ಮಡಿಕೇರಿ NEWS DESK ಆ.27 : ಮಡಿಕೇರಿ ನಗರದ ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಶ್ರೀಗಣೇಶ ಚತುರ್ಥಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಬೆಳಗ್ಗಿನಿಂದಲೇ ಹೋಮಹವನಾದಿ ವಿಶೇಷ ಪೂಜೆಗಳು ಜರುಗಿದವು. ಅಭಿಷೇಕ, ಅಲಂಕಾರ ಪೂಜೆ, ಅರ್ಚನೆ, ಮಹಾಪೂಜೆಗೆ ಅಧಿಕ ಸಂಖ್ಯೆಯ ಭಕ್ತರು ಸಾಕ್ಷಿಯಾದರು. ಹರಕೆಯ ರೂಪದಲ್ಲಿ ಭಕ್ತರು ಸಾವಿರಾರು ಸಂಖ್ಯೆಯ ಈಡುಗಾಯಿ ಸೇವೆ ಅರ್ಪಿಸಿದರು. ಮಹಾ ಮಂಗಳಾರತಿಯ ನಂತರ ಭಕ್ತ ಸಮೂಹಕ್ಕೆ ಪ್ರಸಾದ ವಿತರಿಸಲಾಯಿತು.
ಲೇಖಕ: admin
ಮಡಿಕೇರಿ NEWS DESK ಆ.27 : ಕೊಡವರ ಬಾಹುಳ್ಯದ ಮೂಲ ನೆಲೆಯಾದ ಪಶ್ಚಿಮ ಘಟ್ಟದ ಪರ್ವತ ಶ್ರೇಣಿಯ ಸಂಕೋಲೆಗಳಾದ ಮರೆನಾಡಿನಿಂದ ಸೂರ್ಲಬ್ಬಿನಾಡ್ ವರೆಗೆ ಸಾವಿರಾರು ಎಕರೆ ಪ್ರದೇಶದಲ್ಲಿ ಅಕ್ರಮ ಬಾಂಗ್ಲಾ ದೇಶಿಗರು ಹಾಗೂ ರೋಹಿಂಗ್ಯಗಳಿಗೆ ಆಶ್ರಯ ಕಲ್ಪಿಸಲು ಷಡ್ಯಂತ್ರ ನಡೆದಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಆರೋಪಿಸಿದ್ದಾರೆ. ರಾಷ್ಟ್ರೀಯ ಜನಗಣತಿ ಸಂದರ್ಭ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕೆಂದು ಒತ್ತಾಯಿಸಿ ವಿರಾಜಪೇಟೆಯಲ್ಲಿ ಸಿಎನ್‌ಸಿ ವತಿಯಿಂದ ನಡೆದ 11ನೇ ಮಾನವ ಸರಪಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಕ್ರಮ ವಲಸಿಗರಿಗೆ ಆಶ್ರಯ ಕಲ್ಪಿಸುವ ಏಕೈಕ ಉದ್ದೇಶದಿಂದ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಲಾಗುತ್ತಿದ್ದು, ದೊಡ್ಡ ಜಾಲವೊಂದು ಕಾರ್ಯಾಚರಿಸುತ್ತಿದೆ. ಬಾಂಗ್ಲಾ ದೇಶಿಗರು ಹಾಗೂ ರೋಹಿಂಗ್ಯಗಳು ಕಾನೂನು ಬಾಹಿರವಾಗಿ ಕೊಡವ ಲ್ಯಾಂಡ್ ನಲ್ಲಿ ಆಶ್ರಯ ಪಡೆದು ತಮ್ಮ ಇರುವಿಕೆಯನ್ನು ಸಕ್ರಮಗೊಳಿಸಿಕೊಳ್ಳಲು ಮುಂದಾಗಿರುವುದು, ಸರಕಾರಿ ಯಂತ್ರಗಳು ಆಶ್ರಯ ನೀಡಲು ಹವಣಿಸುತ್ತಿರುವುದು ಮತ್ತು ದೊಡ್ಡ ದೊಡ್ಡ ಕಂಪೆನಿಗಳು ಬೆಂಬಲಕ್ಕೆ ನಿಂತಿರುವುದು…
ಸೋಮವಾರಪೇಟೆ NEWS DESK ಆ.27 : ವೀರಭದ್ರೇಶ್ವರ ವರ್ಧಂತಿ ಮಹೋತ್ಸವದ ಅಂಗವಾಗಿ ಸೋಮವಾರಪೇಟೆ ತಾಲ್ಲೂಕಿನ ಕಿರಿಕೊಡ್ಲಿ ಮಠದಲ್ಲಿ ವಿಶೇಷ ಪೂಜೆ ನಡೆಯಿತು. ಭಾದ್ರಪದ ಮಾಸದ ಮೊದಲ ಮಂಗಳವಾರ ವೀರಭದ್ರಸ್ವಾಮಿ ಅವತರಿಸಿದರೆಂದು ಪ್ರತೀಥಿ ಇದ್ದು, ಈ ಭಾರಿ ಗೌರಿಹಬ್ಬದ ದಿನವೇ ಬಂದಿರುವುದು ವಿಶೇಷ. ಮಠದಲ್ಲಿ ಶ್ರೀಸದಾಶಿವ ಸ್ವಾಮೀಜಿ ವೀರಭದ್ರ ದೇವರಿಗೆ ಅಷ್ಟೋತ್ತರ, ಅರ್ಚನೆ ನಂತರ ಮಹಾಮಂಗಳಾರತಿ ನೆರವೇರಿಸಿದರು.
ಮಡಿಕೇರಿ NEWS DESK ಆ.27 : ಸಹೋದರ ಸಹೋದರಿಯರ ನಡುವಿನ ಪ್ರೀತಿ ವಾತ್ಸಲ್ಯ ಮತ್ತು ರಕ್ಷಣೆಯ ಬಾಂಧವ್ಯ ಬೆಸೆಯುವ ರಾಕಿ ಹಬ್ಬದ ಪ್ರಯುಕ್ತ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಮಡಿಕೇರಿಯ ಪ್ರಜಾಪಿತ ಬ್ರಹ್ಮಕುಮಾರಿಸ್ ಸಂಸ್ಥೆಗೆ ಭೇಟಿ ನೀಡಿದರು. ರಾಕಿಯನ್ನು ಕಟ್ಟಿದ ಪ್ರಜಾಪಿತ ಬ್ರಹ್ಮಕುಮಾರಿಸ್ ನ ಪ್ರಮುಖರು ಶಾಸಕರಿಗೆ ಶುಭ ಹಾರೈಸಿದರು.
ಬಾಳೆಲೆ NEWS DESK ಆ.27 : ಅರಣ್ಯ ಮಹಾವಿದ್ಯಾಲಯ, ಪೊನ್ನಂಪೇಟೆಯ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮೀಣ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿ 21 ದಿನಗಳ ಕಾಲ ಬಾಳೆಲೆಯಲ್ಲಿ ವಾಸ್ತವ್ಯ ಹೂಡುತ್ತಿದ್ದಾರೆ. ಗ್ರಾಮೀಣ ಕಾರ್ಯಾನುಭವ ಕಾರ್ಯಕ್ರಮವು ವಿದ್ಯಾರ್ಥಿಗಳನ್ನು ನೇರವಾಗಿ ಗ್ರಾಮೀಣ ಜೀವನಕ್ಕೆ ಪರಿಚಯಿಸಿ, ಸಮಾಜಮುಖಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಅವಕಾಶ ಒದಗಿಸುವುದರ ಜೊತೆಗೆ ಗ್ರಾಮೀಣ ಅಭಿವೃದ್ಧಿಗೆ ಸಹಕಾರಿ ಆಗುವ ಉದ್ದೇಶ ಹೊಂದಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದರು. ವನಮಹೋತ್ಸವದ ಮಹತ್ವವನ್ನು ವಿವರಿಸಿ, ಹಸಿರು ಸಂರಕ್ಷಣೆ, ಪರಿಸರ ಸಮತೋಲನ ಮತ್ತು ಮುಂದಿನ ಪೀಳಿಗೆಯ ಹಿತಕ್ಕಾಗಿ ಸಸಿ ನೆಡುವುದು ನಮ್ಮ ಪ್ರತಿಯೊಬ್ಬರ ಕರ್ತವ್ಯವೆಂದು ಕರೆ ನೀಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆ.ಸ್ಮಿತಾ ಪೊನ್ನಣ್ಣ, ಉಪಾಧ್ಯಕ್ಷ ನವೀನ್, ಪಿಡಿಒ ಪರಮೇಶ್ವರ, ಪಶುವೈದ್ಯ ಇಲಾಖೆಯ ಹಿರಿಯ ಅಧಿಕಾರಿ ಡಾ.ಬವೀಶ್, ಪಂಚಾಯಿತಿ ಸದಸ್ಯರು ಹಾಗೂ ಸ್ಥಳೀಯ ಗ್ರಾಮಸ್ಥರು ಹಾಜರಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ವಿದ್ಯಾರ್ಥಿಗಳು, ಅತಿಥಿಗಳು ಹಾಗೂ ಗ್ರಾಮಸ್ಥರು ಸಸಿಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಗೆ…
ಮಡಿಕೇರಿ NEWS DESK ಆ.26 : ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆದಿರುವ ಷಡ್ಯಂತ್ರ ರಾಷ್ಟ್ರೀಯ ಸುರಕ್ಷತೆಗೆ ಸವಾಲೊಡ್ಡುವ ಪ್ರಕರಣವಾಗಿರುವುದರಿಂದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್.ಐ.ಎ) ಹಾಗೂ ಜಾರಿ ನಿರ್ದೇಶನಾಲಯದ (ಇ.ಡಿ) ಮೂಲಕ ತನಿಖೆ ನಡೆಸಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ನ ಕೊಡಗು ಜಿಲ್ಲಾ ಘಟಕ ಜಿಲ್ಲಾಡಳಿತದ ಮೂಲಕ ಪ್ರಧಾನಮಂತ್ರಿಗಳು ಹಾಗೂ ಕೇಂದ್ರ ಗೃಹ ಸಚಿವರಿಗೆ ಮನವಿ ಸಲ್ಲಿಸಿದೆ. ಧರ್ಮಸ್ಥಳ ದೇವಸ್ಥಾನದ ಮೇಲಿರುವ ಧಾರ್ಮಿಕ ಶ್ರದ್ಧಾಭಕ್ತಿಗೆ ಧಕ್ಕೆಯುಂಟುಮಾಡಬೇಕೆಂಬ ಷಡ್ಯಂತ್ರದ ಹಿಂದೆ ರಾಷ್ಟ್ರ ವಿರೋಧಿಗಳ ಕೈವಾಡವಿದೆ. ಷಡ್ಯಂತ್ರದ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಧರ್ಮಸ್ಥಳದ ಘನತೆಗೆ ಚ್ಯುತಿತಂದು ಮಾನಹರಣ ಮಾಡಬೇಕೆಂಬ ಉದ್ದೇಶದಿಂದ ವ್ಯವಸ್ಥಿತವಾಗಿ ಸಂಚನ್ನು ರೂಪಿಸಿದ್ದಾರೆ. ಭಾರತ ವಿರೋಧಿ ವರದಿಗಳಿಗೆ ಕುತಂತ್ರಗಳಿಗೆ ಖ್ಯಾತಿ ಪಡೆದಿರುವ ಕೆಲ ಅಂತರಾಷ್ಟಿçÃಯ ಮಾಧ್ಯಮಗಳಲ್ಲಿ ಈ ಒಟ್ಟು ಪ್ರಕರಣಗಳನ್ನು ಧರ್ಮಸ್ಥಳ ದೇವಸ್ಥಾನದ ಸುತ್ತ ಕೇಂದ್ರೀಕರಿಸಿ ವ್ಯವಸ್ಥಿತವಾದ ಅಪಪ್ರಚಾರ ಎಸಗಲಾಗಿದೆ. ಇದರ ಹಿಂದಿರುವ ಶಕ್ತಿಗಳು ಯಾವುದು ಎಂಬುವುದನ್ನು ತನಿಖೆ ನಡೆಸಬೇಕಿರುವುದು ಅತ್ಯವಶ್ಯಕವಾಗಿದೆ. ಇದಿಷ್ಟೇ ಅಲ್ಲದೇ ಲಕ್ಷಾಂತರ ರೂಪಾಯಿ ಹಣ ಖರ್ಚು ಮಾಡಿ,…
ಸೋಮವಾರಪೇಟೆ ಆ.28 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಅವರ ಬಗ್ಗೆ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಶ್ರೀ ಧರ್ಮಸ್ಥಳ ಭಕ್ತಾಭಿಮಾನಿ ವೇದಿಕೆ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ಗಾಂಧಿ ಪ್ರತಿಮೆಯಿಂದ ಮೆರವಣಿಗೆ ಹೊರಟ ನೂರಾರು ಪ್ರತಿಭಟನಾಕಾರರು ಕ್ಷೇತ್ರದ ಪರವಾಗಿ ಜಯಘೋಷ ಮೊಳಗಿಸಿದರು. ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿರುವವರ ಬಗ್ಗೆ ಧಿಕ್ಕಾರ ಕೂಗಿ ಸರ್ಕಾರ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಜೇಸಿ ವೇದಿಕೆಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮುಳ್ಳೂರು ಮಠದ ಮಠಾಧೀಶರಾದ ಸ್ವತಂತ್ರ ಬಸವಲಿಂಗ ಸ್ವಾಮೀಜಿ ಮಾತನಾಡಿ, ರಾಜ್ಯ ಸರ್ಕಾರಕ್ಕೆ ಅಸಂಖ್ಯಾತ ಹಿಂದುಗಳ ಬಗ್ಗೆ ಗೌರವಿದ್ದರೆ, ಕನ್ನಡಿಗರ ಮತ್ತು ಜನರ ಭಾವನೆಗಳಿಗೆ ಬೆಲೆ ಕೊಡುವ ಮನಸ್ಥಿತಿ ಇದ್ದರೆ ಶ್ರೀ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಎಸ್‍ಐಟಿ ತನಿಖೆಯನ್ನು ನಿಲ್ಲಿಸಬೇಕು. ಕೂಡಲೇ ಕೇಂದ್ರಿಯ ತನಿಖಾದಳದಿಂದ ತನಿಖೆ ಮಾಡಿಸಬೇಕು ಎಂದು ಆಗ್ರಹಿಸಿದರು. ಪ್ರಧಾನಿ ನರೇಂದ್ರ ಮೋದಿಯವರು ಆರ್‍ಎಸ್‍ಎಸ್ ಬಗ್ಗೆ ಮಾತನಾಡಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು,…
ಕುಶಾಲನಗರ ಆ.26 NEWS DESK : ಕುಶಾಲನಗರ ಫಾತಿಮ ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಕೊಡಗು ಪ್ರಾದೇಶಿಕ ಕಛೇರಿ, ಮಡಿಕೇರಿ ವತಿಯಿಂದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ, ಶಾಲಾ ಶಿಕ್ಷಣ ಇಲಾಖೆ, ಭಾರತ್ ಸ್ಕೌಟ್ಸ್, ಗೈಡ್ಸ್ ಸಂಸ್ಥೆ, ರಾಷ್ಟ್ರೀಯ ಸೇವಾ ಯೋಜನೆ ( ಎನ್.ಎಸ್.ಎಸ್.,) ಶಾಲೆಯ ನೇಸರ ಇಕೋ ಕ್ಲಬ್ ಸಹಯೋಗದೊಂದಿಗೆ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ ಆಂದೋಲನ: 2025 ನಡೆಸಲಾಯಿತು. ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಯ ಮಹತ್ವದ ಕುರಿತು ಮಾಹಿತಿ ನೀಡಿದ ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಚಾಲಕ ಹಾಗೂ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ವಿದ್ಯಾರ್ಥಿಗಳಿಗೆ ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿ ಪರಿಸರ ಸ್ನೇಹಿ ಗಣೇಶೋತ್ಸವವನ್ನು ಆಚರಿಸುವಂತೆ ಮಾಹಿತಿ ನೀಡಿದರು. ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಸ್ಥಾಪನೆ ಮಾಡುವಂತೆ ಮತ್ತು ರಾಸಾಯನಿಕ ಬಣ್ಣದ ಹಾಗೂ ಪಿ.ಓ.ಪಿ.ಗಣೇಶ ಮೂರ್ತಿಯನ್ನು ತ್ಯಜಿಸುವ ಕುರಿತು ಜನಜಾಗೃತಿ ಮೂಡಿಸುವಂತೆ ಪ್ರೇಮಕುಮಾರ್ ವಿದ್ಯಾರ್ಥಿಗಳಿಗೆ ತಿಳಿಸಿದರು. ಜೇಡಿಮಣ್ಣಿನಿಂದ…
ಮೂರ್ನಾಡು ಆ.26 NEWS DESK : ಮೂರ್ನಾಡು ಪಟ್ಟಣ ಮತ್ತು ವಿವಿಧೆಡೆ ಆ.27ರಂದು ವಿವಿಧ ಸಂಘ ಸಂಸ್ಥೆಗಳಿಂದ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಗೌರಿ-ಗಣೇಶೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಗುವುದು. ಮೂರ್ನಾಡಿನ ವೆಂಕಟೇಶ್ವರ ಕಾಲೋನಿಯ ವಿನಾಯಕ ಯುವಕ ಮಂಡಳಿಯ ವತಿಯಿಂದ 34ನೇ ವರ್ಷದಗೌರಿ-ಗಣೇಶೋತ್ಸವದ ಗಣೇಶನ ಉತ್ಸವ ಮೂರ್ತಿಯನ್ನು ಬೆ.10 ಗಂಟೆಗೆ ಪ್ರತಿಷ್ಠಾಪಿಸಲಾಗುವುದು. ಮೂರ್ನಾಡುಗಾಂಧಿನಗರದ ಶ್ರೀರಾಮ ಮಂದಿರ ಸೇವಾ ಸಮಿತಿಯ ವತಿಯಿಂದ 33ನೇ ವರ್ಷದ ಗೌರಿ-ಗಣೇಶೋತ್ಸವ ಗಾಂಧಿನಗರದ ಶ್ರೀರಾಮ ಮಂದಿರದಲ್ಲಿನಡೆಯಲಿದೆ. ವಿಘ್ನೇಶ್ವರ ಸೇವಾ ಸಮಿತಿಯ ವತಿಯಿಂದ ಮೂರ್ನಾಡು ಪಟ್ಟಣದ ಟಿ ಜಂಕ್ಷನ್‍ನಲ್ಲಿ 31ನೇ ವರ್ಷದ ಗೌರಿ-ಗಣೇಶೋತ್ಸವ, ಗಜೇಂದ್ರ ಯುವ ಶಕ್ತಿ ಸಂಘದ ವತಿಯಿಂದ 6ನೇ ವರ್ಷದಗೌರಿ-ಗಣೇಶೋತ್ಸವ ನಾಪೋಕ್ಲು ರಸ್ತೆಯ ಹನುಮಾನ್‍ಟ್ರೇಡರ್ಸ್‍ನಲ್ಲಿ, ಅಯ್ಯಪ್ಪ ಗೆಳೆಯರ ಬಳಗ, ಎಂ-ಟೌನ್ ವತಿಯಿಂದ 2ನೇ ವರ್ಷದಗೌರಿ-ಗಣೇಶೋತ್ಸವ ಅಯ್ಯಪ್ಪ ದೇವಸ್ಥಾನದ ವಾಣಿಜ್ಯ ಕಟ್ಟಡದಲ್ಲಿ, ಕೋಡಂಬೂರಿನ ವಿಘ್ನೇಶ್ವರ ಗೆಳೆಯರ ಬಳಗದಿಂದ 17ನೇ ವರ್ಷದಗೌರಿ-ಗಣೇಶೋತ್ಸವ ನಡೆಯಲಿದೆ. ಆ.27 ರಿಂದ ಆ.2ರವರೆಗೆ ಪ್ರತಿಷ್ಠಾಪಿಸಲಾದಗಣೇಶ ಮೂರ್ತಿಗಳನ್ನು ಪೂಜಾ ವಿಧಿ-ವಿಧಾನಗಳ ಮೂಲಕ 7 ದಿನಗಳವರೆಗೆ ಶ್ರದ್ಧಾಭಕ್ತಿಯಿಂದ ಪೂಜಿಸಿ, ಆ.2ರಂದು ಅಲಂಕೃತ ಮಂಟಪದಲ್ಲಿ…
ಮಡಿಕೇರಿ ಆ.26 NEWS DESK : ಜಿಲ್ಲೆಯ ವಿವಿಧ ಕಡೆಗಳಲ್ಲಿ ಆ.27 ರಿಂದ ಗೌರಿ-ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965 ರ ಕಲಂ 21 ರಲ್ಲಿ ದತ್ತವಾದ ಅಧಿಕಾರದಂತೆ ಆಗಸ್ಟ್, 27 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಹಾಕತ್ತೂರು ವ್ಯಾಪ್ತಿಯ 5 ಕಿ.ಮೀ. ವ್ಯಾಪ್ತಿಯಲ್ಲಿ ಮತ್ತು ಬೆಟ್ಟಗೇರಿ ಗ್ರಾಮ ಪಂಚಾಯಿತಿ ಸುತ್ತಮುತ್ತಲಿನ 2 ಕಿ.ಮೀ. ವ್ಯಾಪ್ತಿಯಲ್ಲಿ, ಆಗಸ್ಟ್, 31 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ ನಾಪೋಕ್ಲು ಸುತ್ತಮುತ್ತಲಿನ 15 ಕಿ.ಮೀ. ವ್ಯಾಪ್ತಿಯಲ್ಲಿ, ಸೆಪ್ಟೆಂಬರ್, 2 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮೂರ್ನಾಡು ನಗರದ ಸುತ್ತಮುತ್ತಲಿನ 8 ಕಿ.ಮೀ. ವ್ಯಾಪ್ತಿಯಲ್ಲಿ, ಸೆಪ್ಟೆಂಬರ್, 4 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಚೆಟ್ಟಳ್ಳಿ ಸುತ್ತಮುತ್ತ 2 ಕಿ.ಮೀ. ವ್ಯಾಪ್ತಿಯಲ್ಲಿ ಹಾಗೂ ಸೆಪ್ಟೆಂಬರ್, 7 ರಂದು…






