ಮಡಿಕೇರಿ ಆ.26 NEWS DESK : ರಾಜಯೋಗಿನಿ ದಾದಿ ಪ್ರಕಾಶಮಣಿ ಅವರ 18ನೇ ಪುಣ್ಯಸ್ಮರಣೆಯ ಅಂಗವಾಗಿ ಮಡಿಕೇರಿಯಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು. ಮಡಿಕೇರಿಯ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ, ಸಮಾಜ ಸೇವಾ ವಿಭಾಗ ಹಾಗೂ ಜಿಲ್ಲಾ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ನಗರದ ಬ್ರಹ್ಮಾಕುಮಾರಿ ಲೈಟ್‍ಹೌಸ್ ಸಭಾಂಗಣದಲ್ಲಿ ನಡೆದ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಿಗಳು ಪಾಲ್ಗೊಂಡು ರಕ್ತದಾನ ಮಾಡಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್ ಶಿಬಿರ ಉದ್ಘಾಟಿಸಿದರು. ಬ್ರಹ್ಮಾಕುಮಾರಿ ಲೈಟ್ ಹೌಸ್ ನ ಜಿಲ್ಲಾ ಸಂಚಾಲಕರಾದ ರಾಜಯೋಗಿನಿ ಬ್ರಹ್ಮಾಕುಮಾರಿ ಗಾಯಿತ್ರಿ ಅವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ರಕ್ತದಾನದ ಮಹತ್ವದ ಕುರಿತು ವಿವರಿಸಿದರು. ಅತಿ ಹೆಚ್ಚು ಬಾರಿ ರಕ್ತದಾನ ಮಾಡಿದ ಪೊಲೀಸ್ ಅಧಿಕಾರಿ ರಾಮಪ್ಪ ಹಾಗೂ ಸಮಾಜ ಸೇವಕ ಕಲೀಲ್ ಅವರನ್ನು ಇದೇ ಸಂದರ್ಭ ಸನ್ಮಾನಿಸಿ ಗೌರವಿಸಲಾಯಿತು.
ಲೇಖಕ: admin
ಮಡಿಕೇರಿ ಆ.26 NEWS DESK : ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ , ಶಿರಂಗಾಲ ಕರ್ನಾಟಕ ಗ್ರಾಮೀಣ ಬ್ಯಾಂಕ್ , ಹೆಬ್ಬಾಲೆ ಕೆನರಾ ಬ್ಯಾಂಕ್ ಸಹಯೋಗದೊಂದಿಗೆ ಕುಶಾಲನಗರ ತಾಲೂಕಿನ ಶಿರಂಗಾಲ ಗ್ರಾಮದಲ್ಲಿ ಜನ ಸುರಕ್ಷಾ ಅಭಿಯಾನ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೆನರಾ ಬ್ಯಾಂಕ್ ನ ವ್ಯವಸ್ಥಾಪಕ ಮಹೇಶ್ ಕುಮಾರ್ ಅವರು, ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆದು ಕೊಳ್ಳುವಂತೆ ಸಲಹೆ ನೀಡಿದರು. ಮುಖ್ಯವಾಗಿ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಸುರಕ್ಷ ಭಿಮಾ ಯೋಜನೆಯು ಒಂದು ಅಪಘಾತ ವಿಮೆಯಾಗಿದ್ದು, ವಾರ್ಷಿಕ 20ರೂ ಗಳನ್ನು ಪಾವತಿಸಿ ಈ ಯೋಜನೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯ ಅಪಘಾತ ಸಂಭವಿಸಿದಲ್ಲಿ 200000ರೂ ಗಳ ವರೆಗಿನ ವಿಮಾಮೊತ್ತವು ಗ್ರಾಹಕರ ನಾಮಿನಿಗೆ ಸಿಗುವುದಾಗಿ ಮಾಹಿತಿ ನೀಡಿದರು. ವಾರ್ಷಿಕವಾಗಿ 436 ರೂ. ಗಳನ್ನು ಪಾವತಿಸಿ ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮೆಯನ್ನು ಮಾಡಿಸಿಕೊಂಡಲ್ಲಿ ಯಾವುದೇರೀತಿಯಲ್ಲಿ ಮರಣಹೊಂದಿದರೆ ಅಂತವರ ನಾಮಿನಿಗೂ ಕೂಡ 200000 ರೂ. ಗಳ ವಿಮಾಮೊತ್ತ…
ಮಡಿಕೇರಿ ಆ.26 NEWS DESK : ಅಮ್ಮತಿಯಲ್ಲಿ ನಡೆದ ವಲಯ ಮಟ್ಟದ ಅಥ್ಲೆಟಿಕ್ಸ್ ಪಂದ್ಯಾವಳಿಯ ವಿವಿಧ ಆಟೋಟಗಳಲ್ಲಿ ವಿರಾಜಪೇಟೆ ಕಾವೇರಿ ಶಾಲೆಯ ಪ್ರೌಢವಿಭಾಗದ ವಿದ್ಯಾರ್ಥಿಗಳು ಸ್ಪರ್ಧಿಸಿ ಪದಕಗಳನ್ನು ಗೆದ್ದುಕೊಂಡಿದ್ದಾರೆ. 400 ಮೀಟರ್ ಓಟದ ಸ್ಪರ್ಧೆಯಲ್ಲಿ 9ನೇ ತರಗತಿಯ ಕರ್ನಂಡ ಕೃತಿಕಾ ಅಕ್ಕಮ ಚಿನ್ನದ ಪದಕ, 200 ಮೀಟರ್ ಓಟದ ಸ್ಪರ್ಧೆಯಲ್ಲಿ 9ನೇ ತರಗತಿ ಬೊವ್ವೆರಿಯಂಡ ಹನ್ಸಿಕ ಪೊನ್ನಪ್ಪ ಚಿನ್ನದ ಪದಕ, ಗುಂಡು ಎಸೆತ ಸ್ಪರ್ಧೆಯಲ್ಲಿ 10ನೇ ತರಗತಿ ವಿದ್ಯಾರ್ಥಿ ಮುಲ್ಲೆಂಗಡ ಪೂರ್ವಿಕ ಪೂವಮ್ಮ ಎಂ.ಜಿ ಚಿನ್ನದ ಪದಕ, 100 ಮೀಟರ್ ಓಟದ ಸ್ಪರ್ಧೆಯಲ್ಲಿ ಅಮ್ಮಂಡ ಸ್ಪೂರ್ತಿ ದೇಚಮ್ಮ ಬೆಳ್ಳಿ ಪದಕ, 400 ಮೀ ಓಟದ ಸ್ಪರ್ದೆಯಲ್ಲಿ 8 ನೇ ತರಗತಿ ಕರ್ನಂಡ ಶತಕ ಕಾವೇರಮ್ಮ ಬೆಳ್ಳಿ ಪದಕ, ಡಿಸ್ಕಸ್ ತ್ರೋ ಸ್ಪರ್ಧೆಯಲ್ಲಿ 10ನೇ ತರಗತಿ ವಿದ್ಯಾರ್ಥಿ ಹನಾ ಫಲಕ್ ಬೆಳ್ಳಿಪದಕ, 800ಮೀ ಓಟದ ಸ್ಪರ್ಧೆಯಲ್ಲಿ 8ನೇ ತರಗತಿ ಫಾತಿಮತ್ ಫಿಧಾ ಕಂಚಿನ ಪದಕ, 4100ಮೀ ರಿಲೇಯಲ್ಲಿ ಬೊವ್ವೆರಿಯಂಡ ಹನ್ಸಿಕಾ ಪೊನ್ನಪ್ಪ, ಅಮ್ಮೆಂಡ…
ಮಡಿಕೇರಿ ಆ.26 NEWS DESK : ಸಾರ್ವಜನಿಕ ವಲಯದ ‘ಬ್ಯಾಂಕ್ ಆಫ್ ಮಹಾರಾಷ್ಟ್ರ’ ದಲ್ಲಿ ಖಾಲಿ ಇರುವ 500 ಸ್ಪೆಷಲಿಸ್ಟ್ ಸ್ಕೇಲ್ -2 ರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.ಒಟ್ಟು ಹುದ್ದೆಗಳ ಪೈಕಿ ಎಸ್ಸಿ ಅಭ್ಯರ್ಥಿಗಳು -75.ಎಸ್ ಟಿ ವರ್ಗದವರಿಗೆ 37, ಒಬಿಸಿ ಅಭ್ಯರ್ಥಿಗಳಿಗೆ 135, ಆರ್ಥಿಕ ದುರ್ಬಲ ವರ್ಗದವರಿಗೆ 50 ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 203 ಹುದ್ದೆಗಳನ್ನು ಮೀಸಲಿಡಲಾಗಿದೆ. ಒಟ್ಟು ಹುದ್ದೆಗಳ ಸಂಖ್ಯೆ : 500, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 30, 2025 ವಿದ್ಯಾರ್ಹತೆಗಳೇನು ? : ಅಭ್ಯರ್ಥಿಗಳು ಪದವೀಧರ ರಾಗಿದ್ದು,ಇಂಟಿಗ್ರೇಟೆಡ್ ಡ್ಯುಯಲ್ ಪದವಿ ಪಡೆದವರೂ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಹತೆಯಲ್ಲಿ ಕನಿಷ್ಠ ಶೇ. 60 ಅಥವಾ ಅದಕ್ಕಿಂತ ಹೆಚ್ಚು ಅಂಕ ಪಡೆದವರೂ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಎಸ್ ಸಿ/ಎಸ್ಟಿ/ ಒಬಿಸಿ, ಮತ್ತು ವಿಶೇಷಚೇತನ ಅಭ್ಯರ್ಥಿಗಳಾಗಿದ್ದಲ್ಲಿ ಕನಿಷ್ಠ ಶೇ.55 ಅಂಕಗಳೊಂದಿಗೆ ತೇರ್ಗಡೆಯಾಗಿರುವುದು ಕಡ್ಡಾಯವಾಗಿದೆ, ಯಾವುದೇ ಬ್ಯಾಂಕ್‌ನಲ್ಲಿ ಕನಿಷ್ಠ 3 ವರ್ಷಗಳ ಸೇವಾನುಭವ ಇದ್ದಲ್ಲಿ ನೇಮಕಾತಿಗೆ ಮೊದಲ…
ಕಾರ್ಕಳ ಆ.26 NEWS DESK : ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಕೆಯಲ್ಲಿ ಆಸಕ್ತಿ ಮತ್ತು ನಿರಂತರತೆಯನ್ನು ಕಾಯ್ದುಕೊಳ್ಳುವಲ್ಲಿ ಪ್ರಾರಂಭವಾದ ಸಂಸ್ಥೆಯ ನೂತನ ಪರಿಕಲ್ಪನೆಯಾದ ಸ್ಫೂರ್ತಿ ಮಾತು-11 ಸರಣಿ ಕಾರ್ಯಕ್ರಮವು ‘ನಿಮಗೆ ನೀವೇ ಕನ್ನಡಿಯಾಗಿ’ ಎಂಬ ಶೀರ್ಷಿಕೆಯಡಿಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವ್ಯಕ್ತಿತ್ವ ವಿಕಸನ ತರಬೇತುದಾರರು ಹಾಗೂ ನೆಹರು ಮೆಮೋರಿಯಲ್ ಕಾಲೇಜ್ ಸುಳ್ಯದ ಅಸಿಸ್ಟೆಂಟ್ ಪ್ರೊಫೆಸರ್ ಡಾ. ಅನುರಾಧ ಕುರುಂಜಿ ನಡೆಸಿಕೊಟ್ಟರು. ತಂದೆ ತಾಯಿ ಮತ್ತುಗುರುಗಳಿಗೆ ಗೌರವ ನೀಡಿ ಓದಿನಲ್ಲಿ ಕಠಿಣಶ್ರಮವನ್ನು ಹಾಕಿದ್ದಲ್ಲಿ ಖಂಡಿತ ಉತ್ತುಂಗ ಮಟ್ಟಕ್ಕೆ ಏರಬಹುದು. ಸಿಕ್ಕ ಅವಕಾಶವನ್ನು ಬಾಚಿಕೊಳ್ಳುವವನೇ ಜಾಣ. ವಿದ್ಯಾರ್ಥಿ ಜೀವನದಲ್ಲಿ ಎದುರಾಗುವ ಪ್ರತಿಕ್ಷಣವೂ ಕೂಡ ಅಮೂಲ್ಯವಾದದ್ದು, ಋಣಾತ್ಮಕ ಚಿಂತನೆಯನ್ನು ಬಿಟ್ಟು ಧನಾತ್ಮಕವಾಗಿ ಆಲೋಚಿಸಿದಾಗ ನಮ್ಮ ಪ್ರಗತಿ ಸಾಧ್ಯ ಎಂದು ವಿದ್ಯಾರ್ಥಿಗಳೊಂದಿಗೆ ಗಾದೆ, ಮನೋರಂಜನೆಯ ಆಟಗಳ ಮೂಲಕ ವಿದ್ಯಾರ್ಥಿಗಳನ್ನು ಹುರಿದುಂಬಿಸಿ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸಹಸಂಸ್ಥಾಪಕರು ಹಾಗೂ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಹಾಗೂ ಸಹ ಸಂಸ್ಥಾಪಕರಲ್ಲಿ ಓರ್ವರಾದ ಶ್ರೀ ಆದರ್ಶ…
ಸೋಮವಾರಪೇಟೆ ಆ.26 NEWS DESK : ಅನ್ನಭಾಗ್ಯದ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಜಾಲದ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ ನಡೆಸಿ ಭಾರಿ ಪ್ರಮಾಣದ ಅಕ್ಕಿ ವಶಪಡಿಸಿಕೊಂಡಿರುವ ಘಟನೆ ಸೋಮವಾರಪೇಟೆ ಪಟ್ಟಣದಲ್ಲಿ ನಡೆದಿದೆ. ಬಡಜನರ ಅನುಕೂಲಕ್ಕಾಗಿ ಸರ್ಕಾರ ನೀಡುತ್ತಿರುವ ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಕಡಿಮೆಬೆಲೆಯಲ್ಲಿ ಬೇರೆಡೆ ಸಾಗಿಸುತ್ತಿರುವ ಬಗ್ಗೆ ಮಾಹಿತಿ ತಿಳಿದ ಮೇರೆಗೆ ಆಹಾರ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳ ತಂಡ ಪಟ್ಟಣದ ತೋಟಗಾರಿಕೆ ಇಲಾಖೆ ಸಮೀಪ ದಾಳಿ ನಡೆಸಿ ಲಾರಿ ಸಹಿತ 142970 ರೂಮೌಲ್ಯದ 4200ಕೆಜಿ ಅಕ್ಕಿಯನ್ನು ವಶಪಡಿಸಿಕೊಂಡು, ಆರೋಪಿ ಕೊಣನೂರಿನ ಇದ್ರೀಸ್ ನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಆಹಾರ ನಿರೀಕ್ಷಕಿ ಯಶಸ್ವಿನಿ, ಸಿಬ್ಬಂದಿಗಳಾದ ವಿನೋದ್, ಗ್ರಾಮಆಡಳಿತಾದಿಕಾರಿ ನಾಗೇಂದ್ರ ಹಾಗೂ ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದರು.
ಮಡಿಕೇರಿ ಆ.23 NEWS DESK : ಬಾಳೆಲೆ ವ್ಯವಸಾಯೋತ್ಪನ್ನ ಮಾರಾಟ ಹಾಗೂ ಪರಿವರ್ತನಾ ಸಹಕಾರ ಸಂಘದ ವಾಣಿಜ್ಯ ಸಂಕೀರ್ಣ ವನ್ನು ಸಂಸದ ಯದುವೀರ್ ಒಡೆಯರ್ ಅವರು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭ ಅಧ್ಯಕ್ಷ ಅರಮಣಮಾಡ ಸುಗುಣ ಗಣಪತಿ ಹಾಗೂ ಆಡಳಿತ ಮಂಡಳಿ ಸದಸ್ಯರು ಇದ್ದರು.
ಮಡಿಕೇರಿ ಆ.25 NEWS DESK : ನಗರದ ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಶ್ರೀ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಆ.27 ರಂದು ಬೆಳಗ್ಗೆ 7 ಗಂಟೆಯಿಂದ ಭಕ್ತಾಧಿಗಳಿಗೆ ಗಣಪತಿ ಪೂಜೆ ಹಾಗೂ ಬೆಳಗ್ಗೆ 10 ಗಂಟೆಗೆ ಗಣಪತಿ ಹೋಮ, ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ ಮತ್ತು ಪ್ರಸಾದ ವಿತರಣೆ, ರಾತ್ರಿ 7.30 ಗಂಟೆಗೆ ಮಹಾಪೂಜೆ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯದಲ್ಲಿ ನಡೆಯುವ ಪೂಜೆಯಲ್ಲಿ ಪಾಲ್ಗೊಳ್ಳುವಂತೆ ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ತಿಳಿಸಿದ್ದಾರೆ.
ಮಡಿಕೇರಿ ಆ.25 NEWS DESK : ಮಡಿಕೇರಿ ತಾಲ್ಲೂಕು ಪಂಚಾಯತ್‍ನಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಸಮಿತಿ ಸಭೆಯಲ್ಲಿ 2025ನೇ ಸಾಲಿನ ಯುವನಿಧಿ ನೋಂದಣಿ ಪ್ರಕ್ರಿಯೆ ಪ್ರಾರಂಭಗೊಂಡ ಪ್ರಯುಕ್ತ ಯುವನಿಧಿ ಪೋಸ್ಟರ್ ಮತ್ತು ಬ್ಯಾನರ್‍ಗಳನ್ನು ಅನಾವರಣ ಮಾಡಲಾಯಿತು. ಉದ್ಯೋಗಾಧಿಕಾರಿ ಮಂಜುನಾಥ್ ಸಿ.ಬಿ ಅವರು ಮಾತಾನಾಡಿ 2023, 2024 ಮತ್ತು 25ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಪಡೆದು ಯುವನಿಧಿ ಯೋಜನೆಯಡಿ ಅರ್ಜಿ ಸಲ್ಲಿಸದ ಅರ್ಹರು ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಈಗಾಗಲೇ ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಫಲಾನುಭವಿಗಳು ಈ ಯೋಜನೆಯಡಿ ಭತ್ಯೆ ಪಡೆಯಲು ಮುಂದುವರಿಸಬೇಕಾಗಿದ್ದಲ್ಲಿ ಪ್ರತಿ ತ್ರೈಮಾಸಿಕದಂತೆ ತಾನು ಸಾರ್ವಜನಿಕ/ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ ಮಾಡುತ್ತಿಲ್ಲವೆಂದು ಮತ್ತು ಸ್ವಯಂ ಉದ್ಯೋಗ ಮಾಡುತ್ತಿಲ್ಲವೆಂದು, ಉನ್ನತ ವ್ಯಾಸಂಗವನ್ನು ಮುಂದುವರಿಸುತ್ತಿಲ್ಲವೆಂದು ಸ್ವಯಂ ಘೋಷಣೆಯನ್ನು ನೀಡಬೇಕಿದೆ. ಯುವನಿಧಿ ಫಲಾನುಭವಿಗಳು ಯುವನಿಧಿ ಪ್ಲಸ್ ಕಾರ್ಯಕ್ರಮದಡಿ ಉಚಿತ ಕೌಶಲ್ಯ ತರಬೇತಿಯನ್ನು ಪಡೆಯಬಹುದಾಗಿದ್ದು ವೆಬ್‍ಸೈಟ್ ವಿಳಾಸ https://www.kaushalkar.com/app/registration_verify ಅನ್ನು ಕ್ಲಿಕ್ ಮಾಡಿ ನೋಂದಾಯಿಸಿಕೊಳ್ಳುವುದು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ 1800- 599-7154 …
ಮಡಿಕೇರಿ ಆ.25 NEWS DESK : ಕೂಡಿಗೆ ಗ್ರಾಮ ಪಂಚಾಯತಿ ಮಾಸಿಕ ಸಭೆಯು ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಟಿ.ಗಿರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪ್ರಮುಖವಾಗಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕೂಡಿಗೆ ಸರ್ಕಲ್ ನಲ್ಲಿ ಶಾಶ್ವತವಾಗಿ ನೂತನ ತಂತ್ರಜ್ಞಾನದ ಮೂಲಕ ಹೈಟೆಕ್ ಶೌಚಾಲಯ ನಿರ್ಮಾಣ ಮಾಡುವ ಬಗ್ಗೆ ಜಾಗವನ್ನು ಗುರುತಿಸಿ ಅದರ ಮೂಲಕ ನಿರ್ಮಾಣ ಕಾಮಗಾರಿಯ ಕೈಗೊಳ್ಳುವ ಬಗ್ಗೆ ಸಭೆಯು ಒಕ್ಕೊರಲಿನ ತೀರ್ಮಾನ ಕೈಗೊಂಡಿತು. ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡುವುದರ ಜೊತೆಯಲ್ಲಿ ಎಲ್ಲಾ ವಾರ್ಡ್ ಗಳಿಗೆ ಸಮರ್ಪಕವಾಗಿ ಕುಡಿಯುವ ನೀರಿನ ಸರಬರಾಜು ಮಾಡುವ ಮೂಲಕ ನೀರಿನ ಸಮಸ್ಯೆಯನ್ನು ಬಗೆಹರಿಸುವ ಬಗ್ಗೆ ಹಾಜರಿದ್ದ ಸದಸ್ಯರು ತಮ್ಮ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಎಲ್ಲಾ ವಾರ್ಡ್ ಗಳಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಪೂರ್ಣಗೊಳಿಸುವ ಬಗ್ಗೆ ಸೇರಿದಂತೆ ಅಭಿವೃದ್ಧಿಗೆ ಪೂರಕವಾದ ಅಂಶಗಳ ಬಗ್ಗೆ ಚರ್ಚೆಗಳು ನಡೆದವು. ಬೀದಿ ನಾಯಿಗಳ ಹಾವಾಳಿಗಳ ಬಗ್ಗೆ ಸಾರ್ವಜನಿಕರಿಂದ ಬಂದ ಅರ್ಜಿಗಳ ಬಗ್ಗೆ ಚರ್ಚೆಗಳು ನಡೆದವು. ಸಭೆಯಲ್ಲಿ ಅಧ್ಯಕ್ಷ ಕೆ.ಟಿ.ಗಿರೀಶ್ ಮಾತಾನಾಡಿ, ಸಭೆಯಲ್ಲಿ ಚರ್ಚೆಗೊಂಡ…






