ಲೇಖಕ: admin

ಮಡಿಕೇರಿ NEWS DESK ಅ.16 : ಪುತ್ತೂರಿನ ಮುಖ್ಯರಸ್ತೆಯ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಜಿ.ಎಲ್. ಸ್ವರ್ಣ ಹಬ್ಬ ತಾ.18.10.2025 ರಿಂದ 22.10.2025ರ ವರೆಗೆ ನಡೆಯಲಿದೆ. ಗ್ರಾಹಕರಿಗೆ ದೀಪಾವಳಿ ಹಬ್ಬದ ಈ ಸಂದರ್ಭದಲ್ಲಿ ಸ್ವರ್ಣ ಹಬ್ಬದ ಪ್ರಯುಕ್ತ ಆಕರ್ಷಕ ಕೊಡುಗೆಗಳನ್ನು ಸಂಸ್ಥೆಯು ಪ್ರಕಟಿಸಿದೆ. ವಜ್ರದ ಆಭರಣಗಳು, ಚಿನ್ನದ ಆಭರಣಗಳು ಹಾಗೂ ಬೆಳ್ಳಿಯ ಆಭರಣಗಳ ಅದ್ಭುತ ರಿಯಾಯಿತಿಗಳನ್ನು ನೀಡಲಾಗಿದೆ. ಷರತ್ತುಗಳ ಅನ್ವಯದೊಂದಿಗೆ ಚಿನ್ನಾಭರಣ ಖರೀದಿಗೆ ಪ್ರತಿ ಗ್ರಾಂಗೆ ರೂ. 400/ವರೆಗೆ ರಿಯಾಯಿತಿ, ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್‌ಗೆ ರೂ.7,000/- ವರೆಗೆ ರಿಯಾಯಿತಿ ಹಾಗೂ ಬೆಳ್ಳಿಯ ಆಭರಣಗಳ ಮೇಲೆ ಪ್ರತೀ ಕೆಜಿಗೆ ರೂ.3000/- ಫ್ಲ್ಯಾಟ್ ಡಿಸ್ಕೌಂಟ್ ನೀಡಲಾಗುವುದು. ರೂ.50,000 ಮೇಲ್ಪಟ್ಟ ಖರೀದಿಗೆ ಖಚಿತ ಉಡುಗೊರೆಯ ಕೂಪನ್ ಹಾಗೂ ಆಕರ್ಷಕ ಚಿನ್ನದ ನಾಣ್ಯ ಗೆಲ್ಲುವ ಸುವರ್ಣವಕಾಶವಿದೆ. 916 ಅಥವಾ ಬೇರೆ ಯಾವುದೇ ಶುದ್ಧತೆಯ ಆಭರಣವನ್ನು ವಿನಿಮಯ ಮಾಡಿಕೊಳ್ಳುವಾಗ, ಚಿನ್ನದ ದರ ಏರಿಕೆಯ ಲಾಭವನ್ನು ಪಡೆಯಿರಿ ಹಾಗೂ ಚಿನ್ನದ ಬೆಲೆ…

Read More

ನಾಪೋಕ್ಲು ಅ.18 NEWS DESK : ಕೂರ್ಗ್ ಹೋಟೇಲ್, ರೆಸಾರ್ಟ್ ಅಸೋಸಿಯೇಷನ್ ವತಿಯಿಂದ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛ ಕೊಡಗು – ಸುಂದರ ಕೊಡಗು ಹೆಸರಿನ ಸ್ವಚ್ಛತಾ ಅಭಿಯಾನಕ್ಕೆ ನಾಪೋಕ್ಲು ಪಟ್ಟಣದಲ್ಲಿ ಉತ್ತಮ ಸ್ಪಂದನೆ ದೊರೆಯಿತು. ಗ್ರಾಮ ಪಂಚಾಯಿತಿ ಹಾಗೂ ವರ್ತಕರ ಸಂಘ, ಸಹಕಾರ ಮಹಿಳಾ ಸಮಾಜದ ವತಿಯಿಂದ ಸ್ವಚ್ಚತಾ ಆಂದೋಲನ ಕೈಗೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವನಜಾಕ್ಷಿ, ವರ್ತಕರ ಸಂಘದ ಅಧ್ಯಕ್ಷ ಮಾಚೆಟ್ಟಿರ ಕುಸು ಕುಶಾಲಪ್ಪ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಚೊಂದಕ್ಕಿ, ಸಹಕಾರ ಮಹಿಳಾ ಸಮಾಜದ ಅಧ್ಯಕ್ಷ ಕುಚ್ಚೇಟಿರ ರೇಷ್ಮಾ ಉತ್ತಪ್ಪ, ಲಯನ್ ಮಾಜಿ ಅಧ್ಯಕ್ಷ ಬಿದ್ದಾಟಂಡ ಮೇರಿ ಚಿಟ್ಟಿಯಪ್ಪ, ಪಂಚಾಯತಿ ಸದಸ್ಯರು, ಸಿಬ್ಬಂದಿಗಳು ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ. 

Read More

ನಾಪೋಕ್ಲು ಅ.16 NEWS DESK : ಕೊಡಗಿನ ಗಡಿಭಾಗ ಸಂಪಾಜೆ ಗ್ರಾಮ ಪಂಚಾಯಿತಿಯ ಕೊಯನಾಡಿನ ಗ್ರಾಮದ ತೋಟಕ್ಕೆ ಕಾಡಾನೆಗಳು ದಾಳಿ ನಡೆಸಿ ಕೃಷಿ ಫಸಲನ್ನು ನಾಶ ಪಡಿಸಿದೆ. ಕೊಯನಾಡಿನ ಕೇನಾಜೆ ಉಲ್ಲಾಸ ಅವರ ತೋಟಕ್ಕೆ ಕಾಡಾನೆಗಳು ದಾಳಿ ನಡೆಸಿ ಕೃಷಿ ಗಿಡಗಳನ್ನು ತಿಂದು ತುಳಿದು ನಾಶ ಮಾಡಿದೆ. ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ಕಾಡಾನೆಗಳ ಹಿಂಡು ತೋಟಕ್ಕೆ ಲಗ್ಗೆ ಇಟ್ಟು ತೆಂಗು, ಅಡಕೆ, ಬಾಳೆ ಸೇರಿದಂತೆ ಕೃಷಿ ಗಿಡಗಳನ್ನು ಧ್ವಂಸಗೊಳಿಸಿದೆ. ಕಾಡಾನೆಗಳ ನಿರಂತರ ದಾಳಿಯಿಂದ ಕೃಷಿಕರು ಸಂಕಷ್ಟಕ್ಕೆ ಒಳಗಾಗಿದ್ದು, ತಕ್ಷಣವೆ ಸಂಬಂಧಪಟ್ಟ ಇಲಾಖೆ ಹಾಗೂ ಸರಕಾರ ಸೂಕ್ತ ಪರಿಹಾರವನ್ನು ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ವರದಿ : ದುಗ್ಗಳ ಸದಾನಂದ. 

Read More

ಮೂರ್ನಾಡು ಅ.16 NEWS DESK : ಗಜಾನನ ಯುವಕ ಸಂಘದ ವತಿಯಿಂದ ಅ.18 ರಂದು ಕಾವೇರಿ ತೀರ್ಥವನ್ನು ಮೂರ್ನಾಡಿನ ಪಟ್ಟಣದಲ್ಲಿ ವಿತರಣೆ ಮಾಡುವ ಸೇವಾ ಕಾರ್ಯವನ್ನು ಕೈಗೊಂಡಿದ್ದಾರೆ. ಸಂಘದ ವತಿಯಿಂದ 18 ರಂದು ಬೆಳಿಗ್ಗೆ 7 ಗಂಟೆಗೆ ಮೂರ್ನಾಡು ಅಯ್ಯಪ್ಪ ದೇವಸ್ಥಾನದಿಂದ ಕಾವೇರಿ ತೀರ್ಥ ವಿತರಣೆಯನ್ನು ಪ್ರಾರಂಭ ಮಾಡಲಾಗುವುದು ಎಂದು ಸಂಘದ ಅಧ್ಯಕ್ಷ ಕೊಟ್ಟಂಗಡ ನವೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರದಿ : ಟಿ.ಸಿ. ನಾಗರಾಜ್, ಮೂರ್ನಾಡು 

Read More

ಸುಂಟಿಕೊಪ್ಪ ಅ.15 NEWS DESK : ಸ್ವಚ್ಛ ಕೊಡಗು – ಸುಂದರ ಕೊಡಗು” ಅಭಿಯಾನದ ಅಂಗವಾಗಿ ಸುಂಟಿಕೊಪ್ಪದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ಗದ್ದೆಹಳ್ಳ ಮಹಾತ್ಮಗಾಂಧಿ ವೃತ್ತದಿಂದ ಆರಂಭಿಸಿ ಸುಂಟಿಕೊಪ್ಪದ ಅಯ್ಯಪ್ಪ ದೇವಸ್ಥಾನದವರೆಗೆ ಸ್ವಚ್ಛತೆಯನ್ನು ನಡೆಸುವ ಮೂಲಕ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್, ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಹಾಗೂ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ದಿನೇಶ್ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು. ಸುಂಟಿಕೊಪ್ಪ ಗ್ರಾಮ ಪಂಚಾಯಿತಿ, ಹೋಟೆಲ್ ಮಾಲೀಕರ ಹಾಗೂ ಹೊಂಸ್ಟೇ ಮಾಲೀಕರ ಸಂಘದ ವತಿಯಿಂದ “ಸ್ವಚ್ಛ ಕೊಡಗು-ಸುಂದರ ಕೊಡಗು” ಅಭಿಯಾನಕ್ಕೆ ಗದ್ದೆಹಳ್ಳದಲ್ಲಿ ಚಾಲನೆ ನೀಡುವ ಮೂಲಕ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಬಿದ್ದಿರುವ ಸಾಕಷ್ಟು ಪ್ರಮಾಣದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ, ಕಸಕಡ್ಡಿಗಳು ಸೇರಿದಂತೆ ಇತರೆ ತ್ಯಾಜ್ಯಗಳನ್ನು ಹೆಕ್ಕಿ ಟ್ರಾಕ್ಟರ್ ವಾಹನಗಳಲ್ಲಿ ತುಂಬಿಸಿ ಕಸ ವಿಲೇವಾರಿ ಘಟಕದಲ್ಲಿ ವಿಲೇವಾರಿಗೊಳಿಸಲಾಯಿತು. ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಎ. ಶಬೀರ್, ಹೆಚ್.ಯು.ರಫೀಕ್ ಖಾನ್, ಕೆ.ಎಂ.ಆಲಿಕುಟ್ಟಿ, ಎಂ.ಎಸ್.ಜಿನಾಷುದ್ಧೀನ್, ಮಾಜಿ ಅಧ್ಯಕ್ಷ ಕೆ.ಇ. ಕರೀಂ, ಮಾಜಿ ಉಪಾಧ್ಯಕ್ಷ ಪಿ.ಆರ್.ಸುಕುಮಾರ್, ಮಾಜಿ ಸದಸ್ಯ…

Read More

ಮಡಿಕೇರಿ ಅ.16 NEWS DESK : ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ಶಿಕ್ಷಕರ ಸಮಸ್ಯೆ ಕುರಿತು ವಿಧಾನ ಸೌಧ ಕಚೇರಿಯಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ ನಡೆಸಿದರು. ಈ ಸಂದರ್ಭ ಬುಡಕಟ್ಟು ವಸತಿ ಶಾಲೆಯ ಶಿಕ್ಷಕರು ಪರಿಶಿಷ್ಟ ವರ್ಗಗಳ ಅಧೀನದಲ್ಲಿ ಇರುವ ಮಹರ್ಷಿ ವಾಲ್ಮೀಕಿ ಆದಿವಾಸ ಬುಡಕಟ್ಟು ವಸತಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ ಹತ್ತು ವರ್ಷಕ್ಕೂ ಮೇಲ್ಪಟ್ಟು ಸೇವಾ ಸಲ್ಲಿಸುತ್ತಿರುವ ಶಿಕ್ಷಕರನ್ನು ಸಕ್ರಮಗೊಳಿಸುವುದು. ಅರ್ಜಿ ಸಮಿತಿಯ ತೀರ್ಮಾನದಂತೆ ನೇರ ನೇಮಕಾತಿ/ ಸೇವಾ ಭದ್ರತೆ ಒದಗಿಸುವುದು ಹಾಗೂ ಖಿ.ಇ.ಖಿ ಯಿಂದ ವಿನಾಯಿತಿ ಒದಗಿಸುವುದು. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಪ್ರಾಂಶುಪಾಲರ ಮತ್ತು ಶಿಕ್ಷಕರ ಸೇವೆಯನ್ನು ವಿಲೀನ ಗೊಳಿಸಿರುವ ರೀತಿ ಇವರನ್ನು ಸಹ ವಿಲೀನಗೊಳಿಸುವುದು. ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಸಂಘ ರಚನೆಯಾಗಿರುವಂತೆ ರಾಜ್ಯದ 119 ವಾಲ್ಮೀಕಿ ಆಶ್ರಮ ಶಾಲೆಗಳಿಗೆ ಸಂಘ ರಚಿಸಿ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ…

Read More

ಮಡಿಕೇರಿ ಅ.16 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ  ವಿಧಾನ ಸೌಧ ಕಚೇರಿಯಲ್ಲಿ ಪರಿಶಿಷ್ಟ ಪಂಗಡ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಯಿತು. ವಿರಾಜಪೇಟೆ ಕ್ಷೇತ್ರದ ಪರಿಶಿಷ್ಟ ಪಂಗಡದ ಅಭಿವೃದ್ಧಿ ಮತ್ತು ಮೂಲಸೌಲಭ್ಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಪ್ರಮುಖ ಬೇಡಿಕೆಗಳಾದ ಕೊಡಗು ಜಿಲ್ಲೆಯ ಕಾಫಿ ತೋಟಗಳ ಲೈನ್ ಮನೆಗಳಲ್ಲಿ ವಾಸವಾಗಿರುವ ಪರಿಶೀಷ್ಟ ಪಂಗಡದ ಜನಾಂಗದವರಿಗೆ ನಿವೇಶನಗಳನ್ನು ಒದಗಿಸಲು ಕಾಯ್ದಿರಿಸಿರುವ ಜಾಗದಲ್ಲಿ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ, ಕೊಡಗು ಜಿಲ್ಲೆಯ ತೆರಾಲು ಗ್ರಾಮದ 20.00ಎಕರೆ ಹಾಗೂ ಬಿರುನಾಣಿ ಗ್ರಾಮದ 7.00ಎಕರೆ ಬದಲಾಗಿ ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಹೋಬಳಿ, ಬಿರುನಾಣಿ ಗ್ರಾಮದ ಸರ್ವೆ ನಂ:22/2ರಲ್ಲಿ 12.00ಹಾಗೂ 7.00 ಒಟ್ಟು 19.00ಎಕರೆ ವಿಸ್ತರ್ಣದ ಜಾಗದಲ್ಲಿ ಬಡಾವಣೆ ನಿರ್ಮಿಸಲು ತಿದ್ದುಪಡಿ ಆದೇಶ, ಕೊಡವ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕೊಡವ ಸಮುದಾಯದ ಕುಲಶಾಸ್ತ್ರೀಯ ಅಧ್ಯಯನ ಬಗ್ಗೆ ಸಂಬಂಧಿಸಿದ ಕಡತ ಸಂಖ್ಯೆ ಸಕಅ/74/ಎಸ್ಎಡಿ/2022 ಕಂಪ್ಯೂಟರ್ ನಂ.…

Read More

ಮಡಿಕೇರಿ NEWS DESK ಅ.16 : ನೂತನವಾಗಿ ಆಯ್ಕೆಯಾದ ಬೆಂಗಳೂರು ಕೊಡವ ಸಮಾಜದ ಆಡಳಿತ ಮಂಡಳಿಯ ನಿಯೋಗ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರನ್ನು ಭೇಟಿ ಮಾಡಿತು. ಕೊಡವ ಸಮಾಜದ ಮುಂದಿನ ಕಾರ್ಯ ಚಟುವಟಿಕೆಗಳ ಕುರಿತು ವಿವರಿಸಿದ ಪ್ರಮುಖರು ಅಗತ್ಯ ಸಹಕಾರವನ್ನು ಕೋರಿದರು. ಬೆಂಗಳೂರು ಕೊಡವ ಸಮಾಜದ ನೂತನ ಅಧ್ಯಕ್ಷ ಚಿರಿಯಪಂಡ ಸುರೇಶ್ ನಂಜಪ್ಪ ಅವರ ನೇತೃತ್ವದಲ್ಲಿ ಭೇಟಿಯಾದ ಪದಾಧಿಕಾರಿಗಳು ಸಂಸದರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿತು.

Read More

ಮಡಿಕೇರಿ NEWS DESK ಅ.16 : ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಗೋವುಗಳ ಕಳ್ಳತನ, ಅಕ್ರಮ ಗೋಸಾಗಾಟ, ಗೋಹತ್ಯೆ ಮತ್ತು ಗೋಮಾಂಸ ಮಾರಾಟದ ಪ್ರಕರಣಗಳನ್ನು ಮಟ್ಟ ಹಾಕಲು ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಅ.17 ರಂದು ಸೋಮವಾರಪೇಟೆಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ವೇದಿಕೆಯ ಕೊಡಗು ಜಿಲ್ಲಾ ಸಂಯೋಜಕ ರಂಜನ್ ಬೋಜೇಗೌಡ ತಿಳಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಸೋಮವಾರಪೇಟೆ ಪೋಲೀಸ್ ಠಾಣೆಯ ಎದುರು ಸಮಸ್ತ ಹಿಂದೂ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ಇತ್ತೀಚೆಗೆ ಸೋಮವಾರಪೇಟೆ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಗೋಸಾಗಾಟ ಮಾಡಿದ ಆರೋಪಿಗಳನ್ನು ಇಲ್ಲಿಯವರೆಗೆ ಬಂಧಿಸದೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದ್ದಾರೆ.

Read More

ಮಡಿಕೇರಿ NEWS DESK ಅ.15 : ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ.ಗಣೇಶ್ ರೈ ಅವರು ರಚಿಸಿರುವ ಶ್ರೀ ಕಾವೇರಿ ಮಾತೆಯ ಪುಣ್ಯಪ್ರದವಾದ ಪುರಾಣ ಚಿತ್ರಕಥೆ ಪುಸ್ತಕ ಮತ್ತು ಚಿತ್ರಪಟ ಕಾವೇರಿ ನದಿಯ ಉಗಮಸ್ಥಾನ ಪವಿತ್ರ ಕ್ಷೇತ್ರ ತಲಕಾವೇರಿಯ ಸನ್ನಿಧಿಯಲ್ಲಿ ಪೂಜಾವಿಧಿ ವಿಧಾನಗಳೊಂದಿಗೆ ಲೋಕಾರ್ಪಣೆಗೊಂಡಿತು. ಮಡಿಕೇರಿ ಐಶ್ವರ್ಯ ಕ್ರಿಯೇಶನ್ಸ್ ನ ದ್ವಿತೀಯ ಪ್ರಕಟಣೆಯಾಗಿರುವ ಶ್ರೀ ಕಾವೇರಿ ಮಾತೆಯ ಪುಣ್ಯಪ್ರದವಾದ ಪುರಾಣ ಚಿತ್ರಕಥೆ ಪುಸ್ತಕ 1995 ರಲ್ಲಿ ಕನ್ನಡ, ಕೊಡವ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಬಿಡುಗಡೆಯಾಗಿತ್ತು. ಜಲವರ್ಣ ಕಲಾಕೃತಿಯೊಂದಿಗೆ ನಿರ್ಮಾಣವಾಗಿದ್ದ ಚಿತ್ರಕಥೆ ಪುಸ್ತಕ ಇದೀಗ ದ್ವಿತೀಯ ಮುದ್ರಣ ಹಾಗೂ ಪ್ರಕಟಣೆ ನವ್ಯ ತಂತ್ರಜ್ಞಾನದೊAದಿಗೆ ಡಿಜಿಟಲ್ ಗ್ರಾಫಿಕ್ಸ್ ನಲ್ಲಿ ಅತ್ಯಂತ ಸುಂದರವಾಗಿ ಮೂಡಿಬಂದಿದೆ. ಈ ಬಾರಿ ಕನ್ನಡ, ಅರೆಭಾಷೆ, ಇಂಗ್ಲೀಷ್ ಮತ್ತು ತಮಿಳು ಭಾಷೆಯಲ್ಲಿ ಮುದ್ರಣವಾಗಿರುವುದು ವಿಶೇಷ. ವಿವಿಧ ಭಾಷಿಕರಿಗೆ ಹಾಗೂ ಮಕ್ಕಳಿಂದ, ವಯೋವೃದ್ಧರವರೆಗೂ ಶ್ರೀ ಕಾವೇರಿ ಮಾತೆಯ ಪುರಾಣ ಚಿತ್ರಕಥೆ ಅತ್ಯಂತ ಸರಳವಾಗಿ ತಿಳಿದುಕೊಳ್ಳುವಂತಾಗಿದೆ. 2025ರ ಮಹಾಶಿವರಾತ್ರಿಯಂದು ಕಾವೇರಿಮಾತೆಯ ಶ್ಲೋಕವನ್ನು ಆಧರಿಸಿ ಬಿ.ಕೆ.ಗಣೇಶ್ ರೈ…

Read More