ಲೇಖಕ: admin

ಮಡಿಕೇರಿ ಡಿ.4 NEWS DESK : ವಿರಾಜಪೇಟೆ ಐಪಿಎಲ್ ಪ್ರಿಮಿಯರ್ ಲೀಗ್  ಟಿ10 ಕ್ರೀಡಾಕೂಟದ ಲೋಗೋ ವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಬಿಡುಗಡೆಗೊಳಿಸಿ, ಆಯೋಜಕರಿಗೆ ಶುಭ ಹಾರೈಸಿದರು. ಈ ಸಂದರ್ಭ ಕ್ರೀಡಾ ಆಯೋಜಕರು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Read More

ಮಡಿಕೇರಿ ಡಿ.4 NEWS DESK : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿ ಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಡಿಸೆಂಬರ್ 22 ರಿಂದ ನಿರುದ್ಯೋಗಿ ಪುರುಷರಿಗೆ ಪೋಟೋಗ್ರಫಿ ಮತ್ತು ವಿಡಿಯೋಗ್ರಫಿ ಉಚಿತ ತರಬೇತಿ ಶಿಬಿರ ಏರ್ಪಡಿಸಿದೆ. ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 35 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದು. ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು. ಆಸಕ್ತಿಯುಳ್ಳ ಅಭ್ಯರ್ಥಿಗಳು ಡಿಸೆಂಬರ್, 15 ರಂದು ಬೆಳಗ್ಗೆ 10 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ),…

Read More

ಸೋಮವಾರಪೇಟೆ ಡಿ.4 NEWS DESK : ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸುವ ಅತ್ಯುತ್ತಮ ವೇದಿಕೆಯಾಗಿದ್ದು, ಇದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ವಿದ್ಯಾರ್ಥಿಗಳಿಗೆ ಹೇಳಿದರು. ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಬಳಗುಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ನಡೆದ ಪ್ರತಿಭಾ ಕಾರಂಜಿ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಭಾ ಕಾರಂಜಿ ಕೇವಲ ಸ್ಫರ್ಧೆಯಲ್ಲ. ಮಕ್ಕಳ ವ್ಯಕ್ತಿತ್ವ ವಿಕಸನಕ್ಕೂ ದಾರಿಯಾಗಿದೆ. ಇಲ್ಲಿ ಸಿಗುವ ಅವಕಾಶವನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಂಡರೆ ಇನ್ನಷ್ಟು ಕಲಿಕೆಯ ಬಗ್ಗೆ ಆಸಕ್ತಿ ಮೂಡುತ್ತದೆ ಎಂದರು. ವೇದಿಕೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬಸವರಾಜು, ಸರ್ಕಾರಿ ನೌಕರರ ಸಂಘದ ನಿರ್ದೆಶಕ ಎಂ.ಎಂ.ಯಶ್‍ವಂತ್ ಕುಮಾರ್, ಬೇಳೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೋಹನ್, ಸಿಆರ್‍ಪಿ ಗಿರೀಶ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಸುಮಿತ್ರ, ಉಪಾಧ್ಯಕ್ಷ ಯಶವಂತ್, ಗ್ರಾಮದ ಪ್ರಮುಖರಾದ ಪಾಪಮ್ಮ, ಸುಮಾ, ಪುಟ್ಟರಾಜು, ಸುರೇಂದ್ರ ಸುರೇಶ ಮತ್ತಿತರರು ಇದ್ದರು. ಶಿಕ್ಷಕರಾದ ಭಾಗ್ಯ, ಧರ್ಮಾವತಿ, ಗೀತಾ…

Read More

ಮಡಿಕೇರಿ ಡಿ.4 NEWS DESK : ಮಡಿಕೇರಿ ಡಿ.4 : ಪ್ರವಾಸಿ ವಾಹನಗಳು ಸೇರಿದಂತೆ ಎಲ್ಲಾ ರೀತಿಯ ವಾಹನಗಳನ್ನು ತಪಾಸಣೆ ನಡೆಸಿ, ಒಟ್ಟು 1,140 ವಾಹನಗಳಿಂದ, ಪಾರ್ಟ್ ಬಿ ತೆರಿಗೆ ರೂ.1,57,21,024, ಪಾರ್ಟ್ ಎ ತೆರಿಗೆ ರೂ. 29,357 ಮತ್ತು ದಂಡ ಮೊತ್ತ ರೂ.2,27,800 ಸಂಗ್ರಹಿಸಲಾಗಿದೆ. ಒಟ್ಟು ರೂ.1,59,78,181 ರಾಜಸ್ವವನ್ನು ನವೆಂಬರ್ ತಿಂಗಳಿನಲ್ಲಿ ಸಂಗ್ರಹಿಸಲಾಗಿದ್ದು, ಗುರಿ ಮೀರಿದ ಸಾಧನೆ ಮಾಡಲಾಗಿದೆ ಎಂದು ಕೊಡಗು ಪ್ರಾದೇಶಿಕ ಸಾರಿಗೆ ಅಧಿಕಾರಿ ಎಸ್.ಟಿ.ಸತೀಶ್ ಅವರು ತಿಳಿಸಿದ್ದಾರೆ. ಕೊಡಗು ಜಿಲ್ಲೆಯಾದ್ಯಂತ ನಿರಂತರ ವಾಹನಗಳ ತಪಾಸಣಾ ಕಾರ್ಯ ನಡೆಸಲಾಗುತ್ತಿದೆ. ನ.1 ರಿಂದ 30 ರವರೆಗೆ ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಕಾರ್ಯಕ್ರಮ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಸಹಯೋಗದೊಂದಿಗೆ ಕೊಡಗು ಜಿಲ್ಲೆಯಾದ್ಯಂತ ನಡೆಯಿತು. ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ, ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಇನ್ನಿತರ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲೆ, ಪ್ರಬಂಧ ಮತ್ತು ಚರ್ಚಾಸ್ಪರ್ಧೆಯನ್ನು ನಡೆಸಲಾಗಿತ್ತು. ಅಲ್ಲದೆ ಸರ್ಕಾರಿ ಜೂನಿಯರ್ ಕಾಲೇಜು ಮತ್ತು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ…

Read More

ಮಡಿಕೇರಿ ಡಿ.4 NEWS DESK : ಬ್ರಹ್ಮಗಿರಿ ಸಹೋದಯ ಒಕ್ಕೂಟದ ವತಿಯಿಂದ ಮಡಿಕೇರಿಯ ಕೊಡಗು ವಿದ್ಯಾಲಯದಲ್ಲಿ ಕ್ರೀಡಾಕೂಟವನ್ನು ಏರ್ಪಡಿಸಲಾಗಿತ್ತು. ಸೈನಿಕ ಶಾಲೆ ಕೊಡಗು, ಕ್ರೆಸೆಂಟ್ ಶಾಲೆ ಮಡಿಕೇರಿ, ಅಂಕುರ್ ಪಬ್ಲಿಕ್ ಶಾಲೆ ನಾಪೊಕ್ಲು, ಎಸ್‌ಎಮ್‌ಎಸ್ ವಿದ್ಯಾಪೀಠ ಅರಮೇರಿ, ನ್ಯಾಷನಲ್ ಅಕಾಡೆಮಿ ಗೋಣಿಕೊಪ್ಪ, ಸೆಂಟ್ ಆನ್ಸ್ ಕಾನ್ವೆಂಟ್ ಸಿದ್ದಾಪುರ ಮತ್ತು ಕೆವಿಜಿ ಇಂಟರ್‌ನ್ಯಾಷನಲ್ ಪಬ್ಲಿಕ್ ಶಾಲೆ ಸುಳ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಮುಖ್ಯ ಅತಿಥಿ ಮಡಿಕೇರಿಯ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಆರ್.ಪಿ. ಭಾಗವಹಿಸಿದ್ದ. ಸ್ಪರ್ಧಾರ್ಥಿಗಳನ್ನು ಅಭಿನಂದಿಸಿದರು. ಗೌರವ ಅತಿಥಿಯಾಗಿ ಆಗಮಿಸಿದ ಪುಷ್ಪ ಸುಬ್ಬಯ್ಯ ಅವರು ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ. ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ, ಆದರೆ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಅಡಗಿರುವ ಅನನ್ಯ ಪ್ರತಿಭೆಯನ್ನು ಗುರುತಿಸುವುದು ಅತ್ಯಂತ ಮುಖ್ಯವೆಂದು ಅವರು ತಿಳಿಸಿದರು. ಪ್ರಾಥಮಿಕ ಮಟ್ಟದ ಉತ್ತಮ ಕ್ರೀಡಾಪಟು ಪ್ರಶಸ್ತಿ ಬಾಲಕಿಯರ ವಿಭಾಗದಲ್ಲಿ ದೀಪಿಕಾ ಡಿ.ಡಿ., ಬಾಲಕರ ವಿಭಾಗದಲ್ಲಿ ತಿಮ್ಮಯ್ಯ ಎಂ.ಕೆ., ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಇರ್ಶಾನ್, ಬಾಲಕಿಯರ ವಿಭಾಗದಲ್ಲಿ ಹಿತ ಎನ್.ಬಿ. ಅವರಿಗೆ ಸಂದಿತು. ಆತಿಥೇಯ…

Read More

ಮಡಿಕೇರಿ ಡಿ.4 NEWS DESK : ಶ್ರೀರಂಗಪಟ್ಟಣದಿಂದ ಗುಡ್ಡೆಹೊಸೂರು ಬಳಿಯ ಬಸವನಹಳ್ಳಿ ವರೆಗೆ ನಾಲ್ಕು ಪಥದ ರಸ್ತೆ ಕಾಮಗಾರಿ ಈಗಾಗಲೇ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಬಸವನಹಳ್ಳಿಯಿಂದ ಸಂಪಾಜೆವರೆಗೆ ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಈಗಿನಿಂದಲೇ ಸುಗಮ ಸಾರಿಗೆ ಸಂಚಾರಕ್ಕೆ ಅಗತ್ಯ ಮುನ್ನೆಚ್ಚರ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸಲಹೆ ಮಾಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಅವರ ಸಭಾಂಗಣದಲ್ಲಿ ‘ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ’ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕುಶಾಲನಗರದ ಗುಡ್ಡೆಹೊಸೂರು ಬಳಿಯ ಬಸವನಹಳ್ಳಿಯಿಂದ ಸಂಪಾಜೆ ವರೆಗೆ ರಸ್ತೆ ಸುರಕ್ಷತೆ ಸಂಬಂಧ ಅಗತ್ಯ ಕ್ರಮಕೈಗೊಳ್ಳಬೇಕು. ಉಬ್ಬುಗಳ ನಿರ್ಮಾಣ, ಅಗತ್ಯವಿರುವ ಕಡೆಗಳಲ್ಲಿ ಜೀಬ್ರಾ ಕ್ರಾಸ್ ಬರೆಸುವುದು, ಉಬ್ಬುಗಳ ನಿರ್ಮಾಣ, ಬ್ಲಾಕ್ ಸ್ಪಾಟ್ ಗುರುತಿಸುವುದು, ತಿರುವುಗಳಲ್ಲಿ ಸೂಚನಾ ಫಲಕ ಅಳವಡಿಸುವುದು ಸೇರಿದಂತೆ ಅಗತ್ಯ ರಸ್ತೆ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಎಂಜಿನಿಯರ್‍ಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಮಾತನಾಡಿ ಕುಶಾಲನಗರದಿಂದ ಸಂಪಾಜೆವರೆಗೆ ರಸ್ತೆ…

Read More

ಚೆಟ್ಟಳ್ಳಿ ಡಿ.4 NEWS DESK : ಚೆಟ್ಟಳ್ಳಿಯ ಶ್ರೀಮಂಗಲ ಭಗವತಿ ದೇವಾಲಯದಲ್ಲಿ ಪುತ್ತರಿ ಹಬ್ಬದ ಪ್ರಯುಕ್ತ ಪುತ್ತರಿ ಧಾರೆ ಪೂಜೆಯನ್ನು ಶ್ರದ್ಧಾಭಕ್ತಿಯಿಂದ ನಡೆಸಲಾಯಿತು. ಊರಿನ ತಕ್ಕರಾದ ಮುಳ್ಳಂಡ ಕರಣ್ ಕಾವೇರಪ್ಪ ಅವರ ಸಮ್ಮುಖದಲ್ಲಿ ನಾಗ, ಕ್ಷೇತ್ರಪಾಲಕ, ವಿಘ್ನೇಶ್ವರನಿಗೆ ಪೂಜೆ ಸಲ್ಲಿಸಿ ಶ್ರೀ ಭಗವತಿಗೆ ವಿಶೇಷ ಪೂಜೆ ಜರುಗಿತು. ಮಹಾಮಂಗಳಾರತಿಯ ನಂತರ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನೆರವೇರಿತು.. ಹಿರಿಯರಾದ ನಿವೃತ್ತ ಕ್ಯಾಪ್ಟನ್ ಮುಳ್ಳಂಡ ತಿಮ್ಮಯ್ಯ ಮಾತನಾಡಿ, ಕೊಡಗಿನ ಸಂಪ್ರದಾಯದಂತೆ ಪುತ್ತರಿ ನಮ್ಮೆಯ ಆಚರಣೆಯನ್ನು ಮಾಡುತ್ತಾ ಬರುತ್ತಿದ್ದು, ಈ ವರ್ಷವು ಸಂಪ್ರದಾಯಬದ್ಧವಾಗಿ ನಮ್ಮೆಯನ್ನು ಆಚರಿಸಲಾಗುತ್ತಿದೆ ಎಂದರು.

Read More

ನಾಪೋಕ್ಲು ಡಿ.4 NEWS DESK : ಕೊಡಗಿನಲ್ಲಿ ಸಾಂಪ್ರದಾಯಿಕವಾಗಿ ಆಚರಿಸಲ್ಪಡುವ ಪುತ್ತರಿ (ಹುತ್ತರಿ) ಹಬ್ಬದ ಸಂಭ್ರಮಕ್ಕೆ ನಾಡು ಸಜ್ಜಾಗಿದೆ. ಈ ಬಾರಿ ಡಿ.4 ರಂದು (ಇಂದು ಗುರುವಾರ ) ದಂದು ಹುಣ್ಣಿಮೆಯ ದಿನ ಕೊಡಗಿನ ಹುತ್ತರಿ (ಪುತ್ತರಿ) ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಕೊಡಗಿನಾದ್ಯಂತ ಧಾನ್ಯಲಕ್ಷ್ಮಿಯನ್ನು ಮನೆ ತುಂಬಿಸಿಕೊಳ್ಳುವ ಹಬ್ಬ ಹುತ್ತರಿ ಹಬ್ಬ ಕೊಡಗಿನಲ್ಲಿ ಭತ್ತದ ಬೆಳೆ ತೆನೆಬಿಟ್ಟು ಹೊಂಬಣ್ಣಕ್ಕೆ ತಿರುಗುತ್ತಿದ್ದರೆ ನಡುಕ ಹುಟ್ಟಿಸುವ ಚಳಿಯ ನಡುವೆ ಕೊಡಗಿನ ಹುತ್ತರಿ ಹಬ್ಬದ ಆಚರಣೆ. ಗಡಚಿಕ್ಕುವ ಪಟಾಕಿಗಳ ಸದ್ದು, ಮನೆಯಲ್ಲಿ ವಿಶೇಷ ತಿನಿಸುಗಳು, ಪುಟ್ಟ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಮನೆ ಮಂದಿಯೆಲ್ಲಾ ಸಂಭ್ರಮದಿಂದ ಪಾಲ್ಗೊಂಡು ಆಚರಿಸುವ ಹುತ್ತರಿ (ಪುತ್ತರಿ) ಹಬ್ಬ ಕೊಡಗಿನ ವಿಶೇಷ. ಕೊಡವ ನುಡಿಯ ಪುತ್ತರಿ(ಪುದಿಯ ಅರಿ) ಅಂದರೆ ಹೊಸ ಅಕ್ಕಿ. ಇದು ಕನ್ನಡದಲ್ಲಿ ಹುತ್ತರಿ ಎಂದಾಗಿದೆ. ವ್ಯವಸಾಯವನ್ನೇ ಮಾಡಿ ಬದುಕುವ ಬಹುತೇಕ ರೈತಾಪಿ ವರ್ಗ ಪೈರುಗಳು ಬೆಳೆದಾಗ ಶಾಸ್ತ್ರೋಕ್ತವಾಗಿ ಕುಯ್ದು ತಂದು ಮನೆಯನ್ನು ತುಂಬಿಸಿಕೊಳ್ಳುವುದೇ ಈ ಹುತ್ತರಿ ಹಬ್ಬದ ವೈಶಿಷ್ಟ್ಯ. ಮೊದಲು…

Read More

ಸೋಮವಾರಪೇಟೆ ಡಿ.4 NEWS DESK : ಆಲೂರುಸಿದ್ದಾಪುರ ಸಮೀಪದ ತಪೋಕ್ಷೇತ್ರ ಮನೆಹಳ್ಳಿ ಮಠದಲ್ಲಿ ಡಿ.6 ರಂದು ಲಕ್ಷದೀಪೋತ್ಸವ ನಡೆಯಲಿದೆ ಎಂದು ಕ್ಷೇತ್ರದ ಮಠಾಧಿಪತಿಗಳಾದ ಶ್ರೀ.ಮಹಾಂತ ಶಿವಲಿಂಗ ಸ್ವಾಮೀಜಿ ತಿಳಿಸಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಕಾರ್ತಿಕ ಮಾಸದಲ್ಲಿ ಕ್ಷೇತ್ರದ ದೇವರುಗಳಾದ ವೀರಭದ್ರೇಶ್ವರ,ತಪೋವನೇಶ್ವರಿ,ಗುರುಸಿದ್ಧವೀರೇಶ್ವರ ಹಾಗೂ ಜೇನುಕಲ್ಲು ಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜೆಗಳು ನಡೆದಿದ್ದು ಇದೀಗ ಲಕ್ಷದೀಪೋತ್ಸವದ ಅಂಗವಾಗಿ ಪ್ರತಿನಿತ್ಯ ಅರ್ಚನೆ, ಅಭಿಷೇಕಗಳು ನಡೆಯುತ್ತಿವೆ ಎಂದು ತಿಳಿಸಿದ ಅವರು ಡಿ.6 ರ ಶನಿವಾರ ಲಕ್ಷದೀಪೋತ್ಸವದ ಅಂಗವಾಗಿ ವಿಶೇಷ ಪೂಜೆಗಳೊಂದಿಗೆ ರಾತ್ರಿ 8 ಗಂಟೆಗೆ ಸ್ವಾಮಿಯ ಉತ್ಸವ ನಡೆಯಲಿದೆ ಎಂದರು. ಸಂಜೆ 6 ಗಂಟೆಗೆ ಮಠದ ಆವರಣದಲ್ಲಿ ಧಾರ್ಮಿಕ ಸಮಾರಂಭ ನಡೆಯಲಿದೆ, ಕಾರ್ಯಕ್ರಮದಲ್ಲಿ ದೀಪೋತ್ಸವಕ್ಕೆ ಚಾಲನೆ ಹಾಗೂ ಕ್ಷೇತ್ರದ 2026ನೆ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಲಾಗುವುದು, ನಾಡಿನ ಹರಗುರು ಚರ್ಮೂರ್ತಿಗಳ ಸಾನಿಧ್ಯದಲ್ಲಿ,ವಿವಿಧ ಜನಪ್ರತಿನಿಧಿಗಳು,ಸಾಧಕರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಮಹಾಂತ ಸ್ವಾಮೀಜಿ ಹೇಳಿದ್ದಾರೆ.

Read More

ಮಡಿಕೇರಿ ಡಿ.4 NEWS DESK  : ದಲಿತ ಸಂಘಟನೆಗಳ ಹಲವು ವರ್ಷಗಳ ಬೇಡಿಕೆಯಾದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಗೆ ಕೊನೆಗೂ ಕಾಲ ಕೂಡಿ ಬಂದಿದೆ. ಮಡಿಕೇರಿ ನಗರದ ಸುದರ್ಶನ ವೃತ್ತದ ಸರಕಾರಿ ಜಾಗದಲ್ಲಿ ಪ್ರತಿಮೆಯನ್ನು ಸ್ಥಾಪಿಸಲು ಡಿ.5 ರಂದು ಭೂಮಿಪೂಜೆ ನಡೆಯಲಿದೆ. ಕೊಡಗಿನಲ್ಲಿ ಪ್ರಪ್ರಥಮ ಬಾರಿಗೆ ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರ ಕಂಚಿನ ಪ್ರತಿಮೆ ಸ್ಥಾಪನೆಯಾಗುತ್ತಿದ್ದು, ನಗರದ ಸುದರ್ಶನ ವೃತ್ತದ ಬಳಿಯ ಸರಕಾರಿ ಜಾಗವನ್ನು ಗುರುತಿಸಲಾಗಿದೆ. ಡಿ.5ರಂದು ಪ್ರತಿಮೆ ಸ್ಥಾಪನೆಗೆ ಭೂಮಿಪೂಜೆ ನಡೆಯಲಿದೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಿ.ಜೆ.ಮೋಹನ್ ಮೌರ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರ ಗುಡ್ಡೆಮನೆ ಅಪ್ಪಯ್ಯ ಗೌಡ ಸ್ಮಾರಕದ ಬಳಿಯ ನಗರಸಭೆಯ ಉದ್ಯಾನವನದಲ್ಲಿ ಶುಕ್ರವಾರ ಬೆಳಿಗ್ಗೆ 8.30 ಗಂಟೆಗೆ ಕೊಡಗು ಜಿಲ್ಲಾಡಳಿತ ಮತ್ತು ಮಡಿಕೇರಿ ನಗರಸಭೆಯ ಸಹಯೋಗದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದರು. ಅಂದಾಜು 2 ರಿಂದ 3…

Read More