ಲೇಖಕ: admin

ಕುಶಾಲನಗರ ಅ.15 NEWS DESK :  ಕುಶಾಲನಗರ ಮೂಕಾಂಬಿಕಾ ಪದವಿ ಪೂರ್ವ ಕಾಲೇಜಿನ 2025-26ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ಬಾಲಕರ ತಂಡ ಕಬಡ್ಡಿ ವಿಭಾಗದಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಕೆ.ಪಿ.ಚಂದ್ರಕಲ, ಪ್ರಾಂಶುಪಾಲರಾದ ಬಿ.ಎಸ್.ಪ್ರಸನ್ನ, ದೈಹಿಕ ಶಿಕ್ಷಣ ಶಿಕ್ಷಕ ಮತ್ತು ಮುಖ್ಯೋಪಾಧ್ಯಾಯರಾದ ಡಿ.ಕೆ.ಸುರೇಶ್ ಹಾಗೂ ಉಪನ್ಯಾಸಕರು ವಿಜೇತ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

Read More

ಮಡಿಕೇರಿ ಅ.15 NEWS DESK : ಸ್ವಚ್ಛ ಕೊಡಗು ಸುಂದರ ಕೊಡಗು ಅಭಿಯಾನದ ಅಂಗವಾಗಿ ಕೊಡಗಿನಾದ್ಯಂತ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಅದರಂತೆ ಚೆಟ್ಟಳ್ಳಿಯಲ್ಲಿ ಮಹಿಳೆಯರ ಅವರ್ ಕ್ಲಬ್, ಸ್ಪೋಡ್ಸ್ ಕ್ಲಬ್, ವಿನಾಯಕ ರಿಕ್ರಿಏಷನ್ ಕ್ಲಬ್ ಹಾಗೂ ಚೆಟ್ಟಳ್ಳಿ ಕೊಡವ ಸಮಾಜದ ವತಿಯಿಂದ ಸ್ಪಚ್ಚತಾ ಕಾರ್ಯ ನಡೆಸಲಾಯಿತು. ರಸ್ತೆಯ ಎರಡು ಬದಿಗಳಲ್ಲಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಸ್ವಚ್ಛಗೊಳಿಸಿದರು.

Read More

ಮಡಿಕೇರಿ NEWS DESK  ಅ.14 : ರಾಜ್ಯ ಸರಕಾರ ನಡೆಸಿದ ಜಾತಿ ಜನಗಣತಿಯ ಸಂದರ್ಭ ಕೊಡವರು ಮೂರೂ ಕಾಲಂಗಳಲ್ಲಿ ‘ಕೊಡವ’ ಎಂದು ನಮೂದಿಸುವ ಮೂಲಕ ಉತ್ಸಾಹ ಮೆರೆದಿದ್ದಾರೆ. 2026-27ರ ರಾಷ್ಟ್ರೀಯ ಜನಗಣತಿಯಲ್ಲೂ ಕೊಡವರಿಂದ ಇದೇ ಉತ್ಸಾಹ ಮುಂದುವರೆಯಲಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡವರ ಸಮಗ್ರ ಸಬಲೀಕರಣಕ್ಕಾಗಿ ಜನಗಣತಿ ಸಂದರ್ಭ ‘ಕೊಡವ’ ಎಂದು ನಮೂದಿಸುವಂತೆ ಸಿಎನ್‌ಸಿ ಕರೆ ನೀಡಿತ್ತು. ಈ ಕರೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿ ‘ಕೊಡವ’ ಎಂದೇ ಗುರುತಿಸಿಕೊಂಡ ಸರ್ವ ಕೊಡವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. 2026-27ರ ರಾಷ್ಟ್ರೀಯ ಜನಗಣತಿಯ ಸಂದರ್ಭವೂ ಕೊಡವ ಸಮುದಾಯ ಜಾಗೃತಗೊಂಡು ಇದೇ ರೀತಿಯ ಬದ್ಧತೆಯನ್ನು ಪ್ರದರ್ಶಿಸಿ ‘ಕೊಡವ’ ಎಂದು ದಾಖಲಿಸುವ ಮೂಲಕ ಒಗ್ಗಟ್ಟನ್ನು ತೋರ್ಪಡಿಸಬೇಕೆಂದು ಮನವಿ ಮಾಡಿದ್ದಾರೆ. ಪ್ರಸ್ತುತ ಎರವಲು ಪಡೆದ ಸಂಸ್ಕೃತಿಯನ್ನು ತ್ಯಜಿಸಬೇಕು ಅಥವಾ ಆಮದು ಮಾಡಿಕೊಂಡ ದೇವತೆಗಳನ್ನು ಬಿಡಬೇಕು ಎಂದು ಸಿಎನ್‌ಸಿ ಕರೆ ನೀಡುತ್ತಿಲ್ಲ. ಸನಾತನ ದೇವಾಲಯಗಳು,…

Read More

ಮಡಿಕೇರಿ ಅ.14 NEWS DESK : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇಮಕಾತಿಯ ಪರಿಸ್ಕೃತ ಮಾರ್ಗಸೂಚಿಯಂತೆ ಜಿಲ್ಲಾಧಿಕಾರಿ ಅವರ ಅನುಮೋದನೆಯಂತೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನಲ್ಲಿ ಖಾಲಿ ಇರುವ 15 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ಹಾಗೂ 63 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್‍ಲೈನ್ ವೆಬ್‍ಸೈಟ್ ವಿಳಾಸ https://karnemakaone.kar.nic.in/abcd/ ನಲ್ಲಿ ಆನ್‍ಲೈನ್ ಮುಖಾಂತರ ಅರ್ಹ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್, 13 ರ ಸಂಜೆ 5.30 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. (ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಸೋಮವಾರಪೇಟೆ ಕಚೇರಿ ದೂರವಾಣಿ ಸಂಖ್ಯೆ 08276-200023 ಅಥವಾ 08276-282281 ಕ್ಕೆ ಕಚೇರಿ ಸಮಯದಲ್ಲಿ ಸಂಪರ್ಕಿಸುವುದು. ಅರ್ಜಿ ಸಲ್ಲಿಸಲು 4 ಹಂತಗಳಿದ್ದು ಅಪೂರ್ಣ ಮಾಹಿತಿಯನ್ನೊಳಗೊಂಡ ಅರ್ಜಿಯನ್ನು ತಿರಸ್ಕರಿಸಲಾಗುವುದು. ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಆನ್‍ಲೈನ್ ನಲ್ಲಿ ಸಲ್ಲಿಸಿದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುವುದು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ…

Read More

ಗೋಣಿಕೊಪ್ಪ ಅ.14 NEWS DESK : ಪೊನ್ನಂಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಪ್ರತಿನಿಧಿ ಪತ್ರಿಕೆ ಜಿಲ್ಲಾ ವರದಿಗಾರ ಸಣ್ಣುವಂಡ ಕಿಶೋರ್ ನಾಚಪ್ಪ ಅವಿರೋಧ ಪುನರಾಯ್ಕೆಯಾದರು.  ಕೊಡಗು ಹಿಂದು ಮಲಯಾಳಿ ಸಮಾಜ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ಮಚ್ಚಮಾಡ ಅನೀಶ್ ಮಾದಪ್ಪ, ಪ್ರಧಾನ ಕಾರ್ಯದರ್ಶಿ ಎನ್. ಎನ್. ದಿನೇಶ್, ಖಜಾಂಚಿಯಾಗಿ ವಿ. ವಿ. ಅರುಣ್ ಕುಮಾರ್, ಕಾರ್ಯದರ್ಶಿ ಮಂಡೇಡ ಎಸ್. ಅಶೋಕ್, ನಿರ್ದೇಶಕರಾಗಿ ಅಣ್ಣೀರ ಹರೀಶ್ ಮಾದಪ್ಪ, ಚಿಮ್ಮಣಮಾಡ ದರ್ಶನ್ ದೇವಯ್ಯ ಅವಿರೋಧವಾಗಿ ಆಯ್ಕೆಯಾಗಿದರು. ಚುನಾವಣಾ ಅಧಿಕಾರಿಯಾಗಿ ಗೋಣಿಕೊಪ್ಪ ಗ್ರಾಮಾಂತರ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿ. ಕೆ. ಪ್ರತಾಪ್, ಸಹಾಯಕ ಚುನಾವಣಾಧಿಕಾರಿಯಾಗಿ ಸಿಇಒ, ಬಿ. ಇ. ಕಿರಣ್ ಕಾರ್ಯನಿರ್ವಹಿಸಿದರು. ವೀಕ್ಷಕರಾಗಿ ಸುನಿಲ್ ಪೊನ್ನೇಟಿ ಕಾರ್ಯನಿರ್ವಹಿಸಿದರು. ಚುನಾಯಿತರಿಗೆ ಪ್ರಮಾಣ ಪತ್ರ ವಿತರಿಸಿ ಶುಭಕೋರಲಾಯಿತು.

Read More

ಮಡಿಕೇರಿ ಅ.14 NEWS DESK : ಭಾರತ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಬ್ರಿಜೇಶ್ ಕುಮಾರ್ ಹಾಗೂ ಸಹಾಯಕ ಸೆಕ್ಷನ್ ಅಧಿಕಾರಿ ಮನೀಶ್ ಕುಮಾರ್ ಅವರು ನಗರದ ಚುನಾವಣಾ ಶಾಖೆ ಹಾಗೂ ಜಿಲ್ಲೆಯ ತಾಲ್ಲೂಕುಗಳಲ್ಲಿರುವ ಚುನಾವಣಾ ಶಾಖೆಗಳಿಗೆ ಭೇಟಿ ನೀಡಿ ವೀಕ್ಷಿಸಿದರು. ಬಳಿಕ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಬಿಎಲ್‍ಒಗಳು ಜೊತೆ ಚುನಾವಣೆ ಸಂಬಂಧಿಸಿದಂತೆ ಹಲವು ಮಾಹಿತಿ ಪಡೆದರು. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಆರಂಭವಾಗಲಿದ್ದು, ಬಿಎಲ್‍ಒ ನಮೂನೆ-6, 7 ಮತ್ತು 8 ರ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಿ ಮತದಾರರ ಗುರುತಿನ ಚೀಟಿಯ ಮಹ್ವತದ ಬಗ್ಗೆ ಮಾಹಿತಿ ನೀಡುವಂತಾಗಬೇಕು ಎಂದು ಸೂಚಿಸಿದರು. 18 ವರ್ಷ ಮೇಲ್ಪಟ್ಟ ಎಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿ ಮತದಾರರ ಗುರುತಿನ ಚೀಟಿ ಪಡೆಯುವಂತಾಗಬೇಕು. ಆ ನಿಟ್ಟಿನಲ್ಲಿ ಬಿಎಲ್‍ಒಗಳು ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದರು. ಅರ್ಹರೆಲ್ಲರೂ ಮತದಾರರ ಗುರುತಿನ ಚೀಟಿ ಪಡೆಯುವುದರ ಜೊತೆಗೆ, ಯಾರಾದರೂ ನಿಧನ ಹೊಂದಿದ್ದಲ್ಲಿ ಮತದಾರರ ಪಟ್ಟಿಯಿಂದ ಹೆಸರು…

Read More

ಮಡಿಕೇರಿ ಅ.14 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ, ಕೂರ್ಗ್ ಹೋಟೇಲ್, ರೆಸಾರ್ಟ್ ಅಸೋಸಿಯೇಷನ್, ರೋಟರಿ ಲಯನ್ಸ್, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ಹಾಗೂ ಇತ್ಯಾದಿ ಸಂಸ್ಥೆಗಳೊಂದಿಗೆ ಅ.15ರಂದು ನಡೆಯುವ  ‘ಸ್ವಚ್ಛ ಕೊಡಗು ಸುಂದರ ಕೊಡಗು’ ಅಭಿಯಾನದಲ್ಲಿ ಫೀ.ಮಾ.ಕಾರ್ಯಪ್ಪ ಕಾಲೇಜಿನ  ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ಎಲ್ಲಾ ವಿದ್ಯಾರ್ಥಿಗಳು, ಎನ್‌ಸಿಸಿ, ಎನ್‌ಎಸ್‌ಎಸ್, ಸ್ಫೋರ್ಟ್ಸ್ ಮತ್ತು ಇಸಿ/ಸಿಸಿ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಕಾಲೇಜಿನ  ಪ್ರಾಂಶುಪಾಲರಾದ ಮೇಜರ್ ಪ್ರೊ.ಬಿ.ರಾಘವ ತಿಳಿಸಿದ್ದಾರೆ.

Read More

ಮಡಿಕೇರಿ ಅ.14 NEWS DESK : ಕೂರ್ಗ್ ಹೊಟೇಲ್, ರೆಸಾರ್ಟ್ ಅಸೋಸಿಯೇಷನ್ ನೇತೃತ್ವದಲ್ಲಿ ಕೊಡಗು ಜಿಲ್ಲಾಡಳಿತ, ಕೊಡಗು ಜಿಲ್ಲಾ ಪಂಚಾಯತ್, ಕೊಡಗು ಚೇಂಬರ್ ಆಫ್ ಕಾಮರ್ಸ್, ಕೊಡಗು ಹೋಂಸ್ಟೇ ಅಸೋಸಿಯೇಷನ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಅ.15ರಂದು ನಡೆಯುವ ‘ಸ್ವಚ್ಛ ಕೊಡಗು ಸುಂದರ ಕೊಡಗು’ ಅಭಿಯಾನದಲ್ಲಿ ಕೊಡಗು ಕಲಾವಿದರ ಸಂಘ ಪಾಲ್ಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ತಿಳಿಸಿದ್ದಾರೆ. ಕೊಡಗು ಕಲಾವಿದರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಬುಧವಾರ ನಡೆಯುವ ಅಭಿಯಾನದಲ್ಲಿ ತಾವಿರುವ ಪ್ರದೇಶದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಪ್ರಕೃತಿ ಸೌಂದರ್ಯದ ಕಾವೇರಿನಾಡು ಕೊಡಗು ದಕ್ಷಿಣ ಕಾಶ್ಮೀರವೆಂದೇ ಖ್ಯಾತಿ ಗಳಿಸಿದೆ. ಇಲ್ಲಿನ ಸುಂದರ ಪರಿಸರ ದೇಶ ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ. ಈ ಹಸಿರ ಪ್ರಕೃತಿಯ ಸೊಬಗನ್ನು ಉಳಿಸಿಕೊಳ್ಳಲು ಮತ್ತು ಸಂರಕ್ಷಿಸಲು ಸ್ವಚ್ಛತೆಗೆ ಆದ್ಯತೆ ನೀಡುವ ಅಗತ್ಯವಿದೆ. ಸ್ವಚ್ಛತೆಯಿಂದ ಮಾತ್ರ ಕಾವೇರಿಯ ತವರೂರು ಕೊಡಗು ಸುಂದರವಾಗಿರಲು ಸಾಧ್ಯ. ಆದ್ದರಿಂದ ಸ್ವಚ್ಛತಾ…

Read More

ಬೆಂಗಳೂರು ಅ.14 NEWS DESK : ನಮ್ಮ ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು, ಎಲ್ಲರ ನೆಮ್ಮದಿಯ ಉದ್ಯಾನವಾಗಬೇಕು. ಜನರಲ್ಲಿ ಪರಸ್ಪರ ಪ್ರೀತಿಯಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ದಾಸೋಹ ರತ್ನ ಚಕ್ರವರ್ತಿ ದಾನೇಶ್ವರರರು ಶ್ರೀ ಬಸವ ಗೋಪಾಲ ನೀಲಮಾಣಿಕ ಮಠ ಇವರ ನೇತೃತ್ವದಲ್ಲಿ ರಬಕವಿ ಬನಹಟ್ಟಿಯ ಸುಕ್ಷೇತ್ರ ಬಂಡಿಗಾಣಿ ಮಠದಲ್ಲಿ ಆಯೋಜಿಸಲಾಗಿದ್ದ “ವಿಶ್ವಶಾಂತಿಗಾಗಿ ಸರ್ವಧರ್ಮ ಮಹಾಸಂಗಮ 2025” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸರ್ವ ಧರ್ಮ ಮಹಾಸಂಗಮ ನಡೆಯುತ್ತಿರುವುದು ಇಂದಿನ ಪರಿಸ್ಥಿತಿಯಲ್ಲಿ ಸಮಂಜಸವಾಗಿದೆ. ದೇಶದಲ್ಲಿ ಹಾಗೂ ಜಗತ್ತಿನಲ್ಲಿ ಅನೇಕ ಧರ್ಮ, ಜಾತಿಗಳಿವೆ. ಜಾತಿ ಧರ್ಮಗಳನ್ನು ನಾವು ಮಾಡಿಲ್ಲ, ಮೊದಲಿನಿಂದ ನಮ್ಮಲ್ಲಿ ಬೆಳೆದುಕೊಂಡು ಬಂದಿದೆ. ನಾವು ಯಾವುದೇ ಧರ್ಮ, ಜಾತಿಗೆ ಸೇರಿದ್ದರೂ ಬೇರೆ ಜಾತಿಯವರನ್ನು ಪ್ರೀತಿಸಬೇಕೇ ಹೊರತು ದ್ವೇಷಿಸಬಾರದು. ಯಾವುದೇ ಜಾತಿ, ಧರ್ಮಕ್ಕೆ ಸೇರಿದ್ದರೂ ನಾವು ಮನುಷ್ಯರು ಎನ್ನುವುದನ್ನು ಅರ್ಥಮಾಡಿಕೊಳ್ಳಬೇಕು ಎಂದರು. ಖಾಯಿಲೆ ಬಂದರೆ ಶರೀರಕ್ಕೆ ಯಾರ ರಕ್ತವಾದರೂ ಕೊಡಿ, ಪ್ರಾಣ ಉಳಿದರೆ ಸಾಕು ಎನ್ನುತ್ತೇವೆ. ಇಂಥವರದ್ದೇ ರಕ್ತ ಕೊಡಿ ಎಂದು…

Read More

ಮಡಿಕೇರಿ ಅ.14 NEWS DESK : ಸಾಹಿತ್ಯದ ಮೂಲಕ ಎಲ್ಲೆಯನ್ನು ಮೀರಬಹುದು ಮತ್ತು ವಿಶ್ವದ ಅನೇಕ ಸಾಹಿತ್ಯಗಳ ಪರಿಚಯ ನಮಗಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಸಾಹಿತ್ಯದ ಬಗ್ಗೆ ಹೆಚ್ಚಿನ ಅಭಿರುಚಿಯನ್ನು ರೂಡಿಸಿಕೊಳ್ಳಬೇಕು ಎಂದು ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ದೀಪಾ ಭಾಸ್ತಿ  ಅವರು ಹೇಳಿದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಆಂಗ್ಲಮಾಧ್ಯಮ ವಿಭಾಗದ ವತಿಯಿಂದ ಕಾಲೇಜಿನ ವಿಚಾರ ಸಂಕಿರಣ ಸಭಾಂಗಣದಲ್ಲಿ ನಡೆದ ಆಂಗ್ಲ ವಿಭಾಗದ “ಜಾಯ್ಸ್” ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ.ಬಿ.ರಾಘವ ಅವರು, ಆಂಗ್ಲ ಐಚ್ಚಿಕ ವಿದ್ಯಾರ್ಥಿಗಳು ಸಾಹಿತ್ಯದ ಬಗ್ಗೆ ಹೆಚ್ಚಿನ ಒಲವು ಹೊಂದಿರಬೇಕು ಮತ್ತು ವಿವಿಧ ಸಾಹಿತ್ಯ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.  ವಿಭಾಗದ ಮುಖ್ಯಸ್ಥರಾದ ಪ್ರೊ. ನಯನಾ ಕಶ್ಯಪ್ ಮತ್ತು ಸಹ ಪ್ರಾಧ್ಯಾಪಕರಾದ ಕೆ.ಎಂ.ಪೂಣಚ್ಚ, ಹೆಚ್.ಆರ್.ರಮೇಶ್, ಅಲೋಕ್ ಬಿ ಜೈ ಹಾಗೂ ಉಪನ್ಯಾಸಕರಾದ ಎಂ.ಪಿ.ಡೀನಾ, ಕನ್ನಿಕಾ ಮತ್ತು ಕಾಲೇಜಿನ ಬೋಧಕ ಹಾಗೂ ಬೋಧಕೇತರ ವರ್ಗದವರು,…

Read More