ಲೇಖಕ: admin

ಮಡಿಕೇರಿ NEWS DESK ಅ.19 : ಕೊಡಗು ಪತ್ರಿಕಾ ಭವನ ಟ್ರಸ್ಟ್ನ 24ನೇ ವಾರ್ಷಿಕೋತ್ಸವ ಪ್ರಯುಕ್ತ ಭಾನುವಾರದಂದು ಪತ್ರಿಕಾ ಭವನದಲ್ಲಿ ಆಯೋಜಿತ ಒಳಾಂಗಣ ಕ್ರೀಡಾ ಕೂಟವನ್ನು ಹಿರಿಯ ಕಬಡ್ಡಿ ಆಟಗಾರ ಜಿ.ಸಿ.ಕೃಷ್ಣ ಅವರು ಟಿ.ಟಿ ಆಡುವ ಮೂಲಕ ಉದ್ಘಾಟಿಸಿ, ಕ್ರೀಡಾಪಟುಗಳಿಗೆ ಶುಭಕೋರಿದರು. ಈ ಸಂದರ್ಭ ಕೊಡಗು ಪತ್ರಿಕಾ ಭವನ ಟ್ರಸ್ಟ್ನ ಸ್ಥಾಪಕ ಮ್ಯಾನೇಜಿಂಗ್ ಟ್ರಸ್ಟಿ ಟಿ.ಪಿ.ರಮೇಶ್ ಅವರು ಮಾತನಾಡಿ, ಪತ್ರಿಕಾ ಭವನ ಆರಂಭವಾದಲ್ಲಿಂದ ಕೊಡಗು ಪತ್ರಿಕಾ ಭವನ ಟ್ರಸ್ಟ್ನ ವಾರ್ಷಿಕೋತ್ಸವದ ಸಂದರ್ಭ ನಿರಂತರವಾಗಿ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸುತ್ತಾ ಬರಲಾಗುತ್ತಿದೆ. ವಿವಿಧ ಕ್ರೀಡಾಕೂಟಗಳಿಗೆ ಅನೇಕ ಪತ್ರಕರ್ತರು ಹೆಸರುಗಳನ್ನು ನೋಂದಾಯಿಸಿಕೊಂಡಿದ್ದು, ಸಮಯಕ್ಕೆ ಸರಿಯಾಗಿ ಕ್ರೀಡಾಪಟುಗಳು ಆಗಮಿಸುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು ಎಂದು ಹೇಳಿದ ಅವರು, ಕ್ರೀಡಾಕೂಟಕ್ಕೆ ಶುಭಕೋರಿದರು. ಕೊಡಗು ಪತ್ರಕರ್ತರ ಸಂಘದ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಜಿ.ವಿ.ರವಿಕುಮಾರ್ ಮಾತನಾಡಿ, ಕೊಡಗು ಪತ್ರಿಕಾ ಭವನ ಟ್ರಸ್ಟ್ ವರ್ಷಂಪ್ರತಿ ತನ್ನ ವಾರ್ಷಿಕೋತ್ಸವ ಸಂದರ್ಭ ಪತ್ರಕರ್ತರಿಗೆ ಮತ್ತು ಪತ್ರಕರ್ತರ ಕುಟುಂಬದವರಿಗಾಗಿ ವಿವಿಧ ಒಳಾಂಗಣ ಕ್ರೀಡಾಕೂಟವನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದರು. ಕೊಡಗು…

Read More

ಬೆಂಗಳೂರು NEWS DESK ಅ.19 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೃಷ್ಣಾದಲ್ಲಿ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಪರಿಶೀಲನೆ ನಡೆಸಿದರು. ಸಚಿವರಾದ ಕೆ.ಜೆ.ಜಾರ್ಜ್, ಶಿವರಾಜ ತಂಗಡಗಿ, ರಾಮಲಿಂಗಾ ರೆಡ್ಡಿ, ಭೈರತಿ ಸುರೇಶ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂಧನ್ ಆರ್. ನಾಯಕ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ಮಡಿಕೇರಿ NEWS DESK ಅ.19 : ವಿರಾಜಪೇಟೆ ತಾಲ್ಲೂಕಿನ ಬಾಳುಗೋಡು ಕೊಡವ ಸಮಾಜ ಸರಕಾರದ ಅನುದಾನ ರೂ.6 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಹೊಂದುತ್ತಿದ್ದು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಕಾಮಗಾರಿಯ ಪ್ರಗತಿ ಪರಿಶೀಲಿಸಿದರು. ಕೊಡವ ಸಮಾಜದ ಕಾಮಗಾರಿ ಉತ್ತಮ ರೀತಿಯಲ್ಲಿ ನಡೆಯುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಸರಕಾರದ ಅನುದಾನ ಸದ್ಬಳಕೆಯಾಗುವಂತೆ ಕಾಳಜಿ ತೋರಬೇಕೆಂದು ಸಲಹೆ ನೀಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು ಬಾಳುಗೋಡು ಕೊಡವ ಸಮಾಜದ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ ಪರಿಣಾಮ ರಾಜ್ಯ ಹಿಂದುಳಿದ ವರ್ಗಗಳ ಇಲಾಖೆ ಮೂಲಕ ಅನುದಾನ ಬಿಡುಗಡೆಗೊಂಡಿದೆ ಎಂದರು. ರೂ.6 ಕೋಟಿ ವೆಚ್ಚದಲ್ಲಿ ಕೊಡವ ಸಮಾಜದ ವಿವಿಧ ಅಭಿವೃದ್ಧಿ ಕಾರ್ಯ, ಮೈದಾನದ ಅಭಿವೃದ್ಧಿ, ಪ್ರೇಕ್ಷಕರ ಗ್ಯಾಲರಿ, ತಡೆಗೋಡೆ ಮತ್ತು ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಕಾಮಗಾರಿಯ ಗುಣಮಟ್ಟ ತೃಪ್ತಿ ತಂದಿದ್ದು, ಅಭಿವೃಧ್ಧಿ ಕಾರ್ಯ ಶೀಘ್ರ ಪೂರ್ಣಗೊಳ್ಳುವ ವಿಶ್ವಾಶವಿದೆ. ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರೆತರುವ ಪ್ರಯತ್ನ ಮಾಡುವುದಾಗಿ…

Read More

ಮಡಿಕೇರಿ NEWS DESK ಅ.18 : ಕಾವೇರಿ ಚಂಗ್ರಾಂದಿಯ ಪ್ರಯುಕ್ತ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್ ಪರಂಬ್ ನಲ್ಲಿ ಹಿರಿಯರಿಗೆ ಪುಷ್ಪನಮನ ಅರ್ಪಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿತು. ಅನಾದಿ ಕಾಲದಿಂದಲೂ ಜಾನಪದ ಪದ್ಧತಿಯ ರೂಪದಲ್ಲಿ   ನಡೆದುಕೊಂಡು ಬಂದಿರುವಂತೆ ದೋಸೆ ಮತ್ತು ಪುಟ್ಟ್ ನ್ನು “ಬೊತ್ತ್” ಎಂಬ ಗಿಡಮೂಲಿಕೆಯ ಮರದ ಬಳ್ಳಿ”ಯಲ್ಲಿಟ್ಟು ಹಿರಿಯರನ್ನು ಸ್ಮರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪುಷ್ಪನಮನ ಸಲ್ಲಿಸಿ ಮಾತನಾಡಿದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ದೇವಟ್ ಪರಂಬ್ ದುರಂತ ನರಮೇಧದ ಸ್ಮಾರಕ ಸ್ಥಳಕ್ಕೆ ಆಧ್ಯಾತ್ಮಿಕ ಮತ್ತು ಧಾರ್ಮಿಕ ಪಾವಿತ್ರ್ಯತೆಯನ್ನು ನೀಡುವ ಉದ್ದೇಶದಿಂದ ಕಳೆದ ಅನೇಕ ವರ್ಷಗಳಿಂದ ಸಿಎನ್‌ಸಿ ಸಂಘಟನೆ ಈ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದೆ ಎಂದರು. ಪ್ರತಿ ವರ್ಷ ಕಾವೇರಿ ತೊಲೆಯಾರ್ ಚಂಗ್ರಾಂದಿ ಆಚರಣೆಗೆ ಎರಡು ಅಥವಾ ಮೂರು ದಿನಗಳ ಮೊದಲು ತಮ್ಮ ಜೌಗು ಭೂಮಿಗಳು, ಭತ್ತದ ಗದ್ದೆಗಳು, ಭತ್ತ ಒಣಗಿಸುವ ಅಂಗಳಗಳು, ಹಸುವಿನ ಸಗಣಿ ಹೊಂಡಗಳು, ಕೊಟ್ಟಿಗೆಗಳು, ಕುಡಿಯುವ ನೀರಿನ ಬಾವಿಗಳು, ದ್ವಾರಗಳು ಮತ್ತು ಮನೆಗಳ…

Read More

ಮಡಿಕೇರಿ NEWS DESK ಅ.18 : ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಮರುದಿನ ಹಾರಂಗಿ ಜಲಾಶಯದ ಕ್ರೆಸ್ಟ್ಗೇಟ್ ಬಳಿ ಇರುವ ತಾಯಿ ಕಾವೇರಿ ಮಾತೆ ಪ್ರತಿಮೆಗೆ ಶಾಸಕರಾದ ಡಾ.ಮಂತರ್ ಗೌಡ ಅವರು ಶನಿವಾರ ವಿಶೇಷ ಪೂಜೆ ಸಲ್ಲಿಸಿದರು. ನಂತರ ಹಾರಂಗಿ ಜಲಾಶಯದಲ್ಲಿ ಬಾಗಿನ ಅರ್ಪಿಸಿದರು. ಈ ಬಾರಿ ಮೇ 3ನೇ ವಾರದಿಂದಲೇ ಮಳೆ ಆರಂಭವಾಗಿದ್ದು, ಹಾರಂಗಿ ಜಲಾಶಯ ಇಂದಿಗೂ ಸಹ ಭರ್ತಿಯಾಗಿರುವ ಹಿನ್ನೆಲೆ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಬಳಿಕ ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶದ ರೈತರಿಗೆ ಶಾಲೂ ಹೊದಿಸಿ, ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಬಳಿಕ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು ಪ್ರತೀ ವರ್ಷದಂತೆ ಈ ವರ್ಷವೂ ಸಹ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ನಂತರ ಹಾರಂಗಿ ಜಲಾಶಯದ ಕಾವೇರಿ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ತೀರ್ಥ ಪ್ರಸಾದ ವಿತರಿಸಿಕೊಂಡು ಬರಲಾಗುತ್ತಿದೆ. ಆ ನಿಟ್ಟಿನಲ್ಲಿ ಹಾರಂಗಿ ಜಲಾಶಯದ ಅಚ್ಚುಕಟ್ಟು ಪ್ರದೇಶದ ನೀರು…

Read More

ಮಡಿಕೇರಿ NEWS DESK ಅ.18 : ಜಿಲ್ಲಾಡಳಿತವು 2025 ನೇ ಸಾಲಿನ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ಧ, ವಾಯು ಮಾಲಿನ್ಯ ನಿಯಂತ್ರಣದಲ್ಲಿಡಲು ಹಾಗೂ ಸಾರ್ವಜನಿಕ ಆಸ್ತಿ ಮತ್ತು ಅರೋಗ್ಯ ಸಂರಕ್ಷಣೆಯ ಹಿತದೃಷ್ಟಿಯಿಂದ ಭಾರತ ಸರ್ಕಾರದ ಪರಿಸರ (ಸಂರಕ್ಷಣಾ) ನಿಯಮಾವಳಿ 1986 ತಿದ್ದುಪಡಿ 1999 ಮತ್ತು 2000 ಅಡಿಯಲ್ಲಿ ನಿಗಧಿಪಡಿಸಿರುವ ಮಾನಕಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕೋರಿದ್ದಾರೆ. ಸರ್ವೋಚ್ಚ ನ್ಯಾಯಾಲಯವು ನೀಡಿದ ನಿರ್ದೇಶನದಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಿರುತ್ತದೆ. ಪಟಾಕಿ ಮಾರಾಟ ಮಾಡುವವರು ಹಾಗೂ ಪಟಾಕಿ ಸಂಗ್ರಹಿಸುವ ಗೋದಾಮುಗಳನ್ನು ಸಂಬಂಧ ಪಟ್ಟ ಎಲ್ಲಾ ಇಲಾಖೆಯ ಅನುಮತಿ ಪಡೆಯತಕ್ಕದ್ದು. 125 ಡೆಸಿಬಲ್‌ಗಳಿಗಿಂತ ಹೆಚ್ಚು ಶಬ್ಧ ಉಂಟುಮಾಡುವ ಪಟಾಕಿಗಳ ದಾಸ್ತಾನು, ಮಾರಾಟ ಹಾಗೂ ಉಪಯೋಗಿಸುವುದನ್ನು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದೆ. ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯವು ಸಮಯ ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ…

Read More

ಮಡಿಕೇರಿ NEWS DESK ಅ.18 : ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ ನ (ನೀಮಾ) ಕೊಡಗು ಜಿಲ್ಲಾ ಘಟಕದ ವತಿಯಿಂದ ಧನ್ವಂತರಿ ಜಯಂತಿ ಮತ್ತು ಬೆಳ್ಳಿ ಮಹೋತ್ಸವ ಸಮಾರಂಭ ಮಡಿಕೇರಿಯಲ್ಲಿ ಅರ್ಥಪೂರ್ಣವಾಗಿ ನಡೆಯಿತು. ನಗರದ ಶ್ರೀ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ ಗಣಪತಿ ಹೋಮ ಮತ್ತು ಧನ್ವಂತರಿ ಹವನ ಶ್ರದ್ಧಾಭಕ್ತಿಯಿಂದ ನಡೆಯಿತು. ಸಹಸ್ರಾಕ್ಷ, ಉಕ್ಕಿನಡ್ಕ ಡಾ.ಜಯ ಗೋವಿಂದ ಯು. ‘ಸಮಾಜದ ಮೇಲೆ ನೀಮಾ’ದ ಪ್ರಭಾವ ಎಂಬ ವಿಷಯದ ಕುರಿತು ಮಾತನಾಡಿದರು. ಅಲ್ಲದೆ ‘ನೀಮಾ’ ಬೆಳ್ಳಿ ಮಹೋತ್ಸವದ ಸ್ಮರಣ ಸಂಚಿಕೆಯನ್ನೂ ಬಿಡುಗಡೆ ಮಾಡಿದರು. ಬೆಂಗಳೂರು ಕೆಎಯುಪಿಯ ಡಾ.ಎಂ.ಡಿ.ರಫಿ ಹಕೀಂ ಹಾಗೂ ಕೆಎಸ್‌ಬಿ ನೀಮಾ ಅಧ್ಯಕ್ಷರು ಮಾತನಾಡಿದರು. *ಸನ್ಮಾನ* ನೀಮಾ ಅಧ್ಯಕ್ಷ ಡಾ.ರಾಜಾರಾಮ ಎ.ಆರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಯೋಗ ಗುರು ಕೆ.ಕೆ.ಮಹೇಶ್, ತಣಲ್ ಸಂಸ್ಥೆಯ ಮಹಮ್ಮದ್, ವನ್ಯಜೀವಿ ಪಶುವೈದ್ಯ ಡಾ.ಬಿ.ಸಿ.ಚಿಟ್ಟಿಯಪ್ಪ, ಲೀಡ್ ಬ್ಯಾಂಕ್ ನ ನಿವೃತ್ತ ವ್ಯವಸ್ಥಾಪಕ ಆರ್.ಕೆ.ಬಾಲಚಂದ್ರ, ಲೇಖನಿ ಮೂಲಕ ಶಾಂತಿ…

Read More

ವಿರಾಜಪೇಟೆ ಅ.18 NEWS DESK : ವಿರಾಜಪೇಟೆ ಪುರಸಭಾ ವ್ಯಾಪ್ತಿಯಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡಿ ನಗರದ ಅಂದವನ್ನು ಕೆಡಿಸುತ್ತಿರುವವರನ್ನು ಪತ್ತೆ ಹಚ್ಚಿ ಅವರ ಭಾವಚಿತ್ರವನ್ನು ಪ್ರಚಾರ ಮಾಡಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದರ ಭಾಗವಾಗಿ ಪುರಸಭಾ ವತಿಯಿಂದ ವಿನೂತನ ಮಾರ್ಗ ಒಂದನ್ನು ಅಳವಡಿಸಲಾಗಿದೆ ಎಂದು ಪುರಸಭೆ ಅಧ್ಯಕ್ಷೆ ಮನೆಯಪಂಡ ದೇಚಮ್ಮ ಕಾಳಪ್ಪ ಹೇಳಿದರು. ಅಧಿಕೃತವಾಗಿ ಫೇಸ್‍ಬುಕ್ ಪೇಜ್ ಖಾತೆ ತೆರೆಯಲಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಕಸ ಬಿಸಾಡುವುದನ್ನು ಯಾರೇ ಕಂಡರೂ ಕೂಡಲೇ ಫೋಟೋ ಕ್ಲಿಕ್ಕಿಸಿ ಈ ಫೇಸ್ಬುಕ್ ಪೇಜ್‍ನಲ್ಲಿ ಹಾಕಬಹುದು. ವ್ಯಕ್ತಿ ಹಾಗೂ ವಾಹನದಲ್ಲಿ ತಂದು ಹಾಕುವವರ ವಾಹನದ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಲಾಗುತ್ತದೆ. ಅಲ್ಲದೆ ನಗರದ ನಿರ್ದಿಷ್ಟವಾದ ಕೆಲವು ಸ್ಥಳಗಳನ್ನು ಗುರುತಿಸಿ ಸಿ,ಸಿ. ಕ್ಯಾಮರಾ ಅಳವಡಿಸಲಾಗುವುದು. ಶಾಸಕರ ನಿರ್ದೇಶನದ ಮೇರೆಗೆ ‘ಕ್ಲೀನ್ ವಿರಾಜಪೇಟೆ” ಯೋಜನೆಯಂತೆ ಪುರಸಭೆ ಈ ವಿನೂತನ ಮಾರ್ಗವನ್ನು ಅನುಸರಿಸಿದೆ. ಈ ಕುರಿತು ಸಹಾಯವಾಣಿ ಸಂಖ್ಯೆ 9986096362 ಅನ್ನು ಸಂಪರ್ಕಿಸಬಹುದೆಂದು ತಿಳಿಸಿದರು. ಕಸ ಬಿಸಾಡುವವರು ಅಂಗಡಿ ಮಾಲೀಕರಾಗಿದ್ದಲ್ಲಿ…

Read More

ಮಡಿಕೇರಿ ಅ.18 NEWS DESK : ಕುಂಜಿಲಾ -ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಂದೋಡು ಗ್ರಾಮದ ವ್ಯಾಪ್ತಿಯಲ್ಲಿ ಗ್ರಾಮಸ್ಥರು ಹಮ್ಮಿಕೊಂಡಿರುವ 42ನೇ ವರ್ಷದ ವಾರ್ಷಿಕ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕ್ರೀಡಾಪಟುಗಳಿಗೆ ಶುಭಹಾರೈಸಿದರು. ವರ್ಷದಲ್ಲಿ ಒಂದು ಬಾರಿ ಎಲ್ಲಾ ಗ್ರಾಮಸ್ಥರು ಒಂದೆಡೆ ಸೇರಿ ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ ಗ್ರಾಮದಲ್ಲಿ ಒಗ್ಗಟ್ಟು ಹೆಚ್ಚುತ್ತದೆ ಎಂದರು. ಕ್ರೀಡೆಗೆ ಹೆಸರುವಾಸಿಯಾದ ನಮ್ಮ ಕೊಡಗು ಜಿಲ್ಲೆಯ ಇತಿಹಾಸಕ್ಕೆ ಮತ್ತೊಂದು ಬಲ ಬಂದಂತಾಗಿದೆ. ತಮ್ಮೆಲ್ಲ ಕೆಲಸದ ಒತ್ತಡಗಳನ್ನು ಬದಿಗಿಟ್ಟು, ಈ ದಿನ ಗ್ರಾಮಸ್ಥರು ಒಟ್ಟಾಗಿ ಆಟದಲ್ಲಿ ಭಾಗವಹಿಸಿರುವುದನ್ನು ನೋಡಲು ನಿಜವಾಗಿ ಸಂತೋಷ ಆಗುತ್ತಿದೆ ಎಂದು ಹೇಳಿದರು. ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸಲು ಇಂತಹ ಕ್ರೀಡಾಕೂಟಗಳು ಅತ್ಯಂತ ಮಹತ್ವ ಪಡೆಯುತ್ತದೆ ಎಂದರು. ಈ ಭಾಗದಲ್ಲಿ ಕ್ರೀಡಾಂಗಣ ನಿರ್ಮಿಸಲು ತಮ್ಮ ಎಲ್ಲಾ ಸಹಕಾರ ನೀಡುವುದಾಗಿ ಹೇಳಿದರು. ಈಗಾಗಲೇ ಈ ಭಾಗಕ್ಕೆ ತನಗೆ ಹಲವು ರಸ್ತೆಗಳ ಅಭಿವೃದ್ಧಿಗೆ ಬೇಡಿಕೆ ಬಂದಿದ್ದು, ಹಂತ…

Read More

ವಿರಾಜಪೇಟೆ ಅ.18 NEWS DESK : ನಗರದ ಶಿವಕೇರಿಯಲ್ಲಿರುವ ಶ್ರೀ ದುರ್ಗಿ ವಿಷ್ಣು ಮೂರ್ತಿ ನಾಗದೇವರ ದೇವಾಲಯದಲ್ಲಿ ಅ.21, 22 ಮತ್ತು 23 ರಂದು ದೀಪಾವಳಿ ಹಬ್ಬದ ಪ್ರಯುಕ್ತ ದೀಪೋತ್ಸವ ಪೂಜೆ ನಡೆಯಲಿದೆ. ದೇವಾಲಯದಲ್ಲಿ ಮೂರು ದಿನಗಳ ಕಾಲ ಸಂಜೆ 6 ಗಂಟೆಗೆ ವಿಶೇಷ ಪೂಜೆ, ಶ್ರೀದುರ್ಗಿ ವಿಷ್ಣು ಮೂರ್ತಿ ನಾಗದೇವರಿಗೆ ಮಹಾಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ. ಮೂರು ದಿನಗಳು ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗ ಹಾಗೂ ಅನ್ನಸಂತರ್ಪಣೆ ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Read More