ಪುತ್ತೂರು ಸೆ.9 NEWS DESK : ರೂಢಿಯಲ್ಲಿ ಒಂದು ಮಾತಿದೆ ಪಂಚಾಂಗ ಗಟ್ಟಿ ಇದ್ದರೆ ಮಾತ್ರ ಮನೆ ಉಳಿತದೆ. ಅದೇ ರೀತಿ ಇಂಜಿನಿಯರಿಂಗ್ ಶಿಕ್ಷಣಕ್ಕೆ ಬಂದಿರುವ ನೀವು ಅದರ ಮೂಲ ವಿಷಯಗಳನ್ನು ಕಲಿತುಕೊಳ್ಳುವುದು ಬಹಳ ಆವಶ್ಯಕ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಭಾ ಭವನದಲ್ಲಿ ನಡೆದ 2025ನೇ ಶೈಕ್ಷಣಿಕ ವರ್ಷದಲ್ಲಿ ಕಾಲೇಜಿಗೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಪುನಶ್ಚೇತನಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮಾತಾಡಿದರು. ನಿಮ್ಮ ಕಲಿಕೆ ಇಂದಿನಿಂದಲೇ ಪ್ರಾರಂಭವಾಗುತ್ತವೆ ಮತ್ತು ಇಲ್ಲಿ ಕಲಿಯುವ ಪ್ರತಿಯೊಂದು ವಿಷಯಗಳೂ ಅಗತ್ಯವಾದದ್ದು ಮತ್ತು ಜೀವನಾನುಭವವನ್ನು ನೀಡುವಂಥದ್ದು ಎಂದು ಹೇಳಿದರು. ಉತ್ತಮ ಇಂಜಿನಿಯರ್ ಅನಿಸಿಕೊಳ್ಳಬೇಕಾದರೆ ತರಗತಿಗಳಿಗೆ ತಪ್ಪದೆ ಹಾಜರಾಗುವ ಜತೆಯಲ್ಲಿ ಗ್ರಂಥಾಲಯಗಳಲ್ಲಿರುವ ಪುಸ್ತಕಗಳನ್ನೂ ಓದಬೇಕು, ವಿದ್ಯಾರ್ಥಿಗಳು ತಮ್ಮ ಕರ್ತವ್ಯ ಹಾಗೂ ಜವಾಬ್ಧಾರಿಗಳನ್ನು ಅರಿತುಕೊಂಡು ತಮಗೆ ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.…
ಲೇಖಕ: admin
ಮಡಿಕೇರಿ ಸೆ.9 NEWS DESK : ರಾಜ್ಯ ಸರಕಾರದ ವತಿಯಿಂದ ಇದೇ ಸೆ.22 ರಿಂದ ಕರ್ನಾಟಕದ ಸಮಗ್ರ ಜನತೆಯ ಜಾತಿ ಜನಗಣತಿ ನಡೆಯಲಿದ್ದು, ಒಕ್ಕಲಿಗ ಜನಾಂಗದವರು ತಪ್ಪದೇ ಒಕ್ಕಲಿಗ ಎಂದು ತಮ್ಮ ಜಾತಿಯನ್ನು ಬರೆಸುವಂತೆ ಮತ್ತು ಎಲ್ಲಾ ಮಾಹಿತಿಗಳನ್ನು ತಪ್ಪಿಲ್ಲದಂತೆ ನೀಡುವಂತೆ ಒಕ್ಕಲಿಗರ ಸಂಘದ ಕೊಡಗು ಜಿಲ್ಲಾಧ್ಯಕ್ಷ ಎಸ್.ಎಂ.ಚಂಗಪ್ಪ ಅವರು ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸರಕಾರ ಮುಂದಿನ ದಿನಗಳಲ್ಲಿ ಯೋಜನೆ ಅಥವಾ ಕಾರ್ಯಕ್ರಮ ರೂಪಿಸುವಾಗ ಜಾತಿ ಜನಗಣತಿಯ ದತ್ತಾಂಶ ಪರಿಗಣಿಸುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಯಾವುದೇ ಕಾರಣಕ್ಕೂ ತಪ್ಪು ಮಾಹಿತಿ ನೀಡಬಾರದು ಎಂದು ಕೋರಿದ್ದಾರೆ. ಗಣತಿದಾರರು ಮನೆಮನೆಗೆ ಬಂದಾಗ ಒಕ್ಕಲಿಗ ಜನಾಂಗದವರು ತಪ್ಪದೇ ಒಕ್ಕಲಿಗ ಎಂದು ಬರೆಸಬೇಕು. ಹಿಂದುಳಿದ ವರ್ಗಗಳ ಆಯೋಗದ ಮೂಲಕ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಒಕ್ಕಲಿಗ ಸಮುದಾಯದವರು ನಿಖರವಾದ ಮಾಹಿತಿಯನ್ನು ಸಂಪೂರ್ಣವಾಗಿ ನೀಡಬೇಕು. ಶಿಕ್ಷಣ, ಉದ್ಯೋಗ, ಆಸ್ತಿ, ಆರ್ಥಿಕ ಪರಿಸ್ಥಿತಿ ಮೊದಲಾದ ಮಾಹಿತಿಗಳನ್ನು ತಪ್ಪಾಗಿ ನೀಡದೆ ಸತ್ಯಾಂಶವನ್ನು ತಿಳಿಸಬೇಕು. ಯಾವುದೇ ಕಾರಣಕ್ಕೂ…
ವಿರಾಜಪೇಟೆ ಸೆ.9 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವಿರಾಜಪೇಟೆ ತಾಲ್ಲೂಕು ವತಿಯಿಂದ ಕೃಷಿ ಕಾರ್ಯಕ್ರಮದಡಿಯಲ್ಲಿ ಅಮ್ಮತಿ ವಲಯದ, ಕಣ್ಣಂಗಾಲ ಕಾರ್ಯಕ್ಷೇತ್ರದ ಅಮ್ಮತಿ ಒಂಟಿಅಂಗಡಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ನಡೆಯಿತು. ಕಣ್ಣಂಗಾಲ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಜನಿ ಕುಟ್ಟಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ ಗಿಡಮರಗಳನ್ನು ಬೆಳೆಸಬೇಕು, ನೆಟ್ಟ ಗಿಡಗಳನ್ನು ಪೋಷಣೆ ಮಾಡಬೇಕು, ಪರಿಸರ ಸಂರಕ್ಷಣೆಯಿಂದ ಶುದ್ಧವಾದ ಗಾಳಿ ನೀರು ಸಿಗುತ್ತದೆ. ಎಲ್ಲಾ ವಿದ್ಯಾರ್ಥಿಗಳು ತಮ್ಮ ಮನೆಯ ಪರಿಸರದಲ್ಲಿ ಗಿಡ ನಾಟಿ ಮಾಡಿ ಪರಿಸರ ಸಂರಕ್ಷಿಸಬೇಕು ಎಂದರು. ಸಂಪನ್ಮೂಲ ವ್ಯಕ್ತಿ ರೇಖಾ ಬಿ.ಎಸ್ ಮಾತನಾಡಿ, ಪರಿಸರ ಸಂರಕ್ಷಣೆಯಲ್ಲಿ ನಮ್ಮ ಕರ್ತವ್ಯದ ಬಗ್ಗೆ ಮತ್ತು ಮಾಲಿನ್ಯ, ಜಲ ಮಾಲಿನ್ಯ, ಶಬ್ದ ಮಾಲಿನ್ಯದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪರಿಸರದ ಕುರಿತು ಪ್ರಬಂದ ಹಾಗೂ ಚಿತ್ರಕಲೆ ಎಲೆಗಳನ್ನು ಗುರುತಿಸುವ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಕೃಷಿ…
ಬೆಂಗಳೂರು ಸೆ.9 NEWS DESK : ಬಹುತ್ವ ಸಂಸ್ಕೃತಿಯಲ್ಲಿ ನಮ್ಮ ಸರ್ಕಾರಕ್ಕೆ ಬದ್ಧತೆ ಇದೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗಾಗಿ ನಮ್ಮ ಸರ್ಕಾರ ಕಾರ್ಯಕ್ರಮ ರೂಪಿಸಿ ಜಾರಿ ಮಾಡುವ ಮೂಲಕ ಸಮಾಜದ ಅಸಮಾನತೆ ಹೋಗಲಾಡಿಲು ಶ್ರಮಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್ ಆಯೋಜಿಸಿದ್ದ ಸಂತ ಮೇರಿ ಮಾತೆಯ ಉತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡು ಮಾತನಾಡಿದರು. ದಯೆಯಿಲ್ಲದ ಧರ್ಮ ಯಾವುದಯ್ಯ-ದಯೆಯೇ ಧರ್ಮದ ಮೂಲವಯ್ಯ ಎನ್ನುವ ಬಸವಣ್ಣರ ಮಾತನ್ನು ನಾವು ಪಾಲಿಸಬೇಕು. ಧಾರ್ಮಿಕ ಸಹಿಷ್ಣುತೆ ಮತ್ತು ಸಾಮಾಜಿಕ ನ್ಯಾಯ ನಮ್ಮ ಸಂವಿಧಾನದ ಆಶಯವೂ ಆಗಿದೆ. ಬಸವಣ್ಣನವರು ಹೇಳಿದ ಮೌಲ್ಯಗಳನ್ನೇ ಗಾಂಧಿ, ಅಂಬೇಡ್ಕರ್ ಅವರೂ ಹೇಳಿದ್ದಾರೆ. ಈ ಮೌಲ್ಯಗಳಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು ಎಲ್ಲರಿಗೂ ಸಮಾನ ರಕ್ಷಣೆ ನೀಡುತ್ತದೆ ಎಂದರು. ಇದೇ ಸಂದರ್ಭ ಮಹಾಧರ್ಮಾಧ್ಯಕ್ಷರಾದ ಪೀಟರ್ ಮಚಾಡೋ ಅವರು ಮುಂದಿಟ್ಟಿರುವ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಲಾಗುವುದು ಎಂದು ಹೇಳಿದರು. ಮಹಾಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಪೀಟರ್ ಮಚಾಡೋ ಅವರ ದಿವ್ಯ…
ವಿರಾಜಪೇಟೆ ಸೆ.9 NEWS DESK : ಹಿರಿಯರನ್ನು ಪ್ರತಿಯೊಬ್ಬರು ಕೂಡ ಗೌರವಿಸಬೇಕು ಎಂದು ವಿರಾಜಪೇಟೆಯ ಸಂತ ಅನ್ನಮ್ಮ ದೇವಾಲಯದ ಪ್ರಧಾನ ಗುರುಗಳು ಹಾಗೂ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಜೇಮ್ಸ್ ಡೊಮಿನಿಕ್ ಹೇಳಿದರು. ಸಂತ ಅನ್ನಮ್ಮ ದ್ವಿ ಶತಮಾನೋತ್ಸವ ಸಭಾಂಗಣದಲ್ಲಿ ಮದರ್ ತೆರೇಸಾ ಅವರ ಜನ್ಮ ದಿನಾಚರಣೆ ಪ್ರಯುಕ್ತ ವಿರಾಜಪೇಟೆಯ ಮದರ್ ತೆರೇಸಾ ಸೇವಾ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಹಿರಿಯ ನಾಗರಿಕರ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಿರಿಯರನ್ನು ಗೌರವಿಸುವುದು ಗಮನಾರ್ಹ ವಿಚಾರವಾಗಿದೆ. ಈ ಧರ್ಮಸಭೆಯನ್ನು ಹಿರಿಯರು ಕಟ್ಟಿ ಬೆಳೆಸಿದ್ದು, ಧರ್ಮ ಕೇಂದ್ರದಲ್ಲಿ ಹಲವಾರು ಜನರು ಸೇವೆಯನ್ನು ಸಲ್ಲಿಸಿದ್ದಾರೆ. ಪ್ರತಿಭೆಗಳನ್ನು ಗುರುತಿಸಿ ಗೌರವಿಸುವುದು ಪ್ರಶಂಸನೀಯ. ಆ ನಿಟ್ಟಿನಲ್ಲಿ ಮದರ್ ತೆರೇಸಾ ಸೇವಾ ಕೇಂದ್ರದ ಸಾಮಾಜಿಕ ಕಳಕಳಿ ಮಹತ್ವದ್ದಾಗಿದೆ ಎಂದರಲ್ಲದೆ ಮತ್ತಷ್ಟು ಸಮಾಜಮುಖಿ ಕಾರ್ಯಗಳು ಸೇವಾ ಕೇಂದ್ರದ ಮುಖಾಂತರ ಜರುಗಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮದರ್ ತೆರೇಸಾ ಸೇವಾ ಕೇಂದ್ರದ ಅಧ್ಯಕ್ಷರು ಹಾಗೂ ಶಿಕ್ಷಣ ಇಲಾಖೆಯ…
ಮಡಿಕೇರಿ ಸೆ.9 NEWS DESK : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್, ಕೊಡಗು ಜಿಲ್ಲಾ ಘಟಕದ ಪದಗ್ರಹಣ ಕಾರ್ಯಕ್ರಮ ನಡೆಯಿತು. ವಿರಾಜಪೇಟೆಯ ಪ್ರಗತಿ ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮವನ್ನು ವಿಧಾನಪರಿಷತ್ ಸದಸ್ಯ ಮಂಡೆಪಂಡ ಸುಜಾ ಕುಶಾಲಪ್ಪ ಉದ್ಘಾಟಿಸಿ, ಮಾತನಾಡಿ, ಮಕ್ಕಳು ಸಮಾಜದ ಭವಿಷ್ಯದ ಆಸ್ತಿಯಾಗಿದ್ದು, ಅವರನ್ನು ಸಮರ್ಥ ಮತ್ತು ಸ್ವಚ್ಛ ಸಮಾಜ ನಿರ್ಮಾಣದಲ್ಲಿ ಉತ್ತಮ ಪ್ರಜೆಗಳಾಗಿ ರೂಪಿಸಲು ಎಲ್ಲರೂ ಕೈಜೋಡಿಸಬೇಕು ಎಂದರು. ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೊಡಗು ಜಿಲ್ಲೆಯಲ್ಲೂ ತನ್ನ ಕಾರ್ಯ ವ್ಯಾಪ್ತಿಯನ್ನು ವಿಸ್ತರಿಸಿದ್ದು ಶ್ಲಾಘನೀಯ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಸಂಘಟನೆಯು ನಡೆಸುವ ಸೃಜನಾತ್ಮಕ ಮಕ್ಕಳ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡುವುದಲ್ಲದೆ, ಸರ್ಕಾರದಿಂದ ಅನುದಾನ ಕೊಡಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು. ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಾದ ಮೇರಿಯಂಡ ಸಂಕೇತ್ ಪೂವಯ್ಯ ಮಾತನಾಡಿ, ಅತ್ಯಂತ ಪ್ರಾಮಾಣಿಕ ಮತ್ತು ನೈಜತೆಗೆ ಹತ್ತಿರವಾಗಿ ಮಕ್ಕಳ ಸೇವೆಯನ್ನು ಮಾಡುತ್ತಿರುವ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್…
ಸುಂಟಿಕೊಪ್ಪ ಸೆ.9 NEWS DESK : ಶ್ರೀ ನಾರಾಯಣ ಗುರುಗಳ ಬದಕು ಮತ್ತು ಬೋಧನೆ ಇಂದಿಗೂ ಪ್ರಸ್ತುತ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಹೇಳಿದರು. 7ನೇ ಹೊಸಕೋಟೆಯ ಬ್ರಹ್ಮಶ್ರೀ ನಾರಾಯಣಗುರು ಚಾರಿಟೇಬಲ್ ಟ್ರಸ್ಟ್ ಆವರಣದಲ್ಲಿ ಟ್ರಸ್ಟ್, ಎಸ್‍ಎನ್‍ಡಿಪಿ ಶಾಖೆಯ ಅಧ್ಯಕ್ಷರು ಹಾಗೂ ಸರ್ವಸದಸ್ಯರು, ವನಿತಾ ಸಮಿತಿ ಮತ್ತು ಯೂತ್ ಕಮಿಟಿ ಆಶ್ರಯದಲ್ಲಿ ಆಯೋಜಿಸಲಾದ ನಾರಾಯಣಗುರು ಜಯಂತಿ ಕಾರ್ಯಕ್ರಮದ ಸಮಾರೋಪದಲ್ಲಿ ಮಾತನಾಡಿದರು. ಕೆಲವು ಸಂದರ್ಭಗಳಲ್ಲಿ ನಾರಾಯಣ ಗುರುಗಳ ಹೋರಾಟ ಗುರಿ ಸೇರಿದೆಯೇ ಎಂಬುದರ ಬಗ್ಗೆ ಆತ್ಮಾವಲೋಕನ ಅಗತ್ಯ ಎಂದು ಅವರು ಹೇಳಿದರು. ಶಾಸಕರ ನಿಧಿಯಿಂದ ಗರಿಷ್ಠ 10 ಲಕ್ಷ ಅನುದಾನ ಒದಗಿಸುವ ಭರವಸೆ ನೀಡಿದರು. ರಾಜಕಾರಣಿಗಳು ತಮ್ಮ ಕಾರ್ಯಸಾಧನೆಗೆ ಜನರನ್ನು ಒಡೆದು ಆಳುವ ನೀತಿ ಅನುಸರಿಸುತ್ತಾರೆ. ಅದಕ್ಕೆ ಬಲಿಯಾಗದಿರಿ ಎಲ್ಲಾರೂ ಒಂದಾಗಿ ಒಗ್ಗಟಾಗಿ ಹೋಗೋಣ ಎಂದು ಅವರು ಕರೆ ನೀಡಿದರು. ಕೊಡಗು ಕಸಾಪ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಪ್ರಾಸ್ತಾವಿಕ ಮಾತನಾಡಿ, ಶಾಖೆಯು ಬೆಳೆದು ಬಂದ ಇತಿಹಾಸವನ್ನು ಮೆಲುಕುಹಾಕಿ ಮುಂದಿನ…
ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ(ಐಬಿಪಿಎಸ್) ದೇಶದಾದ್ಯಂತ 28 ಗ್ರಾಮೀಣ ಬ್ಯಾಂಕ್ ಗಳಲ್ಲಿ (ಆರ್‍ಆರ್ಬಿ) ಖಾಲಿಯಿರುವ 13,217 ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು ಆಫೀಸರ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ. ಇದರಲ್ಲಿ ರಾಜ್ಯದ ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ 1425 ಹುದ್ದೆಗಳ ಭರ್ತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ?: ಕರ್ನಾಟಕ ಬ್ಯಾಂಕ್ : ಎಸ್.ಸಿ(SC) -ಎಸ್.ಟಿ(ST) -ಒಬಿಸಿ (NCL)-EWS-ಸಾಮಾನ್ಯ-TOTA ಕರ್ನಾಟಕ ಗ್ರಾಮೀಣ ಬ್ಯಾಂಕ್ -128-56-216-80-320-800 ಕರ್ನಾಟಕ ಗ್ರಾಮೀಣ ಬ್ಯಾಂಕ್-75-37-135-50-203-500 ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್): ಆಫೀಸರ್ ಸ್ಕೇಲ್-II ಇದರೊಂದಿಗೆ ಆಫೀಸರ್ ಸ್ಟೇಲ್ -II ನಲ್ಲಿ ಜನರಲ್ ಬ್ಯಾಂಕಿಂಗ್ – 75, ಸಿಎ-1, ಕಾನೂನು ವಿಭಾಗ-5, ಐಟಿ-10 ಹಾಗೂ ಕೃಷಿ ವಿಭಾಗದಲ್ಲಿ 34 ಹುದ್ದೆಗಳನ್ನು ರಾಜ್ಯದ ಬ್ಯಾಂಕ್‍ಗೆ ಮೀಸಲಿಡಲಾಗಿದೆ. ಸೆಪ್ಟೆಂಬರ್ 1 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಸೆಪ್ಟೆಂಬರ್ 21 ಅರ್ಜಿ ಸಲ್ಲಿಕೆಗೆ ಕೊನೆ ದಿನವಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ವಯೋಮಿತಿ: ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್) ಹುದ್ದೆಗೆ…
ಮಡಿಕೇರಿ ಸೆ.9 NEWS DESK : ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ “ಗೃಹಲಕ್ಷ್ಮಿ” ಯೋಜಯು ಒಂದಾಗಿದ್ದು, ದಿನಾಂಕ:-06-06-2023ರ ಆದೇಶ ಹಾಗೂ ದಿನಾಂಕ:-17-07-2023ರ ಮಾರ್ಗಸೂಚಿ ಯಂತೆ ಅನುಷ್ಠಾನಗೊಳಿಸಲಾಗುತ್ತಿದೆ. ದಿನಾಂಕ:-17-07-2023 ರಂದು ಹೊರಡಿಸಿದ ಮಾರ್ಗಸೂಚಿ ಅನ್ವಯ ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಹಾಗೂ ಜಿ.ಎಸ್.ಟಿ. ರಿಟನ್ರ್ಸ್ ಸಲ್ಲಿಸುವವರಾಗಿದ್ದಲ್ಲಿ ಯೋಜನೆಗೆ ಅರ್ಹರಿರುವುದಿಲ್ಲ. ಈವರೆಗೆ ರಾಜ್ಯಾದ್ಯಾಂತ ಗೃಹಲಕ್ಷ್ಮಿ ಯೋಜನೆಯಡಿ 2.13 ಲಕ್ಷ ಫಲಾನುಭವಿಗಳು ಐಟಿ/ಜಿಎಸ್‍ಟಿ ವ್ಯಾಪ್ತಿಗೊಳಪಡುತ್ತಾರೆ ಎಂದು ತಿಳಿದು ಬಂದಿರುತ್ತದೆ. ದಿನಾಂಕ: 15-07-2025ರ ಎಂಪಿಐಸಿ ಸಭೆಯಲ್ಲಿ ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿ ಎಂದು ಸ್ಟೆಟಸ್ ತೋರಿಸುತ್ತಿರುವ ಫಲಾನುಭವಿಗಳು ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿ ಗೆ ಒಳಪಡುವುದರಿಂದ ಅರ್ಜಿ ಪರಿಗಣಿಸಲು ಬರುವುದಿಲ್ಲ. ಇನ್ನು ಮುಂದೆ ಗೃಹಲಕ್ಷ್ಮಿ ಯೋಜನೆಯಡಿ ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿ ಎಂದು ಸ್ಟೆಟಸ್ ತೋರಿಸುತ್ತಿರುವ ಫಲಾನುಭವಿಗಳ ಧನಸಹಾಯ ಪಾವತಿಗಾಗಿ ಮನವಿ ಸಲ್ಲಿಸಿದಲ್ಲಿ ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿಗಳಾಗಿರುವುದರಿಂದ ಅರ್ಜಿಯನ್ನು ಪರಿಗಣಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಸೋಮವಾರಪೇಟೆ…
ಮಡಿಕೇರಿ ಸೆ.8 NEWS DESK : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಸೆ.10 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಗೆಯವರೆಗೆ ಕುಶಾಲನಗರದ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಗಳನ್ನು ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ದೂರವಾಣಿ ಸಂಖ್ಯೆ. 08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಸಿದ್ದಾರೆ.






