ಸಿದ್ದಾಪುರ ಅ.30 NEWS DESK : ವಿನೂತನವಾಗಿ ತಣಲ್ ಸಂಸ್ಥೆ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವುದು ನಿಜವಾಗಿಯೂ ಶ್ಲಾಘನೀಯ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು. ಸಿದ್ದಾಪುರದ ತಣಲ್ ಸಂಸ್ಥೆ ವತಿಯಿಂದ ಬಡ ಕಿಡ್ನಿ ರೋಗಿಗಳಿಗೆ ಡಯಾಲಿಸಿಸ್ ಮಾಡಲು ಸಹಾಯಾರ್ಥವಾಗಿ ಮಾಡುತ್ತಿರುವ ಬಿರಿಯಾನಿ ಚಾಲೆಂಜ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಇತ್ತೀಚೆಗೆ ಕಿಡ್ನಿರೋಗದಿಂದ ಬಳಲುತ್ತಿರುವವವರು ಹೆಚ್ಚಾಗಿದ್ದು ಎಲ್ಲರಿಗೂ ಡಯಾಲಿಸಿಸ್ ಮಾಡುವುದು ಅಸಾಧ್ಯವಾಗಿದೆ. ಈ ನಡುವೆ ಬಡವರಿಗಾಗಿ ತಣಲ್ ಸಂಸ್ಥೆ ಕಡಿಮೆ ವೆಚ್ಚದಲ್ಲಿ ಹಾಗೂ ಇನ್ನೂ ಕೆಲವರಿಗೆ ಉಚಿತವಾಗಿ ಮಾಡುತ್ತಿರುವುದು ಉತ್ತಮ ಕಾರ್ಯವಾಗಿದೆ.ಇತ್ತೀಚೆಗೆ ತಣಲ್ ಸಂಸ್ಥೆ ಬಿರಿಯಾನಿಚಾಲೆಂಜ್ ಎಂಬ ವಾಕ್ಯದೊಂದಿಗೆ ಸಾರ್ವಜನಿಕರಿಗೆ ಬಿರಿಯಾನಿ ನೀಡುವ ಮೂಲಕ ಅದರಿಂದ ಬರುವ ಹಣದಿಂದ ಬಡ ರೋಗಿಗಳ ಚಿಕಿತ್ಸೆಗೆ ನೆರವಾಗುತ್ತಿರುವ ಮೂಲಕ ಸಂಘಟನೆಯು ನಿಜವಾದ ಸೇವೆಯನ್ನು ನೀಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಜನಪ್ರತಿನಿಧಿಗಳು, ಸಮಾಜ ಸೇವಕರು, ದಾನಿಗಳು, ಗಣ್ಯರು ಹಾಜರಿದ್ದರು. :: ಏನಿದು ಬಿರಿಯಾನಿ ಚಾಲೆಂಜ್….! :: ಕಡಿಮೆ ವೆಚ್ಚದಲ್ಲಿ…
ಲೇಖಕ: admin
ಮಡಿಕೇರಿ ಅ.30 NEWS DESK : ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ದಿ ನಿಗಮ(ನಿ)ವತಿಯಿಂದ 2025-26ನೇ ಸಾಲಿನ ಕ್ರಿಶ್ಚಿಯನ್ ಜನಾಂಗದವರಿಗೆ ಶ್ರಮ ಶಕ್ತಿ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ಶ್ರಮಶಕ್ತಿ ವಿಶೇಷ ಮಹಿಳಾ ಯೋಜನೆ, ಗಂಗಾ ಕಲ್ಯಾಣ ಯೋಜನೆಗೆ ಸಾಲ ಮತ್ತು ಸಹಾಯಧನ ಹಾಗೂ ವ್ಯಾಪಾರ ಮತ್ತು ಉದ್ಯಮಗಳಿಗೆ ನೇರ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ಮಹಿಳಾ ಸ್ವ ಸಹಾಯ ಸಂಘ ಗುಂಪುಗಳಿಗೆ ಸಹಾಯಧನವನ್ನು ನೀಡಲಾಗುತ್ತದೆ. ಸಾಲ ಹಾಗೂ ಸಹಾಯಧನವನ್ನು ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ವೆಬ್‍ಸೈಟ್: https://kccdclonline.karnataka.gov.in/ ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ “ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ಮೌಲಾನಾ ಅಜಾದ್ ಭವನ, ಗ್ರಾಮಾಂತರ ಪೋಲೀಸ್ ಠಾಣೆ ಹತ್ತಿರ, ಎಫ್‍ಎಂಸಿ ಕಾಲೇಜು ರಸ್ತೆ, ಮಡಿಕೇರಿ ಇಲ್ಲಿಗೆ ಭೇಟಿ ನೀಡಬಹುದು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ನ.26 ಕೊನೆಯ ದಿನವಾಗಿದೆ. ಕಚೇರಿಯಿಂದ ಸಂಪರ್ಕಿಸುವ ಮೊದಲು ಸಲ್ಲಿಸಿರುವ…
ಮಡಿಕೇರಿ ಅ.30 NEWS DESK : ಕೂರ್ಗ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕೊಡಗು ಪದವಿ ಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಸರ್ವದೈವತ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ವಿಜೇತರಾಗುವ ಮೂಲಕ ಸತತವಾಗಿ ನಾಲ್ಕನೇ ಬಾರಿಗೆ ರಾಜ್ಯಮಟ್ಟಕ್ಕೆ ಲಗ್ಗೆಯಿಟ್ಟಿದೆ. ಈ ಪಂದ್ಯಾವಳಿಯಲ್ಲಿ ವಿರಾಜಪೇಟೆ ತಾಲ್ಲೂಕನ್ನು ಪ್ರತಿನಿಧಿಸಿದ ಸರ್ವದೈವತ ಪಿ.ಯು.ಕಾಲೇಜಿನ ಬಾಲಕರ ತಂಡ, ಉತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕ ಪ್ರಮೋದ್ ಗೌಡ ವಿದ್ಯಾರ್ಥಿಗಳಿಗೆ ತರಬೇತಿ ಹಾಗೂ ಮಾರ್ಗದರ್ಶನ ನೀಡಿದರು. ಈ ಸಾಧನೆಗೆ ಕಾಲೇಜು ಪ್ರಾಂಶುಪಾಲರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಅಭಿನಂದನೆಗಳನ್ನು ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ಅ.30 NEWS DESK : ಭಾಗಮಂಡಲದ ಭಗಂಡೇಶ್ವರ ಹಾಗೂ ತಲಕಾವೇರಿ ದೇವಾಲಯದ ಹುಂಡಿ ಎಣಿಕೆ ಭಗಂಡೇಶ್ವರ ದೇವಾಲಯದಲ್ಲಿ ನಡೆಯಿತು. ಬೆಳಿಗ್ಗೆ 8 ಗಂಟೆಯಿಂದ ಆರಂಭಿಸಿ ಸಂಜೆ 5.30ರ ವರೆಗೆ ನಿರಂತರವಾಗಿ 25 ಮಂದಿ ಹುಂಡಿ ಹಣ ಎಣಿಕೆ ಕಾರ್ಯ ಕೈಗೊಂಡರು. ಅ.17 ರಂದು ಜರುಗಿದ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಯ ನಂತರ ಪ್ರಥಮ ಹುಂಡಿ ಎಣಿಕೆಯನ್ನು ಭಾಗಮಂಡಲ ಕೆನರಾ ಬ್ಯಾಂಕ್ ಸಿಬ್ಬಂದಿ, ಭಾಗಮಂಡಲ ಆರಕ್ಷಕ ಠಾಣಾ ಸಿಬ್ಬಂದಿಯವರು, ದೇವಾಲಯದ ಕಾರ್ಯನಿರ್ವಾಹಣಾಧಿಕಾರಿಗಳು, ತಕ್ಕಮುಖ್ಯಸ್ಥರು ಮತ್ತು ಸಿಬ್ಬಂದಿಯವರು ಮತ್ತು ಸ್ವಯಂ ಸೇವಕರು ಹಾಗೂ ಭಾಗಮಂಡಲ ಕಂದಾಯ ಇಲಾಖೆ ಸಿಬ್ಬಂದಿ ಸಮಕ್ಷಮ ವೀಡಿಯೋ ಚಿತ್ರೀಕರಣದೊಂದಿಗೆ ಹುಂಡಿ ಎಣಿಕೆಯನ್ನು ನಡೆಸಲಾಯಿತು. ಈ ವರ್ಷ ರೂ. ಹದಿನೆಂಟು ಲಕ್ಷದ ಐದು ಸಾವಿರ ಮೊತ್ತ ಸಂಗ್ರಹವಾಗಿದೆ. ಶ್ರೀ ತಲಕಾವೇರಿ ದೇವಾಲಯದಲ್ಲಿ ರೂ. 7,27,389, ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ರೂ. 5,44,333, ಅನ್ನ ಸಂತರ್ಪಣಾ ನಿಧಿ ಯಲ್ಲಿ ರೂ. 2,52,867 ಹಾಗೂ ಇ-ಹುಂಡಿಯಲ್ಲಿ ರೂ.…
ಮಡಿಕೇರಿ ಅ.30 NEWS DESK : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಹಾಗೂ ಸ್ನೇಹಾಶ್ರಯ ಯೂತ್ ಟ್ರಸ್ಟ್ ಇವರ ಸಂಯುಕ್ತ ಆಶ್ರಯದಲ್ಲಿ ಮಾನಸಿಕ ರೋಗಿಗಳಿಗಾಗಿ ‘ಮಾನಸಧಾರ’ ಮಾನಸಿಕ ರೋಗಿಗಳ ಹಗಲು ಆರೈಕೆ ಕೇಂದ್ರದ ವತಿಯಿಂದ ನಗರದ ರಾಣಿಪೇಟೆ ಗೆಜ್ಜೆಸಂಗಪ್ಪ ಕಲ್ಯಾಣ ಮಂಟಪದ ಎದುರು ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಉಚಿತವಾಗಿ ನುರಿತ ಮಾನಸಿಕ ವೈದ್ಯರಿಂದ ಮಾನಸಿಕ ರೋಗಿಗಳಿಗೆ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ. ನುರಿತ ಮನೋ ಚಿಕಿತ್ಸಕರಿಂದ ರೋಗಿಗಳಿಗೆ ಹಾಗೂ ಕುಟುಂಬದವರಿಗೆ ಮೂರು ಹಂತದಲ್ಲಿ ಆಪ್ತ ಸಮಾಲೋಚನೆ ನಡೆಸಿ ಧೈರ್ಯ ಮತ್ತು ಆತ್ಮವಿಶ್ವಾಸ ಮೂಡಿಸಿ ಮುಖ್ಯವಾಹಿನಿಗೆ ತರುವಲ್ಲಿ ಶ್ರಮಿಸಲಾಗುತ್ತದೆ. ವೃತ್ತಿಪರ ತರಬೇತಿಗಳಾದ ಚಿತ್ರಕಲೆ, ಪೈಲ್ ತಯಾರಿಕೆ, ಪೇಪರ್ ಕವರ್ ತಯಾರಿಕೆ, ಗೊಂಬೆ ತಯಾರಿಕೆ, ಬುಟ್ಟಿ ಹೆಣೆಯುವುದು, ಮೇಣದ ಬತ್ತಿ ತಯಾರಿಸುವುದು, ಕಸೂತಿ, ಕರಕುಶಲ ವಸ್ತುಗಳನ್ನು ತಯಾರಿಸುವ ವಿಧಾನವನ್ನು ಹೇಳಿಕೊಡಲಾಗುತ್ತದೆ. ಭಜನೆ, ಯೋಗ, ಪ್ರಾಣಯಾಮ, ಆಧ್ಯಾತ್ಮ, ಮನೋರಂಜನೆ, ಆಟ ಇನ್ನಿತರ ಚಟುವಟಿಕೆಗಳನ್ನು ಹೇಳಿ ಕೊಡಲಾಗುತ್ತದೆ. ನೋಂದಣಿಯಾದ ಮಾನಸಿಕ ರೋಗಿಗಳಿಗೆ…
ಮಡಿಕೇರಿ ಅ.30 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕುಶಾಲನಗರ ತಾಲ್ಲೂಕು ಘಟಕ ಮತ್ತು ಹೋಬಳಿ ಘಟಕಗಳ ಜಂಟಿ ಸಭೆಯು ಅ.31 ರಂದು ನಡೆಯಲಿದೆ. ಅಂದು ಸಂಜೆ 4.30 ಗಂಟೆಗೆ ತಾಲ್ಲೂಕು ಕಸಾಪ ಅಧ್ಯಕ್ಷ ಕೆ.ಎಸ್.ನಾಗೇಶ್ ಅಧ್ಯಕ್ಷತೆಯಲ್ಲಿ ಪ್ರವಾಸಿ ಮಂದಿರದಲ್ಲಿ ಜರುಗಲಿದೆ. ಜಿಲ್ಲಾಧ್ಯಕ್ಷ ಕೇಶವಕಾಮತ್, ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮದ್, ರೇವತಿ ರಮೇಶ್, ಕೋಶಾಧಿಕಾರಿ ಸಂಪತ್, ಜಿಲ್ಲಾ ನಿರ್ದೇಶಕರಾದ ಹಂಚಿಟೀರಾ ಪ್ಯಾನ್ಸಿ ಮುತ್ತಣ್ಣ, ವೆಂಕಟ್ ನಾಯಕ್ ಮತ್ತಿತ್ತರ ಪ್ರಮುಖರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ಕಾರ್ಯದರ್ಶಿ ಎಸ್.ನಾಗರಾಜ್ ತಿಳಿಸಿದ್ದಾರೆ.
ಮಡಿಕೇರಿ ಅ.30 NEWS DESK : ನಾಪೋಕ್ಲು ಹಾಗೂ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಪ್ರಮುಖರ ಸಭೆಯು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಗೃಹ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಪಕ್ಷ ಸಂಘಟನೆ, ಮುಂಬರುವ ಚುನಾವಣೆಗಳು ಹಾಗೂ ಹಲವು ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಯಿತು. ಶಾಸಕರು ಸಂಘಟನೆಯ ಕುರಿತು ವಿಶೇಷ ಆಸಕ್ತಿ ವಹಿಸುವಂತೆ ಕರೆ ನೀಡಿದರಲ್ಲದೇ, ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ಪ್ರತಿಶತ ನಿಭಾಯಿಸಲೇಬೇಕೆಂದು ಸೂಚಿಸಿದರು. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ವಹಿಸಿದರು. ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ವಿರಾಜಪೇಟೆ ಅಧ್ಯಕ್ಷ ರಂಜಿ ಪೂಣಚ್ಚ,ಕೆಪಿಸಿಸಿ ಸದಸ್ಯ ಬೇಕಲ್ ರಮಾನಾಥ್, ಡಿಸಿಸಿ ಉಪಾಧ್ಯಕ್ಷರಾದ ಅಬ್ದುಲ್ ರೆಹಮಾನ್, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು ಹನೀಫ್, ವಿರಾಜಪೇಟೆ ತಾಲೂಕು ಬಗರ್ ಹುಕುಂ ಅಧ್ಯಕ್ಷರು ಸಲಾಂ, ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷರು ಜಮ್ಮಡ ಸೋಮಣ್ಣ ಮಹಿಳಾ ಕಾಂಗ್ರೆಸ್ ಪ್ರಮುಖರು ಶೈಲಾ ಕುಟ್ಟಪ್ಪ, ಮಡಿಕೇರಿ ತಾಲೂಕು ಬಗರ್ ಹುಕುಂ ಅಧ್ಯಕ್ಷರು…
ಮಡಿಕೇರಿ ಅ.30 NEWS DESK : ವಿರಾಜಪೇಟೆ ಪುರಸಭೆ ವತಿಯಿಂದ ಮುಖ್ಯಮಂತ್ರಿಗಳ ಅಮೃತ್ ನಗರೋತ್ಥಾನಯೋಜನೆಯ ಹಂತ -04 ರಡಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿ ನಿಲಯಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅಗತ್ಯ ಕಿಟ್‌ಗಳನ್ನು ವಿತರಿಸಿದರು. ಈ ಸಂದರ್ಭ ವಿರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಉಪಾಧ್ಯಕ್ಷೆ ಫಸಿಯಾ ತಬ್ಸುಂ, ಪುರಸಭೆ ಸದಸ್ಯರು ರಾಫಿ, ಮತೀನ್,ಬೆನ್ನಿ ಆಗಷ್ಟಿನ್, ರಾಜೇಶ್, ಹಮೀದ್, ಪುರಸಭೆ ಮುಖ್ಯಧಿಕಾರಿ ನಾಚಪ್ಪ, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ ಅ.30 NEWS DESK : ಪೊನ್ನಂಪೇಟೆ ತಾಲ್ಲೂಕು ಬಿ.ಶೆಟ್ಟಿಗೇರಿಯ ಕೂಟಿಯಾಲ ಸೇತುವೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಪರಿಶೀಲಿಸಿದರು. ಕೂಟಿಯಾಲ ರಸ್ತೆ ಹಾಗೂ ಸೇತುವೆ ವಿಷಯ ಈಗಾಗಲೇ ನ್ಯಾಯಾಲಯದಲ್ಲಿದ್ದು, ಇದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕೆಂದು ಸಾರ್ವಜನಿಕರ ಬೇಡಿಕೆಯ ಮೇರೆಗೆ ಶಾಸಕರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ತೆರಳಿದರು. ಅಲ್ಲಿ ಅಧಿಕಾರಿಗಳೊಂದಿಗೆ ಸುಧೀರ್ಘವಾಗಿ ಚರ್ಚಿಸಿದ ಬಳಿಕ ಪರ್ಯಾಯ ಮಾರ್ಗ ಒದಗಿಸುವ ಬಗ್ಗೆ ಚರ್ಚಿಸಲಾಯಿತು. ಎಲ್ಲವನ್ನು ಕೂಲಂಕುಶವಾಗಿ ಪರಿಶೀಲಿಸಿ ಅತಿ ಶೀಘ್ರದಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಾಸಕರು ಭರವಸೆ ನೀಡಿದರು. ಈ ಸಂದರ್ಭ ಬಗರ್ ಹುಕುಂ ತಾಲೂಕು ಅಧ್ಯಕ್ಷ ಲಾಲಾ ಅಪ್ಪಣ್ಣ, ಪಂಚಾಯಿತಿ ಅಧ್ಯಕ್ಷ ಕೊಲ್ಲಿರ ಬೋಪಣ್ಣ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರ ಉಮೇಶ್ ಕೇಚಮಯ್ಯ, ರೋಹಿತ್, ಅನು, ಅಯ್ಯಪ್ಪ, ಜಗನ್, ರಾಜ, ಈರಪ್ಪ, ನಂದ, ಅಣ್ಣಳಮಾಡ ಹರೀಶ್, ಕುಪ್ಪಣ್ಣಮಾಡ ಪ್ರೀತಮ್, ಜೀತು, ರಶೀದ್, ಅರಣ್ಯ ಇಲಾಖೆಯ ಅಧಿಕಾರಿಗಳು, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ನಾಪೋಕ್ಲು ಅ.30 NEWS DESK : ಮೂರ್ನಾಡು ಮಾರುತಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿನಿ ಬಿ.ಸಿ.ಅನುಶಿಕ ಬೋಜಮ್ಮ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪದವಿ ಪೂರ್ವ ಶಿಕ್ಷಣ ಇಲಾಖೆ ಕೊಡಗು ಜಿಲ್ಲೆ, ಗೋಣಿಕೊಪ್ಪ ಕಾಪ್ಸ್ ಪದವಿ ಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಗೋಣಿಕೊಪ್ಪ ಮತ್ತು ಪೆÇನ್ನಂಪೇಟೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಿ.ಸಿ.ಅನುಶಿಕ ಬೋಜಮ್ಮ ಎತ್ತರ ಜಿಗಿತ (High jump) ನಲ್ಲಿ ಪ್ರಥಮ ಸ್ಥಾನ ಮತ್ತು ಜಾವಲಿನ್ ಎಸೆತ (Javelin Throw) ದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ವಿದ್ಯಾ ಸಂಸ್ಥೆ ಗೆ ಕೀರ್ತಿ ತಂದಿದ್ದಾಳೆ. ಅನುಶಿಕ ಬೋಜಮ್ಮ ಮೂರ್ನಾಡಿನ ಬಡುವಂಡ ಚಂಗಪ್ಪ-ಸುಶೀಲ ಚಂಗಪ್ಪ ದಂಪತಿಯ ಪುತ್ರಿ. ವರದಿ : ದುಗ್ಗಳ ಸದಾನಂದ.






