ಮಡಿಕೇರಿ ಅ.17 NEWS DESK : ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ವತಿಯಿಂದ ಕೈಗೊಳ್ಳಲಾದ ಸ್ವಚ್ಛ ಕೊಡಗು – ಸುಂದರ ಕೊಡಗು ಸ್ವಚ್ಛತಾ ಅಭಿಯಾನದ ಸಂದಭ೯ ಜಿಲ್ಲೆಯಾದ್ಯಂತ 200 ಟನ್ ತ್ಯಾಜ್ಯ ಸಂಗ್ರಹವಾಗಿದ್ದು, ಮೈಸೂರಿನ ತ್ಯಾಜ್ಯ ವಿಲೇವಾರಿ ಸಂಗ್ರಹಾಗಾರ ಸೇರಿದಂತೆ ಕೊಡಗು ಜಿಲ್ಲೆಯ ತ್ಯಾಜ್ಯ ವಿಲೇವಾರಿ ಘಟಕಗಳಿಗೆ ಇವುಗಳನ್ನು ರವಾನಿಸಲಾಗಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳಂಡ ದಿನೇಶ್ ಕಾಯ೯ಪ್ಪ ಮಾಹಿತಿ ನೀಡಿದ್ದಾರೆ. ಸ್ವಚ್ಛ ಕೊಡಗು – ಸುಂದರ ಕೊಡಗು ಅಭಿಯಾನದಲ್ಲಿ ಜಿಲ್ಲೆಯ 30 ಸಾವಿರದಷ್ಟು ಸ್ವಚ್ಛತಾ ಕಾಯ೯ಕತ೯ರಿಗೆ 33,800 ಕೈಕವಚ ಮತ್ತು 9,200 ತ್ಯಾಜ್ಯ ಸಂಗ್ರಹಣಾ ಬ್ಯಾಗ್ ಗಳನ್ನು ವಿತರಿಸಲಾಗಿದೆ. ಜಿಲ್ಲೆಯ 178 ಸ್ಥಳಗಳಲ್ಲಿ 330 ಕ್ಕೂ ಅಧಿಕ ಸಂಘಸಂಸ್ಥಗಳಿಗೆ ಸೇರಿದ ಅಂದಾಜು 30 ಸಾವಿರದಷ್ಟು ಜನರು ಸ್ವಯಂ ಪ್ರೇರಣೆಯಿಂದ ಸ್ವಚ್ಛತಾ ರಾಯಬಾರಿಗಳಾಗಿ ಜಿಲ್ಲೆಯಾದ್ಯಂತ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದರು ಎಂದು ದಿನೇಶ್ ಮಾಹಿತಿ ನೀಡಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಪ್ರಯತ್ನದಿಂದ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಸಹಕಾರ ಪಡೆದು 17 ಸಂಗ್ರಹ ಸಂಗ್ರಹಣ…
ಲೇಖಕ: admin
ಮೈಸೂರು ಅ.17 NEWS DESK : ಹುಲಿ ದಾಳಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಮಹದೇವಗೌಡ ಅವರ ಕುಟುಂಬವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಬಡಗಲಾಪುರದಲ್ಲಿ ಹುಲಿ ದಾಳಿಗೆ ತುತ್ತಾದ ಮಹದೇವಗೌಡ ಅವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದ್ದು, ಕುಟುಂಬಕ್ಕೆ ಸಂಪೂರ್ಣ ಪರಿಹಾರದ ಮೊತ್ತ ಬಿಡುಗಡೆ ಮಾಡಲಾಗುವುದು ಎಂದರು. ಎರಡು ಕಣ್ಣುಗಳ ದೃಷ್ಟಿ ಮತ್ತೆ ಬರುವ ಸಾಧ್ಯತೆ ಇಲ್ಲ ಎಂದು ವೈದ್ಯರು ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ಪರಿಹಾರವನ್ನು ಓರ್ವ ಗಾಯಾಳು ಎಂದು ಪರಿಗಣಿಸದೆ ಬದುಕು ಕಳೆದುಕೊಂಡ, ಕುಟುಂಬದ ಆಸರೆ ಕಳೆದುಕೊಂಡವರ ಬಗ್ಗೆ ಆಲೋಚಿಸಿ ಪೂರ್ತಿ ಪರಿಹಾರ ಒದಗಿಸಲಾಗುವುದು ಎಂದು ತಿಳಿಸಿದರು.
ಮಡಿಕೇರಿ ಅ.17 NEWS DESK : ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ, ಉಪ ವಲಯ ಅರಣ್ಯ ಅಧಿಕಾರಿ ಹುದ್ದೆಗೆ ಅರಣ್ಯಶಾಸ್ತ್ರ ಪದವೀಧರರನ್ನೇ ನೇರ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೊನ್ನಂಪೇಟೆಯಲ್ಲಿ ನಡೆಯುತ್ತಿರುವ ಅರಣ್ಯ ಶಾಸ್ತ್ರ ವಿದ್ಯಾರ್ಥಿಗಳ ಪ್ರತಿಭಟನೆ ಆರನೇ ದಿನವೂ ಮುಂದುವರೆದಿದೆ. ಕರ್ನಾಟಕ ಅರಣ್ಯಶಾಸ್ತ್ರ ವಿದ್ಯಾರ್ಥಿಗಳು ಮತ್ತು ಪದವೀಧರ ಸಂಘದ ಅಧ್ಯಕ್ಷ ಅಕ್ಷಯ್ ಕುಮಾರ್ ನೇತೃತ್ವದಲ್ಲಿ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಮುಂಭಾಗ ತರಗತಿ ಬಹಿಷ್ಕರಿಸಿ, ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಂಡ ವಿದ್ಯಾರ್ಥಿಗಳು ಬೇಡಿಕೆ ಈಡೇರಿರುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಚ್ಚರಿಸಿದರು. ಮುಷ್ಕರದ ಐದನೇ ದಿನ ನೆಲದ ಮೇಲೆಯೇ ಊಟ ಮಾಡಿ ಅಸಮಾಧಾನ ವ್ಯಕ್ತಪಡಿಸಿದ ವಿದ್ಯಾರ್ಥಿಗಳು ಇಂದು “ಅಪ್ಪಿಕೋ ಚಳುವಳಿ” ಯನ್ನು ಪ್ರತೀಕಾತ್ಮಕವಾಗಿ ಆಚರಿಸಿ, ಮರಗಳಿಗೆ ಅಪ್ಪಿಕೊಂಡು ಪರಿಸರ ಸಂರಕ್ಷಣೆ ಮತ್ತು ಅರಣ್ಯ ರಕ್ಷಣೆಯ ಮಹತ್ವವನ್ನು ಸಾರಿದರು. ನಾವು ಅರಣ್ಯ ಹಾಗೂ ಪರಿಸರ ಸಂರಕ್ಷಣೆಯ ಮಹತ್ವವನ್ನು ಮಾತ್ರವಲ್ಲದೆ, ಅರಣ್ಯ ವಿಜ್ಞಾನ ವಿದ್ಯಾರ್ಥಿಗಳಾಗಿ ನಮ್ಮ ಸಾಮಾಜಿಕ ಹೊಣೆಗಾರಿಕೆಯನ್ನು ಕೂಡ ನೆನಪಿಸಿಕೊಂಡಿರುವುದಾಗಿ ತಿಳಿಸಿದರು. ಈ…
ಕುಶಾಲನಗರ ಅ.17 NEWS DESK : ಕೊಡಗು ಜಿಲ್ಲೆಯನ್ನು ಸ್ವಚ್ಛವಾಗಿಡಲು ಎಲ್ಲರೂ ಬದ್ಧರಾಗಬೇಕು ಎಂದು ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಕರೆ ನೀಡಿದರು. ಜಿಲ್ಲೆಯ ವಿವಿಧ ಸಂಘಟನೆಗಳು ಸೇರಿ ಜಿಲ್ಲೆಯಾದ್ಯಂತ ಸ್ವಚ್ಛ ಕೊಡಗು, ಸುಂದರ ಕೊಡಗು ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೊಡಗು ಜಿಲ್ಲೆಯ ಪ್ರಕೃತಿ ಸೌಂದರ್ಯಕ್ಕೆ ಧಕ್ಕೆಯಾಗದ ರೀತಿಯಲ್ಲಿ ಕಾಪಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ. ಅದನ್ನು ಉಳಿಸುವ ನಿಟ್ಟಿನಲ್ಲಿ 250 ಕ್ಕೂ ಹೆಚ್ಚು ಸಂಘಟನೆಗಳು ಪಾಲ್ಗೊಂಡು ಸ್ವಚ್ಛತೆಗಾಗಿ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದರು. ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಕುಶಾಲನಗರ ಸ್ಥಾನೀಯ ಸಮಿತಿಯ ಅಧ್ಯಕ್ಷ ಕೆ.ಎಸ್.ನಾಗೇಶ್ ಮಾತನಾಡಿ, ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವುದು ಎಲ್ಲರ ಕರ್ತವ್ಯ. ಇಂತಹ ಅಭಿಯಾನ ನಿತ್ಯ ನಿರಂತರವಾಗಿ ನಡೆಯಬೇಕೆಂದು ತಿಳಿಸಿದರು. ಸ್ವಚ್ಚತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರು ಮಾತನಾಡಿ, ಕುಶಾಲನಗರ ಪಟ್ಟಣ ಸೇರಿದಂತೆ ಜಿಲ್ಲೆಯಲ್ಲಿ ಸ್ವಚ್ಚತೆ ಕಾಪಾಡಲು ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಎಂದರು. ಕುಡಾ…
ವಿರಾಜಪೇಟೆ ಅ.17 NEWS DESK : ಕುಶಾಲನಗರದ ಫಾತಿಮಾ ಕಾನ್ವೆಂಟ್‍ನಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿರಾಜಪೇಟೆ ತಾಲ್ಲೂಕನ್ನು ಪ್ರತಿನಿಧಿಸಿದ ತಂಡ ವಿಜೇತರಾಗಿದ್ದು, ಮಂಗಳೂರಿನಲ್ಲಿ ನಡೆದ ವಿಭಾಗ ಮಟ್ಟದ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಿರುತ್ತಾರೆ. ತಂಡದಲ್ಲಿ ಕ್ರೀಡಾಪಟುಗಳಾದ ಸಣ್ಣುವಂಡ ರಶ್ಮಿ ಪೊನ್ನಮ್ಮ, ಬೊಳ್ಳೆಪಂಡ ದೀಪ್ತಿ ತಂಗಮ್ಮ, ಪಳೆಯಂಡ ಕಾಜಲ್ ಸಿ, ಸೃಷ್ಟಿ ಬಿ.ಎಸ್, ನಿಲ್ಮಾಡ್ ತನ್ಯಾ ರೈ ಇದ್ದರು. ಕಾವೇರಿ ಶಾಲೆಯ ಇಬ್ಬರು ವಿದ್ಯಾರ್ಥಿಗಳಾದ ಸಣ್ಣುವಂಡ ರಶ್ಮಿ ಪೊನ್ನಮ್ಮ ಹಾಗೂ ಪಳೆಯಂಡ ಕಾಜಲ್ ಸಿ ವಿಭಾಗ ಮಟ್ಟದಲ್ಲಿ ಭಾಗವಹಿಸಿದ್ದಾರೆ. ಇವರಿಗೆ ಶಾಲೆಯ ದೈಹಿಕ ಶಿಕ್ಷಕರುಗಳಾದ ಎಂ.ಪಿ.ಮೋನಿಕಾ ಹಾಗೂ ಲಾವಣ್ಯ ಮಾರ್ಗದರ್ಶನ ನೀಡಿದ್ದಾರೆ. ತಂಡದ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ, ಸಂಯೋಜಿಕಿ ಹಾಗೂ ಬೋಧಕ ಬೋಧಕೇತರ ವೃಂದದವರು, ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿ, ವಿಭಾಗ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ವಿರಾಜಪೇಟೆ ಅ.17 NEWS DESK : ನಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ವಿರಾಜಪೇಟೆ ಪುರಸಭೆಯ ಅಧ್ಯಕ್ಷರಾದ ಎಂ.ಕೆ.ದೇಚಮ್ಮ ಕಾಳಪ್ಪ ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾ ಹೋಟೆಲ್ ಹಾಗೂ ರೆಸಾರ್ಟ್ ಅಸೋಸಿಯೇಷನ್ ವತಿಯಿಂದ ಸ್ವಚ್ಛ ಕೊಡಗು ಸುಂದರ ಕೊಡಗು ಎಂಬ ಪರಿಕಲ್ಪನೆಯಲ್ಲಿ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕ, ವಿರಾಜಪೇಟೆ ಪುರಸಭೆ ಹಾಗೂ ವಿರಾಜಪೇಟೆ ತಾಲೋಕು, ನಗರ ವರ್ತಕರ ಸಂಘದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸ್ವಚ್ಛತೆ ಎಂಬುದು ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಬೇಕು. ಈಗಾಗಲೇ ವಿರಾಜಪೇಟೆ ಪುರಸಭೆ ವತಿಯಿಂದ ಸ್ವಚ್ಛ ನಗರಕ್ಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಆ ನಿಟ್ಟಿನಲ್ಲಿ ಸರ್ವರ ಸಹಕಾರ ಅಗತ್ಯ ಎಂದರು. ಸ್ವಚ್ಛತಾ ಜಾಗೃತಿಯಲ್ಲಿ ಎನ್‌ಎಸ್‌ಎಸ್ ವಿದ್ಯಾರ್ಥಿಗಳ ಪಾತ್ರ ಅಪಾರವಾಗಿದೆ ಎಂದರು. ವಿರಾಜಪೇಟೆ ನಗರ ವರ್ತಕರ ಸಂಘದ ಅಧ್ಯಕ್ಷರಾದ ಪಿ.ಎ.ಮಂಜುನಾಥ್ ಮಾತನಾಡಿ, ಸ್ವಚ್ಛ ಪರಿಸರ ಸುಂದರ ಪರಿಸರ ನಿರ್ಮಾಣಕ್ಕೆ ಪ್ರತಿಯೊಬ್ಬರು ಪಣ ತೊಡಬೇಕು. ನಮ್ಮ ಮನೆಗಳಿಂದಲೇ ಸ್ವಚ್ಛತೆಯು…
ಮಡಿಕೇರಿ ಅ.17 NEWS DESK : ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಇಂದು (ಅ.17) ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವವಾಯಿತು. ಭಕ್ತರ ಜಯಘೋಷ, ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಕುಂಡಿಕೆಯಲ್ಲಿ ತಾಯಿ ಕಾವೇರಿ ತೀರ್ಥರೂಪಿಣಿಯಾಗಿ ಕಾಣಿಸಿಕೊಂಡಳು. ಪ್ರಧಾನ ಅರ್ಚಕರಾದ ಗುರುರಾಜ್ ಆಚಾರ್ ತಂಡ ಪೂಜಾ ವಿಧಿವಿಧಾನವನ್ನು ನಡೆಸಿದರು. ಸಂಸದ ಯದುವೀರ್ ಒಡೆಯರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಶಾಸಕರಾದ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದ ಹೆಚ್ಚುವರಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್, ತಕ್ಕ ಮುಖ್ಯಸ್ಥರಾದ ಕೋಡಿ.ಯು.ಮೋಟಯ್ಯ ಮಠಾಧೀಶರು ಮತ್ತಿತರ ಗಣ್ಯರು ತೀರ್ಥೋದ್ಭವದ ಪವಿತ್ರ ಕ್ಷಣಕ್ಕೆ ಸಾಕ್ಷಿಯಾದರು. ಜಿಲ್ಲೆಯ ವಿವಿಧ ಭಾಗಗಳಿಂದ ಭಕ್ತರು ಭಾಗಮಂಡಲ ಕ್ಷೇತ್ರಕ್ಕೆ ಆಗಮಿಸಿ ಶ್ರೀಭಗಂಡೇಶ್ವರನಿಗೆ ಪೂಜೆ ಸಲ್ಲಿಸಿದರು. ನಂತರ ಕಾಲ್ನಡಿಗೆಯ ಮೂಲಕ ಕಾವೇರಿ ಮಾತೆಯ ಸ್ಮರಣೆಯೊಂದಿಗೆ ತಲಕಾವೇರಿಗೆ…
ಸಿದ್ದಾಪುರ ಅ.17 NEWS DESK : ಗುಹ್ಯ ಗ್ರಾಮದ ಅಗಸ್ತ್ಯೇಶ್ವರ ದೇವಾಲಯದಲ್ಲಿ ಇಂದಿನಿಂದ (ಅ.17) ಐದು ದಿನಗಳ ಜಾತ್ರೆಯು ಶ್ರದ್ಧಾಭಕ್ತಿಯಿಂದ ನಡೆಯಲಿದೆ. ತುಲಾಮಾಸ ದಿವಸ ಏಕಾದಶಿ ಸಮಯದಲ್ಲಿ ಶ್ರೀ ಅಗಸ್ತ್ಯೇಶ್ವರ ಮಹಾದೇವರ ಪ್ರಾರ್ಥನೆಯೊಂದಿಗೆ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ಸಂಜೆ 6 ಗಂಟೆಗೆ ತಂತ್ರಿಗಳು, ತಕ್ಕರು, ಆಡಳಿತ ಮಂಡಳಿಯವರು ಹಾಗೂ ಗ್ರಾಮಸ್ಥರು ದೇವರ ಕೊಡಿ ಮರ ನಿಲ್ಲಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ನಂತರ ಸತ್ಯನಾರಾಯಣ ಪೂಜೆ, ರಂಗಪೂಜೆ, ಮಹಾಪೂಜೆ, ರುದ್ರಾಭಿಷೇಕ, ಕುಂಕುಮಾರ್ಚನೆ, ಕ್ಷೀರಾಭಿಷೇಕ ಹಾಗೂ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ. ಜಾತ್ರೆಯ ಅಂಗವಾಗಿ ಪಾಲ್ಗೊಂಡಿದ್ದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಸಲಾಗುವುದು ಎಂದು ಆಡಳಿತ ಮಂಡಳಿ ತಿಳಿಸಿದೆ. ಗುಹ್ಯ ಅಗಸ್ತ್ಯೇಶ್ವರ ದೇವಸ್ಥಾನವು ಕೊಡಗಿನಲ್ಲಿ ಮೊದಲು ಪ್ರತಿಷ್ಠಾಪಿಸಲ್ಪಟ್ಟ ದೇವಸ್ಥಾನವಾಗಿದೆ. ಕೊಡಗಿನಲ್ಲಿ ಕಾವೇರಿ ನದಿ ಪಾತ್ರದಲ್ಲಿರುವ ಮೂರನೆಯ ದೇವಸ್ಥಾನವಾಗಿದೆ. ಮಹಾವಿಷ್ಣುಗೆ ದರ್ಶನ ನೀಡಿ ಈ ಕ್ಷೇತ್ರದಲ್ಲಿ ನೆಲೆನಿಂತ ಮಹಾದೇವರ ಅಗಸ್ತ ಮುನಿಯಿಂದ ಸ್ಥಾಪಿಸಲ್ಪಟ ಈಶ್ವರ ದೇವಾಲ ಮುಂದೆ ಅಗಸ್ತ್ಯೇಶ್ವರ ಎಂದೇ…
ಮಡಿಕೇರಿ ಅ.17 NEWS DESK : ಕಾವೇರಿ ಪವಿತ್ರ ತೀರ್ಥೋದ್ಭವದ ಅಂಗವಾಗಿ ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಭಾಗಮಂಡಲದಿಂದ ತಲಕಾವೇರಿಗೆ ಪಾದಯಾತ್ರೆ ನಡೆಸಿದರು. ಈ ಸಂದರ್ಭ ಸಹಸ್ರಾರು ಭಕ್ತರು ಸಂಪ್ರದಾಯಿಕ ಉಡುಗೆ ಧರಿಸಿ ಕಾವೇರಿ ಮಾತೆಯ ಸ್ತುತಿ ಗೀತೆಗಳನ್ನು ಹಾಡುತ್ತ ಬೆಟ್ಟ ಹತ್ತಿದರು.
ಮಡಿಕೇರಿ ಅ.17 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ 16ನೇ ಆಡಳಿತ ಮಂಡಳಿ ಸಭೆ ವಿಕಾಸಸೌಧದಲ್ಲಿ ನಡೆಯಿತು. ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಅವರು ಪಾಲ್ಗೊಂಡು ಸಂಸ್ಥೆಯ ಅಭಿವೃದ್ಧಿ ಬಗ್ಗೆ ಚರ್ಚಿಸಿದರು. ನಂತರ ಕೊಡಗು ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಆರ್ಥೋಪೆಡಿಕ್ಸ್ ವಿಭಾಗದಲ್ಲಿ ರೋಬೊಟಿಕ್ ಸರ್ಜರಿ ಪ್ರಾರಂಭಿಸಲು ಉಪಕರಣ ಖರೀದಿ, ಸ್ತನ ಕ್ಯಾನ್ಸರ್ ತಡೆಯುವ ನಿಟ್ಟಿನಲ್ಲಿ ಪರೀಕ್ಷೆ ನಡೆಸಲು ಮ್ಯಾಮೋಗ್ರಾಪಿ ಖರೀದಿ ಖಾಲಿ ಇರುವ ವೈದ್ಯರ ಹುದ್ದೆಯನ್ನು ನೇರ ನೇಮಕಾತಿ ಮುಖೇನ ಭರ್ತಿ ಮಾಡಿಕೊಳ್ಳಲು ತೀರ್ಮಾನ ಕೈಗೊಳ್ಳಲಾಯಿತು. ಸಂಸ್ಥೆಯ ಅಭಿವೃದ್ಧಿ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು. ಕಟ್ಟಡ ಕಾಮಗಾರಿ ಪ್ರಗತಿ ಪರಿಶೀಲಿಸಿ ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚನೆ ಇದೇ ಸಂದರ್ಭ ಸೂಚನೆ ನೀಡಲಾಯಿತು. ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಮೊಹಮ್ಮದ್ ಮೊಹಿಸಿನ್, ಆರ್ಥಿಕ ಇಲಾಖೆಯ ಕಾರ್ಯದರ್ಶಿ ಡಾ. ವಿಶಾಲ್ ಆರ್.,…






