ಲೇಖಕ: admin

ಮಡಿಕೇರಿ NEWS DESK ಅ.13 : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನವೊಂದು ಪಲ್ಟಿಯಾಗಿ ಇಬ್ಬರು ವ್ಯಕ್ತಿಗಳು ಹಾಗೂ ಮೂರು ಹಸುಗಳು ಗಾಯಗೊಂಡಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ರಸ್ತೆಯ ಕಾಗಡಿಕಟ್ಟೆ ಬಳಿ ನಡೆದಿದೆ. ಇಂದು ನಸುಕಿನಲ್ಲಿ ಈ ಘಟನೆ ನಡೆದಿದ್ದು, ಗೋವುಗಳ ಸಾಗಾಟ ಕುರಿತು ಹಿಂದೂ ಜಾಗರಣಾ ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ. ಪಲ್ಟಿಯಾದ ವಾಹನದಲ್ಲಿ ಅಕ್ರಮವಾಗಿ ಗೋವು ಸಾಗಾಟವಾಗುತ್ತಿತ್ತು ಎಂದು ಆರೋಪಿಸಿರುವ ವೇದಿಕೆಯ ಜಿಲ್ಲಾ ಸಂಯೋಜಕ ಬೋಜೇಗೌಡ ಅವರು ಘಟನೆಯ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಗೋವುಗಳ ಸಾಗಾಟ, ಹತ್ಯೆ, ಗೋಮಾಂಸ ಮಾರಾಟಕ್ಕೆ ನಿಷೇಧವಿದ್ದರೂ ಇತ್ತೀಚಿನ ದಿನಗಳಲ್ಲಿ ಗೋವುಗಳ ಕಳ್ಳತನ, ಸಾಗಾಟ ಮತ್ತು ಹತ್ಯೆ ಪ್ರಕರಣಗಳು ಮಿತಿ ಮೀರುತ್ತಿದೆ. ಪೊಲೀಸ್ ಇಲಾಖೆ ಇದನ್ನು ನಿಯಂತ್ರಿಸದಿದ್ದಲ್ಲಿ ಹಿಂದೂ ಸಂಘಟನೆಗಳು ಬೃಹತ್ ಹೋರಾಟವನ್ನು ರೂಪಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Read More

ಮಡಿಕೇರಿ ಅ.13 NEWS DESK : ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆದ ಪ್ರಕರಣವನ್ನು ಖಂಡಿಸಿ ಪ್ರಗತಿಪರ, ಚಿಂತಕರ, ದಲಿತಪರ ಸಂಘಟನೆಗಳ ಒಕ್ಕೂಟ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಡಳಿತ ಭವನದ ಎದುರು ಜಮಾಯಿಸಿದ ಒಕ್ಕೂಟದ ಪ್ರಮುಖರು ಹಾಗೂ ಪದಾಧಿಕಾರಿಗಳು ಘೋಷಣೆಯನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಕೃತ್ಯವೆಸಗಿದ ವಕೀಲನ ವಿರುದ್ಧ ಕೇಂದ್ರ ಸರಕಾರ ‘ದೇಶ ದ್ರೋಹ’ದ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಅಹಿಂದ ಒಕ್ಕೂಟದ ಸ್ಥಾಪಕ ಅಧ್ಯಕ್ಷ ಟಿ.ಪಿ.ರಮೇಶ್ ಅವರು ಮಾತನಾಡಿ ಘಟನೆಯನ್ನು ತೀವ್ರವಾಗಿ ಖಂಡಿಸಿದರು. ಅಂಬೇಡ್ಕರ್ ವಿಚಾರವಾದಿ ಸಿ.ಜೆ.ಮೋಹನ್ ಮೌರ್ಯ ಅವರು ಮಾತನಾಡಿ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ವಿರುದ್ಧ ನಡೆದಿರುವ ಘಟನೆ ಸಂವಿಧಾನ ವಿರೋಧಿ ಕೃತ್ಯವಾಗಿದ್ದು, ನ್ಯಾಯಾಂಗ ವ್ಯವಸ್ಥೆಗೆ ಅಪಮಾನ ಮಾಡಲಾಗಿದೆ. ದುಷ್ಕೃತ್ಯವೆಸಗಿದ ವಕೀಲನ ವಿರುದ್ಧ ಕೇಂದ್ರ ಸರ್ಕಾರ ‘ದೇಶ ದ್ರೋಹ’ದ ಪ್ರಕರಣವನ್ನು ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್, ಪ್ರಗತಿಪರ…

Read More

ಕಣಿವೆ ಅ.13 NEWS DESK : ಓಣಂ ಆಚರಣೆ ಕೇರಳೀಯರ ಪ್ರಮುಖ ಹಬ್ಬವಾಗಿದ್ದು, ಎಲ್ಲರೂ ಒಂದೆಡೆ ಸೇರಿ ಸಂಭ್ರಮಿಸಿ ಸಾಮರಸ್ಯ ಬೆಸೆಯುವ ಹಾಗೂ ಸಂಬಂಧಗಳನ್ನು ಉದ್ದೀಪನಗೊಳಿಸುವ ಆಚರಣೆಯಾಗಿದೆ ಎಂದು ಮಾಜಿ ಸಚಿವ ಅಪ್ಪಚ್ಚು ರಂಜನ್ ಹೇಳಿದರು. ನಾಕೂರು ಶಿರಂಗಾಲ ಗ್ರಾಪಂ ವ್ಯಾಪ್ತಿಯ ಹಿಂದೂ ಮಲೆಯಾಳಿ ಸಮಾಜದ ವತಿಯಿಂದ ಕಾನ್ ಬೈಲ್ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಮೂರನೇ ವರ್ಷದ ಓಣಂ ಆಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದಲ್ಲಿನ ಯಾವುದೇ ಜಾತಿ ಜನಾಂಗದ ಆಚರಣೆಗಳು ಅವರ ಸಂಪ್ರದಾಯಗಳನ್ನು ಬಿಂಬಿಸುವಂತಿರಬೇಕು. ಮನುಷ್ಯ ಮನುಷ್ಯರಲ್ಲಿ ಉತ್ತಮ ಸಂಬಂಧಗಳ ಉದ್ದೀಪನದ ಜೊತೆಗೆ ದೇಶಭಕ್ತಿ ಹಾಗೂ ದೇಶ ಪ್ರೇಮ ಮೊಳಗಿಸಲು ಇಂತಹ ಅಚರಣೆಗಳು ಕಾರಣೀಭೂತವಾಗುತ್ತವೆ ಎಂದರು. ನಾಕೂರು ಶಿರಂಗಾಲ ಗ್ರಾಪಂ ಅಧ್ಯಕ್ಷ ಮಂದೋಡಿ ಜಗನ್ನಾಥ್ ಮಾತನಾಡಿ ಓಣಂ ಆಚರಣೆ ಹಿಂದೂ ಧರ್ಮೀಯ ಎಲ್ಲರನ್ನು ಒಂದೆಡೆ ಸೇರಿಸುವ ಹಾಗೂ ಸಾಮರಸ್ಯ ಉಂಟುಮಾಡುವ ಆಚರಣೆಯಾಗಿದೆ ಎಂದರು. ಹಿಂದೂ ಮಲೆಯಾಳಿ ಸಮಾಜದ ಸಲಹೆಗಾರ ಟಿ.ಆರ್.ವಾಸುದೇವನ್ ಮಾತನಾಡಿ, ಓಣಂ ಆಚರಣೆಯ ಮೂಲಕ ಮಲೆಯಾಳಿ…

Read More

ಮಡಿಕೇರಿ ಅ.13 NEWS DESK : ಕುಶಾಲನಗರ ಕೊಡಗು ಹೆಗ್ಗಡೆ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಾಹಸಭೆ ಮತ್ತು ಕೈಲ್‍ಪೊಳ್ದ್ ಒತ್ತರ್ಮೆಕೂಟವು ಸಂಭ್ರದಿಂದ ನಡೆಯಲಿದೆ. ಕುಶಾಲನಗರ ಕೇರಳ ಸಮಾಜದಲ್ಲಿ ನಡೆದ ಮಹಾಸಭೆಯಲ್ಲಿ ಸಮಾಜಕ್ಕೆ ನಿವೇಶನ ಖರೀದಿಸಿ ಆ ನಿವೇಶನದಲ್ಲಿ ಸುಸಜ್ಜಿತ ಸಮುದಾಯ ಭವನವನ್ನು ನಿರ್ಮಿಸಲು ಸಲಹೆಗಳು ಕೇಳಿಬಂದವು.  ಕಾರ್ಯಕ್ರಮದಲ್ಲಿ ಶೈಕ್ಷಣಿಕ ಮತ್ತು ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಿದ ಜನಾಂಗಭಾಂದವನ್ನು ಗುರುತಿಸಿ ಸನ್ಮನಿಸಲಾಯಿತು. ಸಂಘದ ಅಧ್ಯಕ್ಷರಾದ ಚಳಿಯಂಡ ಯಶ್ವಥ್ ಅಚ್ಚಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಡಿಕೇರಿ ಪ್ರಾದೇಶಿಕ ಸಾರಿಗೆ ನಿಗಮದ ಬ್ರೇಕ್ ಇನ್ಸ್ಪೆಕ್ಟರ್ ಗಳಾದ ಪೊಕ್ಕಳಿಚಂಡ ಮೋಹನ್ ಕುಮಾರ್, ಕುಶಾಲನಗರ ಜೆ.ಸಿ.ಐ ಅಧ್ಯಕ್ಷ ತಂಬಂಡ ತೇಜ ದಿನೇಶ್, ಸಂಘದ ಉಫಾಧ್ಯಕ್ಷರಾದ ಚಂಗಚಂಡ ಸುಬ್ರಮಣಿ, ಕಾರ್ಯದರ್ಶಿ ಪಂದಿಕಂಡ ವಿಠಲ್, ಮಂಡೇಡ ದೀಪಕ್, ಖಜಾಂಚಿ ಕೊಂಗೆಪ್ಪಂಡ ನಂಜಪ್ಪ, ನಿರ್ದೆಶಕರುಗಳಾದ ಪುದಿಯತಂಡ ಬೆಳ್ಳಿಯಪ್ಪ, ಪುದಿಯತಂಡ ಗಾಂಧಿ, ಕಾಟಿಕುಟ್ಟೀರ ಮೊಣ್ಣಪ್ಪ, ಮೇಲತಂಡ ಮಂಜುಳ, ಪೊಕ್ಕಳಿಚಂಡ ಲಲಿತ ಚಂಗಚಂಡ ನಂಜಪ್ಪ, ಮಂಡೇಯಂಡ ಪಳಂಗಪ್ಪ, ಪ್ರಮುಖರಾದ ಕೊಂಗೆಪ್ಪಂಡ ಶಶಿ ಬೀಮಯ್ಯ,ಪಡಞರಂಡ ಪ್ರಭು ಕುಮಾರ್, ಕೊಪ್ಪಡ ಪಳಂಗಪ್ಪ,…

Read More

ಮಡಿಕೇರಿ ಅ.13 NEWS DESK : ಪೊನ್ನಂಪೇಟೆ ನಾಗರಿಕ ವೇದಿಕೆ ವತಿಯಿಂದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಲಾಯಿತು. ಪೊನ್ನಂಪೇಟೆ ಕೊಡವ ಸಮಾಜದಲ್ಲಿ ನಡೆದ  ಕಾರ್ಯಕ್ರಮದ ವೇದಿಕೆಯ ಪ್ರಮುಖರು ಹಾಗೂ ಪದಾಧಿಕಾರಿಗಳು ಶಾಸಕರನ್ನು ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭ ಮಾತನಾಡಿದ ಶಾಸಕರು, ನಾಗರಿಕ ವೇದಿಕೆಯವರು ಈ ಭಾಗದ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಜನರ ನಾಡಿಮಿಡಿತವನ್ನು ಅರಿತವರಾಗಿದ್ದಾರೆ. ಹಲವಾರು ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಾಗರಿಕ ವೇದಿಕೆ ವತಿಯಿಂದ ಆಯೋಜನೆಗೊಳ್ಳುತ್ತಿರುವುದು ಸಂತಸದ ವಿಷಯ. ನಾಗರಿಕ ವೇದಿಕೆಯವರ ಈ ಪ್ರಯತ್ನ ಮುಂದೆಯೂ ಹೀಗೆ ಬೆಳೆದು ಯಶಸ್ಸು ಕಾಣಲಿ ಎಂದು ಶುಭ ಹಾರೈಸಿದರು. ಇದೇ ಸಂದರ್ಭ ಕರ್ನಾಟಕ ಕ್ರೀಡಾ ಪ್ರಾಧಿಕಾರದ ನೂತನ ಉಪಾಧ್ಯಕ್ಷ ಅರುಣ್ ಮಾಚಯ್ಯ  ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕರ ಪತ್ನಿ ಕಾಂಚನ್ ಪೊನ್ನಣ್ಣ, ನಾಗರಿಕ ವೇದಿಕೆ ಅಧ್ಯಕ್ಷ ವಿಶ್ವನಾಥ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಪ್ರಮುಖರಾದ ಚೆಪ್ಪುಡೀರ ಪೊನ್ನಪ್ಪ, ಮುಕಳೇರ…

Read More

ಮಡಿಕೇರಿ ಅ.13 NEWS DESK : ರಾಷ್ಟ್ರೀಯ ಸ್ವಯಂ ಸೇವಕ ಸಂಘ 100ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಮಡಿಕೇರಿ ನಗರದಲ್ಲಿ ಸಂಘದ ಘೋಷ್ ಸಹಿತ ಪಥಸಂಚಲನ ನಡೆಯಿತು. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ನೂರಾರು ಸ್ವಯಂಸೇವಕರು ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಿಂದ ಜೂನಿಯರ್ ಕಾಲೇಜ್ ಮುಂಭಾಗ, ಚೌಕ್, ಗಣಪತಿ ಬೀದಿ, ಮಹದೇವ ಪೇಟೆ, ಹಳೆ ಖಾಸಗಿ ಬಸ್ ನಿಲ್ದಾಣ, ಜನರಲ್ ತಿಮ್ಮಯ್ಯ ವೃತ್ತಕ್ಕಾಗಿ ಗಾಂಧಿ ಮೈದಾನದಲ್ಲಿ ಸಮಾವೇಶಗೊಂಡಿತು. ಬಳಿಕ ಅಲ್ಲಿ ಸಂಘದ ಪ್ರಾರ್ಥನೆ ಮತ್ತು ದ್ವಜ ವಂದನೆಯೊಂದಿಗೆ ಪಥಸಂಚಲ ಕೊನೆಗೊಂಡಿತು. ಈ ಸಂದರ್ಭ ಆರ್ ಎಸ್ ಎಸ್ ನ ಜಿಲ್ಲಾ ಸಂಘ ಚಾಲಕ್ ಚಕ್ಕೇರ ಮನುಕಾವೇರಪ್ಪ, ಜಿಲ್ಲಾ ಕಾರ್ಯವಾಹ ರವಿ ಕುಶಾಲಪ್ಪ, ಸಹಕಾರ್ಯವಾಹ ಕುಟ್ಟಂಡ ಮಿರನ್ ಕಾವೇರಪ್ಪ, ಮಂಗಳೂರು ವಿಭಾಗ ಸಹಕಾರ್ಯವಾಹ ಸುಭಾಷ್, ವಿಭಾಗ ಶಾರೀರಿಕ್ ಪ್ರಮುಖ್ ಡಿ.ಕೆ.ಡಾಲಿ, ವಿಭಾಗ ಸಹಸಂಪರ್ಕ ಪ್ರಮುಖ್ ಕುಟ್ಟಂಡ ಪ್ರಿನ್ಸ್ ಗಣಪತಿ, ಜಿಲ್ಲಾ ಪ್ರಮುಖರಾದ ಕೆ.ಕೆ.ದಿನೇಶ್ ಕುಮಾರ್, ಕೆ.ಕೆ.ಮಹೇಶ್ ಕುಮಾರ್, ಅರುಣ್ ಕುಮಾರ್, ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ,…

Read More

ಮೈಸೂರು ಅ.13 NEWS DESK : ಎಲ್ಲರೂ ಅರೋಗ್ಯವಾಗಿರಬೇಕೆಂಬ ಏಕೈಕ ಉದ್ದೇಶದೊಂದಿಗೆ “ಸೆಲಬ್ರೇಷನ್ ಮೈಸೂರು” ಎಂಬ ಹೆಸರಿನಲ್ಲಿ ಭಾನುವಾರ ನಡೆದ ಮ್ಯಾರಥಾನ್ ನಲ್ಲಿ ಭಾಗಿಯಾಗಿದ್ದು ನಿಜಕ್ಕೂ ಖುಷಿ ನೀಡಿತು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಕೋಟೆ ಆಂಜನೇಯ ದೇವಸ್ಥಾನದಿಂದ ಆರಂಭವಾಗಿ ಅಲ್ಲೇ ಕೊನೆಗೊಂಡ   10ಏ, 1/2 ಮ್ಯಾರಥಾನ್ ನಲ್ಲಿ ಸಕ್ರಿಯವಾಗಿ ಭಾಗವಹಿಸಿದ‌ ನಂತರ ಪ್ರತಿಕ್ರಿಯೆ ನೀಡಿದ್ದಾರೆ. ಮ್ಯಾರಥಾನ್ ದೈಹಿಕ ಶಕ್ತಿಗೆ ಮಾತ್ರವಲ್ಲ,‌ಮಾನಸಿಕ ವ್ಯಕ್ತಿತ್ವ ವಿಕಸನ ಸಹಕಾರಿಯಾಗುತ್ತದೆ. ನಿತ್ಯವೂ ನಾನು ಜಾಗಿಂಗ್‌, ದೈಹಿಕ ವ್ಯಾಯಾಮ ಮಾಡುತ್ತೇನೆ ಎಂದು ಸಂಸದರು ತಿಳಿಸಿದ್ದಾರೆ. ದೇಶಕ್ಕೆ ಮಾತ್ರವಲ್ಲ ಇಡೀ ವಿಶ್ವಕ್ಕೆ ನಮ್ಮ ಮೈಸೂರು ಆಯುರ್ವೇದ ಎಂಬ ಮಹತ್ಚದ ಕೊಡುಗೆ ನೀಡಿದೆ. ಈಗ ಯೋಗ ವಿಶ್ವಮಟ್ಟದಲ್ಲಿಯೂ ಮನ್ನಣೆ ಪಡೆದುಕೊಂಡಿದೆ. ಇದು ಆರೋಗ್ಯ ವೃದ್ಧಿಸುವ ಮತ್ತೊಂದು ಕ್ರಮವಾಗಿದೆ ಎಂದರು. ಯುವಕರು‌ ಈಗ ಮ್ಯಾರಥಾನ್ ನಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದು‌ ನೋಡಿ ಖುಷಿಯಾಯಿತು ಎಂದು ಯದುವೀರ್ ತಿಳಿಸಿದ್ದಾರೆ. ಪ್ರಧಾನಿ ಆಶಯದಂತೆ ದೇಶದಲ್ಲಿ ಫಿಟ್‌…

Read More

ಮಡಿಕೇರಿ ಅ.13 NEWS DESK : ಮಡಿಕೇರಿ ನಗರ ದಸರಾ ಕ್ರೀಡಾ ಸಮಿತಿ ವತಿಯಿಂದ ಗಾಂಧಿ ಮೈದಾನದಲ್ಲಿ ಆಯೋಜಿತ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾವಳಿಗೆ ಭಾನುವಾರ ಸಂಜೆ ಜಿಲ್ಲೆಯ ಶಾಸಕದ್ವಯರು ಜ್ಯೋತಿ ಬೆಳಗಿ, ರೈಡ್ ಮಾಡುವ ಮೂಲಕ ವಿಧ್ಯುಕ್ತ ಚಾಲನೆ ನೀಡಿದರು. ಮಡಿಕೇರಿ ದಸರಾ ಕ್ರೀಡಾ ಸಮಿತಿ ಅಧ್ಯಕ್ಷ ಪ್ರದೀಪ್ ಕರ್ಕೆರ ಅವರ ಅಧ್ಯಕ್ಷತೆಯಲ್ಲಿ ಆಯೋಜಿತ ಉದ್ಘಾಟನಾ ಸಮಾರಂಭದಲ್ಲಿ ಜ್ಯೋತಿ ಬೆಳಗಿ ಸಮಾರಂಭ ಉದ್ಘಾಟಿಸಿದ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣ ಅವರು ಮಾತನಾಡಿ, ಕೊಡಗು ಜಿಲ್ಲೆ ಅಸಂಖ್ಯ ಕ್ರೀಡಾಪಟುಗಳನ್ನು ರಾಜ್ಯ ಮತ್ತು ರಾಷ್ಟ್ರ ಮಟ್ಟಕ್ಕೆ ನೀಡಿದ ಖ್ಯಾತಿಯನ್ನು ಹೊಂದಿದೆ. ಕ್ರೀಡಾ ಚಟುವಟಿಕೆಗಳನ್ನು ಪ್ರತಿಯೊಬ್ಬರು ತೊಡಗಿಸಿಕೊಳ್ಳುವುದು ಅವಶ್ಯವೆಂದ ಅವರು, ಇಂತಹ ಕ್ರೀಡಾ ಚಟುವಟಿಕೆಗಳು ನಮ್ಮ ಆರೋಗ್ಯವನ್ನು ಕಾಪಾಡುವುದಲ್ಲದೆ ಸಮಚಿತ್ತತೆಯಿಂದ ಬದುಕನ್ನು ಎದುರಿಸಲು ಸಹಕಾರಿಯಾಗಿದೆಯೆಂದು ನುಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಮಾತನಾಡಿ, ಮಳೆಯ ಕಾರಣದಿಂದ ದಸರಾ…

Read More

ಮಡಿಕೇರಿ ಅ. 13 NEWS DESK : ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ನಿಂದ  ಹಲವಾರು ಸಂಘಸಂಸ್ಥೆಗಳ ಸಹಯೋಗದಲ್ಲಿ ಅ. 15 ರಂದುಕೊಡಗು ಜಿಲ್ಲೆಯಾದ್ಯಂತ ಬೖಹತ್ ರೀತಿಯಲ್ಲಿ ಸ್ವಚ್ಚ ಕೊಡಗು – ಸುಂದರ ಕೊಡಗು – ತ್ಯಾಜ್ಯ ವಿಲೇವಾರಿ ಅಭಿಯಾನ ಆಯೋಜಿಸಲಾಗಿದೆ. ಬುಧವಾರ ಬೆಳಗ್ಗೆ8 ಗಂಟೆಯಿಂದ ಕೊಡಗಿನಾದ್ಯಂತ ರಸ್ತೆ ಬದಿಗಳಲ್ಲಿನ ಕಸ, ತ್ಯಾಜ್ಯಗಳನ್ನು ವಿಲೇವಾರಿ ಮಾಡುವ ಮೂಲಕ ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ಹೊಣೆಯರಿತ ಪ್ರವಾಸೋದ್ಯಮಕ್ಕೆ ಪೂರಕವಾಗಿ ಸ್ಪಂದಿಸಲಿದೆ. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ,ಕೊಡಗು ಹೋಂಸ್ಟೇ ಅಸೋಸಿಯೇಷನ್ , ಕೊಡಗು ಚೇಂಬರ್ ಆಫ್ ಕಾಮಸ್೯, ಕೊಡಗು ಟ್ರಾವಲ್  ಅಸೋಸಿಯೇಷನ್, ರೋಟರಿ, ಲಯನ್ಸ್ , ರೆಡ್ ಕ್ರಾಸ್, ಗ್ರೀನ್ ಸಿಟಿ ಫೋರಂ, ಖಾಸಗಿ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಹಲವಾರು ಸಂಘಸಂಸ್ಥೆಗಳ ಸಹಯೋಗದಲ್ಲಿ ಜಿಲ್ಲೆಯ ಹಲವಾರು ಸಂಸ್ಥೆಗಳು ಈ ಸ್ವಚ್ಚತಾ ಅಭಿಯಾನಕ್ಕೆ ಕೈಜೋಡಿಸಿವೆ ಎಂದು ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ಅಧ್ಯಕ್ಷ  ಕುಂಡ್ಯೋಳಂಡ   ದಿನೇಶ್ ಕಾಯ೯ಪ್ಪ ತಿಳಿಸಿದ್ದಾರೆ.  ಕೊಡಗಿನಾದ್ಯಂತ ಮುಖ್ಯ ರಸ್ತೆಗಳ…

Read More

ಮಡಿಕೇರಿ NEWS DESK ಅ.11 : ರಾಷ್ಟ್ರೀಯ ಜನಗಣತಿಯ ಸಂದರ್ಭ ಆದಿಮಸಂಜಾತ, ಇಂಡಿಜಿನಸ್, ಆ್ಯನಿಮಿಸ್ಟಿಕ್ ನಂಬಿಗೆಯ ಏಕ ಜನಾಂಗೀಯ ಕೊಡವರ ಪ್ರತ್ಯೇಕ ಗುರುತು ದಾಖಲೀಕರಣವಾದರೆ ಮಾತ್ರ ಕೊಡವರಿಗೆ ಸಂವಿಧಾನಬದ್ಧ ಹಕ್ಕು ದೊರೆಯಲು ಸಾಧ್ಯ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಕೇಂದ್ರ ಸರಕಾರದ ಮೂಲಕ 2026 ಅಕ್ಟೋಬರ್ ನಿಂದ ನಡೆಯಲಿರುವ ಭಾರತ ದೇಶದ 16ನೇ ರಾಷ್ಟ್ರೀಯ ಜನಗಣತಿಯ ಸಂದರ್ಭ ಎಲ್ಲಾ ಮೂರು ಕಾಲಂನಲ್ಲಿ “ಕೊಡವ” ಎಂದೇ ಬರೆಸಬೇಕೆಂಬ ಕರೆಯೂ ಸೇರಿದಂತೆ ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ನೂರೊಕ್ಕ ನಾಡಿನ ಚೆಟ್ಟಳ್ಳಿಯಲ್ಲಿ ನಡೆದ 15ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊಡವಲ್ಯಾಂಡ್ ಭೂ ರಾಜಕೀಯ ಸ್ವಯಂ ಆಡಳಿತ, ಕೊಡವರಿಗೆ ವಿಶ್ವರಾಷ್ಟ್ರ ಸಂಸ್ಥೆಯ ಇಂಡಿಜಿನಸ್ ಪಿಪಲ್ಸ್ ರೈಟ್ಸ್, ಎಸ್.ಟಿ.ಪಟ್ಟಿಯಲ್ಲಿ ವರ್ಗೀಕರಣ, ಸಿಕ್ಕಿಂನ “ಸಂಘ” ಮತಕ್ಷೇತ್ರದಂತೆ ಕೊಡವರಿಗೆ ಸಂಸತ್ತು ಮತ್ತು…

Read More