ಮಡಿಕೇರಿ ನ.1 NEWS DESK : ಕೊಡಗು ಪತ್ರಿಕಾ ಭವನ ಟ್ರಸ್ಟಿನ 24ನೇ ವಾರ್ಷಿಕೋತ್ಸವ ನ.4 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕೊಡಗು ಪತ್ರಿಕಾ ಭವನದ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪತ್ರಿಕಾ ಭವನ ಟ್ರಸ್ಟಿನ ಮ್ಯಾನೇಜಿಂಗ್ ಟ್ರಸ್ಟಿಗಳಾದ ಎಂ.ಪಿ.ಕೇಶವ ಕಾಮತ್‍ರವರು ವಹಿಸಲಿದ್ದು, ಚಿಕ್ಕಅಳುವಾರದ ಕೊಡಗು ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ.ಅಶೋಕ್ ಸಂಗಪ್ಪ ಆಲೂರ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಜಯ ಕರ್ನಾಟಕ ಪತ್ರಿಕೆಯ ಮೈಸೂರು ವಿಭಾಗದ ಸ್ಥಾನಿಕ ಸಂಪಾದಕರಾದ ಐತಿಚಂಡ ರಮೇಶ್ ಉತ್ತಪ್ಪ ಪಾಲ್ಗೊಂಡು ಮುಖ್ಯ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾದ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷರಾದ ಅನಿಲ್ ಹೆಚ್.ಟಿ. ಅವರು, ವಾರ್ಷಿಕೋತ್ಸವ ಹಿನ್ನೆಲೆ ಆಯೋಜಿತ ಒಳಾಂಗಣ ಕ್ರೀಡಾಕೂಟದಲ್ಲಿ ಪಾಲ್ಗೊಂಡು ವಿಜೇತರಾದ ಸ್ಪರ್ಧಿಗಳಿಗೆ ಬಹುಮಾನವನ್ನು ಮತ್ತು ಸ್ಪರ್ಧೆಯಲ್ಲಿ ಪಾಲ್ಗೊಂಡವರಿಗೆ ಕಿರುಕಾಣಿಕೆಯನ್ನು ವಿತರಿಸಲಿದ್ದಾರೆಂದು ಪತ್ರಿಕಾ ಭವನ ಟ್ರಸ್ಟಿನ ಪ್ರಧಾನ ಕಾರ್ಯದರ್ಶಿ ಎಸ್.ಜಿ ಉಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ನ.1 NEWS DESK : ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರದ ವಿಶ್ವ ಮಾನವನ ಉದ್ಯಾನವನದಲ್ಲಿ ಸಮಾಜ ಸೇವಕ ಪ್ರಭು ರೈ ಹಾಗೂ ಖಲೀಲ್ ಭಾಷಾ ಕುವೆಂಪು ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷ ಅಂಬೆಕಲ್ ನವೀನ್ ಕುಶಾಲಪ್ಪ ಧ್ವಜಾರೋಹಣ ನೆರವೇರಿಸಿದರು. ಸಮಾಜ ಸೇವಕರು ಹಾಗೂ ಪುರಸಭಾ ಮಾಜಿ ಉಪಾಧ್ಯಕ್ಷ ಟಿಎಂ ಅಯ್ಯಪ್ಪರವರು ರಾಜ್ಯೋತ್ಸವದ ಶುಭಾಶಯ ಕೋರಿ ರಾಜ್ಯೋತ್ಸವದ ಕುರಿತು ಹಿತನುಡಿಗಳನಾಡಿದ್ದರು. ಕಾರ್ಯಕ್ರಮದಲ್ಲಿ ವೇದಿಕೆಯ ಅಧ್ಯಕ್ಷ ರವಿ ಗೌಡ, ತಾಲ್ಲೂಕು ಉಪಾಧ್ಯಕ್ಷ ನಾಗೇಶ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಅಕ್ಷಿತ್, ಮುರ್ನಾಡು ವಲಯ ಅಧ್ಯಕ್ಷರಾದ ವಸಂತ್, ನಗರ ಉಪಾಧ್ಯಕ್ಷರಾದ ಲಿಲ್ಲಿಗೌಡ, ವೇದಿಕೆಯ ಸದಸ್ಯರುಗಳಾದ ಪುನೀತ್ ಜಿ.ಎನ್, ಹರ್ಷಿತ್, ಅಜಿತ್, ಅನಂತ್, ರೂಪ, ಸೈಮನ್, ಲಿಖಿತ್, ಮಹದೇವಣ್ಣ, ವಸಂತ್ ಭಟ್, ಶೇಕ್ ಆದಂ, ಲಿಖಿತ್.ಹೆಚ್.ವಿ, ರಮೇಶ್ ಭಾಗಮಂಡಲ ಹಾಜರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ವೇದಿಕೆಯ ವತಿಯಿಂದ ನೆರೆದಿದ್ದವರಿಗೆ ಹಾಗೂ ಸಾರ್ವಜನಿಕರಿಗೆ…
ಮಡಿಕೇರಿ ನ.1 NEWS DESK : ಕೊಡಗು ಜಿಲ್ಲಾಡಳಿತ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವವನ್ನು ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು. ನಂತರ ಕನ್ನಡಾಂಬೆ ಭುವನೇಶ್ವರಿಗೆ ಪುಷ್ಪಾರ್ಚನೆಯ ಮೂಲಕ ಗೌರವ ಸಲ್ಲಿಸಿ, ನಾಡಿನ ಜನತೆಗೆ ಸಂದೇಶ ನೀಡಿದರು. ಬಳಿಕ ವಿದ್ಯಾರ್ಥಿಗಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸ್ತಬ್ಧ ಚಿತ್ರಗಳ ಹಾಗೂ ಕಲಾ ತಂಡಗಳ ಮೆರವಣಿಗೆ ನಡೆಯಿತು. ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. :: ಆಕರ್ಷಕ ಪಥ ಸಂಚಲನ :: ನಗರದ ವವಿಧ ಶಾಲಾ ಕಾಲೇಜುಗಳ ಎನ್‍ಸಿಸಿ, ಸೇವಾದಳ, ಸ್ಕೌಟ್ಸ್, ಗೈಡ್ಸ್, ಜಿಲ್ಲಾ ಪೊಲೀಸ್…
ಮಡಿಕೇರಿ ನ.1 NEWS DESK : `ಕನ್ನಡ’ ತಾಯಿಯ ತೇರನೆಳೆಯುವ ಕಾರ್ಯಕ್ಕೆ ಕನ್ನಡಿಗರೆಲ್ಲರೂ ಕೈಜೋಡಿಸುವಂತೆ ಕೊಡಗು ಪತ್ರಿಕಾ ಭವನ ಟ್ರಸ್ಟ್‍ನ ಸ್ಥಾಪಕ ಮ್ಯಾನೇಜಿಂಗ್ ಟ್ರಸ್ಟಿಗಳಾದ ಟಿ.ಪಿ.ರಮೇಶ್ ಕರೆ ನೀಡಿದರು. ಕೊಡಗು ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿದ್ದ 70ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮ್ಯಾನೇಜಿಂಗ್ ಟ್ರಸ್ಟಿ ಎಂ.ಪಿ ಕೇಶವಕಾಮತ್ ಅವರು ಕನ್ನಡ ಧ್ವಜಾರೋಹಣವನ್ನು ನೆರವೇರಿಸಿ ಶುಭಕೋರಿದರು. ಈ ಸಂದರ್ಭ ಟಿ.ಪಿ.ರಮೇಶ್ ಮಾತನಾಡಿ, ಹರಿದು ಹಂಚಿಹೋಗಿದ್ದ ಕನ್ನಡ ನಾಡಿನ ಏಕೀಕರಣಕ್ಕೆ ಹಲ ಮಹನೀಯರು ಶ್ರಮಿಸಿದ್ದಾರೆಂದು ತಿಳಿಸಿ, ಕನ್ನಡದ ಸಾಹಿತ್ಯ , ಪರಂಪರೆ, ಸಂಸ್ಕøತಿಯ ಬೆಳವಣಿಗೆಗಳಿಗೆ ಪ್ರತಿಯೊಬ್ಬರು ಶ್ರಮಿಸುವಂತೆ ತಿಳಿಸಿದರು. ಈ ಸಂದರ್ಭ ಟ್ರಸ್ಟ್‍ನ ಪ್ರಧಾನ ಕಾರ್ಯದರ್ಶಿ ಎಸ್.ಜಿ. ಉಮೇಶ್ ಸ್ಥಾಪಕ ಮ್ಯಾನೇಜಿಂಗ್ ಟ್ರಸ್ಟಿ ಟಿ.ಪಿ.ರಮೇಶ್, ಹಿರಿಯ ಟ್ರಸ್ಟಿಗಳಾದ ವಿ.ಪಿ.ಸುರೇಶ್, ಶ್ರೀಧರ್ ಹೂವಲ್ಲಿ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿಗಳಾದ ಬಿ.ಎಂ.ವಾಸು ರೈ, ಪುದಿಯನೆರವನ ರೇವತಿ ರಮೇಶ್, ಸಿಬ್ಬಂದಿಗಳಾದ ಯಮುನಾ ಬಜೆಕೋಡಿ, ಶೈನಿ ಆಲ್ವಿನ್ ರಾಜೇಶ್, ಉದ್ಯಮಿಗಳಾದ ಅಶ್ರಫ್, ರೆಹಮಾನ್ ಪುಟಾಣಿಗಳಾದ ತರುಣ್ ಬಜೆಕೋಡಿ, ಮತ್ತು ದೇಶಿಕ…
ಮಡಿಕೇರಿ NEWS DESK ಅ.31 : ಕೂರ್ಗ್ ಪ್ಲಾಂಟರ್ಸ್ ಎಸೋಸಿಯೇಷನ್’ನ 146 ನೇ ವಾರ್ಷಿಕ ಸಮ್ಮೇಳನ ಸಿದ್ದಾಪುರದಲ್ಲಿ ನಡೆಯಿತು. ಆರೆಂಜ್ ಕೌಂಟಿ ಸಭಾಂಗಣದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್ .ಪೊನ್ನಣ್ಣ ಅವರು ಶತಮಾನಗಳಿಗೂ ಅಧಿಕ ಇತಿಹಾಸವುಳ್ಳ ಕೂರ್ಗ್ ಪ್ಲಾಂಟೇಶನ್ ಅಸೋಸಿಯೇಷನ್, ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿ. ಕೊಡಗಿನ ಬೆಳೆಗಾರರಿಗೆ ಅನುಕೂಲ ಆಗುವಂತೆ ನೋಡಿಕೊಳ್ಳಬೇಕು ಎಂದು ಕರೆ ನೀಡಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಅರುಣ್ ಮಾಚಯ್ಯ, ಪ್ಲಾಂಟರ್ ಎಸ್ಸೋಸಿಯೇಷನ್ ನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಡಿಕೇರಿ NEWS DESK ಅ.24 : ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸುವ ಉದ್ದೇಶದದಿಂದ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ನ.1 ರಂದು ನವದೆಹಲಿ ಚಲೋ ಕೊಡವ ಸತ್ಯಾಗ್ರಹ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಂವಿಧಾನದ 6 ನೇ ಶೆಡ್ಯೂಲ್ ಅಡಿಯಲ್ಲಿ ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯ ಮೂಲಕ ಸ್ವ-ನಿರ್ಣಯ ಮತ್ತು ಸ್ವ-ಆಡಳಿತದ ಹಕ್ಕೊತ್ತಾಯಗಳ ಪರ ಹೋರಾಟ ನಡೆಸುತ್ತಿರುವ ಸಿಎನ್‌ಸಿ ಸಂಘಟನೆ ನ.1ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಶಾಂತಿಯುತ ಸತ್ಯಾಗ್ರಹವನ್ನು ನಡೆಸಲಿದೆ. ರಾಜ್ಯ ಮರುಸಂಘಟನಾ ದಿನವನ್ನು “ಕೊಡವ ನೆಲದ ದುರಾಕ್ರಮಣದ ದಿನ” ಎಂದು ಆಚರಿಸುವುದಾಗಿ ಮಾಹಿತಿ ನೀಡಿದ್ದಾರೆ. 1956 ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವರು ಪ್ರೀತಿಯ ತಾಯ್ನಾಡನ್ನು ಅಂದರೆ ಹಿಂದಿನ “ಸಿ” ಭಾಗವಾದ ಕೊಡವರ ರಾಜ್ಯವನ್ನು ಕಳೆದುಕೊಂಡ ದಿನ. ಇದು 20 ನೇ ಶತಮಾನದ ಅತ್ಯಂತ ದೊಡ್ಡ ಭೌಗೋಳಿಕ-ರಾಜಕೀಯ ಉತ್ಪಾತವಾಗಿದೆ. ರಾಜ್ಯ ಮರುಸಂಘಟನಾ ಕಾಯ್ದೆಯಡಿ ನಮ್ಮ ರಾಜ್ಯವನ್ನು ವಿಲೀನಗೊಳಿಸಿದ ನಂತರ ಕೊಡವರು ತಮ್ಮ ಸ್ವಂತ ತಾಯ್ನಾಡಿನಲ್ಲಿ…
ಮಡಿಕೇರಿ NEWS DESK ಅ.31 : ಕಳೆದ 60 ವರ್ಷಗಳಿಂದ ಸಮಾಜಮುಖಿಯಾಗಿ ನಿರಂತರ ಸೇವೆಯಲ್ಲಿ ತೊಡಗಿಸಿಕೊಂಡಿರುವ ಮಡಿಕೇರಿ ಲಯನ್ಸ್ ಸಂಸ್ಥೆ ವಜ್ರ ಮಹೋತ್ಸವ ಸಮಾರಂಭವನ್ನು ಆಚರಿಸಿಕೊಂಡಿತು. ಲಯನ್ಸ್ ಜಿಲ್ಲಾ ರಾಜ್ಯಪಾಲ ಕುಡುಪಿ ಅರವಿಂದ್ ಶೆಣೈ ಅವರು ಅಧಿಕೃತ ಭೇಟಿ ನೀಡಿ ಸಂಸ್ಥೆಯ ಬೆಳವಣಿಗೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಮಡಿಕೇರಿ ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ರಾಜ್ಯಪಾಲರು ಲಯನ್ಸ್ ಸಂಸ್ಥೆಯಲ್ಲಿ ಅನುಭವಿಗಳು ಹಾಗೂ ಹಿರಿಯ ಸದಸ್ಯರು ವಿವಿಧ ಸ್ಥಾನಗಳನ್ನು ಅಲಂಕರಿಸಿದ್ದು, ಈ ವಯಸ್ಸಿನಲ್ಲೂ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯವೆಂದರು. ಮಡಿಕೇರಿ ಸೇರಿದಂತೆ ಸುಂಟಿಕೊಪ್ಪ, ಕುಶಾಲನಗರ ಮತ್ತು ಸೋಮವಾರಪೇಟೆ ಲಯನ್ಸ್ ಸಂಸ್ಥೆಗಳು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಮಾಜಕ್ಕೆ ಮಾದರಿಯಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. *ಸನ್ಮಾನ* ಸ್ಥಾಪಕ ಕಾರ್ಯದರ್ಶಿ ದಿವಂಗತ ಲಯನ್ ಕೊಡಂದೇರ ಎಂ.ಬೋಪಯ್ಯ ಅವರನ್ನು ಸ್ಮರಿಸುತ್ತಾ ಮರಣೋತ್ತರ ಉಲ್ಲೇಖದೊಂದಿಗೆ ಅವರ ಪುತ್ರಿ ಪಟ್ಟಮಾಡ ಕವಿತಾ ಮುತ್ತಣ್ಣ ಅವರನ್ನು ಸನ್ಮಾನಿಸಲಾಯಿತು. ವಜ್ರ ಮಹೋತ್ಸವದ ಅಂಗವಾಗಿ ಮಡಿಕೇರಿ ಲಯನ್ಸ್ ಸಂಸ್ಥೆಯ…
ಮಡಿಕೇರಿ NEWS DESK ಅ.31 : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ ಇವರ ಸಹಯೋಗದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡ ಅವರ ಸಂಸ್ಮರಣಾ ದಿನಾಚರಣೆ ನಗರದಲ್ಲಿ ನಡೆಯಿತು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿರುವ ಗುಡ್ಡಮನೆ ಅಪ್ಪಯ್ಯ ಗೌಡರ ಸ್ಮಾರಕದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್, ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ, ಕಾರ್ಯದರ್ಶಿ ಪೇರಿಯನ ಉದಯಕುಮಾರ್, ಕೊಡಗು ಗೌಡ ವಿದ್ಯಾ ಸಂಘದ ಅಧ್ಯಕ್ಷ ನವೀನ್ ಅಂಬೆಕಲ್ಲು, ಕೊಡಗು ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಅಮೆ ದಮಯಂತಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಕರ್ನಾಟಕ…
ವಿರಾಜಪೇಟೆ NEWS DESK ಅ.31 : ಕೊಡಗು ಜಿಲ್ಲಾ ಪೊಲೀಸ್ ವಿರಾಜಪೇಟೆ ಉಪ ವಿಭಾಗ, ವಿರಾಜಪೇಟೆ ವೃತ್ತ, ವಿರಾಜಪೇಟೆ ನಗರ ಠಾಣೆ ಹಾಗೂ ವಿರಾಜಪೇಟೆ ಗ್ರಾಮಾಂತರ ಠಾಣೆ ಇವರ ಸಂಯುಕ್ತ ಆಶ್ರಯದಲ್ಲಿ ವಿರಾಜಪೇಟೆಯಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆ ನಡೆಯಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್ .ಪೊನ್ನಣ್ಣ ಅವರು “ಏಕತೆಗಾಗಿ ಓಟ 2025” ಕಾರ್ಯಕ್ರಮವನ್ನು ಉದ್ಘಾಟಿಸಿದರು. ತಾಲೂಕು ಮೈದಾನದಿಂದ ವಿರಾಜಪೇಟೆ ನಗರದಾದ್ಯಂತ ಕಾಲ್ನಡಿಗೆ ಮೂಲಕ ಆಯೋಜಕರೊಂದಿಗೆ ಹೆಜ್ಜೆ ಹಾಕಿದ ಶಾಸಕರು ಏಕತೆಯ ಸಂದೇಶ ಸಾರಿದರು. ಭಾರತದ ಸಾರ್ವಭೌಮತೆ ಉಳಿಸಿಕೊಳ್ಳಲು ದೇಶದ ನಾಗರೀಕರಲ್ಲಿ ಏಕತಾ ಭಾವನೆ ಅತೀ ಮುಖ್ಯವಾಗಿದೆ. ಬ್ರಿಟಿಷರ ಕಪಿಮುಷ್ಠಿಯಿಂದ ಸ್ವಾತಂತ್ರ್ಯ ಹೋರಾಟಗಾರರು ನಮಗೆ ತಂದುಕೊಟ್ಟ ಸ್ವತಂತ್ರ ಭಾರತದ ಸ್ವರ್ಣ ಯುಗವನ್ನು ಮುಂದುವರಿಸಲು ಪ್ರತಿಯೊಬ್ಬ ಭಾರತೀಯನು ಒಗ್ಗಟ್ಟಾಗಿ ಇರುವುದು ಅತಿ ಅವಶ್ಯಕವಾಗಿದೆ. ದೇಶದ ವಿಷಯ ಬಂದ ಸಂದರ್ಭದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯ ದೇಶದ ಪ್ರಜೆಗಳಾದ ನಮ್ಮೊಳಗೆ ಮೂಡಬಾರದು ಎಂಬ ಸದುದ್ದೇಶದಿಂದ ಹಾಗೂ ಏಕತೆಯ ಸಂದೇಶವನ್ನು ಸಾರಲು…
ಸೋಮವಾರಪೇಟೆ NEWS DESK ಅ.31 : ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂತಿ-ಎಡದಂಟೆ ಗ್ರಾಮಕ್ಕೆ ಶಾಸಕರಾದ ಡಾ.ಮಂತರ್‌ಗೌಡ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಗ್ರಾಮಸ್ಥರೊಂದಿಗೆ ಚರ್ಚಿಸಿದರು. ಎಡದಂಟೆ ಜಲಪಾತ ವೀಕ್ಷಿಸಿದ ಶಾಸಕರು, ಪ್ರವಾಸಿಗರಿಗೆ ಜಲಪಾತ ವೀಕ್ಷಣೆಗೆ ಅವಕಾಶ ಮಾಡಿಕೊಡಲು, ಜಲಪಾತ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ಕಲ್ಪಿಸಲಾಗುವುದು ಎಂದು ಹೇಳಿದರು. ಮೊದಲು ಮೆಟ್ಟಿಲುಗಳನ್ನು ನಿರ್ಮಿಸಲು ಅಂದಾಜುಪಟ್ಟಿಯನ್ನು ತಯಾರಿಸುವಂತೆ ಲೋಕೋಪಯೋಗಿ ಇಲಾಖೆ ಎಇಇ ಅವರಿಗೆ ಸೂಚಿಸಿದರು. ಕೂತಿ ಮುಖ್ಯ ರಸ್ತೆಯಿಂದ ಎಡದಂಟೆ ಗ್ರಾಮಕ್ಕೆ ಒಂದೂವರೆ ಕಿ.ಮೀ.ರಸ್ತೆ ಅಭಿವೃದ್ಧಿಗೆ ಅನುದಾನ ಕಲ್ಪಿಸುವಂತೆ ಎಡದಂಟೆ ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ವೈ.ಎಂ.ರವಿ ಮನವಿ ಮಾಡಿದರು. ರಸ್ತೆ ಅಭಿವೃದ್ದಿಗೆ ಅನುದಾನ ಕಲ್ಪಿಸುವ ಭರವಸೆಯನ್ನು ಶಾಸಕರು ನೀಡಿದರು. ಜಲಪಾತ ಅಭಿವೃದ್ಧಿ ಹಾಗು ಅದೇ ಮಾರ್ಗವಾಗಿ ರುದ್ರಗಿರಿ ಬೆಟ್ಟಕ್ಕೆ ಸಂಪರ್ಕ ರಸ್ತೆಗಾಗಿ 5 ಕೋಟಿ ರೂ.ಗಳ ಪ್ರಸ್ತಾವನೆಯನ್ನು ಈ ಹಿಂದಿಯೆ ಪ್ರವಾಸೋಧ್ಯಮ ಇಲಾಖೆಗೆ ಸಲ್ಲಿಸಲಾಗಿದೆ. ಆದರೆ ಅನುದಾನ ಸಿಕ್ಕಿಲ್ಲ ಎಂದು ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಎಂ.ಲವ ಶಾಸಕರ ಗಮನಕ್ಕೆ ತಂದರು.…






