ಲೇಖಕ: admin

ಮಡಿಕೇರಿ ಅ.28 NEWS DESK : ಕೋಕೇರಿ ಕ್ರಿಕೆಟ್ ಕ್ಲಬ್ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಿಸಲಾಯಿತು. ಕೋಕೇರಿ ಕ್ರಿಕೆಟ್ ಕ್ಲಬ್‍ನ ಅಧ್ಯಕ್ಷ ಸದಸ್ಯರು ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಿದರು. ಈ ಸಂದರ್ಭ ಶಾಲಾ ಶಿಕ್ಷಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಕ್ಲಬ್‍ನ ಅಧ್ಯಕ್ಷರು ಹಾಗೂ ಸದಸ್ಯರಿಗೆ ಶಾಲೆಯ ವತಿಯಿಂದ ಧನ್ಯವಾದ ಸಲ್ಲಿಸಲಾಯಿತು.

Read More

  ಮಡಿಕೇರಿ ಅ.28 NEWS DESK : ವಿರಾಜಪೇಟೆಯಲ್ಲಿ ಆಯೋಜನೆಗೊಂಡ ಆಲ್ ಇಂಡಿಯಾ 5′ ರ ಡ್ರಗ್ ಮುಕ್ತ ಭಾರತ ಫುಟ್ಬಾಲ್ ಪಂದ್ಯಾವಳಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ನಶೆಯ ನಕಲನ್ನು  ಸುಡುವ ಮೂಲಕ ಚಾಲನೆ ನೀಡಿದರು.  ವಿರಾಜಪೇಟೆಯ ತಾಲೂಕು ಮೈದಾನದಲ್ಲಿ ನಡೆದ  ಪಂದ್ಯಾವಳಿಯಲ್ಲಿ ಡ್ರಗ್ಸ್ ಫ್ರೀ ಇಂಡಿಯಾ (ನಶೆ ಮುಕ್ತ ಭಾರತ) ಪರಿಕಲ್ಪನೆಯೊಂದಿಗೆ, ನಶೆಯ ದುಷ್ಪರಿಣಾಮಗಳನ್ನು ಸಾರುವ ಸದುದ್ದೇಶದಿಂದ ಹಾಗೂ ಯುವ ಜನತೆ ಡ್ರಗ್ಸ್ ನಿಂದ ದೂರ ಇರಬೇಕು ಎಂಬ ಸಂದೇಶ ಸಾರಲಾಯಿತು. ಈ ಸಂದರ್ಭ ಮಾತನಾಡಿದ ಶಾಸಕರು, ಜಗತ್ತಿನಾದ್ಯಂತ ಬಹುತೇಕ ಎಲ್ಲಾ ರಾಷ್ಟ್ರಗಳು ಫುಟ್ಬಾಲ್ ಕ್ರೀಡೆಗೆ ವಿಶೇಷ ಆದ್ಯತೆ ನೀಡುತ್ತಿದೆ. ನಮ್ಮ ದೇಶದಲ್ಲಿಯೂ ಫುಟ್ಬಾಲ್ ಕ್ರೀಡೆ ಜನಪ್ರಿಯಗೊಳ್ಳುತ್ತಿದ್ದು, ಸಾಮಾಜಿಕ ಕಳಕಳಿಯ ಉದ್ದೇಶದಿಂದ ಆಯೋಜನೆಗೊಂಡಿರುವ ಈ ಪಂದ್ಯಾವಳಿಯು ನಾಡಿಗೆ ಉತ್ತಮ ಫೂಟ್ಬಾಲ್ ಪಟುಗಳನ್ನು ನೀಡುವಂತಾಗಲಿ ಎಂದು ಹಾರೈಸಿದರು. ಪುರಸಭೆ ಸದಸ್ಯರು ರಾಫಿ, ಡಿಸಿಸಿ ಸದಸ್ಯರು ಸತೀಶ್, ಮಂಜುನಾಥ್ ಹಾಗೂ ಕ್ರೀಡಾ ಪ್ರೇಮಿಗಳು ಹಾಗೂ…

Read More

ಮಡಿಕೇರಿ ಅ.28 NEWS DESK : ಪೊನ್ನಂಪೇಟೆಯಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಕ್ರೀಡಾ ವಸತಿ ನಿಲಯಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.  ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ಈ ಕ್ರೀಡಾ ನಿಲಯದಲ್ಲಿ ಯುವ ಕ್ರೀಡಾಪಟುಗಳಿಗೆ  ಓದು ಹಾಗೂ ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಅನುಕೂಲವಾಗುವಂತೆ ಎಲ್ಲಾ ರೀತಿಯ ಆಧುನಿಕ ಸವಲತ್ತುಗಳೊಂದಿಗೆ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ವಿವರಿಸಿದರು. ಮುಂದಿನ ದಿನಗಳಲ್ಲಿ ಇಲ್ಲಿಗೆ ಉತ್ತಮ ತರಬೇತುದಾರರನ್ನು ನೇಮಿಸಲು ಸಹ ಸರ್ಕಾರದೊಂದಿಗೆ ಮಾತನಾಡಿರುವುದಾಗಿ ಶಾಸಕರು ತಿಳಿಸಿದರು. ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಕಾಳಿಮಾಡ ಪ್ರಶಾಂತ್, ತಾಲೂಕು ಬಗರ್ ಹುಕುಂ ಅಧ್ಯಕ್ಷರು ಅಣ್ಣಳಮಾಡ ಲಾಲಾ ಅಪ್ಪಣ್ಣ, ಪಟ್ಟಣ ಪಂಚಾಯಿತಿ ಸದಸ್ಯರು ಭಾರತಿ, ಸುನಿತಾ, ಪಕ್ಷದ ಹಿರಿಯರು ಮುಕಳೇರ ಕುಶಾಲಪ್ಪ, ಶಾಸಕರ ಹಿರಿಯ ಸಹೋದರರಾದ ಅಜ್ಜಿಕುಟ್ಟಿರ ನರೇನ್ ಕಾರ್ಯಪ್ಪ,ಎರ್ಮು ಹಾಜಿ, ಶಾಜಿ ಅಚ್ಚುತನ್, ದಿಲು, ಹ್ಯಾರೀಶ್, ಅಜ್ಜಿಕುಟ್ಟಿರ ಪೋನು, ಗಿರೀಶ್, ಸುಕು ಬೋಪಣ್ಣ,…

Read More

ಮಡಿಕೇರಿ ಅ.28 NEWS DESK : ಯಾವುದೇ ಸಮಾಜ ಅಭಿವೃದ್ಧಿ ಹೊಂದಬೇಕೆಂದರೆ ಅಲ್ಲಿಯ ಮಹಿಳೆಯರು ಎಲ್ಲಾ ರಂಗದಲ್ಲೂ ಸಕ್ರಿಯರಾಗಿ ತಮ್ಮನ್ನು ತೊಡಗಿಸಿಕೊಂಡು ಸಮಾಜದ ಏಳಿಗೆಗೆ ಶ್ರಮಿಸುವಂತಾಗಬೇಕೆಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಕರೆ ನೀಡಿದರು. ಹಾತೂರು ಭಗವತಿ ಯುವತಿ ಮಂಡಳಿ ವತಿಯಿಂದ ಸರಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ  ಅಭಿನಂದನಾ ಕಾರ್ಯಕ್ರಮದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಇಂದಿನ ಕಾರ್ಯಕ್ರಮದ ಮುಖ್ಯ ಕೇಂದ್ರ ಬಿಂದು ದಾನಿಗಳಾದ ಗಿಣಿ ಗಣಪತಿಯವರಾಗಿದ್ದಾರೆ. ತಾವು ದುಡಿದ ಹಣದಲ್ಲಿ ಒಂದು ಭಾಗವನ್ನು ಸಾಮಾಜಿಕ ಕಳಕಳಿಯಿಂದ ದಾನ ಮಾಡುವುದು ಎಲ್ಲರಿಗೂ ಮಾದರಿ ಎಂದು ಬಣ್ಣಿಸಿದರು. ಇವರ ಈ ಕಾರ್ಯ ಇತರರಿಗೂ ಸ್ಪೂರ್ತಿಯಾಗಲಿ ಎಂದು ಕರೆ ನೀಡಿದರು. ಜನತೆ ತನಗೆ ಕೊಟ್ಟ ಅಧಿಕಾರದ ಸದ್ಬಳಕೆ ಆಗಬೇಕೆಂದರೆ ಜನಸಾಮಾನ್ಯರ ಕಷ್ಟ ನಷ್ಟಗಳಿಗೆ ಸ್ಪಂದಿಸುವುದು ತನ್ನ ಕರ್ತವ್ಯವಾಗಿದೆ ಎಂದು ಹೇಳಿದರು.  ಭಗವತಿ ಯುವತಿ ಮಂಡಳಿಯವರು ಹಲವಾರು ಸಾಮಾಜಿಕ, ಶೈಕ್ಷಣಿಕ ಹಾಗೂ ಜನಪರವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಇದು ನಾಡಿನ ಇತರ…

Read More

ನಾಪೋಕ್ಲು ಅ.28 NEWS DESK : ಕಾವೇರಿ ತೀರ್ಥೋದ್ಭವ ಕಳೆದು ಪವಿತ್ರ ತುಲಾ (ತೋಲ್ಯಾರ್) ಮಾಸದ ಹತ್ತನೇ ದಿನದ ಉತ್ಸವ ಪತ್ತಾಲೋಧಿ ಆರಾಧನೋತ್ಸವವು ಕಕ್ಕಬೆಯ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಶ್ರದ್ಧಾ ಭಕ್ತಿಯಿಂದ ಸಂಪನ್ನಗೊಂಡಿತು. ದೇವಾಲಯದಲ್ಲಿ ಪರದಂಡ ಕುಟುಂಬಸ್ಥರು ಪತ್ತಾಲೋಧಿ ಉತ್ಸವ ನೆರವೇರಿಸಿದರು. ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಮಹಾಪೂಜೆ ಸತ್ಯನಾರಾಯಣ ಪೂಜೆ, ತುಲಾಭಾರ ಸೇವೆ ಸಲ್ಲಿಸಿದರು. ಉತ್ಸವದ ಅಂಗವಾಗಿ ದೇವಾಲಯ ಹಾಗೂ ಗರ್ಭಗುಡಿಯನ್ನು ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಉತ್ಸವ ಮೂರ್ತಿಯೊಂದಿಗೆ ದೇವರ ನೃತ್ಯ ಬಲಿ ಜರುಗಿತು. ಈ ಸಂದರ್ಭ ದೇವಾಲಯದ ಭಕ್ತ ಜನ ಸಂಘದ ಅಧ್ಯಕ್ಷರೂ, ದೇವತಕ್ಕರಾದ ಪರದಂಡ ಸುಬ್ರಮಣಿ ಕಾವೇರಪ್ಪ ವಿಶೇಷ ಪ್ರಾರ್ಥನೆ ಸಲ್ಲಿಸಿ, ನಾಡಿನ ಎಲ್ಲ ಸಮುದಾಯದ ಕ್ಷೇಮಾಭಿವೃದ್ಧಿ, ಬೆಳೆ ರಕ್ಷಣೆ, ಸುಖ ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಸಾಮೂಹಿಕ ಅನ್ನ ಸಂತರ್ಪಣೆ ನಡೆಯಿತು. ಕಕ್ಕಬ್ಬೆಯ ಪಾಡಿ ಇಗ್ಗುತ್ತಪ್ಪ ದೇವಾಲಯ ಸೇರಿದಂತೆ ಪೇರೂರು, ನೆಲಜಿ ಗ್ರಾಮಗಳ ಇಗ್ಗುತ್ತಪ್ಪ ದೇವಾಲಯಗಳಲ್ಲೂ ಪತ್ತಲೋದಿ ಉತ್ಸವ ಸಂಭ್ರಮದಿಂದ ನಡೆಯಿತು.…

Read More

ಕಾರ್ಕಳ ಅ.28 NEWS DESK : ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ವಿವಿಧ ಹಂತಗಳಲ್ಲಿ ಶಿಕ್ಷಕರ – ಪಾಲಕರ ಸಭೆಯನ್ನು ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ ನಡೆಸಲಾಯಿತು. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ, ಜೀವನ ಮೌಲ್ಯಗಳನ್ನು ಕುರಿತು ನಡೆದ ಕಾರ್ಯಕ್ರಮವು ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸುವ ವೇದಿಕೆಯಾಯಿತು. ಸಹಸಂಸ್ಥಾಪಕರುಗಳಾದ ವಿದ್ವಾನ್ ಗಣಪತಿ ಭಟ್ ಅವರು ಮಾತನಾಡಿ, ‘ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಶಿಕ್ಷಣ ಸಂಸ್ಥೆ, ಪೋಷಕರು ಮತ್ತು ಶಿಕ್ಷಕರ ತ್ರಿಕೋನ ಸಹಕಾರ ಅತ್ಯವಶ್ಯಕ’ ಎಂದು ಹೇಳಿದರು. ಅಶ್ವತ್ ಎಸ್.ಎಲ್ ‘ಶಿಕ್ಷಕರು ಮತ್ತು ಪಾಲಕರು ಇಬ್ಬರು ಒಂದೇ ಹಾದಿಯಲ್ಲಿ ನಡೆದು ವಿದ್ಯಾರ್ಥಿಗೆ ಮಾರ್ಗದರ್ಶನ ನೀಡಿದಾಗ, ಸಮಾಜಕ್ಕೆ ಒಳ್ಳೆಯ ನಾಗರಿಕರನ್ನು ರೂಪಿಸಲು ಸಾಧ್ಯವಾಗುತ್ತದೆ’ ಎನ್ನುತ್ತಾ ಕ್ರಿಯೇಟಿವ್ ನ ಕಾರ್ಯ ಯೋಜನೆಗಳ ಬಗ್ಗೆ ವಿವರಣೆಗಳನ್ನು ನೀಡಿದರು. ಡಾ. ಬಿ.ಗಣನಾಥ ಶೆಟ್ಟಿ ಮಾತನಾಡಿ ‘ವಿದ್ಯಾರ್ಥಿಗಳು ತಮ್ಮ ಸಮಯವನ್ನು ಸದುಪಯೋಗಪಡಿಸಿಕೊಂಡು, ಶ್ರದ್ಧೆ ಮತ್ತು ಶ್ರಮದಿಂದ ಓದುತ್ತ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಯಶಸ್ವಿಯಾಗಬೇಕು’ ಎಂದು ಕರೆ ನೀಡಿದರು. ಗಣಪತಿ…

Read More

ಮಡಿಕೇರಿ ಅ.28 NEWS DESK : ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆಯು ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್, 29 ರಂದು ಬೆಳಗ್ಗೆ 11 ಗಂಟೆಗೆ ನಗರಸಭೆ ಕೌನ್ಸಿಲ್ ಸಭಾಂಗಣದಲ್ಲಿ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತರಾದ ಎಚ್.ಆರ್.ರಮೇಶ್ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಅ.27 NEWS DESK : ಕೊಡವ ಕುಟುಂಬಗಳ ನಡುವಣ ಮುಂದಿನ ಸಾಲಿನ ‘ಚೇನಂಡ ಕಪ್ ಹಾಕಿ ಉತ್ಸವ’ಕ್ಕೆ 450ಕ್ಕೂ ಹೆಚ್ಚಿನ ಕೊಡವ ಕುಟುಂಬ ತಂಡಗಳು ಪಾಲ್ಗೊಳ್ಳುವಂತೆ ಮಾಡುವ ಗುರಿಯೊಂದಿಗೆ, ಅತ್ಯಂತ ವಿಶಿಷ್ಟವಾಗಿ ಉತ್ಸವವನ್ನು ಹಾಕಿ ಆಚರಿಸಲು ಉದ್ದೇಶಿಸಲಾಗಿದೆಯೆಂದು ಹಾಕಿ ಉತ್ಸವ ಆಯೋಜಕ ಸಮಿತಿಯ ಪದಾಧಿಕಾರಿಗಳು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ವಿವರಗಳನ್ನು ನೀಡಿದ ಚೇನಂಡ ಕಪ್ ಹಾಕಿ ಉತ್ಸವ ಆಯೋಜಕ ಸಮಿತಿಯ ಕಾರ್ಯದರ್ಶಿ ಸಿ.ಎಸ್. ಮಧು ದೇವಯ್ಯ, ನಾಪೋಕ್ಲುವಿನಲ್ಲಿ ಮುಂದಿನ 2026ನೇ ಸಾಲಿನ ಏ.5ರಿಂದ ಮೇ 2ರವರೆಗೆ 26ನೇ ಸಾಲಿನ ಚೇನಂಡ ಕಪ್ ಹಾಕಿ ಉತ್ಸವ ನಡೆಯಲಿದೆ. ಈ ಹಿಂದೆ 2024 ರಲ್ಲಿ ಆಯೋಜಿತ ಕುಂಡ್ಯೋಳಂಡ ಕುಟುಂಬದ ಹಾಕಿ ಉತ್ಸವವು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗಿದ್ದರೆ, ಈ ಸಾಲಿನಲ್ಲಿ ನಡೆದ ಮುದ್ದಂಡ ಕಪ್ ಹಾಕಿ ಉತ್ಸವ ಬುಕ್ ಆಫ್ ವಲ್ರ್ಡ್ ರೆಕಾರ್ಡ್‍ನಲ್ಲಿ ಸೇರ್ಪಡೆಯಾಗಿದೆ. ಚೇನಂಡ ಕಪ್ ಹಾಕಿ ಉತ್ಸವದಲ್ಲಿ ಈ ಹಿಂದಿನ ಉತ್ಸವಗಳಲ್ಲಿನ ಮಹತ್ವದ ಕಾರ್ಯಕ್ರಮಗಳನ್ನು ಮುಂದುವರೆಸುವುದರೊಂದಿಗೆ, ಮತ್ತಷ್ಟು ವಿಶೇಷವಾಗಿ ನಡೆಸುವ…

Read More

ಮಡಿಕೇರಿ ಅ.27 NEWS DESK : ಮಡಿಕೇರಿ ಅ.27 : ಕೊಡವ ನೆಲದ ಆದಿಮಸಂಜಾತ ಏಕ ಜನಾಂಗೀಯ ಆ್ಯನಿಮಿಸ್ಟಿಕ್ ನಂಬಿಕೆಯ ಕೊಡವರ ಸರ್ವಾಂಗೀಣ ವಿಕಾಸ, ಸಬಲೀಕರಣ ಮತ್ತು ರಕ್ಷಣೆ ದೇಶದ ಪವಿತ್ರ ಸಂವಿಧಾನದಿಂದ ಮಾತ್ರ ಸಾಧ್ಯವೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಪ್ರತಿಪಾದಿಸಿದ್ದಾರೆ. ಸಿಎನ್‍ಸಿ ವತಿಯಿಂದ ಕುರ್ಚಿ ತೋಡನಾಡ್ ನ ಶ್ರೀಮಂಗಲದಲ್ಲಿ ನಡೆದ 17ನೇ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಶ್ರೇಷ್ಠ ಸಂವಿಧಾನದ ಆಶಯಕ್ಕೆ ಬದ್ಧರಾಗಿ ಕೊಡವರ ಪರವಾಗಿ ನಿರಂತರ ಶಾಂತಿಯುತ ಹೋರಾಟಗಳನ್ನು ರೂಪಿಸುತ್ತಿರುವ ಸಿಎನ್‍ಸಿಯ ಗುರಿ ಮತ್ತು ಹೋರಾಟದ ಬಗ್ಗೆ ವಿಶ್ವಾಸವಿಡುವಂತೆ ಕರೆ ನೀಡಿದರು. ಆದಿಮಸಂಜಾತ ಏಕ ಜನಾಂಗೀಯ ಆ್ಯನಿಮಿಸ್ಟಿಕ್ ನಂಬಿಕೆಯ ಕೊಡವರು ಯಾವುದೇ ಜಾತಿ, ಧರ್ಮದ ಬಂಧನ ಅಥವಾ ಕಳಂಕವಿಲ್ಲದೆ ಸ್ವತಂತ್ರವಾಗಿ ಬದುಕಿದ ಮತ್ತು ಬದುಕುತ್ತಿರುವ ಅತೀ ಅಪರೂಪದ ಸೂಕ್ಷ್ಮ ಜನಾಂಗಕ್ಕೆ ಸೇರಿದವರಾಗಿದ್ದಾರೆ. ಕೊಡವ ನೆಲ ಬಿಟ್ಟರೆ ಬೇರೆ ಎಲ್ಲೂ ಕೊಡವರಿಗೆ ಸ್ವಂತ ಸ್ಥಳವಿಲ್ಲ. ಇಂದಿನ ಕಾಲಮಾನದಲ್ಲಿ…

Read More

ಮಡಿಕೇರಿ ಅ.27 NEWS DESK : ಮೃತದೇಹಗಳನ್ನು ಉಚಿತವಾಗಿ ಕೊಂಡೊಯ್ಯಲು ಬಡವರಿಗೆ ಅನುಕೂಲವಾಗಲಿ ಎಂದು ಸರಕಾರ ಕೊಡಗು ಜಿಲ್ಲೆಗೆ ನೀಡಿದ್ದ ‘ಶ್ರದ್ಧಾಂಜಲಿ’ ವಾಹನ ಇದೀಗ ಸ್ವತ: ಶ್ರದ್ಧಾಂಜಲಿಗಾಗಿ ಕಾಯುತ್ತಿರುವ ಪರಿಸ್ಥಿತಿ ಎದುರಾಗಿದೆ ಎಂದು ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಪ್ರಧಾನ ಸಂಚಾಲಕ ತೇಲಪಂಡ ಶಿವಕುಮಾರ್ ನಾಣಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಆಂಬ್ಯುಲೆನ್ಸ್ ಗಳಿಗೆ ಹಣ ನೀಡಿ ಶವಗಳನ್ನು ಸ್ಥಳಾಂತರಿಸಲು ಸಾಧ್ಯವಾಗದ ಬಡವರ ಉಚಿತ ಸೇವೆಗಾಗಿ 2018 ರಲ್ಲಿ ರಾಜ್ಯದ ಪ್ರತಿ ಜಿಲ್ಲೆಗೆ ಒಂದರಂತೆ ಆರೋಗ್ಯ ಇಲಾಖೆ ಮೂಲಕ ‘ಶ್ರದ್ಧಾಂಜಲಿ’ ವಾಹನವನ್ನು ನೀಡಲಾಯಿತು. ಈ ಯೋಜನೆಯಡಿ ಕೊಡಗು ಜಿಲ್ಲೆಗೂ ವಾಹನ ಬಂದಿದ್ದು, ಈಗಾಗಲೇ ಏಳು ವರ್ಷಗಳನ್ನು ಪೂರೈಸಿದೆ. ಆದರೆ ‘ಶ್ರದ್ಧಾಂಜಲಿ’ ವಾಹನದ ಸ್ಥಿತಿ ಆ ಸರಕಾರಕ್ಕೇ ಪ್ರೀತಿ ಎನ್ನುವಂತ್ತಿದೆ ಎಂದು ಟೀಕಿಸಿದ್ದಾರೆ. ಶ್ರದ್ಧಾಂಜಲಿ ವಾಹನ ದುರಸ್ತಿಗೀಡಾಗಿ ಮಂಗಳೂರು ವರ್ಕ್‍ಶಾಪ್ ಸೇರಿ ಹಲವು ದಿನಗಳೇ ಕಳೆದಿದೆ. ಜಿಲ್ಲಾಸ್ಪತ್ರೆಗೆ ಬರುವ ಬಡವರು ಮೃತದೇಹಗಳನ್ನು ಸ್ಥಳಾಂತರಿಸಲು ಆಂಬ್ಯುಲೆನ್ಸ್ ಗಳಿಗೆ ದುಬಾರಿ…

Read More