ಲೇಖಕ: admin

ಮಡಿಕೇರಿ ಅ.16 NEWS DESK : ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ಶಿಕ್ಷಕರ ಸಮಸ್ಯೆ ಕುರಿತು ವಿಧಾನ ಸೌಧ ಕಚೇರಿಯಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ ನಡೆಸಿದರು. ಈ ಸಂದರ್ಭ ಬುಡಕಟ್ಟು ವಸತಿ ಶಾಲೆಯ ಶಿಕ್ಷಕರು ಪರಿಶಿಷ್ಟ ವರ್ಗಗಳ ಅಧೀನದಲ್ಲಿ ಇರುವ ಮಹರ್ಷಿ ವಾಲ್ಮೀಕಿ ಆದಿವಾಸ ಬುಡಕಟ್ಟು ವಸತಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ ಹತ್ತು ವರ್ಷಕ್ಕೂ ಮೇಲ್ಪಟ್ಟು ಸೇವಾ ಸಲ್ಲಿಸುತ್ತಿರುವ ಶಿಕ್ಷಕರನ್ನು ಸಕ್ರಮಗೊಳಿಸುವುದು. ಅರ್ಜಿ ಸಮಿತಿಯ ತೀರ್ಮಾನದಂತೆ ನೇರ ನೇಮಕಾತಿ/ ಸೇವಾ ಭದ್ರತೆ ಒದಗಿಸುವುದು ಹಾಗೂ ಖಿ.ಇ.ಖಿ ಯಿಂದ ವಿನಾಯಿತಿ ಒದಗಿಸುವುದು. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಪ್ರಾಂಶುಪಾಲರ ಮತ್ತು ಶಿಕ್ಷಕರ ಸೇವೆಯನ್ನು ವಿಲೀನ ಗೊಳಿಸಿರುವ ರೀತಿ ಇವರನ್ನು ಸಹ ವಿಲೀನಗೊಳಿಸುವುದು. ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಸಂಘ ರಚನೆಯಾಗಿರುವಂತೆ ರಾಜ್ಯದ 119 ವಾಲ್ಮೀಕಿ ಆಶ್ರಮ ಶಾಲೆಗಳಿಗೆ ಸಂಘ ರಚಿಸಿ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ…

Read More

ಮಡಿಕೇರಿ ಅ.16 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ  ವಿಧಾನ ಸೌಧ ಕಚೇರಿಯಲ್ಲಿ ಪರಿಶಿಷ್ಟ ಪಂಗಡ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಯಿತು. ವಿರಾಜಪೇಟೆ ಕ್ಷೇತ್ರದ ಪರಿಶಿಷ್ಟ ಪಂಗಡದ ಅಭಿವೃದ್ಧಿ ಮತ್ತು ಮೂಲಸೌಲಭ್ಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಪ್ರಮುಖ ಬೇಡಿಕೆಗಳಾದ ಕೊಡಗು ಜಿಲ್ಲೆಯ ಕಾಫಿ ತೋಟಗಳ ಲೈನ್ ಮನೆಗಳಲ್ಲಿ ವಾಸವಾಗಿರುವ ಪರಿಶೀಷ್ಟ ಪಂಗಡದ ಜನಾಂಗದವರಿಗೆ ನಿವೇಶನಗಳನ್ನು ಒದಗಿಸಲು ಕಾಯ್ದಿರಿಸಿರುವ ಜಾಗದಲ್ಲಿ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ, ಕೊಡಗು ಜಿಲ್ಲೆಯ ತೆರಾಲು ಗ್ರಾಮದ 20.00ಎಕರೆ ಹಾಗೂ ಬಿರುನಾಣಿ ಗ್ರಾಮದ 7.00ಎಕರೆ ಬದಲಾಗಿ ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಹೋಬಳಿ, ಬಿರುನಾಣಿ ಗ್ರಾಮದ ಸರ್ವೆ ನಂ:22/2ರಲ್ಲಿ 12.00ಹಾಗೂ 7.00 ಒಟ್ಟು 19.00ಎಕರೆ ವಿಸ್ತರ್ಣದ ಜಾಗದಲ್ಲಿ ಬಡಾವಣೆ ನಿರ್ಮಿಸಲು ತಿದ್ದುಪಡಿ ಆದೇಶ, ಕೊಡವ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕೊಡವ ಸಮುದಾಯದ ಕುಲಶಾಸ್ತ್ರೀಯ ಅಧ್ಯಯನ ಬಗ್ಗೆ ಸಂಬಂಧಿಸಿದ ಕಡತ ಸಂಖ್ಯೆ ಸಕಅ/74/ಎಸ್ಎಡಿ/2022 ಕಂಪ್ಯೂಟರ್ ನಂ.…

Read More

ಮಡಿಕೇರಿ NEWS DESK ಅ.16 : ನೂತನವಾಗಿ ಆಯ್ಕೆಯಾದ ಬೆಂಗಳೂರು ಕೊಡವ ಸಮಾಜದ ಆಡಳಿತ ಮಂಡಳಿಯ ನಿಯೋಗ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರನ್ನು ಭೇಟಿ ಮಾಡಿತು. ಕೊಡವ ಸಮಾಜದ ಮುಂದಿನ ಕಾರ್ಯ ಚಟುವಟಿಕೆಗಳ ಕುರಿತು ವಿವರಿಸಿದ ಪ್ರಮುಖರು ಅಗತ್ಯ ಸಹಕಾರವನ್ನು ಕೋರಿದರು. ಬೆಂಗಳೂರು ಕೊಡವ ಸಮಾಜದ ನೂತನ ಅಧ್ಯಕ್ಷ ಚಿರಿಯಪಂಡ ಸುರೇಶ್ ನಂಜಪ್ಪ ಅವರ ನೇತೃತ್ವದಲ್ಲಿ ಭೇಟಿಯಾದ ಪದಾಧಿಕಾರಿಗಳು ಸಂಸದರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿತು.

Read More

ಮಡಿಕೇರಿ NEWS DESK ಅ.16 : ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಗೋವುಗಳ ಕಳ್ಳತನ, ಅಕ್ರಮ ಗೋಸಾಗಾಟ, ಗೋಹತ್ಯೆ ಮತ್ತು ಗೋಮಾಂಸ ಮಾರಾಟದ ಪ್ರಕರಣಗಳನ್ನು ಮಟ್ಟ ಹಾಕಲು ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಅ.17 ರಂದು ಸೋಮವಾರಪೇಟೆಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ವೇದಿಕೆಯ ಕೊಡಗು ಜಿಲ್ಲಾ ಸಂಯೋಜಕ ರಂಜನ್ ಬೋಜೇಗೌಡ ತಿಳಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಸೋಮವಾರಪೇಟೆ ಪೋಲೀಸ್ ಠಾಣೆಯ ಎದುರು ಸಮಸ್ತ ಹಿಂದೂ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ಇತ್ತೀಚೆಗೆ ಸೋಮವಾರಪೇಟೆ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಗೋಸಾಗಾಟ ಮಾಡಿದ ಆರೋಪಿಗಳನ್ನು ಇಲ್ಲಿಯವರೆಗೆ ಬಂಧಿಸದೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದ್ದಾರೆ.

Read More

ಮಡಿಕೇರಿ NEWS DESK ಅ.15 : ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ.ಗಣೇಶ್ ರೈ ಅವರು ರಚಿಸಿರುವ ಶ್ರೀ ಕಾವೇರಿ ಮಾತೆಯ ಪುಣ್ಯಪ್ರದವಾದ ಪುರಾಣ ಚಿತ್ರಕಥೆ ಪುಸ್ತಕ ಮತ್ತು ಚಿತ್ರಪಟ ಕಾವೇರಿ ನದಿಯ ಉಗಮಸ್ಥಾನ ಪವಿತ್ರ ಕ್ಷೇತ್ರ ತಲಕಾವೇರಿಯ ಸನ್ನಿಧಿಯಲ್ಲಿ ಪೂಜಾವಿಧಿ ವಿಧಾನಗಳೊಂದಿಗೆ ಲೋಕಾರ್ಪಣೆಗೊಂಡಿತು. ಮಡಿಕೇರಿ ಐಶ್ವರ್ಯ ಕ್ರಿಯೇಶನ್ಸ್ ನ ದ್ವಿತೀಯ ಪ್ರಕಟಣೆಯಾಗಿರುವ ಶ್ರೀ ಕಾವೇರಿ ಮಾತೆಯ ಪುಣ್ಯಪ್ರದವಾದ ಪುರಾಣ ಚಿತ್ರಕಥೆ ಪುಸ್ತಕ 1995 ರಲ್ಲಿ ಕನ್ನಡ, ಕೊಡವ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಬಿಡುಗಡೆಯಾಗಿತ್ತು. ಜಲವರ್ಣ ಕಲಾಕೃತಿಯೊಂದಿಗೆ ನಿರ್ಮಾಣವಾಗಿದ್ದ ಚಿತ್ರಕಥೆ ಪುಸ್ತಕ ಇದೀಗ ದ್ವಿತೀಯ ಮುದ್ರಣ ಹಾಗೂ ಪ್ರಕಟಣೆ ನವ್ಯ ತಂತ್ರಜ್ಞಾನದೊAದಿಗೆ ಡಿಜಿಟಲ್ ಗ್ರಾಫಿಕ್ಸ್ ನಲ್ಲಿ ಅತ್ಯಂತ ಸುಂದರವಾಗಿ ಮೂಡಿಬಂದಿದೆ. ಈ ಬಾರಿ ಕನ್ನಡ, ಅರೆಭಾಷೆ, ಇಂಗ್ಲೀಷ್ ಮತ್ತು ತಮಿಳು ಭಾಷೆಯಲ್ಲಿ ಮುದ್ರಣವಾಗಿರುವುದು ವಿಶೇಷ. ವಿವಿಧ ಭಾಷಿಕರಿಗೆ ಹಾಗೂ ಮಕ್ಕಳಿಂದ, ವಯೋವೃದ್ಧರವರೆಗೂ ಶ್ರೀ ಕಾವೇರಿ ಮಾತೆಯ ಪುರಾಣ ಚಿತ್ರಕಥೆ ಅತ್ಯಂತ ಸರಳವಾಗಿ ತಿಳಿದುಕೊಳ್ಳುವಂತಾಗಿದೆ. 2025ರ ಮಹಾಶಿವರಾತ್ರಿಯಂದು ಕಾವೇರಿಮಾತೆಯ ಶ್ಲೋಕವನ್ನು ಆಧರಿಸಿ ಬಿ.ಕೆ.ಗಣೇಶ್ ರೈ…

Read More

ಮಡಿಕೇರಿ NEWS DESK ಅ.15 : ಆದಿಮಸಂಜಾತ ಏಕ-ಜನಾಂಗೀಯ ಕೊಡವರ ಪವಿತ್ರ ಜಲದೇವತೆ ಕಾವೇರಿ ನದಿಯ ಉಗಮಸ್ಥಾನ ತಲಕಾವೇರಿಯನ್ನು ‘ಕೊಡವರ ಪವಿತ್ರ ಯಾತ್ರಾಸ್ಥಳವೆಂದು ಗುರುತಿಸಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಆದಿಮಸಂಜಾತ ಏಕ-ಜನಾಂಗೀಯ ಕೊಡವರು, ಆನಿಮಿಸ್ಟಿಕ್ ನಂಬಿಕೆಯುಳ್ಳವರಾಗಿದ್ದು, ಅವರ ಎಲ್ಲಾ ಜಾನಪದ ಆಚರಣೆಗಳು ಪವಿತ್ರ ಜಲದೇವತೆ ಹಾಗೂ ಜೀವನಾಡಿ ಕಾವೇರಿ ನದಿಯ ಸುತ್ತ ಸುತ್ತುತ್ತವೆ. ಆದ್ದರಿಂದ ಸರಕಾರ ಜೆರುಸಲೆಮ್‌ನಲ್ಲಿರುವ ಯಹೂದಿಗಳ ದೇವಾಲಯ ಮೌಂಟ್ ಮೊರಿಯಾದ ಮಾದರಿಯಲ್ಲಿ ತಲಕಾವೇರಿಯನ್ನು ಕೊಡವರ ಪವಿತ್ರ ತೀರ್ಥಯಾತ್ರಾ ಸ್ಥಳವೆಂದು ಗುರುತಿಸಬೇಕೆಂದು ಒತ್ತಾಯಿಸಿ ರಾಷ್ಟ್ರಪತಿಗಳು, ಪ್ರಧಾನಮಂತ್ರಿಗಳು, ಕೇಂದ್ರ ಗೃಹಮಂತ್ರಿಗಳು, ಮುಖ್ಯಮಂತ್ರಿಗಳು ಹಾಗೂ ವಿಶ್ವರಾಷ್ಟç ಸಂಸ್ಥೆಯ ಮಹಾ ಕಾರ್ಯದರ್ಶಿಗಳಿಗೆ ಜ್ಞಾಪನಾ ಪತ್ರ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ. ಆದಿಮಸಂಜಾತ ಕೊಡವರು ಅ.17 ರಂದು ಕಾವೇರಿ ತೀರ್ಥೋದ್ಭವವನ್ನು ಕಣ್ತುಂಬಿಕೊಳ್ಳಲು ಮತ್ತು ಆಚರಿಸಲು ಸಜ್ಜಾಗಿದ್ದಾರೆ. ಆನಿಮಿಸ್ಟಿಕ್ ನಂಬಿಕೆಯುಳ್ಳ ಆದಿಮಸಂಜಾತ ಕೊಡವರು ಪವಿತ್ರ ಕ್ಷಣಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಈ ಸಂದರ್ಭದಲ್ಲಿ ಸಿಎನ್‌ಸಿ ಸಂಘಟನೆ ಕೊಡವರ…

Read More

ಮಡಿಕೇರಿ ಅ.15 NEWS DESK : ಕರ್ನಾಟಕ ಟೆಕ್ವಾಂಡೊ ಅಸೋಸಿಯೇಷನ್ ಆಶ್ರಯದಲ್ಲಿ ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಮುಕ್ತ ಟೆಕ್ವಾಂಡೊ ಚಾಂಪಿಯನ್‍ಶಿಪ್‍ನಲ್ಲಿ ಮಡಿಕೇರಿಯ ಕೂರ್ಗ್ ಟೆಕ್ವಾಂಡೊ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ಗೆದ್ದಿದ್ದಾರೆ. ಮನೀಶ್‍ನಾಥ್ ಜಿ.ಎಂ. 2 ಚಿನ್ನ, ನಿಲಾಹ್ ಜೆ.ತಾರಕನ್ 1 ಚಿನ್ನ, 1 ಬೆಳ್ಳಿ, ಐಡೆನ್ ಜೆ ತಾರಕನ್ 1 ಚಿನ್ನ, 1 ಬೆಳ್ಳಿ ಹಾಗೂ ಕನ್ನಿಕಂಡ ಮೌಲ್ಯ ಓಂಕಾರಪ್ಪ 1 ಚಿನ್ನ, 1 ಬೆಳ್ಳಿಯ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಬಾರನ ಚಿನ್ಮಯ್, ಬಾರನ ಬಿಂಬಿತ್ ಹಾಗೂ ಬಾರನ ಪ್ರೇಕ್ಷಿತ್ ಪ್ರಶಂಸನಾ ಪತ್ರ ಪಡೆದುಕೊಂಡರು. ಕೂರ್ಗ್ ಟೆಕ್ವಾಂಡೊ ತರಬೇತಿ ಕೇಂದ್ರದ ತರಬೇತುದಾರ ಬಿ.ಜಿ.ಲೋಕೇಶ್ ರೈ ಅವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು.

Read More

ಮಡಿಕೇರಿ ಅ.14 NEWS DESK : ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ ನ (ನೀಮಾ) ಕೊಡಗು ಜಿಲ್ಲಾ ಘಟಕದ ವತಿಯಿಂದ ಧನ್ವಂತರಿ ಜಯಂತಿ ಮತ್ತು ಬೆಳ್ಳಿ ಮಹೋತ್ಸವ ಸಮಾರಂಭ ಅ.18 ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ನೀಮಾ ಅಧ್ಯಕ್ಷ ಡಾ.ರಾಜಾರಾಮ ಎ.ಆರ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ನಗರದ ಶ್ರೀ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟಪದಲ್ಲಿ ಶನಿವಾರ ಬೆಳಿಗ್ಗೆ 7 ಗಂಟೆಗೆ ಗಣಪತಿ ಹೋಮ ಮತ್ತು ಧನ್ವಂತರಿ ಹವನ ನಡೆಯಲಿದೆ. 10 ಗಂಟೆಗೆ ಗಣ್ಯರು ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನೀಮಾದ ಮಾಜಿ ಅಧ್ಯಕ್ಷರು ತಮ್ಮ ಅನುಭವ ಹಂಚಿಕೊಳ್ಳಲಿದ್ದಾರೆ. ಸಹಸ್ರಾಕ್ಷ, ಉಕ್ಕಿನಡ್ಕ ಡಾ.ಜಯ ಗೋವಿಂದ ಯು. ‘ಸಮಾಜದ ಮೇಲೆ ನೀಮಾ’ದ ಪ್ರಭಾವ ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ. ಅಲ್ಲದೆ ‘ನೀಮಾ’ ಬೆಳ್ಳಿ ಮಹೋತ್ಸವದ ಹಿನ್ನೆಲೆಯಲ್ಲಿ ಹೊರ ತರಲಾಗುತ್ತಿರುವ ಸ್ಮರಣ ಸಂಚಿಕೆಯನ್ನೂ ಬಿಡುಗಡೆ ಮಾಡಲಿದ್ದಾರೆ. ಬೆಂಗಳೂರು ಕೆಎಯುಪಿಯ ಡಾ.ಎಂ.ಡಿ.ರಫಿ ಹಕೀಂ ಹಾಗೂ ಕೆಎಸ್‍ಬಿ ನೀಮಾ ಅಧ್ಯಕ್ಷರು ಮಾತನಾಡಲಿದ್ದಾರೆ ಎಂದು ಹೇಳಿದ್ದಾರೆ. *ಸನ್ಮಾನ* ತಮ್ಮ…

Read More

ಮಡಿಕೇರಿ ಅ.15 NEWS DESK : ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನವೆಂಬರ್ 4 2002 ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊಂಡ ಸಾಂತ್ವನ ಮಹಿಳಾ ಸಹಾಯವಾಣಿ ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿದೆ. ಸಾಂತ್ವನ ಕೇಂದ್ರದಲ್ಲಿ ಈವರೆಗೆ 5581 ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು, 5558 ಪ್ರಕರಣಗಳು ಇತ್ಯರ್ಥಗೊಂಡಿದೆ. 2025-26 ನೇ ಆರ್ಥಿಕ ಸಾಲಿನಲ್ಲಿ 162 ಪ್ರಕರಣಗಳು ದಾಖಲಾಗಿ, 143 ಪ್ರಕರಣಗಳು ಇತ್ಯರ್ಥಗೊಂಡು ಹಿಂದಿನ ಸಾಲಿನ ಉಳಿಕೆ ಪ್ರಕರಣಗಳು ಸೇರಿ, ಉಳಿದ 23 ಪ್ರಕರಣಗಳು ಇತ್ಯರ್ಥದ ಹಂತದಲ್ಲಿರುತ್ತದೆ. ಈವರೆಗೆ ವಿವಿಧ ಸ್ವರೂಪದ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ರೂ.2,50,000 ಗಳನ್ನು ಸಾಂತ್ವನ ಕೇಂದ್ರ ಹಾಗೂ ನ್ಯಾಯಾಲಯದ ಮೂಲಕ ಫಲಾನುಭವಿಗಳಿಗೆ 2025-26 ನೇ ಸಾಲಿನಲ್ಲಿ ಕೊಡಿಸಿಕೊಡಲಾಗಿದೆ. ಮಹಿಳಾ ಸಹಾಯವಾಣಿಯ ಪ್ರಯೋಜನವನ್ನು ಪಡೆದುಕೊಳ್ಳವಂತೆ ಸಾಂತ್ವನ ಕೇಂದ್ರದ ಅಧ್ಯಕ್ಷರಾದ…

Read More

ಮಡಿಕೇರಿ ಅ.15 NEWS DESK : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದ ಮೇರೆಗೆ ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಸೇವೆ ಸಲ್ಲಿಸಲು ಅರೆಕಾಲಿಕ ಕಾನೂನು ಸ್ವಯಂ ಸೇವಕರ(ಪ್ಯಾರ ಲೀಗಲ್ ವಾಲೆಂಟಿಯರ್ಸ್) ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರೆಕಾಲಿಕ ಕಾನೂನು ಸ್ವಯಂ ಸೇವಕರ ನೇಮಕಾತಿಗಾಗಿ ಸೇವಾ ಮನೋಭಾವನೆಯಿಂದ ಕೆಲಸ ನಿರ್ವಹಿಸಲು ಹಾಗೂ ಕಾನೂನು ಸೇವಾ ಕೇಂದ್ರ ಮತ್ತು ಸಾಮಾನ್ಯ ಜನರ ನಡುವೆ ಸೇತುವೆಯಾಗಿ ಕೆಲಸ ನಿರ್ವಹಿಸಲು ಇಚ್ಚಿಸುವ ಮಾಜಿ ಸೈನಿಕರು ಅರ್ಜಿ ಸಲ್ಲಿಸಬಹುದು. ಈ ಸೇವೆ ಸಲ್ಲಿಸುವವರಿಗೆ ಯಾವುದೇ ವೇತನ, ಶುಲ್ಕ ಇಲ್ಲದಿದ್ದರು ಕೆಲವೊಮ್ಮೆ ಗೌರವ ಧನಕ್ಕೆ ಅರ್ಹರಾಗಿರುತ್ತಾರೆ. ಅರೆಕಾಲಿಕ ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸಲು ಇಚ್ಚಿಸುವ ಮಾಜಿ ಸೈನಿಕರು ತಮ್ಮ ಇಚ್ಚೆಯನ್ನು ಅಕ್ಟೋಬರ್, 23 ರೊಳಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಡಿಕೇರಿ ಕಾರ್ಯಾಲಯಕ್ಕೆ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಿ.ಆರ್.ಶೆಟ್ಟಿ ತಿಳಿಸಿದ್ದಾರೆ.

Read More