ಮಡಿಕೇರಿ ಅ.14 NEWS DESK : ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆ ಪ್ರಗತಿಯಲ್ಲಿದ್ದು, ಇಂದು ಪೊನ್ನಂಪೇಟೆಯ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಸಮೀಕ್ಷೆ ನಡೆಯುತ್ತಿದೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರ ಮಾಧ್ಯಮ ಸಹಾಯಕರಾದ ಪೆಮ್ಮಂಡ ವಿನಿಲ್ ಸೋಮಣ್ಣ ಸಮೀಕ್ಷೆಯಲ್ಲಿ ಭಾಗವಹಿಸಿ ತಮ್ಮ ದಾಖಲೆಗಳನ್ನು ಒದಗಿಸಿದರು.
ಲೇಖಕ: admin
ಮಡಿಕೇರಿ ಅ.14 NEWS DESK : ಕೊಡವ ಜನಾಂಗದವರು ಜನಸಂಖ್ಯೆಯಲ್ಲಿ ಕಡಿಮೆ ಇದ್ದರೂ ಸಹ ಕ್ರೀಡೆ, ಸೇನೆ, ಜ್ಞಾನ, ಬುದ್ಧಿವಂತಿಗೆ ಹೀಗೆ ಹಲವಾರು ವಿಷಯಗಳಲ್ಲಿ ಸಮಾಜಕ್ಕೆ ಉತ್ತಮ ಕೊಡುಗೆಯನ್ನು ನೀಡುತ್ತಾ ಮುಂಚೂಣಿಯಲ್ಲಿ ಇದ್ದಾರೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ವಿರಾಜಪೇಟೆ ಕಾವೇರಿ ಕೊಡವಕೇರಿ ವತಿಯಿಂದ ನಡೆದ 4ನೇ ವರ್ಷದ ಬ್ಯಾಡ್ಮಿಂಟನ್ ಪಂದ್ಯಾವಳಿಯ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕೊಡವ ಜನಾಂಗದವರ ಸಂಸ್ಕೃತಿ ವಿಭಿನ್ನವಾಗಿದ್ದು, ನಮ್ಮ ಆಚಾರ ವಿಚಾರಗಳು ವಿಶಿಷ್ಟ ರೀತಿಯಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ನಮ್ಮ ಈ ಇತಿಹಾಸ, ಪರಂಪರೆಯನ್ನು ಪೋಷಿಸಿ ಬೆಳೆಸಿಕೊಂಡು ಮುಂದಿನ ಪೀಳಿಗೆಗೆ ತಲುಪಿಸುವಂತಹ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ನಾನು ಅಧಿಕಾರಕ್ಕೆ ಬಂದ ಬಳಿಕ ಕೊಡವ ಜನಾಂಗದವರ ಹಲವಾರು ಹಕ್ಕುಗಳಿಗೆ ಹೋರಾಟ ಮಾಡುತ್ತಿದ್ದು, ಕೋವಿ ವಿಷಯದಲ್ಲಿ ಪೂರಕವಾಗಿ ಆದೇಶ ಬರುವಂತೆ ನೋಡಿಕೊಂಡಿದ್ದೇನೆ. ಯುವ ಜನತೆಗೆ ಅನುಕೂಲವಾಗಲಿ ಎಂದು ಜಿಲ್ಲೆ ಹಾಗೂ ವಿರಾಜಪೇಟೆ ಕ್ಷೇತ್ರದಾದ್ಯಂತ ಕ್ರೀಡೆಯ ಅಭಿವೃದ್ಧಿಗೆ ಹಲವಾರು…
ಮಡಿಕೇರಿ ಅ.14 NEWS DESK : ರಾತ್ರೋರಾತ್ರಿ ಖದೀಮರು ಶ್ರೀಗಂಧದ ಮರ ಕಳವು ಮಾಡಿರುವ ಘಟನೆ ನಿಟ್ಟೂರು ಕಾರ್ಮಾಡು ಗ್ರಾಮದಲ್ಲಿ ನಡೆದಿದೆ. ನಿಟ್ಟೂರು ಕಾರ್ಮಾಡು ಮೆಟ್ರಿಕ್ ಪೂರ್ವ ಗಿರಿಜನ ಬಾಲಕಿಯರ ವಸತಿ ನಿಲಯದ ಕಾಂಪೌಂಡ್ ನಲ್ಲಿ ಬೆಳೆದು ನಿಂತಿದ್ದ ಶ್ರೀಗಂಧ ಮರವನ್ನು ತಡರಾತ್ರಿ ಕಡಿದು ಕಳ್ಳತನ ಮಾಡಿದ್ದಾರೆ. ಗ್ರಾಮ ಸಭೆಯಲ್ಲಿ ವಸತಿನಿಲಯದ ಕ್ಯಾಮರಾವನ್ನು ಮರ ಕಾಣುವ ಹಾಗೆ ತಿರುಗಿಸಲು ಗ್ರಾಮಸ್ಥರು ಪ್ರಾಸ್ತಪಿಸಿದ್ದರು. ಈ ವಿಷಯ ತಿಳಿದ ಚೋರರು ತಾರಾತೂರಿಯಲ್ಲಿ ಕೃತ್ಯವೆಸಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು. ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಳೆದ ವಾರವಷ್ಟೇ ನಿಟ್ಟೂರು ಮುಖ್ಯ ರಸ್ತೆಯ ಬದಿಯ ಮನೆಗಳಲ್ಲಿ ಕಳ್ಳತನ ನಡೆದಿತ್ತು. ಕಳ್ಳರ ಬಂಧನಕ್ಕೆ ಕ್ರಮ ಕೖಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮಡಿಕೇರಿ ಅ.14 : ಉಪ ನಿರ್ದೇಶಕರು(ಖಾಗ್ರಾ), ಗ್ರಾಮೀಣ ಕೈಗಾರಿಕೆ, ಕೊಡಗು ಜಿಲ್ಲಾ ಪಂಚಾಯತ್, ಮಡಿಕೇರಿ ಕಚೇರಿ ವತಿಯಿಂದ 2025-26ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ವಿದ್ಯುತ್ ಚಾಲಿತ ಟೈಲರಿಂಗ್ ಮತ್ತು ಎಲೆಕ್ಟ್ರೀಷಿಯನ್ ಕಸುಬಿನ ಉಪಕರಣಗಳನ್ನು ಉಚಿತವಾಗಿ ಪಡೆಯಲು ಗ್ರಾಮೀಣ ಪ್ರದೇಶದ ವೃತ್ತಿನಿರತ ಕುಶಲಕರ್ಮಿಗಳಿಂದ ಆನ್‍ಲೈನ್ ವೆಬ್‍ಸೈಟ್ https://kodagu.nic.in/en/application-for-distribution-of-free-motorised-toolkits-for-rural-tailor-and-electrician-artisans-2025-26 ಮೂಲಕ ಅರ್ಜಿ ಸಲ್ಲಿಸಲು ನ.9 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು (ಗ್ರಾ.ಕೈ) ರವರ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ ಕಟ್ಟಡ, ಕೊಹಿನೂರ್ ರಸ್ತೆ, ಮಡಿಕೇರಿ ಅವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08272-228113 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಗ್ರಾಮೀಣ ಕೈಗಾರಿಕಾ ವಿಭಾಗದ ಉಪ ನಿರ್ದೇಶಕರು(ಖಾಗ್ರಾ) ಅವರು ತಿಳಿಸಿದ್ದಾರೆ.
ಮಡಿಕೇರಿ ಅ.14 NEWS DESK : ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ನವದೆಹಲಿಯ ಇಂಡಿಯಾ ಹ್ಯಾಬಿಟೆಟ್ ಸೆಂಟರ್ ವತಿಯಿಂದ ಕೊಡ ಮಾಡುವ ಪ್ರತಿಷ್ಠಿತ “ಆನರ್ ಆಫ್ ಅಶೋಕ ಪ್ರಶಸ್ತಿ 2025” ಲಭಿಸಿದೆ. ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿಮಾಂಚಲ್ ಪ್ರದೇಶ ಮಾಜಿ ಕ್ಯಾಬಿನೆಟ್ ಸಚಿವರು, ಮಾಜಿ ರಾಜ್ಯಪಾಲ ಕಲ್ರಾಜ್ ಮಿಶ್ರಾ ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭ ಭಾರತೀಯ ಸೇನಾ ಸಿಬ್ಬಂದಿ, ಮಾಜಿ ಉಪಾಧ್ಯಕ್ಷ ಲೆಫ್ಟಿನೆಂಟ್ ಜನರಲ್ ಎಸ್.ಕೆ.ಸೈನಿ, AVSM VM VSM ಏರ್ ಮಾರ್ಷಲ್ ಜಿ.ಎಸ್.ಬೇಡಿ, ಲೆಫ್ಟಿನೆಂಟ್ ಜನರಲ್ ಕರಣ್ಬೀರ್ ಸಿಂಗ್ ಬ್ರಾರ್, ಕಾರ್ಯತಂತ್ರದ ಸಲಹೆಗಾರ IITM ಪ್ರವರ್ತಕ್ ಇದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ವಿಜೇಂದರ್ ಜೈನ್ ವಹಿಸಿದ್ದರು. ಚಾರ್ಲ್ಸ್ ವಾಲ್ಟರ್ಸ್ ಕೌನ್ಸಿಲ್ ಫಾರ್ ಇನ್ನೋವೇಶನ್ & ರಿಸರ್ಚ್ ಸಂಚಾಲಕರು ಮತ್ತು ಅಶೋಕ ಪ್ರಶಸ್ತಿಯ ಸ್ಥಾಪಕ ನಿರ್ದೇಶಕಕರಾದ ಅಭಿಷೇಕ್ ಪಾಂಡೆ ಅವರು ಕಾರ್ಯಕ್ರಮ…
ನಾಪೋಕ್ಲು ಅ.14 NEWS DESK : ಸದಸ್ಯರ ಹಾಗೂ ದಾನಿಗಳ ಸಹಕಾರದಿಂದ ಮಹಿಳಾ ಸಮಾಜ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಭಗವತಿ ಮಹಿಳಾ ಸಮಾಜದ ಅಧ್ಯಕ್ಷೆ ಬೊಪ್ಪಂಡ ಬೊಳ್ಳಮ್ಮ ನಾಣಯ್ಯ ಹೇಳಿದರು. ಹಳೆ ತಾಲೂಕಿನ ಭಗವತಿ ಮಹಿಳಾ ಸಮಾಜದ ವತಿಯಿಂದ ಭಗವತಿ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಮಹಿಳಾ ಸಮಾಜದ ನಿವೇಶನದ ಜೊತೆಗೆ ಕಟ್ಟಡದ ಅವಶ್ಯಕತೆ ಇದೆ. ಮಾಜಿ ಶಾಸಕ ಕೆ.ಜಿ ಬೋಪಯ್ಯ ಕಟ್ಟಡದ ಅಭಿವೃದ್ಧಿಗೆ ಅನುದಾನ ನೀಡಿದ್ದಾರೆ. ದಾನಿಗಳು ಮಹಿಳಾ ಸಮಾಜಕ್ಕೆ ಮ್ಯಾಟ್, ಮೈಕ್ ಸೆಟ್ ಸೇರಿದಂತೆ ವಿವಿಧ ಕೊಡುಗೆಗಳನ್ನು ನೀಡಿದು,್ದ ಸಮಾಜ ಅಭಿವೃದ್ಧಿ ಸಾಧಿಸುತ್ತಿದೆ ಎಂದರು. ಮುಂದಿನ ಕೆಲವು ಕಾರ್ಯಕ್ರಮಗಳನ್ನು ಕೊಡವ ಮಕ್ಕಳ ಕೂಟದ ಸಹಯೋಗದಲ್ಲಿ ನಡೆಸಲು ಉದ್ದೇಶಿಸಲಾಗಿದೆ ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕೆಂದರು. ಈ ಸಂದರ್ಭ ಜಾನಪದ ತಂಜ್ಞೆ ಪ್ರಶಸ್ತಿ ಪಡೆದಿರುವ ಬೊಪ್ಪಂಡ ಬೊಳ್ಳಮ್ಮ ನಾಣಯ್ಯ ಇವರನ್ನು ಹಾಗೂ ರಾಜ್ಯ ಮಟ್ಟದ ಉತ್ತಮ ಕಾರ್ಯಕರ್ತೆ ಪ್ರಶಸ್ತಿ ಪಡೆದಿರುವ ಹಳೆತಾಲುಕು…
ಮಡಿಕೇರಿ ಅ.14 NEWS DESK : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕರ್ನಾಟಕ ಸರ್ಕಾರ ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಮಡಿಕೇರಿ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲೆಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬಯಸುವ ಆಸಕ್ತ ಮಹಿಳಾ ಅಭ್ಯರ್ಥಿಗಳಿಗೆ ಹತ್ತು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮ ಸ್ಥಾಪಿಸಲು ಬಯಸುವ ಅಭ್ಯರ್ಥಿಗಳಿಗೆ ಉದ್ಯಮಶೀಲತಾ ಪ್ರೇರಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು/ ಪ್ರೋತ್ಸಾಹ, ಉದ್ಯಮದಾರರಿಗೆ ದೊರೆಯುವ ಸೌಲಭ್ಯಗಳು, ಮಾರುಕಟ್ಟೆ ಮುಂತಾದ ವಿಷಯಗಳ ಹಾಗೂ ಇತರೆ ಕೈಗಾರಿಕಾ ವಿಷಯಗಳ ಕುರಿತು ತರಬೇತಿಯಲ್ಲಿ ಮಾಹಿತಿ ನೀಡಲಾಗುವುದು. ಆಸಕ್ತ್ತ ಅಭ್ಯರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಲು ಕೋರಿದೆ. ಭಾಗವಹಿಸುವವರು ಕನಿಷ್ಠ 21 ವರ್ಷಗಳ ವಯಸ್ಸಿನವರಾಗಿರಬೇಕು. ಕನಿಷ್ಠ ವಿದ್ಯಾರ್ಹತೆ 10ನೇ ತರಗತಿ ಉತ್ತೀರ್ಣರಾಗಿರಬೇಕು. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್, 18 ರೊಳಗೆ ಅರ್ಜಿಯನ್ನು ಜಂಟಿ ನಿರ್ದೇಶಕರ…
ಕುಶಾಲನಗರ ಅ.13 : ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಎಂ. ಎನ್ ಚಂದ್ರಮೋಹನ್ ಅವಿರೋಧವಾಗಿ ಮರು ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಕೆ ಜೆ ಶಿವರಾಜ್ ಆಯ್ಕೆಗೊಂಡಿದ್ದಾರೆ. 2025-28 ರ ಸಾಲಿನ ಆಡಳಿತ ಮಂಡಳಿಯ ಚುನಾವಣೆ ಕುಶಾಲನಗರ ಪತ್ರಿಕಾ ಭವನದಲ್ಲಿ ನಡೆಯಿತು. ಉಪಾಧ್ಯಕ್ಷರಾಗಿ ಮಹಮ್ಮದ್ ಮುಸ್ತಫಾ, ಕಾರ್ಯದರ್ಶಿಯಾಗಿ ಕೆ ಕೆ ನಾಗರಾಜ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎರಡು ನಿರ್ದೇಶಕ ಸ್ಥಾನಗಳಿಗೆ ಮೂರು ನಾಮಪತ್ರ ಸಲ್ಲಿಕೆಯಾಗಿದ್ದು, ಜಯಪ್ರಕಾಶ್ ನಾಮಪತ್ರ ಹಿಂತೆಗೆದುಕೊಂಡ ಕಾರಣ ನಿರ್ದೇಶಕರಾಗಿ ಹೆಚ್ ವಿ ವಿನೋದ್ ಮತ್ತು ರಘು ಹೆಬ್ಬಾಲೆ ಅವರು ಅವಿರೋಧವಾಗಿ ಆಯ್ಕೆಗೊಂಡರು. ಚುನಾವಣಾ ಅಧಿಕಾರಿಯಾಗಿ ಕುಶಾಲನಗರ ಸರಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ಗ್ರಂಥಪಾಲಕರಾದ ಎಸ್ ನಂದೀಶ್ ಮತ್ತು ಚುನಾವಣಾ ವೀಕ್ಷಕರಾಗಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಪಾರ್ಥ ಚಿಣ್ಣಪ್ಪ ಕಾರ್ಯನಿರ್ವಹಿಸಿದರು.
ಮಡಿಕೇರಿ ಅ.13 NEWS DESK : ಪೊನ್ನಂಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಲೈನ್ ಮನೆಗಳಲ್ಲಿ ವಾಸವಿರುವ ಭೂರಹಿತ ಪರಿಶಿಷ್ಟ ಕುಟುಂಬಗಳಿಗೆ ‘ಸೂರು’ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ವಿಭಾಗೀಯ ಸಂಚಾಲಕ ಎನ್.ವೀರಭದ್ರಯ್ಯ ಅವರು, ಈಗಾಗಲೇ ಪರಿಶಿಷ್ಟರಿಗೆ ವಿತರಿಸಲೆಂದು ಕಾಯ್ದಿರಿಸಿದ ಸರಕಾರಿ ಜಾಗಗಳಲ್ಲಿ ಟೆಂಟ್‍ಗಳನ್ನು ನಿರ್ಮಿಸಿಕೊಂಡು ಸಂಕಷ್ಟದ ಬದುಕು ಸವೆಸುತ್ತಿರುವ ಪರಿಶಿಷ್ಟ ಕುಟುಂಬಗಳಿಗೆ ನಿವೇಶನ ಒದಗಿಸಲು ಕ್ರಮ ಕೈಗೊಳ್ಳಬೇಕು. ಇದಕ್ಕೆ ಬದಲಾಗಿ ಅವರನ್ನು ಸ್ಥಳದಿಂದ ಒಕ್ಕಲೆಬ್ಬಿಸುವ ಪ್ರಯತ್ನ ನಡೆಯುತ್ತಿದೆ. ಇದನ್ನು ಮುಂದುವರಿಸಿದಲ್ಲಿ ಸಂಘಟನೆಯ ವತಿಯಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ವಸತಿ ನಿವೇಶನಗಳಿಲ್ಲದ 6 ಸಾವಿರಕ್ಕೂ ಹೆಚ್ಚಿನ ಪರಿಶಿಷ್ಟ ಮಂದಿ ಇದ್ದು, ಸದರಿ ಫಲಾನುಭವಿಗಳಿಗೆ ವಿತರಿಸಲು ಲಭ್ಯವಿರುವ ಜಾಗವನ್ನು ನಿವೇಶನಗಳನ್ನಾಗಿ ಪರಿವರ್ತಿಸಿ ವಿತರಿಸಬೇಕು. ಈ ರೀತಿಯ ಕ್ರಮ ಕೈಗೊಳ್ಳದೆ ಅಲ್ಲಿ ಟೆಂಟ್ ನಿರ್ಮಿಸಿಕೊಂಡು ಬದುಕುತ್ತಿರುವ ಬಡವರನ್ನು ತೆರವುಗೊಳಿಸುವ ಪ್ರಯತ್ನ ನಡೆಯುತ್ತಿದೆ. ನಿವೇಶನ ರಹಿತರಿಗೆ ಅನ್ಯಾಯವಾಗುತ್ತಿರುವುದರಿಂದ ಪೊನ್ನಂಪೇಟೆ ತಾಲ್ಲೂಕಿಗೆ ಸಂಬಂಧಿಸಿದ…
ಮಡಿಕೇರಿ ಅ.13 NEWS DESK : ಹುದಿಕೇರಿ ಮಾಜಿ ಸೈನಿಕರ ಸಂಘದಿಂದ ದಕ್ಷಿಣ ಕೊಡಗಿನ ಅಂಜಿಗೇರಿ ನಾಡ್‍ನ ಹುದಿಕೇರಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ‘ಅಮರ್ ಜವಾನ್ ಸ್ಮಾರಕ’ ಮತ್ತು ಧ್ವಜ ಸ್ತಂಭದ ಉದ್ಘಾಟನಾ ಸಮಾರಂಭ ಅ.27 ರಂದು ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಹುದಿಕೇರಿ ಮಾಜಿ ಸೈನಿಕರ ಸಂಘದ ಅಧ್ಯಕ್ಷರಾದ ಬಲ್ಯಮೀದೇರಿರ ಎ. ಪ್ರಕಾಶ್, ಅಂದು ಬೆಳಗ್ಗೆ 10.30 ಗಂಟೆಗೆ ಸ್ಮಾರಕ ಮತ್ತು ಧ್ವಜ ಸ್ತಂಭವನ್ನು ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಉದ್ಘಾಟಿಸಲಿದ್ದು, ಮೈಸೂರು-ಕೊಡಗು ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪಾಲ್ಗೊಳ್ಳಲಿದ್ದಾರೆ ಎಂದರು. ಹುದಿಕೇರಿ ಕೊಡವ ಸಮಾಜದಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಎ.ಎಸ್.ಪೊನ್ನಣ್ಣ, ಅತಿಥಿಗಳಾಗಿ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಪೊಲೀಸ್ ವರಿಷ್ಠಾಧಿಕಾರಿಗಳಾದ ರಾಮರಾಜನ್ ಕೆ., ಪೊನ್ನಂಪೇಟೆ ತಹಸೀಲ್ದಾರ್ ಕೆ.ಎಸ್.ಮೋಹನ್ ಕುಮಾರ್, ಕರ್ನಲ್ ಆರ್.ಮುಕುಂದನ್, ಹುದಿಕೇರಿ ಪಂಚಾಯ್ತಿ…






