ಸೋಮವಾರಪೇಟೆ ಅ.31 : ನಾವು ಪ್ರತಿಷ್ಠಾನದ ವತಿಯಿಂದ ಶಾಲಾ ಆರೋಗ್ಯ ಮತ್ತು ವಿದ್ಯಾರ್ಥಿಗಳ ಯೋಗಕ್ಷೇಮ ಕಾರ್ಯಕ್ರಮ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ನಡೆಯಿತು. ಪ್ರತಿಷ್ಠಾನದ ಸ್ಥಾಪಕರಾದ ಗೌತಮ್ ಕಿರಗಂದೂರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರತಿಷ್ಠಾನದ ಕಾರ್ಯಕಾರಿ ನಿರ್ದೇಶಕಿ ಸುಮನಾ ಮ್ಯಾಥ್ಯು ಮಾತನಾಡಿ, ರಾಷ್ಟ್ರೀಯ ಅರೋಗ್ಯ ಮಿಷನ್‌ನಡಿಯಲ್ಲಿ 2020ರಲ್ಲಿ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ. ವಿದ್ಯಾರ್ಥಿಗಳಿಗೆ ಉತ್ತಮ ಜೀವನಶೈಲಿ, ಅರೋಗ್ಯಕರ ನಡವಳಿಕೆ ಮುಂತಾದ ವಿಷಯಗಳ ಬಗ್ಗೆ ಮಕ್ಕಳಿಗೆ ಮಾಹಿತಿ ಮತ್ತು ಜಾಗೃತಿ ಮೂಡಿಸುವ ಕಾರ್ಯಕ್ರಮವಾಗಿದೆ. ಕಾರ್ಯಕ್ರಮದಲ್ಲಿ ಮಕ್ಕಳು ಮುಕ್ತವಾಗಿ ತಮ್ಮ ಬೇಕು ಬೇಡಿಕೆಗಳು ಮತ್ತು ಸಮಸ್ಯೆಗಳನ್ನು ಹೇಳಿಕೊಳ್ಳುತ್ತಾರೆ ಎಂದು ಹೇಳಿದರು. ಕರ್ನಾಟಕ ಮಕ್ಕಳ ಹಕ್ಕುಗಳ ನಿಗಾ ಕೇಂದ್ರ ಬೆಂಗಳೂರು, ಯುನಿಸೆಫ್ ಜಂಟಿಯಾಗಿ ಕಾರ್ಯಕ್ರಮ ರೂಪಿಸುತ್ತಿದೆ. ನಾವು ಪ್ರತಿಷ್ಠಾನ ಕೊಡಗು ಜಿಲ್ಲೆಯ ಶಾಲೆಗಳ ಜವಾಬ್ದಾರಿ ತೆಗೆದುಕೊಂಡಿದೆ. ಪ್ರಸಕ್ತ ವರ್ಷ ಸೋಮವಾರಪೇಟೆ ತಾಲೂಕಿನ ಆಯ್ದ 5 ಶಾಲೆಗಳಲ್ಲಿ ಈ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದು ಹೇಳಿದರು. ಸರ್ಕಾರಿ ಪ್ರೌಢಶಾಲೆಯ ಎಂಟನೇ ಮತ್ತು ಒಂಬತ್ತನೆ ತರಗತಿ ಮಕ್ಕಳಿಗೆ…
ಲೇಖಕ: admin
ಮಡಿಕೇರಿ NEWS DESK ಅ.31 : ‘ಉಕ್ಕಿನ ಮನುಷ್ಯ’ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸಲಾಯಿತು. ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ಮಡಿಕೇರಿಯಲ್ಲಿ ‘ಏಕತಾ ಯಾತ್ರೆ’ ನಡೆಯಿತು. ನಗರದ ಫೀ.ಮಾ.ಕೆ.ಎಂ.ಕಾರ್ಯಪ್ಪ ವೃತ್ತದಿಂದ ಜನರಲ್ ತಿಮ್ಮಯ್ಯ ವೃತ್ತದವರೆಗೆ ‘ಏಕತಾ ಯಾತ್ರೆ’ ಸಾಗಿತು. ರಾಷ್ಟçದ ಏಕತೆಗೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ನೀಡಿದ ಕೊಡುಗೆಯನ್ನು ಸ್ಮರಿಸುವುದರೊಂದಿಗೆ ಅವರಿಗೆ ಗೌರವ ಸಲ್ಲಿಸಲಾಗುತ್ತಿದೆ ಎಂದು ಪಕ್ಷದ ಪ್ರಮುಖರು ತಿಳಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಾಜಿ ಶಾಸಕರುಗಳಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರಂಜನ್, ಬಿಜೆಪಿ ಮಾಜಿ ಅಧ್ಯಕ್ಷರುಗಳಾದ ರವಿ ಕುಶಾಲಪ್ಪ, ಬಿ.ಬಿ.ಭಾರತೀಶ್, ರಾಬಿನ್ ದೇವಯ್ಯ, ಪ್ರಮುಖರಾದ ನಾಗೇಶ್ ಕುಂದಲ್ಪಾಡಿ, ನಗರಸಭಾ ಸದಸ್ಯರು, ಪಕ್ಷದ ವಿವಿಧ ಘಟಕಗಳ ಪ್ರಮುಖರು ಹಾಗೂ ಕಾರ್ಯಕರ್ತರು ‘ಏಕತಾ ಯಾತ್ರೆ’ಯಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ಅ.30 NEWS DESK : ಭಾರತೀಯ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ಫೆಡರೇಷನ್ ನ ಕರ್ನಾಟಕ ರಾಜ್ಯ ಕಾರ್ಯಾಧ್ಯಕ್ಷರಾಗಿ ಗಣೇಶ್ ನಾಯ್ಡು ಅವರು ನೇಮಕಗೊಂಡಿದ್ದಾರೆ. ಮಜ್ದೂರ್ ಕಾಂಗ್ರೆಸ್ ಫೆಡರೇಷನ್ ನ ರಾಷ್ಟ್ರೀಯ ಅಧ್ಯಕ್ಷ ಸ್ವಾಮಿನಾಥ್ ಜೈಸ್ವಾಲ್ ಅವರ ಅನುಮೋದನೆ ಮತ್ತು ಫೆಡರೇಷನ್ ನ ಕರ್ನಾಟಕ ರಾಜ್ಯಾಧ್ಯಕ್ಷ ನಂದಾ ಎನ್. ಅವರ ಆದೇಶದ ಮೇರೆಗೆ ಗಣೇಶ ನಾಯ್ಡು ಅವರನ್ನು ನೇಮಕ ಮಾಡಲಾಗಿದೆ. ಮಹಿಳೆಯರು, ಹಿಂದುಳಿದ ವರ್ಗ, ಪರಿಶಿಷ್ಟರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ವರ್ಗದ ಜನರನ್ನು ಪಕ್ಷದೆಡೆಗೆ ಸೆಳೆದು ಸದಸ್ಯತ್ವವನ್ನು ಹೆಚ್ಚಿಸಲಾಗುವುದು. ಪಕ್ಷದ ಮುಖಂಡರ ಮಾರ್ಗದರ್ಶನ ಹಾಗೂ ಸ್ಥಳೀಯ ನಾಯಕರ ಸಹಕಾರದೊಂದಿಗೆ ಕಾರ್ಯನಿರ್ವಹಿಸುವುದಾಗಿ ಅವರು ತಿಳಿಸಿದ್ದಾರೆ. ಮೂರ್ನಾಡುವಿನ ಗಣೇಶ್ ನಾಯ್ಡು ಅವರು ಶ್ರೀಯೋಗಿ ನಾರಾಯಣ ಕೊಡಗು ಬಲಿಜ ಸಮಾಜದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಮಡಿಕೇರಿ ಅ.30 NEWS DESK : ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಹೆಚ್ಚುತ್ತಲೇ ಇದೆ, ಪುರುಷರ ಪ್ರಮಾಣ ಸ್ತನ ಕ್ಯಾನ್ಸರ್ ರೋಗಿಗಳಲ್ಲಿ ವಿಶ್ವಾದ್ಯಂತ ಒಂದು ಶೇಕಡಾದಷ್ಟು ಇದ್ದಾರೆ. ಇದರಿಂದಾಗಿ ಜಾಗೃತಿ ಮೂಡಿಸುವಲ್ಲಿ ಮತ್ತು ಸ್ತನ ಸ್ವಯಂ ಪರೀಕ್ಷೆಯನ್ನು ಉತ್ತೇಜಿಸುವಲ್ಲಿ ಪುರುಷರು ಮತ್ತು ಮಹಿಳೆಯರು ಸಮಾನ ಜವಾಬ್ದಾರಿಯನ್ನು ತೆಗೆದುಕೊಳ್ಳುವುದು ಅತ್ಯಗತ್ಯವಾಗಿದೆ. ಪುರುಷರು ಸಕ್ರಿಯವಾಗಿ ಜಾಗೃತಿ ಮೂಡಿಸಿದಾಗ ಮತ್ತು ಸ್ತನ ಸ್ವಯಂ ಪರೀಕ್ಷೆಗಳ ಬಗ್ಗೆ ತಮ್ಮ ಕುಟುಂಬಗಳು ಮತ್ತು ಸಮುದಾಯಗಳಿಗೆ ಶಿಕ್ಷಣ ನೀಡಿದಾಗ, ತನ್ನ ಮನಸ್ಥಿತಿಯನ್ನು ಅರಿಯುವುದರೊಂದಿಗೆ, ಆರಂಭಿಕ ಪತ್ತೆ ಹಚ್ಚುವಿಕೆಯನ್ನು ಉತ್ತೇಜಿಸುತ್ತದೆ ಮತ್ತು ಹೆಚ್ಚುತಿಳುವಳಿಕೆಯುಳ್ಳ ಮತ್ತು ಬೆಂಬಲಿಸುವ ವಾತಾವರಣವನ್ನು ಬೆಳೆಸುತ್ತದೆ. :: ಜೀವನ ಸಂಗಾತಿಯಾಗಿ :: ಜೀವನ ಸಂಗಾತಿಯಾಗಿ, ಸ್ತನ ಕ್ಯಾನ್ಸರ್ ಜಾಗೃತಿಯಲ್ಲಿ ಮನುಷ್ಯನ ಜವಾಬ್ದಾರಿಯು ಭಾವನಾತ್ಮಕ ಬೆಂಬಲವನ್ನು ಒದಗಿಸುವುದು, ಆಗಾಗ್ಗೆ ತಪಾಸಣೆಗಳನ್ನು ಉತ್ತೇಜಿಸುವುದು ಮತ್ತು ಆತಂಕ ಅಥವಾ ಅವಮಾನವಿಲ್ಲದೆ ಆರೋಗ್ಯ ಸಮಸ್ಯೆಗಳನ್ನು ಚರ್ಚಿಸ ಬಹುದಾದ ಮುಕ್ತ ವಾತಾವರಣಕ್ಕೆ ಕೊಡುಗೆ ನೀಡುವುದು. ಸ್ತನ ಸ್ವಯಂ-ಪರೀಕ್ಷೆಗಳ ಬಗ್ಗೆ ಕಲಿಯುವ ಮೂಲಕ ಮತ್ತು ಆರಂಭಿಕ ಪತ್ತೆ ಹಚ್ಚುವಿಕೆಯನ್ನು…
ಮಡಿಕೇರಿ ಅ.30 NEWS DESK : ಜೀವನದ ಕೊನೆಯ ದಿನಗಳನ್ನು ಎಣಿಸುತ್ತಿರುವ ರೋಗಿಗಳಿಗೆ ಸಾಧ್ಯವಾದಷ್ಟು ಉತ್ತಮ ಬದುಕು ನಡೆಸಲು ಅಗತ್ಯವಾದ ಸೇವೆಯನ್ನು ನೀಡುವ ಅಗತ್ಯತೆ ಇದ್ದು, ಈ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸುವ ಅಗತ್ಯತೆ ಇರುವುದಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಕೆ.ಎಂ. ತಿಳಿಸಿದರು. ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್ ಕೊಡಗು ಶಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊಡಗು ಜಿಲ್ಲೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕೊಡಗು ಜಿಲ್ಲೆ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಕೊಡಗು ಶಾಖೆ, ರೋಟರಿ ಮಿಸ್ಟಿ ಹಿಲ್ಸ್ ಮಡಿಕೇರಿ, ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜು ಮಡಿಕೇರಿ ಹಾಗೂ ಸಮುದಾಯದ ಸಹಭಾಗಿತ್ವದಲ್ಲಿ ನಗರದ ಬಾಲ ಭವನದಲ್ಲಿ ಆಯೋಜಿತ ‘ವಿಶ್ವ ಹಾಸ್ಪಿಸ್ ಮತ್ತು ಉಪಶಮನ ಆರೈಕೆ ದಿನಾಚರಣೆ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್ ಸಂಸ್ಥೆಯು ಪ್ರಸ್ತುತ…
ಮಡಿಕೇರಿ NEWS DESK ಅ.30 : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2025- 28ನೇ ಸಾಲಿನ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷರಾಗಿ ಬಾಚರಣಿಯಂಡ ಅನು ಕಾರ್ಯಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಹೆಚ್.ಜೆ.ರಾಕೇಶ್,ಉಪಾಧ್ಯಕ್ಷರಾಗಿ ನವೀನ್ ಸುವರ್ಣ, ವನಿತಾ ಚಂದ್ರಮೋಹನ್, ಎ.ಎನ್.ವಾಸು, ಕಾರ್ಯದರ್ಶಿಗಳಾಗಿ ಮಲ್ಲಿಕಾರ್ಜುನ, ರಿಜ್ವಾನ್ ಹುಸೇನ್, ಚೆರಿಯಮನೆ ಸುರೇಶ್ ಆಯ್ಕೆಯಾಗಿದ್ದಾರೆ. ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರು, ರಾಜ್ಯ ಉಪಾಧ್ಯಕ್ಷರಾಗಿ ಅಜ್ಜಮಾಡ ರಮೇಶ್ ಕುಟ್ಟಪ್ಪ ಹಾಗೂ ರಾಜ್ಯ ಸಮಿತಿ ಸದಸ್ಯರಾಗಿ ಸವಿತಾ ರೈ ಆಯ್ಕೆಗೊಂಡಿದ್ದಾರೆ.
ಮಡಿಕೇರಿ NEWS DESK ಅ.30 : ಬ್ರಿಟಿಷರ ವಿರುದ್ಧ ಹೋರಾಡಿ ವೀರಮರಣವನ್ನಪ್ಪಿದ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣಾ ದಿನಾಚರಣೆ ಅ.31ರಂದು ಮಡಿಕೇರಿಯಲ್ಲಿ ನಡೆಯಲಿದ್ದು, ಸರ್ವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕಾರುಗುಂದ, ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಕಡ್ಲೆರ ತುಳಸಿ ಮೋಹನ್ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶುಕ್ರವಾರ ಬೆಳಿಗ್ಗೆ 9.30 ಗಂಟೆಗೆ ನಗರದ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಇರುವ ಸ್ಮಾರಕ ಸ್ಥಳದಲ್ಲಿ ಸ್ವಾತಂತ್ರ್ಯ ಹೋರಾಟಗಾರನಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಲಾಗುವುದು ಮತ್ತು ಕೋಟೆ ಆವರಣದಲ್ಲಿ ಸಂಸ್ಮರಣಾ ದಿನದ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ. ಜಿಲ್ಲೆಯ ಸರ್ವ ಅರೆಭಾಷೆ ಗೌಡ ಬಂಧುಗಳು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವೀರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರಿಗೆ ಗೌರವ ಅರ್ಪಿಸಬೇಕೆಂದು ಮನವಿ ಮಾಡಿದ್ದಾರೆ. 1857ರಲ್ಲಿ ನಡೆದ ಸಿಪಾಯಿ ದಂಗೆಯನ್ನು ಮೊದಲ ಸ್ವಾತಂತ್ರ ಸಂಗ್ರಾಮ ಎಂದು ಗುರುತಿಸಲಾಗಿದೆ. ಆದರೆ ಅದಕ್ಕೂ ಮೊದಲೇ ಕೊಡಗು, ದಕ್ಷಿಣ ಕನ್ನಡ ಭಾಗದಲ್ಲಿ ಬ್ರಿಟಿಷರ…
ಪಾಲಿಬೆಟ್ಟ ಅ.30 NEWS DESK : ಪಾಲಿಬೆಟ್ಟ ಚೆಶೈರ್ ಹೋಮ್ಸ್ ಇಂಡಿಯಾ ಕೂರ್ಗ್ ವಿಶೇಷ ಶಾಲೆಯ ಬೆಳ್ಳಿ ಹಬ್ಬದ ಕಾರ್ಯಕ್ರಮದಲ್ಲಿ ಪಾಲಿಬೆಟ್ಟದ ವಿಶೇಷ ಶಾಲೆಯ ಮುಖ್ಯೋಪಾಧ್ಯಾಯ ಶಿವರಾಜ್ ಅವರನ್ನು ಭಾರತೀಯ ಕಾಮೆಂಟೇಟರ್ ಹಾಗೂ ಪ್ರೊ ಕಬಡ್ಡಿ ಲೀಗ್ ನ ನಿರ್ದೇಶಕರಾಗಿರುವ ಚಾರು ಶರ್ಮಾ ಹಾಗೂ ಚೆಶೈರ್ ಹೋಮ್ ನ ಪದಾಧಿಕಾರಿಗಳು ಸನ್ಮಾನಿಸಿ, ಗೌರವಿಸಿದರು.
ಮಡಿಕೇರಿ ಅ.30 NEWS DESK : ಅರೆಭಾಷಿಕ ಗೌಡ ಜನಾಂಗದ ಶಾಸಕರ ಅಭಿಮಾನಿಗಳ ವತಿಯಿಂದ ಭಾಗಮಂಡಲದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಲಾಯಿತು. ಪವಿತ್ರ ಕಾವೇರಿ ತುಲಾ ಸಂಕ್ರಮಣ ಸಂದರ್ಭ ಶಾಸಕರು ಅತ್ಯಂತ ಅಚ್ಚುಕಟ್ಟಾಗಿ, ಸೌಹಾರ್ದಯುತವಾಗಿ ಎಲ್ಲಾ ಜನಾಂಗದವರು ತಾಯಿ ಕಾವೇರಿ ತೀರ್ಥ ಸ್ವರೂಪಿಣಿಯಾಗಿ ಉಗಮಿಸುವುದನ್ನು ವೀಕ್ಷಿಸಲು ವ್ಯವಸ್ಥೆ ಕಲ್ಪಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು. ಸ್ಥಳೀಯ ಹಾಗೂ ಸುತ್ತಮುತ್ತಲಿನ ಅರೆಭಾಷಿಕ ಗೌಡ ಜನಾಂಗದ ಶಾಸಕರ ಅಭಿಮಾನಿಗಳು ನೂರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕರು, ನಮ್ಮ ನಾಡು ಸುಖ-ಶಾಂತಿ, ಸಮೃದ್ಧಿ ಹಾಗೂ ಸೌಹಾರ್ದತೆಯಿಂದ ಇರಬೇಕಾದರೆ ಎಲ್ಲರೂ ಒಂದೇ ಎಂಬ ಭಾವನೆಯಿಂದ ಪರಸ್ಪರ ಸೌಹಾರ್ದತೆಯಿಂದ ಎಲ್ಲಾ ಕೆಲಸ ಕಾರ್ಯಗಳನ್ನು ಮಾಡಬೇಕು. ತಾಯಿ ಕಾವೇರಿಯ ಆಶೀರ್ವಾದ ಎಲ್ಲರ ಮೇಲಿರಬೇಕೆಂದರೆ ಎಲ್ಲರೂ ತಾಯಿಯ ಇಚ್ಛೆಯಂತೆ ನಾಡಿನ ಒಳಿತಿಗಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಡಿಸಿಸಿ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್, ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್,…
ಸಿದ್ದಾಪುರ ಅ.30 NEWS DESK : ಪಾಲಿಬೆಟ್ಟ ಚೆಶೈರ್ ಹೋಮ್ಸ್ ವಿಶೇಷ ಶಾಲೆಯ ಬೆಳ್ಳಿ ಹಬ್ಬ ಆಚರಣೆಯು ಶಾಲೆಯ ಆವರಣದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು. ಭಾರತೀಯ ಕ್ರೀಡಾ ವಿವರಣೆಗಾರ ಹಾಗೂ ಪ್ರೋ ಕಬಡ್ಡಿ ಲೀಗ್ ನಿರ್ದೇಶಕ ಚಾರು ಶರ್ಮಾ ಬೆಳ್ಳಿ ಹಬ್ಬದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ವಿಶೇಷ ಚೇತನ ವಿದ್ಯಾರ್ಥಿಗಳನ್ನು ಗುರುತಿಸಿ ಪುನರ್ವಸತಿ ಕಲ್ಪಿಸುವ ಮೂಲಕ ಶಿಕ್ಷಣದೊಂದಿಗೆ ಉತ್ತಮ ಭವಿಷ್ಯ ರೂಪಿಸಲು ಸೇವಾ ಮನೋಭಾವದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಪಾಲಿಬೆಟ್ಟದ ಚೆಶೈರ್ ಹೋಮ್ಸ್ ಬೆಳ್ಳಿ ಹಬ್ಬ ಸಂಭ್ರಮದಲ್ಲಿರುವುದು ಸಂತಸ ತಂದಿದೆ. ಸಂಕಷ್ಟದಲ್ಲಿರುವವರಿಗೆ ನೆರವಾಗುವ ಮೂಲಕ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸುವುದರೊಂದಿಗೆ ಸ್ವಉದ್ಯೋಗದ ಮೂಲಕ ಸಾವಲಂಬಿ ಜೀವನ ನಡೆಸಲು ಸಹಕಾರ ನೀಡುವುದರೊಂದಿಗೆ ಮಾದರಿ ವಿಶೇಷ ಚೇತನರ ಶಾಲೆಯನ್ನಾಗಿಸಿ ಮನೆಯ ಮಕ್ಕಳಂತೆ ಕಲಿಸಿ ಪ್ರೋತ್ಸಾಹಿಸುತ್ತಿರುವುದು ಹೆಮ್ಮೆಯ ವಿಷಯ. ಮಕ್ಕಳ ಮುಂದಿನ ಭವಿಷ್ಯ ರೂಪಿಸಲು ಎಲ್ಲರೂ ಪ್ರೋತ್ಸಾಹ ನೀಡಬೇಕಾಗಿದೆ ಎಂದರು. ಚೆಶೈರ್ ಹೋಮ್ಸ್ ಶಾಲೆಯ ಮುಖ್ಯಸ್ಥೆ ಗೀತಾ ಚಂಗಪ್ಪ ಮಾತನಾಡಿ, 6 ಮಕ್ಕಳಿಂದ ಪ್ರಾರಂಭವಾದ…






