ಲೇಖಕ: admin

ಕಾರ್ಕಳ ಡಿ.8 NEWS DESK : ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಾರ್ಷಿಕೋತ್ಸವ ಆವಿರ್ಭವವು “ಸಿಂದೂರ ಸಂಭ್ರಮ” ಪರಿಕಲ್ಪನೆಯಲ್ಲಿ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಾ. ಜಿ.ರಾಮಕೃಷ್ಣ ಆಚಾರ್, ಸ್ಥಾಪಕರು, ಎಸ್. ಕೆ.ಎಫ್ ಎಲಿಕ್ಸರ್ ಇಂಡಿಯಾ ಮತ್ತು ಸಂಜೀವಿನಿ ಗೋಧಾಮ ಮುನಿಯಾಲು ಅವರು ಮಾತನಾಡಿ’ ಕಾಲೇಜುಗಳು ಬರಿಯ ಪಠ್ಯದ ಅಭ್ಯಾಸ ನೀಡುವ ಸ್ಥಳವಲ್ಲ. ವಿದ್ಯಾರ್ಥಿಗಳ ಸಾಮಥ್ರ್ಯವನ್ನೆತ್ತಿ ಹಿಡಿಯುವ ವೇದಿಕೆಗಳಾಗಬೇಕು. ಅಂತಹ ವೇದಿಕೆಗಳನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಿ ಕೊಡುತ್ತಿರುವ ಕ್ರಿಯೇಟಿವ್ ಕಾಲೇಜಿನ ಬಗ್ಗೆ ಶ್ಲಾಘನೆಯನ್ನು ವ್ಯಕ್ತಪಡಿಸಿದರು. ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿ.ಸುನಿಲ್ ಕುಮಾರ್, ವಿಶ್ರಾಂತ ಪ್ರಾಚಾರ್ಯರಾದ ಕೆ.ಗುಣಪಾಲ್ ಕಡಂಬ, ಖ್ಯಾತ ನಟ ಶನಿಲ್ ಗೌತಮ್ ಇವರು ತಮ್ಮ ಮಾತುಗಳಲ್ಲಿ ಪ್ರತಿಭೆಗಳನ್ನು ಗುರುತಿಸಿ ಬೆಳೆಸುವಂತಹ ಕಾರ್ಯಕ್ರಮಗಳನ್ನು ಕಾಲೇಜು ಕೈಗೊಂಡಿರುವ ಬಗ್ಗೆ ಶ್ಲಾಘಿಸಿದರು. ಕ್ರಿಯೇಟಿವ್ ಯಕ್ಷಾರಾಧನಮ್ ಹವ್ಯಾಸಿ ಕಲಾವಿದರಿಂದ ‘ಶ್ರೀರಾಮಾನುಗ್ರಹ ಸಿಂದೂರ ವಿಜಯ’ ಯಕ್ಷಗಾನ ಪ್ರದರ್ಶನ ನಡೆಯಿತು.  ದಿ. ಎಚ್.ಎಸ್ ವೆಂಕಟೇಶಮೂರ್ತಿಯವರ  ಸವಿ ನೆನಪಿನ ಕುರಿತ ‘ಭಾವ ನಮನ’ ಭಾವಗೀತೆಗಳ ಗಾಯನ ಕಾರ್ಯಕ್ರಮ ನಡೆಯಿತು. ಅಂತಾರಾಷ್ಟ್ರೀಯ…

Read More

ಮಡಿಕೇರಿ ಡಿ.8 NEWS DESK : ಹೆರವನಾಡು ಗ್ರಾಮದ ಕೆಟೋಳಿ ಮೋಹನರಾಜ್ ಎಂಬವರ ಮನೆಯ ಅಂಗಳದಲ್ಲಿದ್ದ  6 ಅಡಿ ಉದ್ದದ  ನಾಗರ ಹಾವನ್ನು ಉರಗ ಪ್ರೇಮಿ ಪಿಯೂಷ್ ಪೆರೇರ ರಕ್ಷಿಸಿ ಅರಣ್ಯಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರೆ.

Read More

ನಾಪೋಕ್ಲು  ಡಿ.8 NEWS DESK : `ಇಗ್ಗುತ್ತಪ್ಪ ದೇವಡ ಪುತ್ತರಿ ನಮ್ಮೆ ಪೊಯಿಲೆ ಪೊಯಿಲೆ’ ಘೋಷಣೆಯೊಂದಿಗೆ ಸಮೀಪದ ಬಿದ್ದಾಟಂಡ ವಾಡೆಯ ಐತಿಹಾಸಿಕ ನೂರಂಬಡ ನಾಡ್ಮಂದ್ನಲ್ಲಿ ಭಾನುವಾರ ಹುತ್ತರಿ ಹಬ್ಬದ ಪ್ರಯುಕ್ತ ಸಾಂಪ್ರದಾಯಿಕ ಹುತ್ತರಿ ಕೋಲಾಟದ ಕಾರ್ಯಕ್ರಮ ನಡೆಯಿತು. ಬೇತು ಗ್ರಾಮದ ಇತಿಹಾಸ ಪ್ರಸಿದ್ದ ಮಕ್ಕಿ ಶ್ರೀ ಶಾಸ್ತಾವು ದೇವಾಲಯದಿಂದ ಊರಿನ ಮುಖ್ಯಸ್ಥರು ದೇವರ ಕೋಲು, ವಸ್ತ್ರ ಹಾಗೂ ಬೆಳ್ಳಿಯ ಕಡತಲೆ (ಖಡ್ಗ) ದೊಂದಿಗೆ ಸಾಂಪ್ರದಾಯಿಕ ಕಾಪಳ ಕಳಿ ಕೊಂಬು ಕೊಟ್ಟು ವಾಲಗ, ದುಡಿಕೊಟ್ಟ್ ಪಾಟ್ನೊಂದಿಗೆ ಬೇತು ಗ್ರಾಮದ “ಕುರುಂಬರಾಟ್” ಎಂಬಲ್ಲಿ ವಿಶ್ರಾಂತಿ ಪಡೆದು ಬಳಿಕ ಬಿದ್ದಾಟಂಡ ವಾಡೆಗೆ ಗ್ರಾಮಸ್ಥರು ಮೆರವಣಿಗೆಯಲ್ಲಿ ಆಗಮಿಸಿದ್ದರು. ಈ ಸಂದರ್ಭ ನೂರಂಬಡ ಮಂದ್ನಲ್ಲಿ ಬಿದ್ದಾಟಂಡ ಕುಟುಂಬದ ತಕ್ಕಮುಖ್ಯಸ್ಥರು ಸಾಂಪ್ರದಾಯಿಕ ಉಡುಪು ಬಿಳಿ ಕುಪ್ಪಸ ಧರಿಸಿ ಶ್ರೀ ಮಹದೇವರ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಸಂಪ್ರದಾಯದ0ತೆ ದೇವರ ತಿರುವಭರಣ ಕೋಲನ್ನು ಬರಮಾಡಿಕೊಂಡರು. ಅದರಂತೆ ನಾಪೋಕ್ಲು  ಗ್ರಾಮದವರು ದುಡಿಕೊಟ್ಟ್ ಪಾಟ್‍ಆಗಿ ವಾಡೆಗೆ ಆಗಮಿಸಿದ್ದರು. ಹಾಗೇನೆ ಕೊಳಕೇರಿಯ ಗ್ರಾಮಸ್ಥರು ಬರುತ್ತಿದ್ದಂತೆ ಅವರನ್ನು…

Read More

ಬೆಂಗಳೂರು NEWS DESK ಡಿ.7 : ಬೆಂಗಳೂರಿನ ಪ್ರತಿಷ್ಠಿತ ಕಾನೂನು ಸಂಸ್ಥೆಯಾದ ಎ.ಕೆ.ಎಸ್ ಲೀಗಲ್ ಹಾಗೂ ರೇ ಸಂಸ್ಥೆಯು ಜಂಟಿಯಾಗಿ ಆಯೋಜಿಸಿದ, “ಕಾನೂನು ಸಂಸ್ಥೆಗಳ ನಡುವಿನ ಫುಟ್ಬಾಲ್ ಪಂದ್ಯಾಟ” ಬೆಂಗಳೂರಿನಲ್ಲಿ ನಡೆಯಿತು. ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಜಸ್ಟಿಸ್ ಅರವಿಂದ್ ಕುಮಾರ್ ಪಂದ್ಯಾಟವನ್ನು ಉದ್ಘಾಟಿಸಿದರು. ಸುಮಾರು 40ಕ್ಕೂ ಅಧಿಕ ಕಾನೂನು ಸಂಸ್ಥೆಗಳು ಈ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದವು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಮಾತನಾಡಿ ಪಂದ್ಯಾಟವು ವಕೀಲರಿಗೆ ಹಬ್ಬದ ವಾತಾವರಣ ನಿರ್ಮಿಸಿದ್ದು, ಹಳೆ ಸ್ನೇಹಿತರ ಸಮ್ಮಿಲನ ಹಾಗೂ ಹೊಸಬರ ಪರಿಚಯಕ್ಕೆ ವೇದಿಕೆಯಾಗಿದೆ ಎಂದರು. ಪತ್ನಿ ಕಾಂಚನ್ ಪೊನ್ನಣ್ಣ ಮತ್ತಿತರರು ಉಪಸ್ಥಿತರಿದ್ದರು.

Read More

ಮಡಿಕೇರಿ NEWS DESK ಡಿ.7 : ಜಿಲ್ಲಾಡಳಿತ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯು ಭಾನುವಾರ ಜರುಗಿತು. ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಆವರಣದಲ್ಲಿನ ಯುದ್ಧ ಸ್ಮಾರಕಕ್ಕೆ ಮೇಜರ್ ಜನರಲ್ ಕಾಳೆಂಗಡ ಸಿ. ಕಾರ್ಯಪ್ಪ (ನಿವೃತ್ತ), ಏರ್ ಮಾರ್ಷಲ್ ನಂದಾ ಕಾರ್ಯಪ್ಪ(ನಿ), ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್, ಗ್ರೂಪ್ ಕ್ಯಾಪ್ಟನ್ ಮನು ಭೀಮಯ್ಯ(ನಿ), ಏರ್ ಕಮಾಂಡರ್ ದೇವಯ್ಯ(ನಿ), ಲೆ.ಕರ್ನಲ್ ಕಾವೇರಪ್ಪ(ನಿ), ಕರ್ನಲ್ ನಾಚಪ್ಪ (ನಿ),  ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಬಿ.ಆರ್.ಶೆಟ್ಟಿ, ಜಿಲ್ಲಾ ಖಜಾನಾಧಿಕಾರಿ ರಘುನಾಥ್, ನಿವೃತ್ತ ಸೈನಾಧಿಕಾರಿಗಳು, ಎನ್‍ಸಿಸಿ ವಿದ್ಯಾರ್ಥಿಗಳು ಇತರರು ಯುದ್ಧ ಸ್ಮಾರಕಕ್ಕೆ  ಪುಷ್ಪ ಗುಚ್ಛವಿರಿಸಿ, ಗೌರವಪ ನಮನ ಸಲ್ಲಿಸಿದರು. ಕರ್ತವ್ಯ ಪಾಲನೆ ಸಂದರ್ಭದಲ್ಲಿ ವೀರ ಮರಣವನ್ನಪ್ಪಿದ ಯೋಧರ ಸ್ಮರಣಾರ್ಥ ಎರಡು ನಿಮಿಷಗಳ ಕಾಲ ಮೌನಾಚರಿಸಲಾಯಿತು. ಪೊಲೀಸ್ ತಂಡದವರು ಮೂರು ಸುತ್ತು ಕುಶಾಲತೋಪು ಹಾರಿಸಿ ಗೌರವ ವಂದನೆ ಸಲ್ಲಿಸಿದರು. ಮೇ‌.ಜ.…

Read More

ಮಡಿಕೇರಿ NEWS DESK ಡಿ.7 : ಸರ್ವರಲ್ಲೂ ಹಿತವನ್ನು ಬಯಸುವ ವಿಪ್ರ ಸಮಾಜವು ತನ್ನ ಪಾರಂಪರಿಕವಾದ ಪೂಜಾ ಕಾರ್ಯಗಳಿಗಷ್ಟೆ ಸೀಮಿತವಾಗದೆ ಸಮಾಜದ ಎಲ್ಲಾ ಕ್ಷೇತ್ರಗಳಲ್ಲು ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಹಿರಿಯ ಪತ್ರಕರ್ತ ಬಿ.ಜಿ.ಅನಂತಶಯನ ಕರೆ ನೀಡಿದ್ದಾರೆ. ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ವತಿಯಿಂದ ತಾಲ್ಲೂಕು ಸಂಘಗಳ ಸಹಯೋಗದೊಂದಿಗೆ ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ವಿಪ್ರ ಬಾಂಧವರಿಗಾಗಿ ನಡೆದ ‘ವಿಪ್ರ ಕ್ರೀಡೋತ್ಸವ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರ್ವರಲ್ಲೂ ಒಳಿತನ್ನು ಬಯಸುವ ಬ್ರಾಹ್ಮಣ ಸಮೂಹದ ಸರ್ವರೂ ಒಂದಾಗಿ, ಸಂಘಟಿತರಾಗುವ ಅವಶ್ಯಕತೆ ಇದೆ. ಇದಕ್ಕೆ ಸಮಾಜದ ಎಲ್ಲರ ಸಹಕಾರ ಅತ್ಯವಶ್ಯವೆಂದು ಅಭಿಪ್ರಾಯಿಸಿದ ಅವರು, ಈ ನಿಟ್ಟಿನಲ್ಲಿ ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ಸದಸ್ಯತ್ವವನ್ನು ಸಮಾಜದ ಪ್ರತಿಯೊಬ್ಬರು ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಕೊಡಗು ಜಿಲ್ಲಾ ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ಅಧ್ಯಕ್ಷರಾದ ರಾಮಚಂದ್ರ ಮೂಗೂರು ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲಾ ವ್ಯಾಪ್ತಿಯಲ್ಲಿರುವ ಬ್ರಾಹ್ಮಣ ಸಮಾಜ ಬಾಂಧವರನ್ನು ಒಂದಾಗಿ ಬೆಸೆಯುವ ಮತ್ತು ಯುವ ಸಮೂಹದಲ್ಲಿನ ಕ್ರೀಡಾ ಪ್ರತಿಭೆಯನ್ನು ಗುರುತಿಸಿ ಉತ್ತೇಜಿಸುವ ನಿಟ್ಟಿನಲ್ಲಿ…

Read More

ಮಡಿಕೇರಿ NEWS DESK ಡಿ.7 : ಕೊಡಗಿನ ಸುಗ್ಗಿ ಹಬ್ಬ ಪುತ್ತರಿಯ ಹಿನ್ನೆಲೆಯಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್ ಪರಂಬುವಿನ ಕೊಡವರ ನರಮೇಧದ ಸ್ಮಾರಕ ಸ್ಥಳದಲ್ಲಿ ಪುಷ್ಪ ನಮನ ಸಲ್ಲಿಸಿತು. ಪುತ್ತರಿ ದಿನ ಕೊಯ್ಲು ಮಾಡಿದ ಕದಿರನ್ನು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಪಟ್ಟಮಾಡ ಕುಶ, ಮಂದಪಂಡ ಮನೋಜ್ ಹಾಗೂ ನಂದೇಟಿರ ಮೋಹನ್ ಸುಬ್ಬಯ್ಯ ಅವರುಗಳು ಸ್ಮಾರಕಗಳಿಗೆ ಕಟ್ಟಿ ಪುಷ್ಪ ನಮನ ಸಲ್ಲಿಸಿದರು. ನಂತರ ಮಾತನಾಡಿದ ಎನ್.ಯು.ನಾಚಪ್ಪ ಅವರು ಹಿರಿಯರಿಗೆ ಗೌರವ ಅರ್ಪಿಸಿ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವ ಸಮುದಾಯದ ಪರವಾದ ಸಿಎನ್‌ಸಿಯ ಹೋರಾಟಕ್ಕೆ ಬೆಂಬಲ ಕೋರಲಾಯಿತು ಎಂದರು.

Read More

ಮಡಿಕೇರಿ NEWS DESK ಡಿ.7 : ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರು  ದೇಶದ ಅಮೂಲ್ಯ ರತ್ನವಾಗಿದ್ದು, ದೇಶಕ್ಕೆ ನೀಡಿದ ಅವರ ಕೊಡುಗೆ ಅಪಾರವಾಗಿದೆ. ಸಂವಿಧಾನದ ಮೂಲಕ ಎಲ್ಲಾ ವರ್ಗಕ್ಕೆ ನ್ಯಾಯವನ್ನು ನೀಡಿದ್ದು ಶೋಷೀತ ಸಮುದಾಯ ಎಲ್ಲಾ ಕ್ಷೇತ್ರದಲ್ಲಿ ಮುಂದೆ ಬರುವಂತಾಗಲು ಅಂಬೇಡ್ಕರ್ ಅವರ ಸಂವಿಧಾನವೇ ಕಾರಣ ಎಂದು ಬಿಜೆಪಿ  ಎಸ್.ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ ಹೇಳಿದರು. ಮಡಿಕೇರಿಯ ಅಂಬೇಡ್ಕರ್ ಬಾಲಕರ  ವಿದ್ಯಾರ್ಥಿ ನಿಲಯದಲ್ಲಿ ಎಸ್.ಸಿ ಮೋರ್ಚಾದ ವತಿಯಿಂದ ನಡೆದ ಡಾ.ಅಂಬೇಡ್ಕರ್ ಅವರ 69 ನೇ ಪರಿನಿರ್ವಾಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಅಂಬೇಡ್ಕರ್ ಅವರ ಸಂವಿಧಾನ ಆಧುನಿಕ ಭಾರತಕ್ಕೆ ಭದ್ರ ಬುನಾದಿಯನ್ನು ಹಾಕಿಕೊಟ್ಟಿದೆ. ನ್ಯಾಯವಾದಿ ಅರ್ಥಶಾಸ್ತ್ರಜ್ಞ, ತತ್ವಜ್ಞಾನಿ ಸಮಾಜ ಸುಧಾರಕ ಮಾತ್ರವಲ್ಲದೆ ರಾಷ್ಟ್ರ ನಿರ್ಮಾಣಕಾರರಾಗಿ ಅವರ ನಿರಂತರ ಪ್ರಯತ್ನಗಳು ಇಂದು ರಾಷ್ಟ್ರ ಎಲ್ಲಾ ರೀತಿಯಲ್ಲಿ  ಮುಂದೆ ಬರಲು ಕಾರಣವಾಗಿದೆ. ಅಂಬೇಡ್ಕರ್ ಅವರು  ವಿದ್ಯಾಭ್ಯಾಸಕ್ಕಾಗಿ ಪಟ್ಟಂತಹ ಆ ಕಷ್ಟದ ದಿನಗಳನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಅಂಬೇಡ್ಕರ್ ಅವರನ್ನು ಪ್ರತಿಯೊಬ್ಬರು ಮನೆ ಮನದಲ್ಲೂ ನೆನೆಸಿಕೊಳ್ಳುವಂತಾಗಬೇಕೆಂದರು. ಈ…

Read More

ಮಡಿಕೇರಿ ಡಿ.6 NEWS DESK : ಡಾ.ಬಿ.ಆರ್.ಅಂಬೇಡ್ಕರ್ ಅವರ ಮೌಲ್ಯ, ಜೀವನ ಸಾಧನೆಗಳನ್ನು ಅಧ್ಯಯನ ಮಾಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ‘ಪರಿನಿರ್ವಾಣ ದಿನ’ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು. ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶ ವಿದೇಶಗಳಲ್ಲಿ ಹಲವು ಸ್ನಾತಕೋತ್ತರ ಪದವಿ ಪಡೆದು ರಾಷ್ಟ್ರಕ್ಕೆ ಒಳ್ಳೆಯ ಸಂವಿಧಾನ ನೀಡಿದ್ದಾರೆ. ಅವರ ಜೀವನ ಸಂದೇಶಗಳನ್ನು ತಿಳಿದುಕೊಳ್ಳುವಂತಾಗಬೇಕು ಎಂದರು. ದೇಶ ವಿದೇಶಗಳಲ್ಲಿ ಅಂಬೇಡ್ಕರ್ ಅವರ ಅಧ್ಯಯನ ಕೇಂದ್ರಗಳು ಹಾಗೂ ಸಂಶೋಧನಾ ಕೇಂದ್ರಗಳು ಇವೆ. ಇಡೀ ಪ್ರಪಂಚದಲ್ಲಿಯೇ ಅವರು ಅಜರಾಮರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ಸ್ಮರಿಸಿದರು. ದೇಶ ವಿದೇಶಗಳಲ್ಲಿಯೂ ಸಹ ಅವರ ಪ್ರತಿಮೆಯನ್ನು ಕಾಣಬಹುದಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಅಧ್ಯಯನಶೀಲತೆ ಮತ್ತು ಸಾಮಾಜಿಕ ಹೋರಾಟ ರಾಷ್ಟ್ರದಲ್ಲಿ ಒಂದು ರೀತಿ ಮಹಾನ್ ಕ್ರಾಂತಿ ಎಂದು…

Read More

ಮಡಿಕೇರಿ ಡಿ.6 NEWS DESK  : ಕೇಂದ್ರ ಸರ್ಕಾರದಿಂದ ಹಲವು ಯೋಜನೆಗಳಿದ್ದು, ಅವುಗಳನ್ನು ಪರಿಣಾಮಕಾರಿಯಾಗಿ ತಲುಪಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ಅಧಿಕಾರಿಗಳಿಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  ಪ್ರಧಾನಮಂತ್ರಿಯವರ ಗ್ರಾಮ ಸಡಕ್ ಯೋಜನೆ, ಜಲಜೀವನ್ ಮಿಷನ್, ರಾಷ್ಟ್ರೀಯ ತೋಟಗಾರಿಕಾ ಮಿಷನ್, ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ, ಸ್ವಚ್ಛ ಭಾರತ ಮಿಷನ್, ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ, ಪ್ರಧಾನಮಂತ್ರಿ ಆವಾಸ್ ಯೋಜನೆ, ಎನ್‍ಆರ್‍ಎಲ್‍ಎಂ., ಸಂಜೀವಿನಿ ಯೋಜನೆ ಸೇರಿದಂತೆ ಹಲವು ಯೋಜನೆಗಳಿದ್ದು, ಇವುಗಳನ್ನು ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಧೋರಣೆ ಅನುಸರಿಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದ ಸ್ಟೀವರ್ಟ್‍ಹಿಲ್ ನಲ್ಲಿ ಕಸ ವಿಲೇವಾರಿ ಸಂಬಂಧಿಸಿದಂತೆ ಮಾತನಾಡಿದ ಸಂಸದರು ಕಳೆದ ಏಳು ತಿಂಗಳಾದರೂ ಸಹ ಕಸ…

Read More