ಕುಶಾಲನಗರ ಅ.17 NEWS DESK : ಕುಶಾಲನಗರ ಬಾಡಿಗೆ ಕಾರು ಮಾಲೀಕರು ಮತ್ತು ಚಾಲಕರ ಸಂಘದ 2025-28 ನೇ ಸಾಲಿನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಕೆ.ಎ.ಉದಯಕುಮಾರ್ ಪುನರ್ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಸಂಘದ ಗೌರವಾಧ್ಯಕ್ಷರಾಗಿ ಸೋಮೆಯಂಡ ವಿಜು, ಉಪಾಧ್ಯಕ್ಷರಾಗಿ ಡಿ.ಆರ್.ಸೋಮೇಶ್,ಪ್ರಧಾನ ಕಾರ್ಯದರ್ಶಿಯಾಗಿ ಮಾನ್ವಲ್ ಬಿ.ಫರ್ನಾಂಡೀಸ್, ಸಹ ಕಾರ್ಯದರ್ಶಿ ಅಜಯ್, ಖಜಾಂಚಿಯಾಗಿ ಇ.ಪಿ.ಪ್ರೇಮ್ ಪ್ರಕಾಶ್ ,ಸಲಹೆಗಾರರಾಗಿ ಮನುನಂಜುಂಡ,ಕೆ.ಎನ್.ಅಶೋಕ್ ಹಾಗೂ ನಿದೇಶಕರಾಗಿ ಭಾಸ್ಕರ್, ಕೆ.ರಾಜು,ಸುರೇಶ್, ಉಮ್ಮರ್,ರವಿ,ಮನುಕುಮಾರ್,ರಿಯಾಜ್,ಶ್ರೀನಿವಾಸ್ ಆಯ್ಕೆಗೊಂಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲೇಖಕ: admin
ನಾಪೋಕ್ಲು ಅ.17 NEWS DESK : ಗುಜರಾತಿನ ಸೂರತ್‍ನಲ್ಲಿ ಜರುಗಿದ ನಾಲ್ಕನೇ ರಾಷ್ಟ್ರೀಯ ವೆಂಟ್ರನ್ಸ್ ಸ್ಪೋರ್ಟ್ಸ್ ಮತ್ತು ಗೇಮ್ಸ್ ಚಾಂಪಿಯನ್‌ಶಿಪ್- 2025 ಕ್ರೀಡಾಕೂಟದಲ್ಲಿ ಕೊಡಗಿನ ಮೂರು ಕ್ರೀಡಾಪಟುಗಳು ಭಾಗವಹಿಸಿ ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾರೆ. ನಾಂಗಾಲ ಬಿಟ್ಟಂಗಾಲ ಗ್ರಾಮದ ಚೇಮೀರ ಸೀತಮ್ಮ ಪ್ರೇಮ ಬಾರದ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ, ತಟ್ಟೆ ಎಸೆತದಲ್ಲಿ ಪ್ರಥಮ ಸ್ಥಾನ, ಜಾವಲಿನ್ ಎಸೆತದಲ್ಲಿ ಎರಡನೇ ಸ್ಥಾನ ಗಳಿಸಿದ್ದಾರೆ. ಬಾಲೆಳೆಯ ಕೊಟ್ಟಗೇರಿ ಗ್ರಾಮದ ಅರಮನೆಮಾಡ ಮಮತಾ ಮನು ಭಾರದ ಗುಂಡು ಎಸೆತದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ತಟ್ಟೆ ಎಸೆತದಲ್ಲಿ ದ್ವಿತೀಯ ಸ್ಥಾನ ಹಾಗೂ ಜಾವಲಿನ್ ಎಸೆತದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಚೇಲಾವರ ಗ್ರಾಮದ ಪಟ್ಟಚೆರುವಂಡ ಗಗನ ಮೇದಪ್ಪ 100 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, 200 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಹಾಗೂ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. 110 ಹರಡಲ್ಸ್ ರನ್ನಿಂಗ್ ನಲ್ಲಿ ಪ್ರಥಮ ಸ್ಥಾನ, 400 ರಿಲೇ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ…
ನಾಪೋಕ್ಲು ಅ.17 NEWS DESK : ನರಿಯಂದಡ ಗ್ರಾಮದ ತೋಟಗಳಲ್ಲಿ ಹುಲಿಯ ಹೆಜ್ಜೆ ಗುರುತು ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಉಂಟಾಗಿದೆ. ನರಿಯಂದಡ ಗ್ರಾಮ ಪಂಚಾಯಿತಿಗೆ ಒಳಪಟ್ಟ ನರಿಯಂದಡ ಗ್ರಾಮದ ಪೊಕ್ಕೋಳಂಡ್ರ ಮಕ್ಕಿಮನೆ, ಮಂಞಪುರ ಕುಟುಂಬಸ್ಥರ ತೋಟಗಳಲ್ಲಿ ಹುಲಿ ಹೆಜ್ಜೆ ಗುರುತು ಪತ್ತೆಯಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗ್ರಾಮ ವ್ಯಾಪ್ತಿಯಲ್ಲಿ ಹುಲಿ ಚಲನ ವಲನ ಕಂಡುಬಂದಲ್ಲಿ ತಕ್ಷಣವೆ ಅರಣ್ಯ ಇಲಾಖೆಯನ್ನು 8277124444 ಸಂಪರ್ಕಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸೂಚಿಸಿದ್ದಾರೆ. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಅ.17 NEWS DESK : ಕೊಡಗು ಹಕ್ಕು ಸಂರಕ್ಷಣಾ ಸಮಿತಿ ವತಿಯಿಂದ 30ನೇ ವರ್ಷದ ಕಾವೇರಿ ರಥಯಾತ್ರೆ ನಾಪೋಕ್ಲು ನಿಂದ ತಲಕಾವೇರಿಗೆ ಪ್ರಯಾಣ ಪ್ರಾರಂಭಗೊಂಡಿತ್ತು. ಸಂಜೆ ಭಕ್ತಾಧಿಗಳಿಗೆ ತೀರ್ಥ ವಿತರಣಿಸುವುದರ ಮೂಲಕ ಭಾಗಮಂಡಲದಿಂದ ಅಯ್ಯಂಗೇರಿ, ಬಲ್ಲಮಾವಟ್ಟಿ ಮಾರ್ಗವಾಗಿ ನಾಪೋಕ್ಲುವಿಗೆ ಹಿಂತಿರುಗಲಿದೆ ಎಂದು ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಸಂಚಾಲಕ ಬಿದ್ದಾಟಂಡ ರೋಜಿ ಚಿನ್ನಪ್ಪ ತಿಳಿಸಿದ್ದಾರೆ. . ವರದಿ : ದುಗ್ಗಳ ಸದಾನಂದ.
ಮಡಿಕೇರಿ ಅ.17 NEWS DESK : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವ ಸಂದರ್ಭದಲ್ಲೆ ದೇಶ ಭಕ್ತ ಸಂಘಟನೆಯ ವಿರುದ್ಧ ತುಚ್ಛವಾಗಿ ಮಾತನಾಡಿರುವ ಕಾಂಗ್ರೆಸ್ ಮುಖಂಡ ಪ್ರಿಯಾಂಕ ಖರ್ಗೆಯ ಧೋರಣೆಗಳನ್ನು ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆಯ ಮಾಜಿ ಅಧ್ಯಕ್ಷರಾದ ಶಾಂತೆಯಂಡ ರವಿ ಕುಶಾಲಪ್ಪ ತೀವ್ರವಾಗಿ ಖಂಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್‍ಎಸ್‍ಎಸ್ ಶತಮಾನೋತ್ಸವದ ಸಂದರ್ಭ ನಡೆದ ಪಥ ಸಂಚಲನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಹಲವು ಮಂದಿ ಗಣವೇಷ ಧರಿಸಿ ಪಾಲ್ಗೊಂಡಿದ್ದಾರೆ. ಈ ಹಿನ್ನೆಲೆ ಆರ್‍ಎಸ್‍ಎಸ್ ವಿರುದ್ಧವಾದ ಹೇಳಿಕೆಗಳಿಗೆ ಕಾಂಗ್ರೆಸ್‍ನ ಎಲ್ಲರನ್ನು ದೂಷಿಸುವುದಿಲ್ಲ. ಆದರೆ, ತಂದೆ ಮಲ್ಲಿಕಾರ್ಜುನ ಖರ್ಗೆ ಅವರ ಆಶೀರ್ವಾದದಿಂದಷ್ಟೆ ಸಚಿವರಾಗಿರುವ ಪ್ರಿಯಾಂಕ ಖರ್ಗೆಯವರ ನಿಲುವುಗಳನ್ನು ತೀವ್ರವಾಗಿ ವಿರೋಧಿಸುವುದಾಗಿ ತೀಕ್ಷ್ಣವಾಗಿ ನುಡಿದರು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಸಂದರ್ಭಗಳಲ್ಲೆಲ್ಲ ಮುಸಲ್ಮಾನರನ್ನು ಎತ್ತಿ ಕಟ್ಟುವ, ಹಿಂದೂಗಳನ್ನು ಟೀಕಿಸುವ ಪ್ರವೃತ್ತಿಯನ್ನು ಕಾಣುತ್ತಿರುವುದಲ್ಲದೆ, ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣಗಳನ್ನು ದಾಖಲಿಸುವ ಕಾರ್ಯವೂ ನಡೆಯುತ್ತದೆ. ಜಿಲ್ಲೆಯಲ್ಲಿ ದಶಕಗಳ ಹಿಂದೆ ನಡೆದ ಪಾಲೂರು ಘಟನೆಯ ಹಂತದಲ್ಲಿ ನೂರಾರು ಹಿಂದೂಗಳ…
ಸುಂಟಿಕೊಪ್ಪ ಅ.17 NEWS DESK : ಕಾನ್‍ಬೈಲ್ ಒಕ್ಕೂಟ ಕಾರ್ಯಕ್ಷೇತ್ರದಲ್ಲಿ ಲೆಕ್ಕ ಪರಿಶೋಧನೆಗೆ ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ಸದಸ್ಯೆ ರಾಧಮಣಿ, ಶ್ರೀ.ಕ್ಷೇ.ಧ.ಗ್ರಾ.ಯೋ.ವಲಯ ಮೇಲ್ವಿಚಾರಕ ಸಂತೋಷ್ ಚಾಲನೆ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‍ಬೈಲ್ ಒಕ್ಕೂಟದ ಕಾರ್ಯಕ್ಷೇತ್ರದ ಲೆಕ್ಕ ಪರಿಶೋಧನೆಯನ್ನು ಆರಂಭಗೊಳಿಸಲಾಗಿದೆ. ಈ ಸಂದರ್ಭ ಲೆಕ್ಕ ಪರಿಶೋಧಕರಾದ ಜಗನ್ನಾಥ್, ಒಕ್ಕೂಟದ ಸೇವಾ ಪ್ರತಿನಿಧಿ ಹಾಗೂ ಒಕ್ಕೂಟದ ಪದಾಧಿಕಾರಿಗಳು ಇದ್ದರು.
ಮಡಿಕೇರಿ ಅ.17 NEWS DESK : ಟಿ.ಎ.ನಾರಾಯಣ ಗೌಡ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ ಕೊಡಗು ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ತೊರೆನೂರು ಗ್ರಾಮದ ಸಾಗರ್ ತೊರೆನೂರು ಅವರನ್ನು ವೇದಿಕೆಯ ರಾಜ್ಯ ಸಂಚಾಲಕಿ ದೀಪಾ ಪೂಜಾರಿ ನೇಮಕ ಮಾಡಿದ್ದಾರೆ. ವೇದಿಕೆ ವತಿಯಿಂದ ಕುಶಾಲನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆದೇಶ ಪ್ರತಿ ನೀಡಿ ಆಯ್ಕೆ ಮಾಡಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪುತ್ತೂರು ಅ.17 NEWS DESK : ವಿವಿಧ ಕಾರಣಗಳಿಂದ ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ರಕ್ತದ ಅಗತ್ಯವಿರುತ್ತದೆ. ಅಪಘಾತ, ಶಸ್ತ್ರಚಿಕಿತ್ಸೆ, ರಕ್ತಹೀನತೆ, ಲುಕೇಮಿಯಾ ಮುಂತಾದ ಸಂದರ್ಭದಲ್ಲಿ ರಕ್ತ ಅತೀ ಅವಶ್ಯವಾಗಿರುತ್ತದೆ. ಕೆಲವರಂತೂ ರಕ್ತ ಸಿಗದೇ ಪ್ರಾಣವನ್ನು ಕಳೆದುಕೊಳ್ಳುವ ಸಾಧ್ಯತೆಗಳೂ ಇರುತ್ತವೆ. ಈ ಕಾರಣದಿಂದ ರಕ್ತದಾನದ ಮಹತ್ವವನ್ನು ಅರಿತು ಅರ್ಹರೆಲ್ಲರೂ ರಕ್ತದಾನ ಮಾಡುವುದಕ್ಕೆ ಹಿಂಜರಿಯಬಾರದು ಎಂದು ಮಂಗಳೂರಿನ ಅತ್ತಾವರದ ಕೆಎಂಸಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವೃಂದ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಯೂತ್ ರೆಡ್‍ಕ್ರಾಸ್ ಮತ್ತು ಎನ್‍ಎಸ್‍ಎಸ್ ಘಟಕ ಹಾಗೂ ಕೆಎಂಸಿ ರಕ್ತಕೇಂದ್ರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಶ್ರೀರಾಮ ಸಭಾಭವನದಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರದ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತಾಡಿದರು. ರಕ್ತ ನೀಡುವುದಕ್ಕೆ ಇರುವ ಮಾನದಂಡಗಳು ಮತ್ತು ರಕ್ತದಾನದ ನಂತರ ರೋಗಿಗೆ ಅದನ್ನು ನೀಡುವ ಮೊದಲು ಯಾವೆಲ್ಲಾ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ ಎನ್ನುವುದನ್ನು ವಿವರಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಮಾತನಾಡಿ ರಕ್ತದಾನವು ಅನೇಕ ಜೀವಗಳನ್ನು ಉಳಿಸಬಲ್ಲದು. ಮನುಷ್ಯನ ಜೀವ…
ಮಡಿಕೇರಿ ಅ.17 NEWS DESK : ಹಿಂದೂ ಮಲಯಾಳಿ ಸಂಘದ ವತಿಯಿಂದ ಅ.19 ರಂದು ನಗರದಲ್ಲಿ ಮಲಯಾಳಿ ಬಾಂಧವರ ‘ಓಣಾ ಘೋಷಂ-ಓಣಂ ಸಧ್ಯ’ ಹಬ್ಬ ಆಚರಿಸಲಾಗುವುದೆಂದು ಸಂಘದ ಅಧ್ಯಕ್ಷ ಕೆ.ವಿ.ಧರ್ಮೇಂದ್ರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಓಣಂ ಹಬ್ಬವನ್ನು ನಮ್ಮ ಸಂಸ್ಕೃತಿ ಆಚಾರ, ವಿಚಾರಗಳ ಸಂರಕ್ಷಣೆಯೊಂದಿಗೆ, ಅದನ್ನು ಯುವ ಸಮೂಹಕ್ಕೆ ತಿಳಿಯಪಡಿಸುವ ಉದ್ದೇಶದಿಂದ ಆಚರಿಸಿಕೊಮಡು ಬರಲಾಗುತ್ತಿದೆ. ಈ ಬಾರಿಯ ಹಬ್ಬಾಚರಣೆ ನಗರದ ಕಾವೇರಿ ಹಾಲ್‍ನಲ್ಲಿ ನಡೆಯಲಿದೆಯೆಂದು ಹೇಳಿದರು. ಓಣಂ ಆಚರಣಾ ಸಮಿತಿ ಅಧ್ಯಕ್ಷ ಟಿ.ಕೆ.ಸುಧೀರ್ ಮಾತನಾಡಿ, ಅ.19ರ ಭಾನುವಾರ ಬೆಳಿಗ್ಗೆ ಪೂಕಳಂ ಸ್ಪರ್ಧೆ, ಛದ್ಮವೇಷ ಹಾಗೂ ಮಾವೇಲಿ ಮತ್ತು ಚಂಡೆ ವಾದ್ಯದೊಂದಿಗೆ ಕಾರ್ಯಕ್ರಮ ಪ್ರಾರಂಭವಾಗಲಿದೆ ಎಂದರು. ಬೆಳಿಗ್ಗೆ 10.30 ಗಂಟೆಗೆ ಸಾಂಪ್ರದಾಯಿಕ ತಿರುವಾದಿ ನೃತ್ಯದ ನಂತರ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ.ವಿ.ಧರ್ಮೇಂದ್ರ ವಹಿಸಲಿದ್ದಾರೆಂದರು. ಮುಖ್ಯ ಅತಿಥಿಗಳಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮೈಸೂರು-ಕೊಡಗು…
ಮೈಸೂರು, ಅ.17 NEWS DESK : ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮೈಸೂರಿನಿಂದ ಜೈಪುರಕ್ಕೆ ಹೆಚ್ಚುವರಿ ರೈಲು ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕೆಂಬ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿಗೆ ಸ್ಪಂದಿಸಿರುವ ರೈಲ್ವೆ ಇಲಾಖೆ, ಇದಕ್ಕೆ ಕ್ರಮ ಕೈಗೊಂಡಿದೆ. ದೀಪಾವಳಿ ಹಬ್ಬದ ಸಮಯದಲ್ಲಿ ಜನದಟ್ಟಣೆಯನ್ನು ತಪ್ಪಿಸಲು ಹಾಗೂ ಮೈಸೂರಿನಿಂದ ಜೈಪುರಕ್ಕೆ ತೆರಳುವವರ ಸಂಖ್ಯೆ ಹೆಚ್ಚಾಗಿರುವುದರಿಂದ ತಾತ್ಕಾಲಿಕವಾಗಿ ಹೊಸ ರೈಲು ಪರಿಚಯಿಸಲು ರೈಲ್ವೆ ಇಲಾಖೆ ಕ್ರಮ ಕೈಗೊಂಡಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸದರು ಈ ಕುರಿತು ಮಾಹಿತಿ ನೀಡಿದ್ದಾರೆ. ಮೈಸೂರಿನಿಂದ ರಾಜಸ್ಥಾನದ ಜೈಪುರಕ್ಕೆ ತೆರಳುವವರ ಸಂಖ್ಯೆ ಹೆಚ್ಚಾಗಿದೆ. ಜನದಟ್ಟಣೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚುವರಿ ರೈಲು ಸಂಚಾರಕ್ಕೆ ಅವಕಾಶ ಕಲ್ಪಿಸಬೇಕೆಂದು ಮನವಿ ಸಲ್ಲಿಸಲಾಗಿತ್ತು ಎಂದು ತಿಳಿಸಿದ್ದಾರೆ. ಇದಕ್ಕೆ ಸ್ಪಂದಿಸಿರುವ ರೈಲ್ವೆ ಇಲಾಖೆಯು ಹಬ್ಬದ ಸಂದರ್ಭದಲ್ಲಿ ತಾತ್ಕಾಲಿಕವಾಗಿ ಹೆಚ್ಚುವರಿ ರೈಲು ಸಂಚಾರಕ್ಕೆ ಇಲಾಖೆ ಕ್ರಮ ಕೈಗೊಂಡಿದೆ ಎಂದು ಸಂಸದರು ಹೇಳಿದ್ದಾರೆ. ರಾಜಸ್ಥಾನದ ಜನರು ಹಾಗೂ ಇತರರು ಈ…






