ಮಡಿಕೇರಿ ಅ.27 NEWS DESK : ಕೋಕೇರಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ದಾನಿಗಳಿಂದ ಬೀರು (ಗಾಡ್ರೇಜ್) ಹಾಗೂ ಚೇರ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು. ಗ್ರಾಮದ ದಾನಿಗಳಾದ ಪೊನ್ನಚಂಡ ಭೀಮಯ್ಯ ಅವರು ಶಾಲೆಯ ದಾಖಲಾತಿಗಳನ್ನು ಇಡಲು ಉತ್ತಮವಾದ ಬೀರು (ಗಾಡ್ರೇಜ್) ಹಾಗೂ ಗ್ರಾಮದ ಮತ್ತೋರ್ವ ದಾನಿಗಳಾದ ಚೆರಿಯಪಂಡ ಕೆ.ಪೊನ್ನಪ್ಪ ಶಾಲೆಯ ಉಪಯೋಗಕ್ಕಾಗಿ 10 ಚೇರ್‌ಗಳನ್ನು ಕೊಡುಗೆಯಾಗಿ ನೀಡಿದರು. ದಾನಿಗಳ ಉದಾರ ಸೇವೆಗೆ ಶಾಲೆಯ ಮುಖ್ಯ ಶಿಕ್ಷಕರು, ಎಸ್ ಡಿಎಂಸಿ ಪದಾಧಿಕಾರಿಗಳು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಕೃತಜ್ಞತೆ ಸಲ್ಲಿಸಿದ್ದಾರೆ.
ಲೇಖಕ: admin
ಬೆಂಗಳೂರು ಅ.27 NEWS DESK : ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಹಿರಿಯ ಪತ್ರಕರ್ತ ಟಿ.ಜೆ.ಎಸ್. ಜಾರ್ಜ್ ಅವರ ಹೆಸರಿನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮಾಧ್ಯಮ ಸಂಸ್ಥೆಗಳ ಸಂಪಾದಕರಿಗೆ ದತ್ತಿ ಪ್ರಶಸ್ತಿ ಸ್ಥಾಪಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಕೆ.ಶಿವಕುಮಾರ್ ಅವರು ಘೋಷಿಸಿದರು. ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ತಾವು ಈಗಾಗಲೇ ಸಾಮಾಜಿಕ ನ್ಯಾಯದ ಕುರಿತು ಬರೆಯುವ ಅಂಕಣಕಾರರಿಗೆ “ಮೂಕನಾಯಕ ಡಾ. ಬಿ.ಆರ್. ಅಂಬೇಡ್ಕರ್ ದತ್ತಿ ಪ್ರಶಸ್ತಿಯನ್ನು ಸ್ಥಾಪಿಸಿದ್ದು, ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತ ಟಿ.ಜೆ.ಎಸ್. ಜಾರ್ಜ್ ಅವರು ನಿಷ್ಪಕ್ಷಪಾತಿ ಪತ್ರಕರ್ತರಾಗಿದ್ದರು. ಅವರು ಸ್ವತಃ ಪತ್ರಕರ್ತರ ವರದಿಗಳನ್ನು ತಿದ್ದಿ , ಮಾರ್ಗದರ್ಶನ ನೀಡುತ್ತಿದ್ದರು ಎಂದು ಸ್ಮರಿಸಿದರು. ಅವರ ಹೆಸರಿನಲ್ಲಿ ರಾಷ್ಟ್ರಮಟ್ಟದಲ್ಲಿ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುವ ಪತ್ರಕರ್ತರನ್ನು ಗುರುತಿಸುವ ಸಲುವಾಗಿ 1.5 ಲಕ್ಷ ರೂ.ಗಳ ದತ್ತಿನಿಧಿ ಸ್ಥಾಪಿಸುವುದಾಗಿ ತಿಳಿಸಿದರು. ತಾವು ಇನ್ನೂ ಪತ್ರಿಕೋದ್ಯಮದಿಂದ ಹೊರ ಬಂದಿಲ್ಲ. ಸದನದಲ್ಲಿಯೂ ಪತ್ರಕರ್ತರು ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಕುರಿತು ದನಿ ಎತ್ತುವುದಾಗಿ ಅವರು ತಿಳಿಸಿದರು.…
ವಿರಾಜಪೇಟೆ ಅ.27 NEWS DESK : ಮಹಿಳೆಯರು ಪ್ರಸ್ತುತ ಎಲ್ಲ ಕ್ಷೇತ್ರದಲ್ಲಿ ಮುನ್ನುಗ್ಗುತ್ತಿದ್ದಾರೆ. ಶಿಕ್ಷಣ ಸಾಧನೆಯತ್ತಲೂ ಹೆಚ್ಚು ಸಾಗಬೇಕಾಗಿದೆ. ಆಗ ಮಾತ್ರ ಮಹಿಳೆಯರ ಮೇಲೆ ನಡೆಯುತ್ತಿರುವ ಅನ್ಯಾಯ, ದೌರ್ಜನ್ಯಗಳನ್ನು ಪ್ರಶ್ನಿಸಲು ಸಾಧ್ಯ ಎಂದು ದುಡಿಯುವ ಮಹಿಳೆಯರ ರಾಜ್ಯ ಸಂಚಾಲಕಿ ಹೆಚ್.ಎಸ್. ಸುನಂದ ಅಭಿಪ್ರಾಯಪಟ್ಟರು. ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯುನಿಯನ್ಸ್ (ಸಿಐಟಿಯು) ಕೊಡಗು ಜಿಲ್ಲಾ ಸಮಿತಿ ವತಿಯಿಂದ ವಿರಾಜಪೇಟೆ ಶಾಖೆಯ ಕಚೇರಿ ಸಭಾಂಗಣದಲ್ಲಿ ನಡೆದ ‘ದುಡಿಯುವ ಮಹಿಳೆಯರ ಕೊಡಗು ಜಿಲ್ಲಾ ಸಮಾವೇಶ’ ಉದ್ಘಾಟಿಸಿ ಮಾತನಾಡಿದ ಅವರು, ಬೀದಿಯಲ್ಲಿ ಕಸ ತೆಗೆಯುವ, ತನ್ನದಲ್ಲದ ಮನೆಗಳಲ್ಲಿ ಕಸಮುಸುರೆ ಸ್ವಚ್ಛತೆ ಮಾಡುವ, ತನ್ನದಲ್ಲದ ಮಕ್ಕಳಿಗೆ ಆಹಾರ ಆರೋಗ್ಯ ಶಿಕ್ಷಣಕ್ಕೆ ಕೆಲಸ ಮಾಡುವ, ತನ್ನದಲ್ಲದ ಮನೆಯನ್ನು ಕಟ್ಟುವಲ್ಲಿ ಶ್ರಮ ಹಾಕುವ, ಬೀದಿಬದಿಯಲ್ಲಿ ದುಡಿದು ತನ್ನದಲ್ಲದ ಖಜಾನೆಗೆ ಲಾಭ ಮಾಡಿಕೊಡುವ ತನ್ನದಲ್ಲದ ಬದುಕನ್ನು ಬೇರೆಯವರಿಗೆ ಕಟ್ಟಿಕೊಡುವಲ್ಲೇ ನಿರತರಾದವರನ್ನು ಒಳಗೊಂಡು, ದೇಶದ ರಾಷ್ಟ್ರಾಧ್ಯಕ್ಷರವರೆಗೆ, ವ್ಯೋಮಕ್ಕೆ ಜಿಗಿದು ವಾಪಸ್ ಬಂದ ಆ ಹೆಣ್ಮಗಳ ತನಕವೂ ಎಲ್ಲರೂ ದುಡಿಯುವ ಮಹಿಳೆಯರೇ ಆಗಿದ್ದಾರೆ. ಇವರಲ್ಲಿ…
ವಿರಾಜಪೇಟೆ ಅ.27 NEWS DESK : ವ್ಯಾಸಂಗದ ಅವಧಿಯಲ್ಲಿ ವಿದ್ಯಾರ್ಥಿಗಳು ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರ ಮೂಲಕ ವ್ಯಕ್ತಿತ್ವದ ವಿಕಸನ ವೃದ್ಧಿಸಲು ಸಹಕಾರಿಯಾಗುತ್ತದೆ ಎಂದು ವಿರಾಜಪೇಟೆ ಪುರಸಭೆ ಅಧ್ಯಕ್ಷೆ ಮನೆಯಪಂಡ ದೇಚಮ್ಮ ಕಾಳಪ್ಪ ಹೇಳಿದರು. ವಿರಾಜಪೇಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ, ಕ್ರೀಡಾ ಹಾಗೂ ವಿವಿಧ ಸಮಿತಿಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೋಂಡು ಅವರು ಮಾತನಾಡಿದರು. ವಿದ್ಯಾರ್ಥಿಗಳು ಮಹಾತ್ಮರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಕನಸನ್ನು ನನಸು ಮಾಡಲು ಪ್ರಯತ್ನಿಸಬೇಕು. ಪ್ರತಿಯೊಬ್ಬರಲ್ಲೂ ಕೌಶಲ್ಯ, ಜ್ಞಾನ, ಆರೋಗ್ಯ, ಸಂತೃಪ್ತಿ ಗುಣಗಳು ಇರಬೇಕು. ಈ ಗುಣಗಳು ಇದ್ದಾಗ ಮಾತ್ರ ಉತ್ತಮ ಮನುಷ್ಯನಾಗಲು ಸಾಧ್ಯ ಎಂದು ಅವರು ಹೇಳಿದರು. ಮನುಷ್ಯನಲ್ಲಿ ಆತ್ಮವಿಶ್ವಾಸ ಇದ್ದರೆ ಸಾಧನೆ ಮಾಡಬಹುದು. ನಿರಂತರ ಶ್ರಮದಿಂದ ಜೀವನದಲ್ಲಿ ಮುಂದೆ ಬರಲು ಸಾಧ್ಯ. ಪ್ರತಿಯೊಬ್ಬರಲೂ ಪ್ರತಿಭೆ ಇರುತ್ತದೆ. ಅದನ್ನು ಸೂಕ್ತ ರೀತಿಯಲ್ಲಿ ಬಳಸಿಕೊಂಡಾಗ ಜೀವನದಲ್ಲಿ ಯಶಸ್ಸು ಪಡೆಯಬಹುದು ಎಂದು ಹೇಳಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಮಾದಂಡ ತಿಮ್ಮಯ್ಯ ಕಾರ್ಯಕ್ರಮ…
ನಾಪೋಕ್ಲು ಅ.27 NEWS DESK : ಆದಿಕವಿ ಹರದಾಸ ಅಪ್ಪನೆರವಂಡ ಅಪ್ಪಚ್ಚಕವಿ ಅವರ ಜನ್ಮದಿನದ ಪ್ರಯುಕ್ತ ಶಾಲೆ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಸಿಹಿ ವಿತರಿಸಲಾಯಿತು. ಅಪ್ಪಚ್ಚಕವಿ ಮೊಮ್ಮಗ ಅಪ್ಪನೆರವಂಡ ವಿನು ಮಾದಪ್ಪ ಅವರು ಅಪ್ಪಚ್ಚಕವಿ ಅವರ ಜನ್ಮದಿನದ ಪ್ರಯುಕ್ತ ಪಾರಾಣೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಮತ್ತು ಸಿಹಿ ವಿತರಿಸಿದರು. ಈ ಸಂದರ್ಭ ಶಾಲಾ ಮಕ್ಕಳಿಗೆ ಕೇರಂ ಪೈಪೆÇೀಟಿ ಆಯೋಜಿಸಲಾಗಿತ್ತು. ಇದರಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ, ತೃತೀಯ ನಗದು ಬಹುಮಾನ ನೀಡಿ ಪೆÇ್ರೀತ್ಸಾಹಿಸಲಾಯಿತು. ಪ್ರತಿ ವರ್ಷ ತಮ್ಮ ತಾತನವರ ನೆನಪಿನಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಉಪಯುಕ್ತವಾದ ವಸ್ತುಗಳನ್ನು ನೀಡಲಾಗುತ್ತಿದೆ ಎಂದರು. ಶಾಲಾ ಮುಖ್ಯ ಶಿಕ್ಷಕರಾದ ವೇದಪ್ರಸಾದ್, ಅತಿಥಿ ಶಿಕ್ಷಕಿ ಮಂಜುಳಾ ಮತ್ತು ಅಪ್ಪನೆರವಂಡ ರಾಜೇಶ್, ನಯನ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಅ.27 NEWS DESK : ಕಾಡಾನೆ ದಾಳಿಯಿಂದ ಕಾಫಿ ಬೆಳೆಗಾರ ಪ್ರಾಣಾಪಾಯದಿಂದ ಪಾರಾಗಿ, ಹಸು ಸಾವನ್ನಪ್ಪಿದ ಘಟನೆ ಪೇರೂರು ಗ್ರಾಮದಲ್ಲಿ ನಡೆದಿದೆ. ಬಲ್ಲಮಾವಟ್ಟಿ ಗ್ರಾಮ ಪಂಚಾಯತಿಯ ಪೇರೂರು ಗ್ರಾಮದ ನಿವಾಸಿ ಕಾಫಿ ಬೆಳೆಗಾರ ಅಪ್ಪಚ್ಚಿರ ಹ್ಯಾರಿ ಪೊನ್ನಪ್ಪ ಕಾಡಾನೆ ದಾಳಿಗೆ ಒಳಗಾಗಿ ತೀವ್ರ ಗಾಯಗೊಂಡ ವ್ಯಕ್ತಿ. ಹ್ಯಾರಿ ಪೊನ್ನಪ್ಪ ತಮ್ಮ ತೋಟದಿಂದ ಕೆಲಸ ಮುಗಿಸಿ ಸಂಜೆ ಮನೆಗೆ ಹಿಂತಿರುಗುವ ಸಂದರ್ಭ ಮಚ್ಚೂರ ಮಂದ್ ಸಮೀಪ ಕಾಡಾನೆ ದಾಳಿ ನಡೆಸಿ ಕೋರೆಯಿಂದ ಹ್ಯಾರಿ ಪೊನ್ನಪ್ಪ ಅವರ ಎದೆಯ ಭಾಗಕ್ಕೆ ತಿವಿದೆ. ಸಮೀಪದಲ್ಲಿದ್ದವರು ಭಯದಿಂದ ಚೀರಾಡಿದ ಕಾರಣ ಆನೆ ಓಡಿದೆ. ಇದೇ ಸಂದರ್ಭ ಮಚ್ಚೂರ ಹರೀಶ್ ಬಿದ್ದಪ್ಪ ಎಂಬವರು ಗದ್ದೆಯಲ್ಲಿ ಮೇಯಲು ಬಿಟ್ಟಿದ್ದ ಹಸುವನ್ನು ಕಾಡಾನೆ ತಿವಿದು ತೀವ್ರ ಗಾಯಗೊಳಿಸಿದ್ದು, ಹಸು ಮರಣ ಹೊಂದಿ ನಷ್ಟ ಸಂಭವಿಸಿದೆ. ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹ್ಯಾರಿ ಪೊನ್ನಪ್ಪ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ, ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಬಳಿಕ ತುರ್ತು ಚಿಕಿತ್ಸೆಗಾಗಿ…
ಮಡಿಕೇರಿ ಅ.27 NEWS DESK : ಕೊಡಗಿನ ಪ್ರತಿಷ್ಠಿತ ಕುಟುಂಬಗಳಲ್ಲಿ ಒಂದಾಗಿರುವ ಅಜ್ಜಿಕುಟ್ಟಿರ ಐನ್ ಮನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೇಟಿ ನೀಡಿದರು. ಕಳೆದ ವರ್ಷ ಅಜ್ಜಿಕುಟ್ಟಿರ ಐನ್ ಮನೆ ಕಾಮಗಾರಿಯನ್ನು ಕೈಗೆತ್ತುಕೊಂಡಿದ್ದ ಕುಟುಂಬಸ್ಥರು, ಇದೀಗ ಕಾಮಗಾರಿ ಪೂರ್ಣಗೊಂಡು, ಇಂದು ಶಾಸ್ತ್ರೋತ್ರವಾಗಿ ಐನ್ ಮನೆ ಕುಟುಂಬದ ತಕ್ಕರು, ಹಿರಿಯರು, ಪ್ರಮುಖರು ಹಾಗೂ ಊರವರ ಉಪಸ್ಥಿತಿಯಲ್ಲಿ ಐನ್ ಮನೆ ಪ್ರವೇಶ ಕಾರ್ಯಕ್ರಮ ಜರುಗಿತು. ಸ್ವತಹ ಅಜ್ಜಿಕುಟ್ಟಿರ ಕುಟುಂಬದ ಕುಡಿ ಆಗಿರುವ ಶಾಸಕರು ತನ್ನ ಹಿರಿಕರು ನೆಲೆಸಿದ ಐನ್ ಮನೆಗೆ ಭೇಟಿ ನೀಡಿ ಗೌರವ ಸಲ್ಲಿಸುವುದರೊಂದಿಗೆ, ಅಲ್ಲಿಯ ಹಿರಿಯರೊಂದಿಗೆ ಹಲವು ಸಮಯ ಚರ್ಚಿಸಿದರು. ಈ ಸಂದರ್ಭ ಅಜ್ಜಿಕುಟ್ಟಿರ ಕುಟುಂಬದ ಇತಿಹಾಸದ ಬಗ್ಗೆ ಮೆಲುಕು ಹಾಕಿದ ಶಾಸಕರು, ಕುಟುಂಬದ ಆಚರಣೆ, ಆಚಾರ ವಿಚಾರಗಳ ಬಗ್ಗೆ ಮಾಹಿತಿ ವಿನಿಮಯ ಮಾಡಿಕೊಂಡರು. ಕುಟುಂಬದ ಅಧ್ಯಕ್ಷರಾದ ಸಜಾನ್, ಶಾಸಕರ ಪತ್ನಿ ಕಾಂಚನ್ ಪೊನ್ನಣ್ಣ, ಶಾಸಕರ ಹಿರಿಯ ಸಹೋದರ ಅಜ್ಜಿಕುಟ್ಟಿರ ನರೇನ್ ಎಸ್.ಕಾರ್ಯಪ್ಪ,…
ಕುಶಾಲನಗರ ಅ.27 NEWS DESK : ದೇಶದ ನದಿಗಳ ಬಗ್ಗೆ ಕೇಂದ್ರ ಸರ್ಕಾರ ಕಾಳಜಿ ವಹಿಸಬೇಕಾಗಿದೆ, ರಾಜ್ಯ ಸರ್ಕಾರಗಳು ನದಿ ಸಂರಕ್ಷಣೆ ಬಗ್ಗೆ ಯೋಜನೆ ರೂಪಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ದಕ್ಷಿಣ ಉತ್ತರ ಎಂಬ ಭೇದವಿಲ್ಲದೆ ದೇಶದ ಎಲ್ಲಾ ನದಿಗಳ ಸಂರಕ್ಷಣೆ ಆಗಬೇಕಾಗಿದೆ ಬೆಂಗಳೂರು ಕೈಲಾಸ ಆಶ್ರಮದ ಜಗದ್ಗುರು ಶ್ರೀ ಜಯಂದ್ರ ಪುರಿ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು. ಕಾವೇರಿ ನದಿ ಸ್ವಚ್ಛತಾ ಆಂದೋಲನ ಮತ್ತು ಅಖಿಲ ಭಾರತೀಯ ಸನ್ಯಾಸಿ ಸಂಘ ಆಶ್ರಯದಲ್ಲಿ ಕಾವೇರಿ ರಿವರ್ ವಾಟರ್ ಪ್ರೊಟೆಕ್ಷನ್ ಟ್ರಸ್ಟ್ ಕಾವೇರಿ ರಿವರ್ ಸೇವಾ ಟ್ರಸ್ಟ್ ಹಾಗೂ ನಮಾಮಿ ಕಾವೇರಿ ಸಹಯೋಗದೊಂದಿಗೆ ತಲಕಾವೇರಿಯಿಂದ ಪೂಂಪ್ ಹಾರ್ ತನಕ 3 ವಾರಗಳ ಕಾಲ ನಡೆಯಲಿರುವ ಯಾತ್ರೆಗೆ ತಲಕಾವೇರಿ ಕ್ಷೇತ್ರದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು. ಕಾವೇರಿ ನದಿಗೆ ಇಳಿಯುವ ಸಂದರ್ಭ ಮಡಿವಂತಿಗೆ ಅಗತ್ಯ ಎಂದ ಅವರು ಪ್ರತಿಯೊಬ್ಬರು ಸ್ವಚ್ಛತೆಗೆ ಆದ್ಯತೆ ನೀಡಬೇಕಾಗಿದೆ ಎಂದು ಹೇಳಿದರು. ಯಾತ್ರೆಯ ಬಿತ್ತಿ ಪತ್ರ ಬಿಡುಗಡೆಗೊಳಿಸಿದ ಕರ್ನಾಟಕ ಕೊಡವ ಸಾಹಿತ್ಯ…
ಸೋಮವಾರಪೇಟೆ ಅ.27 NEWS DESK : ನವಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಆಟೋ ಚಾಲಕರು ಹಾಗೂ ಮಾಲೀಕರ ಸಂಘದ ಅಧ್ಯಕ್ಷ ಉಮೇಶ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರತಿವರ್ಷದಂತೆ ಈ ವರ್ಷವೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ ಎಂದರು. ನಿರಂತರವಾಗಿ ಕನ್ನಡ ಧ್ವಜ ಹಾರಿಸುವ ಸಂಕಲ್ಪದಿಂದ ನೂತನ ಧ್ವಜ ಸ್ತಂಭ ನಿರ್ಮಿಸಲಾಗುತ್ತಿದ್ದು ರಾಜ್ಯೋತ್ಸವದ ದಿನದಂದು ಉದ್ಘಾಟನೆ ಮಾಡಲಾಗುವುದು ಎಂದು ಹೇಳಿದರು. ಸಂಘದ ಪ್ರಧಾನ ಕಾರ್ಯದರ್ಶಿ ಮಹಮದ್ ಶಫಿ ಮಾತನಾಡಿ ನ.1ರ ಬೆಳಿಗ್ಗೆ 8 ಗಂಟೆಗೆ ಪಟ್ಟಣದ ಕಕ್ಕೆಹೊಳೆ ಸಮೀಪವಿರುವ ಬಸವೇಶ್ವರ ವೃತ್ತದ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮೂಲಕ ಅಂದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಂತರ ಪಟ್ಟಣದ ಎಲ್ಲಾ ಪ್ರತಿಮೆಗಳಿಗೂ ಮಾಲಾರ್ಪಣೆ ಮಾಡಿ ನಂತರ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಗುವುದೆಂದರು. 10 ಗಂಟೆಗೆ ಖಾಸಗಿ ಬಸ್ ನಿಲ್ದಾಣದಲ್ಲಿ ನಿರ್ಮಿಸುವ ಭವ್ಯ ವೇದಿಕೆಯಲ್ಲಿ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟನೆ ನಡೆಯಲಿದೆ ನಂತರ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ…
ಕುಶಾಲನಗರ ಅ.27 NEWS DESK : ನಾಗಾಲೋಟದ ಅಭಿವೃದ್ಧಿಯ ನಡುವೆ ಪರಿಸರದಲ್ಲಿ ಏರುಪೇರು ಆಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶರು ಹಾಗೂ ಕಾವೇರಿ ರಿವರ್ ಸೇವಾ ಟ್ರಸ್ಟ್ ಮಾರ್ಗದರ್ಶಕರಾದ ಶ್ರೀ ಸದಾಶಿವ ಸ್ವಾಮೀಜಿ ಹೇಳಿದರು. ಕಾವೇರಿ ನದಿ ಸ್ವಚ್ಛತಾ ಆಂದೋಲನ ಮತ್ತು ಅಖಿಲ ಭಾರತೀಯ ಸನ್ಯಾಸಿ ಸಂಘ ಆಶ್ರಯದಲ್ಲಿ ಕುಶಾಲನಗರದಲ್ಲಿ ಸ್ವಚ್ಛ ಕಾವೇರಿಗಾಗಿ 15ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ ಮತ್ತು 178ನೆಯ ವಿಶೇಷ ಮಹಾ ಆರತಿ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಅವರು, ವ್ಯಾಪಾರ ವಹಿವಾಟು ಮಾಡುವ ಕಾಯಕದ ಸಂದರ್ಭ ಪರಿಸರಕ್ಕೆ ಯಾವುದೇ ರೀತಿಯ ಹಾನಿ ಉಂಟಾಗದಂತೆ ಪ್ರತಿಯೊಬ್ಬರೂ ಎಚ್ಚರಿಕೆ ವಹಿಸಬೇಕಾಗಿದೆ ಎಂದರು. ನೆಮ್ಮದಿ ಮತ್ತು ಆರೋಗ್ಯಕರ ಬದುಕಿಗೆ ನೀರಿನ ಅವಲಂಬನೆಯ ಅಗತ್ಯತೆ ಇದ್ದು ಯಾವುದೇ ಸಂದರ್ಭ ಜಲಮೂಲಗಳು ನಾಶವಾಗದಂತೆ ಎಚ್ಚರ ವಹಿಸಬೇಕು. ಯೋಜನೆಗಳು ಅಭಿವೃದ್ಧಿ ವೈಜ್ಞಾನಿಕವಾಗಿ ನಡೆಯುವ ಮೂಲಕ ಪರಿಸರ ಜಾಗೃತಿ ಅಗತ್ಯ ಎಂದು ಸ್ವಾಮೀಜಿ ಹೇಳಿದರು. ಮುಂದಿನ ಜನಾಂಗಕ್ಕೆ ಉತ್ತಮ ಪರಿಸರವನ್ನು ಹಸ್ತಾಂತರ…






