ಲೇಖಕ: admin

ವಿರಾಜಪೇಟೆ ಅ.29 NEWS DESK : ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಚಿತ್ರದುರ್ಗದ ಪತ್ರಿಕಾ ಭವನದಲ್ಲಿನ ಅಂಬೇಡ್ಕರ್ ಸಭಾಂಗಣದಲ್ಲಿ ನಡೆದ ಪತ್ರಕರ್ತರಿಗೆ ಕನ್ನಡ ಸಾಹಿತ್ಯಾಭಿರುಚಿ ಕಾರ್ಯಾಗಾರದಲ್ಲಿ ವಿರಾಜಪೇಟೆಯ ಸಾಹಿತಿಗಳು ಹಾಗೂ ಪತ್ರಕರ್ತರಾದ ರಜಿತ ಕಾರ್ಯಪ್ಪ ಅವರು ಭಾಗವಹಿಸಿದರು. ಕಾರ್ಯಾಗಾರದಲ್ಲಿ ಸಾಹಿತ್ಯಾಭಿರುಚಿ ಕುರಿತು ಮಾತನಾಡಿ ಸಂವಾದ ನಡೆಸಿದರು. ಇದೇ ಸಂದರ್ಭ ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಕಾರ್ಯಾಗಾರದ ಪ್ರಶಂಸನಾ ಪತ್ರವನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮುಕುಂದರಾಜ್, ನಿರ್ದೇಶಕರುಗಳಾದ ಮಮತಾ ಅರಸಿಕೆರೆ, ಪ್ರೋ. ಎಂ.ಅಬದುಲ್ ರೆಹಮಾನ್ ಪಾಷಾ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹಾಗೂ ಚಿತ್ರದುರ್ಗ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು, ಸದಸ್ಯರುಗಳು ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Read More

ಮಡಿಕೇರಿ ಅ.29 NEWS DESK : ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ನೆಲ್ಲಿಹುದಿಕೇರಿಯ ಶಾದಿ ಮಹಲ್ ಸಭಾಂಗಣದಲ್ಲಿ, ತನಲ್ ಸಂಸ್ಥೆಯವರು ಆಯೋಜಿಸಿರುವ ಬಡ ಕಿಡ್ನಿ ರೋಗಿಗಳ ಡಯಾಲಿಸಿಸ್ ಗೆ ನೆರವಾಗಲು ಬಿರಿಯಾನಿ‌ಚಾಲೆಂಜ್  ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಹಲವಾರು ಸಾಮಾಜಿಕ ಹಾಗೂ ಶೈಕ್ಷಣಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿರುವ ತನಲ್ ಸಂಸ್ಥೆಯ ಕಾರ್ಯವೈಖರಿ ಎಲ್ಲರಿಗೂ ಮಾದರಿ ಹಾಗೂ ಶ್ಲಾಘನೀಯ ಎಂದು ಬಣ್ಣಿಸಿದರು. ಸಂಸ್ಥೆಯು ಕೈಗೊಳ್ಳುತ್ತಿರುವ ಹಲವಾರು ಕಾರ್ಯಕ್ರಮಗಳು ಇಂದು ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡುತ್ತಿದ್ದು, ಇದರಿಂದ ಎಲ್ಲರೂ ಇಂತಹ ಕಾರ್ಯಕ್ರಮಗಳನ್ನು ಮಾಡಲು ಪ್ರೇರೇಪಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಿದ್ದಾಪುರ ವಲಯ ಅಧ್ಯಕ್ಷರು ಪ್ರತೀಶ್, ಪಕ್ಷದ ಹಿರಿಯರು ಚೆಕು, ಸಿದ್ದಾಪುರ ಧರ್ಮ ಗುರುಗಳು, ಪಂಚಾಯಿತಿ ಉಪಾಧ್ಯಕ್ಷರು ಪಳನಿ ಸ್ವಾಮಿ, ಸದಸ್ಯರು ದೇವಿಯನಿ, ಅಬ್ದುಲ್ ಸುಕೂರ್, ಜಫರ್, ರವಿ, ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Read More

ಮಡಿಕೇರಿ ಅ.29 NEWS DESK : ಸವಿತಾ ಸಮಾಜದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನಾಯಾಂದಿರ ಶಿವಾಜಿ ಅವರು  ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿ ಮಾಡಿದರು. ನೂತನ ಅಧ್ಯಕ್ಷರಿಗೆ ಶುಭಕೋರಿದ ಶಾಸಕರು, ನಿಮ್ಮ ಕಾಲಾವಧಿಯಲ್ಲಿ ಸವಿತಾ ಸಮಾಜಕ್ಕೆ ಬೇಕಾದ ಎಲ್ಲಾ ಅನುಕೂಲಗಳನ್ನು ಒದಗಿಸಲು ಹಾರೈಸಿದರು. ಇದೇ ಸಂದರ್ಭದಲ್ಲಿ ಅಧಿಕಾರ ಪತ್ರವನ್ನು ನೀಡಿದರು. ಈ ಸಂದರ್ಭದಲ್ಲಿ ಸವಿತಾ ಸಮಾಜದ ಸದಸ್ಯರುಗಳು ಉಪಸ್ಥಿತರಿದ್ದರು.

Read More

ಮಡಿಕೇರಿ ಅ.29 NEWS DESK : ವಿರಾಜಪೇಟೆ ನಿವಾಸಿ ಕಲಾವಿದರಾದ ಸಾಧಿಕ್ ಅವರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿ ಮಾಡಿದರು. ಇದೇ ಸಂದರ್ಭ ಶಾಸಕರ ತಂದೆಯವರಾದ ದಿವಂಗತ ಎ.ಕೆ.ಸುಬ್ಬಯ್ಯ ಅವರ ಚಿತ್ರವನ್ನು ಗೌರವಾರ್ಥವಾಗಿ ನೀಡಿದರು.

Read More

ಮಡಿಕೇರಿ ಅ.29 NEWS DESK : ವಿರಾಜಪೇಟೆ ತಾಲ್ಲೂಕು ಪಾಲಂಗಾಲ ಗ್ರಾಮದ ಮಿಸ್ಟರ್ ಇಂಡಿಯಾ ಯೂನಿವರ್ಸ್ 2025ರ ಪ್ರಶಸ್ತಿ ವಿಜೇತರಾದ ಕರಿನೇರವಂಡ ಬಿಷನ್ ಮಾದಪ್ಪ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಇಂದು ಭೇಟಿ ಮಾಡಿದರು. ಈ ಸಂದರ್ಭ ಶಾಸಕರು ಬಿಷನ್ ಅವರಿಗೆ ಶುಭ ಕೋರುತ್ತಾ ಭವಿಷ್ಯದಲ್ಲಿ ಉನ್ನತ ಸ್ಥಾನಕ್ಕೆ ಏರಲಿ ಎಂದು ಶುಭ ಹಾರೈಸಿದರು.

Read More

ವಿರಾಜಪೇಟೆ ಅ.29 NEWS DESK : ಯುನಿಸೆಫ್ ಮತ್ತು ಪತ್ರಿಕೋದ್ಯಮ ವಿಭಾಗ ಮೈಸೂರು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಮೈಸೂರು ಮಾನಸ ಗಂಗೋತ್ರಿಯ ವಿಜ್ಞಾನ ಭವನದಲ್ಲಿ ಆಯೋಜಿಸಲಾಗಿದ್ದ ಬದಲಾವಣೆಗೆ ಮಾಧ್ಯಮ ಎಂಬ ಕಾರ್ಯಾಗಾರದಲ್ಲಿ ವಿರಾಜಪೇಟೆಯ ಪತ್ರಕರ್ತೆ ಹಾಗೂ ಸಾಹಿತಿಗಳಾದ ರಜಿತ ಕಾರ್ಯಪ್ಪ ಭಾಗವಹಿಸಿ ಪ್ರಶಂಸನಾ ಪತ್ರ ಪಡೆದುಕೊಂಡರು. ಈ ಸಂದರ್ಭದಲ್ಲಿ ಪತ್ರಿಕೋದ್ಯಮ ವಿಭಾಗದ ಪ್ರೋ.ಸಪ್ನಾ ಎಂ.ಎಸ್. ಹಾಗೂ ಯುನಿಸೆಫ್‍ನ ಪ್ರೊಸುನ್ ಸೆನ್ ಸೇರಿದಂತೆ ಇತರರು ಇದ್ದರು.

Read More

ಮಡಿಕೇರಿ ಅ.29 NEWS DESK : ಇತ್ತೀಚಿಗಿನ ಕೌನ್ ಬನೇಗಾ ಕರೋಡ್ ಪತಿ (KBC) ಕಾರ್ಯಕ್ರಮದಲ್ಲಿ ಅಮಿತಾಭ್ ಬಚ್ಚನ್ ರ ಎದುರು ಕುಳಿತಿದ್ದ ಓರ್ವ ಬಾಲಕನ ವರ್ತನೆ ಸಾಮಾಜಿಕ ಮಾಧ್ಯಮಗಳಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಯಿತು. ಕೆಲವರು ಆ ಹುಡುಗನ ವರ್ತನೆಯನ್ನು ‘ಅಹಂಕಾರ’, ‘ಅಸಭ್ಯತೆ’ ಎಂದು ಕರೆದು ಟೀಕಿಸಿದರು. ಈ ಕಾರ್ಯಕ್ರಮದ ನಂತರ ಮಕ್ಕಳಲ್ಲಿ ಕಾಣುವ ಕೆಲವೊಂದು ಅತಿಯಾದ ವರ್ತನೆಗಳ ಬಗ್ಗೆ ಜಾಲತಾಣಗಳಲ್ಲಿ ವಿವಿಧ ರೀತಿಯ ಚರ್ಚೆಗಳು ಆಗ ತೊಡಗಿತು. ಈ ಕಂತಿನಲ್ಲಿ ಆ ಹುಡುಗ ಸ್ವಲ್ಪ ಅತಿಯಾಗಿ ವರ್ತಿಸಿದರೂ , ಇನ್ನು ಕೆಲವು ಮಕ್ಕಳಲ್ಲಿ ಇದೇ ರೀತಿಯ ಕೆಲವೊಂದು ನಡವಳಿಕೆಗಳು ಕಂಡು ಬರಬಹುದು. ಅಂತಹವುಗಳನ್ನು ವೈದ್ಯಕೀಯ ಮತ್ತು ಮಾನಸಿಕ ದೃಷ್ಟಿಯಿಂದ ನೋಡಿದಾಗ ಅದು ಅಹಂಕಾರವಲ್ಲ, ಬದಲಾಗಿ ಅತಿಯಾದ ಉತ್ತೇಜನ ಎಂಬ ಸಮಸ್ಯೆಯ ಲಕ್ಷಣ ಎಂದು ಕಂಡು ಬರುತ್ತದೆ. ಅತಿಯಾದ ಚುರುಕುತನ, ನಿಗ್ರಹ-ಹಿಡಿತವಿಲ್ಲದ ಮಾತುಗಳು, ನಿರಂತರ ಚಲನೆ, ಕ್ಷಣಮಾತ್ರವೂ ಶಾಂತವಾಗಿ ಕುಳಿತು ಕೊಳ್ಳದ ಸ್ವಭಾವ ಇರುವ ಮಕ್ಕಳು ನಮ್ಮ ಶಾಲೆಗಳಲ್ಲಿ, ಮನೆಗಳಲ್ಲಿ, ಸಾರ್ವಜನಿಕ…

Read More

ಮಡಿಕೇರಿ ಅ.29 NEWS DESK : ಕೊಡಗು ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ನೂತನ ಜಿಲ್ಲಾ ಅಧ್ಯಕ್ಷೆಯಾಗಿ ಆಯ್ಕೆಯಾದ ಜಿ.ಆರ್.ಪುಷ್ಪಲತಾ ಅವರು ಶಾಸಕ ಡಾ.ಮಂತರ್ ಗೌಡ ಅವರನ್ನು ನಗರೂರಿನ ಗೃಹ ಕಚೇರಿಯಲ್ಲಿ ಭೇಟಿ ಮಾಡಿದರು. ಈ ಸಂದರ್ಭ ಶಾಸಕರು ಜಿ.ಆರ್.ಪುಷ್ಪಲತಾ ಅವರನ್ನು ಅಭಿನಂದಿಸಿ ಶುಭಹಾರೈಸಿದರು.

Read More

ಪೊನ್ನಂಪೇಟೆ ಅ.29 NEWS DESK : ಚೊಚ್ಚಲ ಕೃತಿಯ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದು ಸಾಧನೆಗೈದ ದುದ್ದಿಯಂಡ ಮುಸ್ಕಾನ್ ಸೂಫಿ ಅವರನ್ನು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಸನ್ಮಾನಿಸಲಾಯಿತು. ಕೊಡವ ಮುಸ್ಲಿಂ ಅಸೋಸಿಯೇಷನ್ ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ ಸಹಯೋಗದಲ್ಲಿ ವಿರಾಜಪೇಟೆಯ ಸಂತ ಅನ್ನಮ್ಮ ಪ್ಯಾರಿಶ್ ಸಭಾಂಗಣದಲ್ಲಿ ನಡೆದ ಕೆಎಂಎ ಪ್ರತಿಭಾ ಪುರಸ್ಕಾರ-2025 ವಿತರಣೆ ಮತ್ತು ಸನ್ಮಾನ ಸಮಾರಂಭದಲ್ಲಿ ಮುಸ್ಕಾನ್ ಸೂಫಿ ಅವರನ್ನು ಸಂಸ್ಥೆಯ ಪರವಾಗಿ ಸಾಂಪ್ರದಾಯಿಕ ಶೈಲಿಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಆರಂಭದಿಂದಲೇ ಇಂಗ್ಲೀಷ್ ಸಾಹಿತ್ಯದಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದ ದುದ್ದಿಯಂಡ ಮುಸ್ಕಾನ್ ಸೂಫಿ ಅವರ ಮೊದಲ ಇಂಗ್ಲಿಷ್ ಕೃತಿ ‘ದಿಸ್ ಟೂ ಶೆಲ್ ಪಾಸ್’ ಅನ್ನು ಅಂತರಾಷ್ಟ್ರೀಯ ಖ್ಯಾತಿಯ ಬುಕ್ ಲಿಫ್ ಪಬ್ಲಿಕೇಶನ್ ಪ್ರಕಟಿಸಿತ್ತು. ನಂತರ ಈ ಕೃತಿ ಅಮೆರಿಕ ಮೂಲದ ಪ್ರಸಿದ್ಧ ಕವಿ ಎಮಿಲಿ ಡಿಕ್ಕಿನ್ಸನ್ ಸ್ಮರಣಾರ್ಥವಾಗಿ ನೀಡಲಾಗುವ 21ನೇ ಶತಮಾನದ ಅಂತರಾಷ್ಟ್ರೀಯ ಮಟ್ಟದ ‘ಇಂಡಿ ಆಥರ್ಸ್ ಅವಾರ್ಡ್ 2025’ ಕ್ಕೆ ನಾಮನಿರ್ದೇಶನಗೊಂಡಿತ್ತು. ಇದಕ್ಕೂ ಮೊದಲು…

Read More

ಮಡಿಕೇರಿ ಅ.29 NEWS DESK : ಕೊಡಗು ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾದ ರಂಜಿ ಪೂಣಚ್ಚ ಅವರ ನೇತೃತ್ವದ ತಂಡವು ಸೋಮವಾರಪೇಟೆ ಮತ್ತು ಕುಶಾಲನಗರ ಮಂಡಲಗಳಿಗೆ ಭೇಟಿ ನೀಡಿ ಬೆಳೆ ಸಮೀಕ್ಷೆಯನ್ನು ನಡೆಸಿತು. ಈ ಸಂದರ್ಭ ರಾಜ್ಯ ರೈತ ಮೋರ್ಚಾದ ಕಾರ್ಯದರ್ಶಿ ಡಾ.ಬಿ.ಸಿ.ನವೀನ್ ಕುಮಾರ್, ಮಾಜಿ ಸಚಿವ ಅಪ್ಪಚ್ಚು ರಂಜನ್, ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರತ್ ಚಂದ್ರ, ಮಂಡಲ ರೈತ ಮೋರ್ಚಾ ಅಧ್ಯಕ್ಷ ಮಚ್ಚಂಡ ಪ್ರಕಾಶ್ , ದಿನೇಶ್ ಚೋಡುಮಡ, ಸುಧೀಶ್ ಸಂದೀಪ್ ಮತ್ತು ರೈತ ಮೋರ್ಚಾದ ಜಿಲ್ಲಾ ಮಟ್ಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More