ನಾಪೋಕ್ಲು ಅ.24 NEWS DESK : ಕೊಣಂಜಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಳ್ಳಡ, ಪೆಬ್ಬಾಟಂಡ ಕುಟುಂಬಸ್ಥರ ಮನೆಗಾಗಿ ತೆರವಳುವ ರಸ್ತೆಯನ್ನು ಗ್ರಾಮಸ್ಥರು ಶ್ರಮದಾನದ ಮೂಲಕ ದುರಸ್ತಿಗೊಳಿಸಿದರು. ಪಾರಾಣೆ ಬೇತ್ರಿ ಸಂಪರ್ಕ ರಸ್ತೆಯಿಂದ ಮಳ್ಳಡ, ಪೆಬ್ಬಾಟಂಡ ಕುಟುಂಬಸ್ಥರ ಮನೆಗಾಗಿ ಬಲಮುರಿಯ ನಾಲ್ಕು ರಸ್ತೆಗಳನ್ನು ಸಂಪರ್ಕಿಸುವ ರಸ್ತೆ ದುರಸ್ತಿ ಕಾಣದೆ ತೀವ್ರ ಹದಗೆಟ್ಟಿದ್ದು, ಇತ್ತ ಯಾರು ಗಮನ ಹರಿಸದ ಗ್ರಾಮಸ್ಥರೆ ಶ್ರಮದಾನದ ಮೂಲಕ ದುರಸ್ತಿ ಕೈಗೊಂಡರು. ರಸ್ತೆಗಳಲ್ಲಿ ದೊಡ್ಡ ಪ್ರಮಾಣದ ಗುಂಡಿಗಳಾಗಿದ್ದು ಸಂಚಾರ ಕಷ್ಟಕರವಾಗಿತ್ತು. ಗ್ರಾಮಸ್ಥರು ಸೇರಿ ರಸ್ತೆ ಬದಿಯಲ್ಲಿ ಆವರಿಸಿದ್ದ ಕಾಡು ಗಿಡ ಗಂಟಿಗಳನ್ನು ಕಡಿದು ಸ್ವಚ್ಚಗೊಳಿಸಿ, ಗುಂಡಿಮುಚ್ಚಿದರು. ಗ್ರಾಮಸ್ಥರಾದ ಬೈರಿಕುಂದಿರ ಅಯ್ಯಪ್ಪ, ಸೋಮಯ್ಯ, ಮನು, ವಿನು ಮಳ್ಳಡ ಚಿಣ್ಣಪ್ಪ, ಸುಬ್ಬಯ್ಯ, ತಿಮ್ಮಯ್ಯ, ಗಣೇಶ, ಪೊನ್ನಚ್ಚನ ಸೋಮಣ್ಣ, ಹರೀಶ್, ರೋಹನ್ ಇತರರು ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ
ಲೇಖಕ: admin
ನಾಪೋಕ್ಲುಅ.24 NEWS DESK : ಚೆಡಾವು ಆದರ್ಶ್ ಫ್ರೆಂಡ್ಸ್ ವತಿಯಿಂದ 13ನೇ ಗೋ ಪೂಜೆ ನಡೆಯಿತು. ಚೆಡಾವುನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಾಗ್ಮಿ ವಿಕ್ರಂತ್ ದೇಲಂಪಡಿ ಧಾರ್ಮಿಕ ಉಪನ್ಯಾಸ ನೀಡಿದರು. ಈ ಸಂದರ್ಭ ಮಾತೆಯರು ಗೋವಿಗೆ ಪೂಜೆಯನ್ನು ಸಲ್ಲಿಸಿದರು. ಸಂಘದ ಅಧ್ಯಕ್ಷರಾದ ಸುನಿಲ್ ಸಂಪಾಜೆ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಮಾ ದೇವಿ ಬಾಲಚಂದ್ರ ಕಳಗಿ ಹಾಗೂ ಆದರ್ಶ್ ಫ್ರೆಂಡ್ಸ್ ನ ಎಲ್ಲಾ ಪದಾಧಿಕಾರಿಗಳು, ಸದಸ್ಯರು ಹಾಗೂ ಮಹಿಳಾ ಪದಾಧಿಕಾರಿಗಳು ಗ್ರಾಮಸ್ಥರು ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಅ.24 NEWS DESK : ಕಕ್ಕಬೆಯ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಪತ್ತಾಲೋಧಿ ಆರಾಧನೆ ಕಾರ್ಯಕ್ರಮ ಅ.27 ರ0ದು ಜರುಗಲಿದೆ. ಆದಿಮಾತೆ ಶ್ರೀ ಕಾವೇರಿಯ ತೀರ್ಥೋದ್ಭವ ಕಳೆದು ಸಂಪ್ರದಾಯಸ್ಥರ ಮನೆಗಳಲ್ಲಿ ಜರುಗುವ “ಕಣಿಪೂಜೆಯ” ದಿನದ ಸೂರ್ಯೋದಯದಿಂದ ಸರಿಯಾಗಿ ಹತ್ತನೇ ಸೂರ್ಯೋದಯದ ದಿನದಂದು ಕೊಡಗಿನಾದ್ಯಂತ ಪತ್ತಾಲೋಧಿ ಅಂದರೆ ಹತ್ತನೇ ಪವಿತ್ರ ದಿನವು “ತೊಲೆಯಾರ್ ಪತ್ತ್” ಎಂಬ ಪ್ರತೀತಿ ಪಡೆದಿದೆ. ಶುಭ ಕಾರ್ಯಗಳಿಗೆ ಅತ್ಯಂತ ಪ್ರಶಸ್ತವಾದ ಈ ದಿನ ಕೊಡವ ಸಂಪ್ರದಾಯದಂತೆ ಕೈಗೊಳ್ಳುವ ಯಾವುದೇ ಕಾರ್ಯವು ಕಾರ್ಯಗತವಾಗುವುದಲ್ಲದೇ, ದೇವಾ ನುಗ್ರಹದೊಂದಿಗೆ ಅಕ್ಷಯವಾಗುವುದೆಂಬ ನಂಬಿಕೆ. ಪಾಡಿಯಲ್ಲಿ ಪರದಂಡ ಕುಟುಂಬಸ್ಥರ ವತಿಯಿಂದ ಸಂಪ್ರದಾಯದಂತೆ ಆ ದಿವಸ ಅಂದರೆ ಸೋಮವಾರ ತಾರೀಕು 27ರಂದು “ತೊಲೆಯಾರ್ ಪತ್ತ್ ಆರಾಧನೆ ” ನಡೆಯಲಿದೆ. ಅಂದು ವಿಶೇಷ ಪೂಜಾ ಕೈಂಕರ್ಯಗಳು ನೆರವೇರಲಿದ್ದು, ತುಲಾಭಾರ ಸೇವೆಗಳು ಮಹಾಪೂಜೆಗಳು ನಡೆಯಲಿದೆ ಎಂದು ಪರದಂಡ ಕುಟುಂಬಸ್ಥರು ತಿಳಿಸಿದ್ದಾರೆ. ಅಲ್ಲದೆ ಭಕ್ತಾದಿಗಳು ಆಗಮಿಸಿ ಪಾಡಿ ಶ್ರೀ ಇಗ್ಗುತ್ತಪ್ಪ ದೇವರ ದರ್ಶನ ಪಡೆದು ಕೃಪಾಶೀರ್ವಾದಗಳಿಗೆ ಪಾತ್ರರಾಗಲು ವಿನಂತಿಸಿದ್ದಾರೆ.…
ಮಡಿಕೇರಿ NEWS DESK ಅ.24 : 2024- 25ನೇ ಸಾಲಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ವಿದ್ಯಾರ್ಥಿಗಳು ಹಾಗೂ ಪ್ರೊಫೆಸರ್ ಗಳಾಗಿ ಬಡ್ತಿ ಹೊಂದಿದ 10 ಮಂದಿ ಬೋಧಕರಿಗೆ ಸಿಬ್ಬಂದಿಗಳಿಗೆ ಅ.25ರಂದು ದಲಿತ ಸಂಘರ್ಷ ಸಮಿತಿಯ ವತಿಯಿಂದ ಸನ್ಮಾನ ಸಮಾರಂಭ ನಡೆಯಲಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಅವರು ಶನಿವಾರ ಬೆಳಿಗ್ಗೆ 10.30 ಗಂಟೆಗೆ ಫೀ.ಮಾ.ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ನಡೆಯುವ ಸಮಾರಂಭವನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಅಶೋಕ ಸಂಗಪ್ಪ ಅಲೋರ ಅವರು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದ್ದಾರೆ. ದಲಿತ ಸಂಘರ್ಷ ಸಮಿತಿಯ ಮಡಿಕೇರಿ ತಾಲ್ಲೂಕು ಸಂಚಾಲಕ ದೀಪಕ್ ಪೊನ್ನಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಕ್ಕಳ ತಜ್ಞ ಡಾ.ನವೀನ್ ಬಿ.ಸಿ ಅವರು ‘ಪದವಿಯ ನಂತರ ಉದ್ಯೋಗಾವಕಾಶಗಳು ಹಾಗೂ ಉನ್ನತ ವಿದ್ಯಾಭ್ಯಾಸ ಮಾಡಿದರೆ ಸಮಾಜದಲ್ಲಿ ಆಗುವ ಬದಲಾವಣೆಗಳು’ ವಿಷಯದ ಕುರಿತು ಮುಖ್ಯ ಭಾಷಣ ಮಾಡಲಿದ್ದಾರೆ. ಜಿಲ್ಲಾ ಪೊಲೀಸ್…
ಮಡಿಕೇರಿ NEWS DESK ಅ.24 : ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸುವ ಉದ್ದೇಶದದಿಂದ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ನ.1 ರಂದು ನವದೆಹಲಿ ಚಲೋ ಕೊಡವ ಸತ್ಯಾಗ್ರಹ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಂವಿಧಾನದ 6 ನೇ ಶೆಡ್ಯೂಲ್ ಅಡಿಯಲ್ಲಿ ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯ ಮೂಲಕ ಸ್ವ-ನಿರ್ಣಯ ಮತ್ತು ಸ್ವ-ಆಡಳಿತದ ಹಕ್ಕೊತ್ತಾಯಗಳ ಪರ ಹೋರಾಟ ನಡೆಸುತ್ತಿರುವ ಸಿಎನ್‌ಸಿ ಸಂಘಟನೆ ನ.1ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಶಾಂತಿಯುತ ಸತ್ಯಾಗ್ರಹವನ್ನು ನಡೆಸಲಿದೆ. ರಾಜ್ಯ ಮರುಸಂಘಟನಾ ದಿನವನ್ನು “ಕೊಡವ ನೆಲದ ದುರಾಕ್ರಮಣದ ದಿನ” ಎಂದು ಆಚರಿಸುವುದಾಗಿ ಮಾಹಿತಿ ನೀಡಿದ್ದಾರೆ. 1956 ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವರು ಪ್ರೀತಿಯ ತಾಯ್ನಾಡನ್ನು ಅಂದರೆ ಹಿಂದಿನ “ಸಿ” ಭಾಗವಾದ ಕೊಡವರ ರಾಜ್ಯವನ್ನು ಕಳೆದುಕೊಂಡ ದಿನ. ಇದು 20 ನೇ ಶತಮಾನದ ಅತ್ಯಂತ ದೊಡ್ಡ ಭೌಗೋಳಿಕ-ರಾಜಕೀಯ ಉತ್ಪಾತವಾಗಿದೆ. ರಾಜ್ಯ ಮರುಸಂಘಟನಾ ಕಾಯ್ದೆಯಡಿ ನಮ್ಮ ರಾಜ್ಯವನ್ನು ವಿಲೀನಗೊಳಿಸಿದ ನಂತರ ಕೊಡವರು ತಮ್ಮ ಸ್ವಂತ ತಾಯ್ನಾಡಿನಲ್ಲಿ…
ಮಡಿಕೇರಿ NEWS DESK ಅ.22 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ಪ್ರತಿಷ್ಠಿತ “ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ”ಗೆ ಕೊಡಗು ಜಿಲ್ಲೆಯ ಪುರುಷ ಲೇಖಕರು ಬರೆದು ಪ್ರಕಟಿಸಿದ ಕನ್ನಡ ಭಾಷೆಯ ಕೃತಿಗಳನ್ನು ಆಹ್ವಾನಿಸಲಾಗಿದೆ. ಶಕ್ತಿ ಪತ್ರಿಕೆಯ ಸ್ಥಾಪಕ ಸಂಪಾದಕರಾಗಿದ್ದ ದಿ. ಬಿ.ಎಸ್ ಗೋಪಾಲಕೃಷ್ಣರವರ ಜ್ಞಾಪಕಾರ್ಥ ಅವರ ಪುತ್ರ ಅನಂತಶಯನ ಮತ್ತು ಸಹೋದರರು ಪುರುಷ ಲೇಖಕರನ್ನು ಪ್ರೋತ್ಸಾಹಿಸುವ ಸಲುವಾಗಿ ಈ ದತ್ತಿ ಸ್ಥಾಪನೆ ಮಾಡಿರುತ್ತಾರೆ. 2025-26ನೇ ಸಾಲಿನ ಪ್ರಶಸ್ತಿ ಪುರಸ್ಕಾರ ಪಡೆಯಲು ಆಸಕ್ತ ಲೇಖಕರು ತಾವು ರಚಿಸಿದ ಪುಸ್ತಕದ ನಾಲ್ಕು ಪ್ರತಿಗಳನ್ನು ಅರ್ಜಿಯೊಂದಿಗೆ ಕಳುಹಿಸಿ ತಕ್ಕದ್ದು. 2020ರ ನಂತರ ಪ್ರಕಟಿತ ಪುಸ್ತಕಗಳನ್ನು ಮಾತ್ರ ಕಳುಹಿಸಿತಕ್ಕದ್ದು. ಸ್ಪರ್ಧೆಗೆ ಪುಸ್ತಕ ಕಳುಹಿಸುವ ಲೇಖಕ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗಿರಬೇಕು. ಓರ್ವ ಲೇಖಕ ಒಂದು ಕೃತಿಯನ್ನು ಮಾತ್ರ ಕಳುಹಿಸತಕ್ಕದ್ದು. ಲಕೊಟೆಯ ಮೇಲೆ *”ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ”ಗೆ* ಎಂದು ಬರೆಯತಕ್ಕದ್ದು. ಕೊಡಗು ಜಿಲ್ಲೆಯ ಲೇಖಕರಿಗೆ ಮಾತ್ರ ಅವಕಾಶ. ಪುಸ್ತಕಗಳನ್ನು ಕಳುಹಿಸಲು ಕೊನೆಯ ದಿನಾಂಕ 05.11.2025. ಕಳುಹಿಸಬೇಕಾದ ವಿಳಾಸ : ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಂಬೇಡ್ಕರ್ ಭವನದ ಬಳಿ, ಸುದರ್ಶನ…
ಪತ್ತನಂತಿಟ್ಟ ಅ.22 NEWS DESK : ಕೇರಳ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶಬರಿಮಲೆಗೆ ಭೇಟಿ ನೀಡಿ, ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ. ದೀಪಾವಳಿ ಬಲಿಪಾಡ್ಯಮಿ ದಿನ ಸನ್ನಿಧಾನಂನಲ್ಲಿ ಅಯ್ಯಪ್ಪ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಅವರು ಪಂಪಾದಿಂದ ಇರುಮುಡಿಯನ್ನು ಹೊತ್ತುಕೊಂಡು ಪತಿನೆಟ್ಟಂ ಪಾಡಿಯನ್ನು ಹತ್ತಿ ಗರ್ಭಗುಡಿಯ ಬಳಿ ತಲುಪಿದರು. ಕೇರಳ ದೇವಸ್ವಂಗಳ ಸಚಿವ ವಿಎನ್ ವಾಸವನ್ ಭೇಟಿಯ ಸಮಯದಲ್ಲಿ ಅವರೊಂದಿಗೆ ಜೊತೆಗಿದ್ದರು. ಶಬರಿಮಲೆಗೆ ಭೇಟಿ ನೀಡಿದ ಮೊದಲ ಹಾಲಿ ರಾಷ್ಟ್ರಪತಿ ಎಂಬ ಹೆಗ್ಗಳಿಕೆ ದ್ರೌಪದಿ ಮುರ್ಮು ಅವರು ಪಾತ್ರರಾಗಿದ್ದಾರೆ.
ಮಡಿಕೇರಿ ಅ.22 NEWS DESK : ವಿರಾಜಪೇಟೆ ತಾಲ್ಲೂಕಿನ ಕೋಳತೋಡು-ಬೈಗೋಡು ಗ್ರಾಮದ ಕಾಂಗ್ರೆಸ್ ಬೂತ್ ಅಧ್ಯಕ್ಷ ಪುಲಿಯಂಡ ರೋಶನ್ ಅವರ ಹಿರಿಯ ಸಹೋದರ ಪುಲಿಯಂಡ ಸುಬ್ರಮಣಿ ರಾಜ ಅನಾರೋಗ್ಯದಿಂದ ಬಳಲುತ್ತಿದ್ದು, ಬೆಂಗಳೂರಿನ ಪ್ರತಿಷ್ಠಿತ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಹಿತಿ ತಿಳಿಸಿದು ಆಸ್ಪತ್ರೆಗೆ ತೆರಳಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಸುಬ್ರಮಣಿ ರಾಜ ಅವರ ಆರೋಗ್ಯ ವಿಚಾರಿಸಿ ಧೈರ್ಯ ನೀಡಿದರು. ಇವರ ಚಿಕಿತ್ಸೆಗೆ ಈಗಾಗಲೇ ಲಕ್ಷಾಂತರ ರೂಪಾಯಿ ಖರ್ಚಾಗಿದ್ದು, ಕುಟುಂಬದ ಆರ್ಥಿಕ ಸ್ಥಿತಿಯನ್ನು ಮನಗಂಡ ಶಾಸಕರು, ಇವರ ಚಿಕಿತ್ಸಾ ವೆಚ್ಚವನ್ನು ಸರಕಾರದಿಂದ ಭರಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು. ಈ ಸಂದರ್ಭ ಗಿರೀಶ್, ಚಂಗಪ್ಪ, ಜೋಯ್ ನಂಜಪ್ಪ ಉಪಸ್ಥಿತರಿದ್ದರು.
ಮಡಿಕೇರಿ ಅ.22 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಅನುದಾನದಲ್ಲಿ ಬೇಟೋಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಡಮಕ್ಕಿ-ಬೂದಿಮಾಳ ರಸ್ತೆಗೆ ರೂ.15 ಲಕ್ಷ ಅನುದಾನದಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದೆ. ಇದರಲ್ಲಿ ರೂ.10 ಲಕ್ಷ ಹಾಗು ರೂ.5 ಲಕ್ಷ ಅನುದಾನದಲ್ಲಿ 2 ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದೆ. ರಸ್ತೆ ಅಭಿವೃದ್ಧಿಗೆ ಕಾಮಗಾರಿಗೆ ಅನುದಾನ ಒದಗಿಸಿದ ಶಾಸಕ ಎ.ಎಸ್ ಪೊನ್ನಣ್ಣ ಹಾಗೂ ಇದಕ್ಕೆ ಸಹಕರಿಸಿದ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ಗ್ಯಾರೆಂಟಿ ಯೋಜನೆ ಸದಸ್ಯ ಟಿ.ಕೆ.ಹರೀಶ ಮತ್ತು ಟಿ.ಪಿ.ಪುರುಷೋತ್ತಮ , ಪಿ.ಬಿ.ಸುರೇಶ್, ಶಶಿ, ರವಿ, ಹರೀಶ, ಮನೋಹರ ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಗೆ ಹೆಗ್ಗಳ-ಎಡಮಕ್ಕಿ-ಬೂದಿಮಾಳ ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದರು.
ಮಡಿಕೇರಿ NEWS DESK ಅ.22 : ನಗರದಂಚಿನಲ್ಲಿರುವ ಕರ್ಣಂಗೇರಿ ಕ್ಷೇತ್ರದ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ದೀಪಾವಳಿ ಅಮಾವಾಸ್ಯೆ ಪ್ರಯುಕ್ತ ‘ದೀಪೋತ್ಸವ’ ಶ್ರದ್ಧಾಭಕ್ತಿಯಿಂದ ನಡೆಯಿತು. ಭಕ್ತರು ಸಹಸ್ರ ಸಹಸ್ರ ಹಣತೆಗಳನ್ನು ಹಚ್ಚಿ ದೇವಾಲಯನ್ನು ಬೆಳಗಿದರು. ದೇವಾಲಯದ ಧರ್ಮದರ್ಶಿ ಹೆಚ್.ಎಸ್.ಗೋವಿಂದ ಸ್ವಾಮಿ ಅವರ ನೇತೃತ್ವದಲ್ಲಿ ಮಂಗಳವಾರ ರಾತ್ರಿ ದೇವಾಲಯದಲ್ಲಿ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ದೀಪೋತ್ಸವ ಜರುಗಿತು. ಕಳಸ ಪೂಜೆ, ಅನ್ನದಾನ ಮತ್ತು ಪ್ರಸಾದ ವಿನಿಯೋಗವಾದ ನಂತರ ತಾಯಿಯ ದರ್ಶನ ಹಾಗೂ ದೀಪೋತ್ಸವ ನೆರವೇರಿತು. 108 ಎಳ್ಳು ಬತ್ತಿಯನ್ನು ದೇವಾಲಯದ ಆವರಣದಲ್ಲಿ ಹಚ್ಚಿದರೆ ದೋಷ ಪರಿಹಾರವಾಗಲಿದೆ ಎನ್ನುವ ನಂಬಿಕೆಯ ಹಿನ್ನೆಲೆಯಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೀಪೋತ್ಸವವನ್ನು ಯಶಸ್ವಿಗೊಳಿಸಿದರು.






