ನಾಪೋಕ್ಲು ಡಿ.3 NEWS DESK : ಕಾಫಿ ಬೆಳೆಗಾರರು ಕಾಫಿಯ ಉತ್ಪಾದನೆಯನ್ನು ಹೆಚ್ಚಿಸುವುದರ ಜೊತೆ ಗುಣಮಟ್ಟವನ್ನು ವೃದ್ಧಿಸಬೇಕು. ಆಗ ಬೆಳೆಗಾರರು ಆರ್ಥಿಕವಾಗಿ ಸಬಲರಾಗಲು ಸಾಧ್ಯ ಎಂದು ಕಾಫಿ ರಾಷ್ಟ್ರೀಯ ಪಾನೀಯ ಹೋರಾಟ ಸಮಿತಿ ಸಂಚಾಲಕ ಮಾಚಿಮಾಡ ರವೀಂದ್ರ ಹೇಳಿದರು. ಭಾರತೀಯ ಕಿಸಾನ್ ಸಂಘದ ವತಿಯಿಂದ ನಾಪೋಕ್ಲು ಬೆಳೆಗಾರರ ಹೋರಾಟ ಸಮಿತಿ ಅಧ್ಯಕ್ಷರಾದ ಕುಂಡ್ಯೋಳಂಡ ರಮೇಶ್ ಮುದ್ದಯ್ಯ ಅವರ ಅಧ್ಯಕ್ಷತೆಯಲ್ಲಿ ಕೊಡವ ಸಮಾಜದ ಹರದಾಸ ಅಪ್ಪನೆರವಂಡ ಅಪ್ಪಚ ಕವಿ ಸಭಾಂಗಣದಲ್ಲಿ ನಡೆದ ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಸಾಧಕ, ಬಾಧಕ ಹಾಗೂ ಪರಿಹಾರಕ್ಕೆ ಸಂಬಂಧಿಸಿದ ಕಾಫಿ ಬೆಳೆಗಾರರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ದೇಶದಲ್ಲಿ ಕಾಫಿಯ ಆಂತರಿಕ ಬಳಕೆ ಹೆಚ್ಚಬೇಕು. ಕಾಫಿ ರಾಷ್ಟ್ರೀಯ ಪಾನೀಯ ಆಗಬೇಕು ಎಂದ ಅವರು, ಡಿಸೆಂಬರ್ ತಿಂಗಳಲ್ಲಿ ಕೇಂದ್ರ ಸಚಿವರು ಚಿಕ್ಕಮಂಗಳೂರಿನ ಬಾಳೆಹೊನ್ನೂರಿಗೆ ಆಗಮಿಸಲಿದ್ದು, ಈ ಸಂದರ್ಭ ಕಾಫಿ ಬೆಳೆಗಾರರ ಸಮಸ್ಯೆಗಳನ್ನು ಮುಕ್ತವಾಗಿ ಚರ್ಚಿಸಲಾಗುವುದು ಎಂದರು. ಭಾರತೀಯ ಕಿಸಾನ್ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ನಾರಾಯಣ ಸ್ವಾಮಿ ಮಾತನಾಡಿ,…
ಲೇಖಕ: admin
ಸುಂಟಿಕೊಪ್ಪ ಡಿ.3 NEWS DESK : ಪ್ರತಿಭಾ ಕಾರಂಜಿ ಕೇವಲ ಸ್ಪರ್ಧೆಯಲ್ಲ, ಬದಲಿಗೆ ಮಕ್ಕಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಸಹಾಯ ಮಾಡುವ ಒಂದು ಬೃಹತ್ ಕಲಿಕೆಯ ಹಬ್ಬವಾಗಿದೆ ಎಂದು ಪ್ರೌಢಶಾಲಾ ಮುಖ್ಯ ಶಿಕ್ಷಕ ಸೋಮಯ್ಯ ತಿಳಿಸಿದರು. 7ನೇ ಹೊಸಕೋಟೆಯ ದೀಪ್ತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಬಳಿಕ ಮಾತನಾಡಿದ ಅವರು, ಪ್ರತಿಭಾ ಕಾರಂಜಿ ಎನ್ನುವುದು ಶಾಲಾ ಮಟ್ಟದಲ್ಲಿ ಮಕ್ಕಳ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಮತ್ತು ಹೊರತರಲು ಇರುವ ಒಂದು ಅತ್ಯುತ್ತಮ ವೇದಿಕೆಯಾಗಿದೆ. ಕೇವಲ ಶೈಕ್ಷಣಿಕವಲ್ಲದೆ, ಚಿತ್ರಕಲೆ, ಹಾಡು, ನೃತ್ಯ, ನಾಟಕ, ಕಥೆ ಹೇಳುವುದು, ಭಾಷಣ, ಜಾನಪದ ಕಲೆ, ವಿಜ್ಞಾನ ಮಾದರಿಗಳ ಪ್ರದರ್ಶನ ಮುಂತಾದ ಅನೇಕ ಸ್ಪರ್ಧೆಗಳಿಗೆ ಅವಕಾಶ ನೀಡುತ್ತದೆ. ಇದರಿಂದ ಮಕ್ಕಳಿಗೆ ಆತ್ಮಸ್ಥೈರ್ಯ ಹೆಚ್ಚಾಗಿ, ಉತ್ತಮ ವ್ಯಕ್ತಿಯಾಗಿ ಬೆಳೆಯಲು ಸಹಾಯವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಛದ್ಮವೇಷ ಅಭಿನಯ ಗೀತೆ, ಜಾನಪದ ನೃತ್ಯ, ದೇಶಭಕ್ತಿ ಗೀತೆ, ಭಾಷಣ ಚಿತ್ರಕಲೆ ಇನ್ನಿತರ ಸಹ ಪಠ್ಯ ಚಟುವಟಿಕೆಗಳ ಸ್ಪರ್ಧೆ ನಡೆಯಿತು. ವೇದಿಕೆಯಲ್ಲಿ…
ಗೋಣಿಕೊಪ್ಪ ಡಿ.3 NEWS DESK : ಗೋಣಿಕೊಪ್ಪಲು ಶ್ರೀ ಕೀಲೇರಿ ಮುತ್ತಪ್ಪ ದೇವಸ್ಥಾನದಲ್ಲಿ ಡಿ.4 ರಂದು ಪುತ್ತರಿ ವೆಳ್ಳಾಟಂ ನಡೆಯಲಿದೆ. ಅಂದು ಸಂಜೆ 6 ಗಂಟೆಯಿಂದ ಮುತ್ತಪ್ಪ ದೇವರ ವೆಳ್ಳಾಟಂ ಹಾಗೂ ಕದಿರು ತೆಗೆಯಲಾಗುವುದು. ಅಲ್ಲದೇ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶ್ರಿ ಕೀಲೇರಿ ಮಠಪುರ ಟ್ರಸ್ಟ್ ಮನವಿ ಮಾಡಿದೆ.
ಮಡಿಕೇರಿ NEWS DESK ಡಿ.2 : ಕೊಡಗು ಏಲಕ್ಕಿ ಮಾರಾಟ ಸಹಕಾರ ಸಂಘದ 2025-30ನೇ ಸಾಲಿನ ನೂತನ ಅಧ್ಯಕ್ಷರಾಗಿ ಸಿ.ಪಿ.ವಿಜಯ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಎಸ್.ಎಸ್.ಸುರೇಶ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಸಂಘದ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರಿಗೆ ಅಧಿಕ ಸ್ಥಾನ ಲಭಿಸಿತ್ತು.
ಮಡಿಕೇರಿ ಡಿ.2 NEWS DESK : ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ 11 ಗ್ರಾಮ ಪಂಚಾಯತ್ಗಳಲ್ಲಿ ‘ಸಮಗ್ರ ನಾಗರಿಕ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಇಡಿಸಿಎಸ್, ಬೆಂಗಳೂರಿನಿಂದ ಅರ್ಜಿ ಆಹ್ವಾನಿಸಲಾಗಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಪೊನ್ನಂಪೇಟೆ, ಬಿ.ಶೆಟ್ಟಿಗೇರಿ, ನಾಲ್ಕೇರಿ, ಕೆ.ಬಾಡಗ, ನಿಟ್ಟೂರು, ಬಲ್ಯಮಂಡೂರು, ದೇವರಪುರ, ಟಿ.ಶೆಟ್ಟಿಗೇರಿ, ಸೋಮವಾರಪೇಟೆ ತಾಲ್ಲೂಕಿನ ಗರ್ವಾಲೆ, ಮಡಿಕೇರಿ ತಾಲ್ಲೂಕಿನ ಹಾಕತ್ತೂರು, ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ. ಆಸಕ್ತ ಪ್ರಾಂಚೈಸಿಗಳು https://kal-mys.gramaone.karnataka.gov.in/ ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್, 15 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿ ಇ-ಮೇಲ್ ಐಡಿ care@blsinternational.net ನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ತಿಳಿಸಿದ್ದಾರೆ.
ವಿರಾಜಪೇಟೆ ಡಿ.2 NEWS DESK : ಹೆಚ್ಐವಿ/ ಏಡ್ಸ್ ಕುರಿತು ಪ್ರತಿಯೊಬ್ಬರಲ್ಲಿಯೂ ಜಾಗೃತಿ ಮೂಡಿದಾಗ ಮಾತ್ರ ಅದರ ಸಂಪೂರ್ಣ ನಿಮೂರ್ಲನೆ ಸಾಧ್ಯ ಎಂದು ಕೊಡಗು ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಅಧಿಕಾರಿ ಡಾ.ಸನತ್ ಕುಮಾರ್ ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾ ಪಂಚಾಯತ್, ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆಂಷನ್ ಸೊಸೈಟಿ, ವಿರಾಜಪೇಟೆ ತಾಲ್ಲೂಕು ಆರೋಗ್ಯ ಇಲಾಖೆ ಹಾಗೂ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್, ರೆಡ್ ರಿಬ್ಬನ್ ಘಟಕ, ಯುವ ರೆಡ್ ಕ್ರಾಸ್ ಘಟಕ, ವೈಯಕ್ತಿಕ ಕೌನ್ಸೆಲ್ಲಿಂಗ್ ಘಟಕಗಳ ಸಹಯೋಗದಲ್ಲಿ ಸೆಂಟ್ ಆನ್ಸ್ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ಏಡ್ಸ್ ದಿನಾಚರಣೆ-2025 ತಾಲ್ಲೂಕು ಮಟ್ಟದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಏಡ್ಸ್ ಕುರಿತು ಆರೋಗ್ಯ ಇಲಾಖೆ, ಏಡ್ಸ್ ನಿಯಂತ್ರಣ ಘಟಕಗಳು ಅದರ ಜೊತೆಗೆ ರೆಡ್ ರಿಬ್ಬನ್ ಕ್ಲಬ್ ನಂತಹ ಘಟಕಗಳು ಸಮಾಜದಲ್ಲಿ ಸಾರ್ವಜನಿಕರಿಗೆ ಜಾಗೃತಿಯನ್ನು ಮೂಡಿಸುತ್ತಿದ್ದಾರೆ.…
ಸೋಮವಾರಪೇಟೆ ಡಿ.2 NEWS DESK : ರಾಜ್ಯ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು. ಸೋಮವಾರಪೇಟೆ ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಪ್ರಮುಖರು, ಪ್ರಸಕ್ತ ವರ್ಷ ಅತೀ ವೃಷ್ಟಿಯಿಂದಾಗಿ ಕಾಫಿ, ಕಾಳುಮೆಣಸು ನಷ್ಟಗೊಂಡಿದ್ದರೂ ಕಾಂಗ್ರೆಸ್ ಸರ್ಕಾರ ಈವರೆಗೆ ಪರಿಹಾರ ನೀಡಿಲ್ಲ ಎಂದು ಆರೋಪಿಸಿದರು. ಈ ಸಂದರ್ಭ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಅತೀ ವೃಷ್ಟಿಯಿಂದಾಗಿ ಕೃಷಿ ಫಸಲು ನಷ್ಟವಾಗಿದ್ದರೂ ಪರಿಹಾರ ಘೋಷಿಸಿಲ್ಲ. ಮೊನ್ನೆ ಒಂದಷ್ಟು ಪರಿಹಾರ ಘೋಷಣೆ ಮಾಡಿದ್ದರೂ ಕೊಡಗು ಜಿಲ್ಲೆಯನ್ನು ಪಟ್ಟಿಯಿಂದ ಕೈಬಿಟ್ಟಿದ್ದಾರೆ. ಇದನ್ನು ಬಿಜೆಪಿ ಖಂಡಿಸುತ್ತದೆ ಎಂದರು. ಸ್ಥಳೀಯ ಅಧಿಕಾರಿಗಳು ಶೇ.30 ಕ್ಕಿಂತ ಕಡಿಮೆ ನಷ್ಟವಾಗಿದೆ ಎಂದು ವರದಿ ನೀಡಿದ್ದಾರೆ. ಇದು ಶಾಸಕರುಗಳ ಆಡಳಿತ ವೈಖರಿಗೆ ಸಾಕ್ಷಿಯಾಗಿದೆ. ಅಧಿಕಾರಿಗಳಿಗೆ ಸ್ಪಷ್ಟ ಹಾಗೂ ಕಟ್ಟುನಿಟ್ಟಿನ ನಿರ್ದೇಶನ ನೀಡುವಲ್ಲಿ ಶಾಸಕರು ವಿಫಲರಾಗಿದ್ದಾರೆ. ಇದರಿಂದಾಗಿ ಕೇಂದ್ರ ಸರ್ಕಾರದ ಎನ್ಡಿಆರ್ಎಫ್ನಿಂದ ಬರುವ…
ವಿರಾಜಪೇಟೆ ಡಿ.2 NEWS DESK : ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನ ಅರ್ಥಶಾಸ್ತ್ರ ಪ್ರಾಧ್ಯಾಪಕರು ಹಾಗೂ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಹೆಚ್.ವಿ.ನಾಗರಾಜು ಅವರನ್ನು ವಿರಾಜಪೇಟೆ ಕಾವೇರಿ ಕಾಲೇಜು ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲ ಬೆನೆಡಿಕ್ಟ್ ಸಲ್ಡಾನ ನಿವೃತ್ತ ಪ್ರಾಧ್ಯಾಪಕ ನಾಗರಾಜು ಅವರನ್ನು ಸನ್ಮಾನಿಸಿ, ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಈ ಸಂದರ್ಭ ಕಾವೇರಿ ಪಿ ಯು ಕಾಲೇಜಿನ ಪ್ರಾಂಶುಪಾಲ ಎನ್.ಎಂ.ನಾಣಯ್ಯ, ಐಕ್ಯೂಎಸಿ ಸಂಚಾಲಕಿ ಪ್ರಿಯ ಮುದ್ದಪ್ಪ, ಉಪನ್ಯಾಸಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಹೆಚ್.ವಿ.ನಾಗರಾಜು ಗೋಣಿಕೊಪ್ಪಲು ಕಾವೇರಿ ಕಾಲೇಜು ಹಾಗೂ ವಿರಾಜಪೇಟೆ ಕಾವೇರಿ ಕಾಲೇಜುಗಳಲ್ಲಿ ಅರ್ಥಶಾಸ್ತ್ರ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಸುದೀರ್ಘವಾದ 31 ವರ್ಷಗಳ ಪ್ರಾಧ್ಯಾಪಕ ಸೇವೆಯ ಜೊತೆಯಲ್ಲಿ ಹತ್ತು ವರ್ಷಕ್ಕೂ ಹೆಚ್ಚು ವರ್ಷಗಳ ಕಾಲ ಎನ್.ಎಸ್.ಎಸ್ ಅಧಿಕಾರಿಗಳಾಗಿಯೂ ಸೇವೆ ಸಲ್ಲಿಸಿದ್ದಾರೆ.
ಮಡಿಕೇರಿ ಡಿ.2 NEWS DESK : 66/11 ಕೆ.ವಿ ಶನಿವಾರಸಂತೆ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಎಫ್3-ಶನಿವಾರಸಂತೆ ಟೌನ್ ಫೀಡರ್ನಲ್ಲಿ ಡಿ.3 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆಯ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಸದರಿ ಫೀಡರ್ನಿಂದ ಹೊರಹೊಮ್ಮುವ ಶನಿವಾರಸಂತೆ ಪಟ್ಟಣ, ಗುಡುಗಳಲೆ, ಕೆ.ಆರ್.ಸಿ ಸರ್ಕಲ್, ಅಡ್ಡಶೆಟ್ಟಳ್ಳಿ, ಶೆಟ್ಟಿಗನಹಳ್ಳಿ, ಮಾದ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ ಡಿ.2 NEWS DESK : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಖಜಾಂಚಿಯಾಗಿ ನಿರ್ದೇಶಕರಾಗಿ ಚುನಾಯಿತಗೊಂಡಿದ್ದ ಸುನಿಲ್ ಪೊನ್ನೆಟ್ಟಿ ಅವರನ್ನು ನೇಮಕ ಮಾಡಲಾಯಿತು. ಸಂಘದ ಅಧ್ಯಕ್ಷರಾದ ಬಾಚರಣಿಯಂಡ ಅನು ಕಾರ್ಯಪ್ಪ ಅಧ್ಯಕ್ಷತೆಯಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಖಾಲಿಯಿದ್ದ ಖಜಾಂಚಿ ಹಾಗೂ ವಿವಿಧ ಸ್ಥಾನಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯಿತು. ರಾಷ್ಟ್ರೀಯ ಸಮಿತಿ ಸದಸ್ಯರಾಗಿ ಪಳೆಯಂಡ ಪಾರ್ಥ ಚಿಣ್ಣಪ್ಪ, ಖಜಾಂಚಿ ಆಯ್ಕೆಯಿಂದ ತೆರವಾಗಿದ್ದ ನಿರ್ದೇಶಕ ಸ್ಥಾನಕ್ಕೆ ಕೆ. ಶಿವಕುಮಾರ್, ನಾಮನಿರ್ದೇಶಿತ ಸದಸ್ಯರುಗಳಾಗಿ ಬೊಳ್ಳಜಿರ ಅಯ್ಯಪ್ಪ, ರಾಜು ರೈ ಹಾಗೂ ವಿ.ವಿ. ಅರುಣ್ ಕುಮಾರ್ ಅವರನ್ನು ನೇಮಿಸಲಾಯಿತು. :: ಉಪಸಮಿತಿ ರಚನೆ :: ಸಂಘದ ಕ್ರೀಡಾ ಸಮಿತಿ ಸಂಚಾಲಕರಾಗಿ ಸಂತೋಷ್ ರೈ, ಸಹ ಸಂಚಾಲಕರಾಗಿ ರಿಜ್ವಾನ್ ಹುಸೈನ್, ನವೀನ್ ಸುವರ್ಣ, ಪತ್ರಕರ್ತರ ಸಾಂಸ್ಕೃತಿಕ ವೇದಿಕೆ ಸಂಚಾಲಕರಾಗಿ ಟಿ.ಆರ್. ಪ್ರಭುದೇವ್, ಸಹ ಸಂಚಾಲಕರಾಗಿ ಮಲ್ಲಿಕಾರ್ಜುನ್, ಪ್ರವಾಸ ಸಮಿತಿ ಸಂಚಾಲಕರಾಗಿ ಅಜ್ಜಮಾಡ ರಮೇಶ್ ಕುಟ್ಟಪ್ಪ, ಸಹ ಸಂಚಾಲಕರಾಗಿ ರೆಜಿತ್ ಕುಮಾರ್, ಆರ್. ಸುಬ್ರಮಣಿ, ಕಾರ್ಯಚಟುವಟಿಕೆ ಸಮಿತಿ…






