ಗೋಣಿಕೊಪ್ಪ ಅ.20 NEWS DESK : ಸಮೀಕ್ಷೆ ವಿಸ್ತರಣೆಯ ನೆಪದಲ್ಲಿ ಅಂಗನವಾಡಿ ಕಾರ್ಯಕರ್ತರಿಗೆ ಸಲ್ಲದ ಒತ್ತಡ ಹೇರುತ್ತಿರುವುದನ್ನು ಜಿಲ್ಲಾ ಅಂಗನವಾಡಿ ಕಾರ್ಯಕರ್ತರ ಸಂಘಟನೆ ಖಂಡಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಅಂಗನವಾಡಿ ಕಾರ್ಯಕರ್ತರ ಅಧ್ಯಕ್ಷೆ ಸುಮಿತ್ರ ಸಮೀಕ್ಷೆಯಿಂದ ಕಾರ್ಯಕರ್ತರಿಗೆ ಆಗುತ್ತಿರುವ ಮಾನಸಿಕ ಒತ್ತಡದ ಬಗ್ಗೆ ಅಳಲು ತೋಡಿಕೊಂಡರು. ಪ್ರತಿ ಬಾರಿಯೂ ಅಂಗನವಾಡಿ ಕಾರ್ಯಕರ್ತರು ಸರ್ಕಾರದ ಒಂದಲ್ಲ ಒಂದು ಯೋಜನೆಗಳ ಬಗ್ಗೆ ಜನರಿಗೆ ತಲುಪಿಸುವ ಮತ್ತು ಸರ್ವೆ ಕಾರ್ಯ ಮಾಡುವ ವ್ಯವಸ್ಥೆಯನ್ನು ಪೂರಕವಾಗಿ ನಡೆಸುತ್ತಿದ್ದಾರೆ. ತಮ್ಮ ಹಲವಾರು ಜವಾಬ್ದಾರಿಯುತ ಕರ್ತವ್ಯಗಳ ನಡುವೆ ಇತರ ವ್ಯವಸ್ಥೆಗಳ ಬಗ್ಗೆಯು ಗಮನಹರಿಸಲಾಗುತ್ತಿದೆ ಆದರೂ, ಕಾರ್ಯಕರ್ತರ ಸಂಕಷ್ಟಗಳಿಗೆ ಪರಿಹಾರ ಸಿಗುತ್ತಿಲ್ಲ ಎಂದು ಆರೋಪಿಸಿದರು. ತೀವ್ರ ನಿಧಾನ ಗತಿ ಸಮೀಕ್ಷೆಯಿಂದ ಪ್ರಮಾಣವನ್ನು ಗುರಿಯತ್ತ ಸಾಗಿಸುವ ನಿಟ್ಟಿನಲ್ಲಿ ವಿಸ್ತರಣೆಗೊಂಡ ಸಮೀಕ್ಷೆಗೆ ಸರ್ಕಾರದ ಆದೇಶವಿಲ್ಲದಿದ್ದರೂ, ಅಂಗನವಾಡಿ ಕಾರ್ಯಕರ್ತರನ್ನ ಒತ್ತಾಯ ಪೂರಕವಾಗಿ ಸಮೀಕ್ಷೆ ನಡೆಸಲು ಹೇಳುತ್ತಿರುವುದು ಖಂಡನೀಯ ಎಂದರು. ಮೇಲಾಧಿಕಾರಿಗಳ ಸೂಚನೆಯನ್ನು ಉಲ್ಲೇಖಿಸಿ ಪೊನ್ನಂಪೇಟೆ ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಇಲಾಖಾಧಿಕಾರಿ ಕಾರ್ಯಕರ್ತರ ಮೇಲೆ ಒತ್ತಡ…
ಲೇಖಕ: admin
ಮಡಿಕೇರಿ ಅ.20 NEWS DESK : ಸರಕಾರದ ಮಹತ್ವಾಕಾಂಕ್ಷೆಯ ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆಯಲ್ಲಿ ಪಾಲ್ಗೊಂಡ ವಿರಾಜಪೇಟೆ ಕ್ಷೇತ್ರದ ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ ಪ್ರೌಢ ಶಾಲೆ ಶಿಕ್ಷಕರು, ಇತರ ಇಲಾಖೆ ಸಿಬ್ಬಂದಿಗಳು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿಯಾಗಿ ಚರ್ಚಿಸಿದರು. ಸಮೀಕ್ಷೆ ಸಂದರ್ಭದಲ್ಲಿ ಸಮೀಕ್ಷಕರು ಅನುಭವಿಸುತ್ತಿರುವ ತೊಡಕುಗಳನ್ನು ಹಾಗೂ ಕೆಲವು ತಾಂತ್ರಿಕ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದರು. ಎಲ್ಲವನ್ನು ಆಲಿಸಿದ ಶಾಸಕರು, ಅಗತ್ಯ ಕ್ರಮ ಕೈಗೊಂಡು ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಮಡಿಕೇರಿ ಅ.20 NEWS DESK : ಕೊಡಗು ಜಿಲ್ಲಾ ಬಂಟರ ಸಂಘ, ಮಡಿಕೇರಿ ತಾಲ್ಲೂಕು ಮಹಿಳಾ ಬಂಟರ ಸಂಘ, ನಗರ ಬಂಟರ ಸಂಘ, ವಿರಾಜಪೇಟೆ, ಸೋಮವಾರಪೇಟೆ, ಪೊನ್ನಂಪೇಟೆ, ವಿರಾಜಪೇಟೆ ತಾಲ್ಲೂಕು ಬಂಟರ ಸಂಘದ ಸಹಯೋಗದಲ್ಲಿ ಮಡಿಕೇರಿ ತಾಲ್ಲೂಕು ಬಂಟರ ಸಂಘದ ಆಶ್ರಯದಲ್ಲಿ ಅ.26 ರಂದು ನಗರದ ಗಾಂಧಿ ಮೈದಾನದಲ್ಲಿ ‘ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ಕುರಿತು ವಿವರ ನೀಡಿದ ಮಡಿಕೇರಿ ತಾಲ್ಲೂಕು ಬಂಟರ ಸಂಘದ ಖಜಾಂಚಿ ದಿನೇಶ್ ರೈ, 2023-24, 2024-25ನೇ ಸಾಲಿಗೆ ಸಂಬಂಧಿಸಿದಂತೆ ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ತರಗತಿಗಳಲ್ಲಿ ಹೆಚ್ಚಿನ ಅಂಕ ಪಡೆದ 30 ವಿದ್ಯಾರ್ಥಿಗಳನ್ನು ಸಮಾರಂಭದಲ್ಲಿ ಪುರಸ್ಕರಿಸಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಮೂರ್ನಾಡು, ಕಗ್ಗೋಡ್ಲು, ತಾಳತ್‌ಮನೆ, ನಾಪೋಕ್ಲು, ಕತ್ತಲೆಕಾಡು, ಗಾಳಿಬೀಡು ಬಂಟರ ಸಂಘದ ಹೋಬಳಿ ಘಟಕಗಳ ಅಧ್ಯಕ್ಷರನ್ನು ಹಾಗೂ ಪ್ರತಿ ಹೋಬಳಿಯಲ್ಲಿರುವ ಹಿರಿಯ ದಂಪತಿಗಳನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ. ಇದರೊಂದಿಗೆ ಸ್ವಜಾತಿ ಬಂಧಿಗಳ ಸಾಧಕರಿಗೆ, ಚುನಾಯಿತ ಜನಪ್ರತಿನಿಧಿಗಳನ್ನು ಸನ್ಮಾನಿಸಲಾಗುತ್ತದೆ ಎಂದರು. ಜಿಲ್ಲಾ ಮಟ್ಟದ ಪ್ರತಿಭಾ…
ಮಡಿಕೇರಿ ಅ.20 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಅಕ್ಟೋಬರ್, 23 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ…
ಮಡಿಕೇರಿ ಅ.20 NEWS DESK : ಮಡಿಕೇರಿ ಹಿಂದೂ ಮಲಯಾಳಿ ಸಂಘದ ವತಿಯಿಂದ ಓಣಾ ಘೋಷಂ ಹಾಗೂ ಓಣಾಂ ಸಧ್ಯ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ನಗರದ ಕಾವೇರಿ ಹಾಲ್‍ನಲ್ಲಿ ತಿರುವಾದಿರ ನೃತ್ಯದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಓಣಂ ಕೇರಳದ ಪವಿತ್ರವಾದ ಹಬ್ಬವಾಗಿದ್ದು, ಕೊಡಗಿನಲ್ಲೂ ಕೂಡ ತಲತಲಾಂತರದಿಂದ ಈ ಹಬ್ಬವನ್ನು ಹಿಂದೂ ಮಲಯಾಳಿ ಸಮುದಾಯ ಆಚರಿಸುತ್ತಾ ಬಂದಿದೆ. ಆ ಮೂಲಕ ಹಿಂದೂ ಮಲಯಾಳಿ ಸಮುದಾಯವನ್ನು ಸಂಘಟಿಸುವ ಕಾರ್ಯವೂ ನಡೆಯುತ್ತಿದೆ ಎಂದರು. ಕೊಡಗು-ಮೈಸೂರು ಸಂಸದ ಯದುವೀರ್ ಒಡೆಯರ್ ಸಾಧಕರಿಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ನೆರವೇರಿಸಿ ಮಾತನಾಡಿ, ಹಿಂದೂ ಮಲಯಾಳಿ ಸಮುದಾಯಕ್ಕೂ ಮೈಸೂರು ಅರೆಮನೆಗೂ ಅವಿನಾಭಾವ ಸಂಬಂಧವಿದೆ. ಅರಮನೆಯಲ್ಲೂ ಬಲಿಪಾಡ್ಯಮಿ ಆಚರಿಸಲ್ಪಡುತ್ತದೆ. ಇಲ್ಲಿನ ಸಂಸ್ಕೃತಿ, ಪರಂಪರೆಯನ್ನು ಸಂರಕ್ಷಿಸಲು ಪ್ರತಿಯೊಬ್ಬರು ಪಣತೊಡಬೇಕು. ನಮ್ಮ ಧರ್ಮವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಿ ಗೌರವಿಸಲಾಯಿತು. ಮಡಿಕೇರಿ ಹಿಂದೂ…
ವಿರಾಜಪೇಟೆ ಅ.20 NEWS DESK : ವಿರಾಜಪೇಟೆ ತಾಲ್ಲೂಕಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ನಡೆಯಿತು. ವಿರಾಜಪೇಟೆಯ ಶಾಸಕರ ಕಛೇರಿ ಸಭಾಂಗಣದಲ್ಲಿ ನಡೆದ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಮಿತಿ ಅಧ್ಯಕ್ಷ ಜಾನ್ಸನ್, ಅರ್ಹ ಫಲಾನುಭವಿಗಳು ಯಾವುದೇ ಕಾರಣಕ್ಕೂ ಯೋಜನೆಗಳಿಂದ ವಂಚಿತರಾಗದಂತೆ ನೋಡಿಕೊಳ್ಳಲು ಸೂಚಿಸಿದರು. ಯೋಜನೆಗಳ ಅನುಷ್ಠಾನವನ್ನು ಶೇ.100ಕ್ಕೆ ಹೆಚ್ಚಿಸಲು ಕ್ರಮ ವಹಿಸಲಾಗುವುದು. ಫಲಾನುಭವಿಗಳ ಅಹವಾಲು ಸ್ವೀಕರಿಸಲು ಸಂವಾದ ನಡೆಸಲಾಗುವುದು. ಶಕ್ತಿ, ಗೃಹಲಕ್ಷ್ಮಿ, ಯುವನಿಧಿ ಯೋಜನೆಗಳ ಅನುಷ್ಠಾನದ ಬಗ್ಗೆಯೂ ಚರ್ಚಿಸಲಾಯಿತು. ಅರ್ಹ ಫಲಾನುಭವಿ ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗದಿರಲಿ. ಪಂಚ ಗ್ಯಾರಂಟಿಗಳು ಕರ್ನಾಟಕ ಸರಕಾರದ ಅತ್ಯಂತ ಮಹತ್ವದ ಯೋಜನೆಗಳಾಗಿದ್ದು, ಅರ್ಹತೆ ಹೊಂದಿರುವ ಯಾವುದೇ ಫಲಾನುಭವಿಗಳು ತಂತ್ರಾಂಶದ ನೋಂದಣಿ ಸೇರಿದಂತೆ ಯಾವುದೇ ಕಾರಣದಿಂದ ವಂಚಿತರಾಗದಂತೆ ಅನುಷ್ಠಾನ ಇಲಾಖೆಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಗ್ಯಾರಂಟಿ ಯೋಜನೆಗಳು ನಾಗರಿಕರ ಜೀವನದ ಗುಣಮಟ್ಟ ಸುಧಾರಣೆಗೆ ಪೂರಕವಾಗಿದ್ದು, ನಮ್ಮ ಭಾಗದಲ್ಲಿಶೇ.100 ರ ಅನುಷ್ಠಾನಕ್ಕೆ ಮುಂದಾಗುವಂತೆ ಸೂಚಿಸಿದರು. ಪಂಚಾಯಿತಿ ಹಂತದಲ್ಲಿ…
ನಾಪೋಕ್ಲು ಅ.20 NEWS DESK : ಕೊಡಗು ಹಕ್ಕು ಸಂರಕ್ಷಣಾ ಸಮಿತಿ ವತಿಯಿಂದ 30ನೇ ವರ್ಷದ ಕಾವೇರಿ ತೀರ್ಥ ವಿತರಿಸಲಾಯಿತು. ಕಾವೇರಿ ರಥಯಾತ್ರೆ ನಾಪೋಕ್ಲು ನಿಂದ ತಲಕಾವೇರಿಗೆ ತೆರಳಿ ಹಿಂತುರುಗಿ ಬರುವಾಗ ವಿವಿಧ ಗ್ರಾಮಗಳ ಭಕ್ತರಿಗೆ ಕಾವೇರಿ ತೀರ್ಥ ವಿತರಿಸಿದರು. ಭಾಗಮಂಡಲದಿಂದ ಕೊಡಗು ಹಕ್ಕು ಸಂರಕ್ಷಣಾ ಸಮಿತಿ ವತಿಯಿಂದ ರಥಯಾತ್ರೆ ಆರಂಭಗೊಂಡು ಭಕ್ತರಿಗೆ ತೀರ್ಥ ವಿತರಣೆಯನ್ನು ಚೇರಂಗಾಲ, ಅಯ್ಯಂಗೇರಿ, ಪುಲಿಕೋಟು, ಪೇರೂರು, ಬಲ್ಲಮಾವಟಿ, ಚೋನಕೆರೆ, ನಾಪೋಕ್ಲು ಗ್ರಾಮಗಳಲ್ಲಿ ಪೂರೈಸಿ ಸಮೀಪದ ಪಾಲೂರಿನ ಹರಿಶ್ಚಂದ್ರ ದೇವಾಲಯದಲ್ಲಿ ಸಮಾಪ್ತಿಗೊಂಡಿತು. ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಸಂಚಾಲಕ ಬಿದ್ದಾಟಂಡ ರೋಜಿ ಚಿಣ್ಣಪ್ಪ ಮಾತನಾಡಿ, ಕಳೆದ 29 ವರ್ಷಗಳಿಂದ ಯಶಸ್ವಿಯಾಗಿ ಭಕ್ತರಿಗೆ ತೀರ್ಥ ವಿತರಣೆ ಮಾಡಲಾಗುತ್ತಿದೆ. ತಲಕಾವೇರಿಗೆ ತೆರಳಲಾರದ ಭಕ್ತರ ಮನೆಗಳಿಗೆ ತೀರ್ಥ ವಿತರಿಸುತ್ತಿರುವುದುದು ಸಂತಸತಂದಿದೆ. ಇದಕ್ಕೆ ಎಲ್ಲರ ಸಹಕಾರ ಲಭಿಸಿದೆ ಎಂದರು. ಭಾಗಮಂಡಲದಿಂದ ಅಯ್ಯಂಗೇರಿ, ಬಲ್ಲಮಾವಟಿ ಮಾರ್ಗವಾಗಿ ನಾಪೋಕ್ಲುವರೆಗೆ ತೀರ್ಥ ವಿತರಿಸಲಾಯಿತು ಎಂದರು. ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಸಂಚಾಲಕ ಬಿದ್ದಾಟಂಡ ರೋಜಿ ಚಿನ್ನಪ್ಪ, ಬಿದ್ದಾಟಂಡ…
ನಾಪೋಕ್ಲು ಅ.20 NEWS DESK : ಮೈಸೂರಿನ ಕೊಡಗು ಗೌಡ ಸಮಾಜದ ವತಿಯಿಂದ ಸಮುದಾಯದ ಬಂಧುಗಳಿಗೆ ಮತ್ತು ಕಾವೇರಿ ಭಕ್ತರಿಗೆ ಕಾವೇರಿ ತೀರ್ಥವನ್ನು ಶ್ರದ್ಧಾ ಭಕ್ತಿಯಿಂದ ವಿತರಣೆ ಮಾಡಲಾಯಿತು. ಮೈಸೂರಿನ ಕೊಡಗು ಗೌಡ ಸಮುದಾಯ ಭವನದ ದೇವರ ಮಂಟಪದಲ್ಲಿ ತೀರ್ಥ ಪೂಜೆಯನ್ನು ನೆರವೇರಿಸಿದ ನಂತರ, ನೆರೆದ ಭಕ್ತರಿಗೆ ತೀರ್ಥ ವಿತರಣೆ ಮಾಡಲಾಯಿತು. ಈ ಸಂದರ್ಭ ಮೈಸೂರು ಕೊಡಗು ಗೌಡ ಸಮಾಜದ ಪದಾಧಿಕಾರಿಗಳಾದ ಪೊನ್ನೆಟಿ ನಂದ, ನಡುವಟ್ಟಿರ ಲಕ್ಷ್ಮಣ, ನಡುಮನೆ ಚೆಂಗಪ್ಪ, ನಿರ್ದೇಶಕರಾದ ಪಟ್ಟಡ ಶಿವಕುಮಾರ್, ಹೊಸೂರು ರಾಘವ, ಕುಂಟುಪುಣಿ ರಮೇಶ್, ಪಾಣತ್ತಲೆ ವಸಂತ, ಚಪ್ಪೆರ ಯಮುನಾ, ಕುಂಟುಪುಣಿ ಶೀಲಾ, ತೊಟಂಬೈಲು ಇಂದಿರಾ, ಮೈಸೂರು ಕೊಡಗು ಗೌಡ ಸಮಾಜದ ಮಾಜಿ ಅಧ್ಯಕ್ಷರಾದ ತೊಟಂಬೈಲು ಮನೋಹರ, ಕುದುಪಜೆ ಕುಶಾಲಪ್ಪ, ಕೊಡಗು ಮತ್ತು ದ. ಕನ್ನಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ನಡುವಟ್ಟಿರ ಗೀತಾ ಲಕ್ಷ್ಮಣ ಮೊದಲಾದವರು ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಅ.20 NEWS DESK : ಇಂಡೋನೇಷ್ಯಾದ ನೇಗೇರಿ ಸಮರಂಗ್ ಯೂನಿವರ್ಸಿಟಿಯಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಕಾನ್ಫರೆನ್ಸ್ ನಲ್ಲಿ ಜುರೈಜ್ ನೂರಾನಿ ಕುಂಜಿಲ ಪ್ರಬಂಧ ಮಂಡನೆಗೆ ಆಯ್ಕೆಯಾಗಿದ್ದಾರೆ. ಈ ಮೊದಲು ಅರ್ಥಶಾಸ್ತ್ರ ಮೈಕ್ರೋ ಫೈನಾನ್ಸ್ ನಲ್ಲಿ ತನ್ನ ಸಂಶೋಧನಾ ಪ್ರಬಂಧಗಳನ್ನು ಬ್ರಿಟನ್ ನ ಆಕ್ಸ್ಫರ್ಡ್ ಯೂನಿವರ್ಸಿಟಿಯಲ್ಲಿ ಪ್ರಸ್ತುತ ಪಡಿಸಿದ್ದಾರೆ. ನಾಲೆಜ್ ಸಿಟಿಯ ಅಂತಾರಾಷ್ಟ್ರೀಯ ಕಾಲೇಜಿನ ಪಿ.ಜಿ ವಿದ್ಯಾರ್ಥಿಯಾಗಿದ್ದು ಹಲವು ಅಂತಾರಾಷ್ಟ್ರೀಯ ಕಾನ್ಫರೆನ್ಸ್ ಗಳಲ್ಲಿ ಭಾಗವಹಿಸಿದ್ದರು. ಇವರು ಕುಂಜಿಲದ ಅಜೀಜ್ ಮಾಸ್ಟರ್ ಹಾಗೂ ಸುಮಯ್ಯ ದಂಪತಿಗಳ ಪುತ್ರ. ವರದಿ : ದುಗ್ಗಳ ಸದಾನಂದ.
ಕುಶಾಲನಗರ ಅ.20 NEWS DESK : ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಸಂದರ್ಭ ಪಟಾಕಿ ಸಿಡಿತದಿಂದ ಉಂಟಾಗುವ ಅನಾಹುತಗಳು ಹಾಗೂ ಮಾಲಿನ್ಯದ ದುಷ್ಪರಿಣಾಮಗಳ ಕುರಿತು ಜನಜಾಗೃತಿ ಮೂಡಿಸುವ ಕುರಿತಂತೆ ಜಿಲ್ಲಾಡಳಿತ, ಜಿ.ಪಂ.,ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಛೇರಿ, ಕುಶಾಲನಗರ ಪುರಸಭೆ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆಯ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ವತಿಯಿಂದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ,ಭಾರತ್ ಸ್ಕೌಟ್ಸ್ ,ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆ ಹಾಗೂ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಎನ್.ಎಸ್.ಎಸ್.ಘಟಕದ ಸಂಯುಕ್ತಾಶ್ರಯದಲ್ಲಿ ಶನಿವಾರ (ಅ.19 ರಂದು ) ಕುಶಾಲನಗರ ಪಟ್ಟಣದ ಫಾತಿಮ ಪ್ರೌಢಶಾಲೆಯಲ್ಲಿ ನೇಸರ ಇಕೋ ಕ್ಲಬ್ ನ ಸಹಯೋಗದೊಂದಿಗೆ ‘ನಮ್ಮ ನಡೆ ಹಸಿರೆಡೆಗೆ: ಗೋ ಗ್ರೀನ್ *ಅಭಿಯಾನದಡಿ ಸ್ವಚ್ಛ, ಸ್ವಸ್ಥ ಹಾಗೂ ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಣೆ’ ಕುರಿತಂತೆ ಪರಿಸರ ಜಾಗೃತಿ ಆಂದೋಲನ ನಡೆಸಲಾಯಿತು. ವಿದ್ಯಾರ್ಥಿಗಳಿಗೆ ಹಸಿರು ದೀಪಾವಳಿ ಆಚರಣೆ ಕುರಿತು ಪ್ರತಿಜ್ಞಾ ವಿಧಿ…






