್ ಭಕ್ತಿಗೀತೆ, ಜಾನಪದ ಗೀತೆಗಳನ್ನು ಹಾಡಿ ರಂಜಿಸಿದರು. ಸ್ಥಳೀಯ ಪ್ರತಿಭೆಗಳು ಕೂಡಾ ಹಾಡು ಹಾಡಿ ಮೆಚ್ಚುಗೆ ಗಳಿಸಿದರು. ಆ.28 ರಂದು ಸಂಜೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಜರುಗಿತು. ಬಳಿಕ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. 29ರಂದು ಮಧ್ಯಾಹ್ನ ಮಹಾಪೂಜೆ, ಅನ್ನದಾನ ನಡೆಯಿತು. ವಾರ್ಷಿಕ ಹುಂಡಿ ಹಣ ಸಂಗ್ರಹದಲ್ಲಿ ವಿಜೇತರಾದ…

Read More

ಮಡಿಕೇರಿ NEWS DESK ಆ.31 : ಕಾಡು ಕಡಿಯುವ ಯಂತ್ರಗಳ ದುರಸ್ತಿ ಕಾರ್ಯಕ್ಕೆ ಸಂಬಂಧಿಸಿದಂತೆ ಒಂದೇ ಬಿಲ್ ಗೆ ಎರಡು ಬಾರಿ ಹಣ ಪಾವತಿ ಮಾಡಿದ ಆರೋಪ ತನಿಖೆಯಿಂದ ಸಾಬೀತಾದ ಹಿನ್ನೆಲೆ ಮಡಿಕೇರಿ ನಗರಸಭೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಹಳ ವಿರುದ್ಧ ಕ್ರಮ ಕೈಗೊಂಡು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶ ಹೊರಡಿಸಿದ್ದಾರೆ. ಮಡಿಕೇರಿ ನಗರಸಭೆಯ ಹಿಂದಿನ ಪೌರಾಯುಕ್ತರಾದ ಪ್ರಸ್ತುತ ಚಾಮರಾಜನಗರ ನಗರಸಭೆಯಲ್ಲಿರುವ ಎಸ್.ವಿ.ರಾಮದಾಸ್, ಹಿಂದಿನ ಸಹಾಯಕ ಕಾರ್ಯಪಾಲಕ ಅಭಿಯಂತರರು(ಪರಿಸರ) ಪ್ರಸ್ತುತ ಹುಣುಸೂರು ನಗರಸಭೆಯಲ್ಲಿರುವ ಸೌಮ್ಯ ಕೆ., ಹಿಂದಿನ ಲೆಕ್ಕಾದೀಕ್ಷಕರು, ಪ್ರಸ್ತುತ ವಿರಾಜಪೇಟೆ ಪುರಸಭೆಯ ಕಚೇರಿ ವ್ಯವಸ್ಥಾಪಕರಾದ ಕೆ.ಬಿ.ಸುಜಾತ, (ಪ್ರಬಾರ) ಹಾಗೂ ದ್ವಿತೀಯ ದರ್ಜೆ ಸಹಾಯಕರಾದ ಬಿ.ಆರ್.ಹರಿಣಿ ಅವರುಗಳ ಮೇಲಿನ ಆರೋಪವು ರುಜುವಾತು ಆಗಿರುತ್ತದೆ. ಆದುದರಿಂದ ಇವರುಗಳ ವಿರುದ್ಧ ಕರ್ನಾಟಕ ಸಿವಿಲ್ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಅಪೀಲು) ನಿಯಮಗಳು 1957ರ ನಿಯಮ 8(iii)ರನ್ವಯ ಮುಂದಿನ ಒಂದು ವಾರ್ಷಿಕ ವೇತನ ಬಡ್ತಿಯನ್ನು ಸಂಚಿತ ಪರಿಣಾಮ ಸಹಿತವಾಗಿ ತಡೆಹಿಡಿಯುವ ದಂಡನೆಯೊಂದಿಗೆ ಒಂದೇ ಬಿಲ್ ಗೆ…

Read More

ಮಡಿಕೇರಿ NEWS DESK ಆ.31 : ಬ್ರೈನೋಬ್ರೈನ್ ಇಂಟರ್ ನ್ಯಾಷನಲ್ ದುಬೈ ಸಂಸ್ಥೆಯ ವತಿಯಿಂದ ಚೆನ್ನೈನಲ್ಲಿ ನಡೆದ 46ನೇ ರಾಷ್ಟ್ರ ಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ-2025ರಲ್ಲಿ ಮಡಿಕೇರಿಯ ಬ್ರೈನೋಬ್ರೈನ್ ಕೇಂದ್ರದಿಂದ ಭಾಗವಹಿಸಿದ್ದ ಎಲ್ಲಾ 28 ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ವಿಜೇತರಾಗಿದ್ದು, 18 ಚಾಂಪಿಯನ್ ಟ್ರೋಫಿ, 7 ಚಿನ್ನದ ಪದಕ ಮತ್ತು 3 ಬೆಳ್ಳಿಯ ಪದಕಗಳನ್ನು ಗೆದ್ದಿದ್ದಾರೆ. ಚೆನ್ನೈನ ಚೆನ್ನೈ ಟ್ರೇಡ್ ಸೆಂಟರ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸ್ಪರ್ಧೆಯಲ್ಲಿ ಮಡಿಕೇರಿಯ ಬ್ರೈನೋಬ್ರೈನ್ ಕೇಂದ್ರದ ತರಬೇತುದಾರರಾದ ಮಾಪಂಗಡ ಕವಿತಾ ಕರುಂಬಯ್ಯ ಅವರ ನೇತೃತ್ವದಲ್ಲಿ ಒಟ್ಟು 28 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಭಾರತದ 340 ಕೇಂದ್ರಗಳಿಂದ ಒಟ್ಟು 8000 ಮಕ್ಕಳು ಭಾಗವಹಿಸಿದ್ದು, ಕೇವಲ 3 ನಿಮಿಷದಲ್ಲಿ ವಿವಿಧ ರೀತಿಯ ಲೆಕ್ಕಗಳನ್ನು ಅತೀ ಚುರುಕಾಗಿ ಮಾಡುವ ಮೂಲಕ ಮಡಿಕೇರಿಯ ಬ್ರೈನೋಬ್ರೈನ್ ಕೇಂದ್ರದ 28ವಿದ್ಯಾರ್ಥಿಗಳು ಪದಕಗಳನ್ನು ತಮ್ಮದಾಗಿಸಿಕೊಂಡರು. ಈ ಸಾಧನೆಯ ಹೆಗ್ಗಳಿಕೆಯು ಕಠಿಣ ಪರಿಶ್ರಮ ವಹಿಸಿದ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಸಲ್ಲಬೇಕು. ಪದಕಗಳನ್ನು ಗೆದ್ದ ಅದ್ಭುತ ಯಶಸ್ಸಿಗೆ ಕಾರಣಕರ್ತರಾದ ವಿದ್ಯಾರ್ಥಿಗಳು ಹಾಗೂ ಕಾಳಜಿ…

Read More

ಮಡಿಕೇರಿ NEWS DESK ಆ.31 : ಕೇಂದ್ರ ಮತ್ತು ರಾಜ್ಯ ಸರಕಾರದ ಮೂಲಕ ನಡೆಯುವ ಜನಗಣತಿ ಹಾಗೂ ಜಾತಿ ಗಣತಿಯ ಸಂದರ್ಭ ಕೊಡಗಿನ ಅರೆಭಾಷೆ ಗೌಡರ ನಿಖರ ನೋಂದಣಿಗಾಗಿ ಮಾಹಿತಿ ಒದಗಿಸುವ ಕಾರ್ಯಾಗಾರ ಮತ್ತು ಸಭೆ ಸೆ.4 ರಂದು ನಡೆಯಲಿದೆ ಎಂದು ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ್ ಕರಂದ್ಲಾಜೆ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗು ಗೌಡ ಸಮಾಜಗಳ ಒಕ್ಕೂಟದ ವತಿಯಿಂದ ಗುರುವಾರ ಬೆಳಿಗ್ಗೆ 10.30 ಗಂಟೆಗೆ ಮಡಿಕೇರಿಯ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ಕಾರ್ಯಾಗಾರ ನಡೆಯಲಿದ್ದು, ಗೌಡ ಸಮುದಾಯದ ಆಸಕ್ತರು ಭಾಗವಹಿಸುವಂತೆ ಮನವಿ ಮಾಡಿದ್ದಾರೆ.

Read More

ಮಡಿಕೇರಿ NEWS DESK ಆ.30 : ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಸವನಹಳ್ಳಿ ಗ್ರಾಮದಲ್ಲಿ ನಡೆದ ಕೇರಳದ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ರಾಜ್ಯದ ಕೊಟ್ಟಾಯಂ ನಿವಾಸಿ ಮುರಳಿ(48) ಎಂಬಾತನೇ ಕೊಲೆಯಾದ ವ್ಯಕ್ತಿಯಾಗಿದ್ದು, ಬಸವಹಳ್ಳಿ ನಿವಾಸಿ ತೀರ್ಥ (25) ಎಂಬಾತನನ್ನು ಬಂಧಿಸಲಾಗಿದೆ. ಸ್ಥಳೀಯ ಕೃಷಿಕರೊಬ್ಬರ ಶುಂಠಿ ಕೃಷಿಯ ಮೇಲ್ವಿಚಾರಣೆ ಕೆಲಸಕ್ಕೆಂದು ನೇಮಿಸಲ್ಪಟ್ಟಿದ್ದ ಮುರಳಿ ಹಾಗೂ ತನ್ನ ಪತ್ನಿಯ ನಡುವಿನ ಸಂಬಂಧದ ಬಗ್ಗೆ ಸಂಶಯಗೊಂಡಿದ್ದ ತೀರ್ಥ ಮುರಳಿಯನ್ನು ಕೊಲೆ ಮಾಡಿರುವುದಾಗಿ ಆರೋಪಿಸಲಾಗಿದೆ.  ಶುಕ್ರವಾರ ರಾತ್ರಿ ತೀರ್ಥ ಪತ್ನಿಯ ಮೇಲೆ ಹಲ್ಲೆ ಮಾಡಿರುವುದಲ್ಲದೆ ದೊಣ್ಣೆಯಿಂದ ಮುರಳಿಯನ್ನು ಕೂಡ ಹಲ್ಲೆ ಮಾಡಿದ್ದಾನೆ. ಈ ಸಂದರ್ಭ ಮುರಳಿ ಸಾವನ್ನಪ್ಪಿರುವುದಾಗಿ ದೂರಲಾಗಿದೆ. ಕುಶಾಲನಗರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಕೊಲೆ ಆರೋಪದಡಿ ತೀರ್ಥನನ್ನು ಬಂಧಿಸಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಭೇಟಿ ನೀಡಿದರು. ನಂತರ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರಕರಣದ ಕುರಿತು ವಿವರಿಸಿದರು. ತೀರ್ಥನ ಪತ್ನಿ ಜ್ಯೋತಿಯನ್ನು…

Read More

ಬೆಂಗಳೂರು ಆ.30 NEWS DESK  : ಬೆಂಗಳೂರಿನ ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ  ನಡೆದ  ದಕ್ಷಿಣ ಭಾರತ ವಲಯ ಮಟ್ಟದ 4ನೇ ಕರಾಟೆ ಚಾಂಪಿಯನ್‍ಶಿಪ್ ಪಂದ್ಯಾವಳಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿ ಕ್ರೀಡಾಪಟುಗಳಿಗೆ ಶುಭಹಾರೈಸಿದರು. ಈ ಸಂದರ್ಭ ಆಹ್ವಾನಿತ ಗಣ್ಯರೊಂದಿಗೆ AKSKA president and JT chairman Technical commission KOI ಅರುಣ್ ಮಾಚಯ್ಯ, ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More

ಸುಂಟಿಕೊಪ್ಪ ಆ.30 NEWS DESK : ಐಗೂರಿನ ಏಕದಂತ ಗೆಳೆಯರ ಬಳಗದ ವತಿಯಿಂದ ಗೌರಿ-ಗಣೇಶೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಶ್ರೀ ಗೌರಿ ಗಣೇಶ ಮೂರ್ತಿಗೆ ಮೂರು ದಿನಗಳ ಕಾಲ ಪೂಜೆ ಸಲ್ಲಿಸಲಾಯಿತು. ನಂತರ ಉತ್ಸವ ಸಮಿತಿ ವತಿಯಿಂದ ಭವ್ಯ ಮಂಟಪದಲ್ಲಿ ಗಣಪತಿ ಮೂರ್ತಿಯನ್ನು ಕುಳ್ಳಿರಿಸಿ ವಾದ್ಯಗೋಷ್ಠಿಯೊಂದಿಗೆ ಮೆರವಣಿಗೆಯಲ್ಲಿ ಸಾಗಿ ಚೋರನ ಹೊಳೆಯಲ್ಲಿ ಗಣಪತಿ ಮೂರ್ತಿಗಳನ್ನು ವಿಸರ್ಜಿಸಲಾಯಿತು. ಈ ಸಂದರ್ಭ ಏಕದಂತ ಗೆಳೆಯರ ಬಳಗದ ಸ್ಥಾಪಕ ಅಧ್ಯಕ್ಷ ಯತೀಶ್ ಶೆಟ್ಟಿ, ಉತ್ಸವ ಸಮಿತಿ ಅಧ್ಯಕ್ಷರಾದ ಅನುಕುಮಾರ್, ಕಾರ್ಯದರ್ಶಿ ಯಶೀತ್, ಖಜಾಂಚಿ ನರಸಿಂಹ, ಪದಾಧಿಕಾರಿಗಳಾದ ಬಿ.ಅಭಿಜಿತ್, ಬಿ.ದರ್ಶಿತ್, ಮಣಿಕಂಠ, ಸಲಹೆಗಾರರಾದ ಮದನ್, ಆನಂದ,ವಿಶ್ವ ಪೂಜಾರಿ ಹಾಗೂ ನೂರಾರು ಭಕ್ತಾಧಿಗಳು ಉಪಸ್ಥಿತರಿದ್ದರು.

Read More

ಮಡಿಕೇರಿ ಆ.30 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಸೆ.1 ರಂದು ಬೆಳಗ್ಗೆ 11 ಗಂಟೆಗೆ ಕರಿಕೆ ಗ್ರಾಮದ ವಿ.ಎಸ್.ಎಸ್.ಎನ್ ಸಭಾಂಗಣದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಯಲಿದೆ ಎಂದು ತಹಶಿಲ್ದಾರ್ ಶ್ರೀಧರ ಅವರು ತಿಳಿಸಿದ್ದಾರೆ.

Read More