ಮಡಿಕೇರಿ ಆ.25 NEWS DESK : ಮಡಿಕೇರಿ ನಗರ ಯುವ ದಸರಾ ಸಮಿತಿ ವತಿಯಿಂದ ಆಯೋಜಿಸುವ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಗೆ ಸೆ.6 ರಂದು ತಂಡಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಯುವ ದಸರಾ ಸಮಿತಿಯ ಅಧ್ಯಕ್ಷ ಕವನ್ ಕೊತ್ತೋಳಿ ತಿಳಿಸಿದ್ದಾರೆ. ನಗರದ ಹೊಟೇಲ್ ರಾಜ್ ದರ್ಶನ್ ಸಭಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಆಯ್ಕೆಯಾದ ತಂಡಗಳ ನಡುವೆ ಸೆ.27 ರಂದು ನಗರದ ಗಾಂಧಿ ಮೈದಾನದ ವೇದಿಕೆಯಲ್ಲಿ ಸ್ಪರ್ಧೆಯನ್ನು ಆಯೋಜಿಸುವುದಾಗಿ ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಇದು ರಾಜ್ಯ ಮಟ್ಟದ ಸ್ಪರ್ಧೆಯಾಗಿದ್ದು, ಸ್ಪರ್ಧಿಗಳು ಶಾಸ್ತ್ರೀಯ ಪ್ರಕಾರ ಹಾಗೂ ದೇವರಿಗೆ ಸಂಬಂಧಪಟ್ಟ ಪ್ರಕಾರವನ್ನು ಹೊರತುಪಡಿಸಿ ಇತರೆ ಯಾವುದೇ ಪ್ರಕಾರವನ್ನು ಆಯ್ದುಕೊಳ್ಳಬಹುದು. ಸ್ಪರ್ಧೆಗೆ ವಯೋಮಿತಿಯ ನಿರ್ಬಂಧವಿಲ್ಲ, ತಂಡವು ಕನಿಷ್ಠ 12 ಹಾಗೂ ಗರಿಷ್ಟ 30 ಮಂದಿ ಕಲಾವಿದರನ್ನು ಹೊಂದಿರಬೇಕು. ನೃತ್ಯಗಳು ಸಾಮಾಜಿಕ ಪರಿಕಲ್ಪನೆ ಹಾಗೂ ಸಂದೇಶಗಳನ್ನು ಹೊಂದಿರಬೇಕು. ಹಾಡಿನ ಭಾಷೆ ಹಾಗೂ ಉಡುಗೆ ತೊಡುಗೆಗಳು ಸಭ್ಯವಾಗಿರಬೇಕು, ಯಾರ ನಂಬಿಕೆ ಹಾಗೂ ಭಾವನೆಗೆ ನೋವುಂಟು ಮಾಡಬಾರದು. 10+2…
ಲೇಖಕ: admin
ಮಡಿಕೇರಿ ಆ.25 NEWS DESK : ವಿರಾಜಪೇಟೆಯ ಪ್ರಗತಿ ಶಾಲೆಯಲ್ಲಿ ಆಯೋಜನೆಗೊಂಡಿರುವ ವಿರಾಜಪೇಟೆ ತಾಲ್ಲೂಕು ಮಟ್ಟದ ಕ್ರೀಡಾ ಕೂಟವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ಬಳಿಕ ಕ್ರೀಡಾಪಟುಗಳನ್ನು ಉದ್ದೇಶಿಸಿ ಮಾತನಾಡಿದ ಶಾಸಕರು, ಕ್ರೀಡೆಯು ಪ್ರತಿಯೊಬ್ಬರ ಜೀವನದಲ್ಲಿ ಮಾನಸಿಕ ಸಮತೋಲನ ವೃದ್ಧಿಸಿಕೊಂಡು ವಿದ್ಯಾಭ್ಯಾಸವನ್ನು ಉತ್ತಮ ರೀತಿಯಲ್ಲಿ ಮಾಡಲು ಸಹಕಾರಿಯಾಗಿದೆ. ದೈಹಿಕ ಸಾಮರ್ಥ್ಯವನ್ನು ಕಾಪಾಡಿಕೊಳ್ಳಲು ಕ್ರೀಡೆಯು ಬಹುಮುಖ್ಯವಾಗಿದೆ. ಪ್ರತಿಯೊಂದು ಕ್ರೀಡೆಯಲ್ಲಿಯೂ ಸೋಲು ಗೆಲುವಿನೊಂದಿಗೆ ಭಾಗವಹಿಸುವಿಕೆಯೂ ಅತಿ ಮುಖ್ಯವಾಗಿರುತ್ತದೆ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮನ್ನು ಕ್ರೀಡೆಯಲ್ಲಿ ತೊಡಗಿಸಿಕೊಂಡು ಉನ್ನತ ಪ್ರದರ್ಶನವನ್ನು ನೀಡಿ ಜೀವನದಲ್ಲಿ ಯಶಸ್ಸು ಕಾಣುವಂತಾಗಬೇಕೆಂದು ಶುಭ ಹಾರೈಸಿದರು. ಈ ಸಂದರ್ಭ ಪ್ರಗತಿ ಶಾಲೆಯ ಸಂಸ್ಥಾಪಕರು, ಮಾದಂಡ ಎಸ್.ಪೂವಯ್ಯ, ಮಾದಂಡ ತಿಮ್ಮಯ್ಯ ಆಡಳಿತ ಅಧಿಕಾರಿ, ಸುಷ್ಮ ತಿಮ್ಮಯ್ಯ, ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಉಪಾಧ್ಯಕ್ಷೆ ಫಸಿಯಾ ತಬ್ಸುಂ,ಪುರಸಭೆ ಸಾಯಿ ಸಮಿತಿ ಅಧ್ಯಕ್ಷ ಅಬುದುಲ್ ಜಲಿಲ್, ಬಿ.ಇ.ಆನಂದ್, ವಿವಿಧ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಸಿಬ್ಬಂದಿಗಳು, ಪುರಸಭೆ ಸದಸ್ಯರಾದ ರಾಜೇಶ್,…
ಸಿದ್ದಾಪುರ ಆ.25 NEWS DESK : ಪಾಲಿಬೆಟ್ಟ ವರ್ತಕರ ಸಂಘದ ನೂತನ ಅಧ್ಯಕ್ಷರಾಗಿ ಎಂ.ಯು.ಮುನೀರ್ ಅವಿರೋಧವಾಗಿ ಆಯ್ಕೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರುಗಳಾಗಿ ಟಿ.ಜಿ.ವಿಜೇಶ್, ಮೈಕಲ್, ಪ್ರಧಾನ ಕಾರ್ಯದರ್ಶಿ ಎಂ.ಹೆಚ್.ಸಮೀರ್, ಕಾರ್ಯದರ್ಶಿಗಳಾಗಿ ಸಿ.ಎ.ಫೈಝಲ್ ಹಾಗೂ ಅಯ್ಯಪ್ಪ, ಖಜಾಂಚಿಯಾಗಿ ಕೆ.ಹೆಚ್ ಅಬೂಬಕ್ಕರ್, ಸಲಹೆಗಾರರಾಗಿ ಪುತ್ತಂ ಪ್ರದೀಪ್, ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಎ.ಎಲ್.ರವಿಕುಮಾರ್ ಅನಿಲ್, ಜಕ್ರಿಯ, ಹರೀಶ್, ರಶೀದ್, ಫೈಝಲ್ ರೆಹಮಾನ್, ಶೈಲಾ, ಮುಬಾರಕ್, ನಳಿನಿ, ನಸೀಫ್, ಲೋಕೇಶ್, ಮೂರ್ತಿ ಸೇರಿದಂತೆ ಮತ್ತಿತರರು ಆಯ್ಕೆಯಾದರು. ಸಭೆಯಲ್ಲಿ ನೂತನ ಅಧ್ಯಕ್ಷ ಮುನೀರ್ ಮಾತನಾಡಿ ಸೌಹಾರ್ದತೆಗೆ ಹೆಸರುವಾಸಿಯಾಗಿರುವ ಪಾಲಿಬೆಟ್ಟ ಗ್ರಾಮದಲ್ಲಿ ಎಲ್ಲಾ ವರ್ತಕರು ಒಗ್ಗೂಡಿ ನೂತನ ಸಂಘವನ್ನು ಅಸ್ತಿತ್ವಕ್ಕೆ ತರಲಾಗಿದ್ದು, ಎಲ್ಲಾ ವರ್ತಕರು ಸಂಘದೊಂದಿಗೆ ಕೈಜೋಡಿಸುವ ಮೂಲಕ ಸಂಘದ ಸದಸ್ಯರುಗಳ, ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆ, ಆರೋಗ್ಯ, ಸಂಕಷ್ಟದಲ್ಲಿರುವವರಿಗೆ ಆರ್ಥಿಕ ಸಹಾಯ ಸೇರಿದಂತೆ ಹಲವಾರು ಕಾರ್ಯ ಯೋಜನೆಗಳನ್ನು ರೂಪಿಸಲಾಗಿದ್ದು, ಎಲ್ಲಾ ವರ್ತಕರು ಸಂಘದೊಂದಿಗೆ ಕೈಜೋಡಿಸುವುದರ ಮೂಲಕ ಸಹಕಾರ ನೀಡಬೇಕೆಂದರು. ಈ ಸಂದರ್ಭ ಹಿರಿಯ ವರ್ತಕರು ಸಭೆಯಲ್ಲಿ ಹಾಜರಿದ್ದರು.
ಮಡಿಕೇರಿ, ಆ.25 NEWS DESK : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಕೂಡಿಗೆ ಮತ್ತು ಹೆಬ್ಬಾಲೆ ಪ್ರಾಥಮಿಕ ಶಾಲೆಯ ವಲಯ ಮಟ್ಟದ ಕ್ರೀಡಾಕೂಟವು ಕೂಡಿಗೆ ಡಯಟ್ ಮೈದಾನದಲ್ಲಿ ಆರಂಭಗೊಂಡಿತು. ಕ್ರೀಡಾಕೂಟವನ್ನು ಜಿಲ್ಲಾ ದೈಹಿಕ ಶಿಕ್ಷಕ ಪರಿವೀಕ್ಷಕರಾದ ಸದಾಶಿವಯ್ಯ ಎಸ್.ಪಲ್ಲೆದ್ ಉದ್ಘಾಟಿಸಿ, ಮಾತನಾಡಿ ಶಿಸ್ತು, ಸಂಯಮ ಜೊತೆಗೆ ಆರೋಗ್ಯ ವೃದ್ಧಿಗೆ ಕ್ರೀಡೆ ಸಹಕಾರಿ ಸಹಕಾರಿಯಾಗಿದ್ದು, ಬದುಕಿನ ಜೀವನಕ್ಕೆ ಪೂರಕವಾದ ಅಂಶಗಳನ್ನು ಒದಗಿಸುತ್ತದೆ ಎಂದರು. ಮುಖ್ಯ ಅತಿಥಿಗಳಾಗಿ ಅಗಮಿಸಿದ್ದ ಸಹಕಾರ ಸಂಘದ ಮಾಜಿ ನಿರ್ದೇಶಕ ಕೆ.ಕೆ. ನಾಗರಾಜಶೆಟ್ಟಿ ಮಾತಾನಾಡಿ, ಪ್ರಾಥಮಿಕ ಹಂತದಲ್ಲಿ ತನ್ನ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಿ ಅದರ ಮೂಲಕ ಮುಂದುವರಿದು ಉನ್ನತ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಲು ಪ್ರಾಥಮಿಕ ಹಂತದ ಕ್ರೀಡೆ ಬಹುಮುಖ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಧ್ವಜವಂದನೆ ಮತ್ತು ಕ್ರೀಡಾ ಜ್ಯೋತಿ ಸ್ವೀಕರಿಸಿದ ಕೂಡಿಗೆ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಯೋಗೇಶ್ ಮಾತಾನಾಡಿ, ವಿದ್ಯಾರ್ಥಿಗಳು ಸೋಲಿಗೆ ಹೆದರುವ ಅವಶ್ಯಕತೆ ಇಲ್ಲ. ಪ್ರಯತ್ನದಲ್ಲಿ …
ಕುಶಾಲನಗರ ಆ.25 NEWS DESK : ಉತ್ತರ ಕೊಡಗಿನ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ನಮ್ಮ ನಡೆ ಹಸಿರೆಡೆಗೆ*”: ಗ್ರೋ ಗ್ರೀನ್ ಅಭಿಯಾನದಡಿ ಗೌರಿ-ಗಣೇಶೋತ್ಸವ ಹಬ್ಬ ಆಚರಣೆ ಸಂದರ್ಭದಲ್ಲಿ ಪರಿಸರಕ್ಕೆ ಯಾವುದೇ ಧಕ್ಕೆಯಾಗದಂತೆ ಪರಿಸರ ಸ್ನೇಹಿ ನೈಸರ್ಗಿಕ ಜೇಡಿಮಣ್ಣಿನ ಗಣೇಶ ಮೂರ್ತಿಯನ್ನು ಸ್ಥಾಪಿಸುವ ಕುರಿತು ಶಾಲೆಯ ಇಕೋ ಕ್ಲಬ್, ಎನ್.ಎಸ್.ಎಸ್. ವತಿಯಿಂದ ಜನ ಜಾಗೃತಿ ಮಂಡಿಸಲಾಯಿತು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಛೇರಿ, ಭಾರತ್ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಸಹಯೋಗದೊಂದಿಗೆ ಏರ್ಪಡಿಸಿದ್ದ “ಪರಿಸರ ಸ್ನೇಹಿ ಗಣೇಶೋತ್ಸವ” “ಜನಜಾಗೃತಿ ಆಂದೋಲನ” : 2025 ದ ಅಂಗವಾಗಿ ಮಣ್ಣಿನ ಗಣೇಶ ಮೂರ್ತಿ ತಯಾರಿಕೆಯ ಮಹತ್ವ ಕುರಿತು ಜಾಗೃತಿ ನಡೆಸಲಾಯಿತು. “ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಯ ಮಹತ್ವ” ಕುರಿತು ಮಾಹಿತಿ ನೀಡಿ ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿದ ಪ್ರೌಢಶಾಲಾ ಮುಖ್ಯ ಶಿಕ್ಷಕ ಹಾಗೂ ಪರಿಸರ ಕಾರ್ಯಕ್ರಮದ ಸಂಘಟಕ ಟಿ.ಜಿ. ಪ್ರೇಮಕುಮಾರ್, ನೈಸರ್ಗಿಕವಾದ ಮಣ್ಣಿನ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ಮಾಲಿನ್ಯ…
ಮಡಿಕೇರಿ ಆ.25 NEWS DESK : ಭಾಗಮಂಡಲ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದ ರೂಢಿ ಸಂಪ್ರದಾಯದಂತೆ ಪ್ರತೀ ವರ್ಷ ಗಣೇಶ ಚತುರ್ಥಿ ಪೂಜಾ ಕಾರ್ಯಕ್ರಮವನ್ನು ಅತ್ಯಂತ ಶ್ರದ್ಧಾಭಕ್ತಿಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಅದರಂತೆ ಈ ವರ್ಷವೂ ಆ.27 ರಂದು ಗಣೇಶ ಚತುರ್ಥಿ ಪೂಜಾ ಕಾರ್ಯಕ್ರಮ ನಡೆಯಲಿದೆ. ಭಕ್ತಾಧಿಗಳು ಈ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ದೇವಾಲಯದ ಆಡಳಿತಾಧಿಕಾರಿಗಳ ಪರವಾಗಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ಅವರು ಕೋರಿದ್ದಾರೆ. ಭಾಗಮಂಡಲ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಆಗಸ್ಟ್, 27 ರಂದು ಬೆಳಗ್ಗೆ 9.30 ಗಂಟೆಗೆ ಗಣಪತಿ ಹೋಮ, ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ, ಮಹಾಮಂಗಳಾರತಿ, ಪ್ರಸಾದ ವಿತರಣೆ ಮತ್ತು ಅನ್ನ ಸಂತರ್ಪಣೆ ನಡೆಯಲಿದೆ. ಶ್ರೀ ತಲಕಾವೇರಿ ದೇವಾಲಯದಲ್ಲಿ ಆಗಸ್ಟ್, 27 ರಂದು ಬೆಳಗ್ಗೆ 9.30 ಗಂಟೆಗೆ ಗಣಪತಿ ಹೋಮ, ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ, ಮಹಾಮಂಗಳಾರತಿ ಮತ್ತು ಪ್ರಸಾದ ವಿತರಣೆ ನಡೆಯಲಿದೆ ಎಂದು ಶ್ರೀಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಹಣಾಧಿಕಾರಿ ತಿಳಿಸಿದ್ದಾರೆ.
ಮಡಿಕೇರಿ ಆ.25 NEWS DESK : ಶಾಂತಿನಿಕೇತನ ಯುವಕ ಸಂಘದ ವತಿಯಿಂದ ಆ.27 ರಿಂದ ಸೆ.12ರ ವರೆಗೆ 47ನೇ ವರ್ಷದ ಅದ್ಧೂರಿ ಗಣೇಶೋತ್ಸವ ನಡೆಯಲಿದೆ. ಆ.27 ರಂದು ಬೆಳಿಗ್ಗೆ 11 ಗಂಟೆಗೆ ಶಾಂತಿನಿಕೇತನ ಬಡಾವಣೆಯಲ್ಲಿ ಶ್ರೀ ಗಣಪತಿ ಹೋಮದೊಂದಿಗೆ ಶ್ರೀ ಮಹಾ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಮತ್ತು ಮಹಾಪೂಜೆ ನಡೆಯಲಿದೆ. ನಂತರ 17 ದಿನಗಳ ಕಾಲ ಪ್ರತಿ ದಿನ ರಾತ್ರಿ 8 ಗಂಟೆಯಿಂದ ಭಜನೆ ಮತ್ತು ಮಹಾಪೂಜೆ ಜರುಗಲಿದೆ. ಸೆ.6 ರಂದು ಸಂಜೆ 7 ಗಂಟೆಗೆ ಸಾಮೂಹಿಕ ರಂಗ ಪೂಜೆ ನಡೆಯಲಿದ್ದು, ಸೆ.12 ರಂದು ಮಹಾಪೂಜೆ ನಂತರ ಶ್ರೀ ಮಹಾ ಗಣಪತಿ ಮೂರ್ತಿಯನ್ನು ಕಥಾ ಸಾರಾಂಶವುಳ್ಳ ಅಲಂಕೃತ ಮಂಟಪದಲ್ಲಿ ಅದ್ದೂರಿ ಶೋಭಾಯಾತ್ರೆಯೊಂದಿಗೆ ಮಡಿಕೇರಿಯ ಮುಖ್ಯ ಬೀದಿಗಳಲ್ಲಿ ಕೊಂಡೊಯ್ದು, ಗೌರಿ ಕೆರೆಯಲ್ಲಿ ವಿಸರ್ಜಿಸಲಾಗುವುದು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶಾಂತಿನಿಕೇತನ ಯುವ ಸಂಘ ಮನವಿ ಮಾಡಿದೆ. ಕ್ರೀಡಾಕೂಟ : ಗಣೇಶ ಉತ್ಸವದ ಪ್ರಯುಕ್ತ ಸೆ.7 ರಂದು ಸಾರ್ವಜನಿಕರಿಗೆ ಕ್ರೀಡಾಕೂಟ ನಡೆಯಲಿದ್ದು, ಬೆಳಿಗ್ಗೆ 9…
ಮಡಿಕೇರಿ ಆ.25 NEWS DESK : ಚೇನಂಡ ಕುಟುಂಬದ ಸಾರಥ್ಯದಲ್ಲಿ 2026ರ ಕೊಡವ ಕೌಟುಂಬಿಕ ಹಾಕಿ ಉತ್ಸವ ನಾಪೋಕ್ಲುವಿನಲ್ಲಿ ನಡೆಯಲಿದೆ. ಏ.5 ರಿಂದ ಮೇ 2 ರವರೆಗೆ ಜನರಲ್ ಕೆ.ಎಸ್.ತಿಮ್ಮಯ್ಯ ಮೈದಾನದಲ್ಲಿ ಹಾಕಿ ಹಬ್ಬವನ್ನು ಆಯೋಜಿಸಲಾಗಿದ್ದು, ‘ಪ್ರತಿ ಒಂದು ಗೋಲಿಗೆ ಒಂದು ಸಸಿ’ ನೆಡುವ ಕಾರ್ಯಕ್ರಮ ಈ ಬಾರಿಯ ವಿಶೇಷ ಎಂದು ಚೇನಂಡ ಕುಟುಂಬದ ಪ್ರಮುಖರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚೇನಂಡ ಹಾಕಿ ಉತ್ಸವದ ಕಾರ್ಯದರ್ಶಿ ಚೇನಂಡ ಮಧು ಮಾದಯ್ಯ ಅವರು 1997ರಲ್ಲಿ ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾಗಿ ಕರಡ ಗ್ರಾಮದಲ್ಲಿ ಹುಟ್ಟಿದ ಕೊಡವ ಕೌಟುಂಬಿಕ ಹಾಕಿ ಉತ್ಸವ ಇಂದು ಬೃಹದಾಕಾರವಾಗಿ ಬೆಳೆದು ಗಿನ್ನಿಸ್ ಬುಕ್ ಆಫ್ ವಲ್ಡ್ ರೆಕಾಡ್ರ್ಸ್ ಮತ್ತು ವಲ್ರ್ಡ್ ವೈಡ್ ಬುಕ್ ಆಫ್ ರೆಕಾಡ್ರ್ಸ್‍ನ ಇತಿಹಾಸದ ಪುಟಗಳಲ್ಲಿ ರಾರಾಜಿಸುತ್ತಿದೆ. ವಿಶ್ವ ದಾಖಲೆ ಬರೆದಿರುವ ಕೊಡವ ಕೌಟುಂಬಿಕ ಹಾಕಿ ಉತ್ಸವ 2026ರಲ್ಲಿ ಚೇನಂಡ ಕುಟುಂಬದ ನೇತೃತ್ವದಲ್ಲಿ ನಡೆಯಲಿದೆ ಎಂದರು. ಕೊಡಗಿನಲ್ಲಿ ಸುಮಾರು 1 ಸಾವಿರಕ್ಕೂ ಅಧಿಕ…
ಮಡಿಕೇರಿ ಆ.25 NEWS DESK : ಪೊನ್ನಂಪೇಟೆ ತಾಲ್ಲೂಕಿನ ನಾಲ್ಕೇರಿ ಗ್ರಾಮದ ಬೊಮ್ಮಡು ಆಶ್ರಮ ಶಾಲೆಯಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ರೂ.23 ಲಕ್ಷ ವೆಚ್ಚದ ಗ್ರಂಥಾಲಯ ಹಾಗೂ ರೂ.2 ಕೋಟಿ ವೆಚ್ಚದ ವಸತಿ ಗೃಹ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಶಾಸಕರು, ಸಮಾಜದ ಕಟ್ಟ ಕಡೆಯ ವ್ಯಕ್ತಿಯ ವಿದ್ಯಾಭ್ಯಾಸಕ್ಕೆ ಆಶ್ರಮ ಶಾಲೆಯು ಬಹುದೊಡ್ಡ ಕೊಡುಗೆ ನೀಡುತ್ತಿದೆ. ಸರಕಾರವು ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಗೂ ಉತ್ತಮ ಸೌಲಭ್ಯ ಒದಗಿಸಲು ಕ್ರಮ ಕೈಗೊಂಡಿದೆ. ಇದರ ಸದುಪಯೋಗ ನಾಡಿನ ವಿದ್ಯಾರ್ಥಿಗಳಿಗೆ ಲಭಿಸುವಂಥಾಗಲಿ ಎಂದು ಹೇಳಿದರು. ಪ್ರಪಂಚದ ಬಗೆಗಿನ ಸಾಮಾನ್ಯ ಜ್ಞಾನವನ್ನು ವೃದ್ಧಿಸಿಕೊಳ್ಳಲು ಪ್ರತಿಯೊಬ್ಬರು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಈಗ ನಿರ್ಮಿಸಲು ಉದ್ದೇಶಿಸಿರುವ ನೂತನ ಗ್ರಂಥಾಲಯಕ್ಕೆ ಸರಕಾರವು ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಿದೆ. ಇದರ ಸದುಪಯೋಗವನ್ನೂ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ನೂತನ…
ಕುಶಾಲನಗರ ಆ.25 NEWS DESK : ಬ್ಯಾಂಕ್ ಗಳು, ಕಾರು, ಬೈಕು, ಹೋಮ್ ಅಪ್ಲೈನ್ಸ್, ಆಹಾರ ಇನ್ನಿತರ ಜನರ ಅವಶ್ಯಗಳನ್ನು ಪೂರೈಸುವ ಕಂಪೆನಿಗಳನ್ನು ಒಂದೇ ವೇದಿಕೆಯಡಿ ಸೇರಿಸಿ ಸಾರ್ವಜನಿಕರಿಗೆ ಮಾಹಿತಿ ನೀಡುವ ಜೊತೆಗೆ ಪ್ರದರ್ಶನ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸಿರುವುದು ಮೆಚ್ಚುವಂತದ್ದು ಎಂದು ಕುಶಾಲನಗರ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ಎಸ್.ಕೆ.ಸತೀಶ್ ತಿಳಿಸಿದರು. ಕುಶಾಲನಗರದ ಗಣಪತಿ ದೇವಸ್ಥಾನದ ಆವರಣದಲ್ಲಿ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ವತಿಯಿಂದ ಸೆ.6 ರಂದು ನಡೆಯುವ ಬೃಹತ್ ಗ್ರಾಹಕ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳದ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ದೊಡ್ಡ ದೊಡ್ಡ ಕಂಪೆನಿಗಳ ಜೊತೆಗೆ ಸ್ಥಳೀಯರಿಗೂ ಅವಕಾಶ ನೀಡಿರುವುದು ಶ್ಲಾಘನೀಯ. ಇದರಿಂದ ಕೊಡಗು ಜಿಲ್ಲೆಯ ವ್ಯಾಪಾರ ವಹಿವಾಟು ಹೆಚ್ಚಳವಾಗುತ್ತೆ. ಮಾರುಕಟ್ಟೆ ವಿಸ್ತರಣೆಗಾಗಿ ಇಂತಹ ಮೇಳಗಳು ಸಹಕಾರಿ. ಅದರಲ್ಲೂ ಕುಶಾಲನಗರದ ಹೆಸರು ರಾಜ್ಯದ ಮೂಲೆ ಮೂಲೆಗೆ ತಲುಪುವ ಮೂಲಕ ನಮ್ಮ ಮಾರುಕಟ್ಟೆಯ ಶಕ್ತಿ ಗೊತ್ತಾಗಲಿದೆ ಎಂದರು. ಚೇಂಬರ್ ಅಧ್ಯಕ್ಷ ಕೆ.ಎಸ್.ನಾಗೇಶ್ ಮಾತನಾಡಿ, ಯಾವುದೇ…






