ಮಡಿಕೇರಿ ಅ.27 NEWS DESK : ಇಂದಿರಾನಗರದ ಡಾ.ಬಿ.ಆರ್.ಅಂಬೇಡ್ಕರ್ ಅರುಣೋದಯ ಸಮುದಾಯ ಭವನದ ಸುತ್ತ ಮುತ್ತಲಿನ ಪರಿಸರವನ್ನು ಅಲ್ಲಿನ ನಿವಾಸಿಗಳು ಶ್ರಮದಾನದ ಮೂಲಕ ಸ್ವಚ್ಛಗೊಳಿಸಿದರು. ಕುಂದುರುಮೊಟ್ಟೆ ಶ್ರೀ ಮಾರಿಯಮ್ಮ ದೇವಸ್ಥಾನದ ಅಧ್ಯಕ್ಷರು, ಸದಸ್ಯರು ಹಾಗೂ ಸಮುದಾಯ ಭವನದ ಅಧ್ಯಕ್ಷ ಕುಮಾರ್ ಹಾಗೂ ಉಪಾಧ್ಯಕ್ಷ ಗಣೇಶ್ ಮತ್ತು ಆಡಳಿತ ಮಂಡಳಿ ಪದಾಧಿಕಾರಿಗಳು ಹಾಜರಿದ್ದರು.
ಲೇಖಕ: admin
ಮಡಿಕೇರಿ ಅ.27 NEWS DESK : ಕೊಡಗು ಜಿಲ್ಲೆಗೆ ಸಂಬಂಧಿಸಿದ 2025ನೇ ಸಾಲಿನ ಕರ್ನಾಟಕ ಭೂ ಕಂದಾಯ ಎರಡನೇ ತಿದ್ದುಪಡಿ ವಿಧೇಯಕ ಪರಿಶೀಲನಾ ಸಮಿತಿಯ ಎರಡನೇ ಸಭೆ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ವಿಧಾನ ಸೌಧ ಕೊಠಡಿ ಸಂಖ್ಯೆ 106ರಲ್ಲಿ ನಡೆದ ಸಭೆಯಲ್ಲಿ ಕಂದಾಯ ಸಚಿವರು ಈ ತಿದ್ದುಪಡಿ ವಿಧೇಯಕದ ಕುರಿತು ಮುಂದುವರಿಸಿ ಸಭೆಯಲ್ಲಿ ವಿವರಿಸಿ ಅಧಿಕಾರಿಗಳಿಂದ ವಿವರಣೆ ಪಡೆದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ. ಎಸ್ ಪೊನ್ನಣ್ಣ ಅವರು ಸಭೆಯಲ್ಲಿ ಕೊಡಗು ಜಿಲ್ಲೆಯ ಜಮ್ಮಾ ಬಾಣೆ ಭೂಮಿಗೆ ಸಂಬಂಧಿಸಿದಂತೆ ಸಂಪೂರ್ಣವಾಗಿ ವಿವರಿಸಿ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಸಭೆಯಲ್ಲಿ ಮಡಿಕೇರಿ ಶಾಸಕರು ಡಾ.ಮಂಥರ್ ಗೌಡ, ವಿಧಾನ ಸಭೆಯ ಸದಸ್ಯರುಗಳಾದ ಡಾ. ಸಿ.ಎನ್.ಅಶ್ವಥ್ ನಾರಾಯಣ್, ಡಾ. ಶ್ರೀನಿವಾಸ ಎನ್.ಟಿ, ಭೀಮಾಣ್ಣ ಟಿ ನಾಯ್ಕ, ಪ್ರಾದೇಶಿಕ ಆಯುಕ್ತರಾದ ಶ್ರೀ ಆದಿತ್ಯ ಆಮ್ಲ ಬಿಸ್ವಾಸ್, ಅಪರ ಮುಖ್ಯ ಕಾರ್ಯದರ್ಶಿಗಳು ಕಂದಾಯ ಇಲಾಖೆ ಕಂದಾಯ ಇಲಾಖೆಯ ಉನ್ನತ ಅಧಿಕಾರಿಗಳು, ಕೊಡಗು…
ಮಡಿಕೇರಿ ಅ.27 NEWS DESK : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಅಂಗವಾಗಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಮಂಡಳಿಯ ಸುವರ್ಣ ಮಹೋತ್ಸವ ಕಾರ್ಯಕ್ರಮ ನಡೆಯಿತು. ಕೊಡಗು ಜಿಲ್ಲೆಯಲ್ಲಿ ತಮ್ಮನ್ನು ಪರಿಸರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಸಂಸ್ಥೆಗಳ ಕಾರ್ಯಚಟುವಟಿಕೆಗಳನ್ನು ಗುರುತಿಸಿ ಈ ಸಂದರ್ಭ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಸ್ಥೆಗಳ ಪರವಾಗಿ ಭಾರತ್ ಸ್ಕೌಟ್ಸ್, ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ , ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿಯ ನಿಕಟ ಪೂರ್ವ ಅಧ್ಯಕ್ಷರೂ ಆದ ಜಿಲ್ಲಾ ಪರಿಸರ ಜಾಗೃತಿ ಆಂದೋಲನದ ಸಂಯೋಜಕ, ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಹಾಗೂ ಹ್ಯೂಮನ್ ವರ್ಲ್ಡ್ ಫಾರ್ ಅನಿಮಲ್ಸ್ ನ ತಿತಿಮತಿಯಲ್ಲಿ ವನ್ಯಜೀವಿಗಳು ಮತ್ತು ಮಾನವ ಸಂಘರ್ಷದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯ ಪ್ರಾಜೆಕ್ಟ್ ಮೆನೇಜರ್ ಆದ ವಿನೋದ್ ಅವರನ್ನು ಮಾಲಿನ್ಯ ಮಂಡಳಿಯ ವತಿಯಿಂದ ರಾಜ್ಯ ಅರಣ್ಯ ಮತ್ತು ಪರಿಸರ ಸಚಿವರಾದ…
ಮಡಿಕೇರಿ ಅ.27 NEWS DESK : ಮನ್ ಕಿ ಬಾತ್ ಕಾರ್ಯಕ್ರಮದ 127ನೇ ಸಂಚಿಕೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾಫಿ ಕ್ಷೇತ್ರಕ್ಕೆ ಉತ್ತೇಜನ ನೀಡುವ ಮಾತುಗಳನ್ನಾಡಿದ್ದು, ಇದರಿಂದ ಕಾಫಿ ಬೆಳೆಗಾರರ ಉತ್ಸಾಹ ಇಮ್ಮಡಿಯಾಗಿದೆ. ಕರ್ನಾಟಕ ರಾಜ್ಯದ ಎಲ್ಲಾ ಕಾಫಿ ಬೆಳೆಗಾರರ ಪರವಾಗಿ ಪ್ರಧಾನಮಂತ್ರಿಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ಕಾಫಿ ಮಂಡಳಿಯ ಸದಸ್ಯ ತಳೂರು ಎ.ಕಿಶೋರ್ ಕುಮಾರ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿಶೇಷವಾಗಿ ಕರ್ನಾಟಕ ರಾಜ್ಯದ ಚಿಕ್ಕಮಗಳೂರು, ಕೊಡಗು, ಹಾಸನ ಸೇರಿದಂತೆ ದೇಶದ ಹಲವು ಪ್ರದೇಶಗಳಲ್ಲಿ ಕಾಫಿ ಬೆಳೆಯುತ್ತಿರುವ ಬಗ್ಗೆ ಪ್ರಧಾನಿ ಉಲ್ಲೇಖಿಸಿದ್ದಾರೆ. ಕಾಫಿ ಕೃಷಿ ಮತ್ತು ಕಾಫಿ ಉದ್ಯಮದ ಬೆಳವಣಿಗೆಯ ಕುರಿತು ಮಾಡಿರುವ ಭಾಷಣ ಕಾಫಿ ಬೆಳೆಗಾರರು ಹಾಗೂ ಕಾಫಿ ಸೇವನೆ ಮಾಡುವವರಲ್ಲಿ ಹೊಸ ಸ್ಫೂರ್ತಿಯನ್ನು ತುಂಬಿದೆ. ಅದರಲ್ಲಿಯೂ ಕರ್ನಾಟಕದಲ್ಲಿ ಶೇ.70ರಷ್ಟು ಕಾಫಿ ಬೆಳೆಯುತ್ತಿರುವುದು ಮತ್ತು ಭಾರತೀಯ ಕಾಫಿ ವಿಶ್ವ ಪ್ರಸಿದ್ಧಿ ಹೊಂದಿರುವ ಬಗ್ಗೆ ಪ್ರಧಾನಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದು ಕಾಫಿ ಬೆಳೆಗಾರರು ಹಾಗೂ ಕಾಫಿ ಉದ್ಯಮದಲ್ಲಿ ತೊಡಗಿಸಿಕೊಂಡಿರುವವರಿಗೆ…
ಸೋಮವಾರಪೇಟೆ ಅ.27 NEWS DESK : ರೈತರ ಸಂಕಷ್ಟಕ್ಕೆ ನೆರವಾಗುವನಿಟ್ಟಿನಲ್ಲಿ ರೈತ ವಿಜ್ಞಾನಿಯಾಗುವ ಹಂಬಲ ವ್ಯಕ್ತಪಡಿಸಿದ ವಿದ್ಯಾರ್ಥಿ ಬಿ.ಎಂ.ಸೃಜನ್. ಇತೀಚೆಗೆ ನಡೆದ ಕೃಷಿ ಸಂಶೋದನಾ ಅರ್ಹತಾ ಪರೀಕ್ಷೆಯಲ್ಲಿ ದೇಶಕ್ಕೆ 34ನೇ ರ‍್ಯಾಂಕ್ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಪೈಕಿ 18ನೆ ರ‍್ಯಾಂಕ್ ಪಡೆದು ಸಾಧನೆ ತೋರಿದ್ದ ಸೃಜನ್ ಇದೀಗ ರಾಷ್ಟ್ರದ ಪ್ರತಿಷ್ಠಿತ ದೆಹಲಿಯಲ್ಲಿರುವ ಭಾರತೀಯ ಕೃಷಿ ಸಂಶೋದನಾ ಸಂಸ್ಥೆಯಲ್ಲಿ ಸೀಟು ಪಡೆದಿದ್ದಾನೆ. ತನ್ನ ಮುಂದಿನ ಗುರಿಯ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಸೃಜನ್ ರೈತರು, ಕೃಷಿಕರ ಬಗ್ಗೆ ಅಪಾರ ಕಾಳಜಿ ತೋರಿದ್ದಾರೆ. ಇಂದು ರೈತಾಪಿ ವರ್ಗ ಅನುಭವಿಸುತ್ತಿರುವ ಕಷ್ಟ ಕಾರ್ಪಣ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ ಸೃಜನ್, ರೈತರ ಸಂಕಷ್ಟಕ್ಕೆ ನೆರವಾಗಬೇಕಾಗಿದೆ ಅದಕ್ಕಾಗಿ ನಾನು ರೈತ ವಿಜ್ಞಾನಿಯಾಗಬೇಕು ಎಂದು ಹಂಬಲ ವ್ಯಕ್ತಪಡಿಸಿದರು. ವಿಶೇಷವಾಗಿ ಹೊಸ ತಳಿಗಳ ಆವಿಷ್ಕಾರ ಹಾಗೂ ರೋಗಗಳಿಗೆ ಸಂಬಂಧಿಸಿದಂತೆ ಪರಿಹಾರ ಕಂಡುಹಿಡಿಯಬೇಕಾಗಿದೆ ಎಂದರು. ಸ್ನಾತಕೋತ್ತರ ಪದವಿಗೆ ಅರ್ಹತೆ ಪಡೆಯಲು ಕಷ್ಟಪಟ್ಟು ಅಭ್ಯಾಸ ಮಾಡಿ ಇದೀಗ ಸೀಟು ಪಡೆಯಲು ಸಾಧ್ಯವಾಯಿತು. ಮುಂದೆ ನನಗೆ…
ಮಡಿಕೇರಿ ಅ.27 NEWS DESK : ಹುದಿಕೇರಿ ಮಾಜಿ ಸೈನಿಕರ ಸಂಘದಿಂದ ದಕ್ಷಿಣ ಕೊಡಗಿನ ಅಂಜಿಗೇರಿ ನಾಡ್‍ನ ಹುದಿಕೇರಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ‘ಅಮರ್ ಜವಾನ್ ಸ್ಮಾರಕ’ ಮತ್ತು ಧ್ವಜ ಸ್ತಂಭವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಮೈಸೂರು-ಕೊಡಗು ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಹುತಾತ್ಮ ಯೋಧರಿಗೆ ಪುಷ್ಪ ನಮನ ಸಲ್ಲಿಸಿದರು.
ಮಡಿಕೇರಿ NEWS DESK ಅ.27 : ಬ್ರಿಟಿಷರ ವಿರುದ್ಧ ಹೋರಾಡಿ ವೀರಮರಣವನ್ನಪ್ಪಿದ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರಿಗೆ ಗೌರವ ನಮನ ಸಮರ್ಪಣೆ ಕಾರ್ಯಕ್ರಮ ಅ.31ರಂದು ಮಡಿಕೇರಿಯಲ್ಲಿ ನಡೆಯಲಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಮಡಿಕೇರಿ ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ ಅವರು ಶುಕ್ರವಾರ ಬೆಳಿಗ್ಗೆ 9.30 ಗಂಟೆಗೆ ನಗರದ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಇರುವ ಸ್ಮಾರಕ ಸ್ಥಳದಲ್ಲಿ ಸ್ವಾತಂತ್ರ್ಯ ಹೋರಾಟಗಾರನಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಲಾಗುವುದು ಎಂದು ತಿಳಿಸಿದ್ದಾರೆ. ಜಿಲ್ಲೆಯ ಸರ್ವ ಅರೆಭಾಷೆ ಗೌಡ ಬಂಧುಗಳು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವೀರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರಿಗೆ ಗೌರವ ಅರ್ಪಿಸಬೇಕೆಂದು ಮನವಿ ಮಾಡಿದ್ದಾರೆ. 1857ರಲ್ಲಿ ನಡೆದ ಸಿಪಾಯಿ ದಂಗೆಯನ್ನು ಮೊದಲ ಸ್ವಾತಂತ್ರ ಸಂಗ್ರಾಮ ಎಂದು ಗುರುತಿಸಲಾಗಿದೆ. ಆದರೆ ಅದಕ್ಕೂ ಮೊದಲೇ ಕೊಡಗು, ದಕ್ಷಿಣ ಕನ್ನಡ ಭಾಗದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ನಡೆದಿರುವ ಬಗ್ಗೆ ಇತಿಹಾಸವಿದೆ. ಬ್ರಿಟಿಷರ ವಿರುದ್ಧ ಹೋರಾಡಿದ ಗುಡ್ಡೆಮನೆ ಅಪ್ಪಯ್ಯ ಗೌಡರನ್ನು 1837 ಅಕ್ಟೋಬರ್ 31…
ಕಣಿವೆ ಅ.27 NEWS DESK : ಪ್ರಕೃತಿಯನ್ನು ತಾಯಿಯಂತೆ ಪೂಜಿಸಿ ಆರಾಧಿಸಿದಲ್ಲಿ ಮಾತ್ರ ಜೀವ ವೈವಿಧ್ಯತೆ ಸಂರಕ್ಷಿಸಲು ಸಾಧ್ಯ ಎಂದು ಭಾರತೀಯ ಶಿಕ್ಷಣ ಮಂಡಲ ಅಧ್ಯಕ್ಷ ಬಿ.ಆರ್.ಶಂಕರಾನಂದ ಆಶಿಸಿದರು. ಕೊಡಗು ವಿಶ್ವವಿದ್ಯಾಲಯದ ಹಾರಂಗಿ ಸಭಾಂಗಣದಲ್ಲಿ “ಹಸಿರು ಸಂರಕ್ಷಣೆಯಲ್ಲಿ ಕೊಡಗಿನ ಜೀವವೈವಿಧ್ಯ” ಎಂಬ ವಿಷಯದ ಕುರಿತು ಹಮ್ಮಿಕೊಂಡಿದ್ದ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯನ ಸ್ವಾರ್ಥದಿಂದಾಗಿ ಪ್ರಕೃತಿ ಇಂದು ವಿನಾಶದ ಅಂಚಿನಲ್ಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅಭಿವೃದ್ಧಿಯ ಹೆಸರಿನಲ್ಲಿ ಪರಿಸರದ ಮೇಲಾಗುತ್ತಿರುವ ಅತ್ಯಾಚಾರದಿಂದಾಗಿ ಪ್ರಕೃತಿ ಮುನಿಯತೊಡಗಿದ್ದು, ಭೂಕಂಪ, ಪ್ರವಾಹಗಳು ಮನುಷ್ಯನ ನೆಮ್ಮದಿ ಹಾಳಾಗಿದೆ. ಆದರೂ ಕೂಡ ಪಾಠ ಕಲಿಯದ ಮನುಷ್ಯ ತನ್ನ ವೈಭೋಗದ ಜೀವನ ಶೈಲಿಗೆ ಪ್ರಕೃತಿಯನ್ನು ಮನಬಂದಂತೆ ದುರ್ಬಳಕೆ ಮಾಡತೊಡಗಿದ್ದಾನೆ. ಕರವಸ್ತ್ರವನ್ನು ಹೊಂದದೇ ಟಿಷ್ಯು ಸಂಸ್ಕೃತಿಯಿಂದಾಗಿ ಹೇರಳವಾಗಿ ಮರಗಳ ಹನನವಾಗುತ್ತಿದೆ. ದೇವರು ನಮಗೆ ಕೊಟ್ಟಿರುವ ಐದು ಕೈಬೆರಳುಗಳ ಬದಲಾಗಿ ಚಮಚಗಳ (ಸ್ಪೂನ್) ಬಳಕೆಯಿಂದಾಗಿಯೂ ಮರಹನನವಾಗುತ್ತಿದೆ. ಹಾಗಾಗಿ ಪ್ರಕೃತಿಯ ಸೂಕ್ಷ್ಮತೆ ಅರಿಯದ ಮನುಷ್ಯ ತಾನು ಮಾಡುವ ಪ್ರತಿಯೊಂದು ಸಣ್ಣ ತಪ್ಪುಗಳಿಂದ…
ಮಡಿಕೇರಿ ಅ.27 NEWS DESK : ಕೊಡಗು ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖಾ ವತಿಯಿಂದ ಫಾತಿಮಾ ಪ್ರೌಢಶಾಲೆ ಕುಶಾಲನಗರದಲ್ಲಿ ನಡೆದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಳೆಲೆ ವಿಜಯಲಕ್ಷ್ಮಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಶಾಲೆಯ ವಿದ್ಯಾರ್ಥಿಗಳಾದ ಪ್ರದೀಪ್ ಯಶ್ವಂತ್, ಮನು ಪಿ.ಡಿ ಕಿಶೋರ್, ಕುಮಾರ್ ಜೆ.ಯಂ, ಸುರೇಶ ಜೆ.ಯಂ, ಸುನೀತ್ ಟಿ.ಯಂ, ಸೃಜನ್ ಜಿ.ಅರ್, ತಿತಿಮತಿ ಸರ್ಕಾರಿ ಪ್ರೌಢಶಾಲೆಯ ಇಬ್ಬರು ಬಾಲಕರಾದ ಮನೋಜ್, ರಾಕೇಶ್ ವಿಜಯಲಕ್ಷ್ಮಿ ಪ್ರೌಢ ಶಾಲಾ ತಂಡದ ಪರವಾಗಿ ವಿರಾಜಪೇಟೆ ಶೈಕ್ಷಣಿಕ ತಾಲ್ಲೂಕು ತಂಡವನ್ನು ಪ್ರತಿನಿಧಿಸಿ ಗೆಲುವು ಸಾಧಿಸಿದರು. ತರಬೇತುದಾರರಾಗಿ ದೈಹಿಕ ಶಿಕ್ಷಣ ಶಿಕ್ಷಕರಾದ ಪಡಿಞರಂಡ ಪ್ರಭು ಕುಮಾರ್ ಭಾಗವಹಿಸಿದ್ದಾರೆಂದು ವಿಜಯಲಕ್ಷ್ಮಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರಾದ ಚಂದ್ರಶೇಖರ್ ತಿಳಿಸಿದ್ದಾರೆ.
ಮಡಿಕೇರಿ NEWS DESK ಅ.27 : ಮಡಿಕೇರಿ ನಗರದ ಮಹದೇವಪೇಟೆಯಲ್ಲಿ ಕೃಷಿ ಯಂತ್ರೋಪಕರಣಗಳ ಮಳಿಗೆ ಪ್ಲಾಂಟರ್ಸ್ ಆಗ್ರೋ ಶುಭಾರಂಭಗೊಂಡಿದೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಮಳಿಗೆಯನ್ನು ಉದ್ಘಾಟಿಸಿ ಮಾಲೀಕ ಶ್ರೀಹರಿ ಜಿ.ಪಿ ಹಾಗೂ ಕುಟುಂಬ ವರ್ಗಕ್ಕೆ ಶುಭ ಹಾರೈಸಿದರು. ನಗರಸಭಾ ಸದಸ್ಯರು, ಮಾಜಿ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ವಾಣಿಜ್ಯೋದ್ಯಮಿಗಳು, ವರ್ತಕರು, ವಿವಿಧ ಪಕ್ಷಗಳ ಪದಾಧಿಕಾರಿಗಳು ಹಾಗೂ ಕೃಷಿಕರು ಈ ಸಂದರ್ಭ ಹಾಜರಿದ್ದು ಶುಭ ಕೋರಿದರು. ಪ್ಲಾಂಟರ್ಸ್ ಆಗ್ರೋ ಮಳಿಗೆಯ ಮಾಲೀಕ ಶ್ರೀಹರಿ ಜಿ.ಪಿ ಮಾತನಾಡಿ ಕೃಷಿ ಯಂತ್ರೋಪಕರಣಗಳ ಮಾರಾಟ ಮತ್ತು ಸರ್ವಿಸ್ ಕೂಡ ಇದೆ. ರೈತರ ಸಂತೃಪ್ತಿಯೇ ನಮ್ಮ ತೃಪ್ತಿ, ಆದ್ದರಿಂದ ಎಲ್ಲಾ ರೀತಿಯ ಯಂತ್ರೋಪಕರಣಗಳನ್ನು ಮಾರಾಟ ಮಾಡಲಾಗುವುದು ಎಂದು ತಿಳಿಸಿದರು. ಹೆಚ್ಚಿನ ಮಾಹಿತಿಗೆ ಶ್ರೀಹರಿ ಜಿ.ಪಿ, ಮಾಲೀಕರು, ಪ್ಲಾಂಟರ್ಸ್ ಆಗ್ರೋ 9740478899, 8277060844 ಸಂಪರ್ಕಿಸಬಹುದು.






