ಮಡಿಕೇರಿ, NEWS DESK ಸೆ.8: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕೈಬುಲಿರ ಪಾರ್ವತಿ ಬೋಪಯ್ಯ ಅವರು ಸ್ಥಾಪಿಸಿರುವ ದಿ. ಕೈಬುಲಿರ ಬೋಪಯ್ಯ ಜ್ಞಾಪಕಾರ್ಥ ದತ್ತಿನಿಧಿ ಕಾರ್ಯಕ್ರಮದ ಅಂಗವಾಗಿ ಕೊಡಗು ಜಿಲ್ಲೆಯ ಪದವಿ ಹಾಗೂ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಸಕ್ತಿ ಬೆಳೆಸುವುದರೊಂದಿಗೆ ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯ ಪರಿಚಯ ಮಾಡಿಕೊಡುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ತಿಳಿಸಿದೆ. ಕೊಡಗು ಜಿಲ್ಲೆಯ ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಒಂದು ಕಾಲೇಜಿನಿಂದ ಗರಿಷ್ಠ ಇಬ್ಬರು ವಿದ್ಯಾರ್ಥಿಗಳು ಭಾಗವಹಿಸಲು ಅವಕಾಶವಿದೆ. ಸ್ಪರ್ಧಾರ್ಥಿಗಳು ಕೆಳಗಿನ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯದ ಕುರಿತು ಎರಡು ಪುಟ ಮೀರದಂತೆ ಸ್ವಹಸ್ತದಿಂದ ಪ್ರಬಂಧ ಬರೆದು, ಸೆ.15, 2026ರೊಳಗೆ ಸಲ್ಲಿಸಬೇಕು. ಪ್ರಬಂಧದ ವಿಷಯಗಳು: 1. ಕನ್ನಡ ಸಾಹಿತ್ಯದಲ್ಲಿ ಸ್ತ್ರೀ ಸಂವೇದನೆ 2. ಸಾಹಿತ್ಯ ಮತ್ತು ಸಮಾಜ 3.…
ಲೇಖಕ: admin
ಮಡಿಕೇರಿ, NEWS DESK ಸೆ.8 : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ವಿಡಿಯೋದ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಆತನನ್ನು ರಾಜ್ಯದಿಂದ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಮಂಗಳವಾರ ಮಡಿಕೇರಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಒಕ್ಕೂಟದ ಪ್ರಮುಖ ಮೋಹನ್ ಮೌರ್ಯ ಅವರು ಮಾತನಾಡಿ ಸಮಾಜದ ಕೆಳಸ್ತರದ ಬಡ ಹಾಗೂ ಹಿಂದುಳಿದ ಜನರ ಧ್ವನಿಯಾಗಿ, ಅವರಿಗೆ ಸಮಾನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಹೋರಾಟ ರೂಪಿಸಿದ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ಪ್ರಕಟಿಸಿರುವ ಮಂಡ್ಯದ ವೇದಮೂರ್ತಿ ಎಂಬ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಈ ಸಂಬಂಧ ಈಗಾಗಲೇ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿರುವುದಾಗಿ ತಿಳಿಸಿದರು. ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಮಾತನಾಡಿ, ಸಂವಿಧಾನದ…
ಮಡಿಕೇರಿ, NEWS DESK ಸೆ.8 : ಕೊಡಗು ಜಿಲ್ಲೆ ಶೇ.93ರಷ್ಟು ಸಾಕ್ಷರತೆ ಸಾಧಿಸಿದ್ದು, ಕೆಲವೇ ದಿನಗಳಲ್ಲಿ ಜಿಲ್ಲೆಯನ್ನು ‘ಸಂಪೂರ್ಣ ಸಾಕ್ಷರತಾ ಜಿಲ್ಲೆ’ ಎಂದು ಘೋಷಿಸಲಾಗುವುದು ಎಂದು ಜಿಲ್ಲಾ ಸಾಕ್ಷರತಾ ನೋಡಲ್ ಅಧಿಕಾರಿ ಡಾ. ಹೇಮಂತ್ ರಾಜ್ ಹೇಳಿದರು. ಕುಶಾಲನಗರದ ಪಿ.ಎಂ.ಶ್ರೀ ಶಾಲೆಯಲ್ಲಿ ಮಂಗಳವಾರ ನಡೆದ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಹಾಗೂ ನವಸಾಕ್ಷರರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಸಾಕ್ಷರತಾ ಕ್ಷೇತ್ರದಲ್ಲಿ ಕೊಡಗು ಜಿಲ್ಲೆ ಉತ್ತಮ ಸಾಧನೆ ಮಾಡಿರುವುದು ಹೆಮ್ಮೆಯ ಸಂಗತಿ ಎಂದರು. ಕರ್ನಾಟಕದಲ್ಲಿ ಸಾಕ್ಷರತಾ ಪ್ರಮಾಣ ಶೇ.54ರಿಂದ ಆರಂಭವಾಗಿ ಇದೀಗ ಶೇ.75ಕ್ಕೆ ತಲುಪಿದೆ. ಇದರಲ್ಲಿ ಕೊಡಗು ಜಿಲ್ಲೆ ಶೇ.93ರಷ್ಟು ಸಾಕ್ಷರತೆ ಸಾಧಿಸಿರುವುದು ಗಮನಾರ್ಹ ಸಾಧನೆಯಾಗಿದೆ. ಸಾಕ್ಷರತಾ ಕಾರ್ಯಕ್ರಮದ ಮೂಲಕ ಅಕ್ಷರಜ್ಞಾನದಿಂದ ವಂಚಿತರಾಗಿರುವವರನ್ನು ಮುಖ್ಯವಾಹಿನಿಗೆ ತರುವುದು ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು. ನವಸಾಕ್ಷರರು ಕೇವಲ ತಮ್ಮ ಹೆಸರನ್ನು ಬರೆಯಲು ಅಥವಾ ಸಹಿ ಮಾಡಲು ಕಲಿತರೆ ಸಾಲದು. ದೇಶದ ಅಭಿವೃದ್ಧಿಗೆ ನೆರವಾಗುವಂತಹ ಶಿಕ್ಷಣ ಮತ್ತು ಜ್ಞಾನವನ್ನು ಪಡೆದುಕೊಳ್ಳಬೇಕು. ಜನರು ಸಾಕ್ಷರರಾಗುವುದರ ಜೊತೆಗೆ ಅವರ ಬದುಕಿಗೆ ಅಕ್ಷರಜ್ಞಾನ ಬೆಳಕಾಗಬೇಕು.…
ಸುಂಟಿಕೊಪ್ಪ, NEWS DESK ಸೆ. 8: ಯೇಸುಕ್ರಿಸ್ತರ ತಾಯಿ ಕನ್ಯಾಮಾತೆ ಮರಿಯಮ್ಮನವರ ಜನ್ಮದಿನದ ಅಂಗವಾಗಿ ಆಚರಿಸಲಾಗುವ ಮೊಂತಿಪೆಸ್ತ್ (ತೆನೆಹಬ್ಬ)ವನ್ನು ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದಲ್ಲಿ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ಸಂತ ಅಂತೋಣಿ ದೇವಾಲಯದಲ್ಲಿ ಬೆಳಿಗ್ಗೆ 7.30ರಿಂದ ವಿಶೇಷ ಪ್ರಾರ್ಥನೆ ಹಾಗೂ ಅಡಂಬರ ದಿವ್ಯ ಬಲಿಪೂಜೆ ನೆರವೇರಿತು. ಮಡಿಕೇರಿ ಸಂತ ಮರಡಿಯೂರು ದೇವಾಲಯದ ಧರ್ಮಗುರು ರೇ. ಫಾ. ಜಾರ್ಜ್ ದೀಪಕ್, ಮೈಸೂರಿನ ಧರ್ಮಕೇಂದ್ರದ ಧರ್ಮಗುರು ರೇ. ಫಾ. ಸಿಲ್ವೆಮುತ್ತು ಹಾಗೂ ಸಂತ ಅಂತೋಣಿ ದೇವಾಲಯದ ಧರ್ಮಗುರು ರೇ. ಫಾ. ವಿಜಯಕುಮಾರ್ ಅವರು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಇದಕ್ಕೂ ಮುನ್ನ ಒಂಬತ್ತು ದಿನಗಳ ಕಾಲ ದೇವಾಲಯದಲ್ಲಿ ವಿವಿಧ ಧರ್ಮಕೇಂದ್ರಗಳ ಧರ್ಮಗುರುಗಳ ನೇತೃತ್ವದಲ್ಲಿ ದಿವ್ಯಬಲಿಪೂಜೆ, ಪ್ರಭೋದನೆ, ನೊವೇನಾ ಪ್ರಾರ್ಥನೆ ಹಾಗೂ ಪುಷ್ಪಾರ್ಚನೆ ಕಾರ್ಯಕ್ರಮಗಳು ನಡೆದವು. ನೊವೇನಾ ಸಂದರ್ಭದಲ್ಲಿ ಕನ್ಯಾಮಾತೆ ಮರಿಯಮ್ಮನವರ ಸ್ವರೂಪಕ್ಕೆ ವಿವಿಧ ಬಗೆಯ ಸೀರೆಗಳನ್ನು ತೊಡಿಸಿ ವಿಶೇಷವಾಗಿ ಅಲಂಕರಿಸಲಾಯಿತು. ಹಬ್ಬದ ದಿನದಂದು ಮೊಂಬತ್ತಿ ಹಿಡಿದು ಮಾತೆ ಮರಿಯಮ್ಮನವರ ಸ್ವರೂಪದೊಂದಿಗೆ ಮೆರವಣಿಗೆ ನಡೆಸಿ,…
ಮಡಿಕೇರಿ NEWS DESK ಸೆ.8 : ಇತ್ತೀಚೆಗೆ ಕೊಡಗು ಗೌಡ ಸಮಾಜಗಳ ಒಕ್ಕೂಟ ವಿಶೇಷ ಸಭೆ ನಡೆಸಿ ಕೊಡವರ ಸಂವಿಧಾನಬದ್ಧ ಹಕ್ಕುಗಳ ವಿರುದ್ಧ ನಿರ್ಣಯ ಕೈಗೊಂಡಿರುವುದು ಖಂಡನೀಯ. ಕೊಡವರ ಹಕ್ಕುಗಳಿಗೆ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲವೆಂದು ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ನ ಅಧ್ಯಕ್ಷ ಹಂಚೆಟ್ಟಿರ ಮನು ಮುದ್ದಪ್ಪ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅನಾದಿ ಕಾಲದಿಂದಲೂ ಕಾವೇರಿ ತಾಯಿಯ ಈ ಪುಣ್ಯಭೂಮಿಯಲ್ಲಿ ಕೊಡವರು ಶಾಂತಿಯುತವಾಗಿ ಜೀವನ ಸಾಗಿಸುತ್ತಾ ಬಂದಿದ್ದಾರೆ. ತಮ್ಮ ಹಕ್ಕುಗಳಿಗಾಗಿ ನ್ಯಾಯಯುತ ಹೋರಾಟ ನಡೆಸಿದ್ದಾರೆಯೇ ಹೊರತು ಇತರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನವನ್ನು ಎಂದಿಗೂ ಮಾಡಿಲ್ಲ. ಸ್ವಾಭಿಮಾನಿ ಕೊಡವರ ತ್ಯಾಗಮಯ ಗುಣವನ್ನೇ ದೌರ್ಬಲ್ಯವೆಂದು ತಿಳಿದುಕೊಂಡಿರುವ ಕೆಲವರು ಕೊಡವರ ಹಕ್ಕುಗಳ ಮೇಲೆ ಸವಾರಿ ಮಾಡುತ್ತಿದ್ದು, ಇದನ್ನು ಸಹಿಸಲು ಸಾಧ್ಯವಿಲ್ಲವೆಂದು ತಿಳಿಸಿದ್ದಾರೆ. ಪುಟ್ಟ ಜಿಲ್ಲೆ ಕೊಡಗಿನಲ್ಲಿ ಕೊಡವರು ಮಾತ್ರವಲ್ಲದೆ ಎಲ್ಲಾ ಜಾತಿ ಜನಾಂಗದವರು ಸೌಹಾರ್ದತೆಯಿಂದ ಬದುಕು ಕಟ್ಟಿಕೊಂಡಿದ್ದಾರೆ. ಕೊಡವರು ಎಲ್ಲರೊಂದಿಗೂ ಅತ್ಯಂತ ಗೌರವ ಮತ್ತು ಅನ್ಯೋನ್ಯತೆಯಿಂದ ಇದ್ದು, ಯಾರೊಂದಿಗೂ…
ಮಡಿಕೇರಿ NEWS DESK ಸೆ.8 : ಕೊಡಗು ಜಿಲ್ಲೆಯಾದ್ಯಂತ ಮಾತೆ ಮರಿಯಮ್ಮನವರ ಜಯಂತಿಯನ್ನು ಕ್ರೈಸ್ತ ಬಾಂಧವರು ಶ್ರದ್ಧಾಭಕ್ತಿಯಿಂದ ಆಚರಿಸಿದರು. ಕಳೆದ 9 ದಿನಗಳಿಂದ ಹಬ್ಬದಾಚಾರಣೆಗೆ ನವೇನದ ಮೂಲಕ ವಿಶೇಷ ಸಿದ್ಧತೆ ಮಾಡಿಕೊಂಡಿದ್ದ ಕ್ರೈಸ್ತರು, ಮಂಗಳವಾರ ಸಂಭ್ರಮದಿಂದ ಹಬ್ಬವನ್ನು ಆಚರಿಸಿದರು. ನಗರದ ಸಂತ ಮೈಕಲರ ದೇವಾಲಯದಲ್ಲಿ ಬೆಳಿಗ್ಗೆ ಹಬ್ಬದ ಪ್ರಯುಕ್ತ ಆಡಂಬರದ ಗಾಯನ ಬಲಿಪೂಜೆ ನಡೆಯಿತು. ದೇವಾಲಯದ ಧರ್ಮಗುರು ಫಾ. ಪ್ಯಾಟ್ರಿಕ್ ಕ್ಷೇವಿಯರ್ ಬಲಿಪೂಜೆ ಅರ್ಪಿಸಿ, ಭಕ್ತರಿಗೆ ಹಬ್ಬದ ಸಂದೇಶ ನೀಡಿದರು. ಇದೇ ಸಂದರ್ಭ ಭತ್ತದ ಕದಿರುಗಳನ್ನು ಆಶೀರ್ವದಿಸಿ ಭಕ್ತರಿಗೆ ಹಂಚಲಾಯಿತು. ನಂತರ ಮಾತೆ ಮರಿಯಮ್ಮನವರ ಪಲ್ಲಕ್ಕಿಯೊಂದಿಗೆ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಹೆಜ್ಜೆಹಾಕಿದ ಭಕ್ತರು ತಾವು ತಂದಿದ್ದ ಹೂವುಗಳನ್ನು ಮಾತೆ ಮರಿಯಮ್ಮನವರಿಗೆ ಅರ್ಪಿಸಿದರು. ಮರಿಯಮ್ಮನವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು. ನಂತರ ಕೇಕ್ ಕತ್ತರಿಸಿ ಜನ್ಮದಿನದ ಶುಭಾಶಯ ಕೋರಲಾಯಿತು. ಭಕ್ತರಿಗೆ ಹೊಸ ಅಕ್ಕಿಯ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಈ ಸಂದರ್ಭ ಧರ್ಮಗುರುಗಳಾದ ಫಾ. ಜಿತುನ್ ಜೋಸೆಫ್, ಫಾ. ಸಿಬಿ ಇತರರು ಉಪಸ್ಥಿತರಿದ್ದರು.
ಮಡಿಕೇರಿ NEWS DESK ಸೆ.8 : ಕೊಡವರ ನ್ಯಾಯಯುತ ಹಕ್ಕೊತ್ತಾಯಗಳನ್ನು ವಿರೋಧಿಸಿ ಅರೆಭಾಷೆ ಗೌಡ ಜನಾಂಗದ ವತಿಯಿಂದ ಮಡಿಕೇರಿಯಲ್ಲಿ ನಡೆದ ವಿಶೇಷ ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನು ಬೇಂಗ್ ನಾಡ್ ಕೊಡವ ಸಮಾಜ ತೀವ್ರವಾಗಿ ಖಂಡಿಸಲಿದೆ ಎಂದು ಸಮಾಜದ ಅಧ್ಯಕ್ಷ ಬಾಚರಣಿಯಂಡ ದಿನೇಶ್ ಗಣಪತಿ, ಆಡಳಿತ ಮಂಡಳಿ ಹಾಗೂ ಸದಸ್ಯರು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡವ ಜನಾಂಗದ ಜಮ್ಮಾ ಕೋವಿಯ ಹಕ್ಕು, ಪರಿಶಿಷ್ಟ ಪಂಗಡ ಮತ್ತು ರಾಜಕೀಯ ಸ್ಥಾನಮಾನಕ್ಕಾಗಿ ನಡೆಯುತ್ತಿರುವ ಹೋರಾಟಗಳಿಗೆ ವಿರೋಧ ವ್ಯಕ್ತಪಡಿಸುವುದನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ. ಇತರ ಸಮುದಾಯಗಳ ಉಡುಗೆ, ತೊಡುಗೆ, ಆಭರಣ, ಸಂಸ್ಕೃತಿ ಹಾಗೂ ಹಬ್ಬಗಳನ್ನು ತಮ್ಮದೇ ಸಂಸ್ಕೃತಿಯೆoದು ಬಿಂಬಿಸುವ ಪ್ರಯತ್ನಗಳ ವಿರುದ್ಧವೂ ಬೇಂಗ್ ನಾಡ್ ಕೊಡವ ಸಮಾಜ ಧ್ವನಿ ಎತ್ತಲಿದೆ. ಕೊಡವ ಜನಾಂಗದ ಹಕ್ಕು, ಅಸ್ತಿತ್ವ ಹಾಗೂ ವಿಶಿಷ್ಟ ಸಂಸ್ಕೃತಿಯನ್ನು ಪ್ರಶ್ನಿಸುವ ಯಾವುದೇ ವ್ಯಕ್ತಿ ಅಥವಾ ಸಂಘಟನೆಯ ಕ್ರಮವನ್ನು ತೀವ್ರವಾಗಿ ಖಂಡಿಸಲಾಗುವುದು. ಕೊಡವ ಜನಾಂಗದ ನ್ಯಾಯಯುತ ಹಕ್ಕುಗಳ ರಕ್ಷಣೆಗಾಗಿ, ಕೊಡವರ ಅಸ್ತಿತ್ವ ಮತ್ತು ಸಂಸ್ಕೃತಿಯ…
ಸುಂಟಿಕೊಪ್ಪ NEWS DESK ಸೆ.8 : ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿರುವ ಮೂಲಭೂತ ಸಮಸ್ಯೆಗಳನ್ನು ಕೂಡಲೇ ಪರಿಹರಿಸುವಂತೆ ಆಗ್ರಹಿಸಿ ಸುಂಟಿಕೊಪ್ಪ ವೇವ್ ಸಂಘಟನೆಯ ಸದಸ್ಯರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸತೀಶ್ ಅವರನ್ನು ಕಚೇರಿಯಲ್ಲಿ ಸೋಮವಾರ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು. ಸಂಸ್ಥೆಯ ಸಂಚಾಲಕ ಕೆ.ಎ. ಲತೀಫ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಸುಂಟಿಕೊಪ್ಪ ಪಟ್ಟಣದ ನಡುವೆ ರಾಷ್ಟ್ರೀಯ ಹೆದ್ದಾರಿ 275 ಹಾದುಹೋಗಿದ್ದು, ವಾರಾಂತ್ಯದ ರಜಾ ದಿನಗಳಲ್ಲಿ ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. 7ನೇ ಹೊಸಕೋಟೆಯಿಂದ ಜಿಲ್ಲಾ ಕೇಂದ್ರದವರೆಗೆ ರಸ್ತೆ ತಿರುವುಗಳಿಂದ ಕೂಡಿದ್ದು, ಈ ಹೆದ್ದಾರಿಯಲ್ಲಿ ಪ್ರತಿನಿತ್ಯ ಅಪಘಾತಗಳು ಸಂಭವಿಸುತ್ತಿವೆ. ತುರ್ತು ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಲು ವೈದ್ಯರು ಲಭ್ಯವಿಲ್ಲದ ಕಾರಣ ಅನೇಕ ಜೀವಗಳು ಮಾರ್ಗಮಧ್ಯೆ ಕಳೆದುಕೊಳ್ಳುವಂತಾಗಿದೆ ಎಂದು ಸಂಘಟನೆ ಆರೋಪಿಸಿದೆ. ಮಧ್ಯರಾತ್ರಿ ವೇಳೆ ಗ್ರಾಮಸ್ಥರಿಗೆ ಸಣ್ಣ ಪ್ರಮಾಣದಲ್ಲಿಯೂ ಆರೋಗ್ಯ ಸಮಸ್ಯೆ ಉಂಟಾದರೆ ದೂರದ ಮಡಿಕೇರಿ ಅಥವಾ ಕುಶಾಲನಗರದ ಆಸ್ಪತ್ರೆಗಳನ್ನು ಅವಲಂಬಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಆದ್ದರಿಂದ…
ಕುಶಾಲನಗರ ಸೆ.7 NEWS DESK : ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಕ್ಯಾಂಪಸ್‌ನಲ್ಲಿ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಹಾಗೂ ಶ್ರೇಷ್ಠ ಶಿಕ್ಷಣತಜ್ಞ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಕೊಡಗು ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಡಾ. ಸುರೇಶ್ ಎಂ. ಅವರು ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕೊಡಗು ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಬೋಧಕ ವೃಂದದವರು, ಆಡಳಿತ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಶಿಕ್ಷಕರ ದಿನಾಚರಣೆಯ ಮಹತ್ವವನ್ನು ಸ್ಮರಿಸಿದರು. ಕಾರ್ಯಕ್ರಮವನ್ನು ಉಪನ್ಯಾಸಕರಾದ ಡಾ. ಜಮೀರ್ ಅಹಮದ್ ಅವರು ನಿರೂಪಿಸಿದರು.
ಸೋಮವಾರಪೇಟೆ, ಸೆ.7 NEWS DESK : ಮಾದಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಸೇವಾ ನಿವೃತ್ತಿ ಹೊಂದಿದ ಮುಖ್ಯ ಶಿಕ್ಷಕ ಪಾಲಾಕ್ಷ ಅವರಿಗೆ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ನಿವೃತ್ತ ಮುಖ್ಯ ಶಿಕ್ಷಕ ಪಾಲಾಕ್ಷ ದಂಪತಿಯನ್ನು ಶಾಲೆಯ ವತಿಯಿಂದ ಹಾಗೂ ಗ್ರಾಮಸ್ಥರ ವತಿಯಿಂದ ಶಾಲು ಹೊದಿಸಿ, ಫಲಪುಷ್ಪ, ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಪಾಲಾಕ್ಷ ಅವರು ಮುಖ್ಯ ಶಿಕ್ಷಕರಾಗಿ ಮಾದಾಪುರ ಶಾಲೆಯ ಅಭಿವೃದ್ಧಿಗೆ ನೀಡಿದ ಕೊಡುಗೆ, ಶಿಸ್ತು ಮತ್ತು ವಿದ್ಯಾರ್ಥಿಗಳ ಮೇಲಿನ ಅವರ ಮಮತೆಯನ್ನು ಕಾರ್ಯಕ್ರಮದಲ್ಲಿ ನೆನೆಸಿಕೊಳ್ಳಲಾಯಿತು. ಮಾದಾಪುರ ಶ್ರೀಮತಿ ಡಿ.ಚನ್ನಮ್ಮ ಪಿಯೂ ಕಾಲೇಜಿನ ಪ್ರಾಂಶುಪಾಲ ಸಿ.ಜಿ. ಮಂದಪ್ಪ ಮಾತನಾಡಿ, ಮುಖ್ಯ ಶಿಕ್ಷಕ ಪಾಲಾಕ್ಷ ಅವರು ಶಾಲಾಭಿವೃದ್ಧಿ ಹಾಗೂ ಶೈಕ್ಷಣಿಕ ಪ್ರಗತಿಗೆ ಶ್ರಮಿಸಿರುವುದರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶಾಲೆಗೆ ಉತ್ತಮ ಫಲಿತಾಂಶ ಲಭಿಸಿದೆ. ಶಿಕ್ಷಕರು ಉತ್ತಮವಾಗಿ ಅನನ್ಯ ಸೇವೆ ಸಲ್ಲಿಸಿದಾಗ ಸಮಾಜ ಗೌರವಿಸುತ್ತದೆ ಎಂದರು. ಶುಭ ಹಾರೈಕೆ: ತಾಲ್ಲೂಕು ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಸೋಮಯ್ಯ ಮಾತನಾಡಿ, ಅವರ ನಿವೃತ್ತ ಜೀವನವು ಸುಖ, ಶಾಂತಿ, ನೆಮ್ಮದಿ ಮತ್ತು…






