ಮಡಿಕೇರಿ NEWS DESK ನ.2 : ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಅಖಿಲ ಕೊಡಗು ಕೆಂಬಟ್ಟಿ ಸಮಾಜದ ನಿಯೋಗ ಅಧ್ಯಕ್ಷ ಬಿಲ್ಲರೀಕುಟ್ಟಡ ಪ್ರಭು ಅಯ್ಯಪ್ಪ ಅವರ ನೇತೃತ್ವದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು. ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡ ಕೆಂಬಟ್ಟಿ ಸಮಾಜದ ಪ್ರಮುಖರು ಕೆಂಬಟ್ಟಿ ಹೆಸರನ್ನು ಜಾತಿ ಪಟ್ಟಿಯಲ್ಲಿ ಸೇರಿಸಬೇಕೆಂದು ಮನವಿ ಮಾಡಿದರು. ಅಲ್ಲದೆ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೋರಿದರು. ಸಭೆಯಲ್ಲಿ ಉಪಸ್ಥಿತರಿದ್ದ ಶಾಸಕ ಪೊನ್ನಣ್ಣ ಅವರು ಕೆಂಬಟ್ಟಿ ಸಮಾಜದ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳ ಗಮನ ಸೆಳೆದರು. ನಿಯೋಗದಲ್ಲಿ ನಿತೇಶ್, ಜೀವನ್, ಉದಯ್ ಮಾದಪ್ಪ, ಸುಬ್ರಮಣಿ, ಸಾಗರ್ ಪೂವಣ್ಣ, ದಿನೇಶ್ ಪೆಗ್ಗೋಲಿ, ಚಿಮ್ಮ ಅಯ್ಯಪ್ಪ, ವಿನೋದ್, ಅನಿಕೇತನ್, ರಂಜಿತ್, ಚರಣ್, ಕಿರಣ್ ಕಾವೇರಪ್ಪ, ಡಾಲಿ, ಮಹೇಶ್, ವಿಲ್ಮ, ರೋಹಿಣಿ, ವೈಶಾಲಿ, ದೀಪಿಕಾ, ತಿಲಕ್, ಉದಯ್ ಮಾದಪ್ಪ ನೇತುರ್ತ್ ದಲಿ, ಮನವಿ ಕೊಟ್ಟಿದ್ರು, ಅಖಿಲ ಕೊಡಗು ಕೆಂಬಟ್ಟಿ ಸಮಾಜ ಅಧ್ಯಕ್ಷರು ಆದ ಬಿಲ್ಲಿರಿ ಕುಟ್ಟ ಪ್ರಭು ಅಯ್ಯಪ್ಪ,…
ಲೇಖಕ: admin
ಮಡಿಕೇರಿ NEWS DESK ಅ.2 : ಕೇಂದ್ರ ಸರಕಾರದ ಮೂಲಕ 2026 ಅಕ್ಟೋಬರ್ ನಿಂದ ನಡೆಯಲಿರುವ ಭಾರತ ದೇಶದ 16ನೇ ರಾಷ್ಟ್ರೀಯ ಜನಗಣತಿಯ ಸಂದರ್ಭ ಎಲ್ಲಾ ಮೂರು ಕಾಲಂನಲ್ಲಿ “ಕೊಡವ” ಎಂದೇ ಬರೆಸಬೇಕೆಂಬ ಕರೆಯೂ ಸೇರಿದಂತೆ ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ನ.5ರಂದು ಬಿಟ್ಟಂಗಾಲದಲ್ಲಿ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಮತ್ತು ಎಸ್‌ಟಿ ವರ್ಗೀಕರಣವು 2026ರ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ (ಆ್ಯನಿಮಿಸ್ಟಿಕ್) ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು. ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕೆಂದು ಒತ್ತಾಯಿಸುವುದಾಗಿ ಹೇಳಿದ್ದಾರೆ. ಬುಧವಾರ ಬೆಳಿಗ್ಗೆ 10.30 ಗಂಟೆಗೆ ಬಿಟ್ಟಂಗಾಲದಲ್ಲಿ ಶಾಂತಿಯುತವಾಗಿ ಮಾನವ…
ಮಡಿಕೇರಿ ನ.1 NEWS DESK : ಕರಿಕೆ ಗ್ರಾಮ ಪಂಚಾಯತ್ ಮತ್ತು ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರದಿಂದ ಆಚರಿಸಲಾಯಿತು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷಾರಾದ ಎನ್.ಬಾಲಚಂದ್ರ ನಾಯರ್ ಧ್ವಜಾರೋಹಣ ನೆರವೇರಿಸಿದರು. ಪಂಚಾಯತ್ ಅಧ್ಯಕ್ಷರಾದ ಎನ್. ಬಾಲಚಂದ್ರನ್ ನಾಯರ್ ಮತ್ತು ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ರಾಜಶೇಖರ್ ಕನ್ನಡ ರಾಜ್ಯೋತ್ಸವನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಕಲ್ಪನಾ ಜಗದೀಶ್, ಪಂಚಾಯತ್ ಸದಸ್ಯರು, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಪದಾಧಿಕಾರಿಗಳು, ಸಹಕಾರ ಸಂಘದ ನಿರ್ದೇಶಕರುಗಳು, ಎಸ್.ಡಿ.ಎಂಸಿ ಅಧ್ಯಕ್ಷರುಗಳು, ಸದಸ್ಯರುಗಳು, ಶಿಕ್ಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು, ಪಂಚಾಯತ್ ಸಿಬ್ಬಂದಿ ವರ್ಗ ಪಾಲ್ಗೊಂಡರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಿಪಿನ್ ಸ್ವಾಗತಿಸಿದರು, ಗ್ರಂಥಪಾಲಕರಾದ ಸಾವಿತ್ರಿ ವಂದಿಸಿದರು. ಪ್ರೌಢ ಶಾಲೆಯಿಂದ ಆರಂಭಗೊಂಡ ಮೆರವಣಿಗೆ ಎಳ್ಳುಕೊಚ್ಚಿ ಪೇಟೆಯಲ್ಲಿ ಸಮಾಪ್ತಿಯಾಯಿತು.
ಮಡಿಕೇರಿ ನ.1 NEWS DESK : ಯುವ ಜನಾಂಗ ನಮ್ಮ ನಾಡಿನ ಅಮೂಲ್ಯ ಆಸ್ತಿ. ಅವರಲ್ಲಿ ಭಾಷೆ, ಸಂಸ್ಕೃತಿಯ ಬಗ್ಗೆ ಗೌರವ ಬೆಳೆಯುವ ಹಾಗೆ ಮಾಡುವುದು ಪ್ರತಿಯೊಬ್ಬ ಪ್ರಜ್ಞಾವಂತ ಕನ್ನಡಿಗನ ಕರ್ತವ್ಯ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ. ಬಿ.ರಾಘವ ಹೇಳಿದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ನಡೆದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೇರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು, ಮಾತನಾಡಿದರು. ನಮ್ಮ ನಾಡು ಎನ್ನುವ ಭಾವನೆ ಉಂಟು ಮಾಡಿದ ಮಹಾನ್ ವ್ಯಕ್ತಿಗಳಾದ ಕರ್ನಾಟಕ ಗತ ವೈಭವ ಕೃತಿಕಾರರಾದ ಆಲೂರು ವೆಂಕಟರಾಯರು, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಎಂದ ಹುಯಿಳಗೋಳ್ ನಾರಾಯಣರಾಯರು, ಬಿ.ಎಂ.ಶ್ರೀ, ಗೋವಿಂದ ಪೈ ಮುಂತಾದವರನ್ನು ಸ್ಮರಿಸುತ್ತ ಭಾಷಾವಾರು ರಾಜ್ಯಗಳ ವಿಂಗಡಣೆ, 2008ರಲ್ಲಿ ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ಲಭ್ಯವಾಯಿತು. ಕನ್ನಡ ಭಾಷೆಯ ಹಿರಿಮೆಯನ್ನು ಕುರಿತು 8 ಜ್ಞಾನಪೀಠ ಪ್ರಶಸ್ತಿ ಸಿಕ್ಕಿದೆ. ಇತ್ತೀಚಿಗೆ ಕನ್ನಡಕ್ಕೆ ಮೊದಲ ಬೂಕರ್ ಪ್ರಶಸ್ತಿಯನ್ನು ತಂದುಕೊಟ್ಟ ಬಾನು…
ಪುತ್ತೂರು ನ.1 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ವರ್ಷಿತಾ.ಪಿ.ಆಳ್ವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಹಿಳೆಯರ ಕಬಡ್ಡಿ ತಂಡಕ್ಕೆ ಆಯ್ಕೆಗೊಂಡಿದ್ದಾರೆ. ತಮಿಳ್ನಾಡಿನ ವಿನಾಯಕ ಮಿಷನ್ಸ್ ರೀಸರ್ಚ್ ಫೌಂಡೇಶನ್ ಆಶ್ರಯದಲ್ಲಿ ನಡೆಯುವ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಪಂದ್ಯಾವಳಿಯಲ್ಲಿ ಇವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸುತ್ತಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.
ಗೋಣಿಕೊಪ್ಪ ನ.1 NEWS DESK : ಹರಿಚಂದ್ರಪುರ ಚೇಂಬರ್ ಆಫ್ ಕಾಮರ್ಸ್ ಕಚೇರಿ ಕಟ್ಟಡ ಮುಂಭಾಗದಲ್ಲಿ ಕನ್ನಡದ ಧ್ವಜಾರೋಹಣ ಮಾಡುವ ಮೂಲಕ 70ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಕಲಾವಿದ ನಾರಾಯಣಸ್ವಾಮಿ ನಾಯ್ಡು ಅವರ ನೇತೃತ್ವದಲ್ಲಿ ಆಚರಿಸಲಾಯಿತು. ಪತ್ರಕರ್ತ ಜಗದೀಶ್ ಜೋಡುಬೀಟಿ ಮಾತನಾಡಿ, ಕನ್ನಡ ನಾಡು ನುಡಿಯ ಬಗ್ಗೆ ಪ್ರತಿಯೊಬ್ಬರು ಅಭಿಮಾನ ಹೊಂದಿರಬೇಕು. ಕನ್ನಡ ನಾಡನ್ನು ಕಟ್ಟಲು ಹಲವಾರು ಮಹನೀಯರು ಹೋರಾಟದ ಮೂಲಕ ತ್ಯಾಗ ಮಾಡಿದ್ದಾರೆ. ಇಲ್ಲಿನ ಭವ್ಯ ಪರಂಪರನೆಯನ್ನು ಉಳಿಸಿ ಬೆಳೆಸಲು ಪ್ರತಿಯೊಬ್ಬ ಕನ್ನಡಿಗರ ಕರ್ತವ್ಯ. ಕನ್ನಡ ಪರ ಸಂಘಟನೆಗಳು ರಾಜ್ಯೊತ್ಸವವನ್ನು ಗೋಣಿಕೊಪ್ಪ ನಗರದಲ್ಲಿ ಸಂಭ್ರಮದಿಂದ ಆಚರಿಸುವಂತಾಗಬೇಕಾಗಿದೆ. ಈ ನಿಟ್ಟಿನಲ್ಲಿ ನಾಯ್ಡು ಸಂಸ್ಥೆ ಈ ಕಾರ್ಯಕ್ಕೆ ಮುಂದಾಗಿರುವುದು ಉತ್ತಮ ಬೆಳವಣಿಗೆಯೆಂದು ಹೇಳಿದರು. ಕಲಾವಿದ ನಾರಾಯಣಸ್ವಾಮಿ ಮಾತನಾಡಿ, ಪ್ರಥಮ ವರ್ಷದ ಆಚರಣೆಯಾಗಿ 70ನೇ ವರ್ಷದ ರಾಜ್ಯೋತ್ಸವವನ್ನು ಸಂಸ್ಥೆಯ ವತಿಯಿಂದ ನಡೆಸಲಾಗುತ್ತಿದೆ. ಮುಂದಿನ ವರ್ಷ ವಿವಿಧ ಸಂಘ ಸಂಸ್ಥೆಗಳ ಸಹಕಾರದಿಂದ ಕನ್ನಡದ ಹಬ್ಬವನ್ನು ವೈಭವಯುತವಾಗಿ ಆಚರಿಸಲು ಚಿಂತನೆ ಹರಿಸಲಾಗಿದೆ ಎಂದು ಹೇಳಿದರು. ಗೋಣಿಕೊಪ್ಪ ಗ್ರಾಪಂ…
ಕುಶಾಲನಗರ ನ.1 NEWS DESK : ಭಾಷೆ ಕೇವಲ ಮಾತಿಗೆ ಸೀಮಿತವಾಗಬಾರದು, ನಿರಂತರ ಬಳಕೆ ಮಾಡುವ ಮೂಲಕ ಕನ್ನಡದ ಬೆಳವಣಿಗೆ ಆಗಬೇಕಾಗಿದೆ ಎಂದು ಕುಶಾಲನಗರ ತಾಲ್ಲೂಕು ತಹಸಿಲ್ದಾರ್ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯ ತಾಲೂಕು ಅಧ್ಯಕ್ಷರು ಕಿರಣ್ ಜಿ ಗೌರಯ್ಯ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕುಶಾಲನಗರ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದ ಮೈದಾನದಲ್ಲಿ 70ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಮಾತನಾಡಿದರು. ಎಲ್ಲಾ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆ ಕ್ಷೀಣಗೊಳುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ, ಮಕ್ಕಳಲ್ಲಿ ಭಾಷಾ ಪ್ರೇಮ ಮೂಡಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹೇಳಿದ ಅವರು, ಏಕೀಕರಣದ ನಂತರ ರಾಜ್ಯ ಶರವೇಗದಲ್ಲಿ ಬೆಳವಣಿಗೆಯೊಂದಿಗೆ ಅಭಿವೃದ್ಧಿ ಕಂಡಿದೆ ಎಂದು ತಿಳಿಸಿದರು. ಅತಿ ಹೆಚ್ಚಿನ ಜ್ಞಾನಪೀಠ ಪ್ರಶಸ್ತಿಗೆ ಪಾತ್ರವಾಗಿರುವ ಹೆಗ್ಗಳಿಕೆ ಕನ್ನಡ ಭಾಷೆಯದ್ದಾಗಿದೆ. ಭಾಷೆ ಬಗ್ಗೆ ಚಿಂತನೆಗಳು ಕೇವಲ ನವಂಬರ್ ತಿಂಗಳಿಗೆ ಮಾತ್ರ ಸೀಮಿತವಾಗದಂತೆ ಎಚ್ಚರ ವಹಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ತಾಲೂಕು ಗ್ಯಾರೆಂಟಿ…
ಮಡಿಕೇರಿ ನ.1 NEWS DESK : ಕೊಡಗು ಜಿಲ್ಲಾ ಕುಲಾಲ (ಕುಂಬಾರ) ಚಾಂಪಿಯನ್ಸ್ ಟ್ರೋಫಿ-2025 ಸೀಸನ್ 1 ಕ್ರಿಕೆಟ್ ಪಂದ್ಯಾವಳಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಮೂರ್ನಾಡಿನ ಶ್ರೀ ಬಾಚಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಆಯೋಜನೆಗೊಂಡ ಈ ಪಂದ್ಯಾವಳಿಗೆ ಶುಭ ಕೋರಿದ ಶಾಸಕರು, ಕ್ರೀಡೆಯು ಕೊಡಗಿನ ಜನತೆಯ ಉಸಿರಿನಲ್ಲಿ ಹಾಸುಹೊಕ್ಕಿದೆ. ಇಂತಹ ಕ್ರೀಡಾಕೂಟಗಳು ಕ್ರೀಡಾ ಪ್ರತಿಭೆಯನ್ನು ಸಮಾಜದ ಮುನ್ನೆಲೆಗೆ ತರಲು ಅತ್ಯಂತ ಸಹಕಾರಿಯಾಗಲಿದೆ. ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳು ಕ್ರೀಡಾ ಮನೋಭಾವದಿಂದ ಆಟವಾಡಿ, ತಮ್ಮ ಸಾಮರ್ಥ್ಯ ಪ್ರದರ್ಶಿಸುವುದರೊಂದಿಗೆ ಜೀವನದಲ್ಲಿ ಯಶಸ್ಸು ಕಾಣಲು ಮುನ್ನುಡಿ ಬರೆಯಬೇಕೆಂದು ಕರೆ ನೀಡಿದರು. ಕ್ರೀಡೆಯನ್ನು ಕ್ರೀಡಾ ಸ್ಪೂರ್ತಿಯಿಂದ ಆಸ್ವಾದಿಸುತ್ತಾ, ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಹಬಾಳ್ವೆಯ ಸಂದೇಶಕ್ಕೆ ನಾಂದಿ ಹಾಡಬೇಕೆಂದು ಕಿವಿಮಾತು ಹೇಳಿದರು. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಕುಲಾಲ (ಕುಂಬಾರ) ಸಂಘದ ಅಧ್ಯಕ್ಷ ಕೆ.ಕುಶಾಲಪ್ಪ, ಉಪಾಧ್ಯಕ್ಷ ದಾಮೋದರ್, ಯುವ ಘಟಕದ ಅಧ್ಯಕ್ಷ ಚಂದ್ರಶೇಖರ್, ಖಜಾಂಚಿ ಗಿರೀಶ್, ಮೂರ್ನಾಡು ಗ್ರಾ.ಪಂ…
ಮಡಿಕೇರಿ ನ.1 NEWS DESK : ಸಂವಿಧಾನದ 244 ವಿಧಿ 6 ಮತ್ತು 8ನೇ ಶೆಡ್ಯೂಲ್ ಪಟ್ಟಿ ಅಡಿಯಲ್ಲಿ ‘ಕೊಡವ ಲ್ಯಾಂಡ್’ ಭೌಗೋಳಿಕ-ರಾಜಕೀಯ ಸ್ವಾಯತ್ತತೆಗಾಗಿ ಕಾನೂನುಬದ್ಧ ಆಕಾಂಕ್ಷೆಗಳನ್ನು ಪರಿಹರಿಸಲು ಎರಡನೇ ರಾಜ್ಯಗಳ ಪುನರ್-ಸಂಘಟನಾ ಆಯೋಗವನ್ನು ರಚಿಸಬೇಕೆಂದು ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನವದೆಹಲಿಯ ಜಂತರ್ ಮಂತರ್ ನಲ್ಲಿ ಇಂದು ಶಾಂತಿಯುತ ಸತ್ಯಾಗ್ರಹ ನಡೆಸಿತು. ಸತ್ಯಾಗ್ರಹದ ನೇತೃತ್ವ ವಹಿಸಿ ಮಾತನಾಡಿದ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ವಿಶ್ವ ರಾಷ್ಟ್ರ ಸಂಸ್ಥೆ ಮತ್ತು ಅದರ ನಂತರದ ಒಪ್ಪಂದಗಳು ಹಾಗೂ ಘೋಷಣೆಗಳು ಪ್ರಪಂಚದಾದ್ಯಂತದ ಆದಿಮಸಂಜಾತ ಜನರ ಸ್ವ-ನಿರ್ಣಯದ ಹಕ್ಕುಗಳನ್ನು ಎತ್ತಿಹಿಡಿಯುತ್ತವೆ. ಇದರಲ್ಲಿ ಭಾರತ ಸರ್ಕಾರವು ಸಹಿ ಹಾಕಿದೆ. ಎರಡನೇ ರಾಜ್ಯಗಳ ಪುನರ್-ಸಂಘಟನಾ ಆಯೋಗ ರಚನೆಗಾಗಿ ಒತ್ತಾಯಿಸಿ ಈಗಾಗಲೇ ಕೇಂದ್ರದ ಮಾಜಿ ಸಚಿವ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರ ಮೂಲಕ ಸಿಎನ್‍ಸಿ ಸಂಘಟನೆ ಹೈಕೋರ್ಟ್‍ನಲ್ಲಿ ಕಾನೂನು ಹೋರಾಟ ನಡೆಸುತ್ತಿದ್ದು, ಜಯ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕೊಡವರ ಸಾಂಪ್ರದಾಯಿಕ ತಾಯ್ನಾಡು ‘ಸಿ’ ರಾಜ್ಯ…
ಪುತ್ತೂರು ನ.1 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಅಂತರ್ಕಾಲೇಜು ಭಾರ ಎತ್ತುವ ಸ್ಪರ್ಧೆಯಲ್ಲ್ಲಿ ಒಂದು ಚಿನ್ನ ಹಾಗೂ ಒಂದು ಬೆಳ್ಳಿಯ ಪದಕವನ್ನು ಗೆದ್ದುಕೊಂಡಿದ್ದು, ಇವರ ಸಾಧನೆಯಿಂದ ಕಾಲೇಜು ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಗಳಿಸಿಕೊಂಡಿದೆ. ಬೆಂಗಳೂರಿನ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿಯ ಆಶ್ರಯದಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಕಾಲೇಜಿನ ತೃತೀಯ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಭುವನ್‍ರಾಮ್ ಜಗದೀಶ್ ಭಂಡಾರಿ 71 ಕೆಜಿ ವಿಭಾಗದಲ್ಲಿ ಸ್ನಾಚ್‍ನಲ್ಲಿ 85 ಕೆಜಿ ಹಾಗೂ ಕ್ಲೀನ್ ಎಂಡ್ ಜರ್ಕ್‍ನಲ್ಲಿ 110 ಕೆಜಿ ಹೀಗೆ ಒಟ್ಟು 195 ಕೆಜಿ ಭಾರ ಎತ್ತುವುದರ ಮೂಲಕ ಚಿನ್ನದ ಪದಕದ ಸಾಧನೆಯನ್ನು ಮಾಡಿದ್ದಾರೆ. ಇದೇ ಕ್ರೀಡಾಕೂಟದ 65 ಕೆಜಿ ವಿಭಾಗದಲ್ಲಿ ತೃತೀಯ ವರ್ಷದ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಶಿನ್ ಲರ್ನಿಂಗ್ ವಿಭಾಗದ ಸ್ಕಂದ ಪ್ರಸಾದ್ ಸ್ನಾಚ್‍ನಲ್ಲಿ 67 ಕೆಜಿ ಹಾಗೂ ಕ್ಲೀನ್ ಎಂಡ್ ಜರ್ಕ್‍ನಲ್ಲಿ 90…






