ಲೇಖಕ: admin

ಮಡಿಕೇರಿ ಡಿ.6 NEWS DESK : ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಹಾಸಭೆ, ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಡಿ.11 ರಂದು ನಗರದ ಮೈತ್ರಿ ಪೊಲೀಸ್ ಸಮುದಾಯ ಭವನದಲ್ಲಿ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಗೌರವಾಧ್ಯಕ್ಷ ಎಂ.ಎ.ಅಪ್ಪಯ್ಯ ಅವರು ಬೆಳಗ್ಗೆ 10.30 ಗಂಟೆಗೆ ವಾರ್ಷಿಕ ಮಹಾಸಭೆಯನ್ನು ನಿವೃತ್ತ ಡಿಜಿಪಿ ಡಾ.ಎಂ.ಎ.ಗಣಪತಿ ಅವರು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕೆ.ಎನ್.ಮಾದಯ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. *ಮೂವರಿಗೆ ಸನ್ಮಾನ* ವಾರ್ಷಿಕ ಮಹಾಸಭೆಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಅಶೋಕ್ ಕುಮಾರ್, ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯ ಹೆಚ್ಚವರಿ ವರಿಷ್ಠಾಧಿಕಾರಿಗಳಾದ ಬಿ.ಕೆ.ದಿನೇಶ್ ಮತ್ತು ಪೊಲೀಸ್ ಅಧಿಕಾರಿ ಎಂ.ಕೆ.ತಮ್ಮಯ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದೆಂದು ಮಾಹಿತಿಯನ್ನಿತ್ತರು. *ಪ್ರತಿಭಾ ಪುರಸ್ಕಾರ* ಕಾರ್ಯಕ್ರಮದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಶಂಕರಿ ಬಿದರಿ ಅವರು ಮಣವಟ್ಟೀರ ಪೊನ್ನಪ್ಪ ಅವರ ಸ್ಮರಣಾರ್ಥ ನೀಡಿರುವ ದತ್ತಿಯಡಿ ಕೆಎಸ್‍ಆರ್‍ಪಿ ನಿವೃತ್ತ…

Read More

ಚೆಟ್ಟಳ್ಳಿ ಡಿ.6 NEWS DESK : ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರ ಮತ್ತು ಅಧಿಕ ಮೌಲ್ಯದ ವಿದೇಶಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿ ಸಂಘದ ವತಿಯಿಂದ ಆಫ್ ಸೀಸನ್ ಲಿಚ್ಚಿ ಬೆಳೆಯಲ್ಲಿನ ಸವಾಲುಗಳು ಮತ್ತು ಭವಿಷ್ಯದ ನಿರೀಕ್ಷೆಗಳು ಕುರಿತು ವಿಚಾರ ಮಂಥನ ಕಾರ್ಯಕ್ರಮ ಚೆಟ್ಟಳ್ಳಿಯಲ್ಲಿ ನಡೆಯಿತು. ಭವಿಷ್ಯದಲ್ಲಿ ಹೆಚ್ಚು ಬೇಡಿಕೆ ಇರುವ ಲಿಚ್ಚಿ ಹಣ್ಣನ್ನು ಬೆಳೆದು ಅಧಿಕ ಲಾಭ ಗಳಿಸುವಂತೆ ಸಂಪನ್ಮೂಲ ವ್ಯಕ್ತಿಗಳು ಬೆಳೆಗಾರರಿಗೆ ಸಲಹೆ ನೀಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಿಹಾರ ಕೃಷಿ ವಿಶ್ವವಿದ್ಯಾನಿಲಯದ ಮಾಜಿ ಉಪ ಕುಲಪತಿ ಅಜಯ್ ಕುಮಾರ್ ಸಿಂಗ್ ಅವರು ಲಿಚ್ಚಿ ಬೆಳೆಗೆ ಯೋಗ್ಯವಾದ ಪ್ರದೇಶದಲ್ಲಿ ಈ ಹಣ್ಣಿನ ಕೃಷಿಗೆ ಉತ್ತೇಜನ ನೀಡಲಾಗುತ್ತಿದೆ. ಭಾರತೀಯ ಕೃಷಿ ವಿಶ್ವ ವಿದ್ಯಾನಿಲಯ ಲಿಚ್ಚಿ ಕೃಷಿ ಕುರಿತು ಸಂಶೋಧನೆ ನಡೆಸುತ್ತಿದೆ. ಕೊಡಗು ಜಿಲ್ಲೆಯಲ್ಲಿ ಡಿಸೆಂಬರ್ ತಿಂಗಳಿನಲ್ಲಿ ಆಫ್ ಸೀಸನ್ ಲಿಚ್ಚಿ ಬೆಳೆಯುತ್ತಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ. ಲಿಚ್ಚಿ ಕೃಷಿಕರ ಬೇಡಿಕೆಗೆ ತಕ್ಕಂತೆ ಕೇಂದ್ರದಿಂದ ತಳಿಗಳನ್ನು ವಿತರಿಸಲಾಗುತ್ತಿದೆ ಎಂದರು. ರಾಷ್ಟ್ರೀಯ…

Read More

ಕುಶಾಲನಗರ ಡಿ.6 NEWS DESK : ಸುತ್ತೂರಿನಲ್ಲಿ ಜ.15 ರಿಂದ 20 ರವರೆಗೆ ಜರುಗುವ ಸುತ್ತೂರು ಜಾತ್ರಾ ಕಾರ್ಯಕ್ರಮಕ್ಕೆ ಭಕ್ತ ಜನರನ್ನು ಆಹ್ವಾನಿಸಲು ರಾಜ್ಯಾದ್ಯಂತ ಸಂಚಾರ ಮಾಡುತ್ತಿರುವ ಪ್ರಚಾರ ರಥ  ಕುಶಾಲನಗರಕ್ಕೆ ಆಗಮಿಸಿತು. ಈ ಸಂದರ್ಭ ಕುಶಾಲನಗರ ತಾಲ್ಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ ಆಗಮಿಸಿ ಪ್ರಚಾರ ರಥದಲ್ಲಿನ ಸುತ್ತೂರು ಮಠದ ಸ್ಥಾಪನಾಚಾರ್ಯ ಶ್ರೀ ಶಿವರಾತ್ರೀಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ರಾದ ವಿ.ಪಿ.ಶಶಿಧರ್ ಈ ಸಂದರ್ಭ ಮಾತನಾಡಿ, ಸುತ್ತೂರು ಜಾತ್ರೆಯಲ್ಲಿ ನಾಡಿನ ಪರಂಪರೆಗಳನ್ನು ಬಿಂಬಿಸುವ ದೇಸೀಯಾ ಕ್ರೀಡೆಗಳ ಪ್ರದರ್ಶನಗಳೊಂದಿಗೆ ಸಾಮೂಹಿಕ ವಿವಾಹ, ಕೃಷಿ ಮೇಳ, ವಸ್ತು ಪ್ರದರ್ಶನ, ರೈತರಿಗೆ ಕೃಷಿ ಮಾಹಿತಿ ಸೇರಿದಂತೆ ಎಲ್ಲವು ಒಂದೇ ಕಡೆ ನಡೆಯುತ್ತದೆ. ಆಗಮಿಸುವ ಸಹಸ್ರ ಭಕ್ತ ಜನರಿಗೆ ಮೂರು ಹೊತ್ತು ಪ್ರಸಾದದ ವ್ಯವಸ್ಥೆಯೂ ಇರುತ್ತದೆ ಎಂದರು. ಕೊಡಗು ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ ಹೆಚ್.ವಿ.ಶಿವಪ್ಪ ಮಾತನಾಡಿ, ಪ್ರತೀ ವರ್ಷದಂತೆ ಈ ಬಾರಿಯೂ ಸುತ್ತೂರು ಜಾತ್ರೆಗೆ ಕೊಡಗಿನ ಭಕ್ತ ಜನ…

Read More

ಹಾಸನ ಡಿ.6 NEWS DESK : ಹಾಸನದಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರದ ವಿವಿಧ ಸೇವೆಗಳ ಸಮರ್ಪಣಾ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಕಂದಾಯ ಇಲಾಖೆಯ ದರಖಾಸ್ತು ಪೋಡಿ, ಪೌತಿ ಖಾತೆ, ಕಂದಾಯ ಗ್ರಾಮ, 94ಸಿ ಹಕ್ಕುಪತ್ರಗಳು ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಸವಲತ್ತು ವಿತರಣೆ ಮಾಡಿದರು. ಇದರಿಂದ ಜಿಲ್ಲೆಯ ಸುಮಾರು 50,000ಕ್ಕೂ ಹೆಚ್ಚಿನ ಕುಟುಂಬಗಳಿಗೆ ಅನುಕೂಲವಾಗಲಿದೆ. ಸಮಾರಂಭದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡ, ಸಚಿವರುಗಳಾದ ಹೆಚ್.ಸಿ.ಮಹದೇವಪ್ಪ, ಜಮೀರ್ ಅಹ್ಮದ್ ಖಾನ್, ಸಂಸದರಾದ ಶ್ರೇಯಸ್ ಪಟೇಲ್ ಸೇರಿದಂತೆ ಜಿಲ್ಲೆಯ ಶಾಸಕರು, ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Read More

ಮಡಿಕೇರಿ ಡಿ.6 NEWS DESK : ಪತ್ತ್‌ಕಟ್ಟ್‌ನಾಡಿನಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ನಡೆದ 32ನೇ ವರ್ಷದ ‘ಪುತ್ತರಿ ನಮ್ಮೆ’ಯ ಹಿನ್ನೆಲೆ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ “ಲಕ್ಡಿಕೋಟೆ ಕೊಡವ ಯುದ್ಧ ಸ್ಮಾರಕ”ದಲ್ಲಿ ಕೊಡವ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು. ವೀರ ಮರಣವನ್ನಪ್ಪಿದ ಕೊಡವರಿಗೆ ಗೌರವ ಸಲ್ಲಿಸಿ ಮಾತನಾಡಿದ ಎನ್.ಯು.ನಾಚಪ್ಪ ಅವರು 1790-92 ಮತ್ತು 1799ರ ನಡುವೆ ಕ್ರಮವಾಗಿ ಜನರಲ್ ಲಾರ್ಡ್ ಕಾರ್ನ್‍ವಾಲೀಸ್ ಹಾಗೂ ಜನರಲ್ ಲಾರ್ಡ್ ವೆಲ್ಲೆಸ್ಲಿ ನೇತೃತ್ವದಲ್ಲಿ ನಡೆದ 3ನೇ ಮತ್ತು 4ನೇ ಆಂಗ್ಲೋ-ಮೈಸೂರು ಯುದ್ಧಗಳಲ್ಲಿ ಆದಿಮ ಸಂಜಾತ ಏಕಜನಾಂಗೀಯ ಆ್ಯನಿಮಿಸ್ಟಿಕ್ ನಂಬುಗೆಯ ಕೊಡವರು ತೋರಿದ ಶೌರ್ಯವನ್ನು ಸ್ಮರಿಸಿದರು. ಡಿ.ವೀರರಾಜರ ಮಾರ್ಗದರ್ಶನದಲ್ಲಿ ಕೊಡವ ಸೈನ್ಯವು ಮೈಸೂರು ಸುಲ್ತಾನರ ವಿರುದ್ಧ ಬ್ರಿಟಿಷರೊಂದಿಗೆ ಸಮುದಾಯದ ಮಿಲಿಟರಿ ಮೈತ್ರಿಯನ್ನು ಮಾಡಿಕೊಂಡು ನಡೆಸಿದ ಯುದ್ಧದಲ್ಲಿ ಟಿಪ್ಪು ಸುಲ್ತಾನನಿಗೆ ಸೋಲಾಯಿತು. ಕೊಡವ ಯೋಧರ ವೀರಾವೇಶದಿಂದಲೇ ಮೈಸೂರು ಸುಲ್ತಾನರಿಗೆ 31 ಬಾರಿ ಸೋಲಾಗಿದೆ ಎಂದರು. 1785 ರಲ್ಲಿ ಮೈಸೂರು ಸುಲ್ತಾನರು ಹಾಗೂ ಫ್ರೆಂಚ್ ಪಡೆಗಳು ನಡೆಸಿದ…

Read More

ಮಡಿಕೇರಿ ಡಿ.6 NEWS DESK : ವಿರಾಜಪೇಟೆ ತಾಲೂಕಿನ ಕಾವಡಿ-ಅಮ್ಮತಿ ಗ್ರಾಮದ ಕ್ರಿಶ್ಚಿಯನ್ ಕಾಲೋನಿ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಕಾವಡಿ ಅಮ್ಮತಿ ಗ್ರಾಮದ, ಕ್ರಿಶ್ಚಿಯನ್ ಕಾಲೋನಿ ರಸ್ತೆ ಅಭಿವೃದ್ಧಿಗೆ, ಈ ಹಿಂದೆ ಸ್ಥಳೀಯ ನಿವಾಸಿಗಳು  ಶಾಸಕರಿಗೆ ಮನವಿ ಸಲ್ಲಿಸಿದ್ದರು. ಉತ್ತಮ ರಸ್ತೆಯ ಅವಶ್ಯಕತೆಯನ್ನು ಮನಗಂಡ ಶಾಸಕರು ತಕ್ಷಣವೆ ಅನುದಾನ ಬಿಡುಗಡೆಗೊಳಿಸಿದ್ದು, ಈಗ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ. ತಮ್ಮ ದಶಕದ ಬೇಡಿಕೆಗೆ ಸ್ಪಂದಿಸಿದ ಶಾಸಕರ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕಾಮಗಾರಿ ಮಂಜೂರು ಮಾಡಿಸುವಲ್ಲಿ ಸಹಕರಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರಿಗೆ ಧನ್ಯವಾದ ಅರ್ಪಿಸಿದ್ದಾರೆ.

Read More

ವಿರಾಜಪೇಟೆ ಡಿ.6 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿರಾಜಪೇಟೆ ವತಿಯಿಂದ ಸರಕಾರಿ ಪ್ರೌಢಶಾಲೆ ಕೊಂಡಂಗೇರಿಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಕೊಂಡಂಗೇರಿಯ ಸರಕಾರಿ ಪ್ರೌಢಶಾಲೆ ಸಹ ಶಿಕ್ಷಕರಾದ ರಮೇಶ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ದೇವಣಗೇರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಲೋಕೇಶ್ ಹೆಚ್.ಡಿ. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿ ದುಶ್ಚಟದಿಂದ ಮನುಷ್ಯನ ದೇಹ ಮನಸ್ಸು ಹಾಳಾಗುತ್ತದೆ. ಮನುಷ್ಯನ ದೇಹ, ಮನಸ್ಸು, ಆರೋಗ್ಯ ಚೆನ್ನಾಗಿದ್ದರೆ ಏನಾದರೂ ಜೀವನದಲ್ಲಿ ಸಾಧನೆ ಮಾಡಬಹುದು, ಗುಟ್ಕಾ ಸೇವನೆ ಮಧ್ಯಪಾನ, ಅಮಲು ಪದಾರ್ಥಗಳ ಸೇವನೆಯಿಂದ ಆರೋಗ್ಯಕ್ಕೆ ಹಾನಿಕಾರಕ. ಪೋಷಕರು ಮಕ್ಕಳ ಬಗ್ಗೆ ಹೆಚ್ಚಿನ ಗಮನ ವಹಿಸಬೇಕು. ಇನ್ನು ಮುಂದಕ್ಕೆ ತರಗತಿಯಲ್ಲಿ ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರದ ಬಗ್ಗೆ ಬೋಧನೆ ಕ್ಲಾಸ್ ಮಾಡಲಾಗುವುದು ಎಂದು ತಿಳಿಸಿದರು. ಇದೇ ಸಂದರ್ಭ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಮೇಲ್ವಿಚಾರಕ ಧನೇಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಒಕ್ಕೂಟದ ಅಧ್ಯಕ್ಷರಾದ ನೇತ್ರಾವತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೇವಾ ಪ್ರತಿನಿಧಿ ಮೀನಾಕ್ಷಿ, ಶಿಕ್ಷಕರಾದ…

Read More

ಬೆಂಗಳೂರು ಡಿ.6 NEWS DESK : ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ವಿಧಾನಸೌಧ ಆವರಣದಲ್ಲಿರುವ ಬಾಬಾ ಸಾಹೇಬರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿರು. ನಂತರ ಮಾತನಾಡಿದ ಅವರು,  ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ ಗೌರವ ತಂದುಕೊಡಲು ಪ್ರಯತ್ನಿಸಿದರಲ್ಲದೇ, ದೇಶದಲ್ಲಿ ಸಾಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದವರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶಕ್ಕೆ ಎಂತಹಾ ಸಂವಿಧಾನದ ಅಗತ್ಯವಿದೆ ಎಂದು ಯೋಚಿಸಿ, ಇತರೆ ದೇಶಗಳ ಸಂವಿಧಾನವನ್ನು ಅಭ್ಯಾಸ ಮಾಡಿ, ಅತ್ಯಂತ ಶ್ರೇಷ್ಠ ಸಂವಿಧಾನವನ್ನು ಕೊಟ್ಟಿದ್ದಾರೆ. ನಮ್ಮ ಸಾಮಾಜಿಕ ವ್ಯವಸ್ಥೆಯ ಬದಲಾವಣೆಯಾಗಬೇಕು, ಎಲ್ಲರಿಗೂ ಸಮಾನ ಅವಕಾಶಗಳು ದೊರಕಬೇಕು ಹಾಗೂ ಸಾಮಾಜಿಕ ನ್ಯಾಯ ಸ್ಥಾಪನೆಯಾಗಬೇಕು ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದರು. ಶಾಲಾ ಕಾಲೇಜು ಮಕ್ಕಳಿಗೆ…

Read More

ಮಡಿಕೇರಿ ಡಿ.6 NEWS DESK : ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕು ಘಟಕ ಹಾಗೂ ಸಂತ ಅನ್ನಮ್ಮ ದೇವಾಲಯದ ಸಹಯೋಗದಲ್ಲಿ ಡಿ.7 ರಂದು ಕ್ರಿಸ್ಮಸ್ ಗಾನ ತರಂಗ ಜಿಲ್ಲಾ ಮಟ್ಟದ ಗಾಯನ ಹಾಗೂ ಚಿತ್ರಕಲೆ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಜಾನ್ಸನ್ ಪಿಂಟೋ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಭಾನುವಾರ ಬೆಳಿಗ್ಗೆ 10 ಗಂಟೆಗೆ ವಿರಾಜಪೇಟೆಯ ಸಂತ ಅನ್ನಮ್ಮ ದೇವಾಲಯದ ಸಭಾಂಗಣದಲ್ಲಿ ಮೂರನೇ ವರ್ಷದ ಸ್ಪರ್ಧೆ ನಡೆಯಲಿದ್ದು, ವಿರಾಜಪೇಟೆ ವಲಯ ಶ್ರೇಷ್ಠ ಗುರು ಫಾ.ಜೇಮ್ಸ್ ಡೊಮೆನಿಕ್ ಧ್ವಜಾರೋಹಣ ಹಾಗೂ ಸ್ಪರ್ಧೆಯನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 2.30 ಗಂಟೆಗೆ ಮೈಸೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷ ರೆ.ಡಾ.ಫ್ರಾನ್ಸೀಸ್ ಸೆರಾವೋ ಎಸ್.ಜೆ. ದಿವ್ಯ ಸಾನಿಧ್ಯ ಹಾಗೂ ಆಶೀರ್ವಚನ ನೀಡಲಿದ್ದು, ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಪಾಲ್ಗೊಳ್ಳಲಿದ್ದಾರೆ. ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಶಿಯೇಶನ್‍ನ ವಿರಾಜಪೇಟೆ ಹಾಗೂ ಪೊನ್ನಂಪೇಟೆ…

Read More

ಮಡಿಕೇರಿ ಡಿ.7 NEWS DESK : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸದಸ್ಯರಿಗಾಗಿ ವಿಮೆ ಸೌಲಭ್ಯ ಕಲ್ಪಿಸುವ ಕಾರ್ಯಕ್ರಮ ಡಿ. 8 ರಂದು ನಡೆಯಲಿದೆ ಎಂದು ಪ್ರಧಾನ ಕಾರ್ಯದರ್ಶಿ ಹೆಚ್.ಜೆ. ರಾಕೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಮಡಿಕೇರಿ ನಗರದ ಪತ್ರಿಕಾ ಭವನದಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ರಿಪಬ್ಲಿಕ್ ಟಿವಿ ನೆಟ್ ವರ್ಕ್ ಅಧ್ಯಕ್ಷ ಚೇರಂಡ ಕಿಶನ್ ಮಾದಪ್ಪ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ವನ್ಯಜೀವಿ ಮಂಡಳಿ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ರಾಜ್ಯ ನಿರ್ದೇಶಕಿ ಬಿ.ಆರ್. ಸವಿತಾ ರೈ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Read More