ಲೇಖಕ: admin

ಮಡಿಕೇರಿ ನ.4 NEWS DESK : ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಪ್ರತಿ ವರ್ಷದ ರೂಢಿ ಸಂಪ್ರದಾಯದಂತೆ ನಡೆಸಿಕೊಂಡು ಬರುತ್ತಿರುವ ವಿಷ್ಣುಮೂರ್ತಿ ಕೋಲ (ಚಾಮುಂಡಿ ಉತ್ಸವ)ವು ನ.7 ರಂದು ಬೆಳಗ್ಗೆ 10 ಗಂಟೆಯಿಂದ ನಡೆಯಲಿದೆ. ಸಾರ್ವಜನಿಕ ಭಕ್ತಾದಿಗಳು ವಿಷ್ಣುಮೂರ್ತಿ ಕೋಲ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ದೇವರ ಕೃಪೆಗೆ ಪಾತ್ರರಾಗುವಂತೆ ದೇವಾಲಯದ ಆಡಳಿತಾಧಿಕಾರಿಗಳ ಪರವಾಗಿ ಕಾರ್ಯನಿರ್ವಾಹಣಾಧಿಕಾರಿ ಅವರು ಕೋರಿದ್ದಾರೆ.

Read More

ಮಡಿಕೇರಿ ನ.4 NEWS DESK : ತಲಕಾವೇರಿಯ ಶ್ರೀ ತಲಕಾವೇರಿ ದೇವಾಲಯಲ್ಲಿ ನವೆಂಬರ್, 06 ರಂದು ಸ್ವಚ್ಛತಾ ಕಾರ್ಯದ ಪ್ರಯುಕ್ತ ಮಧ್ಯಾಹ್ನ 2 ಗಂಟೆಯ ನಂತರ ಶ್ರೀ ತಲಕಾವೇರಿ ದೇವಾಲಯಕ್ಕೆ ಪ್ರವೇಶ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ಸಹಕರಿಸಬೇಕೆಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಎನ್.ಜಿ. ಅವರು ಕೋರಿದ್ದಾರೆ.

Read More

ಮಡಿಕೇರಿ ನ.4 NEWS DESK : ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ನವೆಂಬರ್, 05 ರಂದು ಸಂಜೆ 4 ಗಂಟೆಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಲಿದೆ. ಸಾರ್ವಜನಿಕ ಭಕ್ತಾದಿಗಳು ದೇವಾಲಯಗಳಲ್ಲಿ ನಡೆಯಲಿರುವ ಸಾಮೂಹಿಕ ಸತ್ಯನಾರಾಯಣ ಪೂಜೆಯಲ್ಲಿ ಭಾಗವಹಿಸಿ, ಪೂಜೆಯನ್ನು ಯಶಸ್ವಿಗೊಳಿಸಬೇಕಾಗಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಎನ್.ಜಿ ಅವರು ಕೋರಿದ್ದಾರೆ.

Read More

ಮಡಿಕೇರಿ ನ.3 NEWS DESK : ಮಡಿಕೇರಿ ನಗರದಿಂದ ವಿರಾಜಪೇಟೆಗೆ ತೆರಳುವ ರಸ್ತೆಯಲ್ಲಿ ಮೂರನೇ ಮೈಲು ಭಾಗದಲ್ಲಿ ಮರಳಿನ ತಡೆಗೋಡೆ ಅಪಾಯಕಾರಿ ಸ್ಥಿತಿಯಲ್ಲಿದ್ದು, ಬ್ಯಾರಿಕೇಡ್ ಅಳವಡಿಸಬೇಕೆಂದು ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಮುಕ್ಕಾಟಿರ ಅಪ್ಪಯ್ಯ ಅವರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ್ದ ಅವರು ರಸ್ತೆಯ ಸ್ಥಿತಿಗತಿಯ ಬಗ್ಗೆ ಆತಂಕ ವ್ಯಕ್ತಪಡಿಸಿದರು. ನಿರಂತರ ಮಳೆಯಿಂದ ರಸ್ತೆ ಕುಸಿದ ಪ್ರದೇಶದಲ್ಲಿ ತಾತ್ಕಾಲಿಕವಾಗಿ ಮರಳಿನ ತಡೆಗೋಡೆಯನ್ನು ನಿರ್ಮಿಸಲಾಗಿದೆ. ಆದರೆ ಈ ಅಪಾಯಕಾರಿ ತಿರುವಿನಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಕಿರಿದಾದ ರಸ್ತೆಯಲ್ಲಿ ಸಾಗುವ ವಾಹನಗಳು ನಿಯಂತ್ರಣ ತಪ್ಪಿ ಉರುಳುವ ಸಾಧ್ಯತೆ ಇದೆ. ರಾತ್ರಿ ವೇಳೆ ಮತ್ತು ದಟ್ಟ ಮಂಜು ಕವಿದ ವಾತಾವರಣದಲ್ಲಿ ಅಪಾಯ ಎದುರಾಗಬಹುದು. ಅನಾಹುತ ಸಂಭವಿಸುವ ಮೊದಲು ಸಂಬಂಧಿಸಿದ ಇಲಾಖೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು. ತಾತ್ಕಾಲಿಕ ಕ್ರಮವಾಗಿ ತುರ್ತಾಗಿ ಬ್ಯಾರಿಕೇಡ್ ಅಳವಡಿಸಬೇಕು ಎಂದು ಆಗ್ರಹಿಸಿದರು. ಈಗಾಗಲೇ ಮಳೆ ಸಂಪೂರ್ಣವಾಗಿ ನಿಂತು ಹೋಗಿದ್ದು, ತಕ್ಷಣ ತಡೆಗೋಡೆ ನಿರ್ಮಾಣದ ಕಾಮಗಾರಿಯನ್ನು ಆರಂಭಿಸಬೇಕು. ತಡೆಗೋಡೆ ಶಾಶ್ವತ ಪರಿಹಾರವಾಗುವುದರಿಂದ…

Read More

ಮಡಿಕೇರಿ ನ.3 NEWS DESK : ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಅಕ್ಷಯ ಚಾರಿಟೇಬಲ್ ಟ್ರಸ್ಟ್ ರೋಟರಿ ರೆಡ್ ಕ್ರಾಸ್ ಹಾಗೂ ಇತರೆ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಪಾಲಿಬೆಟ್ಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಮತ್ತು ಅಂಗಾಂಗ ದಾನ ನೋಂದಣಿ ಶಿಬಿರ ನಡೆಯಿತು. ಶಿಬಿರದಲ್ಲಿ 21 ಯೂನಿಟ್ ರಕ್ತವನ್ನು ದಾನಿಗಳಿಂದ ಸಂಗ್ರಹಿಸಲಾಯಿತು. 14 ಫಲಾನುಭವಿಗಳಿಂದ ಅಂಗಾಂಗ ದಾನ ನೊಂದಣಿಗಳನ್ನು ಮಾಡಲಾಯಿತು. ರಕ್ತದಾನದ ಮಹತ್ವದ ಬಗ್ಗೆ ಡಾ.ವಿಶ್ವಾಸ್ ಅರಿವು ಮೂಡಿಸಿದರು. ಅಂಗಾಂಗದಾನ ನೋಂದಣಿಯ ಬಗ್ಗೆ DHEO ಶಾಂತಿ ಆರೋಗ್ಯ ಶಿಕ್ಷಣ ನೀಡಿ, ಪ್ರತಿಜ್ಞಾವಿಧಿ ಬೋಧಿಸಿದರು. ಇದೇ ಸಂದರ್ಭ ವಿದ್ಯಾರ್ಥಿಗಳಿಗೆ ಗಳಗಂಡ ರೋಗ ಮತ್ತು ರಕ್ತಹೀನತೆಯ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ಹೆಚ್‍ಸಿ ಚೆನ್ನಯ್ಯನಕೋಟೆಎಎಂಒ ಡಾ. ಶಿವಪ್ಪ ಎಸಿಎಫ್  ಬಗ್ಗೆ ಮಾಹಿತಿ ನೀಡಿದರು. ವಿರಾಜಪೇಟೆ ತಾಲೂಕಿನ ಸುತ್ತಮುತ್ತಲಿನ ಹಾಡಿಗಳಲ್ಲಿ ಮಗುವಿಗೆ ಸೊಪ್ಪಿನ ರಸಗಳನ್ನು ಕುಡಿಸುತ್ತಿರುವುದರಿಂದ ಶಿಶುಮರಣವಾಗುತ್ತಿರುವ ಬಗ್ಗೆ ಎಲ್ಲಾ ಸಂಘ ಸಂಸ್ಥೆಯವರ ಸಮ್ಮುಖದಲ್ಲಿ ವಿಷಯ ಪ್ರಸ್ತಾಪಿಸಲಾಯಿತು ಮತ್ತು ಸಹಕಾರವನ್ನು ಕೋರಲಾಯಿತು.…

Read More

ಮಡಿಕೇರಿ ನ.3 NEWS DESK : ಮೂರ್ನಾಡು 33/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದ ಕೇಂದ್ರದಿಂದ ಹೊರಹೊಮ್ಮುವ ಎಫ್5 ಹೊದ್ದೂರು ಹಾಗೂ ಎಫ್2 ನಾಪೋಕ್ಲು ಫೀಡರ್‍ನಲ್ಲಿ ನ.4 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಹೊದ್ದೂರು, ಕಬಡಗೇರಿ, ಕೊಳಕೇರಿ, ಕಕ್ಕಬೆ, ಕುಂಜಿಲ, ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಪೇರೂರು, ನಾಪೋಕ್ಲು ಟೌನ್, ಕೊಟ್ಟಮುಡಿ, ಪಾಲೂರು, ಚೆರಿಯಪರಂಬು, ಹಳೆತಾಲೂಕು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ಮಡಿಕೇರಿ ನ.3 NEWS DESK : 2024-25ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮುಖ್ಯ ಶಿಕ್ಷಕರನ್ನು ಒಳಗೊಂಡಂತೆ ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ವಿಶೇಷ ಶಿಕ್ಷಕರು ಹಾಗೂ ಪ್ರೌಢ ಶಾಲಾ ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರುಗಳಿಗೆ ನವೆಂಬರ್, 04 ರಿಂದ 10 ರವರೆಗೆ ಕೊಡಗು ಜಿಲ್ಲಾ ಮಟ್ಟದ ‘ಜಿಲ್ಲಾ ಕೋರಿಕೆ/ಪರಸ್ಪರ ವರ್ಗಾವಣೆಯ ಗಣಕೀಕೃತ ಕೌನ್ಸಿಲಿಂಗ್ ಮುಖಾಂತರ ಸ್ಥಳ ನಿಯುಕ್ತಿಗೊಳಿಸಬೇಕಿರುತ್ತದೆ. ಅದರಂತೆ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವೃಂದದ ಜಿಲ್ಲಾ ಹಂತದ ಕೋರಿಕೆ / ಪರಸ್ಪರ ವರ್ಗಾವಣೆಯ ಗಣಕೀಕೃತ ಕೌನ್ಸಿಲಿಂಗ್ ಪ್ರಕ್ರಿಯೆಯು ಪ್ರಾಥಮಿಕ ಶಾಲಾ ವಿಭಾಗಕ್ಕೆ ನ.4 ರಿಂದ 6 ರವರೆಗೆ ಹಾಗೂ ಪ್ರೌಢ ಶಾಲಾ ವಿಭಾಗಕ್ಕೆ ನವೆಂಬರ್, 07 ರಿಂದ 10 ರವರೆಗೆ ಉಪನಿರ್ದೇಶಕರು(ಆಡಳಿತ) ಶಾಲಾ ಶಿಕ್ಷಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿ ನಡೆಯಲಿದೆ. ವೇಳಾಪಟ್ಟಿಯನುಸಾರ ಸಂಬಂಧಿಸಿದ ಶಿಕ್ಷಕರು ನಿಗಧಿತ ದಿನಾಂಕದಂದು ಕೌನ್ಸಿಲಿಂಗ್‍ಗೆ ಸಮಯಕ್ಕೆ ಸರಿಯಾಗಿ ಸೂಕ್ತ ದಾಖಲಾತಿಗಳೊಂದಿಗೆ ತಪ್ಪದೇ ಹಾಜರಾಗುವಂತೆ…

Read More

ಮಡಿಕೇರಿ ನ.3 NEWS DESK : ಕನ್ನಡ ನಾಡು ನುಡಿ, ನೆಲ-ಜಲ, ಸಾಹಿತ್ಯ, ಸಂಸ್ಕøತಿಯ ಸಂರಕ್ಷಣೆಗೆ ಕರ್ನಾಟಕ ರಕ್ಷಣಾ ವೇದಿಕೆ(ಹೆಚ್.ಶಿವರಾಮೇಗೌಡ)ಯ ಕೊಡಗು ಜಿಲ್ಲಾ ಘಟಕ ಕಟಿಬದ್ಧವಾಗಿ ಕಾರ್ಯನಿರ್ವಹಿಸಲಿದೆ ಎಂದು ನೂತನ ಜಿಲ್ಲಾಧ್ಯಕ್ಷ ಬಿ.ಎ.ದಿನೇಶ್ ಶೆಟ್ಟಿ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಅಕ್ಟೋಬರ್‍ನಲ್ಲಿ ಕರವೇ ಜಿಲ್ಲಾಧ್ಯಕ್ಷ ಸ್ಥಾನವನ್ನು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ನೀಡಲಾಯಿತು. ಶೀಘ್ರದಲ್ಲೆ ಕರವೇ ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತದೆ. ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕು ಸಂಘಟನೆಗಳು ಅಸ್ತಿತ್ವದಲ್ಲಿವೆ. ಕುಶಾಲನಗರ ಮತ್ತು ಪೊನ್ನಂಪೇಟೆ ತಾಲ್ಲೂಕು ಸಮಿತಿಗಳ ರಚನೆಯಾಗಬೇಕಾಗಿದೆ ಎಂದರು. ಜಿಲ್ಲಾ ವ್ಯಾಪ್ತಿಯಲ್ಲಿ ಮುಚ್ಚಲ್ಪಟ್ಟಿರುವ ಕನ್ನಡ ಶಾಲೆಗಳನ್ನು ಬಡ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಸರ್ಕಾರ ಮತ್ತೆ ತೆರೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದರು. ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಸೇರಿದಂತೆ ಅಗತ್ಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸಂಘಟನೆ ಕರವೇ ಕಾರ್ಯಪ್ರವೃತ್ತವಾಗಿದೆ ಎಂದು ತಿಳಿಸಿದರು. ಕರವೇ ಮಡಿಕೇರಿ ತಾಲ್ಲೂಕು ಅಧ್ಯಕ್ಷ ರವಿ ಗೌಡ ಅವರು ಮಾತನಾಡಿ, ಕನ್ನಡ ನಾಡಿನ ಎಲ್ಲೆಡೆಯೂ ಕನ್ನಡ…

Read More

ಮಡಿಕೇರಿ ನ.3 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್, ಸೋಮವಾರಪೇಟೆ, ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಕುಶಾಲನಗರದ  ಮೂಕಾಂಬಿಕಾ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಹೆಚ್ಚುವರಿ ಬೋಧನಾ ತರಬೇತಿ (ಟ್ಯೂಷನ್ ಕ್ಲಾಸ್) ಕಾರ್ಯಕ್ರಮ ನಡೆಯಿತು. ಮೂಕಾಂಬಿಕಾ ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಮುಳ್ಳುಸೋಗೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಶಿವನಾಂದ ಉದ್ಘಾಟಿಸಿ, ಮಾತನಾಡಿ ಗ್ರಾಮಾಂತರ ಪ್ರದೇಶದ  ವಿದ್ಯಾರ್ಥಿಗಳು  ಪ್ರತಿಭಾವಂತ ಮತ್ತು ಅಧ್ಯಯನಶೀಲರಾಗಿ ಹಾಗೂ ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳಲು ಉತ್ತಮ ಅಂಕಗಳನ್ನು ಪಡೆಯಲು ಇಂತಹ ತರಗತಿಗಳ ಮೂಲಕ  ಕಲಿಯುವ ವಿಷಯ ಚೇತರಿಕೆ, ಮತ್ತು ಚೈತನ್ಯದ ಬೆಳವಣಿಗೆ ಸಹಕಾರಿಯಾಗುವುದು ಎಂದು ತಿಳಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿ ಕೂಡಿಗೆ ಪದವಿ ಪೂರ್ವ ಕಾಲೇಜು ಮಾಜಿ ಉಪಾಧ್ಯಕ್ಷ ಕೆ.ಕೆ‌.ನಾಗರಾಜಶೆಟ್ಟಿ ಮಾತಾನಾಡಿ, ಇಂದಿನ ಪೈಪೋಟಿಯ‌ ಯುಗದಲ್ಲಿ ವಿದ್ಯಾರ್ಥಿಗಳು ಹೆಚ್ಚು ಅಧ್ಯಾಯ ಶೀಲರಾಗಬೇಕು. ವಿದ್ಯಾರ್ಥಿಗಳು ಪ್ರಸಕ್ತ ವಿದ್ಯಮಾನದ ಜೊತೆಯಲ್ಲಿ ಪಠ್ಯ ಪುಸ್ತಕದ ವಿಷಯಗಳನ್ನು ಹೆಚ್ಚು ಅರಿತುಕೊಂಡು ಮುಂದಿನ ದಿನಗಳಲ್ಲಿ  ಬರುವ ಪರೀಕ್ಷೆಯಲ್ಲಿ ಉತ್ತಮ…

Read More

ಸೋಮವಾರಪೇಟೆ ನ.3 NEWS DESK : ಸಿ ಆ್ಯಂಡ್ ಡಿ ಭೂಮಿ ಸಮಸ್ಯೆಯನ್ನು ಬಗೆಹರಿಸುವಂತೆ ಆಗ್ರಹಿಸಿ ರೈತ ಹೋರಾಟ ಸಮಿತಿ, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕಾಫಿ ಬೆಳೆಗಾರರ ಸಂಘದ ಆಶ್ರಯದಲ್ಲಿ ಸೋಮವಾರ ಪಟ್ಟಣದ ಜೇಸಿ ವೇದಿಕೆಯಲ್ಲಿ ರೈತ ಜಾಗೃತಿ ಸಮಾವೇಶ ನಡೆಯಿತು. ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಿದ ರೈತರು, ಸರ್ಕಾರಗಳು ಪರವಾಗಿ ವರ್ತಿಸಬೇಕು. ರೈತರ ಆಸ್ತಿ ಸಮಸ್ಯೆಗಳನ್ನು ಕೂಡಲೆ ಬಗೆಹರಿಸುವಂತೆ ಆಗ್ರಹಿಸಿದರು. ನಂತರ ಜೇಸಿ ವೇದಿಕೆಯಲ್ಲಿ ನಡೆದ ಜಾಗೃತಿ ಸಭೆಯಲ್ಲಿ ರೈತ ಹೋರಾಟ ಸಮಿತಿಯ ಅಧ್ಯಕ್ಷ ಸುರೇಶ್ ಚಕ್ರವರ್ತಿ ಮಾತನಾಡಿ. ಸಿ ಆ್ಯಂಡ್ ಡಿ ಹೆಸರಿನಲ್ಲಿ ರೈತರು ಹಲವು ದಶಕಗಳಿಂದ ಕೃಷಿಭೂಮಿಯನ್ನು ಅರಣ್ಯ ಇಲಾಖೆ ಕಸಿದುಕೊಳ್ಳಲು ಪ್ರಯತ್ನಿಸಿದರು ಉಗ್ರಹೋರಾಟವನ್ನು ರೂಪಿಸಲಾಗುವುದು ಎಂದು ಎಚ್ಚರಿಸಿದರು. ಕಳೆದ ಒಂದೂವರೆ ವರ್ಷಗಳಿಂದ ರೈತ ಹೋರಾಟ ಸಮಿತಿಯ ನೇತೃತ್ವದಲ್ಲಿ ಅನೇಕ ಹೋರಾಟಗಳನ್ನು ಮಾಡಲಾಗಿದೆ. ಸಮಸ್ಯೆಗಳ ಬಗ್ಗೆ ಶಾಸಕರು, ಸಂಸದರು, ಮುಖ್ಯಮಂತ್ರಿಗಳು, ಅರಣ್ಯ ಹಾಗೂ ಕಂದಾಯ ಇಲಾಖಾ ಸಚಿವರನ್ನೂ ಭೇಟಿ…

Read More