ಲೇಖಕ: admin

ಮಡಿಕೇರಿ NEWS DESK  ಡಿ.6 : ಸಾಮಾಜಿಕ ಕಾರ್ಯಕರ್ತ ಹಾಗೂ ನಗರಸಭೆಯ ಬಿಜೆಪಿ ಸದಸ್ಯರಾದ ಉಷಾ ಕಾವೇರಪ್ಪ ಅವರ ಪತಿ ಎಂ.ಕೆ.ಕಾವೇರಪ್ಪ ಅವರು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಶಾಸಕರ ಅಭಿವೃದ್ಧಿ ಕಾರ್ಯ, ಜನಪರ ಕಾಳಜಿ, ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಇಚ್ಛಾಶಕ್ತಿ ಮತ್ತು ಜನಸ್ನೇಹಿ ಗುಣವನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದಾಗಿ ಕಾವೇರಪ್ಪ ತಿಳಿಸಿದರು. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಯ ಮೂಲಕ ಶಾಸಕರಿಗೆ ಶಕ್ತಿ ತುಂಬುವುದಾಗಿ ಹೇಳಿದರು. ಈ ಸಂದರ್ಭ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ.ರಾಜೇಶ್, ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು. ಶಾಸಕ ಡಾ ಮಂತರ್ ಗೌಡ ಅವರು ಕಾಂಗ್ರೆಸ್ ಶಾಲು ಹಾಕಿ ಕಾವೇರಪ್ಪ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

Read More

ಮಡಿಕೇರಿ ಡಿ.6 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಚಾಲನೆ ನೀಡಿದರು. ಕಗ್ಗೋಡ್ಲುವಿನ ಹೂಕಾಡು ಪೈಸಾರಿಗೆ ಭೇಟಿ ನೀಡಿದ ಶಾಸಕರು ಇಲ್ಲಿಯ ಪ್ರಸಿದ್ಧ ಕರಿ ಚಾಮುಂಡಿ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಶಾಸಕರ ಅನುದಾನದ ರೂ.25 ಲಕ್ಷಗಳಲ್ಲಿ ಕೈಗೆತ್ತಿಕೊಂಡಿರುವ ರಸ್ತೆ ದುರಸ್ತಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಎಲ್ಲರಿಗೆ ಶುಭ ಕೋರಿದರು. ಬಳಿಕ ಮೇಕ್ ಏರಿಯ ಶಾಲೆ ಎದುರಿನ ಮುಖ್ಯ ರಸ್ತೆ ಬಳಿ, ನೂತನವಾಗಿ ಶಾಸಕರ ಅನುದಾನದಲ್ಲಿ ನಿರ್ಮಾಣ ಆಗುತ್ತಿರುವ ಬಸ್ ತಂಗುದಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ಹಾಕತ್ತೂರು ವಲಯ ಅಧ್ಯಕ್ಷರು ಪಿಯೂಸ್, ಮೇಕೇರಿ ವಲಯ ಪೊನ್ನಪ್ಪ, ಶಾರದಾ, ಜಗತ್, ವಿಜಯಲಕ್ಷ್ಮಿ , ಬೂತ್ ಅಧ್ಯಕ್ಷರು ಕೊರಗಪ್ಪ, ಶಂಕರ ಪೂಜಾರಿ, ತಿಮ್ಮಯ್ಯ, ಪಂಚಾಯಿತಿ ಸದಸ್ಯರು ಹನೀಫ್, ಸೂರಜ್ ಹೊಸೂರು, ಉದಯ ಅಯ್ಯಪ್ಪ, ಸಾಕಿಬ್,…

Read More

ಕುಶಾಲನಗರ ಡಿ.6 NEWS DESK : ಪಟ್ಟಣದ ಟೋಲ್ ಗೇಟ್ ನಲ್ಲಿರುವ ಕಾವೇರಿ ದೇವಾಲಯದಲ್ಲಿ ಬಾರವಿ ಕನ್ನಡ ಅಭಿಮಾನಿ ಸಂಘದ ವತಿಯಿಂದ ಪುತ್ತರಿ (ಹುತ್ತರಿ) ಹುಣ್ಣಿಮೆ ಹಾಗೂ ಹಬ್ಬದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮವು ಜರುಗಿತು. ಅರ್ಚಕ ಪುರುಷೋತ್ತಮ್ ಭಟ್ ನೇತೃತ್ವದಲ್ಲಿ ಕಾವೇರಿ ಪ್ರತಿಮೆಗೆ ವಿವಿಧ ಪುಷ್ಪ ಹಾಗೂ ವಸ್ತ್ರಗಳಿಂದ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಿ ಮಹಾ ಆರತಿ ಬೆಳಗಲಾಯಿತು. ಉದ್ಯಮಿ ಬೆಂಗಳೂರಿನ ಸುನಂದ ಕೌಶಿಕ್ ಹಾಗೂ ರುದ್ರೇಶ್ ಕುಟುಂಬಸ್ಥರು ಪೂಜಾ ಸೇವಾರ್ಥ ನೆರವೇರಿಸಿದರು. ಸುನಂದ ಹಾಗೂ ಕುಟುಂಬಸ್ಥರು ಕಾವೇರಿ ಮಾತೆಗೆ ವಸ್ತ್ರ ದಾನ ಮಾಡಿದರು. ಪಿರಿಯಾಪಟ್ಟಣ ಪುರಸಭೆ ಸದಸ್ಯ ಪಿ.ಎನ್.ವಿನೋದ್ ಮಾತನಾಡಿ,ಜೀವನದಿ ಕಾವೇರಿಗೆ ತನ್ನದೆ ಪಾವಿತ್ರ್ಯತೆ ಇದೆ. ಈ ಬಗ್ಗೆ ಬಾರವಿ ಕನ್ನಡ ಅಭಿಮಾನಿ ಸಂಘದ ವತಿಯಿಂದ ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಜೀವನದಿ ಕಾವೇರಿಗೆ ಕಲುಷಿತ ನೀರನ್ನು ಹರಿಸಬಾರದು. ನದಿಯ ಪಾವಿತ್ರ್ಯತೆಯನ್ನು ಕಾಪಾಡುವಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಹೇಳಿದರು. ಬಾರವಿ ಕನ್ನಡ ಅಭಿಮಾನಿಗಳ ಸಂಘದ ಸಂಚಾಲಕ ರವೀಂದ್ರ…

Read More

ಮಡಿಕೇರಿ ಡಿ.6 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಿರಿಯರ ಕವಿಗೋಷ್ಠಿಯನ್ನು ಡಿ.9 ರಂದು ಮಧ್ಯಾಹ್ನ 2.30ಕ್ಕೆ ಮಡಿಕೇರಿಯ ಕೊಡಗು ಪತ್ರಿಕೆ ಭವನದಲ್ಲಿ ಏರ್ಪಡಿಸಲಾಗಿದೆ. ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿಗಳಾದ ಬಿ.ಎ ಶಂಷುುದ್ದೀನ್ ರವರು ವಹಿಸಲಿದ್ದು ಕವಿಗೋಷ್ಠಿಯನ್ನು ಕವಿ ಸಾಹಿತಿ, ಕಾಜೂರು ಸತೀಶ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ ಕಾಮತ್, ಮಾಜಿ ಅಧ್ಯಕ್ಷ ಟಿ.ಪಿ ರಮೇಶ್, ಸಾಹಿತಿ ಶ್ರೀಮತಿ ಕೃಪಾ ದೇವರಾಜ್ ಹಾಗೂ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್ ಭಾಗವಹಿಸಲಿದ್ದಾರೆ. ಹಿರಿಯ ಕವಿಗಳಾದ ಕಿಗ್ಗಾಲು ಎಸ್ ಗಿರೀಶ್, ಶ್ರೀಮತಿ ಜಲ ಕಾಳಪ್ಪ , ಮೂಟೆರ ಕೆ ಗೋಪಾಲಕೃಷ್ಣ ಶ್ರೀಮತಿ ಕೆ ಶೋಭಾ ರಕ್ಷಿತ್, ಶ್ರೀಮತಿ ಕಟ್ರತನ ಲಲಿತಾ ಅಯ್ಯಣ್ಣ, ಶ್ರಿಮತಿ ಶ.ಗ. ನಯನತಾರ, ಶ್ರೀಮತಿ ಅಂಬೆಕಲ್ಲು ಸುಶೀಲ ಕುಶಾಲಪ್ಪ, ಬಿ.ಜಿ ಅನಂತಶಯನ, ವಿದ್ವಾನ್ ಶಂಕರಯ್ಯ ಮಾಸ್ಟರ್, ಶ್ರೀಮತಿ ಭಾಗೀರಥಿ…

Read More

ನಾಪೋಕ್ಲು ಡಿ.6 NEWS DESK : ಕೊಡಗಿನ ಸುಗ್ಗಿಯ ಹಬ್ಬವಾದ ಧಾನ್ಯ ಲಕ್ಷ್ಮೀಯನ್ನು ಬರಮಾಡಿಕೊಳ್ಳುವ ಪುತ್ತರಿ (ಹುತ್ತರಿ) ಹಬ್ಬ ವನ್ನು ಜಿಲ್ಲೆಯಾದ್ಯಂತ ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕಕ್ಕಬ್ಬೆಯ ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ರಾತ್ರಿ ಹುತ್ತರಿ ಹಬ್ಬದ ಮೊದಲ ಪೂಜೆ ನಡೆಯಿತು. ಬಳಿಕ ಜಿಲ್ಲೆಯಾದ್ಯಂತ ವಿವಿಧ ದೇವಾಲಯಗಳಲ್ಲಿ ಭತ್ತದ ಕದಿರಿಗೆ ಸಾಂಪ್ರದಾಯಿಕ ಪೂಜೆ ನೆರವೇರಿತು. ಪಾಡಿ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ದೇವಾಲಯದ ಸುತ್ತಮುತ್ತಲಿನ ಪೊ0ಗೇರ, ಕೋಳೆಯಂಡ, ಬೊಳ್ಳನಮ್ಮಂಡ, ಹಳ್ಳಿ ಮಾಡ ಸೇರಿದಂತೆ ಅಮ್ಮಂಗೇರಿಯ ಸುತ್ತÀಮುತ್ತಲಿನ ಕುಟುಂಬದವರು ಊರಿನ, ಪರವೂರಿನ ಭಕ್ತರು ಪಾಲ್ಗೊಂಡಿದ್ದರು. ದೇವಾಲಯದ ಸುತ್ತಮುತ್ತಲಿನ ವಿವಿಧ ಕುಟುಂಬಗಳ ಮಹಿಳೆಯರು ತಳಿಯಕ್ಕಿ ಬೊಳಕ್ನೊಂದಿಗೆ ದೇವಾಲಯಕ್ಕೆ ಆಗಮಿಸಿದರು. ಬಳಿಕ ಕುಡಿಯರ ಕಾವೇರಪ್ಪ ಮತ್ತು ಸಂಗಡಿಗರಿಂದ ದುಡಿಕೊಟ್ ಪಾಟ್ ನುಡಿಸಲಾಯಿತು. ಬಳಿಕ ಹಿರಿಯರಾದ ಪೊ0ಗೇರ ಉಲ್ಲಾಸ್ ದೇವರ ನಡೆಯಲ್ಲಿ ನಾಡಿನ ಸುಭಿಕ್ಷೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಆನಂತರ ಜಾಗಟೆ, ಡೋಲು ಸಹಿತ ಬೆಳ್ಳಿಯ ಬಿಂದಿಗೆಯೊ0ದಿಗೆ ಮುಕ್ಕಾಟಿ ಸುಬ್ರಮಣಿ ಹಾಗೂ ವಿವಿಧ ಕುಟುಂಬಗಳ ಮಹಿಳೆಯರು ತಳಿಯಕ್ಕಿ…

Read More

ಸುಂಟಿಕೊಪ್ಪ ಡಿ.5 NEWS DESK : ವ್ಯಕ್ತಿತ್ವ ನಿರ್ಮಾಣದಲ್ಲಿ ಶಾಲೆ ಮತ್ತು ಶಿಕ್ಷಕರ ಜವಾಬ್ದಾರಿ ಬಹುದೊಡ್ಡದಿದ್ದು, ಪೋಷಕರು ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ವಾತವರಣವನ್ನು ತಮ್ಮ ಕುಟುಂಬಗಳಲ್ಲಿ ಒದಗಿಸಿದಲ್ಲಿ ಮಾತ್ರ ವ್ಯಕ್ತಿತ್ವ ವಿಕಸನಗೊಳ್ಳಲು ಸಾಧ್ಯವೆಂದು ವಂ.ಗುರುಗಳಾದ ವಿಜಯಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು. ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವು ಶಾಲಾವರಣದಲ್ಲಿ ಮಕ್ಕಳ ಕವಾಯತ್ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಆರ್ಶಿವಚನ ನೀಡಿ ಮಾತನಾಡಿದ ಅವರು, ಪೋಷಕರು ಮಕ್ಕಳನ್ನು ಒಮ್ಮೆ ಶಾಲೆಗೆ ಸೇರಿಸಿ ಬಿಟ್ಟರೆ ತಮ್ಮ ಜವಾಬ್ದಾರಿ ಮುಗಿಯಿತು ಎಂಬ ಭಾವನೆಯನ್ನು ಹೊಂದಿರ ಬಾರದು. ಬದಲಾಗಿ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೋಷಕರು ಮತ್ತು ಶಿಕ್ಷಕರ ಪಾತ್ರ ಬಹಳ ಮಹತ್ವದೆಂದು ವಂ.ಗುರುಗಳಾದ ವಿಜಯಕುಮಾರ್ ಹೇಳಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪಿ.ಆರ್.ಸುನಿಲ್‍ಕುಮಾರ್ ಮಾತನಾಡಿ ತಾವು ಈ ಶಾಲೆಯ ಹಳೆಯ ವಿದ್ಯಾರ್ಥಿಯಾಗಿದ್ದು, ಶಾಲೆಯಲ್ಲಿ ನೀಡಿದ ಶಿಕ್ಷಣವು ತನ್ನನ್ನು ಸುಂಟಿಕೊಪ್ಪದ ಪ್ರಥಮ ಪ್ರಜೆಯನ್ನಾಗಿ ರೂಪಿಸಿದೆ ಎಂದು ಭಾವುಕರಾಗಿ ನುಡಿದರು. ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಂ.ಕೃಷ್ಣಪ್ಪ ಅವರು…

Read More

ಮಂಡ್ಯ ಡಿ.5 NEWS DESK : ಮಂಡ್ಯದ ವಿ.ಸಿ.ಫಾರಂನಲ್ಲಿ ನಿರ್ಮಿಸಿರುವ ಗ್ರಾಮೀಣ ಸ್ವಸಹಾಯ ಸಂಘದ ಮಹಿಳೆಯರ ಆರ್ಥಿಕ‌ ಬಲವರ್ಧನೆಯ ಮಳಿಗೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿ ಬಳಿಕ, “ಕೃಷಿ ಮೇಳ 2025” ನ್ನು ಉದ್ಘಾಟಿಸಿದರು.  ಕೃಷಿ ಸಚಿವರಾದ ಚಲುವರಾಯಸ್ವಾಮಿ ಮತ್ತು ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ಮಳವಳ್ಳಿ ನರೇಂದ್ರಸ್ವಾಮಿ ಸೇರಿ‌ ಹಲವರು ಉಪಸ್ಥಿತರಿದ್ದರು.

Read More

ನವದೆಹಲಿ ಡಿ.5 NEWS DESK : ಭಾರತ ಮತ್ತು ರಷ್ಯಾ ‘ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಒಟ್ಟಾಗಿ ನಡೆಯುತ್ತವೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಮಧ್ಯಾಹ್ನ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ದ್ವಿಪಕ್ಷೀಯ ಸಭೆ ನಂತರ ಇಂದು ಮಧ್ಯಾಹ್ನ ಹೈದರಾಬಾದ್‌ ಹೌಸ್​​ನಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ನಾಯಕರು, ಭಯೋತ್ಪಾದನೆಯನ್ನು ಎದುರಿಸಲು ಭಾರತದ ಪ್ರಯತ್ನಗಳಿಗೆ ಮಾಸ್ಕೋ ಬಲವಾದ ಬೆಂಬಲ ನೀಡುತ್ತಿದೆ ಮತ್ತು ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ದಾಳಿಯಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್‌ನ ನಂಟಿದೆ ಎಂಬ ಆರೋಪದ ನಂತರ ಅದು ಬಲವಾಗಿ ಪ್ರತಿಕ್ರಿಯಿಸಿದೆ. ಭಯೋತ್ಪಾದಕ ದಾಳಿಯನ್ನು ಖಂಡಿಸಿದ ಮಾಸ್ಕೋ, “ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲು ಭಾರತದೊಂದಿಗೆ ಕೈಜೋಡಿಸುವುದಾಗಿ” ಹೇಳಿದರು.

Read More

ಸೋಮವಾರಪೇಟೆ ಡಿ.5 NEWS DESK : ಕೊಡಗು ಜಿಲ್ಲಾ ಕನ್ನಡ ಸಿರಿ ಸ್ನೇಹ ಬಳಗ ಹಾಗೂ ವಿವಿಧ ಸಂಘ–ಸಂಸ್ಥೆಗಳ ಆಶ್ರಯದಲ್ಲಿ ಮಹಿಳಾ ಸಮಾಜ ಭವನದಲ್ಲಿ “ಶತಕಂಠ ಗೀತ ಗಾಯನ” ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. 150 ವರ್ಷ ಪೂರೈಸಿದ ಬಕಿಮ್‍ಚಂದ್ರ ಚಟರ್ಜಿ ರಚಿಸಿರುವ “ವಂದೇ ಮಾತರಂ”, ರಾಷ್ಟ್ರಕವಿ ಕುವೆಂಪು ರಚಿಸಿದ “ಜಯ ಭಾರತ ಜನನಿಯ ತನುಜಾತೆ”, ಹುಯಿಲಗೊಳ ನಾರಾಯಣರಾಯರು ರಚಿಸಿರುವ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು” ಗೀತೆಗಳಿಗೆ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ಶತಕಂಠ ಗಾಯನದ ಮೂಲಕ ಗೌರವ ಸಲ್ಲಿಸಲಾಯಿತು. ನಾಡಗೀತೆ ಜಯ ಭಾರತ ಜನನಿಯ ತನುಜಾತೆ, ಉದಯವಾಗಲಿ ನಮ್ಮ ಚಲುವ ಕನ್ನಡ ನಾಡು, 150 ವರ್ಷ ಪೂರೈಸಿದ “ವಂದೇ ಮಾತರಂ” ಗೀತೆಗಳನ್ನು ಎಲ್ಲಾ ಗಾಯಕ ಗಾಯಕಿಯರು ಹಾಡಿದರು. ಕಾರ್ಯಕ್ರಮವನ್ನು ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಿ.ಜಿ.ಅನಂತಶಯನ ಉದ್ಘಾಟಿಸಿದರು. ಕಾರ್ಯಕ್ರಮ ಅಧ್ಯಕ್ಷತೆಯನ್ನು ಸ್ನೇಹ ಬಳಗದ ಜಿಲ್ಲಾಧ್ಯಕ್ಷ ಲೋಕೇಶ್ ಸಾಗರ್ ವಹಿಸಿದ್ದರು. ವೇದಿಕೆಯಲ್ಲಿ ಬಳಗದ ತಾಲ್ಲೂಕು ಅಧ್ಯಕ್ಷ ಹೆಚ್.ಜೆ.ಜವರ, ಮಹಿಳಾ ಸಮಾಜದ ಅಧ್ಯಕ್ಷೆ ವಿಜಯಲಕ್ಷ್ಮಿ…

Read More

ವಿರಾಜಪೇಟೆ ಡಿ.5 NEWS DESK :  ಬೇಟೋಳಿ ರಾಮನಗರದಲ್ಲಿರುವ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಪುತ್ತರಿ (ಹುತ್ತರಿ) ಹಬ್ಬವನ್ನು ಶ್ರದ್ದಾಭಕ್ತಿಯಿಂದ ಆಚರಿಸಲಾಯಿತು. ಅರ್ಚಕರು ದೇವಸ್ಥಾನದ ಒಳ ಆವರಣದಲ್ಲಿರುವ ಶ್ರೀ ಮಹಾಗಣಪತಿ, ಶ್ರೀ ನಾಗ ದೇವರು ಹಾಗೂ ಶ್ರೀ ವನದುರ್ಗೆ ದೇವರುಗಳಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ಶ್ರೀ ಅಯ್ಯಪ್ಪ ಸ್ವಾಮಿಗೆ ಮಹಾ ಮಂಗಳಾರತಿ ಸೇವೆಯನ್ನು ನೆರವೇರಿಸಿದರು. ನಂತರ ನೆರೆಕಟ್ಟಿ, ಸಮೀಪದ ಮಕ್ಕಿಯ ಬಿ.ಆರ್.ಶ್ರೀನಿವಾಸ್ ಅವರ ಗದ್ದೆಗೆ ತೆರಳಿ ಧಾನ್ಯಲಕ್ಷ್ಮಿಗೆ ಪೂಜೆಯನ್ನು ಸಲ್ಲಿಸಿ, ಹಾಲಿನ ಅಭಿಷೇಕವನ್ನು ಮಾಡಿ ಆರತಿಯನ್ನು ಬೆಳಗಿ ಶ್ರೀ ಇಗ್ಗುತ್ತಪ್ಪ, ಕಾವೇರಮ್ಮೆಯನ್ನು ಪ್ರಾರ್ಥಿಸುವ ಮೂಲಕ ಕದಿರನ್ನು ತೆಗೆದರು. ನೆರೆದಿದ್ದ ಭಕ್ತಾದಿಗಳು ಪೊಲಿ ಪೊಲಿಯೇ ದೇವಾ ಎಂದು ಕೂಗುತ್ತ ಧಾನ್ಯಲಕ್ಷ್ಮಿ ಗೆ ನಮಿಸಿದರು. ದೇವಸ್ಥಾನಕ್ಕೆ ತೆರಳಿ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಪೂಜೆಯನ್ನು ಸಲ್ಲಿಸಿ ಧಾನ್ಯಲಕ್ಷ್ಮಿಗೆ ಪೂಜೆ ಸಲ್ಲಿಸಲಾಯಿತು. ನೆರೆದಿದ್ದ ಭಕ್ತಾದಿಗಳಿಗೆ ಅರ್ಚಕರು ಕದಿರನ್ನು ಹಾಗೂ ಪ್ರಸಾದವನ್ನು ವಿತರಿಸಿದರು. ಸಿಡಿ ಮದ್ದನ್ನು ಸಿಡಿಸಿ ಸಂಭ್ರಮಿಸಿದರು. ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ದೇವಸ್ಥಾನದ ಅರ್ಚಕರಾದ…

Read More