ಲೇಖಕ: admin

ವಿರಾಜಪೇಟೆ ಸೆ.8 NEWS DESK : ವಿರಾಜಪೇಟೆಯ ಶಾಸಕರ ಗೃಹ ಕಚೇರಿಯಲ್ಲಿ ವಿರಾಜಪೇಟೆ ನಗರ ಕಾಂಗ್ರೆಸ್ ಸಮಿತಿಯ ಪ್ರಮುಖ ಸಭೆಯು ನಗರಾಧ್ಯಕ್ಷ ಮಾಳೇಟಿರ ಬೋಪಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.  ಸಭೆಯಲ್ಲಿ ಪಕ್ಷದ ಸಂಘಟನೆ, ಎಸ್.ಐ.ಆರ್ ಯೋಜನೆ ಹಾಗೂ ಭಾರತ್ ಜೋಡೋ ಕಾರ್ಯಕ್ರಮದ ಮುಂದಿನ ರೂಪುರೇಷೆಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ಪ್ರಮುಖವಾಗಿ ವಿರಾಜಪೇಟೆ ನಗರ ಕಾಂಗ್ರೆಸ್ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದು, ಸಾಮಾಜಿಕ ನ್ಯಾಯದ ತತ್ವದಡಿಯಲ್ಲಿ ಸಮಿತಿ ರಚಿಸಲು ನಿರ್ಧರಿಸಲಾಯಿತು. ಪ್ರತಿಯೊಂದು ಬೂತ್‍ನಿಂದ ಸದಸ್ಯರ ಹೆಸರುಗಳನ್ನು ಪಡೆದುಕೊಂಡು ಅಂತಿಮ ಪಟ್ಟಿಯನ್ನು ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಸಲ್ಲಿಸಿ, ನೂತನ ಸಮಿತಿಯನ್ನು ಆಯ್ದುಕೊಳ್ಳಲು ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಆರ್.ಕೆ. ಅಬ್ದುಲ್ ಸಲಾಂ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸಿ.ಎ. ನಾಸರ್, ನಗರ ಕಾಂಗ್ರೆಸ್ ಉಪಾಧ್ಯಕ್ಷರಾದ ಶಾಹುಲ್ ಹಮೀದ್, ದಿನೇಶ್ ನಂಬಿಯಾರ್, ಡಿಸಿಸಿ ಸದಸ್ಯರಾದ ಮರ್ವೀನ್ ಲೋಬೊ,…

Read More

ವಿರಾಜಪೇಟೆ ಸೆ.8 NEWS DESK : ಮೀನುಪೇಟೆಯ ಶ್ರೀ ಮುತ್ತಪ್ಪ ಮಲಯಾಳಿ ಸಮಾಜದ ವತಿಯಿಂದ 18ನೇ ವರ್ಷದ ಓಣಂ ಆಚರಣೆಯು ಮೀನುಪೇಟೆಯ ಶ್ರೀ ಮುತ್ತಪ್ಪ ಕಲಾಮಂಟಪದಲ್ಲಿ ಅತ್ಯಂತ ವಿಜೃಂಭಣೆ ಹಾಗೂ ಸಾಂಸ್ಕೃತಿಕ ವೈವಿಧ್ಯದೊಂದಿಗೆ ಸಂಭ್ರಮದಿಂದ ನಡೆಯಿತು. ಬೆಳಿಗ್ಗೆ ಶ್ರೀ ಮುತ್ತಪ್ಪ ಸನ್ನಿಧಿಯಲ್ಲಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮಹಾಬಲಿ ನೃತ್ಯರೂಪಕ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿತ್ತು. ಬಳಿಕ ಮುತ್ತಪ್ಪ ದೇವಾಲಯದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಾದ್ಯಘೋಷಗಳೊಂದಿಗೆ ವೈಭವದ ಮಾವೇಲಿ ಮೆರವಣಿಗೆ ನಡೆಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಸಾಂಪ್ರದಾಯಿಕ ಓಣಂ ಸದ್ಯವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ, ಓಣಂ ಆಚರಣೆಯು ವಿಶ್ವಾದ್ಯಂತ ಪ್ರಖ್ಯಾತಿ ಪಡೆದ ಹಬ್ಬವಾಗಿದೆ. ಕೇರಳದ ವಿಭಿನ್ನ ಸಂಸ್ಕೃತಿಯ ವಿಶಿಷ್ಟ ಆಚರಣೆಯು ನಮ್ಮ ನಾಡಿನಲ್ಲಿಯೂ ಪಸರಿಸುತ್ತಿರುವುದು ದೇಶದ ಸಮೃದ್ಧ ಸಾಂಸ್ಕೃತಿಕ ಇತಿಹಾಸಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದರು. ಮಲಯಾಳಿ ಸಮಾಜದವರು ಅತ್ಯಂತ ಶ್ರದ್ಧಾ-ಭಕ್ತಿಯಿಂದ ಆಚರಿಸುವ ಓಣಂ ಹಬ್ಬವು ಸಕಲ ಮನುಕುಲಕ್ಕೆ ಒಳಿತನ್ನು…

Read More

ವಿರಾಜಪೇಟೆ ಸೆ.8 NEWS DESK : ವಿರಾಜಪೇಟೆಯ ಐತಿಹಾಸಿಕ ಕ್ರೈಸ್ತ ದೇವಾಲಯವಾದ ಸಂತ ಅನ್ನಮ್ಮ ಚರ್ಚ್‌ನಲ್ಲಿ ಮೇರಿಮಾತೆ ಜಯಂತಿಯನ್ನು ಶ್ರದ್ಧಾ-ಭಕ್ತಿಯಿಂದ ಸಂಭ್ರಮವಾಗಿ ಆಚರಿಸಲಾಯಿತು. ಹಬ್ಬದ ಅಂಗವಾಗಿ ಕಳೆದ ಒಂಬತ್ತು ದಿನಗಳಿಂದ ಚರ್ಚ್‌ನಲ್ಲಿ ವಿಶೇಷ ನವೆನ ಪ್ರಾರ್ಥನೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಹಬ್ಬದ ದಿನವಾದ ಮಂಗಳವಾರ ಚರ್ಚ್‌ನಲ್ಲಿ ಬೆಳಗ್ಗಿನಿಂದಲೇ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಸಂತ ಅನ್ನಮ್ಮ ಚರ್ಚ್‌ನ ಪ್ರಧಾನ ಧರ್ಮಗುರುಗಳಾದ ರೆವರೆಂಡ್ ಫಾದರ್ ಜೇಮ್ಸ್ ಡೊಮಿನಿಕ್ ಅವರ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನಡೆದವು. ಪ್ರಧಾನ ಧರ್ಮಗುರುಗಳು ದಿವ್ಯ ಬಲಿಪೂಜೆಯನ್ನು ನೆರವೇರಿಸಿದರು. ಹಬ್ಬದ ಪ್ರಯುಕ್ತ ಪ್ರಬೋಧನೆ, ಬೈಬಲ್ ಪಠಣ ಹಾಗೂ ಗಾಯನ ವೃಂದದವರಿಂದ ದೇವರ ನಾಮಸ್ತುತಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಧರ್ಮಗುರುಗಳು ಆಶೀರ್ವಚನದ ಮೂಲಕ ಹಬ್ಬದ ಸಂದೇಶ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಸಂತ ಅನ್ನಮ್ಮ ಚರ್ಚ್‌ನ ಒಳ ಆವರಣದಲ್ಲಿರುವ ಮಾತೆ ಮೇರಿಯವರ ಪ್ರತಿಮೆಗೆ ನೆರೆದಿದ್ದ ಭಕ್ತಾದಿಗಳು ಪುಷ್ಪಾರ್ಚನೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಭಕ್ತರು ಪರಸ್ಪರ…

Read More

ಮಡಿಕೇರಿ ಸೆ.8 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಆಸ್ಪತ್ರೆಯ ಸಭಾಂಗಣದಲ್ಲಿ ತಲೆ ಮತ್ತು ಬೆನ್ನುಮೂಳೆಯ ಗಾಯಗಳು, ಪಾರ್ಶ್ವವಾಯು ಹಾಗೂ ಅಪಸ್ಮಾರದ ತುರ್ತು ನಿರ್ವಹಣೆ ಕುರಿತು ವಿಶೇಷ ಅತಿಥಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಡೀನ್ ಹಾಗೂ ನಿರ್ದೇಶಕರಾದ ಡಾ. ಲೋಕೇಶ್ ಎ.ಜೆ., ಆರ್‌ಎಂಒ ಡಾ. ಅಭಿನಂದನ್ ಬಿ.ವಿ. ಹಾಗೂ ಸಾಮಾನ್ಯ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಪ್ರವೀಣ್ ಕುಮಾರ್ ಕೆ. ಅವರ ಸಮ್ಮುಖದಲ್ಲಿ ಕಾರ್ಯಕ್ರಮ ಜರುಗಿತು. ಬೆಂಗಳೂರಿನ ಸರ್ಜಾಪುರ ರಸ್ತೆಯ ಸ್ಪರ್ಶ್ ಆಸ್ಪತ್ರೆಯ ಕನ್ಸಲ್ಟೆಂಟ್ ನ್ಯೂರೋಸರ್ಜನ್ ಡಾ. ನಿಹಾಲ್ ಅಹಮದ್ ಅವರು ವಿಶೇಷ ಉಪನ್ಯಾಸ ನೀಡಿದರು. ತಲೆ ಮತ್ತು ಬೆನ್ನುಮೂಳೆಯ ಗಾಯಗಳ ಸಂದರ್ಭದಲ್ಲಿ ತಕ್ಷಣ ಕೈಗೊಳ್ಳಬೇಕಾದ ಕ್ರಮಗಳು, ನರವೈಜ್ಞಾನಿಕ ಮೌಲ್ಯಮಾಪನ, ಅಗತ್ಯ ಸಂದರ್ಭಗಳಲ್ಲಿ ಸಿ.ಟಿ. ಸ್ಕ್ಯಾನ್ ಸೇರಿದಂತೆ ಅಗತ್ಯ ಪರೀಕ್ಷೆಗಳು, ಹೆಚ್ಚಿದ ಒಳಕಪಾಲದ ಒತ್ತಡದ ನಿರ್ವಹಣೆ ಕುರಿತು ಅವರು ವಿವರಿಸಿದರು. ಪಾರ್ಶ್ವವಾಯು ಚಿಕಿತ್ಸೆಯಲ್ಲಿ “Time is Brain” ಎಂಬ ಪರಿಕಲ್ಪನೆಯ ಮಹತ್ವ, ತ್ವರಿತ ಥ್ರಾಂಬೋಲಿಸಿಸ್ ಹಾಗೂ…

Read More

ಕುಶಾಲನಗರ, NEWS DESK ಸೆ.8: ಕುಶಾಲನಗರದ ಸಂತ ಸೆಬಾಸ್ಟಿಯನ್ ಚರ್ಚ್‌ನಲ್ಲಿ ಪವಿತ್ರ ಕನ್ಯಾಮರಿಯಮ್ಮನ ಜನ್ಮ ಹಬ್ಬವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ವಿಶೇಷ ನೊವೇನಾ ಪ್ರಾರ್ಥನೆಗಳು ನಡೆದಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಪವಿತ್ರ ಕನ್ಯಾಮರಿಯಮ್ಮನ ಮಧ್ಯಸ್ಥಿಕೆಯನ್ನು ಕೋರಿ ಪ್ರಾರ್ಥಿಸಿದರು. ಸಂತ ಸೆಬಾಸ್ಟಿಯನ್ ಚರ್ಚ್‌ನ ಧರ್ಮಗುರು ವಂ. ಫಾ. ಜ್ಞಾನ ಪ್ರಕಾಶ್ ಅವರ ನೇತೃತ್ವದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಮೈಸೂರು ಧರ್ಮಪ್ರಾಂತ್ಯದ ವಂ. ಫಾ. ಆಂಥೋನಿ ಕುಮಾರ್ ಹಾಗೂ ವಂ. ಫಾ. ನವೀನ್ ಕುಮಾರ್ ಉಪಸ್ಥಿತರಿದ್ದರು. ತಪೋವನದ ಧರ್ಮಗುರುಗಳೂ ಆಚರಣೆಯಲ್ಲಿ ಪಾಲ್ಗೊಂಡರು. ವಂ. ಫಾ. ನವೀನ್ ಕುಮಾರ್ ಅವರಿಂದ ಪವಿತ್ರ ಬಲಿಪೂಜೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಭಕ್ತರು ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿ, ಪವಿತ್ರ ಕನ್ಯಾಮರಿಯಮ್ಮನ ಆಶೀರ್ವಾದವನ್ನು ಕೋರಿದರು. ಧಾರ್ಮಿಕ ಕಾರ್ಯಕ್ರಮದ ಬಳಿಕ ಕೇಕ್ ಕತ್ತರಿಸಿ ಹಬ್ಬದ ಸಂಭ್ರಮವನ್ನು ಹಂಚಿಕೊಳ್ಳಲಾಯಿತು. ನಂತರ ಸೌಹಾರ್ದತೆಯ ಉಪಹಾರ ಕೂಟ ಆಯೋಜಿಸಲಾಗಿದ್ದು, ಧರ್ಮಗುರುಗಳು ಹಾಗೂ ಭಕ್ತರು ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು ಸಂಭ್ರಮದಿಂದ ಪಾಲ್ಗೊಂಡರು.…

Read More

ಮಡಿಕೇರಿ ಸೆ.8 NEWS DESK :  ಕುಶಾಲನಗರದ ಪಿ.ಎಂ. ಶ್ರೀ ಶಾಲೆಯಲ್ಲಿ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಹಾಗೂ ನವಸಾಕ್ಷರರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಸಾಕ್ಷರತಾ ನೋಡಲ್ ಅಧಿಕಾರಿ ಡಾ. ಹೇಮಂತ್ ರಾಜ್ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯದಲ್ಲಿಯೇ ಕೊಡಗು ಜಿಲ್ಲೆ ಶೇ.93ರಷ್ಟು ಸಾಕ್ಷರತೆ ಸಾಧಿಸಿರುವುದು ಹೆಮ್ಮೆಯ ಸಂಗತಿಯಾಗಿದೆ. ಕೆಲವೇ ದಿನಗಳಲ್ಲಿ ಕೊಡಗು ಜಿಲ್ಲೆಯನ್ನು ‘ಸಂಪೂರ್ಣ ಸಾಕ್ಷರತಾ ಜಿಲ್ಲೆ’ ಎಂದು ಘೋಷಿಸಲಾಗುವುದು ಎಂದು ತಿಳಿಸಿದರು. ಡಯಟ್ ಉಪ ನಿರ್ದೇಶಕ (ಅಭಿವೃದ್ಧಿ) ರಾಮಚಂದ್ರರಾಜೇ ಅರಸ್ ಅವರು ಪಿ.ಎಂ. ಶ್ರೀ ಶಾಲೆಯ ದ್ವಿಭಾಷಾ ಚಟುವಟಿಕೆಗಳ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿದರು. ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಹಶಿಕ್ಷಕರ ಹಲವು ದಿನಗಳ ಪರಿಶ್ರಮದ ಫಲವಾಗಿ ಈ ಕೊಠಡಿ ನಿರ್ಮಾಣಗೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 15 ವರ್ಷ ಮೇಲ್ಪಟ್ಟ ಅಕ್ಷರಸ್ಥರಲ್ಲದವರನ್ನು ಶಿಕ್ಷಣದ ಮುಖ್ಯವಾಹಿನಿಗೆ ತರುವುದು ಸಾಕ್ಷರತಾ ಕಾರ್ಯಕ್ರಮದ ಪ್ರಮುಖ ಆಶಯವಾಗಿದೆ. ಕಾರ್ಯಕ್ರಮದ ಯಶಸ್ಸಿಗೆ ಬಿ.ಆರ್.ಸಿ., ಬಿ.ಆರ್.ಪಿ. ಹಾಗೂ ಸಿ.ಆರ್.ಪಿ.ಗಳ ಪರಿಶ್ರಮ ಶ್ಲಾಘನೀಯ ಎಂದು ತಿಳಿಸಿದರು. ನವಸಾಕ್ಷರರು ಕೇವಲ ಸಹಿ…

Read More

ಮಡಿಕೇರಿ, NEWS DESK ಸೆ.08: ಲಯನ್ಸ್ ಸಂಸ್ಥೆ ವತಿಯಿಂದ ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಲಯನ್ಸ್ ಸಂಸ್ಥೆಯ ಸದಸ್ಯೆ ಹಾಗೂ ಮಕ್ಕಂದೂರು ಶಾಲೆಯ ಶಿಕ್ಷಕಿ ಲಯನ್ ವನಜಾಕ್ಷಿ ದಾಮೋದರ್ ಅವರನ್ನು ಶಾಲು ಹೊದಿಸಿ, ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುವುದರ ಜೊತೆಗೆ ಉತ್ತಮ ಸಮಾಜ ನಿರ್ಮಾಣಕ್ಕೆ ಅಮೂಲ್ಯ ಕೊಡುಗೆ ನೀಡುತ್ತಿದ್ದಾರೆ. ಶಿಕ್ಷಕರ ಸೇವೆಯನ್ನು ಗೌರವಿಸುವುದು ಸಮಾಜದ ಕರ್ತವ್ಯವಾಗಿದೆ ಎಂದು ಕಾರ್ಯಕ್ರಮದಲ್ಲಿ ಅಭಿಪ್ರಾಯ ವ್ಯಕ್ತವಾಯಿತು. ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಕಿ ವನಜಾಕ್ಷಿ ದಾಮೋದರ್ ಅವರನ್ನು ಗೌರವಿಸುವ ಮೂಲಕ ಲಯನ್ಸ್ ಸಂಸ್ಥೆ ಶಿಕ್ಷಕರಿಗೆ ಸಲ್ಲಬೇಕಾದ ಗೌರವವನ್ನು ವ್ಯಕ್ತಪಡಿಸಿತು. ಕಾರ್ಯಕ್ರಮದಲ್ಲಿ ಲಯನ್ಸ್ ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.

Read More

ಮಡಿಕೇರಿ,  NEWS DESK ಸೆ.08: ಶಿಕ್ಷಕರು ವಿದ್ಯಾರ್ಥಿಗಳನ್ನು ಜ್ಞಾನದ ಮೂಲಕ ಉನ್ನತ ಸ್ಥಾನಕ್ಕೆ ಕೊಂಡೊಯ್ಯುವ ನಿಸ್ವಾರ್ಥ ತಪಸ್ವಿಗಳು ಎಂಬ ಆಶಯದೊಂದಿಗೆ ಲಯನ್ಸ್ ಸಂಸ್ಥೆ ಮಡಿಕೇರಿ ವತಿಯಿಂದ ಶಿಕ್ಷಕರ ದಿನಾಚರಣೆ ಹಾಗೂ ವಲಯಾಧ್ಯಕ್ಷರ ಭೇಟಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಅನುಪಮ ಸೇವೆಯನ್ನು ಪರಿಗಣಿಸಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲೆ ಶ್ರೀಮತಿ ಸವಿತಾ ಎಂ.ಜಿ. ಅವರನ್ನು ಶಾಲು ಹೊದಿಸಿ, ಫಲಪುಷ್ಪ ನೀಡಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸವಿತಾ ಎಂ.ಜಿ., ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ತಮ್ಮನ್ನು ಗೌರವಿಸಿದ್ದಕ್ಕಾಗಿ ಲಯನ್ಸ್ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿದರು. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಹಾಗೂ ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಜವಾಬ್ದಾರಿ ಮಹತ್ವದ್ದಾಗಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಲಯನ್ಸ್ ಸಂಸ್ಥೆ ಮಡಿಕೇರಿಯ ಸದಸ್ಯೆ ಹಾಗೂ ಮಕ್ಕಂದೂರು ಪ್ರೌಢಶಾಲೆಯ ಶಿಕ್ಷಕಿ ಲಯನ್ ವನಜಾಕ್ಷಿ ದಾಮೋದರ್ ಅವರನ್ನು ಸಹ ಶಾಲು ಹೊದಿಸಿ ಗೌರವಿಸಲಾಯಿತು. ವಲಯಾಧ್ಯಕ್ಷ ಲಯನ್ ಮದನ್ ಮಾದಯ್ಯ ಬಿ.ಬಿ. ಅವರು ವಲಯದ…

Read More

ಮಡಿಕೇರಿ,NEWS DESK ಸೆ. 8:ಕುಶಾಲನಗರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ 2025-26ನೇ ಸಾಲಿನ 75. ನೇ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಹೆಚ್.ಬಿ. ಚಂದ್ರಪ್ಪರವರ ಅಧ್ಯಕ್ಷತೆಯಲ್ಲಿ ರೈತ ಸಹಕಾರ ಭವನದ ಸಭಾಂಗಣದಲ್ಲಿ ಜರುಗಿತ್ತು. ಸಭೆಯಲ್ಲಿ ಮೊದಲಿಗೆ ಸಂಘದ ಕಾರ್ಯ ವ್ಯಾಪ್ತಿಯ ಪ್ರಾಥಮಿಕ,ಪ್ರೌಢಶಾಲಾ, ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಣೆ ನೆರವೇರಿಸಿದರು. ಸಭೆಯಲ್ಲಿ 2025-26. ನೇ ಸಾಲಿನ ಲೆಕ್ಕಪರಿಶೋಧನಾ ವರದಿ, ಜಮಾಖರ್ಚು, ವ್ಯಾಪಾರ ಲಾಭ ಸೇರಿದಂತೆ, ನಿವ್ವಳ ಲಾಭದ ವಿಲೇವಾರಿ, ಅಂದಾಜು ಬಡ್ಜೆಟ್ ಮಂಜೂರು ಸೇರಿದಂತೆ ಸಂಘದ ಅಭಿವೃದ್ಧಿ ಪೂರಕವಾದ ಅಂಶಗಳ ಬಗ್ಗೆ ಚರ್ಚೆಗಳು ನಡೆದವು. ಸಭೆಯಲ್ಲಿ ಹಾಜರಿದ್ದ ಸದಸ್ಯರುಗಳು ತಮ್ಮ ತಮ್ಮ ಅಭಿಪ್ರಾಯಗಳನ್ನು ಸಂಘದ ಅಭಿವೃದ್ಧಿಗೆ ಪೂರಕವಾಗಿ ಅನುಕೂಲ ಕಲ್ಪಿಸುವ ಹಿತದೃಷ್ಟಿಯಿಂದ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಹೆಚ್. ಬಿ. ಚಂದ್ರಪ್ಪ ಮಾತಾನಾಡಿದ ಅವರು ಸಭೆಯಲ್ಲಿ ಚರ್ಚೆಗೊಂಡ ವಿಷಯಗಳನ್ನು ನೊಂದಣಿ ಮಾಡಲಾಗಿದೆ ಅದರ ಮೂಲಕ ಮಾಸಿಕ ಸಭೆಯಲ್ಲಿ ಚರ್ಚೆ ಮಾಡಿ ಸಾಧಕ ಬಾಧಕಗಳನ್ನು ಚರ್ಚಿಸಿ ಮುಂದಿನ ಕ್ರಮಗಳನ್ನು…

Read More

ಗೋಣಿಕೊಪ್ಪ, NEWS DESK ಸೆ.೦8: ಅಮ್ಮತ್ತಿ ಒಂಟಿ ಅಂಗಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ವಿದ್ಯಾರ್ಥಿಗಳು ವಿಜೇತರಾಗಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ಪ್ರಾಥಮಿಕ ವಿಭಾಗದಲ್ಲಿ ಮೇವಡ ಯಾನಿ ಬೆಳ್ಳಿಯಪ್ಪ, ಮಾಲೇಟ್ಟಿರ ರೇನಾ ಪೊನ್ನಮ್ಮ ಹಾಗೂ ಕೊಪ್ಪಿರ ಎಸ್. ತನ್ವಿ ತಂಗಮ್ಮ ಸ್ಪರ್ಧಿಸಿ ವಿಜೇತರಾಗಿದ್ದಾರೆ. ಬಾಲಕರ ಪ್ರಾಥಮಿಕ ವಿಭಾಗದಲ್ಲಿ ಐಚಂಡ ತಲಿಶ್ ಯು., ಚೇಮಿರ ದ್ರೋಣ್ ಚಿನ್ನಪ್ಪ, ಮೂಕೊಂಡ ಪ್ರಥಮ್ ಪೂವಣ್ಣ ಆರ್. ಹಾಗೂ ಎಸ್. ಗೌರವ್ ಕೃಷ್ಣ ಸ್ಪರ್ಧಿಸಿ ವಿಜೇತರಾಗಿದ್ದಾರೆ. ಗೋಣಿಕೊಪ್ಪದ ಲಯನ್ಸ್ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರೌಢಶಾಲಾ ವಿಭಾಗದ ಬಾಲಕಿಯರ ಪಂದ್ಯಾವಳಿಯಲ್ಲಿ ಪಟ್ಟಡ ದೇಚಮ್ಮ, ತಾತಂಡ ಗ್ರಂಥ ಕಾವೇರಮ್ಮ ಹಾಗೂ ಚೊಕ್ಕಂಡ ದಿತಿ ದೇಚಮ್ಮ ಸ್ಪರ್ಧಿಸಿ ವಿಜೇತರಾಗಿದ್ದಾರೆ. ವಿದ್ಯಾರ್ಥಿಗಳಿಗೆ ಶಾಲೆಯ ದೈಹಿಕ ಶಿಕ್ಷಕರಾದ ಶ್ರೀಮತಿ ಮೋನಿಕಾ ಹಾಗೂ ಶ್ರೀಮತಿ ಲಾವಣ್ಯ ಅವರು ತರಬೇತಿ ನೀಡಿದ್ದರು. ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆಗೆ ಶಾಲಾ ಆಡಳಿತ ಮಂಡಳಿಯ…

Read More