ಲೇಖಕ: admin

ವಾಷಿಂಗ್ಟನ್ ಅ.22 NEWS DESK : ಅನಿವಾಸಿ ಭಾರತೀಯರೊಂದಿಗೆ ಶ್ವೇತಭವನದಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ದೀಪಾವಳಿ ಆಚರಿಸಿದ್ದು, ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಕೊಂಡಾಡಿದ್ದಾರೆ. ದೀಪಾವಳಿ ಹಿನ್ನೆಲೆ ಅಮೆರಿಕಾದ ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ ಅವರು ಕ್ಯಾಂಡಲ್‌ನಿಂದ ದೀಪ ಹಚ್ಚಿ ದೀಪ ಬೆಳಗಿದರು. ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಾರತೀಯರಿಗೆ ಹಬ್ಬದ ಶುಭಾಶಯಗಳನ್ನು ತಿಳಿಸಿದರು. ಇದೇ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಳಿ ಮಾತನಾಡಿರುವುದಾಗಿ ತಿಳಿಸಿದರು. ಭಾರತದ ಜನತೆಗೆ ದೀಪಾವಳಿ ಹಬ್ಬದ ಹೃತ್ಪೂರ್ವಕ ಶುಭಾಶಯಗಳು. ನಾನು ಇಂದು (ಅ.20) ನಿಮ್ಮ ಪ್ರಧಾನ ಮಂತ್ರಿ ಮೋದಿಯವರೊಂದಿಗೆ ಮಾತನಾಡಿದೆ. ನಮ್ಮ ಸಂಭಾಷಣೆ ಬಹಳ ಉತ್ತಮವಾಗಿತ್ತು. ನಾವು ವ್ಯಾಪಾರದ ಬಗ್ಗೆ ಮಾತನಾಡಿದೆವು. ಆ ಬಗ್ಗೆ ಅವರು ಬಹಳ ಆಸಕ್ತಿ ಹೊಂದಿದ್ದಾರೆ. ಸ್ವಲ್ಪ ಸಮಯದ ಹಿಂದೆ, ನಾವು ಪಾಕಿಸ್ತಾನದೊಂದಿಗೆ ಯಾವುದೇ ಯುದ್ಧ ಬೇಡ ಎಂದು ಮಾತನಾಡಿಕೊಂಡಿದ್ದೆವು. ಈ ವೇಳೆ ವ್ಯಾಪಾರದ ಬಗ್ಗೆಯೂ ಮಾತುಕತೆ ನಡೆಸಲಾಗಿದೆ ಭಾರತ ಮತ್ತು ಪಾಕಿಸ್ತಾನದ ನಡುವೆ ಯಾವುದೇ…

Read More

ಮಡಿಕೇರಿ ಅ.22 NEWS DESK : ನೀರಿನ ರಭಸಕ್ಕೆ ಬೈಕ್ ಸಮೇತ ಕೊಚ್ಚಿ ಹೋಗಿ ಅದೃಷ್ಟವಶಾತ್ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ, ಡಬ್ಬಡ್ಕ ಭಾಗದ ಹೊಸೂರು ಜಯರಾಮ ಅವರ ಪುತ್ರ ಅನುಪಮ್ ಮನೆಗೆ ಕೊಡಗು ವಿಭಾಗಾಧಿಕಾರಿಗಳು, ಮಡಿಕೇರಿ ತಹಶೀಲ್ದಾರರು ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಸೂಚನೆ ಮೇರೆಗೆ ಭೇಟಿ ನೀಡಿದ ಅಧಿಕಾರಿಗಳ ತಂಡ, ಮೊದಲಿಗೆ ಅವಘಡ ಸಂಭವಿಸಿದ ಹೊದ್ದೆಟ್ಟಿ ಹೊಳೆ ಜಾಗವನ್ನು ಪರಿಶೀಲಿಸಿ ಬಳಿಕ ನಿರೂಪಮ ಮನೆಗೆ ಭೇಟಿ ನೀಡಿ ಕುಟುಂಬದವರೊಂದಿಗೆ ಮಾತನಾಡಿ ಧೈರ್ಯ ತುಂಬಿದರು. ಈ ಎಲ್ಲಾ ಘಟನೆಯ ವಿವರವನ್ನು ಶಾಸಕರ ಮೂಲಕ ರಾಜ್ಯ ಸರ್ಕಾರಕ್ಕೆ ಹಾಗೂ ಸಂಬಂಧ ಪಟ್ಟ ಇಲಾಖೆಗಳಿಗೆ ತಲುಪಿಸಿ ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳುವುದಾಗಿ  ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ತಿಳಿಸಿದ್ದಾರೆ. ಈ ಸಂದರ್ಭ ಕಾಂಗ್ರೆಸ್ ಮುಖಂಡರು ಹಾಜರಿದ್ದರು.

Read More

ಮಡಿಕೇರಿ ಅ.22 NEWS DESK : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಡಗು ಜಿಲ್ಲೆ ಮಡಿಕೇರಿ ಇವರ ವತಿಯಿಂದ ಪ್ರತಿ ವರ್ಷದಂತೆ 2025-26ನೇ ಸಾಲಿಗೆ ಜಿಲ್ಲೆಯ ವಿವಿಧ ಸಂಘ- ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳಲ್ಲಿ (ಗಣಪತಿ ಉತ್ಸವ ಹಾಗೂ ಶಾಲಾ ವಾರ್ಷಿಕೋತ್ಸವ ಇತರೆ ಕಾರ್ಯಕ್ರಮಗಳನ್ನು ಹೊರತುಪಡಿಸಿ) ವೇದಿಕೆ ಹಾಗೂ ಮೆರವಣಿಗೆಗೆ ಸಂಬಂಧಿಸಿದಂತೆ ಕಲಾತಂಡ ನಿಯೋಜಿಸಲು ಅವಕಾಶವಿದ್ದು, ಈ ಅವಕಾಶ ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಕಾರ್ಯಕ್ರಮಗಳು ರೂಪಿಸಿಕೊಂಡ ಸಂಘ-ಸಂಸ್ಥೆಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವೇದಿಕೆ ಹಾಗೂ ಮೆರವಣಿಗೆಗೆ ಕಲಾತಂಡಗಳನ್ನು ಪ್ರಾಯೋಜಿಸಲು ತಮ್ಮ ಪೂರ್ಣ ವಿವರಗಳೊಂದಿಗೆ ಸಕಾಲದ ಸೇವಾಸಿಂಧುವಿನಡಿ ಕಾರ್ಯಕ್ರಮ ನಡೆಯುವ 15 ದಿನಗಳ ಮುಂಚಿತವಾಗಿ ಮನವಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08272-228490 ನ್ನು ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ ಅವರು ತಿಳಿಸಿದ್ದಾರೆ.

Read More

ಮಡಿಕೇರಿ NEWS DESK ಅ.21 : ರಾಷ್ಟ್ರೀಯ ಜನಗಣತಿಯ ಸಂದರ್ಭ ಕೊಡವ ಎಂದು ದಾಖಲೀಕರಣಗೊಂಡರೆ ಮಾತ್ರ ಕೊಡವರು ಸಂವಿಧಾನಬದ್ಧವಾದ ಹಕ್ಕುಗಳನ್ನು ಸಾಧಿಸಲು ಸಾಧ್ಯ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಪ್ರತಿಪಾದಿಸಿದ್ದಾರೆ. ಉಮ್ಮತ್ ನಾಡಿನ ಅಮ್ಮತ್ತಿಯಲ್ಲಿ ಸಿಎನ್‌ಸಿ ವತಿಯಿಂದ ನಡೆದ 16ನೇ ಕೊಡವ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕೊಡವಲ್ಯಾಂಡ್ ಭೂ ರಾಜಕೀಯ ಸ್ವಯಂ ಆಡಳಿತ, ಕೊಡವರಿಗೆ ವಿಶ್ವರಾಷ್ಟ್ರ ಸಂಸ್ಥೆಯ ಇಂಡಿಜಿನಸ್ ಪಿಪಲ್ಸ್ ರೈಟ್ಸ್, ಎಸ್.ಟಿ.ಪಟ್ಟಿಯಲ್ಲಿ ವರ್ಗೀಕರಣ, ಸಿಕ್ಕಿಂನ “ಸಂಘ” ಮತಕ್ಷೇತ್ರದಂತೆ ಪಾರ್ಲಿಮೆಂಟ್ ಮತ್ತು ಅಸೆಂಬ್ಲಿಯಲ್ಲಿ ವಿಶೇಷ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿದರು. ಆದಿಮಸಂಜಾತ, ಇಂಡಿಜಿನಸ್, ಆನಿಮಿಸ್ಟಿಕ್ ನಂಬಿಗೆಯ ಏಕ ಜನಾಂಗೀಯ ಕೊಡವರ ಪ್ರತ್ಯೇಕ ಗುರುತು ನೋಂದವಣೆಯ ಪ್ರಕ್ರಿಯೆ ರಾಷ್ಟ್ರೀಯ ಜನಗಣತಿಯಲ್ಲಿ ದಾಖಲಿಕರಣವಾದರೆ ಮಾತ್ರ ನಮಗೆ ಸಂವಿಧಾನ ಬದ್ಧ ಹಕ್ಕು ದೊರೆಯಲಿದೆ. ಕೊಡವರ ಪೂರ್ವಾರ್ಜಿತ ಭೂಹಕ್ಕು ಮತ್ತು ಕೊಡವರ ಧಾರ್ಮಿಕ ಸಂಸ್ಕಾರ ತೋಕ್-ಗನ್ ಹಕ್ಕು ಚಿರಸ್ಥಾಯಿಯಾಗಿ ಮುಂದುವರೆಯಲಿದೆ ಎಂದರು. 2026-27 ರಲ್ಲಿ ನಡೆಯಲಿರುವ…

Read More

ಮಡಿಕೇರಿ ಅ.21 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲೆಯ ಹಿರಿಯ ನಾಗರಿಕರಿಗೆ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕವಿಗೋಷ್ಠಿ ಏರ್ಪಡಿಸಿದೆ. ಕನ್ನಡ ಭಾಷೆ, ಸಾಹಿತ್ಯದ ಬಗ್ಗೆ ಅಪಾರವಾಗಿ ಅನುಭವಿರುವ ಹಿರಿಯ ನಾಗರಿಕರು ಕವಿಗೋಷ್ಠಿಯಲ್ಲಿ ಭಾಗವಹಿಸಬಹುದಾಗಿದೆ. ಅವರು ತಮ್ಮ ಸ್ವರಚಿತ ಕವನವನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಿಕೊಡತಕ್ಕದ್ದು. ಕವನಗಳನ್ನು ಪರಿಶೀಲಿಸಿ ಆಯ್ಕೆಗೊಳಿಸಲು ಸಮಿತಿ ರಚಿಸಲಾಗುವುದು. ಕವನ 16 ಗೆರೆಗಳನ್ನು ಮೀರಿರಬಾರದು. ಒಬ್ಬರು ಒಂದು ಕವನವನ್ನು ಮಾತ್ರ ಕಳುಹಿಸಬಹುದು ಕನ್ನಡ ಭಾಷೆಯ ಚುಟುಕು ಕವನ(4 ಸಾಲಿನ ಗರಿಷ್ಠ 4 ಕವನ) ಗಳನ್ನೂ ಕಳುಹಿಸಬಹುದು. ಲಕೊಟೆಯ ಮೇಲೆ *ರಾಜ್ಯೋತ್ಸವ ಹಿರಿಯರ ಕವಿಗೋಷ್ಠಿ*ಗೆ ಎಂದು ಬರೆಯತಕ್ಕದ್ದು. ಕೊಡಗು ಜಿಲ್ಲೆಯ ಹಿರಿಯ ನಾಗರಿಕರಿಗೆ ಮಾತ್ರ ಅವಕಾಶ. ಕವನಗಳನ್ನು ಕಳುಹಿಸಲು ಕಡೆಯ ದಿನಾಂಕ 05.11.2025. ಈ ಕೆಳಗಿನ ಮೊಬೈಲ್ ಗಳಿಗೆ ವಾಟ್ಸಪ್ ಮೂಲಕವೂ ಕಳುಹಿಸಬಹುದು. ಕವನದ ಜೊತೆಗೆ ಆಧಾರ್ ಕಾರ್ಡ್ ಅಥವಾ ಹಿರಿಯ ನಾಗರಿಕ ದೃಢೀಕರಣ ಪತ್ರದ ನಕಲನ್ನು ಕಳುಹಿಸಿತಕ್ಕದ್ದು. ಕಳುಹಿಸಬೇಕಾದ ವಿಳಾಸ : ಅಧ್ಯಕ್ಷರು,…

Read More

ಮಡಿಕೇರಿ ಅ.21 NEWS DESK : ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಮತ್ತು ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಈ ಎರಡೂ ಸಂಸ್ಥೆಗಳು ಒಟ್ಟಾಗಿ ನ.1, 1985 ರಿಂದ ಕರ್ನಾಟಕದಲ್ಲಿರುವ ಕನ್ನಡ ಬಾರದ ಎಲ್ಲಾ ಸರ್ಕಾರಿ ನೌಕರರಿಗಾಗಿ ಹನ್ನೆರಡು ತಿಂಗಳುಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯೊಂದನ್ನು ನಡೆಸುತ್ತಿವೆ. ಇದಕ್ಕೆ ಕರ್ನಾಟಕದಲ್ಲಿರುವ ಎಲ್ಲಾ ನಗರಸಭೆ, ಕ.ವಿ.ಪ್ರ.ನಿ.ನಿ., ಕೆ.ಎಸ್.ಆರ್.ಟಿ.ಸಿ., ವಿಶ್ವವಿದ್ಯಾಲಯಗಳು, ಶಾಲಾ ಕಾಲೇಜುಗಳು ಮತ್ತಿತರ ಸರ್ಕಾರಿ ಅನುದಾನ ಪಡೆಯುವ ಸಂಸ್ಥೆಗಳ ನೌಕರರು ಮತ್ತು ಎಲ್ಲ ರಾಷ್ಟ್ರೀಕೃತ ಬ್ಯಾಂಕುಗಳ ನೌಕರರು ಸಹ ನೊಂದಾಯಿಸಿಕೊಳ್ಳಬಹುದು. ನೋಂದಣಿತರು ಶುಲ್ಕ ಕೊಡಬೇಕಾಗಿಲ್ಲ. ಕರ್ನಾಟಕ ಸರ್ಕಾರಿ ನೌಕರರು ಸಂಪರ್ಕ ಶಿಬಿರ ಹಾಗೂ ಪರೀಕ್ಷೆಗಳಿಗೆ ಹಾಜರಾಗುವವರಿಗೆ ಕಚೇರಿ ಗೈರು ಹಾಜರಿಯನ್ನು ಅನ್ಯ ಕಾರ್ಯನಿಮಿತ್ತ ಎಂದು ಪರಿಗಣಿಸಲಾಗುವುದು. ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಗೆ ನೋಂದಾಯಿಸಿಕೊಂಡು ಉತ್ತೀರ್ಣರಾದವರಿಗೆ ಕರ್ನಾಟಕ ಲೋಕಸೇವಾ ಆಯೋಗದ ಕನ್ನಡ ಪರೀಕ್ಷೆಯಿಂದ ವಿನಾಯಿತಿ ದೊರೆಯಲಿದೆ. ಈ ಯೋಜನೆಯನ್ನು ಸಾರ್ವಜನಿಕರಿಗೂ ವಿಸ್ತರಿಸಲಾಗಿದೆ. ಇವರು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ವಯೋಮಿತಿ…

Read More

ಮಡಿಕೇರಿ ಅ.21 NEWS DESK : ಜಿಲ್ಲಾ ಪೊಲೀಸ್ ಘಟಕ ವತಿಯಿಂದ ‘ಪೊಲೀಸ್ ಸಂಸ್ಮರಣಾ ದಿನಾಚರಣೆ’ಯು ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಿತು. ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಹೂಗುಚ್ಚ ಸಮರ್ಪಿಸಿ ಗಣ್ಯರು ಹಾಗೂ ಅತಿಥಿಗಳು ಗೌರವ ನಮನ ಸಲ್ಲಿಸಿದರು. ಪೊಲೀಸ್ ಹುತಾತ್ಮರ ದಿನದ ಕಾರ್ಯಕ್ರಮದಲ್ಲಿ ಪೆರೆಡ್ ಕಮಾಂಡರ್ ಆರ್.ಪಿ.ಗಣೇಶ್ ಅವರು ಗೌರವ ವಂದನೆ ಸಲ್ಲಿಸಿ, ಮುಖ್ಯ ಅತಿಥಿಗಳಿಂದ ಅನುಮತಿ ಪಡೆದರು. ಬಳಿಕ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್, ಉಪ ಪೊಲೀಸ್ ವರಿಷ್ಠಾಧಿಕಾರಿ ಮಹೇಶ್ ಕುಮಾರ್, ಗುಪ್ತದಳ ವಿಭಾಗದ ಪೊಲೀಸ್ ನಿರೀಕ್ಷರಾದ ಐ.ಪಿ.ಮೇದಪ್ಪ, ಜಿಲ್ಲಾ ಪೊಲೀಸ್ ಲಿಪಿಕ ಸಿಬ್ಬಂದಿಗಳ ಪರವಾಗಿ ಪಿ.ಎ.ನಂಜಪ್ಪ, ನಿವೃತ್ತ ಪೊಲೀಸ್ ಅಧಿಕಾರಿಗಳ ಪರವಾಗಿ ಅಪ್ಪಯ್ಯ, ನಿವೃತ್ತ ಸೇನಾಧಿಕಾರಿಗಳ ಪರವಾಗಿ ಮೊಣ್ಣಪ್ಪ, ಜಿಲ್ಲಾ ಕಾರಾಗೃಹ ಪರವಾಗಿ ಸಂಜಯ್ ಜತ್ತಿ, ನಗರಸಭೆ ಪರವಾಗಿ ಅಧ್ಯಕ್ಷರಾದ ಪಿ.ಕಲಾವತಿ ಹಾಗೂ ಸದಸ್ಯರಾದ ಅನಿತಾ ಪೂವಯ್ಯ,…

Read More

ಮಡಿಕೇರಿ ಅ.21 NEWS DESK : ನಗರದ ಶ್ರೀ ಓಂಕಾರೇಶ್ವರ ದೇವಾಲಯ ವತಿಯಿಂದ ಕಾರ್ತಿಕ ಮಾಸದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ಹಾಗೂ ಉತ್ಸವಾದಿಗಳು ಶಾಸ್ತ್ರೋಕ್ತವಾಗಿ ನಡೆಯಲಿದೆ ಎಂದು ಶ್ರೀ ಓಂಕಾರೇಶ್ವರ ದೇವಾಲಯದ ಅಧ್ಯಕ್ಷರಾದ ಚುಮ್ಮಿ ದೇವಯ್ಯ ಅವರು ತಿಳಿಸಿದ್ದಾರೆ. ಅ.22 ರಂದು ಸಂಜೆ 6 ಗಂಟೆಗೆ ಗೋಪೂಜೆ ನಡೆಯಲಿದೆ. ಅಕ್ಟೋಬರ್ 22 ರಿಂದ ನವೆಂಬರ್ 2 ರವರೆಗೆ 12 ದಿನಗಳ ಕಾಲ ಸಂಜೆ 6.30 ಗಂಟೆಯಿಂದ ತುಳಸಿ ಪೂಜೆ ನಡೆಯಲಿದ್ದು, ತುಳಸಿ ಪೂಜೆ ಮಾಡಿಸ ಬಯಸುವ ಭಕ್ತಾಧಿಗಳು 100 ಸೇವಾ ದರ ಪಾವತಿಸಿ, ಪ್ರಸಾದ ಸ್ವೀಕರಿಸಿ ದೇವರ ಅನುಗ್ರಹಕ್ಕೆ ಪಾತ್ರವಾಗಿಬೇಕಾಗಿ ಕೋರಿದ್ದಾರೆ. ನವೆಂಬರ್ 2 ರಂದು ಬೆಳಗ್ಗೆ 10.30 ಗಂಟೆಗೆ ತುಳಸಿ ಕಲ್ಪೋಕ ಪೂಜೆ ನಡೆಯಲಿದೆ. ಹಾಗೆಯೇ ನವೆಂಬರ್ 5 ರಂದು ಸಂಜೆ 6 ಗಂಟೆಗೆ ಮಹಾಪೂಜೆ ನಡೆಯಲಿದೆ. ಜೊತೆಗೆ ಸಂಜೆ 6.30 ಗಂಟೆಗೆ ತೆಪ್ಪೋತ್ಸವ, ದಟ್ಟೋತ್ಸವ ಮತ್ತು ಪಲ್ಲಕ್ಕಿ ಉತ್ಸವ ನಡೆಯಲಿದೆ. ಕಾರ್ತಿಕ ಹುಣ್ಣಿಮೆಯ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಮಹಾ…

Read More

ಮಡಿಕೇರಿ ಅ.21 NEWS DESK : ನಗರದ ಶ್ರೀ ರಾಘವೇಂದ್ರ ದೇವಸ್ಥಾನದ ಬಳಿಯ ಕಲಾ ನಗರ ಸಾಂಸ್ಕೃತಿಕ ಕಲಾ ವೇದಿಕೆ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 12ನೇ ವರ್ಷದ ವಿವಿಧ ಆಟೋಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಅ.26 ಹಾಗೂ ನ.22 ರಂದು ರಂದು ಆಯೋಜಿಸಲಾಗಿದೆ ಎಂದು ವೇದಿಕೆಯ ಅಧ್ಯಕ್ಷ ಆರ್.ಮಹೇಶ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಬೆಳಿಗ್ಗೆ 9 ಗಂಟೆಗೆ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರಿಡಾಂಗಣದಲ್ಲಿ ಶ್ರೀ ರಾಘವೇಂದ್ರ ದೇವಸ್ಥಾನ ವ್ಯಾಪ್ತಿಯ ನಿವಾಸಿಗಳು, ಸಂಪಿಗೆ ಕಟ್ಟೆ, ಕನ್ನಂಡಬಾಣೆ, ಚೈನ್ ಗೇಟ್ ನಿವಾಸಿಗಳಿಗೆ ಸೀಮಿತವಾಗಿ ಆಟೋಟ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ. ಅಂದು ಕ್ರಿಕೆಟ್ ಪಂದ್ಯಾವಳಿ, ವಿವಿಧ ವಿಭಾಗಗಳಲ್ಲಿ 100 ಮೀಟರ್ ಓಟದ ಸ್ಪರ್ಧೆ, ಹಗ್ಗಜಗ್ಗಾಟ, 50 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ವೇಗದ ನಡಿಗೆ ಸ್ಪರ್ಧೆ, ಮನೋರಂಜನಾ ಸ್ಪರ್ಧೆಗಳು ನಡೆಯಲಿದ್ದು, ಮಧ್ಯಾಹ್ನದ ನಂತರ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದರು. *ಸಾಂಸ್ಕೃತಿಕ ಸ್ಪರ್ಧೆ* ನ.22 ರಂದು ಬೆಳಿಗ್ಗೆ 9…

Read More

ಮಡಿಕೇರಿ ಅ.21 NEWS DESK : ಮಡಿಕೇರಿ ನಗರಸಭೆಯಲ್ಲಿ ಬಿಜೆಪಿ ನೇತೃತ್ವದಲ್ಲಿ ಎರಡನೇ ಅವಧಿಯ ಆಡಳಿತ ಮಂಡಳಿ ಅಧಿಕಾರಕ್ಕೆ ಬಂದು ಆರು ತಿಂಗಳುಗಳೇ ಕಳೆದಿದ್ದರೂ ನಿಯಮಾನುಸಾರ ಸಭೆ ನಡೆಸದೆ ಅಭಿವೃದ್ಧಿ ಕಾರ್ಯಗಳನ್ನು ನಿರ್ಲಕ್ಷಿಸಲಾಗಿದೆ. ಮುಂದಿನ ಎರಡು ವಾರದೊಳಗೆ ಸಾಮಾನ್ಯ ಸಭೆಯನ್ನು ನಡೆಸದಿದ್ದರೆ ಪ್ರಕರಣ ಸಂಖ್ಯೆ 47(3) ಪ್ರಕಾರ ಅಭಿವೃದ್ಧಿಯ ದೃಷ್ಟಿಯಿಂದ ನಾವುಗಳೇ ಸಭೆ ಕರೆಯುತ್ತೇವೆ ಎಂದು ನಗರಸಭೆಯ ವಿರೋಧ ಪಕ್ಷ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಎಚ್ಚರಿಕೆ ನೀಡಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕ, ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಹಾಗೂ ನಗರಸಭಾ ಸದಸ್ಯ ಅಮೀನ್ ಮೊಹಿಸಿನ್ ಅವರು ಕರ್ನಾಟಕ ಪೌರಸಭೆಗಳ ಅಧಿನಿಯಮ 1964ರ ಪ್ರಕರಣ 47(1) ರ ಪ್ರಕಾರ ಪ್ರತಿ ತಿಂಗಳು ಕನಿಷ್ಠ ಒಂದು ಸಭೆಯನ್ನಾದರೂ ನಡೆಸಬೇಕು. ಆದರೆ ಮಡಿಕೇರಿ ನಗರಸಭೆಯ ಆಡಳಿತ ಮಂಡಳಿ ಕಳೆದ ಆರು ತಿಂಗಳಿನಲ್ಲಿ ಕೇವಲ ಒಂದು ಸಾಮಾನ್ಯ ಸಭೆ ಮತ್ತು ಒಂದು ತುರ್ತು ಸಭೆಯನ್ನು ಮಾತ್ರ ನಡೆಸಿ ನಿಯಮವನ್ನು ಸಂಪೂರ್ಣವಾಗಿ ಉಲ್ಲಂಘಿಸಿದೆ ಎಂದು…

Read More