ಲೇಖಕ: admin

ಮಡಿಕೇರಿ ಅ.29 NEWS DESK : ಕೊಡಗರಹಳ್ಳಿ ಶಾಂತಿನಿಕೇತನ ಪ್ರೌಢಶಾಲೆಯಲ್ಲಿ ನಡೆದ ಪ್ರೌಢಶಾಲಾ ಬಾಲಕ ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ವಿರಾಜಪೇಟೆ ತಾಲ್ಲೂಕನ್ನು ಪ್ರತಿನಿಧಿಸಿದ್ದ ಸರ್ವದೈವತಾ ಪ್ರೌಢಶಾಲೆಯ ಬಾಲಕ-ಬಾಲಕಿಯರ ತಂಡ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕರ ತಂಡದಲ್ಲಿ ಲಿತೇಶ್ ಮತ್ತು ಸಫ್ವಾನ್ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಬಾಲಕಿಯರ ತಂಡದಲ್ಲಿ ದೃತಿ ಮತ್ತು ಅನ್ಹಾ ಫಾತಿಮಾ ಸ್ಪರ್ಧಿಸಿ ದ್ವಿತೀಯ ಸ್ಥಾನ ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ತರಬೇತುದಾರರಾದ ಪ್ರಮೋದ್ ಗೌಡ ತಿಳಿಸಿದ್ದಾರೆ. ರಾಜ್ಯ ಮಟ್ಟದಲ್ಲೂ ಯಶಸ್ಸು ಸಾಧಿಸಲಿ ಎಂದು ಆಡಳಿತ ಮಂಡಳಿ ಮತ್ತು ಬೋಧಕ ವರ್ಗ ಹಾರೈಸಿದೆ.

Read More

ನಾಪೋಕ್ಲು ಅ.29 NEWS DESK : ಬೆಂಗಳೂರಿನಲ್ಲಿ ಸಹಾಯಕ ಸಬ್ ಇನ್ಸ್‍ಪೆಕ್ಟರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂಪಾಜೆಯ ಉದಯ ಕುಮಾರ್ ಹನಿಯಡ್ಕ(56) ನಿಧನ ಹೊಂದಿದ್ದಾರೆ. ಬೆಂಗಳೂರಿನಲ್ಲಿ ಟ್ರಾಫಿಕ್ ನಲ್ಲಿ ಸಹಾಯಕ ಇನ್ಸ್ ಪೆಕ್ಟರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂಲತಃ ಸಂಪಾಜೆ ಗ್ರಾಮದ ಕೈಪಡ್ಕ ನಿವಾಸಿ ಉದಯ ಹನಿಯಡ್ಕ ಅಲ್ಪಕಾಲದ ಅಸೌಖ್ಯದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರು ಹನಿಯಡ್ಕ ಕುಟುಂಬದ ದಿವಂಗತ ಆನಂದ ಗೌಡ ಹಾಗೂ ರುಕ್ಕಿಣಿ ದಂಪತಿಗಳ ಪುತ್ರರಾಗಿದ್ದು. ಸುಮಾರು 30 ವರ್ಷದಿಂದ ಬೆಂಗಳೂರಿನಲ್ಲಿ ಸಹಾಯಕ ಸಬ್‍ಇನ್ಸ್ ಪೆಕ್ಟರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇತ್ತೀಚಿಗೆ ಆರೋಗ್ಯದಲ್ಲಿ ಏರುಪೇರು ಆಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಮೃತರು ಪತ್ನಿ ರುಕ್ಮಿಣಿ ಮಕ್ಕಳಾದ ಡಿಂಪಲ್, ದರ್ಶನ್ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯನ್ನು ಸಂಪಾಜೆ ಗ್ರಾಮದ ಕೈಪಡ್ಕದಲ್ಲಿ ನೆರವೇರಿಸಲಾಯಿತು. ವರದಿ : ದುಗ್ಗಳ ಸದಾನಂದ.

Read More

ಮಡಿಕೇರಿ NEWS DESK ಅ.28 : ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿ ಗಲ್ಲಿಗೇರಿಸಲ್ಪಟ್ಟ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ಅ.31ರಂದು ಮಡಿಕೇರಿಯಲ್ಲಿ ನಡೆಯಲಿದ್ದು, ಸರ್ವರೂ ಪಾಲ್ಗೊಳ್ಳುವಂತೆ ಚೇರಂಬಾಣೆ ಗೌಡ ಸಮಾಜ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಚೇರಂಬಾಣೆ ಗೌಡ ಸಮಾಜದ ಅಧ್ಯಕ್ಷ ಕೊಡಪಾಲ ಗಣಪತಿ ಅವರು ಶುಕ್ರವಾರ ಬೆಳಿಗ್ಗೆ 9.30 ಗಂಟೆಗೆ ನಗರದ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಇರುವ ಸ್ಮಾರಕ ಸ್ಥಳದಲ್ಲಿ ಸ್ವಾತಂತ್ರ‍್ಯ ಹೋರಾಟಗಾರನಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಲಾಗುವುದು ಮತ್ತು ಕೋಟೆ ಆವರಣದಲ್ಲಿ ಸಂಸ್ಮರಣಾ ದಿನದ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ. ಜಿಲ್ಲೆಯ ಸರ್ವ ಅರೆಭಾಷೆ ಗೌಡ ಬಂಧುಗಳು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವೀರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರಿಗೆ ಗೌರವ ಅರ್ಪಿಸಬೇಕೆಂದು ಮನವಿ ಮಾಡಿದ್ದಾರೆ. 1857ರಲ್ಲಿ ನಡೆದ ಸಿಪಾಯಿ ದಂಗೆಯನ್ನು ಮೊದಲ ಸ್ವಾತಂತ್ರ ಸಂಗ್ರಾಮ ಎಂದು ಗುರುತಿಸಲಾಗಿದೆ. ಆದರೆ ಅದಕ್ಕೂ ಮೊದಲೇ ಕೊಡಗು, ದಕ್ಷಿಣ ಕನ್ನಡ ಭಾಗದಲ್ಲಿ…

Read More

ಮಡಿಕೇರಿ NEWS DESK ಅ.28 : ಬ್ರಿಟಿಷರ ವಿರುದ್ಧ ಹೋರಾಡಿ ವೀರಮರಣವನ್ನಪ್ಪಿದ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ಅ.31ರಂದು ಮಡಿಕೇರಿಯಲ್ಲಿ ನಡೆಯಲಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಕೊಡಗು ಗೌಡ ವಿದ್ಯಾ ಸಂಘದ ಅಧ್ಯಕ್ಷ ನವೀನ್ ಅಂಬೆಕಲ್ ಅವರು ಶುಕ್ರವಾರ ಬೆಳಿಗ್ಗೆ 9.30 ಗಂಟೆಗೆ ನಗರದ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಇರುವ ಸ್ಮಾರಕ ಸ್ಥಳದಲ್ಲಿ ಸ್ವಾತಂತ್ರ‍್ಯ ಹೋರಾಟಗಾರನಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಲಾಗುವುದು ಮತ್ತು ಕೋಟೆ ಆವರಣದಲ್ಲಿ ಸಂಸ್ಮರಣಾ ದಿನದ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ. ಜಿಲ್ಲೆಯ ಸರ್ವ ಅರೆಭಾಷೆ ಗೌಡ ಬಂಧುಗಳು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವೀರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರಿಗೆ ಗೌರವ ಅರ್ಪಿಸಬೇಕೆಂದು ಮನವಿ ಮಾಡಿದ್ದಾರೆ. 1857ರಲ್ಲಿ ನಡೆದ ಸಿಪಾಯಿ ದಂಗೆಯನ್ನು ಮೊದಲ ಸ್ವಾತಂತ್ರ ಸಂಗ್ರಾಮ ಎಂದು ಗುರುತಿಸಲಾಗಿದೆ. ಆದರೆ ಅದಕ್ಕೂ ಮೊದಲೇ ಕೊಡಗು, ದಕ್ಷಿಣ ಕನ್ನಡ ಭಾಗದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ನಡೆದಿರುವ ಬಗ್ಗೆ ಇತಿಹಾಸವಿದೆ. ಬ್ರಿಟಿಷರ…

Read More

ಮಡಿಕೇರಿ ಅ.28 NEWS DESK : ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಪಡಿತರ ಕಾರ್ಡುಗಳ ಪರಿಷ್ಕರಣಾ ಕಾರ್ಯ ನಡೆಯುತ್ತಿದ್ದು, ಈ ಅವಕಾಶವನ್ನು ಅರ್ಹರು ಬಳಸಿಕೊಳ್ಳುವಂತಾಗಬೇಕು ಎಂದು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರಾದ ತಿತಿರ ಧರ್ಮಜ ಉತ್ತಪ್ಪ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಅರ್ಹರಿಗೆ ಬಿಪಿಎಲ್‍ನಿಂದ ಎಪಿಎಲ್‍ಗೆ ಪಡಿತರ ಚೀಟಿ ವರ್ಗಾವಣೆ ಆಗಿದ್ದಲ್ಲಿ, ಆಹಾರ ಇಲಾಖೆ ಅಥವಾ ತಾಲ್ಲೂಕಿನ ತಹಶೀಲ್ದಾರ್ ಕಚೇರಿಯ ಆಹಾರ ಶಿರಸ್ತೆದಾರರಿಗೆ ಮನವಿ ಸಲ್ಲಿಸುವಂತಾಗಬೇಕು. ಇದರಿಂದ ಪರಿಶೀಲಿಸಿ ಪುನಃ ಬಿಪಿಎಲ್ ಕಾರ್ಡ್ ವಿತರಿಸಲಿದ್ದಾರೆ. ಆ ನಿಟ್ಟಿನಲ್ಲಿ ಆಹಾರ ಇಲಾಖೆಯವರು ಅಗತ್ಯ ಜಾಗೃತಿ ಮೂಡಿಸುವಂತೆ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರು ನಿರ್ದೇಶನ ನೀಡಿದರು. ಅನ್ನಭಾಗ್ಯ ಯೋಜನೆಯಡಿ ಪ್ರತೀ ಫಲಾನುಭವಿಗೆ 10 ಕೆ.ಜಿ. ಅಕ್ಕಿ ವಿತರಣೆಯಾಗುತ್ತಿದೆ. ಮುಂದಿನ ದಿನಗಳಲ್ಲಿ…

Read More

ಮಡಿಕೇರಿ ಅ.28 NEWS DESK : ಮಡಿಕೇರಿ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನಲ್ಲಿ ರೋಟರಿ ಮಡಿಕೇರಿ ವತಿಯಿಂದ ರೋಟರಾಕ್ಟ್ ಸಂಘದ ಪದಗ್ರಹಣ ಕಾರ್ಯಕ್ರಮ ನಡೆಯಿತು. ರೋಟರಾಕ್ಟ್ ಸಂಘದ 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಜೀವನ್ ಹೆಚ್.ಕೆ, ಉಪಾಧ್ಯಕ್ಷರಾಗಿ ನಿಷ್ಮ, ಕಾರ್ಯದರ್ಶಿಯಾಗಿ ರಾಹುಲ್ ಪಿ.ಆರ್, ಸಾಜೆರ್ಂಟ್ ಅಟ್ ಅಮ್ರ್ಸ್ ಆಗಿ ಮಮತಾ, ಖಜಾಂಚಿ ಗಾಯತ್ರಿ, ಕ್ಲಬ್ ಸರ್ವಿಸ್ ನಿರ್ದೇಶಕರಾಗಿ ಮೇಘನಾ ಹಾಗೂ ಸಮುದಾಯ ಸೇವಾ ನಿರ್ದೇಶಕರಾಗಿ ಅಕ್ಷತಾ ಅವರು ಅಧಿಕಾರ ವಹಿಸಿಕೊಂಡರು. ಅನುಸ್ಥಾಪನ ಅಧಿಕಾರಿಯಾಗಿ ಉಪಸ್ಥಿತರಿದ್ದ ರೋ.ಮನೋಹರ್ ಹೆಚ್. ಕಾಮತ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ರೋಟರಿ ಕಾರ್ಯಚಟುವಟಿಕೆಯ ಕುರಿತು ವಿವರಿಸಿದರು ಮತ್ತು ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು. ರೋಟರಿ ಮಡಿಕೇರಿಯ ಅಧ್ಯಕ್ಷರಾದ ರೋ.ಲಲಿತ ರಾಘವನ್ ಅವರು ರೋಟರಿ ಸಂಸ್ಥೆ ಮತ್ತು ಶುಚಿತ್ವದ ಮಹತ್ವವನ್ನು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಕಾಲೇಜ್ ನ ಪ್ರಾಂಶುಪಾಲರಾದ ಡಾ.ವೆಂಕಟೇಶ ಪ್ರಸನ್ನ, ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕರಾದ ಡಾ.ಅನುಪಮಾ ಸಭಾಪತಿ, ರೋಟರಾಕ್ಟ್ ಸಂಯೋಜಕರಾದ ಸುಪ್ರಿಯಾ, ಕಳೆದ…

Read More

ಸುಂಟಿಕೊಪ್ಪ ಅ.28 NEWS DESK : ಜಿಲ್ಲಾ ಮಟ್ಟದ ಟೇಬಲ್‍ಟೆನ್ನಿಸ್ ಪಂದ್ಯಾವಳಿಯಲ್ಲಿ ಕೊಡಗರಹಳ್ಳಿ ಶಾಂತಿನಿಕೇತನ ಶಾಲೆಯ ಬಾಲಕಿಯರ ತಂಡವು ಜಿಲ್ಲಾ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಜಿಲ್ಲಾ ಮಟ್ಟದ 14ರ ವಯೋಮನದವರಿಗೆ ಟೇಬಲ್ ಟೆನ್ನಿಸ್ ಪಂದ್ಯಾವಳಿಯನ್ನು ಕೊಡಗರಹಳ್ಳಿ ಶಾಂತಿನಿಕೇತನ ಶಾಲೆಯಲ್ಲಿ ಆಯೋಜಿಸಲಾಗಿದ್ದು, ಪಂದ್ಯಾವಳಿಯಲ್ಲಿ ಜಿಲ್ಲೆಯ 5 ತಾಲ್ಲೂಕುಗಳ ತಂಡಗಳು ಭಾಗವಹಿಸಿದ್ದವು. ಅತಿಥೇಯ ಶಾಂತಿನೀಕೇತನದ ಬಾಲಕಿಯರ ತಂಡವು ಮಡಿಕೇರಿ ತಾಲ್ಲೂಕು ತಂಡವನ್ನು ಸೋಲಿಸುವ ಮೂಲಕ ಪ್ರಶಸ್ತಿಯನ್ನು ಪಡೆದು ವಿಭಾಗಿಯ ಮಟ್ಟಕ್ಕೆ ಆಯ್ಕೆಗೊಂಡಿತು.

Read More

ಮಡಿಕೇರಿ ಅ.28 NEWS DESK  : ರಾಷ್ಟ್ರ ಪ್ರಶಸ್ತಿ ವಿಜೇತ ‘ಕಂದೀಲು’ ಕನ್ನಡ ಚಲನಚಿತ್ರದ ನಿರ್ದೇಶಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರನ್ನು ಸಂಸ್ಕೃತಿ ಸಿರಿ ಬಳಗ ಟ್ರಸ್ಟ್ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿತು. ಮೇಕೇರಿಯ ಕೂರ್ಗ್ ಗವದನ ರೆಸಾರ್ಟ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಯಶೋಧ ಪ್ರಕಾಶ್ ಅವರು ನನ್ನ ನಿರ್ದೇಶನದ ‘ಕಂದೀಲು’ ಕನ್ನಡ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ದೊರತ್ತಿರುವುದು ಸಂತೋಷ ಮತ್ತು ಹೆಮ್ಮೆ ಎನಿಸಿದೆ. ಈ ಪ್ರಶಸ್ತಿ ಸಿನಿರಂಗದಲ್ಲಿ ನನ್ನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದರು. ಒಂದು ಕುಟುಂಬದಂತೆ ಕಾರ್ಯನಿರ್ವಹಿಸುತ್ತಿರುವ ಸಂಸ್ಕøತಿ ಸಿರಿ ಬಳಗ ಟ್ರಸ್ಟ್ ಕಲಾವಿದರನ್ನು ಸನ್ಮಾನಿಸಿ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲೂ ಟ್ರಸ್ಟ್ ಉತ್ತಮ ಕಾರ್ಯಚಟುವಟಿಕೆಗಳೊಂದಿಗೆ ಮತ್ತಷ್ಟು ಬೆಳೆಯಲಿ ಎಂದು ಶುಭ ಹಾರೈಸಿದರು. ಟ್ರಸ್ಟ್ ನ ಗೌರವಾಧ್ಯಕ್ಷ ಹಾಗೂ ಸರಕಾರಿ ಆಸ್ಪತ್ರೆಯ ತುರ್ತು ಘಟಕದ ಮುಖ್ಯಸ್ಥ ಡಾ.ಕೋಲೆಯಂಡ ಮೋಹನ್ ಅಪ್ಪಾಜಿ ಅವರು ಮಾತನಾಡಿ ಏಳುಬೀಳಿನ ಸಿನಿಮಾರಂಗದಲ್ಲಿ ಚಿತ್ರ ನಿರ್ಮಾಣ ಕಷ್ಟದ ಕೆಲಸವಾಗಿದೆ. ಆದರೆ ನಿರ್ದೇಶಕಿ ಕೊಟ್ಟುಕತ್ತೀರ ಯಶೋಧ…

Read More

ಮಡಿಕೇರಿ ಅ.28 NEWS DESK : ಕೊಡಗರಹಳ್ಳಿ ಶಾಂತಿನಿಕೇತನ ಶಾಲೆಯಲ್ಲಿ ನಡೆದ ಪ್ರೌಢ ಹಾಗೂ ಪ್ರಾಥಮಿಕ ವಿಭಾಗದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಾಢಶಾಲಾ ವಿಭಾಗದ ಪಂದ್ಯಾವಳಿಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಾದ ಸೃಷ್ಟಿ ಬಿ.ಎಸ್, ಶ್ರೀವತ್ಸ ಯು.ಜಿ ಹಾಗೂ ತರುಣ್ ಎನ್.ಎಂ., ಪ್ರಾಥಮಿಕ ವಿಭಾಗದ ಸ್ಪರ್ಧೆಯಲ್ಲಿ 7ನೇ ತರಗತಿಯ ವಿದ್ಯಾರ್ಥಿಗಳಾದ ಮಾಲೆಟ್ಟಿರ ಚಾಲ್ಸಿ, ಎಂ.ಎ.ಅಜಾನ್ ಸ್ಪರ್ಧಿಸಿದ್ದರು. ಇವರಿಗೆ ಚೆಸ್ ಮಾಸ್ಟರ್ ಮಣಿ ಮಾರ್ಗದರ್ಶನ ನೀಡಿದ್ದಾರೆ. ಈ ಒಂದು ಸಂದರ್ಭದಲ್ಲಿ ಕಾವೇರಿ ಶಾಲಾ ಅಧ್ಯಕ್ಷರಾದ ಸುದೇಶ್ ಬಿ.ಎಸ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿಯವರು, ಮುಖ್ಯ ಶಿಕ್ಷಕಿ, ಸಂಯೋಜಕಿ, ಬೋಧಕ ಬೋಧಕೇತರ ವೃಂದದವರು ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿ, ಶುಭಹಾರೈಸಿದರು.

Read More

ಮಡಿಕೇರಿ ಅ.28 NEWS DESK : ಡಾ.ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆ ಸಾಹಿತ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದ್ದು, ಅಮೃತ ಪ್ರಕಾಶ ಪತ್ರಿಕೆಯ ಸರಣಿ, 45ನೇಯ ಕೃತಿ ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ.ಗಣೇಶ್ ರೈ ಅವರ ಸಾಹಿತ್ಯ ಮತ್ತು ಡಿಜಿಟಲ್ ಗ್ರಾಫಿಕ್ ನ ಪರಿಕಲ್ಪನೆ ಮತ್ತು ವಿನ್ಯಾಸದಲ್ಲಿ ಮೂಡಿ ಬಂದಿರುವ ಕೊಡಗಿನ ಕುಲದೇವತೆ ಕಾವೇರಿ ಎಂಬ ಕೃತಿ ಬಿಡುಗಡೆಗೊಂಡಿತು. ಮಂಗಳೂರಿನ ಕೊಡವ ಸಮಾಜದ ಉಪಾಧ್ಯಕ್ಷೆ ಬೊಳ್ಳಿಯಾಂಡ ಕೃತಿ ಸೋಮಯ್ಯ ನಗರದ ಪತ್ರಿಕಾ ಭವನದಲ್ಲಿ ಬಿಡುಗಡೆಗೊಳಿಸಿ ಮಾತನಾಡಿ, ಕಾವೇರಿ ಮಾತೆಯ ಆದಿಯನ್ನು ವಿವರಣೆ ಮತ್ತು ವರ್ಣ ಚಿತ್ರದ ಮೂಲಕ ಕಣ್ಣಿಗೆ ಬಿ.ಕೆ.ಗಣೇಶ್ ರೈ ಅವರು ಕಟ್ಟಿಕೊಟ್ಟಿದ್ದಾರೆ. ಎಲ್ಲರಿಗೂ ಕಾವೇರಿ ಮಾತೆಯ ಪುರಾಣ ಕಥೆಗಳ ಪರಿಚಯ ಇರುವುದಿಲ್ಲ. ಈ ಕೃತಿಯ ಓದುಗರ ಮೂಲಕ ಕಥೆಯ ಸಾಕ್ಷಾತ್ಕಾರವಾಗಲಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ಅರೇಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಗೌಡ ಮಾವಜಿ, ಕಾವೇರಿ ಮಾತೆಯ…

Read More