ಲೇಖಕ: admin

ವಿರಾಜಪೇಟೆ ಅ.30 NEWS DESK : ವಿರಾಜಪೇಟೆ ನಗರ ಠಾಣೆಯ ಸಿಬ್ಬಂದಿ ಪಿ.ಬೆಳ್ಯಪ್ಪ ಅವರು ವಿರಾಜಪೇಟೆ ನಗರದ ಮೂರ್ನಾಡು ಜಂಕ್ಷನ್‍ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭ ಒಂದು ಬ್ಯಾಗ್ ಬಿದ್ದು ಸಿಕ್ಕಿದ್ದು ಅದರಲ್ಲಿದ್ದ ಫೋನ್ ಮತ್ತು 10 ಸಾವಿರ ಹಣವನ್ನು ಅದರ ವಾರಸುದಾರರನ್ನು ಪತ್ತೆ ಹಚ್ಚಿ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ವಾರಸುದಾರರಾದ ಮೀನುಪೇಟೆ ನಿವಾಸಿ ಮೀನಾ ಅವರು ಪೋಲಿಸ್ ಇಲಾಖೆಯ ಪ್ರಾಮಾಣಿಕ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Read More

ಮಡಿಕೇರಿ NEWS DESK ಅ.30 : ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣಾ ದಿನಾಚರಣೆ ಅ.31 ರಂದು ಬೆಳಗ್ಗೆ 9.30 ಗಂಟೆಗೆ ಮಡಿಕೇರಿಯಲ್ಲಿ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಇರುವ ಸ್ಮಾರಕ ಸ್ಥಳದಲ್ಲಿ ನಡೆಯಲಿದೆ ಎಂದು ಕುಶಾಲನಗರ ಗೌಡ ಸಮಾಜದ ಅಧ್ಯಕ್ಷ ಚಿಲ್ಲನ ಗಣಿ ಪ್ರಸಾದ್ ಅವರು ತಿಳಿಸಿದ್ದಾರೆ. ನಗರದ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಇರುವ ಸ್ಮಾರಕ ಸ್ಥಳದಲ್ಲಿ ಸ್ವಾತಂತ್ರ‍್ಯ ಹೋರಾಟಗಾರನಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಲಾಗುವುದು ಮತ್ತು ಕೋಟೆ ಆವರಣದಲ್ಲಿ ಸಂಸ್ಮರಣಾ ದಿನದ ಸಭಾ ಕಾರ್ಯಕ್ರಮ ನಡೆಯಲಿದೆ. ಸರ್ವರು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವೀರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರಿಗೆ ಗೌರವ ಅರ್ಪಿಸಬೇಕೆಂದು ಕೋರಿದ್ದಾರೆ. 1857ರಲ್ಲಿ ನಡೆದ ಸಿಪಾಯಿ ದಂಗೆಯನ್ನು ಮೊದಲ ಸ್ವಾತಂತ್ರ ಸಂಗ್ರಾಮ ಎಂದು ಗುರುತಿಸಲಾಗಿದೆ. ಆದರೆ ಅದಕ್ಕೂ ಮೊದಲೇ ಕೊಡಗು, ದಕ್ಷಿಣ ಕನ್ನಡ ಭಾಗದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ನಡೆದಿರುವ ಬಗ್ಗೆ ಇತಿಹಾಸವಿದೆ. ಬ್ರಿಟಿಷರ ವಿರುದ್ಧ ಹೋರಾಡಿದ ಗುಡ್ಡೆಮನೆ ಅಪ್ಪಯ್ಯ…

Read More

ಮಡಿಕೇರಿ NEWS DESK ಅ.30 : ಬ್ರಿಟಿಷರ ವಿರುದ್ಧ ಹೋರಾಡಿ ವೀರಮರಣವನ್ನಪ್ಪಿದ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರಿಗೆ ಗೌರವ ನಮನ ಸಮರ್ಪಣೆ ಕಾರ್ಯಕ್ರಮ ಅ.31ರಂದು ಮಡಿಕೇರಿಯಲ್ಲಿ ನಡೆಯಲಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಮೂರ್ನಾಡು ಗೌಡ ಸಮಾಜದ ಅಧ್ಯಕ್ಷ ಪಾಣ್ತಲೆ ಹರೀಶ್ ಅವರು ಶುಕ್ರವಾರ ಬೆಳಿಗ್ಗೆ 9.30 ಗಂಟೆಗೆ ನಗರದ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಇರುವ ಸ್ಮಾರಕ ಸ್ಥಳದಲ್ಲಿ ಸ್ವಾತಂತ್ರ್ಯ ಹೋರಾಟಗಾರನಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಲಾಗುವುದು ಎಂದು ತಿಳಿಸಿದ್ದಾರೆ. ಜಿಲ್ಲೆಯ ಸರ್ವ ಅರೆಭಾಷೆ ಗೌಡ ಬಂಧುಗಳು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವೀರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರಿಗೆ ಗೌರವ ಅರ್ಪಿಸಬೇಕೆಂದು ಮನವಿ ಮಾಡಿದ್ದಾರೆ. 1857ರಲ್ಲಿ ನಡೆದ ಸಿಪಾಯಿ ದಂಗೆಯನ್ನು ಮೊದಲ ಸ್ವಾತಂತ್ರ ಸಂಗ್ರಾಮ ಎಂದು ಗುರುತಿಸಲಾಗಿದೆ. ಆದರೆ ಅದಕ್ಕೂ ಮೊದಲೇ ಕೊಡಗು, ದಕ್ಷಿಣ ಕನ್ನಡ ಭಾಗದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ನಡೆದಿರುವ ಬಗ್ಗೆ ಇತಿಹಾಸವಿದೆ. ಬ್ರಿಟಿಷರ ವಿರುದ್ಧ ಹೋರಾಡಿದ ಗುಡ್ಡೆಮನೆ ಅಪ್ಪಯ್ಯ ಗೌಡರನ್ನು 1837 ಅಕ್ಟೋಬರ್ 31…

Read More

ಮಡಿಕೇರಿ NEWS DESK ಅ.29 : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇವರ ಆಶ್ರಯದಲ್ಲಿ ಅ.31 ರಂದು ಬೆಳಗ್ಗೆ 9.30 ಗಂಟೆಗೆ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಇರುವ ಸ್ಮಾರಕ ಸ್ಥಳದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣಾ ದಿನಾಚರಣೆ ಹಾಗೂ ಕೋಟೆ ಆವರಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅವರು ತಿಳಿಸಿದ್ದಾರೆ. ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿ ಗಲ್ಲಿಗೇರಿಸಲ್ಪಟ್ಟ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಸರ್ವರು ಪಾಲ್ಗೊಳ್ಳುವಂತೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. ನಗರದ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಇರುವ ಸ್ಮಾರಕ ಸ್ಥಳದಲ್ಲಿ ಸ್ವಾತಂತ್ರ‍್ಯ ಹೋರಾಟಗಾರನಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಲಾಗುವುದು ಮತ್ತು ಕೋಟೆ ಆವರಣದಲ್ಲಿ ಸಂಸ್ಮರಣಾ ದಿನದ ಸಭಾ ಕಾರ್ಯಕ್ರಮ ನಡೆಯಲಿದೆ. ಸರ್ವರು ಕಾರ್ಯಕ್ರಮದಲ್ಲಿ ಹೆಚ್ಚಿನ…

Read More

ಮಡಿಕೇರಿ NEWS DESK ಅ.29 : ಲಕ್ಷಾಂತರ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ ಆರೋಪದಡಿ ನಾಲ್ವರು ಆರೋಪಿಗಳನ್ನು ಮಾಲು ಸಹಿತ ಬಂಧಿಸುವಲ್ಲಿ ಸೋಮವಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಸೋಮವಾರಪೇಟೆ ನಿವಾಸಿ ಸುಮಂತ್, ಕಿಬೆಟ್ಟ ಗ್ರಾಮದ ಕೀರ್ತಿ, ಕೊಣನೂರು ಗ್ರಾಮದ ಮಣಿಕಂಠ ಹಾಗೂ ಕೆ.ಆರ್.ಪೇಟೆಯ ನಿವಾಸಿ ಸಚಿನ್ ಬಂಧಿತ ಆರೋಪಿಗಳಾಗಿದ್ದಾರೆ. ಇತ್ತೀಚೆಗೆ ಕಾಳು ಮೆಣಸು ಕಳ್ಳತನದ ಎರಡು ಪ್ರತ್ಯೇಕ ಪ್ರಕರಣಗಳು ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಪ್ರಕರಣದ ಕುರಿತು ತನಿಖೆ ಕೈಗೊಂಡ ಪೊಲೀಸರು ಆರೋಪಿಗಳ ಸಹಿತ 2.4 ಲಕ್ಷ ರೂ. ಮೌಲ್ಯದ 360 ಕೆ.ಜಿ ಕಾಳು ಮೆಣಸು ಮತ್ತು ಕಳ್ಳತನಕ್ಕೆ ಬಳಸಿದ್ದ ಗೂಡ್ಸ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

Read More

ಮಡಿಕೇರಿ NEWS DESK ಅ.29 : ಶಿಕ್ಷಣ ಮತ್ತು ಸಮುದಾಯದ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಗುರುತಿಸಿ ರೋಟರಿ ಮಡಿಕೇರಿ ಸಂಸ್ಥೆಯು ಮೂವರು ಸರಕಾರಿ ಶಾಲಾ ಶಿಕ್ಷಕರಿಗೆ ರೋಟರಿ ನೇಷನ್ ಬಿಲ್ಡರ್ಸ್ ಪ್ರಶಸ್ತಿಯನ್ನು ನೀಡಿ ಗೌರವಿಸಿತು. ನಗರದ ರೋಟರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಡಿಕೇರಿ ಸರಕಾರಿ ಜೂನಿಯರ್ ಕಾಲೇಜ್ ನ ಕನ್ನಡ ಶಿಕ್ಷಕಿ ಗೌರಿ ಕೆ.ಬಿ., ಕಕ್ಕಬ್ಬೆ ಪ್ರೌಢಶಾಲೆಯ ಇಂಗ್ಲಿಷ್ ಶಿಕ್ಷಕ ಕುಟ್ಟಂಜೆಟ್ಟಿರ ಎಂ.ಶರತ್ ಹಾಗೂ ಮಾದಾಪುರದ ಡಿ.ಚೆನ್ನಮ್ಮ ಪಿಯು ಕಾಲೇಜ್ ನ ಪ್ರಾಂಶುಪಾಲ ಸಿ.ಜಿ.ಮಂದಪ್ಪ ಅವರುಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ರೋಟರಿ ಜಿಲ್ಲೆ 3181 ಜಿಲ್ಲಾ ಯೋಜನೆಗಳ ಅಧ್ಯಕ್ಷ ರೊಟೇರಿಯನ್ ಕೆ.ಎಸ್.ತಮ್ಮಯ್ಯ ಅವರು ಸಿ.ಜಿ.ಮಂದಪ್ಪ ಅವರಿಗೆ, ರೋಟರಿ ಕ್ಲಬ್ ಸೇವಾ ನಿರ್ದೇಶಕ ರೋ.ಎಂ.ಎಂ.ಕಾರ್ಯಪ್ಪ, ಕ್ಲಬ್ ಖಜಾಂಚಿ ರೋ.ಈಶ್ವರ ಭಟ್ ಅವರು ಗೌರಿ ಕೆ.ಬಿ ಅವರಿಗೆ ಹಾಗೂ ರೋ.ಪಿಡಿಜಿ ಡಾ.ರವಿ ಅಪ್ಪಾಜಿ ಅವರು ಕುಟ್ಟಂಜೆಟ್ಟಿರ ಎಂ.ಶರತ್ ಅವರಿಗೆ ಪ್ರಶಸ್ತಿ ಮತ್ತು ಪ್ರಶಂಸನಾ ಪತ್ರವನ್ನು ನೀಡಿ ಗೌರವಿಸಿದರು. ಪಬ್ಲಿಕ್ ಇಮೇಜ್ ಮತ್ತು ಕ್ಲಬ್ ಬುಲೆಟಿನ್…

Read More

ಮಡಿಕೇರಿ ಅ.29 NEWS DESK : ‘ಉಕ್ಕಿನ ಮನುಷ್ಯ’ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿನವನ್ನಾಗಿ ಅ.31 ರಂದು ಆಚರಿಸಲಾಗುತ್ತಿದ್ದು, ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ಅಂದು ಮಡಿಕೇರಿಯಲ್ಲಿ ‘ಏಕತಾ ಯಾತ್ರೆ’ ನಡೆಯಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ನಗರದ ಫೀ.ಮಾ.ಕೆ.ಎಂ.ಕಾರ್ಯಪ್ಪ ವೃತ್ತದಿಂದ ಜನರಲ್ ತಿಮ್ಮಯ್ಯ ವೃತ್ತದವರೆಗೆ ‘ಏಕತಾ ಯಾತ್ರೆ’ ನಡೆಸಲಾಗುವುದು. ಆ ಮೂಲಕ ರಾಷ್ಟ್ರದ ಏಕತೆಗೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ನೀಡಿದ ಕೊಡುಗೆಯನ್ನು ಸ್ಮರಿಸಲಾಗುತ್ತದೆ ಮತ್ತು ಅವರಿಗೆ ಗೌರವ ಸಲ್ಲಿಸಲಾಗುತ್ತದೆ ಎಂದು ಹೇಳಿದ್ದಾರೆ. ಜಿಲ್ಲಾ ಬಿಜೆಪಿಯ ಎಲ್ಲಾ ಪದಾಧಿಕಾರಿಗಳು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರುಗಳು, ನಗರಸಭಾ ಸದಸ್ಯರು, ಪಕ್ಷದ ಎಲ್ಲಾ ಘಟಕಗಳ ಪ್ರಮುಖರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ‘ಏಕತಾ ಯಾತ್ರೆ’ಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Read More

ಮಡಿಕೇರಿ ಅ.29 NEWS DESK : ವಿರಾಜಪೇಟೆ 66/33/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ವಿಎಫ್-3 ಪಂಜರ್‍ಪೇಟೆ ಫೀಡರ್‍ನಲ್ಲಿ ಅ.30 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ವಿರಾಜಪೇಟೆ ಪಟ್ಟಣದ ವಿದ್ಯಾನಗರ, ಕೆಎಸ್‍ಆರ್‍ಟಿಸಿ, ಶಾಂತಿನಗರ, ಗೋಣಿಕೊಪ್ಪ ರಸ್ತೆ, ನೆಹರುನಗರ, ಪಂಜರ್‍ಪೇಟೆ, ಸಿಲ್ವನಗರ, ವಿಜಯನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ಮಡಿಕೇರಿ ಅ.29 NEWS DESK : ರಾಜಾಸೀಟು ರಸ್ತೆಯಲ್ಲಿ ಪಾರ್ಕಿಂಗ್ ಶುಲ್ಕ ಸಂಗ್ರಹವನ್ನು ಏಕಾಏಕಿ ಸ್ಥಗಿತಗೊಳಿಸಿದ ಕ್ರಮದ ಕುರಿತು ಮಡಿಕೇರಿ ನಗರಸಭೆಯ ಸಾಮಾನ್ಯ ಸಭೆಯಲ್ಲಿ ತೀವ್ರ ಚರ್ಚೆ ನಡೆಯಿತು. ನಗರಸಭೆಯ ಸಭಾಂಗಣದಲ್ಲಿ ಅಧ್ಯಕ್ಷೆ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಎಸ್‍ಡಿಪಿಐ ಸದಸ್ಯ ಅಮಿನ್ ಮೊಹಿಸಿನ್ ಅವರು ರಾಜಾಸೀಟು ಬಳಿ ವಾಹನ ಪಾರ್ಕಿಂಗ್ ಶುಲ್ಕ ವಸೂಲಾತಿ ಸ್ಥಗಿತಗೊಂಡಿದೆ. ಈ ದಿಢೀರ್ ನಿರ್ಧಾರಕ್ಕೆ ಕಾರಣವೇನೆಂದು ಪ್ರಶ್ನಿಸಿದರು. ಬಿಜೆಪಿ ಸದಸ್ಯ ಕೆ.ಎಸ್.ರಮೇಶ್ ಅವರು ಮಾತನಾಡಿ ರಾಜಾಸೀಟು ಬಳಿ ವಾಹನ ಪಾರ್ಕಿಂಗ್ ಶುಲ್ಕ ವಸೂಲಾತಿಗೆ ಸಂಬಂಧಿಸಿದ ಮಾಹಿತಿಯನ್ನು ಒದಗಿಸುವಂತೆ ಒತ್ತಾಯಿಸಿದರು. ಈ ಸಂದರ್ಭ ಅಧ್ಯಕ್ಷರ ಸೂಚನೆಯಂತೆ ಕೌನ್ಸಿಲ್ ಕಾರ್ಯದರ್ಶಿ ತಾಹಿರ್ ಅವರು ಉತ್ತರ ನೀಡಿ ರಾಜಾಸೀಟು ಬಳಿ ಪಾರ್ಕಿಂಗ್ ಟೆಂಡರನ್ನು 37.85 ಲಕ್ಷ ರೂ.ಗಳಿಗೆ ನೀಡಲಾಗಿದ್ದು, ಈ ಟೆಂಡರ್ ಮೊತ್ತದಲ್ಲಿ ಟೆಂಡರ್‍ದಾರರು 17.79 ಲಕ್ಷ ರೂ.ಗಳನ್ನಷ್ಟೇ ಪಾವತಿಸಿದ್ದಾರೆ. ಸುಮಾರು 20 ಲಕ್ಷ ರೂ. ಪಾವತಿಗೆ ಬಾಕಿ ಇರುವುದರಿಂದ, ಶುಲ್ಕ ವಸೂಲಾತಿ ಸ್ಥಗಿತಕ್ಕೆ ಆದೇಶಿಸಿ…

Read More

ಮಡಿಕೇರಿ ಅ.29 NEWS DESK : ‘ಸರ್ಕಾರದ ಬೆಂಬಲ ಬೆಲೆಯಡಿ ಜಿಲ್ಲೆಯಲ್ಲಿ ಭತ್ತ ಹಾಗೂ ರಾಗಿಯನ್ನು ಖರೀದಿ ಮಾಡಲಾಗುತ್ತಿದ್ದು, ಈ ಸಂಬಂಧ ರೈತರ ಹೆಸರು ನೋಂದಣಿ ಕಾರ್ಯ ಈಗಾಗಲೇ ಆರಂಭವಾಗಿದೆ. ಜಿಲ್ಲೆಯ ರೈತರು ಈ ಯೋಜನೆಯ ಸದ್ಬಳಕೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕೋರಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ 2025-26ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ನಡೆದ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರದ ಆದೇಶದಂತೆ 2025-26ನೇ ಸಾಲಿಗೆ ರೈತರಿಂದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಹಾಗೂ ರಾಗಿ ಖರೀದಿ ಮಾಡಲಾಗುತ್ತಿದ್ದು, ಈ ಅವಕಾಶ ಸದ್ಬಳಕೆಗೆ ಮನವಿ ಮಾಡಿದರು. ಜಿಲ್ಲೆಯಲ್ಲಿ ಭತ್ತ ಮತ್ತು ರಾಗಿಯನ್ನು ಬೆಂಬಲ ಬೆಲೆಯಡಿ ಖರೀದಿಸಲಾಗುತ್ತಿದ್ದು, ಆಹಾರ, ನಾಗರಿಕ ಸರಬರಾಜು ನಿಗಮ ನಿಯಮಿತರವರನ್ನು ಖರೀದಿ ಏಜೆನ್ಸಿಯನ್ನಾಗಿ ಸರಕಾರ ನೇಮಕ ಮಾಡಿದ್ದು, ಖರೀದಿ ಪ್ರಕ್ರಿಯೆಯು ಇವರ ಮುಖಾಂತರ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಅವರು ವಿವರಿಸಿದರು. ಜಿಲ್ಲೆಯಾದ್ಯಂತ…

Read More