ಲೇಖಕ: admin

ಗೋಣಿಕೊಪ್ಪ ನ.1 NEWS DESK : ಗೋಣಿಕೊಪ್ಪ ಸರಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವನ್ನು ಆಚರಿಸಲಾಯಿತು. ಶಾಲೆ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಜಗದೀಶ್ ಜೋಡುಬೀಟಿ ಧ್ವಜಾರೋಹಣ ನೆರವೇರಿಸಿದರು. ನಂತರ ವಿದ್ಯಾರ್ಥಿಗಳ ಉದ್ದೇಶಿಸಿ ಮಾತನಾಡಿದ ಅವರು, ಈ ನಾಡು ಭಾಷೆ ಸಂಸ್ಕೃತಿ, ಸಾಹಿತ್ಯ, ಆಚಾರ, ವಿಚಾರ, ಪದ್ಧತಿ, ಪರಂಪರೆಗಳಿಂದ ಸಮೃದ್ಧಿಗೊಂಡಿದೆ. ಕವಿಗಳು, ಸಾಹಿತಿಗಳು, ಕಲಾವಿದರು, ಸೇರಿದಂತೆ ಕನ್ನಡಪರ ಹೋರಾಟದ ಧ್ವನಿಗಳಿಂದ ಈ ನಾಡು ಕಟ್ಟಲಾಗಿದೆ. ರಾಜರ ಕಾಲದ ಆಳ್ವಿಕೆಯಿಂದ ಈ ನಾಡು ಬಹುದೊಡ್ಡ ವಿಸ್ತರತೆಯಲ್ಲಿ ಗುರುತಿಸಿಕೊಂಡಿತು. ನಂತರ ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ನಾಮಕರಣ ಮಾಡುವ ಮೂಲಕ ಇಲ್ಲಿನ ಧರ್ಮ, ಜಾತಿ, ಭಾಷೆ, ಜನಾಂಗಗಳ ಒಗ್ಗೂಡುವಿಕೆ ಸಾಧ್ಯವಾಯಿತು ಎಂದು ಹೇಳಿದರು. ವಿದ್ಯಾರ್ಥಿಗಳು ಈ ನಾಡಿನ ಪರಂಪರೆ, ಇತಿಹಾಸ, ಹೋರಾಟ ಎಲ್ಲದರ ಬಗ್ಗೆ ಮಾಹಿತಿ ಪಡೆದುಕೊಂಡು ಕನ್ನಡತನವನ್ನು ಎತ್ತಿ ಹಿಡಿಯಬೇಕು. ಕನ್ನಡದ ಅಭಿಮಾನವನ್ನು ವೃದ್ಧಿಗೊಳಿಸುತ್ತಾ ಈ ನಾಡಿಗಾಗಿ ಶ್ರಮಿಸಬೇಕು. ಈ ನಾಡಿನ ಕೀರ್ತಿಯನ್ನು ಬೆಳಗಿಸಬೇಕು ಎಂದು ಸಲಹೆ…

Read More

ಮಡಿಕೇರಿ ನ.1 NEWS DESK : ಕೊಡಗು ಜಿಲ್ಲಾ ವಿಶೇಷ ಚೇತನರ ಸಂಘ ಹಾಗೂ ವಿಕಲಚೇತನರ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಮಡಿಕೇರಿಯಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರದ ಕನ್ನಡ ರಾಜ್ಯೋತ್ಸವನ್ನು ಸಂಘದ ಕಟ್ಟಡದಲ್ಲಿ ನಡೆದ ಕಾರ್ಯಕ್ರಮದಲ್ಲಿ  ಸಂಘದ ಅಧ್ಯಕ್ಷ ಜೆ.ಎ.ಮಹೇಶ್ವರ್ ಹಾಗೂ ಪದಾಧಿಕಾರಿಗಳು ಕನ್ನಡಾಂಬೆ ಭುವನೇಶ್ವರಿಗೆ ಪುಷ್ಪಾರ್ಚನೆಯ ಮೂಲಕ ಗೌರವ ಸಲ್ಲಿಸಿದರು. ಈ ಸಂದರ್ಭ ಸಂಘದ ಕಾರ್ಯದರ್ಶಿ ಬಿ.ಎಂ.ತಿರುಮಲೇಶ್ವರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಕೆ.ಎಂ.ಹಸ್ಸನ್, ಉಪಾಧ್ಯಕ್ಷೆ ಎಂ.ಎನ್.ವೀಣಾ, ನಿರ್ದೇಶಕರಾದ ಪಿ.ಡಿ.ಹೇಮಾವತಿ, ಟಿ.ಮಿಲನ, ಕವನ, ಜಿತೇಶ್, ಜುಬೇರ್ ರಾಮಚಂದ್ರ ಹಾಗೂ ಇತರ ಸಂಘದ ನಿರ್ದೇಶಕರು ಭಾಗವಹಿಸಿದ್ದರು.

Read More

ಮಡಿಕೇರಿ ನ.1 NEWS DESK : ಮಡಿಕೇರಿ ತಾಲ್ಲೂಕು ಚೆಟ್ಟಿಮನಿ ಭಾಗದಲ್ಲಿ ಪೂವ್ವಲಮಾನಿ ಭಾಗದಲ್ಲಿ ಆಯೋಜಿಸಿದ 4ನೇ ವರ್ಷದ ಶಾರದ ಪೂಜಾ ಹಾಗೂ ಕಿರು ಕ್ರೀಡಾಕೂಟವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಪೂವ್ವಲಮಾನಿಯ ನಾಗರಿಕ ಸೇವಾ ಸಮಿತಿಯವರು ಆಯೋಜಿಸಿದ ಈ ಕಾರ್ಯಕ್ರಮದಲ್ಲಿ ಶಾರದ ಪೂಜೆಯ ಪ್ರಸಾದ ಸ್ವೀಕರಿಸಿದ ಬಳಿಕ, ಕಿರು ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಕೋರಿದರು. ಈ ಸಂದರ್ಭದಲ್ಲಿ ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ಕುಂದಚೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ದಿನೇಶ್, ಸುರೇಂದ್ರ, ಚೆಟ್ಟಿಮನಿ ವಲಯ ಅಧ್ಯಕ್ಷರು ಕೀರ್ತಿ ಉತ್ತಪ್ಪ, ಕುಂದಚೇರಿ ಗ್ರಾಮ ಪಂಚಾಯಿತಿ ಸದಸ್ಯರು ಹ್ಯಾರೀಶ್, ಸುನಿಲ್ ಪತ್ ರಾವ್, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Read More

ಮಡಿಕೇರಿ ನ.1 NEWS DESK : ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸಿದ ಜಿಲ್ಲಾ ಮಟ್ಟದ ಆಟೋಟ ಹಾಗೂ ಕ್ರೀಡಾಸ್ಪರ್ಧೆಗಳಲ್ಲಿ ಸ್ಪರ್ದಿಸಿದ್ದ ಮಡಿಕೇರಿಯ ಸಂತ ಜೋಸೆಫರ ಕಾಲೇಜಿನ ಈ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳಾದ ಕೆ.ಯು.ಪ್ರಜ್ಞಾ-ಟ್ರಿಪಲ್ ಜಂಪ್, ಐಝಾನ್ ವಸಿಂ – ಟೇಬಲ್ ಟೆನಿಸ್ ಮತ್ತು ಅದಿತ್ರೀ ಕೆದಂಬಾಡಿ ಚೇತನ್ – ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳನ್ನು ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ವಿದ್ಯಾರ್ಥಿ ವೃಂದ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಶುಭ ಹಾರೈಸಿದ್ದಾರೆ.

Read More

ಕುಶಾಲನಗರ ನ.1 NEWS DESK  : ತಾಲ್ಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷರೂ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿ ಹೆಚ್.ಬಿ.ಚಂದ್ರಪ್ಪ ಜಯಭೇರಿ ಬಾರಿಸಿದ್ದಾರೆ. ಎಪಿಸಿಎಂಎಸ್‌ಸಿ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಸಂಘದಕುಶಾಲನಗರ, ನಂಜರಾಯಪಟ್ಟಣ ಹಾಗೂ ಹೆಬ್ಬಾಲೆ ವಿಭಾಗದಿಂದ ಒಟ್ಟು 12 ನಿರ್ದೇಶಕರ ಆಯ್ಕೆಗೆ  ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ಎಪಿಸಿಎಂಎಸ್ಸಿ ಸಭಾಂಗಣದಲ್ಲಿ ನಡೆದ ಮತ ಏಣಿಕೆ ಕಾರ್ಯದಲ್ಲಿ ಹೆಬ್ಬಾಲೆ ವಿಭಾಗದಿಂದ ಸಾಮಾನ್ಯ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಚ್‌.ಬಿ.ಚಂದ್ರಪ್ಪ 370 ಮತಗಳನ್ನು ಪಡೆದು ಗೆಲುವು ಸಾಧಿಸಿದರು. ಪ್ರತಿಸ್ಪರ್ಧಿಗಳಾದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂ.ಜಿ.ಕುಮಾರಸ್ವಾಮಿ 213 ಹಾಗೂ ಸುಂದರ್‌ಗೆ 125 ಮತಗಳು ಲಭಿಸಿ,ಕುಶಾಲನಗರ ತಾಲ್ಲೂಕಿನ ಎಪಿಸಿಎಂಸ್‌ಸಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಿ ಮೇಲುಗೈ ಸಾಧಿಸಿದರು ಸೋಲುಂಡರು. ಹಿಂದುಳಿದ ವರ್ಗ(ಬಿಸಿಎಂಎ) ಮೀಸಲು ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಚ್.ಎನ್. ಮಹಾದೇವ 382 ಮತ ಪಡೆದು ಗೆದ್ದರು. ಪ್ರತಿಸ್ಪರ್ಧಿ ಕಾಂಗ್ರೆಸ್…

Read More

ಮಡಿಕೇರಿ ನ.1 NEWS DESK : ಕರ್ನಾಟಕ ಎಂಬುವುದು ಕೇವಲ ನೆಲವಲ್ಲ, ಅದು ಕನ್ನಡಿಗರ ಭಾವನೆ ಮತ್ತು ಬಾಂಧವ್ಯವಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಅಭಿಪ್ರಾಯಪಟ್ಟಿದ್ದಾರೆ. ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಸಂಭ್ರಮದ 70ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಸಚಿವರು ಮಾತನಾಡಿದರು. ಕನ್ನಡ, ಕರ್ನಾಟಕ, ಕರುನಾಡು ಎಂಬುವುದು ಕೇವಲ ನೆಲ ಮತ್ತು ಭಾಷೆಯಲ್ಲ. ಅದು ಕನ್ನಡಿಗರ ಭಾವನೆ ಹಾಗೂ ಬಾಂಧವ್ಯವಾಗಿದ್ದು, ಕನ್ನಡ ರಾಜ್ಯೋತ್ಸವ ನಮ್ಮೆಲ್ಲರ ನಿತ್ಯೋತ್ಸವವಾಗಬೇಕು ಎಂದು ಕರೆ ನೀಡಿದರು. ದೇಶದಲ್ಲಿ ಕನ್ನಡ ಭಾಷಾ ಸಾಹಿತ್ಯಕ್ಕೆ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳು ದೊರೆತ್ತಿರುವುದು ಹೆಮ್ಮೆಯ ವಿಚಾರ. ಇಂದು ಹೆಮ್ಮೆಯಿಂದ ಆಚರಿಸುತ್ತಿರುವ ಕನ್ನಡ ರಾಜ್ಯೋತ್ಸವದ ಹಿಂದೆ ನಮ್ಮ ನಾಡಿನ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರ ಹೋರಾಟವಿದೆ. ಸಹಸ್ರಾರು ಕನ್ನಡಿಗರು ಆಡಳಿತಾತ್ಮಕ ಹಾಗೂ ಭಾವನಾತ್ಮಕ ಐಕ್ಯತೆಗಾಗಿ ಹಗಲಿರುಳು ದುಡಿದಿದ್ದಾರೆ. ಅಂತಹ ಎಲ್ಲಾ ಮಹಾನ್ ಚೇತನಗಳನ್ನು ಅತ್ಯಂತ ಕೃತಜ್ಞತೆಯಿಂದ ಸ್ಮರಿಸಿಕೊಳ್ಳಬೇಕು…

Read More

ವಿರಾಜಪೇಟೆ ನ.1 NEW DESK : ವಿರಾಜಪೇಟೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿರಾಜಪೇಟೆಯ ತಾಲೂಕು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು, ಕನ್ನಡ ಧ್ವಜಾರೋಹಣ ಮಾಡಿ, ಧ್ವಜ ವಂದನೆ ಸಲ್ಲಿಸಿದರು. ಬಳಿಕ ಗೌರವ ಸ್ವೀಕರಿಸಿ ಮಾತನಾಡಿದ ಶಾಸಕರು, ಸಮಸ್ತ ಕರ್ನಾಟಕದ ಜನತೆ ಇಂದು ಹೆಮ್ಮೆಪಡುವ ದಿನ. ನಮ್ಮ ಭಾಷೆ ನಮ್ಮ ನೆಲ ನಮ್ಮ ಜಲ ಸದಾ ನಮ್ಮೊಂದಿಗಿರುತ್ತದೆ. ನಮ್ಮತನವನ್ನು ಸದಾ ಉಳಿಸಿಕೊಳ್ಳಲು ನಾವು ನಮ್ಮ ಭಾಷೆಗೆ ನೀಡುವ ಗೌರವ, ಅಭಿಮಾನದಿಂದ ಪೋಷಿಸುವ ರೀತಿಯ ಮೇಲೆ ಅವಲಂಬಿತವಾಗಿರುತ್ತದೆ. ಕನ್ನಡ ಭಾಷೆಯ ಬಗ್ಗೆನ ಅಭಿಮಾನ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗದೆ, ಸದಾ ಕನ್ನಡಾಭಿಮಾನ, ಕನ್ನಡದ ನಾಡು, ಜಲ, ಭಾಷೆಯ ಬಗ್ಗೆ ಪ್ರೇಮವನ್ನು ನಾವೆಲ್ಲರೂ ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರು ಸುಜಾ ಕುಶಾಲಪ್ಪ, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಜಾನ್ಸನ್, ತಹಶೀಲ್ದಾರ್ ಪ್ರವೀಣ್, ಪುರಸಭೆ ಉಪಅಧ್ಯಕ್ಷೆ…

Read More

ಮಡಿಕೇರಿ ನ.1 NEWS DESK : ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿಗೆ ತೆರಳುವ ರಸ್ತೆಯ ಬಳಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಕೊಡಗು ಜಿಲ್ಲಾ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಉಸ್ತುವಾರಿ ಸಚಿವ ಭೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಶಾಸಕ ಡಾ.ಮಂತರ್ ಗೌಡ ಶಿಲನ್ಯಾಸ ನೆರವೇರಿಸಿದರು. ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ  ಧರ್ಮಜ ಉತ್ತಪ್ಪ ಅವರ ಅಧ್ಯಕ್ಷತೆ ಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರುಗಳು, ಮಾಜಿ ಸಚಿವರುಗಳು, ಮಾಜಿ ಶಾಸಕರುಗಳು ಹಾಗೂ ಆಹ್ವಾನಿತ ಅತಿಥಿ ಗಣ್ಯರು ಉಪಸ್ಥಿತರಿದ್ದರು. ಬಳಿಕ ಶುಭಕೋರಿದ ಶಾಸಕ ಎ.ಎಸ್.ಪೊನ್ನಣ್ಣ, ನಿಗದಿತ ಸಮಯದಲ್ಲಿ ಕಾಂಗ್ರೆಸ್ ಭವನ ಪೂರ್ಣಗೊಳ್ಳಲಿದ್ದು, ಎಲ್ಲರೂ ಕೈಜೋಡಿಸಬೇಕೆಂದು ಕರೆ ನೀಡಿದರು. ಆದಷ್ಟು ಬೇಗ ಈ ನೂತನ ಭವನದಲ್ಲಿ ಪಕ್ಷದ ಕಾರ್ಯ ಚಟುವಟಿಕೆಗಳು ಯಶಸ್ಸು ಕಾಣುವುದರೊಂದಿಗೆ ಕಾಂಗ್ರೆಸ್ ಪಕ್ಷದ ಗತವೈಭವ ಮರುಕಳಿಸುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ತಿಳಿಸಿದರು. ಮಾಜಿ ಸಚಿವರಾದ ಎಂ.ಸಿ.ನಾಣಯ್ಯ  ಮಾತನಾಡಿ, ಶುಭ ಕೋರಿದರು. ವೇದಿಕೆಯಲ್ಲಿ ಕೆಪಿಸಿಸಿ ಸದಸ್ಯರುಗಳು,…

Read More

ಮಡಿಕೇರಿ ನ.1 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ(ಐಟಿಡಿಪಿ) ನೂತನ ಕಚೇರಿ ಕಟ್ಟಡವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ಶಾಸಕರಾದ ಡಾ.ಮಂತರ್ ಗೌಡ ಅವರು  ಉದ್ಘಾಟಿಸಿದರು. ಉದ್ಘಾಟನೆ ಬಳಿಕ ಮಾತನಾಡಿದ ಶಾಸಕ ಎ.ಎಸ್.ಪೊನ್ನಣ್ಣ, ನೂತನ ಕಟ್ಟಡದಲ್ಲಿ ಅಧಿಕಾರಿಗಳು ಸರಕಾರದ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಪರಿಣಾಮಕಾರಿ ರೀತಿಯಲ್ಲಿ ಗಿರಿಜನರ ಅಭಿವೃದ್ಧಿಗೆ ತಲುಪಿಸಲು ಶ್ರಮ ವಹಿಸಬೇಕೆಂದು ಕರೆ ನೀಡಿ, ಎಲ್ಲರಿಗೂ ಶುಭ ಕೋರಿದರು. ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಉಪಾಧ್ಯಕ್ಷರಾದ ಮಹೇಶ್ ಜೈನಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಎಸ್. ಹೊನ್ನೇಗೌಡ, ನಿರ್ಮಿತಿ ಕೇಂದ್ರದ ಯೋಜನಾ…

Read More

ಮಡಿಕೇರಿ ನ.1 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಹಯೋಗದೊಂದಿಗೆ ನಾಗರಹೊಳೆಯಲ್ಲಿ 1.80 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ ಮಹರ್ಷಿ ವಾಲ್ಮೀಕಿ ಅದಿವಾಸಿ ಬುಡಕಟ್ಟು ವಸತಿ ಶಾಲೆಯ ನವೀಕರಣ ಕಟ್ಟಡವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಶುಕ್ರವಾರ ಉದ್ಘಾಟಿಸಿದರು. ಬಳಿಕ ಶಾಲಾ ಕೊಠಡಿ ವೀಕ್ಷಿಸಿದ ಸಚಿವರು ವಿದ್ಯಾರ್ಥಿಗಳ ಕುಂದುಕೊರತೆ ಆಲಿಸಿದರು. ಶಿಕ್ಷಕರು ಪಾಠ ಪ್ರವಚನ ಮನ ಮುಟ್ಟುವಂತೆ ಹೇಳುತ್ತಿದ್ದಾರೆಯೇ, ಪ್ರತಿನಿತ್ಯ ಆಹಾರದ ಪಟ್ಟಿಯಂತೆ ಊಟೋಪಾಚಾರ ಕಲ್ಪಿಸಲಾಗುತ್ತಿದೆಯೇ, ಮೊಟ್ಟೆ ಬಾಳೆಹಣ್ಣು, ಚಿಕ್ಕಿ ವಿತರಿಸಲಾಗುತ್ತಿದೆಯೇ ಎಂದು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು. ಶುಕ್ರವಾರ ಯಾವ ಊಟ ಬಡಿಸಿದರು ಎಂಬ ಸಚಿವರ ಪ್ರಶ್ನೆಗೆ ವಿದ್ಯಾರ್ಥಿಗಳು ಅನ್ನ ಸಾಂಬಾರು, ಮುದ್ದೆ ಎಂದು ಉತ್ತರಿಸಿದರು, ಇದಕ್ಕೆ ಸಚಿವರು, ಯಾವ ಸಾಂಬಾರು ಎಂದು ಮರು ಪ್ರಶ್ನಿಸಿದರು, ಇದಕ್ಕೆ ವಿದ್ಯಾರ್ಥಿಗಳು ಕಡ್ಲೆಕಾಳು, ತರಕಾರಿ ಸಾಂಬಾರು ಎಂದು ಉತ್ತರಿಸಿದರು. ಬಳಿಕ ಸಚಿವರು…

Read More